Author: admin

ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಶ್ಲೇಷಿಸಿದರು. ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಕೆಶಿಯವರಿಗೆ 100 ಜನ ಶಾಸಕರ ಬೆಂಬಲ ಇದೆ; ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ ಎಂದರು. ಕುದುರೆ ವ್ಯಾಪಾರದ ಬಗ್ಗೆ ಮಾನ್ಯ…

Read More

ಧಾರವಾಡ: ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾಗಿದ್ದ ಎಎಸ್‌ ಪಿ ನಾರಾಯಣ ಬರಮಣ್ಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಎರಡು ಪುಟಗಳ ಪತ್ರ ಬರೆದಿದಿದ್ದಾರೆ. ಈ ಪತ್ರದಲ್ಲಿ ತಮಗಾದ ಅವಮಾನದ ಬಗ್ಗೆ ಹೇಳಿಕೊಂಡಿದ್ದಾರೆ. ಆದರೆ, ಇದರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆ ಇರುವುದರಿಂದ ಹಿರಿಯ ಅಧಿಕಾರಿಗಳು ನಾರಾಯಣ ಭರಮನಿ ಅವರ ಮನವೊಲಿಕೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಎಎಸ್‌ ಪಿ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸಿಎಂ ಬಹಿರಂಗವಾಗಿ ಅಧಿಕಾರಿ ಜತೆ ಈ ರೀತಿ ನಡೆದುಕೊಂಡಿದ್ದಾರೆ. ಇನ್ನೂ ಆಂತರಿಕವಾಗಿ ಅವರು ಯಾವ ರೀತಿ ನಡೆದುಕೊಳ್ಳಬಹುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ ನಲ್ಲಿ ಯಾವುದೇ ಅಸಮಾಧಾನವಿಲ್ಲ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾಯಕತ್ವದ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯ ಅಗತ್ಯವಿಲ್ಲ.  ಅವರ ನಾಯಕತ್ವಕ್ಕೆ ಬೆಂಬಲಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪಕ್ಷದ ಶಿಸ್ತು ಮುಖ್ಯ, ನನ್ನನ್ನು ಸಿಎಂ ಮಾಡುವಂತೆ ಯಾರನ್ನೂ ಕೇಳಿಲ್ಲ ಎಂದು ಹೇಳಿದರು ಮತ್ತು ನಾಯಕತ್ವ ಬದಲಾವಣೆಯ ವಿಷಯದ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವ ನಾಯಕರಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಸಿದರು. ಮಂಗಳವಾರ, ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡುತ್ತಿರುವ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರಿಗೆ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ. ನಾನು ಅವರಿಗೆ ನೋಟಿಸ್ ನೀಡಿದ್ದೇನೆ. ಇತರರಿಗೂ ನೋಟಿಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪಕ್ಷದಲ್ಲಿ ಶಿಸ್ತು ಮುಖ್ಯ. ನನ್ನನ್ನು ಸಿಎಂ ಮಾಡಲು ನಾನು ಯಾರನ್ನೂ ನನ್ನ ಹೆಸರು ತೆಗೆದುಕೊಳ್ಳಲು ಕೇಳಿಲ್ಲ. ಅದರ ಅಗತ್ಯವಿಲ್ಲ. ಸಿಎಂ ಇರುವಾಗ, ಯಾವುದೇ ಭಿನ್ನಾಭಿಪ್ರಾಯದ ಅಗತ್ಯವಿಲ್ಲ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು: ರಾಜ್ಯದಲ್ಲಿ ಕಳೆದ ಐದೂವರೆ ವರ್ಷಗಳಲ್ಲಿ 82 ಹುಲಿಗಳು ಮೃತಪಟ್ಟಿವೆ ಎಂದು ಆಘಾತ ವ್ಯಕ್ತಪಡಿಸಿರುವ ಸಚಿವ ಈಶ್ವರ್ ಖಂಡ್ರೆ(Ishwar Khandre )ಅವರು, ಈ ಎಲ್ಲಾ ಹುಲಿಗಳ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಅರಣ್ಯಾಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಸಚಿವರು, ಸಾವನ್ನಪ್ಪಿರುವ 82 ಹುಲಿಗಳ ಪೈಕಿ ಎಷ್ಟು ಹುಲಿಗಳು ಸಹಜವಾಗಿ ಸಾವನ್ನಪ್ಪಿವೆ? ಎಷ್ಟು ಹುಲಿಗಳು ಅಸಹಜವಾಗಿ ಮೃತಪಟ್ಟಿವೆ? ಅಸಹಜವಾಗಿ ಮೃತಪಟ್ಟ ಹುಲಿಗಳ ಸಾವಿಗೆ ಕಾರಣವೇನು? ಎಂಬ ಬಗ್ಗೆ ತನಿಖೆ ನಡೆದು ವರದಿ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ. ಮೃತಪಟ್ಟ ಯಾವುದಾದರೂ ಹುಲಿಗಳ ಅಂಗಾಂಗ ಅಂದರೆ ಉಗುರು, ಹಲ್ಲು ಇತ್ಯಾದಿ ತೆಗೆಯಲಾಗಿತ್ತೆ? ಹುಲಿಗಳ ಹತ್ಯೆ ಆಗಿದ್ದಲ್ಲಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕ್ರಮ ಆಗಿದೆಯೇ? ಎಷ್ಟು ಹುಲಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ? ಎಂಬ ವಿವರವನ್ನೂ ಕೇಳಿದ್ದಾರೆ. ಈವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆ ಆಗಿದೆ?…

