Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ಬೆಳಗಾವಿ: ಮೇ.18ರ ಬೆಳಗ್ಗೆ ಮಾರಿಹಾಳ ಸರ್ಕಾರಿ ಶಾಲೆಯ ಕೊಠಡಿ ಎದುರು ಮಹಾಂತೇಶ ಕರಲಿಂಗಣ್ಣವರ್ (24) ಮೃತದೇಹ ಇತ್ತು. ಯುವಕನನ್ನ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಯಾರೂ ಹತ್ಯೆ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮಾರಿಹಾಳ ಪೊಲೀಸರು, ಘಟನೆ ನಡೆದ 24 ಗಂಟೆಗಳ ಹಿಂದೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಳೇಭಾವಿ ನಿವಾಸಿ ಅಕ್ಷಯಕುಮಾರ್ ಕೊಣಕೇರಿ(23), ಮಾರಿಹಾಳ ನಿವಾಸಿ ರಾಜೇಸಾಬ್ ಮುಲ್ಲಾ(23) ಬಂಧನಕ್ಕೊಳಗಾದ ಆರೋಪಿಗಳು. ನಾಲ್ಕು ದಿನಗಳ ಹಿಂದೆ ಕೊಲೆಯಾದ ಮಹಾಂತೇಶ ಹಾಗೂ ಆರೋಪಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವೇಳೆ ಕೊಲೆಯಾದ ಮಹಾಂತೇಶ್ ರಾಜೇಸಾಬ್‌ಗೆ ಧಮ್ಕಿ ಹಾಕಿದ್ದನಂತೆ. ಇದೇ ವೈಷಮ್ಯವಿಟ್ಟುಕೊಂಡು ಇಬ್ಬರು ಆರೋಪಿಗಳನ್ನು ಹತ್ಯೆ ಮಾಡಿ, ಪರಾರಿಯಾಗಿದ್ರು. ಮಾರಿಹಾಳ ಕೊಲೆ ಪ್ರಕರಣ ದಾಖಲಿಸಿಕೊಂಡ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಜ್ಞಾನದೇಗುಲವಾದ ಶಾಲಾ ಆವರಣದಲ್ಲಿ ಈ ರೀತಿಯ ಘಟನೆ ನಡೆದಿದ್ದು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿತ್ತು. ಇದೀಗ ನಡೆದು ಕೇವಲ 24 ಗಂಟೆಗಳ ಹಿಂದೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಚಿಕ್ಕಬಳ್ಳಾಪುರ: ಆರೋಗ್ಯ ಸಚಿವರಾಗಿದ್ದ, ಪ್ರಭಾವಿ ಬಿಜೆಪಿ ನಾಯಕ ಡಾ ಕೆ ಸುಧಾಕರ್ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಗೆಲುವಿನ ಉತ್ಸಾಹದಲ್ಲಿದ್ದ ಪ್ರದೀಪ್ ಈಶ್ವರ್ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಕಾಂಗ್ರೆಸ್ನ ನೂತನ ಶಾಸಕ ಪ್ರದೀಶ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ ಇಂದು ನಿಧನರಾಗಿದ್ದಾರೆ. 72 ವರ್ಷ ವಯಸ್ಸಿನ ರತ್ನಮ್ಮ ಪೇರೇಸಂದ್ರ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ರತ್ನಮ್ಮ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇನ್ನು ಮತ್ತೊಂದೆಡೆ ಇಂದು ಸಿಎಂ ಮತ್ತು ಡಿಸಿಎಂ ಸೇರಿದಂತೆ ಕೆಲ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದಾರೆ. ಸದ್ಯ ವಿಷಯ ತಿಳಿಯುತ್ತಿದ್ದಂತೆ ಪ್ರದೀಪ್ ಈಶ್ವರ್ ಪೇರೇಸಂದ್ರದತ್ತ ತೆರಳುತ್ತಿದ್ದಾರೆ. ಪೇರೇಸಂದ್ರ ಗ್ರಾಮಕ್ಕೆ ತೆರಳಿ ತಾಯಿ ರತ್ನಮ್ಮ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,61,610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಕೇಂದ್ರಗಳ ಪರೀಕ್ಷೆಯಲ್ಲಿ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಸಿಇಟಿ ಪರೀಕ್ಷ ಆಯ್ಕೆ ಬೆಳಿಗ್ಗೆ 10.30 ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತ, ನಾಳೆ (ಮೇ.21) ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ. ಮೇ 22 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 11.30 ರಿಂದ 12.30 ರವರೆಗೆ ಪರೀಕ್ಷೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ. ಒಟ್ಟು 2,084 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಬಿಗಿ ಕ್ರಮ 592 ವೀಕ್ಷಕರು, 1,184 ಮಂದಿ ಇರುವ ವಿಶೇಷ ಸ್ಕ್ವಾಡ್, 592 ಕಸ್ಟೋಡಿಯನ್ಸ್ ಸೇರಿದಂತೆ ಒಟ್ಟು 23 ಸಾವಿರಕ್ಕೂ ಹೆಚ್ಚು…
ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಹಿನ್ನಲೆ ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿವೆ. ಇನ್ನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಭಿಮಾನಿಗಳು, ಕಾರ್ಯಕರ್ತರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ ಮಾಜಿ ಸಿಎಂ, ಟಗರು ಸಿದ್ದರಾಮಯ್ಯ ಹಾಗೂ ಟ್ರಬಲ್ ಶೂಟರ್, ಕನಕಪುರ ಬಂಡೆ ಡಿಕೆ ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಡಿಸಿಎಂ ಆಗಿ ಅಧಿಕಾರವನ್ನು ಸ್ವೀಕರಿಸುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳ ವಲಯದಲ್ಲಿ ಉತ್ಸಾಹ ಉತ್ತುಂಗಕ್ಕೇರಿದೆ. ಇನ್ನು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆ 8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಮಧುಗಿರಿ: ಸಗಟು ದರದಲ್ಲಿ ಪೆಟ್ರೋಲ್ ಖರೀದಿಗಾಗಿ ಬಂಕ್ ಗೆ ಬಂದಿದ್ದ ತಾಯಿ ಮಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಬ್ಬರು ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ದೊಡ್ಡಿರಿ ಹೋಬಳಿಯ ಬಡವನಹಳ್ಳಿಯ ಚೆಕ್ ಪೋಸ್ಟ್ ಬಳಿ ಇರುವ ಪೆಟ್ರೋಲ್ ಬಂಕ್ ನಲ್ಲಿ ತಮ್ಮ ಚಿಲ್ಲೆರೆ ಅಂಗಡಿಯಲ್ಲಿ ಪೆಟ್ರೋಲ್ ಮಾರಾಟದ ಸಲುವಾಗಿ ಪೆಟ್ರೋಲ್ ಖರೀದಿಗಾಗಿ ದ್ವಿಚಕ್ರ ವಾಹನದಲ್ಲಿ ಬಂದಿದ್ದರು. ಬುಧುವಾರ ಸಂಜೆ ಸುಮಾರು 4 ರ ಸಮಯದಲ್ಲಿ ಬಡವನಹಳ್ಳಿಯ ಪೆಟ್ರೋಲ್ ಬ್ಯಾಂಕ್ ಬಳಿಗೆ ಬಂದು ಪೆಟ್ರೋಲ್ ನನ್ನು ಕ್ಯಾನ್ ತುಂಬಿಸುವಾಗ ದ್ವಿಚಕ್ರ ವಾಹನದಲ್ಲಿ ಕುಳಿತು ಕೊಂಡಿದ್ದ ಭವ್ಯ(18) ತಾಯಿ ರತ್ನಮ್ಮ(46) ಎನ್ನುವವರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದೆ ಬೆಂಕಿಗೆ ಆಹುತಿಯಾದ ಭವ್ಯ ಮತ್ತು ರತ್ನಮ್ಮ ರವರುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭವ್ಯ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ತಾಯಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು. ಆಸ್ಪತ್ರೆಯಲ್ಲಿ ಚಿಕಿತ್ಸೆ…
ತುರುವೇಕೆರೆ: ಸರ್ಕಾರ ರಾಜ್ಯದ ನೌಕರರನ್ನು ಸತಾಯಿಸದೇ 7ನೇ ವೇತನ ಆಯೋಗವನ್ನು ಶೀಘ್ರವೇ ಜಾರಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯಿಸಿದರು. ಪಟ್ಟಣದಲ್ಲಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘವು ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಗೂ ನೂತನ ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಅಭಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಯಾವುದೇ ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ವಪೂರ್ಣವಾದ ಕೆಲಸವನ್ನು ನೌಕರರು, ಅಧಿಕಾರಿಗಳು ಮಾಡುತ್ತಾರೆ. ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಿದರೆ ಆಯಾ ಸರ್ಕಾರಗಳಿಗೆ ಒಳ್ಳೆಯ ಜನಾಭಿಪ್ರಾಯ ಬರುತ್ತದೆ.ಕ್ಷೇತ್ರದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ಸಬ್ ಇನ್ಸ್ಪೆಕ್ಟರ್ ಈ ಮೂವರು ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದರೆ ಅಲ್ಲಿನ ಶಾಸಕರಿಗೆ ಒಳ್ಳೆಯ ಹೆಸರು ಬರುತ್ತದೆ. ಅಧಿಕಾರಿಗಳು, ನೌಕರರನ್ನು ಬೈಯುವುದರಲ್ಲಿ ಅರ್ಥವಿಲ್ಲ. ಏನೇ ಸಮಸ್ಯೆಗಳಿಲ್ಲದರೂ ನನ್ನ ಬಳಿ ಬನ್ನಿ ಕೂತು ಚರ್ಚಿಸಿ ಎಂದರು. ನಾನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷನಾಗಿದ್ದಾಗ ಇಲ್ಲಿನ ಕಟ್ಟಡಕ್ಕೆ ತಳಪಾಯ ಹಾಕಲಾಗಿತ್ತು.…
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನವೇ 12:30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಭೀತಿ ಶುರುವಾಗಿದೆ. ಮೇ 20ರ ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ಇದ್ದು, ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆಗಳು ಆರಂಭವಾಗಲಿವೆ. ಇದೇ ದಿನ ಮಧ್ಯಾಹ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಬೆಳಗ್ಗೆಯಿಂದಲೇ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ. ನಮ್ಮತುಮಕೂರು.ಕಾಂನ…
ಬೆಂಗಳೂರು: ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ’ ಮಾಜಿ ಸಚಿವ ಡಾ. ಕೆ ಸುಧಾಕರ್ ಆರೋಪಕ್ಕೆ ಎಂಎಲ್ಸಿ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ.ಕೆ.ಸುಧಾಕರ್ ಮಾತನಾಡ್ತಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಗ್ಗಟ್ಟಿನಿಂದ ಸರ್ಕಾರ ಮುನ್ನಡೆಸುತ್ತಾರೆ. ನಾನು ಕೂಡ ಈ ಸರ್ಕಾರಕ್ಕೆ ಸಲಹೆ ನೀಡುತ್ತೇನೆ. ಬಿಜೆಪಿ ಮಾಡಿದ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮೊದಲ ಕ್ಯಾಬಿನೆಟ್‌ನಲ್ಲಿಯೇ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಶನಿವಾರದಿಂದ ಜನರ ಆಡಳಿತ, ಜನರ ಧ್ವನಿ ಸರ್ಕಾರ ರಚನೆ ಆಗುತ್ತಿದೆ. ರಾಜ್ಯದ ಜನತೆಗೆ, ಕಾರ್ಯಕರ್ತರು, ಮುಖಂಡರಿಗೆ, ಬೆಂಬಲ ಕೊಟ್ಟವರಿಗೆ ಇದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದರು. ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಷ್ಟ್ರದ ಅನೇಕ ನಾಯಕರು ಬರುತ್ತಿದ್ದಾರೆ. ಕಾರ್ಯಕರ್ತರು ವಾಹನ ಮಾಡಿಕೊಂಡು ಬರಬೇಕು. ಜೆಡಿಎಸ್, ಬಿಜೆಪಿ ನಾಯಕರೂ ಬರಬೇಕು. ಎಲ್ಲರೂ 11 ಗಂಟೆ ಒಳಗಡೆ ಕಂಠೀರವ ಕ್ರೀಡಾಂಗಣದ ಬಳಿ ಬರಬೇಕಾಗಿ ರಾಜ್ಯದ ಮುಖಂಡರಿಗೆ ಮನವಿ ಮಾಡುತ್ತೇನೆ ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡಿದರು. ನಾನು ಸಿದ್ದರಾಮಯ್ಯ ಹಾಗೂ ಸುರ್ಜೇವಾಲ ಅವರೊಂದಿಗೆ ಕ್ಯಾಬಿನೆಟ್ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಹೋಗುತ್ತಿದ್ದೇವೆ. ಕಾಂಗ್ರೆಸ್ ಕೊಟ್ಟ ಗ್ಯಾರಂಟಿಯನ್ನು ಜಾರಿ ಮಾಡುವ ಮೂಲಕ ನಾವು ಮಾತು ಈಡೇರಿಸುತ್ತೇವೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯನವರು ಗ್ಯಾರಂಟಿಗಳನ್ನು ಕೊಟ್ಟಿದ್ದಾರೆ. ಮನೆಯೊಡತಿಗೆ ಹಣ ನೀಡುವ…
ನವದೆಹಲಿ: ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೇ 28ರಂದು ಉದ್ಘಾಟಿಸಲಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ. ಪ್ರಸ್ತುತ ಲೋಕಸಭೆಯ ಕಟ್ಟಡ ಸುಮಾರು 543 ಸದಸ್ಯರಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಿದರೆ ರಾಜ್ಯಸಭಾ ಕಟ್ಟಡದಲ್ಲಿ 250 ಸದಸ್ಯರು ಕುಳಿತುಕೊಳ್ಳಬಹುದು. ಇದೇ ತಿಂಗಳಿನಲ್ಲಿ ಲೋಕಾರ್ಪಣೆಗೊಳ್ಳಲಿರುವ ಸಂಸತ್ ಭವನದಲ್ಲಿ 888 ಸದಸ್ಯರು ಕುಳಿತುಕೊಳ್ಳಬಹುದಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನ ನೀಡಿದ್ದಾರೆ. ಪ್ರಸ್ತುತ ಸಂಸತ್ತಿನ ಕಟ್ಟಡ 1927ರಲ್ಲಿ ನಿರ್ಮಿಸಲಾಗಿದ್ದು, ಸುಮಾರು 100 ವರ್ಷಗಳಷ್ಟು ಹಳೆಯದಾಗಿದೆ. ಉಭಯ ಸದನಗಳಲ್ಲಿ ಸಂಸದರಿಗೆ ಕುಳಿತುಕೊಳ್ಳಲು ಅನುಕೂಲಕರವಾದ ವ್ಯವಸ್ಥೆಯೂ ಇಲ್ಲದಿರುವ ಕಾರಣ ಇದೀಗ ಪ್ರಸ್ತುತ ಅಗತ್ಯತೆಗಳ ಪ್ರಕಾರ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy