Subscribe to Updates
Get the latest creative news from FooBar about art, design and business.
- ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
- ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
- ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
- ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ
- ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
- ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
- ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ: ಮುರಳೀಧರ ಹಾಲಪ್ಪ ಕಿಡಿ
- ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
Author: admin
ತುಮಕೂರು: ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದ್ದು, ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2025ರ ಜುಲೈ 1 ರಿಂದ ಪ್ರವೇಶಾತಿ ಪ್ರಾರಂಭವಾಗಿದೆ. ಈ ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (ಯುಜಿಸಿ) ಮಾನ್ಯತೆ ಪಡೆದಿದೆ…
ನಾಡಿನ ಸಮಸ್ತ ಪತ್ರಕರ್ತ ಹಾಗೂ ಮಾಧ್ಯಮ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ, 1843 ಜುಲೈ 1ರಂದು ಪ್ರಾರಂಭವಾಯಿತು, ಹಾಗಾಗಿ ಕರ್ನಾಟಕದಲ್ಲಿ ಸ್ಮರಣಾರ್ಥವಾಗಿ ಈ ದಿನವನ್ನು ಭಾರತದ ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ.ಪತ್ರಿಕಾ ದಿನವನ್ನು ಜುಲೈ 1ರಂದು ಆಚರಿಸಲಾಗುತ್ತದೆ. ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿದ್ಯಮಾನಗಳನ್ನು,ಕ್ಷಣ ಕ್ಷಣದ ಮಾಹಿತಿಗಳನ್ನು ಜನರಿಗೆ ತಲುಪಿಸಿ, ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಿಕಾ ಮಾಧ್ಯಮದ ಎಲ್ಲಾ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು. ದಮನಿತರ ನೋವಿಗೆ ಧ್ವನಿಯಾಗಿ ನ್ಯಾಯ ಒದಗಿಸಿಕೊಡುವ ಅಕ್ಷರ ಲೋಕ, ಸಮಾಜದ ಅಂಕುಡೊಂಕುಗಳನ್ನು ಜಗದ ಮುಂದಿಡುವ ನಿರ್ಭೀತ ರಂಗದ ಸೇವೆಗೆ ಶರಣು ಎನ್ನೋಣ. ಪತ್ರಿಕೋದ್ಯಮ ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭವಾಗಿದ್ದು, ಜನಸಾಮಾನ್ಯರು ಮತ್ತು ಸರ್ಕಾರಗಳ ನಡುವೆ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ನವೆಂಬರ್ 1966 ರಲ್ಲಿ, ಭಾರತೀಯ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮದ ಸರಿಯಾದ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು, ವರದಿಯ ಗುಣಮಟ್ಟವನ್ನು ಪರಿಶೀಲಿಸಲು ನ್ಯಾಯಮೂರ್ತಿ ಜೆ.ಆರ್.ಮುಧೋಲ್ಕರ್ ಅವರ…
