Subscribe to Updates
Get the latest creative news from FooBar about art, design and business.
- ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
- ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
- ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ
- ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
- ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
- ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
- ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
Author: admin
ಕೇವಲ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಕೃಷ್ಣವೇಣಿ ಸಾವನ್ನಪ್ಪಿರುವ ನವವಿವಾಹಿತೆ. ಮೂರು ತಿಂಗಳ ಹಿಂದಷ್ಟೆ ಕೃಷ್ಣವೇಣಿಯನ್ನ ಕೋಲಾರ ಮೂಲದ ಪೃಥ್ವಿರಾಜ್ ಗೆ ವಿವಾಹ ಮಾಡಿಕೊಡಲಾಗಿತ್ತು. ಪೃಥ್ವಿರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ.ಇದೀಗ ಕೃಷ್ಣವೇಣಿ ಕುಟುಂಬದವರು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಅಂತಾ ಆರೋಪಿಸುತ್ತಿದ್ದಾರೆ. ಮದುವೆಯಾದ ಎರಡು ತಿಂಗಳಿಗೆ ಕಿರಿಕ್ ಶುರುಮಾಡಿದ್ದ. ಮದುವೆಯಾದ ಮೂರು ತಿಂಗಳಿಗೆ ನಾಲೈದು ಬಾರಿ ಜಗಳ ಮಾಡಿ ತವರಿಗೆ ಕಳುಹಿಸಿದ್ದ. ಗುರುವಾರವೂ ಕುಡಿದು ಬಂದು ಗಲಾಟೆ ಮಾಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಮೃತ ಕೃಷ್ಣವೇಣಿ ಎರಡು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಆಕೆಯ ಪತಿ ಪೃಥ್ವಿರಾಜ್ ನನ್ನು ಬಂಧಿಸುವಂತೆ ಕಾಡುಗೋಡಿ ಠಾಣೆ ಮುಂದೆ ಕೃಷ್ಣವೇಣಿ ಕುಟುಂಬದವರು ಜಮಾಯಿಸಿದ್ದಾರೆ
ಕೋಮುವಾದ ಪೀಡಿತ ಮಣಿಪುರದಲ್ಲಿ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ತೆಂಗನೌಪಾಲ್ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆದಿದೆ. ಪ್ರತಿಭಟನಾಕಾರರು ಮತ್ತು ಅಸ್ಸಾಂ ರೈಫಲ್ಸ್ ನಡುವೆ ಘರ್ಷಣೆ ನಡೆಯಿತು. ವರದಿಗಳ ಪ್ರಕಾರ, ವಿವಿಧ ಸ್ಥಳಗಳಲ್ಲಿ ನಡೆದ ಘರ್ಷಣೆಯಲ್ಲಿ ಸುಮಾರು ಐವತ್ತು ಜನರು ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ತೆಂಗ್ ನೌಪಾಲ್ ಜಿಲ್ಲೆಯ ಪಲ್ಲೆಲ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ಪರಿಸ್ಥಿತಿಯನ್ನು ಅವಲೋಕಿಸುತ್ತಿವೆ. ಸಾವಿರಾರು ಪ್ರತಿಭಟನಾಕಾರರು ಬುಧವಾರ ಬಿಷ್ಣುಪುರ್ ಜಿಲ್ಲೆಯ ಫೌಗಕ್ಚಾವೊ ಇಖಾದಲ್ಲಿ ಟೊರ್ಬಂಗ್ ನಲ್ಲಿ ಖಾಲಿ ಇರುವ ಮನೆಗಳಿಗೆ ನುಗ್ಗಲು ಪ್ರಯತ್ನಿಸಿದರು. ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್), ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಸೇರಿದಂತೆ ಭದ್ರತಾ ಪಡೆಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಬ್ಯಾರಿಕೇಡ್‌ಗಳನ್ನು ಭೇದಿಸಲು ಪ್ರಯತ್ನಿಸಿದವರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಪ್ರತಿಭಟನೆಗೆ ಒಂದು ದಿನ ಮುಂಚಿತವಾಗಿ ಮಣಿಪುರದ ಎಲ್ಲಾ ಐದು ಕಣಿವೆ ಜಿಲ್ಲೆಗಳಲ್ಲಿ ಸಂಪೂರ್ಣ…
