Author: admin

ಬುಡಕಟ್ಟು ಜನಾಂಗದ ಅಲೆಮಾರಿ ಕುಟುಂಬ ವಾಸಿಸುತ್ತಿದ್ದ ಗುಡಿಸಲಿನ ಮೇಲೆ ಮರ ಬಿದ್ದು ನಾಲ್ವರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ ಎಂದು ಕಿಶ್ತ್ವಾರ್ ಉಪ ಆಯುಕ್ತರು ತಿಳಿಸಿದ್ದಾರೆ. ಕೇಶವನ್ ಬೆಲ್ಟ್‌ನ ಭಾಲ್ನಾ ಅರಣ್ಯ ಪ್ರದೇಶದಲ್ಲಿ ಈ ದುರಂತ ಘಟನೆ ನಡೆದಿದೆ. ಅಲೆಮಾರಿ ಕುಟುಂಬವು ಮೇಕೆಗಳೊಂದಿಗೆ ಡಚಾಕ್ಕೆ ಹೋಗುತ್ತಿತ್ತು. ಭಾರೀ ಮಳೆಯ ನಂತರ ಅವರು ಭಾಲ್ನಾ ಕಾಡಿನಲ್ಲಿ ತಾತ್ಕಾಲಿಕ ಗುಡಿಸಲು ನಿರ್ಮಿಸಿದರು. ಇದೇ ವೇಳೆ ಜೋರಾದ ಗಾಳಿ ಮಳೆಗೆ ಬೃಹತ್ ಮರವೊಂದು ಮುರಿದು  ಅವರ ಗುಡಿಸಲಿನ ಮೇಲೆ ಬಿದ್ದಿದೆ. ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಆದರೆ ಈ ದುರಂತದಲ್ಲಿ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.” ಎಂದು ಕಿಶ್ತ್ವಾರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಖಲೀಲ್ ಪೋಸ್ವಾಲ್ ಪಿಟಿಐಗೆ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆಯೋಜನೆಯಾಗಿತ್ತು. ಈ ಸಭೆಗೆ ಆಗಮಿಸುತ್ತಿದ್ದಾಗ ಸುರೇಶ್‌ ಮತ್ತು ಎಂಬಿ ಪಾಟೀಲ್‌ ಎದುರುಬದುರು ಸಿಕ್ಕಿದ್ದಾರೆ. ಎಂಬಿ ಪಾಟೀಲರನದನು ನೋಡಿದ ಸುರೇಶ್‌, ಅಧಿಕಾರ ಹಂಚಿಕೆ ವಿಚಾರದ ಬಗ್ಗೆ ಮಾತನಾಡಲು ನೀವು ಯಾರು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಇದಕ್ಕೆ ಎಂಬಿ ಪಾಟೀಲ್ ನಾನೇನು ಹೇಳಿಲಲ್ಲ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿದ್ದನ್ನು ಹೇಳಿದ್ದೇನೆ ಇದನ್ನು ಕೇಳಲು ನೀವು ಯಾರು ಎಂದು ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.  ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೀದರ್: ಚಲಿಸುತ್ತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ  ದಂಪತಿ ಬಲಿಯಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸಸ್ತಾಪೂರ್ ಬಂಗ್ಲಾ ಬಳಿ ನಡೆದಿದೆ. ಗುಂಡಪ್ಪ ಬಲಭೀಮ್ ಚಿಟಂಪಲ್ಲೆ (33) ಹಾಗೂ ಪತ್ನಿ ಸುಜಾತ ಗುಂಡಪ್ಪ ಚಿಟಂಪಲ್ಲೆ (29) ಸಾವನ್ನಪ್ಪಿದ ದುರ್ದೈವಿ ದಂಪತಿ. ಬಸವಕಲ್ಯಾಣದ ಖಾಸಗಿ ಕಾರ್ಯಕ್ರಮ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು, ಅಪಘಾತದ ರಭಸಕ್ಕೆ ಪತಿ ಗುಂಡಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪತ್ನಿ ಸುಜಾತರನ್ನು ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಗೆ ರವಾನೆ ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೂಲತ: ಹುಮ್ನಾಬಾದ್ ತಾಲೂಕಿನ ಹುಡಗಿ ಗ್ರಾಮಕ್ಕೆ ಸೇರಿದ ದಂಪತಿಗೆ 3 