ಶಿವಮೊಗ್ಗ: ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ನಡೆದಿದೆ. ಹುಚ್ಚಮ್ಮ ಎಂಬ ವೃದ್ಧೆ ಹಲ್ಲೆಗೊಳಗಾದವರಾಗಿದ್ದಾರೆ. ಇವರ ನೆರೆಯಮನೆಯ ಪ್ರೇಮಾ ಎಂಬವರು ಕಸ ತಂದು ಹುಚ್ಚಮ್ಮ ಅವರ ಮನೆಯ ಮುಂದೆ ಸುರಿದಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಪ್ರೇಮ, ಜೊತೆಗೆ ಮಂಜುನಾಥ್ ಮತ್ತು ದರ್ಶನ್ ಎಂಬ ಇಬ್ಬರು ಯುವಕರು, ಹುಚ್ಚಮ್ಮನವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ ಮರಕ್ಕೆ ಹಗ್ಗದಿಂದ ಕಟ್ಟಿ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಹುಚ್ಚಮ್ಮ ಅವರ ಮಗ ಕಣ್ಣಪ್ಪ, ತನ್ನ ವೃದ್ಧ ಪೋಷಕರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬಿಗ್‌ಬಾಸ್ ಕನ್ನಡ 11 ಸೀಸನ್‌ಗಳನ್ನ ಯಶಸ್ವಿಯಾಗಿ ಪೂರೈಸಿದೆ. ಇದೀಗ ಸೀಸನ್ 12ಕ್ಕೆ ಕೆಲವೇ ತಿಂಗಳು ಬಾಕಿ ಇದೆ. ಈ ನಡುವೆ ಬಿಗ್ ಬಾಸ್ ತಂಡ ಬಿಗ್ ಅಪ್ ಡೇಟ್ ನೀಡಿದೆ. 11ನೇ ಸೀಸನ್ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಈ ವೇಳೆ ಯಾರು ಮುಂದಿನ ನಿರೂಪಕರು ಎನ್ನುವ ಚರ್ಚೆ ಜೋರಾಗಿಯೇ ನಡೆದಿತ್ತು. ಇದೀಗ 12ನೇ ಸೀಸನ್ ಗೂ ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ ಎಂದು ಬಿಗ್ ಬಾಸ್ ಸಂಯೋಜಕರು ಹೇಳಿದ್ದಾರೆ. ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ನೋಡಲು ಸಾಧ್ಯವಿಲ್ಲ ಎನ್ನುವ ವೀಕ್ಷಕರ ಒತ್ತಡಕ್ಕೆ ಕೊನೆಗೂ ಬಿಗ್ ಬಾಸ್ ತಂಡ ಮಣಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಹೈದರಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ 8 ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪಾಶಮಿಲಾರಂನ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದೆ. ರಿಯಾಕ್ಟರ್ ಸ್ಫೋಟಗೊಳ್ಳುತ್ತಿದ್ದಂತೆ, ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಯಿಂದಾಗಿ ಕಾರ್ಮಿಕರ ಮೃತದೇಹಗಳು 100 ಮೀಟರ್ ದೂರಕ್ಕೆ ಹಾರಿಬಿದ್ದಿವೆ. ಈ ವೇಳೆ, ಕೆಲವರು ಕಾರ್ಖಾನೆಯ ಒಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿ, ಸಿಲುಕಿದ್ದವರ ರಕ್ಷಣೆ ಮಾಡಿದ್ದಾರೆ. ಘಟನಾ ಸ್ಥಳದಿಂದ ಆರು ಶವಗಳನ್ನು ಹೊರತೆಗೆಯಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಕೆಲವು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಗಾಚಿ ಇಂಡಸ್ಟ್ರೀಸ್ ಲಿಮಿಟೆಡ್ ಒಂದು ಔಷಧೀಯ ಕಂಪನಿಯಾಗಿದ್ದು, ಔಷಧಿ, ಚಿಕಿತ್ಸೆಗೆ ಬೇಕಾದ ಸಹಾಯಕ ವಸ್ತುಗಳನ್ನು