Author: admin

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇರಳ ಸ್ಟೋರಿಯನ್ನು ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡಿದೆ. ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿದ್ಯಾರ್ಥಿನಿಯರನ್ನು ಸಿನಿಮಾ ನೋಡಲು ಆಹ್ವಾನಿಸಿದ್ದಾರೆ. ವಿಶೇಷ ಪ್ರದರ್ಶನವನ್ನು ವೀಕ್ಷಿಸಲು ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿದೆ. ಗರುಡಾಮಾಲ್‌ನಲ್ಲಿ ಪ್ರದರ್ಶನ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಬೆಂಗಳೂರಿನ ವಿದ್ಯಾರ್ಥಿನಿಯರನ್ನು ವಿಶೇಷವಾಗಿ ಆಹ್ವಾನಿಸಿ ಟ್ವೀಟ್ ಮಾಡಿದ್ದಾರೆ. ಕೇರಳ ಮತ್ತು ದೇಶದ ಇತರ ಭಾಗಗಳ ಸಾಮಾಜಿಕ ಸಮಸ್ಯೆಗಳನ್ನು ಬಿಂಬಿಸುವ ಚಿತ್ರ ‘ದಿ ಕೇರಳ ಸ್ಟೋರಿ’. ನಾವು ಇದು ಮಕ್ಕಳಿಗಾಗಿ ಒಂದು ಸಂದೇಶವನ್ನು ಹೊಂದಿದೆ. ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. 100 ಸೀಟುಗಳಿದ್ದು, ಸಿನಿಮಾ ನೋಡಲು ನೋಂದಣಿ ಮಾಡಿಕೊಳ್ಳಬೇಕು ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಕೇರಳದ ಹತ್ತಾರು ಅನ್ಯಧರ್ಮೀಯ ಯುವತಿಯರನ್ನು ಮುಸ್ಲಿಂ ಯುವಕರು ಇಸ್ಲಾಮಿಕ್ ಸ್ಟೇಟ್‌ಗೆ ಮತಾಂತರಗೊಳಿಸಿದ್ದಾರೆ ಎಂಬ ಆಧಾರರಹಿತ ಆರೋಪಗಳನ್ನು ಮಾಡುವ ಚಿತ್ರ. ಇನ್ನು 20 ವರ್ಷಗಳಲ್ಲಿ ಕೇರಳ ಇಸ್ಲಾಮಿಕ್ ದೇಶವಾಗಲಿದೆ ಎಂದೂ ಚಿತ್ರ ಹೇಳುತ್ತದೆ. ಚಿತ್ರದಲ್ಲಿ…

Read More

ಬೆಳಗಾವಿ: ಅಪ್ಪಟ ಸ್ವಾಭಿಮಾನಿಗಳ ನಾಡು ಎಂದೇ ಹೆಸರಾಗಿರುವ ಹಿರೇಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಸಂಜೆ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ರೋಡ್ ಶೋ ಗೆ ಚಾಲನೆ ನೀಡಿದ ಹೆಬ್ಬಾಳಕರ್, ಕಳೆದ 5 ವರ್ಷದಲ್ಲಿ ನಾನು ಮಾಡಿರುವ ಕೆಲಸಗಳನ್ನು ನೋಡಿ ಮತ ನೀಡಿ. ಹಿರೇಬಾಗೇವಾಡಿಯ ಮೊಮ್ಮಗಳಾದ ನನ್ನನ್ನು ಇಲ್ಲಿಯ ಜನರು ಯಾವತ್ತೂ ಬೆಂಬಲಿಸುತ್ತ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಪ್ರತ್ಯೇಕ ತಾಲೂಕನ್ನಾಗಿಸುವ ಸಂಕಲ್ಪ ಮಾಡಿದ್ದೇನೆ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಮುಂದಕ್ಕೆ ಹೋಗುತ್ತೇನೆ ಎಂದು ಹೇಳಿದರು. ಹಿರೇಬಾಗೇವಾಡಿ ಸೇರಿದಂತೆ ಇಡೀ ಕ್ಷೇತ್ರಾದ್ಯಂತ ಜನರು ಸ್ವಯಂ ಪ್ರೇರಣೆಯಿಂದ ನನ್ನ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದಲ್ಲಿ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಕ್ಷೇತ್ರದ ಜನರೇ ನನ್ನ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದಾರೆ. ಹಿರೇಬಾಗೇವಾಡಿ ಜನರನ್ನು ದಿಕ್ಕು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಅದಕ್ಕೆ ಅವಕಾಶ…

Read More

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಭೀಕರ ದೋಣಿ ದುರಂತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 21 ಸದಸ್ಯರ ತಂಡ ತಾನೂರಿಗೆ ತಲುಪಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇನ್ಸ್ ಪೆಕ್ಟರ್ ಅರ್ಜುನ್ ಪಾಲ್ ರಜಪೂತ್ ನೇತೃತ್ವದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಇಲ್ಲಿಯವರೆಗೆ 22 ಸಾವುಗಳು ದೃಢಪಟ್ಟಿವೆ. ಹಸ್ನಾ (18), ಸಫ್ನಾ (7), ಫಾತಿಮಾ ಮಿನ್ಹಾ (12), ಸಿದ್ದಿಕ್ (35), ಝಲ್ಸಿಯಾ (40), ಅಫ್ಲಾ (7), ಅನ್ಷಿದ್ (10), ರಜಿನಾ, ಫೈಜಾನ್ (4), ಸಬರುದ್ದೀನ್ (38), ಶಮ್ನಾ ( 17), ಹಾದಿ ಫಾತಿಮಾ (7), ಜಹ್ರಾ, ನೈರಾ, ಸಫ್ಲಾ ಶೆರಿನ್, ರುಶ್ದಾ, ಆದಿಲಾ ಶೆರ್ರಿ, ಐಶಾಬಿ, ಅರ್ಶನ್, ಅದ್ನಾನ್, ಜೀನತ್ (45) ಮತ್ತು ಜೆರಿರ್ (10) ಮೃತರು. ಮೃತರ ಮರಣೋತ್ತರ ಪರೀಕ್ಷೆ ಶೀಘ್ರದಲ್ಲೇ ಆರಂಭವಾಗಲಿದೆ. ಮೂವರು ಮಕ್ಕಳು ಸೇರಿದಂತೆ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರು ವೆಂಟಿಲೇಟರ್‌ನಲ್ಲಿದ್ದಾರೆ. ಆಯೇಷಾ (5), ಮುಹಮ್ಮದ್ ಅಫ್ರಾದ್ (5),…

Read More

ಮೈಸೂರು: ವರುಣಾ ರಣಕಣ ಈ ಬಾರಿ ಹೈ ವೋಲ್ಟೇಜ್ನಿಂದ ಕೂಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಲಿಂಗಾಯತ ಸಮುದಾಯದ ನಾಯಕ, ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಅಲ್ಲದೇ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವರುಣಾವನ್ನು ಗೆಲ್ಲಲು ತಂತ್ರ ರೂಪಿಸಿದ್ದಾರೆ. ಇದರಿಂದ ತೆಲೆ ಕೆಡೆಸಿಕೊಂಡ ಸಿದ್ದರಾಮಯ್ಯ ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಸಿದ್ದರಾಮಯ್ಯ ಮನೆಯಲ್ಲಿ ಉಳಿಯದೇ ಹೋಟೆಲ್‌ನಲ್ಲಿ ಖಾಸಗಿ ಹೋಟೆಲ್‌ನಲ್ಲಿ ಕುಳಿತು ಕ್ಷೇತ್ರದ ಗೆಲುವಿಗೆ ತಂತ್ರಗಾರಿಕೆ ಹೆಣೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಮೈಸೂರಿನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿದ್ದರು ಟಿ‌ ಕೆ ಬಡಾವಣೆ ಮನೆಗೆ ತೆರಳಿಲ್ಲ. ವರುಣಾ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರನ್ನು ಹೋಟೆಲ್‌ಗೆ ಕರೆಸಿಕೊಂಡು ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದು, ವರುಣ ಕ್ಷೇತ್ರದ ಪ್ರಮುಖ ಮುಖಂಡರ ಜೊತೆ ಸಮಾಲೋಚನೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆದ ತಪ್ಪುಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಕರ್ತವ್ಯ ಪಾಲಿಸದ ತಾ.ಪಂ.ಕಾರ್ಯನಿರ್ವಹಕ ಅಧಿಕಾರಿಗೆ 10 ಸಾವಿರ ದಂಡ ಕೋಳಾಲ ಗ್ರಾ.ಪಂ. ಪಿಡಿಓಗೆ 10 ಸಾವಿರ ದಂಡ, ಕ್ರಿಮಿನಲ್ ಪ್ರಕರಣ ದಾಖಲಿಸಲು ಶಿಫಾರಸು ವರದಿ: ಶಿವಕುಮಾರ್, ಮೇಷ್ಟ್ರುಮನೆ ತುಮಕೂರು: ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ, ಪಿಡಿಓ, ವಾಟರ್ ಮ್ಯಾನ್ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ್ವರ ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ ವೇರ್ ಎಂಬ ಅಂಗಡಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸಾರ್ವಜನಿಕ ಕುಂದುಕೊರತೆಗಳ ಪ್ರಾಧಿಕಾರ ಆದೇಶ ನೀಡಿದೆ. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಕ್ರಮ ಎಸಗಿರುವ ಬಗ್ಗೆ ವಕೀಲರಾದ ಎಂ.ಎನ್.ಚಿನ್ಮಯ ಅವರು  ಸಾರ್ವಜನಿಕ ಕುಂದುಕೊರತೆಗಳ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದು,  ಈ ಅರ್ಜಿಯ ವಿಚಾರಣೆಯಲ್ಲಿ ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಕಮಲಮ್ಮ, ಪಿಡಿಒ ಕೋಮಲ,   ವಾಟರ್ ಮ್ಯಾನ್ ಕರಿಯಣ್ಣ, ಶ್ರೀ ಲಕ್ಷ್ಮೀ ವೆಂಕಟೇಶ್ವರ ಎಲೆಕ್ಟ್ರಿಕಲ್ಸ್ ಮತ್ತು ಮತ್ತು ಹಾರ್ಡ್ ವೇರ್ ಅಂಗಡಿ ಬೋಗಸ್ ಬಿಲ್ ಮೂಲಕ…

Read More

ಮೈಸೂರು: ಕಿಚ್ಚ ಸುದೀಪ್‌ ಅವರ ಕಿಚ್ಚು ಕಾಂಗ್ರೆಸ್‌ ಕಚೇರಿಯನ್ನೇ ಸುಟ್ಟು ಹಾಕ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಭಾನುವಾರ ನಂಜನಗೂಡಿನಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಪರವಾಗಿ ಪ್ರಚಾರಕ್ಕೆ ಇಳಿಯುವ ಮೂಲಕ ಕನ್ನಡ ಚಿತ್ರರಂಗದ ಜನಪ್ರಿಯ ನಟ ಸುದೀಪ್‌ ಅವರು ಕಾಂಗ್ರೆಸ್‌ ಕಚೇರಿಗೆ ಕಿಚ್ಚು ಹಚ್ಚಿದ್ದಾರೆ. ಕಿಚ್ಚ ಸುದೀಪ್‌ ಅವರ ಕಿಚ್ಚು ಇಡೀ ರಾಜ್ಯದಲ್ಲಿ ಕಾಂಗ್ರೆಸ್‌ ಕಚೇರಿಯನ್ನು ಸುಟ್ಟು ಹಾಕುತ್ತಿದೆ. ಹೀಗಾಗಿ ನಾಯಕರ ರ‍್ಯಾಲಿಗೆ ಲಕ್ಷಾಂತರ ಜನ ರಾಜ್ಯದ ಉದ್ದಗಲಕ್ಕೂ ಬರುತ್ತಿದ್ದಾರೆ. ಈ ವಾತಾವರಣ ಗಮನಿಸಿದರೆ ಕರ್ನಾಟಕದಲ್ಲಿ ಈ ಬಾರಿ ನಿಶ್ಚಿತವಾಗಿ ಡಬಲ್‌ ಎಂಜಿನ್‌ ಸರ್ಕಾರ ಸ್ಥಾಪನೆಯಾಗುತ್ತದೆ ಎಂದು ಆಶಯ ವ್ಯಕ್ತಪಡಿಸಿದರು. ಸಿದ್ದರಾಮಯ್ಯರಿಗೆ ಟಿಪ್ಪು ಸುಲ್ತಾನನ ಜನ್ಮದಿನ ಗೊತ್ತು, ಹನುಮನ ಜನ್ಮದಿನ ಗೊತ್ತಿಲ್ಲ. ರಾಮನಗರದ ಶಿವ ಬೆಟ್ಟವನ್ನು ಡಿ.ಕೆ ಶಿವಕುಮಾರ್ ಏಸು ಬೆಟ್ಟ ಮಾಡಿದ್ದಾರೆ. ಅವರ ಪಕ್ಷದ ಸಿದ್ದರಾಮಯ್ಯ ಹನುಮ ಜನ್ಮದಿನವನ್ನು ಪ್ರಶ್ನಿಸುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಸಾಮಾ ಬಿನ್ ಲಾಡೆನ್ ಮತ್ತು ಮುಲ್ಲಾ…