Read More

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ  ಕಾರು ಹಾಗೂ ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಓರ್ವ ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ದ್ವೇಷ ಭಾಷಣ, ನಕಲಿ ಸುದ್ದಿಗಳ ದ್ವೇಷ ಭಾಷಣ, ನಕಲಿ ಸುದ್ದಿಗಳ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರುತ್ತಿದ್ದು, ಪೊಲೀಸರು ಇಂತಹ ಬೆಳವಣಿಗೆ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಮಂಗಳವಾರ ಆಯೋಜಿಸಿದ್ದ ವಿಶ್ವ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂದು ಹೇಳಿದರು. ನಮಗೆ ದ್ವೇಷವಿಲ್ಲದ ಸಮಾಜ ಬೇಕು, ಆದರೆ, ಕೆಲವರು ಅಶಾಂತಿಯುಕ್ತ ಸಮಾಜವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮಗಳು ಸಿಎಂ ಅಥವಾ ಪ್ರಧಾನಿಯನ್ನು ಮೆಚ್ಚಿಸುವಲ್ಲಿ ತೊಡಗಬಾರದು, ಸತ್ಯಗಳನ್ನಷ್ಟೇ ವರದಿ ಮಾಡಬೇಕು ಎಂದು ತಿಳಿಸಿದರು. ದಲಿತರು, ಒಬಿಸಿಗಳು ಮತ್ತು ದೀನದಲಿತರಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡಬೇಕು, ಜನರ ಹಿತಾಸಕ್ತಿಗಳನ್ನು ಕಾಪಾಡಬೇಕು. ಪ್ರಜಾಪ್ರಭುತ್ವದಲ್ಲಿ, ಸ್ವತಂತ್ರ ಮತ್ತು ಮುಕ್ತ ಮಾಧ್ಯಮವು ಬಹಳ ಮುಖ್ಯ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಸರಗೂರು:  ಜುಲೈ 1ರಂದು ಬಿ.ಸಿ.ರಾಯ್ ರವರ ಜನ್ಮ ದಿನಾಚರಣೆ ಮತ್ತು ಮರಣ ಹೊಂದಿದ ದಿನ ಈ ದಿನವನ್ನು ನಾವು ವೈದ್ಯರ ದಿನಾಚರಣೆ ಎಂದು ಆಚರಣೆ ಮಾಡುತ್ತಿದ್ದೇವೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಕಾಟವಾಳು ಹಾಡಿಯಲ್ಲಿ ಕರ್ನಾಟಕ ರಾಜ್ಯ  ಬುಡಕಟ್ಟು, ಸಂಶೋಧನಾ ಸಂಸ್ಥೆ, ಮೈಸೂರು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಬಿ.ಮಟಕೆರೆ ಪುರ ಇವರ ಸಹಯೋಗದೊಂದಿಗೆ ಹಾಡಿಯಲ್ಲಿ ವೈದ್ಯರ ದಿನಾಚರಣೆ ಮತ್ತು ಜನರಿಗೆ ಸಿಕಲ್ ಸೆಲ್  ಅನೀಮಿಯ ಅರಿವು ಮೂಡಿಸುವ ಕಾರ್ಯ ಕ್ರಮವನ್ನು ಮಂಗಳವಾರ ದಂದು ಆಯೋಜಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಿ.ಸಿ.ರಾಯರವರು ವೈದ್ಯ ವೃತ್ತಿಯಲ್ಲಿ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಎಂದರು.  ಸಿಕ್ಕಲ್ ಸೆಲ್ ಅನಿಮಿಯ ಕಾಯಿಲೆ ಎಂಬುದು ಕುಡುಗೋಲು ಅಥವಾ ಕುಡ್ಲು ಕಾಯಿದೆ ಎಂದು ಕರೆಯುತ್ತಾರೆ, ಈ ಕಾಯಿಲೆಯಲ್ಲಿ ಕೆಂಪು ರಕ್ತಕಣಗಳು ಕುಡುಗೋಲು ಆಕಾರಕ್ಕೆ ಪರಿವರ್ತನೆಗೊಂಡು ಅನಾರೋಗ್ಯಕ್ಕೆ ಕಾರಣವಾಗುತ್ತದೆ.  ಇದು ಹೆಚ್ಚಾಗಿ ಮಕ್ಕಳಲ್ಲಿ ಕಾಣಿಸಿಕೊಳ್ಳುವ…

Read More

ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರಾದ  ಸಿ.ಸಿ. ಬಾರಕೇರ ಅವರ ವಯೋನಿವೃತ್ತಿಯ ಪ್ರಯುಕ್ತ ಬೀಳ್ಕೊಡುಗೆ ಸಮಾರಂಭ ಹಾಗೂ ಬಿ.ವಿ.ಎ.–ಚಿತ್ರಕಲೆ ಪದವಿ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಡಾ.ಕರಿಯಣ್ಣ ಬಿ. ಹಿರಿಯ ಅಧ್ಯಾಪಕರು ವಿಶ್ವವಿದ್ಯಾನಿಲಯ ಕಲಾ ಕಾಲೇಜು ತುಮಕೂರು ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ,  ಸಿ.ಸಿ.ಬಾರಕೇರ ಅವರು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಕಟ್ಟಿ–ಬೆಳೆಸಿದ ಗಟ್ಟಿಗರು, ಸಾಕಷ್ಟು ಏಳು–ಬೀಳುಗಳನ್ನು ಕಂಡಂತಹರು ಇಡೀ ತಮ್ಮ 37 ವರ್ಷಗಳ ಸುದೀರ್ಘ ಸೇವೆಯಲ್ಲಿ ಚಿತ್ರಕಲಾ ಕಾಲೇಜಿನ ಅಭಿವೃದ್ಧಿ, ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳ ಅಚ್ಚು ಮೆಚ್ಚಿನ ಪ್ರಾಂಶುಪಾಲರಾಗಿ ಕರ್ತವ್ಯ  ನಿರ್ವಹಿಸಿದ್ದಾರೆ. ಚಿತ್ರಕಲಾ ಕಾಲೇಜು ಇಂದು ಉತ್ತಮ ಸ್ಥಿತಿಯಲ್ಲಿ ಮುನ್ನೆಡೆಯುತ್ತಿರುವುದಕ್ಕೆ  ಸಿ.ಸಿ.ಬಾರಕೇರ ಅವರ ಬೆವರು ಹನಿ, ಶ್ರಮ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ.  ಎಲ್ಲ ಇಲ್ಲಗಳ ನಡುವೆ ಎಲ್ಲವನ್ನು ಸಾಧಿಸಿದ ಸಾಧಕರು ಇವರಾಗಿದ್ದಾರೆ. ಇವರ ಪ್ರಾಮಾಣಿಕತೆಯು ಈ…

Read More

ಬಿಗ್‌ ಬಜೆಟ್ ಚಿತ್ರಗಳ ನಾಯಕಿಯಾಗಿ ಮಿಂಚುತ್ತಿರುವ ಕನ್ನಡ ಹುಡುಗಿ ರಶ್ಮಿಕಾ ಮಂದಣ್ಣ ಸಾಮಾಜಿಕ ಪ್ರಜ್ಞೆ ಮೆರೆದಿದ್ದು, ಎಷ್ಟು ಹಣ ಕೊಟ್ಟರೂ, ಸಿನಿಮಾವನ್ನೇ ಬಿಟ್ಟರೂ ಆ ಒಂದು ಕೆಲಸ ನಾನು ಮಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಸಿನಿಮಾದಲ್ಲಿ ಧೂಮಪಾನ ಮಾಡುವ ದೃಶ್ಯದಲ್ಲಿ ನಾನು ನಟಿಸಲು ಇಷ್ಟು ಪಡುವುದಿಲ್ಲ, ಅಂತಹ ದೃಶ್ಯವನ್ನು ತೆರೆಯ ಮೇಲೆ ವಿಜ್ರಂಭಿಸಲು ಇಷ್ಟ ಪಡುವುದಿಲ್ಲ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಒಂದು ವೇಳೆ ಅಂತಹ ಪಾತ್ರವನ್ನು ಎದುರಿಸುವ ಅನಿವಾರ್ಯತೆ ಎದುರಾದರೆ, ಆ ಪಾತ್ರವನ್ನು ತಿರಸ್ಕರಿಸಲು ನಾನು ಸಿದ್ಧ. ಧೂಮಪಾನ ಮಾಡದಿರುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ರಶ್ಮಿಕಾ ಹೇಳಿದ್ದಾರೆ. ಮಹಿಳೆಯರ ಪ್ರಾಭಲ್ಯದ ಕುರಿತಾಗಿ ಏರ್ಪಡಿಲಾಗಿದ್ದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಹೋಗಿದ್ದ ವೇಳೆ ರಶ್ಮಿಕಾ ಈ ವಿಚಾರವನ್ನ ಘೋಷಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೀದರ್ : ಬಸವಕಲ್ಯಾಣದ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ರಾಹುಲ್ ಹೊಸಮನಿ ಎಂಬ ಸಿಬ್ಬಂದಿಯನ್ನು ಭ್ರಷ್ಟಾಚಾರದ ಆರೋಪದಡಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ. ಬಸವಕಲ್ಯಾಣ ತಾಲ್ಲೂಕಿನ ಉಜಳಂಬ ಗ್ರಾಮದಲ್ಲಿ ಜಮೀನು ಒಂದರ ಹಕ್ಕು ಬದಲಾವಣೆ ಹಾಗೂ ಇತರೆ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟ ಬಗ್ಗೆ ವರದಿಯಾಗಿದ್ದು, ಮೇಲ್ನೋಟಕ್ಕೆ ಭ್ರಷ್ಟಾಚಾರ ಮಾಡಿರುವುದು ಕಂಡು ಬರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯತನ ತೋರುತ್ತಿರುವುದರಿಂದ ಕಚೇರಿ ಆಡಳಿತದಲ್ಲಿ ಹಾಗೂ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಡುತ್ತಿರುವುದರಿಂದ ಇವರ ವಿರುದ್ಧ ಶಿಸ್ತು ಕ್ರಮ ಕೈಕೊಂಡು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More