Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ಹೊಸದಿಲ್ಲಿ: ಕಳೆದ ತಿಂಗಳು ದಿಲ್ಲಿ ಮೆಟ್ರೋ ರೈಲಿನಲ್ಲಿ ಸಾರ್ವಜನಿಕರ ಎದುರೇ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿಯ ಚಿತ್ರವನ್ನು ದಿಲ್ಲಿ ಪೊಲೀಸರು ಬುಧವಾರ ಬಿಡುಗಡೆಗೊಳಿಸಿದ್ದಾರೆ. ಈತನ ಬಗ್ಗೆ ಯಾವುದೇ ಮಾಹಿತಿ ಇದ್ದರೂ ನಾಗರಿಕರು ಹಂಚಿ ಕೊಳ್ಳುವಂತೆ ಪೊಲೀಸರು ಮನವಿ ಮಾಡಿದ್ದಾರೆ. ದಿಲ್ಲಿ ಮೆಟ್ರೋ ರೈಲಿನಲ್ಲಿ ಅಶ್ಲೀಲ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿಯು ಪೊಲೀಸರಿಗೆ ಬೇಕಾಗಿದ್ದಾನೆ. ಈತನ ಬಗ್ಗೆ ಮಾಹಿತಿ ತಿಳಿದರೆ ಪೊಲೀಸ್ ಕಂಟ್ರೋಲ್ ರೂಮ್ 1511 ಅಥವಾ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ. ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುವುದು ಎಂದು ದಿಲ್ಲಿ ಡಿಸಿಪಿ ಮೆಟ್ರೋ ಟ್ವೀಟ್ ಮಾಡಿದ್ದಾರೆ. ದಿಲ್ಲಿ ಮೆಟ್ರೋದಲ್ಲಿ ತನ್ನ ಮೊಬೈಲ್ ನೋಡುತ್ತಾ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಇದನ್ನು ಕಂಡು ಕಸಿವಿಸಿಗೊಂಡ ಸಹ ಪ್ರಯಾಣಿಕರು ಅವನಿಂದ ದೂರ ಸರಿದಿದ್ದಾರೆ. ಮತ್ತೂಬ್ಬ ಪ್ರಯಾಣಿಕ ಆತನ ಅಶ್ಲೀಲ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಟ್ರ್ಯಾಕ್ಟರ್ ಟ್ರಾಲಿಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರ ಪ್ರಯಾಣಿಕರು ಮೃತಪಟ್ಟು 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಆಹಮದಾಬಾದ್ ತೆರಳುತ್ತಿದ್ದ ಬಸ್ ಶಾರ್ಜಾಪುರ ಬಳಿ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತು ಚಿಕಿತ್ಸಾ ದಳದವರು ನೆರವು ನೀಡಿ, ಗಾಯಾಳುಗಳನ್ನು ಸ್ಥಳಾಂತರಿಸಿ, ಚಿಕಿತ್ಸೆಗಾಗಿ ಉಜ್ಜಯಿನಿಯ ಸಮೀಪದ ಆಸ್ಪತ್ರೆಗೆ ಸಾಗಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಾಗ್ಪುರ: ಪೆಟ್ರೋಲ್ ಬಂಕ್ ಮಾಲೀಕನನ್ನು ಚೂರಿ ಇರಿದು ಕೊಂದು ಹಣ ದೋಚಿ ಪರಾರಿಯಾದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಬುಧವಾರ ನಡೆದಿದ್ದು, ಸುಮಾರು ಮೂವರಿದ್ದ ತಂಡ ಈ ದುಷ್ಕೃತ್ಯ ಎಸಗಿದೆ. ಘಟನೆ ನಡೆದ ಕೇವಲ 30 ನಿಮಿಷಗಳಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೆಟ್ರೋಲ್ ಬಂಕ್ ಮಾಲೀಕ ಮತ್ತು ಸಿಬ್ಬಂದಿಯೋರ್ವ ಸಂಗ್ರಹವಾದ ಹಣ ಎಣಿಕೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಮೂವರು ದರೋಡೆಕೋರರು ಚಾಕುವಿನಿಂದ ಪೆಟ್ರೋಲ್ ಬಂಕ್ ಮಾಲೀಕ ಮತ್ತು ಸಿಬ್ಬಂದಿಗೆ ಇರಿದಿದ್ದಾರೆ. ಆರೋಪಿಗಳು ಮಾಲೀಕರಿಗೆ ಸುಮಾರು 15 