Read More

ಇಂದು ಸಂಜೆ 6 ಗಂಟೆಯಿಂದ ಇನ್ನು ಮೂರು ದಿನ ರಾಜ್ಯದಲ್ಲಿ ಮದ್ಯ ಸಿಗುವುದಿಲ್ಲ. ಇಂದು ಸಂಜೆ 6 ಗಂಟೆಯಿಂದ ಮೇ 11 ರ ಬೆಳಗ್ಗೆ 6 ಗಂಟೆಯವರೆಗೂ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 8 , 9 , 10 ರಂದು ಡ್ರೈ ಡೇ ಆಚಾರಿಸುವಂತೆ ಮದ್ಯ ಮಾರಾಟದ ಅಂಗಡಿ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಅಲ್ಲದೇ ಮತ ಎಣಿಕೆಗೂ ಸಮಸ್ಯೆಯಾಗದಂತೆ ಮೇ 13 ರ ಬೆಳಗ್ಗೆ 6 ಗಂಟೆಯಿಂದ ಮೇ.14 ರ ಬೆಳ್ಳಗ್ಗೆ 6 ಗಂಟೆವರೆಗೂ ಮದ್ಯ ನಿರ್ಬಂಧಿಸಲಾಗಿದೆ. ಇದರಿಂದ ಇಂದು ಮದ್ಯದಂಗಡಿಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಮದ್ಯದ ಬೆಲೆಯು ದುಪ್ಪಟ್ಟಾಗಿದ್ದು, ಬೀಯರ್ ಬೆಲೆಯು ಶೇ 15 ರಿಂದ ಶೇ 20 ರಷ್ಟು ಏರಿಕೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಸೀತೆ ಯಾರು, ಶೂರ್ಪನಖಿ ಯಾರು ಅಂತಾ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‌ ಗೆ ಇಷ್ಟೇ ಗೊತ್ತಿರೋದು. ಇದೇ ಅವರ ಸಂಸ್ಕೃತಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮುಖಂಡರು ತನಗೆ ಶೂರ್ಪನಖಿ ಎಂದು ಹೇಳಿರುವ ವಿಚಾರವಾಗಿ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದಕ್ಕೆ ಜನ ಉತ್ತರ ಕೊಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಇದೇ ರೀತಿಯ ಕೀಳು ಮತ್ತು ಕೆಳ ಮಟ್ಟದ ಸಂಸ್ಕೃತಿಯನ್ನು ಪ್ರಯೋಗಿಸುತ್ತದೆ. ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ಸದನದಲ್ಲಿ ಇಂದಿರಾ ಗಾಂಧಿಯವರಿಗೆ ದುರ್ಗೆ ಎಂದು ಕರೆದಿದ್ದರು. ಇದು ನಮ್ಮ ಸಂಸ್ಕೃತಿ. ಆದರೆ ಕಾಂಗ್ರೆಸ್ ಸಂಸ್ಕೃತಿ ಯಾವಾಗಲೂ ಕೆಳಮಟ್ಟದಲ್ಲಿ ಮಾತನಾಡೋದೇ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ಕೊಟ್ಟಿದೆ. ಜಾಹಿರಾತಿನ ಮೂಲಕ ಕಾಂಗ್ರೆಸ್  ಸುಳ್ಳು ಆರೋಪ ಮಾಡಿದೆ. ಇದರ ಬಗ್ಗೆ ಮಾಹಿತಿ ಮತ್ತು ಸಾಕ್ಷ್ಯಗಳನ್ನು ಆಯೋಗ ಕೇಳಿದೆ. ಕಾಂಗ್ರೆಸ್ ಯಾವ ಮುಖ ಇಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದೆ?…