ವರ್ಷದ ಮುದ್ದಾದ ಮಗುವಿದೆ. ಘಟನೆ ವೇಳೆ ದಂಪತಿ ಜೊತೆಗಿದ್ದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸವಕಲ್ಯಾಣ ಪೊಲೀಸರು ಅಪರಿಚಿತ ವಾಹನದ ಬೆನ್ನುಬಿದ್ದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ದಕ್ಷಿಣ ಕಾಶ್ಮೀರ ಜಿಲ್ಲೆಯಲ್ಲಿ ಸೇನಾ ವಾಹನಕ್ಕೆ ಟ್ರಕ್ ನುಗ್ಗಿದ್ದರಿಂದ ಮೂವರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆ. ನಂಬಲ್ ಪ್ರದೇಶದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಬಳಿ ಅಪಘಾತ ಸಂಭವಿಸಿದೆ. ಹಣ್ಣು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಸೇನಾ ವಾಹನಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ಬಿಡುಗಡೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.  ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಇಂದಿರಾ ಕ್ಯಾಂಟೀನ್ ಪುನಾರಂಭಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ತಿಳಿಸಿದ್ದಾರೆ. ಈಗ ಇರುವ ಕ್ಯಾಂಟೀನ್‌ ಗಳ ಪೈಕಿ 10 ಮೊಬೈಲ್ ಕ್ಯಾಂಟೀನ್ ಕ್ಲೋಸ್ ಆಗಿದೆ. 243 ಸ್ಥಳಗಳಲ್ಲಿ ಕ್ಯಾಂಟೀನ್ ಆರಂಭಿಸ್ತೇವೆ. ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ.ಕ್ಯಾಂಟೀನ್ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ ಎಂದು ಮಾಹಿತಿ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.  ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಮುಷ್ಕರಕ್ಕೆ ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಳೆದ ದಿನ ಪಂಜಾಬ್‌ನಿಂದ 100 ಕ್ಕೂ ಹೆಚ್ಚು ಕಿಸಾನ್ ಸಭಾ ಕಾರ್ಯಕರ್ತರು ಜಂತರ್ ಮಂದಿರ ತಲುಪಿದರು. ಉತ್ತರ ಪ್ರದೇಶದಿಂದ ಹೆಚ್ಚಿನ ಭಾರತೀಯ ಕಿಸಾನ್ ಯೂನಿಯನ್ ಕಾರ್ಯಕರ್ತರು ಇಂದು ಆಗಮಿಸಲಿದ್ದಾರೆ. ಮೇ 28 ರಂದು ಸಂಸತ್ತಿನ ಉದ್ಘಾಟನಾ ದಿನದಂದು ಘೋಷಿಸಲಾದ ವನಿತಾ ಮಹಾ ಪಂಚಾಯತ್‌ನಲ್ಲಿ ದೇಶದ ಎಲ್ಲಾ ಭಾಗಗಳ ಮಹಿಳೆಯರನ್ನು ಭಾಗವಹಿಸುವಂತೆ ಮಾಡುವ ಅಭಿಯಾನ ಮುಂದುವರೆದಿದೆ. ಇದೇ ವೇಳೆ ಬ್ರಿಜ್ ಭೂಷಣ್ ಅವರ ಸವಾಲನ್ನು ಸ್ವೀಕರಿಸಿದ ಕುಸ್ತಿಪಟುಗಳು ಸುಳ್ಳು ಪರೀಕ್ಷೆಗೆ ಸಿದ್ಧ ಎಂದು ಹೇಳಿದ್ದಾರೆ. ಸುಳ್ಳು ಪರೀಕ್ಷೆಗೆ ಸಿದ್ಧ ಎಂದು ಈಗಾಗಲೇ ಹೇಳಿಕೆ ನೀಡಿದ್ದು, ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪರೀಕ್ಷೆ ನಡೆಸಬೇಕು ಎಂದು ನಟರು ಪ್ರತಿಕ್ರಿಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.  ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h…

Read More

ತುಮಕೂರು: ನಿಂತಿದ್ದ ಬಸ್ ಗೆ ಟಿಟಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ.ಹೊಸಹಳ್ಳಿ ಬಳಿ ನಡೆದಿದೆ. ಮೃತರನ್ನು ವೀರೇಶ್ (30) ಶಶಿಕಲಾ(79) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ಜಿಲ್ಲೆಯ ಸಿಂಧನೂರಿನವರಾಗಿದ್ದಾರೆ. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಗಾಯಗೊಂಡವರಾಗಿದ್ದರೆ. ಗಾಯಾಳುಗಳಿಗೆ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಧನೂರಿನಿಂದ ಮೈಸೂರಿಗೆ  ಶಶಿಕಲಾ ಕುಟುಂಬ ಪ್ರವಾಸಕ್ಕೆ ಹೊರಟಿತ್ತು. ಮಾರ್ಗ ಮಧ್ಯೆ ಡಿ.ಹೊಸಹಳ್ಳಿ ಬಳಿ ನಿಂತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಟಿಟಿ ಹೊಡೆದಿದೆ. ಟಿಟಿ ವಾಹನದಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತಿದ್ದರು. ಈ ಸಂಬಂಧ ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.  ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಮಧುಗಿರಿ: ನಂದಿನಿ ಹಾಲನ್ನು ಕಲಬೆರಕೆ ಮಾಡಿ ರೈತರಿಗೆ ಹಾಗೂ ಹಾಲು ಉತ್ಪಾದಕರಿಗೆ ವಂಚಿಸುತ್ತಿದ್ದವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ. ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ನೂರಾರು ರೈತರು ತಮ್ಮ ರಾಸುಗಳೊಂದಿಗೆ ಮೆರವಣಿಗೆ ನಡೆಸಿ ನಂತರ (ಡಿ ವೈ ಎಸ್ ಪಿ )ಪೊಲೀಸ್ ಉಪಾಧ್ಯಕ್ಷಕರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ ಮಾತನಾಡಿ ಕಳೆದ ಆರು ತಿಂಗಳ ಗಳಿಂದ ಮಧುಗಿರಿ ತಾಲೂಕಿನ ರೈತರಿಗೆ ವಂಚಿಸಿ ಕಳಪೆ ಗುಣಮಟ್ಟದ ಹಾಲನ್ನು ಒಕ್ಕೂಟಕ್ಕೆ ಸರಬರಾಜು ಮಾಡಿದ ಟ್ಯಾಂಕರ್ ಚಾಲಕ ಹಾಗೂ ಸಹಾಯಕರನ್ನು ತನಿಖೆಗೆ ಒಳಪಡಿಸಿ ಈ ಕೃತ್ಯದ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಬಯಲಿಗಳಿದು ರೈತರಿಗೆ ಆಗಿರುವ ಸುಮಾರು 1.5 ಕೋಟಿ ರೂಗಳಷ್ಟು ನಷ್ಟವನ್ನು ವಸೂಲಿ ಮಾಡಬೇಕೆಂದು ಆಗ್ರಹಿಸಿದ್ದರು. ತುಮುಲ್ ಮಾಜಿ ಅಧ್ಯಕ್ಷ ಬಿ.ನಾಗೇಶ್ ಬಾಬು ಮಾತನಾಡಿ ಈ ಇಂದಿನಿಂದಲೂ ಮದುಗಿರಿ ತಾಲೂಕಿನಲ್ಲಿ ಹಾಲಿನ ಗುಣಮಟ್ಟ…

Read More

ಮಂಗಳೂರು: ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿಣ ದಿನವಾಗಲಿದೆ. ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ನಿಷೇಧಕ್ಕೆ ಕಾರ್ಯತಂತ್ರಗಳು ರೂಪುಗೊಂಡಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸರಿಗೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ. ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.  ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರನ್ನು ಪಂಚಮಸಾಲಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಸತ್ಕರಿಸಿ ಆಶೀರ್ವದಿಸಿದ್ದಾರೆ. ಇದೇ ವೇಳೆ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರು ಸತ್ಕರಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಹುಕ್ಕೇರಿ ತಾಲೂಕು ಪಂಚಮಸಾಲಿ ಕಾರ್ಯಾಧ್ಯಕ್ಷ ರವೀಂದ್ರ ಜಿಂಡ್ರಾಲಿ, ಹುಕ್ಕೇರಿ ತಾಲೂಕಿನ ಯುವ ಘಟಕದ ಅಧ್ಯಕ್ಷ ವಿನಯ ಪಾಟೀಲ್‌ ಸಹ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More