ಉತ್ಪಾದಿಸುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: DIGITAL ARREST ಬಗ್ಗೆ ತುಮಕೂರು ಪೊಲೀಸರು ಜಾಗೃತಿ ಮೂಡಿಸಿದ್ದು, ಸಾರ್ವಜನಿಕರಿಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ವಂಚಕರು Fedex ಕೊರಿಯರ್, Income Tax Officer, E.D, TRAI, ಅಧಿಕಾರಿಗಳೆಂದು ಹೇಳಿಕೊಂಡು ಅನಾಮಧೇಯ ಕರೆ ಅಥವಾ ವಿಡಿಯೋ ಕಾಲ್‌ಗಳನ್ನು ಮಾಡುತ್ತಾರೆ. ಈ ವಂಚಕರು ಅನಾಮಧೇಯ ಕರೆಗಳನ್ನು ಮಾಡಲು ಪ್ರಮುಖವಾಗಿ Whatsapp ಅಥವಾ Skype ನಂತಹ ಅಪ್ಲಿಕೇಶನ್ ಗಳನ್ನು ಬಳಸುತ್ತಾರೆ. ಸಾರ್ವಜನಿಕರನ್ನು ವಂಚಕರು ನಂಬಿಸುವ ವಿಧಾನ: * ಮೇಲ್ಕಂಡಂತೆ ಕರೆ ಮಾಡುವಾಗ ಸದರಿ ನಂಬರ್ ಗಳಿಗೆ ಪೊಲೀಸ್ ಅಥವಾ ಸಂಬಂಧಪಟ್ಟ ಇಲಾಖೆಯ ಚಿತ್ರಗಳನ್ನೇ D.P.ಯಾಗಿ ಬಳಸಿ ಸಾರ್ವಜನಿಕರು ನಂಬುವಂತೆ ಮಾಡುತ್ತಾರೆ. ವಿಡಿಯೋ ಕರೆ ಮಾಡುವಾಗ ಪೊಲೀಸ್ ಇಲಾಖೆಯ ಸಮವಸ್ತ್ರ ಹಾಗೂ ಹಿಂಬದಿಯಲ್ಲಿ ಇಲಾಖೆಯ ಬೋರ್ಡ್ ಅನ್ನು ಬಳಸಿ ನಂಬುವಂತೆ ಮಾಡುತ್ತಾರೆ. * ನೀವು ನಂಬಬಹುದಾದ ಯಾವುದೋ ಒಂದು ಅಪರಾಧವನ್ನು, ನೀವು ಮಾಡಿರುವುದಾಗಿ ನಂಬಿಸಿ ನಿಮ್ಮ ವಿರುದ್ಧ ವಾರೆಂಟ್ ಹೊರಡಿಸಿ ನಿಮ್ಮನ್ನು Digital Arrest ಮಾಡಿರುವುದಾಗಿ ಹೆದರಿಸುತ್ತಾರೆ. * ವಂಚಕರು ನೀವು ಯಾರೊಂದಿಗೂ ಅವರು ಕರೆ…
ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಏಕಾದಶಿ ನಿಮಿತ್ತವಾಗಿ ಜು.5 ರಂದು ಬೀದರ್ ನಿಂದ ಪಂಢರಪುರಕ್ಕೆ ವಿಶೇಷ ರೈಲು ಕಲ್ಪಿಸಲಾಗಿದೆ. ಆಷಾಢ ಏಕಾದಶಿ ದಿನದಂದು ಮಹಾರಾಷ್ಟ್ರದ ಪಂಢರಪುರದಲ್ಲಿರುವ ವಿಠ್ಠಲ್ ರುಕ್ಮಿಣಿ ದೇವಸ್ಥಾನಕ್ಕೆ ಹೋಗಲಿರುವ ಭಕ್ತಾದಿಗಳ ಪ್ರಯಾಣಕ್ಕಾಗಿ ಈ ವಿಶೇಷ ರೈಲು ಒದಗಿಸಲಾಗಿದೆ. ವಿಶೇಷ ರೈಲು ಜು.5ರಂದು ಭಾಲ್ಕಿ ರೈಲು ನಿಲ್ದಾಣಕ್ಕೆ ರಾತ್ರಿ 9:15 ಗಂಟೆಗೆ ಬಂದು 9:17 ಗಂಟೆಗೆ ಪ್ರಯಾಣ ಮುಂದುವರಿಸಲಿದೆ. ನಂತರದಲ್ಲಿ ಬೀದರ್ ನಿಲ್ದಾಣಕ್ಕೆ ರಾತ್ರಿ 9:50 ಗಂಟೆಗೆ ತಲುಪಿ 9:52 ಗಂಟೆಗೆ ಹೊರಡಲಿದೆ. ಈ ರೈಲು ಪಂಢರಪುರಕ್ಕೆ ಜು.6ರಂದು ಬೆಳಿಗ್ಗೆ 8:15 ಗಂಟೆಗೆ ತಲುಪಲಿದೆ ಎಂದು ತಿಳಿದು ಬಂದಿದೆ. ಭಕ್ತರು ಈ ರೈಲಿನ ಸದುಪಯೋಗ ಪಡೆದುಕೊಳ್ಳುವಂತೆ ಸಂಸದ ಸಾಗರ್ ಖಂಡ್ರೆ ಅವರು ಕೋರಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್ (ರಿ) ಗುಬ್ಬಿ , ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ತುಮಕೂರು ಮತ್ತು ತಾಲ್ಲೂಕು ಘಟಕ ಗುಬ್ಬಿ ಹಾಗೂ ಶ್ರೀಗಂಧ ಸಾಹಿತ್ಯ ಸಾಂಸ್ಕೃತಿಕ ಕಲಾ ಬಳಗ ತುಮಕೂರು ಇವರ ಸಹಯೋಗದಲ್ಲಿ 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಕನ್ನಡ ಭವನ ತುಮಕೂರಿನಲ್ಲಿ ನಡೆಯಿತು. ಸಮ್ಮೇಳನಾಧ್ಯಕ್ಷರಾದ ಗೀತಾ ಲೋಕೇಶ್ ಹಾಗೂ ಹೆಚ್.