Read More

ಕರ್ನಾಟಕ ಚುನಾವಣಾ ಪ್ರಚಾರ ಇಂದು ಅಂತ್ಯಗೊಂಡಿದೆ. ನಲವತ್ತು ದಿನಗಳ ಕಾಲ ನಡೆದ ಅಭಿಯಾನದಲ್ಲಿ  ಶೌರ್ಯ, ವಾಕ್ಚಾತುರ್ಯ ಎದ್ದು ಕಾಣುತ್ತಿತ್ತು. ಅಂತಿಮ ಹಂತದಲ್ಲಿ ಸಂಪೂರ್ಣ ಮೋದಿ ಪ್ರದರ್ಶನವಾಗಿ ಮಾರ್ಪಟ್ಟ ಪ್ರಚಾರವನ್ನು ಬಿಜೆಪಿ ನಡೆಸಿತು. ಮತ್ತೊಂದೆಡೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ತನ್ನ ಪ್ರಚಾರವನ್ನು ತೀವ್ರಗೊಳಿಸಿದೆ. ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಿಷಪೂರಿತ ಹಾವಿನ ಟೀಕೆ, ಬಜರಂಗದಳ ವಿವಾದ ಇತ್ಯಾದಿ ಪ್ರಚಾರದ ಬಿಸಿ ಹೆಚ್ಚಿಸಿದೆ. ದೇವೇಗೌಡರು ತಮ್ಮ ವಯಸ್ಸನ್ನು ಮರೆತು ಜೆಡಿಎಸ್‌ ವೇದಿಕೆಗೆ ಬರುತ್ತಿರುವುದು ಕೂಡ ಉತ್ಸಾಹ ಮೂಡಿಸಿದೆ. ಕರ್ನಾಟಕದಲ್ಲಿ ಆರಂಭದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಪ್ರಚಾರ ಮುಗಿಯುತ್ತಿದ್ದಂತೆ ಬಿಜೆಪಿ ತನ್ನ ಸ್ಥಾನವನ್ನು ಸುಧಾರಿಸಿಕೊಂಡಿದೆ. ಯಾರಿಗೂ ಬಹುಮತ ಸಿಗದ ಕಾರಣ ಯಾರು ಆಡಳಿತ ನಡೆಸಬೇಕು ಎಂಬುದನ್ನು ಜೆಡಿಎಸ್ ನಿರ್ಧರಿಸುವ ಸಾಧ್ಯತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಅಧಿಕೃತ ಅಂಕಿ ಅಂಶಗಳ ಪ್ರಕಾರ ಗುಜರಾತ್‌ ನಲ್ಲಿ ಐದು ವರ್ಷಗಳಲ್ಲಿ 40,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಾರ, 2016 ರಲ್ಲಿ 7,105, 2017 ರಲ್ಲಿ 7,712, 2018 ರಲ್ಲಿ 9,246 ಮತ್ತು 2019 ರಲ್ಲಿ 9,268 ಮಹಿಳೆಯರು ನಾಪತ್ತೆಯಾಗಿದ್ದಾರೆ. 2020 ರಲ್ಲಿ ಗುಜರಾತ್‌ನಿಂದ 8,290 ಮಹಿಳೆಯರು ನಾಪತ್ತೆಯಾಗಿದ್ದಾರೆ. ಈ ಐದು ವರ್ಷಗಳಲ್ಲಿ 41,621 ಮಹಿಳೆಯರು ರಾಜ್ಯದಿಂದ ನಾಪತ್ತೆಯಾಗಿದ್ದಾರೆ ಎಂದು NCRB ಅಂಕಿ ಅಂಶಗಳು ತೋರಿಸುತ್ತವೆ. 2021 ರಲ್ಲಿ, ರಾಜ್ಯ ಸರ್ಕಾರವು ಅಹಮದಾಬಾದ್ ಮತ್ತು ವಡೋದರಾದಲ್ಲಿ ಒಂದು ವರ್ಷದಲ್ಲಿ (2019 ರಿಂದ 2020) 4,722 ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿತ್ತು. ಇಂತಹ ನಾಪತ್ತೆಯಾದ ಮಹಿಳೆಯರ ಬಗ್ಗೆ ತನಿಖೆ ನಡೆಸಿದಾಗ ಕೆಲವರು ವೇಶ್ಯಾವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಮಾಜಿ ಐಪಿಎಸ್ ಅಧಿಕಾರಿ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸುಧೀರ್ ಸಿನ್ಹಾ ಹೇಳಿದ್ದಾರೆ. ಮಹಿಳಾ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸದಿರುವುದು ಪೊಲೀಸ್…

Read More