ತುಮಕೂರು: ನಾನು ಸನಾತನ ಧರ್ಮದ ವಿರೋಧಿಯಲ್ಲ. ನಾನು ಸನಾತನ ಧರ್ಮದಲ್ಲಿನ ಅಸಮಾನತೆಯ ವಿರೋಧಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಈ ಮೂರೂ ಧರ್ಮದಲ್ಲೂ ಅಸಮಾನತೆ ಇದೆ ಎಂದು ಚಿತ್ರನಟ ಚೇತನ್ ಹೇಳಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕೆ ಘೋಷ್ಠಿಯಲ್ಲಿ ಮಾತನಾಡಿದ ಅವರು, ಮಾತನಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಸನಾತನ ಧರ್ಮ ಅನ್ನೋದನ್ನು ಅವರು ಯಾವ ವ್ಯಾಪ್ತಿಯಲ್ಲಿ ಹೇಳಿದ್ದಾರೆ ಅನ್ನೋದನ್ನು ನೋಡಬೇಕು ಎಂದರು. ಕೇಂದ್ರ ಸರ್ಕಾರ ತರಲು ಹೊರಟಿರುವ ಏಕರೂಪ ನಾಗರಿಕ ಸಂಹಿತೆಗೆ ನನ್ನ ಸಹಮತ ಇದೆ. ಅದು ಸಮ ಸಮಾಜದ ಸಿವಿಲ್ ಕೋಡ್ ಆಗಿರಬೇಕು ಎಂದರು. ಕಮ್ಯೂನಿಸ್ಟ್ ರು ಅದನ್ನು ವಿರೋಧಿಸಬಹುದು. ಆದರೆ ಈ ವಿಚಾರದಲ್ಲಿ ನಮ್ಮ ಬೆಂಬಲ ಇದೆ. ಕಾಂಗ್ರೆಸ್ ನವರು ತಂದಿರುವ ಐದು ಗ್ಯಾರಂಟಿ ತೇಪೆ ಹೆಚ್ಚುವ ಕೆಲಸ ಎಂದರು. ಅದನ್ನು ದೇವರಾಜ್ ಅರಸರ ಆಡಳಿತಕ್ಕೆ ಹೋಲಿಸಬೇಡಿ.ಎಸ್ಸಿ ಎಸ್ಟಿಗಳ ಅನುದಾನ ಗ್ಯಾರಂಟಿಗೆ ಬಳಸಿಕೊಂಡು ಮೋಸ ಮಾಡಿದ್ದಾರೆ ಸಿದ್ದರಾಮಯ್ಯ ರೈತರ ಭೂಮಿಯನ್ನು ಮೈನಿಂಗೆ ಕೊಟ್ಟಿದ್ದಾರೆ. ಮೈನಿಂಗ್ ವಿರುದ್ದವೇ ಸಿದ್ದರಾಮಯ್ಯ ಪಾದಯಾತ್ರೆ ಮಾಡಿದ್ರು…
ತುಮಕೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಹಾಗೂ ರೈತರ ಜಮೀನುಗಳಲ್ಲಿರುವ ಬೋರ್ವೆಲ್ ಮತ್ತು ತೆರೆದ ಬಾವಿಗಳ ನೀರನ್ನು ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳಲು ಹಗಲು ಹೊತ್ತಿನಲ್ಲೂ ಲೋಡ್ ಸೆಟ್ಟಿಂಗ್ ಇಲ್ಲದೆ ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಎಂದು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಧರಣಿಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯದ ಕಾವೇರಿ ನೀರನ್ನು ತಮಿಳುನಾಡಿನ ಡಿಎಂಕೆ ಪಕ್ಷದೊಂದಿಗೆ ಶಾಮೀಲಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಥೇಚ್ಛವಾಗಿ ನೀರುಹರಿಸಿ ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ಈಗಾಗಲೇ ರಾಜ್ಯದ 143ಕ್ಕೂ ಹೆಚ್ಚು ತಾಲೂಕುಗಳಲ್ಲಿ ತೀವ್ರವಾದ ಬರಗಾಲ ಪರಿಸ್ಥಿತಿ ಉದ್ಭವಿಸಿದ್ದು ಯುದ್ಧೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರ ನಿರ್ಲಕ್ಷ್ಯ ಭಾವನೆ ತೋರಿದೆ ಎಂದು ಶಾಸಕ ಸುರೇಶ್ ಗೌಡ ಆರೋಪಿಸಿದರು.
ತುರುವೇಕೆರೆ: ಸಿದ್ದಗಂಗಾ ಮಠದಲ್ಲಿ ನಡೆದ ಜಿಲ್ಲಾಮಟ್ಟದ Under 14 free style Wrestling ಕುಸ್ತಿಯ 48 ಕೆಜಿ ವಿಭಾಗದಲ್ಲಿ ಮಾರುತಿ ವಿದ್ಯಾ ಮಂದಿರ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯಶ್ವಂತ್ ಕಲ್ಮನೆ ಜಯಗಳಿಸಿ, ಚಿನ್ನದ ಪದಕ ಗೆದ್ದಿದ್ದಾನೆ. ತಾಲೂಕಿನ ಅಮ್ಮಸಂದ್ರ ನಿವಾಸಿಗಳಾದ ಪದ್ಮ ಮತ್ತು ರೋಹಿತ್ ದಂಪತಿಯ ಪುತ್ರನಾದ, ಯಶ್ವಂತ್ ಕಲ್ಮನೆ ಹುಟ್ಟೂರಿಗೆ ಮತ್ತು ವ್ಯಾಸಂಗ ಮಾಡುತ್ತಿರುವ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾನೆ. ಯಶ್ವಂತ್ 9ನೇ ತಾರೀಖಿನಂದು ಬಾಗಲಕೋಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯದಲ್ಲೂ ಕೂಡ ಭಾಗವಹಿಸಲಿದ್ದಾನೆ. ಈತನ ತಾಯಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಕೂಡ ಆಗಿದ್ದಾರೆ. ಈತನ ಈ ಯಶಸ್ಸಿಗೆ ತುರುವೇಕೆರೆ ತಾಲೂಕಿನ ಪದ್ಮರೋಹಿತ್ ದಂಪತಿಯ ಸ್ನೇಹಿತರು ಹಾಗೂ ಬಂಧು ಮಿತ್ರರು ಶಿಕ್ಷಕ ವರ್ಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಹಾಗೂ ಯಶ್ವಂತ್ ಕಲ್ಮನೆರವರು ರಾಷ್ಟ್ರ ಆಗುವ ಅಂತರಾಷ್ಟ್ರೀಯ ಮಟ್ಟದಲ್ಲಿ ಯಶಸ್ಸನ್ನು ಕಾಣಲಿ ಎಂದು ಶುಭ ಹಾರೈಸಿದ್ದಾರೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಜನಪ್ರಿಯತೆ ಇದೆ, ಹಾಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಆತಂಕದಲ್ಲಿ ಇದ್ದಾರೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟೀಕಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಈ ಆತಂಕದಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಆಡಳಿತದಿಂದ ಜನರ ಜೀವನ ದುಸ್ತರ ಆಗಿದ್ದು ಉದ್ಯೋಗ ಕೊಡ್ತಿನಿ ಎಂದು ಕೋಟ್ಯಂತರ ಜನರ ಉದ್ಯೋಗ ಕಿತ್ತುಕೊಂಡಿದ್ದಾರೆ. ಶ್ರೀಮಂತರ ಬಿಜೆಪಿ ವಿರುದ್ದ ದುಡಿಯುವ ಜನ ದಂಗೆ ಎದ್ದಿದ್ದಾರೆ ಈ ಆತಂಕದಿಂದ ಅವರು ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು. ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ವಿಪಕ್ಷ ನಾಯಕರ ಆಯ್ಕೆ ಮಾಡಲು ಅವರಿಂದ ಸಾಧ್ಯ ಆಗಿಲ್ಲ. ಇದು ನಾಲಾಯಕತನ, ಅವರ ಆಂತರಿಕ ಕಚ್ಚಾಟದಿಂದ ವಿಪಕ್ಷ ನಾಯಕ ಆಯ್ಕೆ ಮಾಡಿಕೊಂಡಿಲ್ಲ ಎಂದರು. ಇವತ್ತು ತುಮಕೂರು ಜಿಲ್ಲೆಗೆ ಬಂದಿದ್ದೇನೆ. ನಾಡಕಚೇರಿ, ತಾಲ್ಲೂಕು ಕಚೇರಿ ಸಬ್ ರಿಜಿಸ್ಟಾರ್ ಕಚೇರಿ ಪರಿಶೀಲನೆ ನಡೆಸಿದ್ದೇನೆ. ಜನರ ಸಮಸ್ಯೆ ಆಲಿಸಿದ್ದೇನೆ, ಅಧಿಕಾರಿಗಳ ಕೆಲಸ ಪರಿಶೀಲಿಸಿದ್ದೇನೆ.…
ತುಮಕೂರು: ತುಮಕೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳನ್ನು ತುರ್ತಾಗಿ ಜವಾಬ್ದಾರಿಯಿಂದ ನಿರ್ವಹಿಸದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ತುಮಕೂರು ಮಹಾನಗರ ಪಾಲಿಕೆಯ 30ನೇ ವಾರ್ಡಿನ ಸದಸ್ಯ ವಿಷ್ಣುವರ್ಧನ್ ದಿಢೀರನೆ ಪಾಲಿಕೆ ಆಯುಕ್ತರ ಕಚೇರಿ ಕೊಠಡಿ ಎದುರು ಕುಳಿತು ಧರಣಿ ನಡೆಸಿದರು. ಸಾರ್ವಜನಿಕರ ಖಾತೆಗಳಿಗೆ ಸಂಬಂಧಪಟ್ಟಂತೆ ತಿದ್ದುಪಡಿ ಮಾಡುವುದು ಸೇರಿದಂತೆ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಪಟ್ಟಂತೆ ಇಲಾಖೆ ಅಧಿಕಾರಿಗಳು ಯಾವುದೇ ರೀತಿಯಲ್ಲೂ ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ ಇದರಿಂದ ವಾರ್ಡಿನ ಅನೇಕ ಮಂದಿ ತಮ್ಮ ಬಳಿ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಸದಸ್ಯ ವಿಷ್ಣುವರ್ಧನ್ ಆರೋಪಿಸಿದರು. ಸ್ಥಳಕ್ಕೆ ಬಂದ ಪಾಲಿಕೆ ಆಯುಕ್ತೆ ಹಾಗೂ ನಗರಸಭೆ ಉಪಾಧ್ಯಕ್ಷರು ವಿಷ್ಣುವರ್ಧನ್ ಅವರನ್ನು ಸಮಾಧಾನಪಡಿಸಲು ಯತ್ನಿಸಿದರು ಸಾಧ್ಯವಾಗಲಿಲ್ಲ ಅಲ್ಲದೆ ಸ್ಥಳದಲ್ಲಿಯೇ ಇದ್ದ ನೊಂದ ಅರ್ಜಿದಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು ಅಲ್ಲದೆ ಇದರ ಕುರಿತು ಭರವಸೆ ದೊರೆತ ನಂತರ ಧರಣಿ ಹಿಂಪಡೆದರು.
ಕೇಂದ್ರದಿಂದ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಒಂದು ದೇಶ ಒಂದು ಚುನಾವಣೆ ವಿಚಾರ ಒಳ್ಳೆಯದೇ. ಆದರೆ ಒಂದೇ ಬಾರಿ ಚುನಾವಣೆ ಮಾಡಲು ಸಾಧ್ಯವಾಗಲ್ಲ. ಒಂದೇ ಬಾರಿ ಚುನಾವಣೆ ನಡೆದರೆ ಕೆಲ ರಾಜ್ಯ ಚುನಾವಣೆ ಮುಂದೂಡಬೇಕು. ಈಗ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಇದೆ. ಇತ್ತೀಚೆಗಷ್ಟೇ ಕರ್ನಾಟಕ ವಿಧಾನಸಭಾ ಚುನಾವಣೆ ನಡೆದಿದೆ. ಹಾಗಾದರೆ ನಮ್ಮ ಸರ್ಕಾರ ವಿಸರ್ಜನೆ ಮಾಡುತ್ತೀರಾ ಎಂದು ಶೆಟ್ಟರ್ ಪ್ರಶ್ನಿಸಿದರು.
ಹಿಂದೂ ಧರ್ಮದ ಕುರಿತು ನೀಡಿದ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹಸಚಿವ ಜಿ.ಪರಮೇಶ್ವರ್, ಹಿಂದೂ ಧರ್ಮದ ಬಗ್ಗೆ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಹಿಂದೂ ಧರ್ಮವನ್ನು ಬೇರೆ ರೀತಿ ಅರ್ಥೈಸುವ ಕೆಲಸ ನಾನು ಮಾಡಿಲ್ಲ. ನಾವೆಲ್ಲಾ ಹಿಂದೂಗಳು, ಬೆಳಗ್ಗೆ ಎದ್ದರೆ ಗಣಪತಿಗೆ ಪ್ರಾರ್ಥಿಸುತ್ತೇನೆ. ನಾನು ಬೆಳಗ್ಗೆ ಎದ್ದ ಕೂಡಲೇ ಲಕ್ಷ್ಮೀ ಶ್ಲೋಕ ಹೇಳುತ್ತೇನೆ. ರಾತ್ರಿ ಮಲಗುವ ಮುಂಚೆ ಹನುಮನ ಶ್ಲೋಕ ಹೇಳುತ್ತೇನೆ ಎಂದು ಹೇಳಿ ಎರಡು ಶ್ಲೋಕಗಳನ್ನು ಹೇದರು. ಅಲ್ಲದೆ, ಬಿಜೆಪಿಯವರಿಗೆ ಈ ಶ್ಲೋಕ ಹೇಳಲು ಬರುವುದಿಲ್ಲ. ಶ್ಲೋಕ ಹೇಳುವಂತೆ ಬಿಜೆಪಿಯವರಿಗೆ ಸವಾಲು ಹಾಕಿದರು. ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂದು ನಾನು ಪ್ರಶ್ನೆ ಮಾಡಿಲ್ಲ. ನಾನು ಸರ್ವಪಲ್ಲಿ ರಾಧಾಕೃಷ್ಣನ್ ವಿಚಾರದ ಬಗ್ಗೆ ಮಾತಾಡಿದ್ದು, ಜೈನ, ಬುದ್ಧ, ಮುಸ್ಲಿಂ ಧರ್ಮಕ್ಕೆ ಸ್ಥಾಪಕರು ಇದ್ದಾರೆ. ಆದರೆ ಹಿಂದೂ ಧರ್ಮಕ್ಕೆ ಸ್ಥಾಪಕರು ಇಲ್ಲ ಎಂದು ಹೇಳಿದ್ದರು. ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನ ಉಲ್ಲೇಖಿಸಿದ್ದಕ್ಕೆ ಬಿಜೆಪಿ ಬೊಬ್ಬೆ ಹಾಕುತ್ತಿದ್ದಾರೆ. ನಾನು ಹಿಂದೂ ಧರ್ಮದ ಬಗ್ಗೆ ಅವಹೇನಕಾರಿಯಾಗಿ ಮಾತಾಡಿಲ್ಲ. ಹಿಂದೂ…
ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೇ ಕಾರಣ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಜೊತೆ ಮಾತಾಡಿದ್ದೇನೆ. ನಾನು ಯಾವುದರ ಬಗ್ಗೆಯೂ ಚರ್ಚೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ ಎಂದರು. ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಮರು ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಯಾವ ಶಾಸಕರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲಾ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ ಎಂದರು.