ಹೆಚ್.ವೆಂಕಟೇಶ್ ಅವರು ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನಾಟಕ ಭಾರ್ಗವ ಕೆಂಪರಾಜು ಮೈಸೂರು ಅವರು ವಹಿಸಿದ್ದರು. ಆಶಯ ನುಡಿಯನ್ನು ಸಂಸ್ಥಾಪಕ ಅಧ್ಯಕ್ಷರು ಮತ್ತು ಸಾಹಿತ್ಯ ನಿಧಿ ಸಾಹಿತ್ಯ ಮಾಸ ಪತ್ರಿಕೆಯ ಸಂಪಾದಕರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕವಿಗೋಷ್ಠಿ ನಡೆಯಿತು. ಕಾಲ್ಗೆಜ್ಜೆ, ನಸುಕಿಗೊಂದು ಚುಟುಕು, ಅಂತರಾಳದ ಅಭಿವ್ಯಕ್ತಿ, ಹೃದಯ ಗದ್ದುಗೆ ಎಂಬ 4 ಪುಸ್ತಕಗಳ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯತೀಶ್ ಹೆಚ್.ಸಿ ಗುಬ್ಬಿ ಕ.ಸಾ.ಪ ಅಧ್ಯಕ್ಷರು, ಲಕ್ಷ್ಮಿನಾರಾಯಣ, ಶ್ವೇತಾ ಆಲೂರು, ಕಾಂತರಾಜು ಗುಪ್ಪಟ್ನ, ಬಿದಲೊಟಿ ರಂಗನಾಥ್ ಕವಿಗೋಷ್ಠಿ ಅಧ್ಯಕ್ಷತೆ…
ತುಮಕೂರು: ಕ್ಯಾಂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಟು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ ನಲ್ಲಿ ನಡೆದಿದೆ. ಮೃತರೆಲ್ಲರು ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ಸೀಬೆಗೌಡ, ಶೋಭಾ, ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಮಗನನ್ನ ಹಾಸ್ಟೆಲ್ ಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ರಾಮನಗರ ಜಿಲ್ಲೆ ಮಾಗಡಿ ಪಟ್ಟಣದಲ್ಲಿ ವಾಸವಿದ್ದ ಸಿಬೇಗೌಡ, ಕುಣಿಗಲ್ ಹೊರವಲಯದ ಬಿದನಗೆರೆ ಬಳಿಯಿರುವ ವ್ಯಾಲಿ ಸ್ಕೂಲ್ ನಲ್ಲಿ 8ನೇ ತರಗತಿ ಓದುತ್ತಿದ್ದ ಮಗನನ್ನು ಭಾನುವಾರ ರಜೆ ಹಿನ್ನೆಲೆ, ಮಾಗಡಿಗೆ ತೆರಳಿದ್ದ ಭಾನುಕಿರಣ್ ಗೌಡ, ನಿನ್ನೆ ಊಟ ಮುಗಿಸಿ ಮಗನನ್ನ ಶಾಲೆಯ ಹಾಸ್ಟೆಲ್ ಗೆ ಬಿಟ್ಟು ಬರಲು ಕುಟುಂಬ ಸಮೇತರಾಗಿ ಬಂದಿದ್ದರು. ಈ ವೇಳೆ ಒನ್ ವೇ ಯಲ್ಲಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜು…
ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್ ತಿಳಿಸಿದರು. ತಾಲೂಕಿನ ಮುಳ್ಳೂರು ವಲಯದ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಮನೆಯ ಸುತ್ತಲೂ ಗಿಡಗಳನ್ನು ಬೆಳೆಸುವುದಲ್ಲದೇ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಕೃಷಿ ಅಧಿಕಾರಿಗಳಾದ ಮಧುಸೂದನ್ ಅವರು ಪರಿಸರ ಸಂರಕ್ಷಣೆಗೆ ಪೂರಕವಾಗಿ ಗಿಡ ನಾಟಿ ಮಾಡುವಂಥದ್ದು ಹಾಗೂ ಮರ ಗಿಡಗಳ ಪಾಲನೆ ಪೋಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿರಮೇಶ್ ಗಿಡನಾಟಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಳ್ಳೂರು ವಲಯದ ಮೇಲ್ವಿಚಾರಕರದ ನರಸಿಂಹಮೂರ್ತಿ ರವರು ಪರಿಸರ ಜಾಗೃತಿಯ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ…