Subscribe to Updates
Get the latest creative news from FooBar about art, design and business.
- ನವೆಂಬರ್ 23ರಂದು ನರರೋಗ ತಪಾಸಣಾ ಶಿಬಿರ: ಇಲ್ಲಿದೆ ವಿವರ
- ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
- ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
- ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
- ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
- ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
- ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ, ಕಲಾತಂಡಗಳ ಮೆರುಗು
- ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
Author: admin
ದಕ್ಷಿಣ ಪೆರುವಿನ ಚಿನ್ನದ ಗಣಿಯಲ್ಲಿ ಬೆಂಕಿ 27 ಸಾವು. ಇಂಧನ ಮತ್ತು ಗಣಿ ಸಚಿವಾಲಯದ ಪ್ರಕಾರ, ಇದು 2000 ರ ನಂತರದ ಅತಿದೊಡ್ಡ ಗಣಿಗಾರಿಕೆ ಅಪಘಾತವಾಗಿದೆ. ಅರೆಕ್ವಿಪಾ ಪ್ರದೇಶದ ‘ಲಾ ಎಸ್ಪೆರಾನ್ಜಾ’ ಗಣಿಯಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬುದು ಪ್ರಾಥಮಿಕ ಮಾಹಿತಿ. 30 ತಜ್ಞ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಪಘಾತದಿಂದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಆದರೆ ಹೆಚ್ಚಿನವರು ಪತ್ತೆಯಾಗುವ ನಿರೀಕ್ಷೆಯಿಲ್ಲ. ಗಣಿಯನ್ನು ‘ಯಾನಕ್ವಿಹುವಾ’ ಎಂಬ ಸಣ್ಣ ಕಂಪನಿ ನಡೆಸುತ್ತಿದೆ. ಪೆರು ವಿಶ್ವದ ಅತಿದೊಡ್ಡ ಚಿನ್ನದ ಉತ್ಪಾದಕರಲ್ಲಿ ಒಂದಾಗಿದೆ, ವರ್ಷಕ್ಕೆ 100 ಟನ್‌ಗಳಷ್ಟು ಗಣಿಗಾರಿಕೆ ಮಾಡುತ್ತದೆ (ವಿಶ್ವದ ಒಟ್ಟು ವಾರ್ಷಿಕ ಪೂರೈಕೆಯ ಸುಮಾರು 4%). 2002 ರಲ್ಲಿ, ಪೆರುವಿನಲ್ಲಿ ವಿವಿಧ ಗಣಿಗಾರಿಕೆ ಅಪಘಾತಗಳಲ್ಲಿ 73 ಜನರು ಸಾವನ್ನಪ್ಪಿದರು. 2022ರಲ್ಲಿ 38 ಮಂದಿ ಸಾವನ್ನಪ್ಪಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ರಾಮನಗರ: ಹೆಚ್ಡಿ ಕುಮಾರಸ್ವಾಮಿ ಅವರು ಇಂದು ಸ್ವಕ್ಷೇತ್ರ ಚನ್ನಪಟ್ಟಣ ಕ್ಷೇತ್ರದಲ್ಲಿ ಮತಬೇಟೆಯಾಡಲಿದ್ದಾರೆ. ಚನ್ನಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಚನ್ನಪಟ್ಟಣದ ಶೇರ್ವಾ ಸರ್ಕಲ್ ನಿಂದ ಮಂಗಳವಾರಪೇಟೆವರೆಗೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ. ಹೆಚ್ಡಿ ಕುಮಾರಸ್ವಾಮಿಗೆ ತಂದೆ ಹೆಚ್ಡಿ ದೇವೇಗೌಡ, ಪುತ್ರ ನಿಖಿಲ್ ಸಾಥ್ ನೀಡಲಿದ್ದಾರೆ. ಸಾವಿರಾರು ಕಾರ್ಯಕರ್ತರು ಬೈಕ್ ರ್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಕನಕಪುರ ಜೆಡಿಎಸ್ ಅಭ್ಯರ್ಥಿ ಪರ ಹೆಚ್ಡಿ ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ನಡೆಸಲಿದ್ದಾರೆ. ಇನ್ನು ಇಂದು ರಾಮನಗರ, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಮತಯಾಚನೆ ಮಾಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಬಾಲಕಿಯರು 3 ಲಕ್ಷದ 59 ಸಾವಿರದ 511 ವಿದ್ಯಾರ್ಥಿನಿಯರು, ಬಾಲಕರು ಶೇ.80.08ರಷ್ಟು ಫಲಿತಾಂಶ ಪಡೆದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ಬಾರಿ 83.89ರಷ್ಟು ಫಲಿತಾಂಶ ಬಂದಿದೆ. ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆದಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ ತಾಲೂಕಿನ ಕಮ್ಮನ ಕೋಟೆ ಗ್ರಾಮದಲ್ಲಿ ತುಮಕೂರು ಜಿಲ್ಲಾ ಎಂ.ಎಲ್.ಸಿ. ರಾಜೇಂದ್ರ ರಾಜಣ್ಣ ಅವರು ಕ್ಷೇತ್ರದ ಮಾಜಿ ಶಾಸಕರು ಹಾಗೂ ಪ್ರಸ್ತುತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ತಮ್ಮ ತಂದೆ ಕೆ.ಎನ್.ರಾಜಣ್ಣ ಅವರ ಪರವಾಗಿ ಮತಯಾಚನೆ ಮಾಡಿದರು. ಕಮ್ಮನ ಕೋಟೆ ಗ್ರಾಮದಲ್ಲಿ ಕೆ.ಎನ್.ರಾಜಣ್ಣರವರ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿದ್ದವು. ಆದರೆ ಕಳೆದ ಬಾರಿ ಚುನಾಯಿತರಾದ ಶಾಸಕರು, ಈ ಗ್ರಾಮದ ಕಡೆ ತಿರುಗಿ ಸಹ ನೋಡಿಲ್ಲ. ಇನ್ನೂ ಅಭಿವೃದ್ಧಿ ಎಲ್ಲಿ ಕಂಡೀತು? ಎಂದು ಪ್ರಶ್ನಿಸಿದ ಅವರು, ಈ ಗ್ರಾಮದಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ ಎಂದರು. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪೂಜ್ಯ ತಂದೆಯಾದ ಕೆ.ಎನ್.ರಾಜಣ್ಣರವರಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡಿ ಅಭಿವೃದ್ಧಿಯತ್ತ ಕಡೆ ಸಾಗಿ ಎಂದು ಗ್ರಾಮದ ಮತದಾರರಿಗೆ ಅವರು ಮನವಿ ಮಾಡಿಕೊಂಡರು. ಪುರಸಭೆ ಸದಸ್ಯರಾದ ಗಂಗಣ್ಣಿ ಮಾತನಾಡಿ, ರಾಜಣ್ಣರವರ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಒಟ್ಟಾರೆ 16,400 ಮನೆಗಳನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಈಗಿರುವ ಶಾಸಕರು ಕನಿಷ್ಠ…
ತುರುವೇಕೆರೆ: ಪಟ್ಟಣದ ಕನ್ನಡ ಭವನದಲ್ಲಿ ಜಾಗೃತಾ ಮತದಾರರ ಬಳಗ ತುಮಕೂರು ಇವರ ವತಿಯಿಂದ ಮತದಾರರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ವೈದ್ಯಾಧಿಕಾರಿಗಳು, ಜಾಗೃತ ಮತದಾರರ ಬಳಗದ ಸಂಚಾಲಕ ಡಾ.ರಂಗಸ್ವಾಮಿ ಮಾತನಾಡಿ, ನಾವ್ಯಾರೂ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ಸಮಾಜದಲ್ಲಿ ಒಳ್ಳೆಯ ವಾತಾವರಣವನ್ನು ಸೃಷ್ಟಿಸಬೇಕಾಗಿರುವುದರಿಂದ ಹಲವಾರು ಜನಪರ ಸಂಘಟನೆಗಳು ಸಾಹಿತಿಗಳು ಬುದ್ಧಿಜೀವಿಗಳು ನಾವೆಲ್ಲ ಒಟ್ಟಾರೆಯಾಗಿ ಆಂದೋಲನವನ್ನು ಪ್ರಾರಂಭಿಸುತ್ತಿದ್ದೇವೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಮತಾಂಧ ಪ್ರಕ್ರಿಯೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಒಳಗೊಂಡಂತೆ ಹೇಳುವುದಾದರೆ ಸಂವಿಧಾನ ಅಡಿಯಲ್ಲಿ ನಡೆಯುತ್ತಿರುವ ಸರ್ಕಾರ ಅದರ ವಿರುದ್ಧವಾಗಿದೆ. ವಾತಾವರಣದ ಮಾದರಿ ಹೇಗಿದೆ ಎಂದರೆ, ಆರ್ ಎಸ್ ಎಸ್ ನಿರ್ದೇಶನದ ಮೂಲಕ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸೂಕ್ತವಾದಂತಹ ವರ್ಣವನ್ನು ಸೃಷ್ಟಿಸಬೇಕಿದೆ . ಇಂದಿನ ದಶಕಗಳಲ್ಲಿ ನೂರಾರು ಸಾವಿರ ಜನ ಸಾಹಿತಿಗಳು ಎಲ್ಲರೂ ಒಟ್ಟಾಗಿ ಸೇರಿಕೊಂಡು ವಿಶ್ವ ಪಾರ್ಲಿಮೆಂಟ್ ರಚನೆಯಾಗಬೇಕು ಎಂದು ಕೂಗನ್ನು ಎತ್ತಿದರು ನಮಗೆ ನಮ್ಮ ಪರವಾಗಿ ವಾತಾವರಣವನ್ನು ಸೃಷ್ಟಿಸಿಕೊಳ್ಳಬೇಕಿದೆ. ಮಾಧ್ಯಮದ ಮೂಲಕ ಜನರನ್ನು…
