Subscribe to Updates
Get the latest creative news from FooBar about art, design and business.
- ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
- ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
- ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
- ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
- ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
- ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
- ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
Author: admin
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆರೆಗಳು ಹಾಗೂ ರಾಜಕಾಲುವೆ ಒತ್ತುವರಿ ತೆರವಿನ ಜವಾಬ್ದಾರಿಯನ್ನು ತಹಶೀಲ್ದಾರ್ ಹಾಗೂ ವಲಯ ಕಾರ್ಯಪಾಲಕ ಎಂಜಿನಿಯರ್ ಗಳಿಗೆ ವಹಿಸಲಾಗಿದೆ. ಅವರು ವಿಫಲರಾದರೆ ಶಿಸ್ತುಕ್ರಮ ಜರುಗಿಸಲು ಸರ್ಕಾರ ಸೂಚಿಸಿದೆ. ಹೈಕೋರ್ಟ್‌ನಿಂದ ಸಾಕಷ್ಟು ಬಾರಿ ಆಕ್ಷೇಪಕ್ಕೆ ಒಳಗಾಗಿರುವ ರಾಜ್ಯ ಸರ್ಕಾರ ಇದೀಗ ಕೆರೆಗಳು ಹಾಗೂ ರಾಜಕಾಲುವೆ ಒತ್ತುವರಿ ತೆರವು ಹಾಗೂ ರಕ್ಷಣೆ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಿದೆ.
ಯುವತಿಯೊಬ್ಬಳು ತನ್ನ ಲಿವ್ ಇನ್ ಸಂಗಾತಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಹತ್ಯೆ ಮಾಡಿದ ಮಹಿಳೆಯನ್ನು ಬೆಳಗಾವಿ ಮೂಲದ 24 ವರ್ಷದ ರೇಣುಕಾ ಎಂದು ಗುರುತಿಸಲಾಗಿದೆ. ಮೃತನನ್ನು ಕೇರಳ ಮೂಲದ 29 ವರ್ಷದ ಜಾವೇದ್ ಎಂದು ಗುರುತಿಸಲಾಗಿದೆ. ಹೆಚ್ಚಿನ ತನಿಖೆಗೆ ಹುಳಿಮಾವು ಪೊಲೀಸರು ಅಪರಾಧಿಯನ್ನು ವಿಚಾರಣೆ ಮಾಡುತ್ತಿದ್ದಾರೆ.
ಗಂಡನೇ ತನ್ನ ಹೆಂಡತಿ ಹಾಗೂ ಮಗನನ್ನು ಹತ್ಯೆ ಮಾಡಿ ಪರಾರಿಯಾಗಿರುವುದಾಗಿ ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಬಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೆ ಸದ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರವೀಂದ್ರನಾಥ ಗುಡ್ಡೆಯಲ್ಲಿ ಈ ಜೋಡಿ ಹತ್ಯೆ ನಡೆದಿದೆ. ನವನೀತಾ (35) ಹಾಗೂ ಪುತ್ರ ಸಾಯಿ ಸೃಜನ್ (8) ಕೊಲೆಯಾದವರು. ಚಂದ್ರು (38) ಪತ್ನಿಗೆ ಚಾಕುವಿನಲ್ಲಿ ಇರಿದು, ಹತ್ಯೆ ಮಾಡಿರುವ ಆರೋಪಿ.
ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಡಿಕ್ಕಿಯಿಂದ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಪುರುಷನ ಗುರುತು ಪತ್ತೆಯಾಗಿಲ್ಲ. 35ರಿಂದ 40 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ತುಮಕೂರು ರಸ್ತೆಯಿಂದ ಹೊಸೂರು ರಸ್ತೆ ಕಡೆಗೆ ನಡೆದು ತೆರಳುತ್ತಿರುವಾಗ ವೇಗವಾಗಿ ಬಂದ ವಾಹನ ಡಿಕ್ಕಿಯಾಗಿದೆ. ವಾಹನ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಮಾಚಾರ ನಡೆಸಿ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪತ್ನಿ ವಿರುದ್ಧ ಉದ್ಯಮಿಯೊಬ್ಬರು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಉದ್ಯಮಿ ದೇವ್ ಕುಮಾರ್(39) ಅವರು ನೀಡಿದ ದೂರಿನ ಮೇರೆಗೆ ಪತ್ನಿ ಎಂ. ಪಿ. ಐಶ್ವರ್ಯ, ಅತ್ತೆ ಮಹಾಲಕ್ಷ್ಮೀ ಮತ್ತು ಮಾವ ಮಂಜುನಾಥ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಐಶ್ವರ್ಯ ಅವರು ವೈದ್ಯೆಯಾಗಿ ಕೆಲಸ ಮಾಡುತ್ತಿದ್ದಾರೆ. ‘ಪತ್ನಿ ಹಾಗೂ ಅವರ ಕುಟುಂಬದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಉದ್ಯಮಿ ಮನವಿ ಮಾಡಿದ್ದಾರೆ.
ಬಾಗಲಗುಂಟೆ ಹಾಗೂ ಸಂಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆಯ ಶೆಟ್ಟಿಹಳ್ಳಿಯಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಿದ್ದ ರವಿಕುಮಾರ್, ಇಮ್ರಾನ್ ಹಾಗೂ ಜೈಕುಮಾರ್ ನನ್ನು ಬಂಧಿಸಲಾಗಿದೆ. 7 6.45 ಲಕ್ಷ ಮೌಲ್ಯದ 129 ಗ್ರಾಂ ತೂಕದ ಚಿನ್ನಾಭರಣ, 1.08 ಲಕ್ಷ ನಗದು ಹಾಗೂ 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕುಟುಂಬಸ್ಥರೆಲ್ಲರು ಧರ್ಮಸ್ಥಳಕ್ಕೆ ತೆರಳಿದ್ದಾಗ ಮನೆಯಲ್ಲಿ ಕಳ್ಳತನ ಮಾಡಿದ್ದರು.
ತುರುವೇಕೆರೆ: ಕ್ಷೇತ್ರಕ್ಕೆ ಮಾಜಿ ಶಾಸಕರಾದ ಜಯರಾಮಣ್ಣ ನವರು ನೀರಿನ ಹೋರಾಟಕ್ಕೆ ಶಾಶ್ವತ ಪರಿಹಾರವನ್ನು ನೀಡಿದ್ದಾರೆ ಹಾಗೂ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದಾರೆ ಯೋಗೀಶ್ ರವರೇ ಮೊದಲು ಕೀಳು ಮಟ್ಟದ ರಾಜಕಾರಣ ಬಿಡಿ ನಾಲಿಗೆ ಬಿಗಿ ಹಿಡಿದು ಮಾತನಾಡಿ ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ತಾಲೂಕು ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಅವರು, ಜೆಡಿಎಸ್ ಪಕ್ಷದ ವಕ್ತಾರಾದ ವೆಂಕಟಪುರ ಯೋಗೇಶ್ ಮಾಜಿ ಶಾಸಕರಾದ ಮಸಾಲೆ ಜಯರಾಮ್ ಅವರು ಕಮಿಷನ್ ದಂಧೆಗಾಗಿ ಕೆಲಸ ಮಾಡಿದ್ದಾರೆ ಎಂದು ನೀಡಿರುವ ಹೇಳಿಕೆಯನ್ನ ಖಂಡಿಸಿದರು. ಅವರಿಗೂ ಗೊತ್ತಿದೆ ಮತ್ತೆ ಹೇಳುತ್ತಾರೆ ತೂಬುಗಳನ್ನು ಹೊಡೆದು ನೀರು ಬಿಡುತ್ತೇವೆ ಅಷ್ಟು ಪೌರುಷ ನಮಗಿದೆ ಎಂದು ತೂಬನ್ನು ಹೊಡೆದು ಹಾಕಿ ನೀರು ಬಿಡುವ ಅವಶ್ಯಕತೆ ಇಲ್ಲ, ಇವತ್ತು ದಂಡಿನಶಿವರ ಹೋಬಳಿಯ ಕೆರೆಗಳಿಗೆ ನೀರು ಹರಿಸುವ ಡಿ 10 ತೂಬು ಆಗಿರಬಹುದು ನಮ್ಮ ಮಾಜಿ ಸಣ್ಣ ನೀರಾವರಿಯ…
ಮಧುಗಿರಿ: ಕೇಂದ್ರವು ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಹೋಗದಂತೆ ನೋಡಿಕೊಳ್ಳಬೇಕು ಎಂದು ಬುಧವಾರ ಜನರಿಗೆ ಕರೆ ನೀಡಿದರು. ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡಲು ಕರ್ನಾಟಕಕ್ಕೆ ಅಕ್ಕಿ ನೀಡುವುದನ್ನು ನಿರಾಕರಿಸಿದ ಬಿಜೆಪಿಯನ್ನು ನೀಚ ಎಂದು ಕರೆದ ಅವರು, ಕೇಂದ್ರದ ಆಡಳಿತ ಪಕ್ಷವೂ ಮಾನವ ವಿರೋಧಿಯಾಗಿದೆ ಎಂದು ಹೇಳಿದರು. ಕ್ಷೀರ ಭಾಗ್ಯ ಯೋಜನೆಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಏಳು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಅದನ್ನು ನಾಲ್ಕು ಕೆ.ಜಿ ಮತ್ತು ಐದು ಕೆ.ಜಿಗೆ ಇಳಿಸಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಐದು ಕೆ.ಜಿ ನೀಡುವುದಾಗಿ ಭರವಸೆ ನೀಡಿದ್ದೆ…
ಮಧುಗಿರಿ: ಕ್ಷೀರ ಭಾಗ್ಯ ಯೋಜನೆಯು ಪೌಷ್ಟಿಕಾಂಶಗಳ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವರದಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 10 ವರ್ಷಗಳ ಹಿಂದೆ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಈ ಯೋಜನೆಯು ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಶೇ.80ರಷ್ಟು ಶಾಲಾ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಪ್ರತಿ ಮಕ್ಕಳಿಗೆ 150 ಮಿಲಿ ಲೀ. ನಷ್ಟು ಹಾಲನ್ನು ವಿತರಿಸಲಾಗುತ್ತಿದೆ ಎಂದ ಅವರು, ನಮ್ಮ ಸರ್ಕಾರವು ನುಡಿದಂತೆ ನಡೆಯುತ್ತಿದ್ದು, ಸಂಕಷ್ಟದಲ್ಲಿದ್ದ ಹೈನುಗಾರಿಕೆಗೆ ಪ್ರೋತ್ಸಾಹ ನೀಡುತ್ತಿದೆ ನಷ್ಟದಲ್ಲಿದ್ದ ಒಕ್ಕೂಟಗಳಿಗೆ ಚೈತನ್ಯ ತುಂಬಿದೆ ಎಂದರು. ಎತ್ತಿನಹೊಳೆ ಯೋಜನೆ ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅದನ್ನು ಮುಕ್ತಾಯಗೊಳಿಸಿ ಈ ಭಾಗದ ಕೆರೆಗಳಿಗೆ ನೀರು ಹರಿಸುವುದಾಗಿ ತಿಳಿಸಿದ ಅವರು ಕೂಡ್ಲಿಗಿಯಿಂದ ಪಾವಗಡಕ್ಕೆ ಕುಡಿಯುವ ನೀರು ಒದಗಿಸುವ 2300 ಕೋಟಿ ರೂ. ಗಳ ಬೃಹತ್ ಯೋಜನೆಯನ್ನು ರೂಪಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ…
ತಿಪಟೂರು: ಇಂದಿನ ಸರಕಾರ ಕೇವಲ ಡಿಗ್ರಿ ಪಾಸಾದವರನ್ನು ಪಠ್ಯಕ್ರಮ ಪರಿಷ್ಕರಣೆಗೆ ನೇಮಿಸಿದ್ದು, ಬಸವಣ್ಣನವರ ನೀಡಿದ ವಚನ ಸಾಹಿತ್ಯ ಮತ್ತು ಚಿಂತನೆಗಳನ್ನು ಬದಲಾಯಿಸಿದ್ದರು ಇದರ ಶ್ರೇಯಸ್ಸು ಆರ್ ಎಸ್ ಎಸ್ ನವರಿಗೆ ಸಲ್ಲಿಸಬೇಕು ಎಂದು ಕಾಂಗ್ರೆಸ್ ಶಾಸಕ ಕೆ ಷಡಕ್ಷರಿ ಹೇಳಿದರು. ನಗರದ ಒಕ್ಕಲಿಗರ ಭವನದಲ್ಲಿ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿಗೆ ಮಾದರಿಯಾಗಿ ಇರಬೇಕಾದ ಬಿಇಓ ಕಚೇರಿ ಸೋರುತ್ತಿದ್ದು, ಎಲ್ಲಾ ರೀತಿಯ ಮೂಲ ಸೌಕರ್ಯ ಉಳ್ಳ ಕಟ್ಟಡ ನಿರ್ಮಿಸಲಾಗುವುದು. ತಿಪಟೂರನ್ನು ಜಿಲ್ಲೆ ಮಾಡುವ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದು ಹೇಳಿದರು. ನಾನು ಸಚಿವ ರಾಜಣ್ಣನವರನ್ನು ಕೇಳಿದೆ, ನಿಮಗೆ ಮಂತ್ರಿಗಿರಿ ಬೇಕೆಂದರೆ ತಿಪಟೂರನ್ನು ಜಿಲ್ಲೆಯನ್ನಾಗಿ ಮಾಡಿ. ಇಲ್ಲ ಮಂತ್ರಿ ಗಿರಿ ಬಿಟ್ಟು ಕೊಡಲಿ. ನನಗೆ ಮಂತ್ರಿ ಗಿರಿ ಕೊಡದಿದ್ದರೂ ಪರವಾಗಿಲ್ಲ, ತಿಪಟೂರನ್ನು ಜಿಲ್ಲೆಯನ್ನಾಗಿ ಮಾಡಲಿ ಎಂದರು.…