ಬಾರಿ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಸಿಬ್ಬಂದಿಗೂ ಗಾಯವಾಗಿದೆ. ಪೆಟ್ರೋಲ್ ಬಂಕ್ ನಲ್ಲಿದ್ದ ಸುಮಾರು 1.34 ಲಕ್ಷ ರೂಪಾಯಿಯೊಂದಿಗೆ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ತಿಳಿದು ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಬೆನ್ನಟ್ಟಿ ಉಮ್ರೇಡ್ ಎಂಬಲ್ಲಿ ಸೆರೆ ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಚಂಡೀಗಢ: ಹರ್ಯಾಣದ ಅಂಬಾಲದಲ್ಲಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಹಾಗೂ ಕೇಂದ್ರದ ಮಾಜಿ ಸಚಿವ ರತನ್ ಲಾಲ್ ಕಟಾರಿಯಾ ಅವರು ಗುರುವಾರ ಇಲ್ಲಿನ ಪಿಜಿಐ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 72 ವರ್ಷ ವಯಸ್ಸಿನ ಕಟಾರಿಯಾ ಅವರು, ಅರ್ಧ ಶತಮಾನಕ್ಕೂ ಹೆಚ್ಚು ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಜಲಶಕ್ತಿ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿದ್ದ ಕಟಾರಿಯಾ ಅವರು ಎರಡು ವರ್ಷಗಳ ಕಾಲ ಸೇವೆಯ ಬಳಿಕ 2021ರ ಜುಲೈನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ನಿಧನಕ್ಕೆ ಸಿಎಂ ಮನೋಹರ್ ಲಾಲ್ ಸಂತಾಪ ಸೂಚಿಸಿದ್ದು, ಕೇಂದ್ರದ ಮಾಜಿ ರಾಜ್ಯ ಸಚಿವ ಮತ್ತು ಅಂಬಾಲಾದ ಸಂಸದ ರತನ್ ಲಾಲ್ ಕಟಾರಿಯಾ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರು ಸಮಾಜದ ಕಲ್ಯಾಣ ಮತ್ತು ಹರಿಯಾಣದ ಜನರ ಪ್ರಗತಿಗಾಗಿ ಸಂಸತ್ತಿನಲ್ಲಿ ಯಾವಾಗಲೂ…
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ ಅಂತಿಮವಾಗಿದ್ದು ಇದೀಗ ಸಂಪುಟ ರಚನೆ ಕಸರತ್ತು ಆರಂಭವಾಗಿದೆ.ಈವರೆಗೆ ರಾಜ್ಯದ ಸಿಎಂ ಅಭ್ಯರ್ಥಿಗಳ ಮನವೊಲಿಸಲು ಹೈಕಮಾಂಡ್ ನಾನಾ ಕಸರತ್ತುಗಳನ್ನು ಮಾಡಿತು. ಇದೀಗ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ ಆರಂಭಿಸಲು ಮುಂದಾಗಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಸಂಪುಟ ರಚನೆ ಮುಂದಿರುವ ಹೊಸ ಸವಾಲಾಗಿದೆ. ಸಿದ್ದರಾಮಯ್ಯ ಬಣದಿಂದ 3 ಡಿಸಿಎಂ ಹುದ್ದೆ ಸೃಷ್ಟಿಸುವ ಒತ್ತಡ ಕೇಳಿ ಬಂದಿತ್ತು. ಆದರೆ ಡಿಕೆ ಶಿವಕುಮಾರ್ ಇದನ್ನ ಒಪ್ಪದ ಹಿನ್ನೆಲೆ ಅವರನ್ನು ಹೊರತುಪಡಿಸಿ ಬೇರೆ ಯಾರು ಡಿಸಿಎಂ ಇರುವುದಿಲ್ಲ ಎಂಬ ಮಾಹಿತಿ ಇದೆ. ಮೊದಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸಿಎಂ ಹಾಗೂ ಡಿಸಿಎಂಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದು ಒಂದೆರಡು ದಿನಗಳ ಬಳಿಕ ಸಚಿವರ ಆಯ್ಕೆ ಆಗಲಿದೆ ಎನ್ನಲಾಗುತ್ತಿದೆ. 25 ರಿಂದ 30 ಸಚಿವರಿಗೆ ಅವಕಾಶ 4 ರಿಂದ 5 ಸ್ಥಾನ ಖಾಲಿ ಬಿಟ್ಟುಕೊಳ್ಳಲು ನಿರ್ಧಾರ ಮಾಡಲಾಗಿದೆ. ಹೈಕಮಾಂಡ್ ನಿಂದ ತಮ್ಮದೇ ಆದ ಸೂತ್ರದಲ್ಲಿ ಸಂಪುಟ ಸಿದ್ದವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸಲಾಗಿದ್ದು, ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರ ಸ್ಥಾನಕ್ಕೆ ಅರ್ಜುನ್ ರಾಮ್ ಮೇಘವಾಲ್ ರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ನ ಕೊಲಿಜಿಯಂ ವಿರುದ್ಧ ಸಾಲು ಸಾಲಾಗಿ ಟೀಕೆ ಮಾಡುತ್ತಿದ್ದ ಕಾನೂನು ಸಚಿವ ಕಿರಣ್ ರಿಜಿಜು ಅವರ ಖಾತೆಯನ್ನು ಬದಲಿಸಲಾಗಿದೆ. ಅವರಿಗೀಗ ಭೂ ವಿಜ್ಞಾನ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವರಾಗಿದ್ದ ಅರ್ಜುನ್ ರಾಮ್ ಮೇಘ ವಾಲ್ ಅವರಿಗೆ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವರಾಗಿ ಬಡ್ತಿ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಂಗ್ರೆಸ್ ಹೈಕಮಾಂಡ್ ಗೆ ಜಟಿಲವಾಗಿ ಪರಿಣಮಿಸಿದ್ದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬೀಡುಬಿಟ್ಟಿದ್ದ ರಾಜ್ಯ ಕಾಂಗ್ರೆಸ್ ಮುಖಂಡರುಗಳು ಇಂದು ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೈಕಮಾಂಡ್ ಸೂಚನೆಯ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಸಭೆಗೆ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗು ಸಂಸದರುಗಳು ಆಗಮಿಸಬೇಕೆಂದು ಡಿಕೆಶಿ ಸೂಚಿಸಿದ್ದಾರೆ. ಸಾಕಷ್ಟು ಪರ – ವಿರೋಧ ಚರ್ಚೆಗಳು, ಬರಲಿರುವ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನೇಮಕಾತಿಗೆ ಹೈಕಮಾಂಡ್ ಒಪ್ಪಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದ ಹೈಕಮಾಂಡ್ ಕೊನೆಗೂ ಮನವೊಲಿಸಿ ಮುಖ್ಯಮಂತ್ರಿ ನೇಮಕದ ಬೇಡಿಕೆಯೊಂದನ್ನು ಹೊರತುಪಡಿಸಿ ಉಳಿದ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಕರ್ನಾಟಕ ಸಿಎಂ ಹುದ್ದೆ ವಿಚಾರವಾಗಿ ಕಳೆದ 5 ದಿನಗಳ ವರೆಗೆ ದೆಹಲಿಯಲ್ಲಿ ನಡೆದ ಸುದೀರ್ಘ ಮಾತುಕತೆಯ ಬಳಿಕ ಇದೀಗ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಂತಿಮ ನಿರ್ಧಾರ ಕೈಗೊಂಡಿದೆ. ಕಳೆದ ರಾತ್ರಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಡೆದ ಸಭೆಯಲ್ಲಿ ಒಮ್ಮತಕ್ಕೆ ಬಂದು ಸಿದ್ದರಾಮಯ್ಯನವರನ್ನು ಮುಂದಿನ ಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಸೋನಿಯಾ ಗಾಂಧಿಯ ಮಧ್ಯಸ್ಥಿಕೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಹೇಳಲಾಗಿದೆ. ಕಂಠೀರವ ಸ್ಟೇಡಿಯಂ ಬಳಿ ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್‌ಗಳು ಈಗಾಗಲೇ ರಾರಾಜಿಸುತ್ತಿವೆ. 2ನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿರುವ ಸಿದ್ದರಾಮಯ್ಯಗೆ ಶುಭಾಶಯಗಳು ಎಂದು ಫ್ಲೆಕ್ಸ್ ಗಳಲ್ಲಿ ಬರೆಯಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ನಾನು ಗ್ರಾಮ ಪಂಚಾಯಿತಿ ಸದಸ್ಯನಾಗಿ, ಶಾಸಕನಾಗುವ ಮಟ್ಟಕ್ಕೆ ಬೆಳೆದು ಬಂದವನು. ಎಲ್ಲಾ ರೀತಿಯ ಅಡೆತಡೆಗಳನ್ನು ದಾಟಿ ಬೆಳೆದು ಬಂದಿದ್ದೇನೆ, ಚುನಾವಣಾ ಕಣದಲ್ಲಿ ಹಲವು ಗೆಲುವು ಸೋಲುಗಳನ್ನು ಕಂಡಿದ್ದೇನೆ. ಆದರೆ ನನಗೆ ಈ ಚುನಾವಣೆಯಲ್ಲಿ ಅವರು ಮಾಡಿದ ಕುತಂತ್ರದಿಂದ ನನ್ನ ಸೋಲಾಯಿತು ಎಂದು ನಿಕಟಪೂರ್ವ ಶಾಸಕ ಮಸಾಲಾ ಜಯರಾಮ್ ಅಭಿಪ್ರಾಯಪಟ್ಟರು. ತೋಟದಮನೆಯಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಅವರ ಮೋಸದ ಆಟಕ್ಕೆ ಕುತಂತ್ರಕ್ಕೆ ಇವತ್ತು ಈ ತಾಲೂಕಿನ ಜನ ಬಲಿಯಾಗಿದ್ದಾರೆ. ಅವರು ಮಾಡಿದ ಮೋಸ ಒಂದಾ ಎರಡಾ? ನಾನು ಈ ದಿನ ಚುನಾವಣೆಯಲ್ಲಿ ಸೋತಿರಬಹುದು ಆದರೆ ನಾನು ಗೆದ್ದಿದ್ದೇನೆ. ನಿಮ್ಮ ಶ್ರಮ ನಿಮ್ಮ ಶಕ್ತಿ ನೀವು ಮಾಡಿದಂತಹ ಕೆಲಸ ಕಾರ್ಯ ಬೇರೆ ಪಕ್ಷದ ಬಂಧ ಕಾರ್ಯಕರ್ತರು ಸಹ ಒಟ್ಟಾಗಿ ಶ್ರಮಪಟ್ಟು ಕೆಲಸ ಮಾಡಿದ್ದೀರಾ ನಾನು ಸೋತಿಲ್ಲ ಇಲ್ಲಿ ಗೆದ್ದಿದ್ದೇನೆ ಎಂದರು. ನಾನು ಸೋತಿದ್ದರೆ ಕೇವಲ ಬರಿ 25,000 ಮತಗಳಿಗೆ ಸೀಮಿತವಾಗಬೇಕಾಗಿತ್ತು, ಆದರೆ 58000 ,ಮತಗಳನ್ನು ಪಡೆದಿದ್ದೇನೆ.…
ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್ ಯು ಅಭಿ’ ಎಂಬ ಕನ್ನಡ ವೆಬ್ ಸಿರೀಸ್ ಮೇ 19ರಂದು ‘JioCinema’ದಲ್ಲಿ ನೇರವಾಗಿ ಬಿಡುಗಡೆಗೊಳ್ಳುತ್ತಿದೆ. ಇದನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ! ಕಾಳಿ ವೇಲಾಯುಧಂ ನಿರ್ಮಾಣ ಮಾಡಿ ನಿರ್ದೇಶಿಸಿರುವ ‘JIOCINEMA’ ಒರಿಜಿನಲ್ ವೆಬ್ ಸಿರೀಸ್‌ನಲ್ಲಿ ಅದಿತಿ ಪ್ರಭುದೇವ, ವಿಕ್ರಮ್ ರವಿಚಂದ್ರನ್ ಮತ್ತು ರವಿಶಂಕರ್ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಹಿರಿಯ ನಟ ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ಅವರಿಗೂ ಇದು ಮೊದಲ ವೆಬ್ ಸಿರೀಸ್. ತಮ್ಮ ಪಾತ್ರದ ಕುರಿತು ತುಂಬ ಉತ್ಸಾಹದಿಂದ ವಿವರಿಸುತ್ತಾರೆ ವಿಕ್ರಮ್. ‘ಶಿವ ನಿಮ್ಮನ್ನು ಕಾಡುತ್ತಾನೆ, ನಿಮ್ಮ ಮನಸ್ಸನ್ನು ಚುಚ್ಚುತ್ತಾನೆ. ಯಾಕೆಂದರೆ ಈ ಶಿವ ಎಲ್ಲರೊಳಗೂ ಇದ್ದಾನೆ. ಹಲವು ನಿಗೂಢಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಅದನ್ನು ಯಾರೊಂದಿಗೂ ಹಂಚಿಕೊಳ್ಳದ ವ್ಯಕ್ತಿ ಆತ. ಒಂದೊಮ್ಮೆ ಅವನು ಹಂಚಿಕೊಳ್ಳಲು ಯತ್ನಿಸಿದರೂ ಪರಿಸ್ಥಿತಿ ಅದಕ್ಕೆ ವಿರುದ್ಧವಾದ ಸನ್ನಿವೇಶವನ್ನು ಸೃಷ್ಟಿಸಿಬಿಡುತ್ತದೆ. ‘ಪ್ರೇಮ ಮತ್ತು ಯುದ್ಧದಲ್ಲಿ ಎಲ್ಲವೂ…