Author: admin

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆ. 15ರಂದು ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳು ಮಾಡಲಾಗಿದೆ. ಆಕರ್ಷಕ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ, ಸೇನಾ ಸಿಬ್ಬಂದಿಯಿಂದ ಮೈ ನವಿರೇಳಿಸುವ ಮೋಟಾರ್ ಬೈಕ್ ಸಾಹಸ ಪ್ರದರ್ಶನಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಗಣ್ಯರು, ಸಾರ್ವಜನಿಕರು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಂಭ್ರಮ ಕಣ್ತುಂಬಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಮುಖ್ಯಮಂತ್ರಿ ಅವರು ತೆರೆದ ಜೀಪಿನಲ್ಲಿ ಪರೇಡ್ ತುಕಡಿಗಳ ಪರಿವೀಕ್ಷಣೆ ನಡೆಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ’ ಎಂದು ವಿವರಿಸಿದರು. ‘ಪರೇಡ್‌ ನಲ್ಲಿ ಬಿಎಸ್‌ಎಫ್, ಮಹಿಳಾ ಸಿಆರ್‌ಪಿಎಫ್, ಗೋವಾ ಪೊಲೀಸ್, ಮಹಿಳಾ ಕೆಎಸ್‌ಆರ್‌ಪಿ, ಕೆಎಸ್‌ಆರ್‌ಪಿ, ಸಿಎಆ‌, ಕೆಎಸ್‌ಐಎಸ್‌ಎಫ್‌ ಎನ್‌ಸಿಸಿ ಸಶಸ್ತ್ರ ತುಕಡಿಗಳು ಹಾಗೂ ಪೊಲೀಸ್ ತಂಡಗಳು ಭಾಗವಹಿಸಲಿವೆ. ಹೋಂ ಗಾರ್ಡ್ಸ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ,…

Read More

‘ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ’ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ತಿಳಿಸಿದ್ದಾರೆ. ‘ಕರಾಳ ಶನಿವಾರ’ ಎಂಬುದಾಗಿ ಟ್ವಿಟ್ ಮಾಡಿರುವ ಅವರು, ‘ಭಾನುವಾರ ನಸುಕಿನಲ್ಲಿ ಚಿತ್ರದುರ್ಗದಲ್ಲಿ ಐವರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ರಾಜ್ಯದಲ್ಲಿ 24 ಗಂಟೆಯಲ್ಲಿ 37 ಮಂದಿ ಪ್ರಾಣ ಕಳೆದು ಕೊಂಡಂತಾಗಿದೆ’ ಎಂದಿದ್ದಾರೆ. ಮೃತರಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರು ಪ್ರಯಾಣಿಕರು ಹಾಗೂ ಪಾದಚಾರಿಗಳು ಸಹ ಮೃತಪಟ್ಟಿದ್ದಾರೆ. ಬೈಕ್ ಸವಾರ ಹಾಗೂ ಹಿಂಬದಿ ಸವಾರ, ತಮ್ಮ ಸುರಕ್ಷತೆಗಾಗಿ ಹೆಲ್ಮಟ್ ಧರಿಸಿ ಸಂಚರಿಸಬೇಕು. ಕಾರು ಚಾಲಕರು, ರಾತ್ರಿ ಸಮಯದಲ್ಲಿ ಹೆಚ್ಚು ಜಾಗೃತಿ ವಹಿಸಬೇಕು’ ಎಂದೂ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ರಾಜಕಾರಣಿಗಳ ಹೆಸರು ಹೇಳಿ ಅಮಾಯಕರಿಗೆ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಬಾಬು ಹಾಗೂ ಶಿಲ್ಪಾ ಬಂಧಿತ ಆರೋಪಿಗಳು, ಚೈನ್ ಲಿಂಕ್ ಮೂಲಕ ದಂಪತಿ ಜನರಿಗೆ ವಂಚಿಸುತ್ತಿದ್ದರು. ಬೆಂಗಳೂರಿನಲ್ಲಿ ವಾಸವಾಗಿದ್ದ ಕೇರಳ ಮೂಲದವರೇ ಇವರ ಪ್ರಮುಖ ಟಾರ್ಗೆಟ್ ಆಗಿತ್ತು. ಆರ್. ಎಲ್. ಜೆ. ಪಿ ಅಧ್ಯಕ್ಷೆ ಎಂದು ಹೇಳಿಕೊಂಡಿದ್ದ ಶಿಲ್ಪಾ, ತಾನು ಎನ್ ಡಿಎ ರಾಷ್ಟ್ರೀಯ ಕಮಿಟಿ ಸದಸ್ಯೆ ಎಂದು ಜನರನ್ನು ಪರಿಚಯಿಸಿಕೊಳ್ಳುತ್ತಿದ್ದಳು. ರಾಜಕಾರಣಿಗಳ ಜೊತೆಗೆ ತಾವಿರುವ ಫೋಟೋಗಳನ್ನು ತೋರಿಸಿ ಸರ್ಕಾರದ ಮಟ್ಟದಲ್ಲಿ ಕೆಲಸಗಳನ್ನು ಮಾಡಿಕೊಡುವುದಾಗಿ ನಂಬಿಸುತ್ತಿದ್ದರು. ಆರಂಭದಲ್ಲಿ ಸ್ವಲ್ಪ ಹಣಗಳನ್ನು ಕೊಟ್ಟು ಜನರಲ್ಲಿ ನಂಬಿಕೆ ಹುಟ್ಟಿಸುತ್ತಿದ್ದ ದಂಪತಿ ಬಳಿಕ ಅವರಿಂದಲೇ ಉಪಾಯವಾಗಿ ಹೆಚ್ಚು ಹಣಗಳನ್ನು ಪಡೆದು, ಜ್ಯೋತಿಷ್ಯದ ಕಥೆ ಕಟ್ಟಿ ಒಂದು ಸ್ಥಳ ಬಿಟ್ಟು ಮತ್ತೊಂದು ಸ್ಥಳಕ್ಕೆ ಪರಾರಿಯಾಗುತ್ತಿದ್ದರು. ದಂಪತಿ ವಿರುದ್ಧ ಪಶ್ಚಿಮ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಜಾಮೀನಿನ ಮೂಲಕ ದಂಪತಿ ತಪ್ಪಿಸಿಕೊಳ್ಳುತ್ತಿದ್ದರು. ಆದರೆ ಇದೀಗ ವಂಚಕ ದಂಪತಿಯನ್ನು ಹೆಚ್.…

Read More

ಸ್ಯಾಂಡಲ್‌ ವುಡ್ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ ಹೇಳಿದ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂಬ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಜಾತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಸಮಾಜ ಕಲ್ಯಾಣ ಇಲಾಖೆಯಿಂದ ನಟ ಉಪೇಂದ್ರನ ವಿರುದ್ಧ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ನಟ ಉಪೇಂದ್ರ ಅವರ ಹೇಳಿಕೆಯ ಕುರಿತು ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಪದ ಬಳಸಿದ್ದರು. ಇದಾದ ನಂತರ, ಅವರೇ ಅಪ್ಲೋಡ್ ಮಾಡಿದ್ದ ವೀಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದರು. ಆದರೂ, ಅವರ ವಿರುದ್ಧ ಸಾಮಾಜಿಕ ಜಾಲತಾಣ ಸೇರಿ ಭೌತಿಕವಾಗಿ ರಾಮನಗರ ಸೇರಿ ವಿವಿಧೆಡೆ…

Read More

2024 ರ ಲೋಕಸಭಾ ಚುನಾವಣಾ ಹೊಸ್ತಿಲಿನಲ್ಲಿ ಮತ್ತೆ ಮುನ್ನೆಲೆಗೆ ಬಂತು ರವಿ.ಡಿ ಚೆನ್ನಣ್ಣನವರ್ ಹೆಸರು. ಅಷ್ಟಕ್ಕೂ ಲೋಕಸಭಾ ಚುನಾವಣೆಗೂ ರವಿ. ಡಿ. ಚೆನ್ನಣ್ಣನವರ್ ಹೆಸರಿಗೂ ಏನು ಸಂಬಂಧ? ಅಂತಾ ಯೋಚಿಸುತ್ತಿದ್ದೀರಾ? ಅದರ ಕಂಪ್ಲಿಟ್ ಡೀಟೈಲ್ಸ್ ಇಲ್ಲಿದೆ ನೋಡಿ. ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನೇರವಾಗಿ ರಾಜಕಾರಣಕ್ಕೆ ಬಂದು ಸಾಕಷ್ಟು ಹೆಸರು ಮಾಡಿರುವ ಇತ್ತೀಚೆಗೆ ತಮಿಳುನಾಡು ರಾಜ್ಯದಲ್ಲಿ ಸಂಚಲನ ಉಂಟು ಮಾಡುತ್ತಿರುವ ಕೆ. ಅಣ್ಣಾಮಲೈ ಹಾದಿಯಲ್ಲಿಯೇ ರವಿ. ಡಿ. ಚೆನ್ನಣ್ಣನವರ್ ಕೂಡ ಸಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. 2024 ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ (ಮೀಸಲು) ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ರವಿ. ಡಿ. ಚೆನ್ನಣ್ಣನವರ್ ಸ್ಪರ್ಧೆ ಮಾಡಲಿದ್ದು, ಇದಕ್ಕೆ ಬೇಕಾದ ತಾಲೀಮು ತೆರೆಮರೆಯಲ್ಲಿ ನಡೆಯುತ್ತಿದೆ ಎನ್ನಲಾಗಿದೆ. ಇನ್ನು ಈ ಹಿಂದೆಯೇ ರವಿ. ಡಿ. ಚೆನ್ನಣ್ಣನವರ್ ರಾಜಕೀಯ ಪ್ರವೇಶ ಆಗಬೇಕಾಗಿತ್ತು. 9 ಆದ್ರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿಲ್ಲ. ಹೀಗಾಗಿ, 2024 ರಲ್ಲಿ ಎದುರಾಗಲಿರುವ ಲೋಕಸಭಾ ಚುನಾವಣೆಯಲ್ಲಿ ರವಿ. ಡಿ.…

Read More

ಕಾರು ಪಲ್ಟಿಯಾಗಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಭಾನುವಾರ ಬೆಳಗ್ಗೆ 2:30ರ ಸುಮಾರಿಗೆ ನಗರದ ಹುಣಸಮಾರನಹಳ್ಳಿ ಬಳಿ ನಡೆದಿದೆ. ಕಾರ್ತಿಕ್ ಜೈನ್ ಹಾಗೂ ಆದರ್ಶ್ ಕುಮಾರ್ ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ನಂದಿ ಬೆಟ್ಟಕ್ಕೆ ಟ್ರಿಪ್ ಹೊರಟಿದ್ದ ಒಟ್ಟು ಐವರು ವಿದ್ಯಾರ್ಥಿಗಳು ಹೋಗುವುದು ಬೇಡ ಎಂದು ವಾಪಸ್ ಬರುವಾಗ ನಿದ್ದೆ ಮಂಪರಿನಲ್ಲಿ ಈ ದುರಂತ ಸಂಭವಿಸಿದೆ. ಉಳಿದ ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

‘ವೈದ್ಯಕೀಯ ಕ್ಷೇತ್ರದಲ್ಲಿ ಗುಣಮಟ್ಟವನ್ನು ಕಾಯ್ದುಕೊಂಡು, ಗ್ರಾಮೀಣ ಭಾಗಕ್ಕೂ ವೈದ್ಯಕೀಯ ಮೂಲ ಸೌಲಭ್ಯ ಒದಗಿಸಬೇಕು’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ನಗರದಲ್ಲಿ ಶನಿವಾರ ಹಮ್ಮಿಕೊಂಡ ವಜ್ರ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಆರ್ಥಿಕವಾಗಿ ಹಿಂದುಳಿದವರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಲಭ್ಯವಾಗಬೇಕು. ವೈದ್ಯಕೀಯ ಕ್ಷೇತ್ರದಲ್ಲಿನ ಸಂಶೋಧನೆಯ ಲಾಭ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ನಿಟ್ಟಿನಲ್ಲಿ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಉತ್ತಮವಾದ ಕಾರ್ಯ ಮಾಡುತ್ತಿದ್ದು, ವೈದ್ಯಕೀಯ ಕ್ಷೇತ್ರಕ್ಕೆ ಕೌಶಲಯುಕ್ತ ವೈದ್ಯರನ್ನು ನೀಡುತ್ತಿದೆ’ ಎಂದು ಅಭಿಪ್ರಾಯಪಟ್ಟರು. ಇಂಧನ ಸಚಿವ ಕೆ. ಜೆ. ಜಾರ್ಜ್, ‘ಕೋವಿಡ್ ಕಾಣಿಸಿಕೊಂಡ ಸಂದರ್ಭದಲ್ಲಿ ರೋಗ ನಿರ್ವಹಣೆಗೆ ಖಾಸಗಿ ವೈದ್ಯಕೀಯ ಸಂಸ್ಥೆಗಳೂ ಕೊಡುಗೆ ನೀಡುವೆ. ಅವುಗಳಲ್ಲಿ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ರೋಗಿಗಳ ಚಿಕಿತ್ಸೆಗೆ ತೆಗೆದುಕೊಂಡ ಕ್ರಮ ಶ್ಲಾಘನೀಯ’ ಎಂದರು. ಭಾರತೀಯ ಕ್ಯಾಥೋಲಿಕ್ ಬಿಷಪ್‌ ಗಳ ಮಹಾಸಂಸ್ಥೆಯ (ಸಿಬಿಸಿಐ) ಅಧ್ಯಕ್ಷ ಆಂಡ್ರಸ್ ಥಾಜತ್ ಇತರರಿದ್ದರು. ಅಂಚೆ ಇಲಾಖೆಯ ಕರ್ನಾಟಕ ಶಾಖೆಯ ಮುಖ್ಯ ಪೋಸ್ಟ್ ಮಾಸ್ಟರ್…

Read More

ತುಮಕೂರಿನ ಸಿದ್ದಗಂಗಾ ಮಠದ ಹಿಂಭಾಗದಲ್ಲಿರುವ ಗೋಕಟ್ಟೆಗೆ ತನ್ನ ತಾಯಿಯೊಂದಿಗೆ  ಹೋದ ಸಂದರ್ಭದಲ್ಲಿ ಮಗ ಈಜಲು ಹೋಗಿ ನೀರು ಕುಡಿದು ಮೃತಪಟ್ಟಿರುವ ಘಟನೆ ಸಂಭವಿಸಿದ್ದು ಇನ್ನುಳಿದಂತೆ ಆತನನ್ನು ರಕ್ಷಿಸಲು ಹೋದ ಮೂವರು ಅಸುನೀಗಿದ್ದಾರೆ. ಮಗನನ್ನು ರಕ್ಷಿಸಲು ಹೋದ ತಾಯಿ ಹಾಗೂ ಬಾಲಕನ ಸಹೋದರ, ಮತ್ತೊಬ್ಬ  ಕೂಡ ನೀರು ಪಾಲಾಗಿದ್ದಾರೆ. ಮೊದಲಿಗೆ ಮುಳುಗುತ್ತಿದ್ದ ರಂಜಿತ್‌ ನನ್ನು ಬದುಕಿಸಲು ಮುಂದಾದ ಶ್ರೀಮಠದ ವಿದ್ಯಾರ್ಥಿಗಳಾದ ಶಂಕರ್( 11), ಹರ್ಷಿತ್(11) ಮೃತ ವಿದ್ಯಾರ್ಥಿ ಗಳಾಗಿದ್ದರೆ. ಇವರನ್ನು ರಕ್ಷಣೆ ಮಾಡಲು ನೀರಿಗಿಳಿದ ರಂಜಿತ್ ತಾಯಿ ಬೆಂಗಳೂರು ಬಾಗಲಗುಂಟೆಯ  ಲಕ್ಷ್ಮೀ (33) ಹಾಗೂ ಯಾದಗಿರಿ ಜಿಲ್ಲೆಯ ಅಫ ಜಲಪುರದ ಮಹದೇವಪ್ಪ (44) ಕೂಡ ಮೃತರಾಗಿದ್ದಾರೆ. ಶ್ರೀಮಠದಲ್ಲಿ 6ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಮಧ್ಯಾಹ್ನ  ಗೋಕಟ್ಟೆಗೆ ಇಳಿದಿದ್ದರು ಎನ್ನಲಾಗಿದ್ದು ಘಟನೆಯಲ್ಲಿ ರಂಜಿತ್ ಎಂಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರಾಮನಗರ ಮೂಲದ ಹರ್ಷಿತ್, ಹಾಗೂ ಚಿಕ್ಕಮಗಳೂರು ಮೂಲದ ಶಂಕರ್ ಮೃತ ವಿದ್ಯಾರ್ಥಿಗಳು. ಸಿದ್ದಗಂಗಾ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗನನ್ನು ನೋಡಲು ತಾಯಿ ಬಂದಿದ್ದರು. ಈ…

Read More

ಹಲಸೂರು ಠಾಣೆ ವ್ಯಾಪ್ತಿಯ ದೊಮ್ಮಲೂರು ರಸ್ತೆ ಬಳಿಯ ಪ್ರದೇಶದಲ್ಲಿ ಕಿರಣ್ ಎಂಬವರನ್ನು ಕೊಲೆ ಮಾಡಲಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚಿಸಲಾಗಿದೆ. ‘ಸ್ಥಳೀಯ ನಿವಾಸಿ ಕಿರಣ್, ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದರು. ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಕಿರಣ್ ಅವರನ್ನು ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು. ‘ಶುಕ್ರವಾರ ಬೆಳಿಗ್ಗೆ ಬಂದಿದ್ದ ಮಾಹಿತಿ ಆಧರಿಸಿ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಕಿರಣ್ ಆಸ್ಪತ್ರೆಯಲ್ಲಿ ಮೃತಪಟ್ಟ ನಂತರ, ಕೊಲೆ ಪ್ರಕರಣ ದಾಖಲಿಸಲಾಗಿದೆ’ ಎಂದರು. ಹಿಂಬಾಲಿಸಿ ಬಂದು ಕೊಲೆ: ‘ಕಿರಣ್ ಗುರುವಾರ ತಡರಾತ್ರಿ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಬಾರ್‌ಗೆ ಹೋಗಿದ್ದರು. ಅಲ್ಲಿ ಕೆಲ ಯುವಕರ ನಡುವೆ ಜಗಳವಾಗಿತ್ತು. ಸಿಬ್ಬಂದಿ ಜಗಳ ಬಿಡಿಸಿ ಎಲ್ಲರನ್ನೂ ಹೊರಗೆ ಕಳುಹಿಸಿದ್ದರು’ ಎಂದು ಪೊಲೀಸರು ತಿಳಿಸಿದರು. ಬಳಿಕ ದೊಮ್ಮಲೂರು ರಸ್ತೆಯಲ್ಲಿ ಕಿರಣ್ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿಗಳು ಕೃತ್ಯ ಎಸಗಿದ್ದಾರೆ. ಕಿರಣ್ ಅವರನ್ನು ಸ್ಥಳೀಯರು ಮೊದಲು ಬೌರಿಂಗ್…

Read More

ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ಸ್ವಯಂಕೃತ ಅಪರಾಧದಿಂದ, ಚುನಾವಣೆಯಲ್ಲಿ ಸೋತು ಗೋವಿಂದರಾಜನಗರ ಜನರಿಗೆ ಅಪಚಾರ ಮಾಡಿದ್ದೇನೆ. ಈ ಮೂಲಕ ನನ್ನ ಕಾಲಿನ ಮೇಲೆ ನಾನೇ ಕಲ್ಲು ಹಾಕಿಕೊಂಡಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ನನಗೆ ವಿಧಾನಸಭಾ ಚುನಾವಣೆಯಲ್ಲಿ ನಮ್ಮವರೇ ಮೋಸ ಮಾಡಿದರು. ಅದು ಎಲ್ಲರಿಗೂ ಗೊತ್ತು. ನಮ್ಮ ನಾಯಕರ ಒತ್ತಾಯಕ್ಕೆ ಮಣಿದು ನಾನು ಎರಡು ಕಡೆ ಸ್ಪರ್ಧೆ ಮಾಡಿದ್ದೆ. ಹೈಕಮಾಂಡ್ ಕೊಟ್ಟ ಟಾಸ್ಕನ್ನು ನಾನೊಬ್ಬನೇ ಸೀರಿಯಸ್ ಆಗಿ ತೆಗೆದುಕೊಂಡು ಕೆಲಸ ಮಾಡಿದೆ. ಇಷ್ಟಾದರೂ ನಾನು ಚುನಾವಣೆಯಲ್ಲಿ ಸೋತೆ ಎಂದು ಪರೋಕ್ಷವಾಗಿ ಸ್ವಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಕಡೆ ಮೂರು ಸಾವಿರ ವೋಟ್‌ನಲ್ಲಿ ಸೋತೆ, ಇನ್ನೊಂದು ಕಡೆ 70 ಸಾವಿರ ವೋಟ್ ತೆಗೆದುಕೊಂಡೆ. ನಾನು ಹೇಗೆ ಸೋತೆ ಎಂಬುದು ಎಲ್ಲರಿಗೂ ಗೊತ್ತು. ಅದನ್ನು ನನ್ನ ಬಾಯಿಂದ ಬಿಡಿಸಬೇಡಿ ಎಂದರು. ಇನ್ನು ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿದ್ದೇನೆ.…

Read More