ಅಮೆರಿಕದ ಟೆಕ್ಸಾಸ್ ನಲ್ಲಿ ಬಸ್ ನಿಲ್ದಾಣಕ್ಕೆ ಕಾರೊಂದು ಗುದ್ದಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ನಿರಾಶ್ರಿತರು ಮತ್ತು ವಲಸಿಗರಿಗೆ ಆಶ್ರಯ ನೀಡುವ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಸ್ಥಳೀಯ ಕಾಲಮಾನ 08:30 ಕ್ಕೆ ಮೆಕ್ಸಿಕನ್ ಗಡಿಯ ಸಮೀಪವಿರುವ ಬ್ರೌನ್ಸ್‌ವಿಲ್ಲೆ ನಗರದಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದವರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಮೃತಪಟ್ಟವರು ವಲಸಿಗರೇ ಎಂಬುದು ಸ್ಪಷ್ಟವಾಗಿಲ್ಲ. ಆರು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಇದು ಉದ್ದೇಶಪೂರ್ವಕ ದಾಳಿ ಎಂದು ಪೊಲೀಸರನ್ನು ಉಲ್ಲೇಖಿಸಿ ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ. ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರು ಅಧಿಕಾರಿಗಳೊಂದಿಗೆ ಸಹಕರಿಸುತ್ತಿಲ್ಲ ಎನ್ನಲಾಗಿದೆ.ಯುಎಸ್ ಬಾರ್ಡರ್ ಪ್ರೊಟೆಕ್ಷನ್ ಅಧಿಕಾರಿಗಳ ಪ್ರಕಾರ, ಬ್ರೌನ್ಸ್ವಿಲ್ಲೆ ನಗರದಲ್ಲಿ ಅಕ್ರಮ ವಲಸೆಯಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಳಗಾವಿ: ಆಯ್ಕೆಯಾದ ನಂತರ 5 ವರ್ಷ ಜನರತ್ತ ಮುಖವನ್ನೇ ಹಾಕದ ಜನಪ್ರತಿನಿಧಿಗಳೇ ಹೆಚ್ಚಾಗಿರುವ ಇಂದಿನ ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಂತಹ ನಿರಂತರವಾಗಿ ಜನರ ಜೊತೆ ಇರುವ ಶಾಸಕರು ಸಿಗುವುದು ಅಪರೂಪ ಎಂದು ಸೊಲ್ಲಾಪುರ ಶಾಸಕಿ ಪ್ರಣತಿ ಶಿಂಧೆ ಹೇಳಿದ್ದಾರೆ. ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಅವರ ಪರ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿದರೆ ಎಲ್ಲ ಜನಪ್ರತಿನಿಧಿಗಳಿಗೆ ಅವರು ಆದರ್ಶರಾಗುತ್ತಾರೆ. ಜೊತೆಗೆ ಅವರು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿರುವುದು ಕೂಡ ವಿಶೇಷವಾಗಿದೆ. ಅಂತಹ ಶಾಸಕರನ್ನು ಗ್ರಾಮೀಣ ಕ್ಷೇತ್ರದ ಜನರು ಯಾವುದೇ ಕಾರಣದಿಂದ ಕಳೆದುಕೊಳ್ಳಲು ಇಚ್ಚಿಸುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷ ಬಡವರ ಪರವಾಗಿರುವ ಪಕ್ಷ. ಹಾಗಾಗಿ ಈ ಬಾರಿಯ ಚುನಾವಣೆಯಲ್ಲಿ ಬಡವರ ಪರವಾಗಿ ಹಲವಾರು ಗ್ಯಾರಂಟಿಗಳನ್ನು ಘೋಷಿಸಿದೆ. 200 ಯುನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಪ್ರತಿ ತಿಂಗಳ 2 ಸಾವಿರ ರೂ., ವಿದ್ಯಾವಂತ…
ಮಣಿಪುರದಲ್ಲಿ ಸಂಘರ್ಷ ಮುಂದುವರಿದಿದ್ದರಿಂದ ಮುಖ್ಯ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡಲಾಗಿದೆ. ಡಾ.ರಾಜೇಶ್ ಕುಮಾರ್ ಬದಲಿಗೆ ವಿನೀತ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ. ಮಣಿಪುರದಲ್ಲಿ ನಾಗರಿಕ ಅಶಾಂತಿಯ ನಡುವೆ ಈ ನೇಮಕಾತಿ ನಡೆದಿದೆ. ವಿನೀತ್ ಜೋಶಿ 1992 ರ ಬ್ಯಾಚ್ ಮಣಿಪುರ ಕೇಡರ್ ಐಎಎಸ್ ಅಧಿಕಾರಿ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಹೊಸ ಚಾರ್ಜ್ ಬರುತ್ತದೆ. ದಾಳಿಯ ನಡುವೆ ಮಣಿಪುರದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಏರ್ ಇಂಡಿಯಾ ದೆಹಲಿ-ಇಂಫಾಲ್-ದೆಹಲಿ ವಿಶೇಷ ವಿಮಾನವನ್ನು ಪ್ರಾರಂಭಿಸಿದೆ. ನಿನ್ನೆ ಮಧ್ಯಾಹ್ನ 12.35ಕ್ಕೆ ದೆಹಲಿಯಿಂದ ಹೊರಟ ವಿಮಾನವು 10 ಶಿಶುಗಳು ಸೇರಿದಂತೆ 159 ಪ್ರಯಾಣಿಕರೊಂದಿಗೆ ಇಮ್ ಫಾಲ್‌ನಿಂದ ಹಿಂತಿರುಗಿತು. ಹಿಂಸಾಚಾರ ಪೀಡಿತ ಮಣಿಪುರದಿಂದ ಇದುವರೆಗೆ 23,000 ನಾಗರಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ವಿವಿಧ ಪ್ರದೇಶಗಳಲ್ಲಿ ವೈಮಾನಿಕ ಕಣ್ಗಾವಲು ಸಹ ನಡೆಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮುಂದುವರಿಸಿದ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಪ್ರತಿಭಟನಾ ಜ್ವಾಲೆ ತಾರೆಯರನ್ನು ಬೆಂಬಲಿಸಲು ಬಂದವರು ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜಂತರ್ ಮಂತರ್‌ನಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಯುತ್ತಿದೆ. ಕುಸ್ತಿಪಟುಗಳನ್ನು ಬೆಂಬಲಿಸಲು ನೂರಾರು ಜನರು ಆಗಮಿಸಿದ್ದರು. ರಾಪಿಡ್ ಆಕ್ಷನ್ ಫೋರ್ಸ್, ದೆಹಲಿ ಪೊಲೀಸ್ ಮತ್ತು ಸಿಆರ್‌ಪಿಎಫ್‌ನಂತಹ ಏಜೆನ್ಸಿಗಳ 500 ಕ್ಕೂ ಹೆಚ್ಚು ಜನರು ಜಂತರ್ ಮಂತರ್‌ಗೆ ಭದ್ರತೆಗಾಗಿ ಆಗಮಿಸಿದರು. ಪ್ರತಿಭಟನಾಕಾರರಲ್ಲಿ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ. ಬ್ರಿಜ್ ಭೂಷಣ್ ಅವರನ್ನು ಬಂಧಿಸದಿದ್ದರೆ ದೆಹಲಿಯನ್ನು ಸುತ್ತುವರಿಯಲಾಗುವುದು ಎಂದು ಕುಸ್ತಿಪಟುಗಳು ಎಚ್ಚರಿಸಿದ್ದಾರೆ. ರೈತ ಸಂಘಟನೆಗಳು ಕೂಡ ಜಂತರ್ ಮಂತರ್‌ಗೆ ಆಗಮಿಸಿ ತಾರೆಯರಿಗೆ ಒಗ್ಗಟ್ಟು ವ್ಯಕ್ತಪಡಿಸಿದರು. ರಾಜಕೀಯ ಪ್ರಭಾವದಿಂದ ಬ್ರಿಜ್ ಭೂಷಣ್ ಅವರ ವಿಚಾರಣೆ ವಿಳಂಬವಾಗಿದೆ ಎಂದು ಕುಸ್ತಿಪಟು ಬಜರಂಗ್ ಪೂನಿಯಾ ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಇಂದು SSLC ಫಲಿತಾಂಶ ಪ್ರಕಟವಾಗಲಿದ್ದು, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. 11 ಗಂಟೆಯ ನಂತರ ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಗೊಳ್ಳಲಿದೆ ಎಂದಿದೆ.ಇನ್ನು ಫಲಿತಾಂಶವನ್ನು http://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ. ಮಾರ್ಚ್ 31 ರಿಂದ ಏ. 15ರವರೆಗೆ 2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಬಾರಿ ಶಿಕ್ಷಣ ಸಚಿವರ ಬದಲಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy