Subscribe to Updates
Get the latest creative news from FooBar about art, design and business.
- ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
- ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
- ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
- ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
- ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
- ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
- ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
- ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
Author: admin
ಈ ಬಾರಿಯ ಚುನಾವಣೆ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಎಂದು ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಬಿಜೆಪಿ ನಾಯಕ ಸಿ.ಟಿ.ರವಿ ನಿರಾಸೆ ಹೊರ ಹಾಕಿದ್ರು. ನಾವು ಸೈದ್ಧಾಂತಿಕ ಹೋರಾಟ ಮುಂದುವರಿಸುತ್ತೇವೆ. ಜೆಡಿಎಸ್ನವರು ಕಾಂಗ್ರೆಸ್ ಪಕ್ಷಕ್ಕೆ ಸಪೋರ್ಟ್ ಮಾಡಿದ್ದಾರೆ. ಕಾಂಗ್ರೆಸ್ ಒಳ್ಳೆಯ ಆಡಳಿತ ಕೊಡಲಿ ಎಂಬುದು ನಮ್ಮ ಅಪೇಕ್ಷೆ. 200 ಯೂನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ 2 ಸಾವಿರ ಹಣ, 10 ಕೆಜಿ ಅಕ್ಕಿ ಕೊಡೋದು ಒಳ್ಳೆಯದಲ್ವಾ. ಈಗಲೇ ಪ್ರತಿಕ್ರಿಯೆ ನೀಡುವುದು ಬೇಡ, ಕಾದು ನೋಡೋಣ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾವಗಡ: 2023ನೇ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಎಪ್ಪತ್ತು ಸಾವಿರ ಮತ ಪಡೆದು ಸೋತ ಹಿನ್ನೆಲೆಯಲ್ಲಿ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಎಮ್.ತಿಮ್ಮರಾಯಪ್ಪ, ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ನನಗೆ ಇಷ್ಟರ ಮಟ್ಟಿಗೆ ಮತದಾನ ಮಾಡಿದಂತಹ ಎಲ್ಲಾ ನನ್ನ ತಾಲೂಕಿನ ಮತದಾರರಿಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತಿದ್ದೇನೆ ಎಂದರು. ಜನರ ತೀರ್ಪನ್ನು ಸ್ವಾಗತಿಸುತ್ತೇನೆ. ಈ ಬಾರಿ ಕ್ಷೇತ್ರದ ಕಾರ್ಯಕರ್ತರು ನಾಯಕರು ನಮ್ಮ ಪಕ್ಷದ ಪ್ರಣಾಳಿಕೆಯನ್ನು ನಂಬಿ ಶಿಸ್ತಿನ ಸಿಪಾಯಿ ಗಳಂತೆ ಕಾರ್ಯನಿರ್ವಹಿಸಿದ್ದಾರೆ. ಕೆಲವೊಂದು ಸಣ್ಣಪುಟ್ಟ ಅಂತರದಲ್ಲಿ ಸೋತಿರುತ್ತೇವೆ. ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ಎದೆಗುಂದದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಲೋಕಸಭೆ ಚುನಾವಣೆಯಲ್ಲಿ ಧೈರ್ಯದಿಂದ ಪಕ್ಷದ ಪರವಾಗಿ ಕಾರ್ಯ ನಿರ್ವಹಿಸಬೇಕು. ನಿಮ್ಮ ಬೆಂಬಲಕ್ಕೆ ಪಕ್ಷ ಸದಾ ನಿಂತಿರುತ್ತದೆ ತಾಲೂಕಿನ ಜನತೆಯ ಅಭಿವೃದ್ಧಿಗಾಗಿ ಶಾಸಕರು ಮಾಡುವ ಕೆಲಸಕ್ಕೆ ನ್ಯಾಯಯುತವಾಗಿ ನಮ್ಮ ಬೆಂಬಲ ಸದಾ ಇರುತ್ತದೆ ಎಂದರು. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬಜರಂಗದಳವನ್ನು ಪಿಎಫ್ ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ. ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಚಂಡೀಗಡ ಘಟಕವು 100 ಕೋಟಿ ರೂಪಾಯಿ ಮಾನಹಾನಿ ಪರಿಹಾರ ಕೋರಿ ನೋಟಿಸ್ ಜಾರಿ ಮಾಡಿತ್ತು. ತನ್ನ ಯುವ ಘಟಕವಾದ ಬಜರಂಗದಳಕ್ಕೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ‘ವಿಎಚ್ಪಿ’ ಆರೋಪಿಸಿದೆ. ವಿಶ್ವ ಹಿಂದೂ ಪರಿಷತ್ನ ಚಂಡೀಗಡ ಘಟಕ ಮತ್ತು ಅದರ ಯುವ ಘಟಕ ಬಜರಂಗ ದಳ ಮೇ 4ರಂದು ನೋಟಿಸ್ ಜಾರಿ ಮಾಡಿದ್ದು, 14 ದಿನಗಳ ಒಳಗೆ 100.10 ಕೋಟಿ ರೂ ಪರಿಹಾರ ನೀಡುವಂತೆ ಒತ್ತಾಯಿಸಿತ್ತು. ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ದ್ವೇಷ ಹರಡುತ್ತಿರುವ ಆರೋಪ ಎದುರಿಸುತ್ತಿರುವ ಬಜರಂಗದಳ, ಪಿಎಫ್ಐ ಮುಂತಾದ ಸಂಘಟನೆಗಳನ್ನು ನಿಷೇಧಿಸುವುದಾಗಿ…
ಬಜರಂಗದಳವನ್ನು ನಿಷೇಧಿಸಿದರೆ ಗೊತ್ತಾಗುತ್ತದೆ ಎಂದು ಕರ್ನಾಟಕದ ಬಿಜೆಪಿ ನಾಯಕ ಎಚ್ಚರಿಕೆ ನೀಡಿದ್ದಾರೆ. ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿದ್ದ ಸಿಎನ್ ಅಶ್ವಥ್ ನಾರಾಯಣನ್ ಎಚ್ಚರಿಕೆ ನೀಡಿದ್ದಾರೆ. ಎನ್‌ಡಿ ಟಿವಿಗೆ ನೀಡಿದ ಸಂದರ್ಶನದಲ್ಲಿ ಅವರ ಪ್ರತಿಕ್ರಿಯಿಸಿದ್ದಾರೆ. ಚುನಾವಣಾ ಫಲಿತಾಂಶ ನಮ್ಮನ್ನು ಬೆಚ್ಚಿ ಬೀಳಿಸಿದೆ. ನಾವು ಸಾಕಷ್ಟು ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ.. ಭಜರಂಗ ದಳವನ್ನು ನಿಷೇಧಿಸುವುದಾಗಿ ಹೇಳಿದ್ದಾರೆ ಕಾಂಗ್ರೆಸ್‌ಗೆ ಎಷ್ಟು ಧೈರ್ಯವಿದೆ ಎಂದು ಅವರು ಪ್ರಶ್ನಿಸಿದರು. ಅವರು ಅದನ್ನು ನಿಷೇಧಿಸಲಿ. ನಾವು ಏನು ಮಾಡಬಲ್ಲೆವು ಎಂಬುದನ್ನು ತೋರಿಸಬಹುದು ಎಂದು ಅಶ್ವಥ್ ನಾರಾಯಣನ್ ಸೇರಿಸಿದರು. ಸಂವಹನದ ಕೊರತೆಯೇ ವೈಫಲ್ಯಕ್ಕೆ ಕಾರಣ ಎಂದು ವಿವರಿಸಿದರು. ಸರಕಾರದ ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ ಎಂದರು. ಬಿಜೆಪಿಯ ಹೀನಾಯ ಸೋಲಿನ ನಡುವೆಯೂ ಅಶ್ವಥ್ ಅವರು ಮಲ್ಲೇಶ್ವರಂ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹಲಸು, ತೆಂಗಿನಕಾಯಿ ಮತ್ತು ಚಾಕಿರಿಗಳ ಬೆಲೆಯನ್ನು ಕೇಳಿ ನಾವು ಆಘಾತಕ್ಕೊಳಗಾಗಿದ್ದೇವೆ. ಇಂತಹ ಅನೇಕ ಘಟನೆಗಳು ಸುದ್ದಿಯಲ್ಲಿ ವರದಿಯಾಗಿವೆ. ಇಂತಹ ಸುದ್ದಿ ಮತ್ತೆ ಚರ್ಚೆಯಾಗುತ್ತಿದೆ. ಅಮೆರಿಕದ ಇ-ಕಾಮರ್ಸ್ ಕಂಪನಿ Etsy ನಲ್ಲಿ ಪಟ್ಟಿ ಮಾಡಲಾದ ನಿರ್ದಿಷ್ಟ ಐಟಂ ಭಾರತೀಯರ ಗಮನ ಸೆಳೆದಿದೆ. ಸ್ಟಾರ್ ಭಾರತದ ಮನೆಗಳಲ್ಲಿ ಸರ್ವತ್ರ ಸೋಫಾ ಆಗಿದೆ. ಹಳ್ಳಿಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಈ ಉತ್ಪನ್ನವು ₹ 5,000 ರಿಂದ ₹ 10,000 ವರೆಗಿನ ಬೆಲೆಯಲ್ಲಿ ಲಭ್ಯವಿದೆ. ಆದರೆ ಭಾರತದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ಈ ಉತ್ಪನ್ನವನ್ನು ಶಾಪಿಂಗ್ ಪೋರ್ಟಲ್‌ನಲ್ಲಿ ರೂ 112,168 ಗೆ ಪಟ್ಟಿ ಮಾಡಲಾಗಿದೆ. “ಅತ್ಯಂತ ಸುಂದರವಾದ ಸಾಂಪ್ರದಾಯಿಕ ಭಾರತೀಯ ಹಾಸಿಗೆ” ಎಂದು ವಿವರಿಸಲಾಗಿದೆ, ಉತ್ಪನ್ನದ ವಿವರಣೆಯ ಪ್ರಕಾರ, ಕೈಯಿಂದ ಮಾಡಿದ ಚಾರ್ಪೈ ಅನ್ನು ಮರ ಮತ್ತು ಸೆಣಬಿನ ಹಗ್ಗಗಳಂತಹ ವಸ್ತುಗಳಿಂದ ತಯಾರಿಸಲಾಗುತ್ತದೆ. ಈ ಐಟಂ ಅನ್ನು ಭಾರತ ಮೂಲದ ಸಣ್ಣ ವ್ಯಾಪಾರ ಉದ್ಯಮದಿಂದ ತಯಾರಿಸಲಾಗಿದೆ ಮತ್ತು ರವಾನಿಸಲಾಗಿದೆ. ವಿವರಣೆಯು ಚಾರ್ಪಾಯಿಯ ಗಾತ್ರದ ಬಗ್ಗೆ ವಿವರಗಳನ್ನು…
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ದಯನೀಯ ಸೋಲಿನ ಕುರಿತು ರಾಷ್ಟ್ರೀಯ ನಾಯಕರು ವರದಿ ಕೇಳಿದ್ದರು. ಈಗ ಇರುವ ಮಾಹಿತಿಯನ್ನು ಕಳುಹಿಸಿ ಕೊಡಲಾಗಿದೆ. ಸದ್ಯದಲ್ಲೇ ಸೋಲಿನ ಕುರಿತು ಆತ್ಮಾವಲೋಕನ ಸಭೆ ನಡೆಸಿ ತಪ್ಪು ತಿದ್ದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸೋಲು, ಗೆಲುವಿನ ಬಗ್ಗೆ ಪರಾಮರ್ಶೆ ಸಭೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಕಳಪೆ ಸಾಧನೆ ಮಾಡಿದ ಕುರಿತು ಪ್ರಾಥಮಿಕ ಮಾಹಿತಿಗಳ ಆಧಾರದಲ್ಲಿ ಚರ್ಚಿಸಲಾಯಿತು. 66 ಸ್ಥಾನ ಮಾತ್ರ ಬಿಜೆಪಿ ಗೆದ್ದಿದ್ದು, ಇಡೀ ರಾಜಕೀಯ ಬೆಳವಣಿಗೆ ಬಗ್ಗೆ ಆತ್ಮಾವಲೋಕನ ಮಾಡುವ ಕುರಿತು ಸಮಾಲೋಚನೆ ನಡೆದಿದೆ. ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, 2013ರಲ್ಲಿ 40 ಸೀಟ್ ಬಂದಿತ್ತು. ಈಗ ಅದಕ್ಕಿಂತ ಹೆಚ್ಚು ಸೀಟ್ ಗೆದ್ದಿದ್ದೇವೆ. ಸೋಲನ್ನು ಅತ್ಯಂತ ವಿನಯವಾಗಿ ಸ್ವೀಕರಿಸಿದ್ದೇವೆ ಎಂದು ಹೇಳಿದರು. ಕ್ಷೇತ್ರಗಳಲ್ಲಿನ ಆಡಳಿತ…
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಕಾಂಗ್ರೆಸ್ ಚಿಂತನೆ ನಡೆಸಬಹುದು ಎಂದು ವರದಿಯಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಬಿಜೆಪಿ ಹೇರಿರುವ ಹಿಜಾಬ್ ನಿಷೇಧವನ್ನು ಹಿಂಪಡೆಯಲಾಗುವುದು ಎಂದು ನಿಯೋಜಿತ ಶಾಸಕಿ ಕನೀಸ್ ಫಾತಿಮಾ ಹೇಳಿದ್ದಾರೆ. ಕಾಂಗ್ರೆಸ್‌ನ ಏಕೈಕ ಮುಸ್ಲಿಂ ಮಹಿಳಾ ಶಾಸಕಿ ಕನಿಸಾ ಗೆಲುವು ಸಾಧಿಸಿದ ನಂತರ ಇದನ್ನು ಹೇಳಲಾಗಿದೆ. ರಾಷ್ಟ್ರೀಯ ಮಾಧ್ಯಮ ದಿ ಸ್ಕ್ರಾಲ್‌ಗೆ ಪ್ರತಿಕ್ರಿಯೆ.ಬಿಜೆಪಿಯ ಚಂದ್ರಕಾಂತ್ ಬಿ. ಪಾಟೀಲ ಅವರು ಉತ್ತರ ಗುಲ್ಬರ್ಗದಲ್ಲಿ 2,712 ಮತಗಳಿಂದ ಪರಾಭವಗೊಂಡಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಏಕೈಕ ಮುಸ್ಲಿಂ ಮಹಿಳಾ ಅಭ್ಯರ್ಥಿ ಕನೀಸ್ ಫಾತಿಮಾ. ಶೀಘ್ರದಲ್ಲೇ ನಾವು ಹಿಜಾಬ್ ನಿಷೇಧವನ್ನು ತೆಗೆದುಹಾಕುತ್ತೇವೆ. ಹಿಜಾಬ್‌ಗಾಗಿ ಹೊರಹಾಕಲ್ಪಟ್ಟ ವಿದ್ಯಾರ್ಥಿಗಳನ್ನು ಮತ್ತೆ ತರಗತಿಗಳಿಗೆ ಕರೆತರಲಾಗುತ್ತದೆ. ಅವರು ಈಗ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಎರಡು ಅಮೂಲ್ಯ ವರ್ಷಗಳನ್ನು ಕಳೆದುಕೊಂಡಿದ್ದಾರೆ” – ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಿ ಗೆದ್ದ ನಂತರ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕನೀಸ್ ಫಾತಿಮಾ ಪ್ರತಿಕ್ರಿಯೆಯಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು: ನಾವು ಗೆಲ್ಲಲಿಕ್ಕೆ ಬಂದವರು, ನಮಗೆ ಸೋಲು ಕ್ಷಣಿಕ, ಮುನ್ನಡೆ ಸತತ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಈ ವ್ಯಾಖ್ಯಾನ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಚುನಾವಣೆಯಲ್ಲಿ ಸೋಲಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಂತೋಷ್, ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ, ಉತ್ತರಿಸುತ್ತೇವೆ ಎಂದರು. ಟೀಕೆಗಳಿಗೆ, ಕುಹಕಗಳಿಗೆ, ಒಡಕು ಮಾತುಗಳಿಗೆ ನಮ್ಮ ಗತಿಶೀಲತೆಯಿಂದ, ನಾವು ಇರಲಿಕ್ಕೇ ಬಂದವರು, ಗೆಲ್ಲಲಿಕ್ಕೇ ಬಂದವರು, ನಮಗೆ ಸೋಲು ಕ್ಷಣಿಕ, ಮುನ್ನಡೆ ಸತತ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಮುಂದಿನ ಚುನಾವಣೆಗಳಲ್ಲಿ ಗೆಲ್ಲುವ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿ ಸೋಲನ್ನು ಟೀಕಿಸುವವರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೇ, 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‌ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಪುತ್ತೂರು ಮತ್ತು ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಪುತ್ತೂರಿನ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿ ಸದಾನಂದ ಗೌಡ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಲಾಗುತ್ತಿದೆ. ‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಅಂತ ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆಯಲ್ಲಿ ಸಿದ್ದರಾಮಯ್ಯನವರ ಕೈ ಮೇಲಾಗಿದೆ ಎಂದು ಸೂಚಿಸಲಾಗಿದೆ. ಕೇಂದ್ರ ವೀಕ್ಷಕರು ಸಿದ್ದರಾಮಯ್ಯ ಅವರಿಗೆ ಬಹುತೇಕ ಶಾಸಕರ ಬೆಂಬಲವಿದೆ ಎಂದು ಅಂದಾಜಿಸಿದ್ದಾರೆ. ಇನ್ನು ಹೆಚ್ಚಿನ ಚರ್ಚೆಗಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು. ಇವರಿಬ್ಬರ ಬೆಂಬಲಿಗರು ಸಭೆ ನಡೆದ ಬೆಂಗಳೂರಿನ ಖಾಸಗಿ ಹೋಟೆಲ್ ಮುಂದೆ ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಮಲಿಕಾರ್ಜುನ್ ಖರ್ಗೆ ಮತ್ತು ಸೋನಿಯಾ ಗಾಂಧಿ ಈ ವಿಚಾರವಾಗಿ ಚರ್ಚೆ ನಡೆಸಿದರು. ಖರ್ಗೆ, ಸೋನಿಯಾ ಅವರಲ್ಲದೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಿತ್ರಪಕ್ಷಗಳು ಸೇರಿದಂತೆ ಪಕ್ಷದ ನಾಯಕರಿಗೂ ಆಹ್ವಾನ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…