Subscribe to Updates
Get the latest creative news from FooBar about art, design and business.
- ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
- ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
- ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
- ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
- ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
- ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
- ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
- ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
Author: admin
ಬೆಂಗಳೂರು: ಸಂಪೂರ್ಣ ಬಹುಮತ ಪಡೆದ ಸರ್ಕಾರ ಯಾವ ರೀತಿ ಅಡಳಿತ ಆರಂಭ ಮಾಡಿ ಯಾವ ರೀತಿ ದಿಕ್ಸೂಚಿ ನೀಡಬೆಕಾಗಿತ್ತು ಅದರ ಬದಲು ದಿಕ್ಕುತಪ್ಪಿದ ಸರ್ಕಾರ ಇದಾಗಿದೆ. ಸರ್ಕಾರ ಗೊಂದಲದಲ್ಲಿ ಸಿಲುಕಿ ಮಾತಿಗೆ ತಪ್ಪಿದ ಸರ್ಕಾರ ಇದಾಗಿದೆ ಎಂದು ಮಾಜಿ ಸಿಎಂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಸರ್ಕಾರವನ್ನ ಟೀಕಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣಕಾಸಿನ ವ್ಯವಸ್ಥೆಯನ್ನು ಹಳಿ ತಪ್ಪಿಸಿದೆ. ನಾವು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇವು ಇವರು ಬಂದ ಮೇಲೆ 8 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಸುಮಾರು 35 ಸಾವಿರ ಕೋಟಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಒಟ್ಟು 45 ಸಾವಿರ ಕೋಟಿ ತೆರಿಗೆ ಮೂಲಕ ಸಂಗ್ರಹಿಸುವ ಅವಕಾಶ ಮಾಡಿಕೊಂಡು 12 ಸಾವಿರ ಕೋಟಿ ಡೆಪಸಿಟ್ ಹೆಚ್ಚಳ ಮಾಡಿಕೊಂಡಿದ್ದಾರೆ. ನಾವು ಕೋವಿಡ್ ನಂತರ ಸರ್ ಪ್ಲಸ್ ಬಜೆಟ್ ಮಾಡಿದ್ದೇವು. ಇವರು ಕೋವಿಡ್ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಾರಿಗೆ ನೌಕರರ ಸಂಬಳ ವಿಳಂಬವಾಗುತ್ತಿದೆ. ಇವರು ಬಂದ ಮೇಲೆ ಒಂದು ಕಿ.ಮೀ. ರಸ್ತೆಯನ್ನೂ…
ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರೆಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ತಿಂಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಸುಳಿವು ನೀಡಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ನಾಲ್ಕನೇ ಭರವಸೆಯಾಗಿರುವ ಗೃಹ ಲಕ್ಷ್ಮೀ ಯೋಜನೆ ನಾಳೆ ಜಾರಿಯಾಗುತ್ತಿದೆ. ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಯಾಗಲಿದೆ ಎಂದರು. ನಾಳೆ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಮೈಸೂರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದರು.
ಮೈಸೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹ ಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ದೊರೆಯಲಿದ್ದು, ಏಕ ಕಾಲದಲ್ಲಿ ರಾಜ್ಯದ ಮನೆಯೊಡತಿಯರಿಗೆ ಯೋಜನೆ ಪಾವತಿಯಾಗಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ನಾಳೆಯ ಕಾರ್ಯಕ್ರಮದ ಸುತ್ತಮುತ್ತ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ವಾಹನ ಸಂಚಾರ ನಿರ್ಬಂಧಿಸಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.
ಮೈಸೂರು: ಸರ್ಕಾರ 100 ದಿನ ಪೂರೈಸಿದ ವಿಚಾರವಾಗಿ ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ನೇತೃತ್ವದ ಸರ್ಕಾರ 100 ದಿನಗಳನ್ನು ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ. ಖುದ್ದು ಪ್ರಧಾನಿಗಳು ಕೂಡ ಗ್ಯಾರಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ ಎಂದರು. ಗೃಹಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದೆಹಲಿ ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇಡಿ ಸಹಾಯಕ ನಿರ್ದೇಶಕ ಪವನ್ ಖತ್ರಿ ಮತ್ತು ಕ್ಲಾರಿಡ್ಜ್ ಹೋಟೆಲ್ ಮುಖ್ಯಸ್ಥ ದೀಪಕ್ ಸಾಂಗ್ವಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿಂದೆ ಪವನ್ ಖತ್ರಿ ಅವರು ಅಮನದೀಪ್ ಅವರಿಂದ 5 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಇಡಿ ಪತ್ತೆ ಹಚ್ಚಿತ್ತು. ಇಡಿ ಕಚೇರಿಯ ಗುಮಾಸ್ತ ಕೂಡ ಆತನೊಂದಿಗೆ ಹಣ ತೆಗೆದುಕೊಂಡು ಹೋಗಿರುವುದು ಪತ್ತೆಯಾಗಿದೆ. ಇದು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅಮನದೀಪ್ ಸಿಂಗ್ ದಾಲ್ ಅವರಿಗೆ ಸಂಬಂಧಿಸಿದ ಪ್ರಕರಣವಾಗಿದೆ. ಅಮನದೀಪ್ ಅವರ ತಂದೆ ಬಿರೇಂದರ್ ಪಾಲ್ ಸಿಂಗ್ ಅವರು ಚಾರ್ಟರ್ಡ್ ಅಕೌಂಟೆಂಟ್ ಪ್ರವೀಣ್ ವಾಟ್ಸ್ ಗೆ 5 ಕೋಟಿ ರೂಪಾಯಿ ಪಾವತಿಸಿದ್ದಾರೆ ಮತ್ತು ಈ ಹಣವನ್ನು ಪವನ್ ಖಾತ್ರಿಗೆ ಹಸ್ತಾಂತರಿಸಲಾಗಿದೆ ಎಂದು ಇಡಿ ಪತ್ತೆ ಮಾಡಿದೆ. ಇಡಿ ಪ್ರಕರಣದ ಬಳಿಕ ಇದೀಗ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.
ಬೆಂಗಳೂರು: ಡೇಟಿಂಗ್ ಆಪ್ ಮೂಲಕ ಸುಲಿಗೆ ಮಾಡ್ತಿದ್ದ ಇಬ್ಬರು ಆರೋಪಿಗಳನ್ನು ಹೆಚ್ ಎಸ್ಎಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನದೀಂ ಪಾಷ ಹಾಗೂ ನಾಗೇಶ್ ಬಂಧಿತ ಆರೋಪಿಗಳು. ಲೊಕ್ಯಾಂಟೋ ಆಪ್ ಮೂಲಕ ಹುಡುಗಿ ಹೆಸರಿಲ್ಲಿ ಕಾಲ್ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ನದೀಂ ಪಾಷ, ನಾಗೇಶ್ ಬಂಧಿತರು. ಆಪ್ ಮೂಲಕ ಹುಡುಗಿ ಹೆಸರಿಲ್ಲಿ ಕಾಲ್ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಮಣಿಪುರ ವಿಧಾನಸಭೆ ಅಧಿವೇಶನ ನಡೆಯಲಿದೆ. ಕುಕಿ ಶಾಸಕರು ಅಧಿವೇಶನ ಬಹಿಷ್ಕರಿಸುವುದಾಗಿ ಘೋಷಿಸಿ ಮುಂದೆ ಬಂದರು. ವಿಧಾನಸಭೆ ಕಲಾಪವನ್ನು ಮುಂದೂಡುವಂತೆ ಶಾಸಕರು ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಏತನ್ಮಧ್ಯೆ, ಸುರಕ್ಷಿತ ಆಶ್ರಯಕ್ಕಾಗಿ ಸರ್ಕಾರಿ ನೌಕರರ ಸಾಮೂಹಿಕ ವರ್ಗಾವಣೆ ಮುಂದುವರೆದಿದೆ. ವಿಧಾನಸಭೆ ಅಧಿವೇಶನದಿಂದ ತಮಗೆ ಭದ್ರತೆಯ ಸಮಸ್ಯೆ ಉಂಟಾಗುತ್ತಿದೆ ಎಂದು ಕುಕಿ ಶಾಸಕರು ಸೂಚಿಸಿ ಪತ್ರ ನೀಡಿದ್ದಾರೆ. ಇಂಫಾಲ ಪ್ರವೇಶಿಸಿ ವಿಧಾನಸಭೆ ಅಧಿವೇಶನವನ್ನು ಮುಂದೂಡುವಂತಿಲ್ಲ ಎಂಬ 10 ಮಂದಿ ಕುಕಿ ಶಾಸಕರ ಬೇಡಿಕೆಗೆ ಸರಕಾರದಿಂದ ಯಾವುದೇ ಅನುಕೂಲಕರ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಜನಪ್ರತಿನಿಧಿಗಳಲ್ಲದೆ ಸರ್ಕಾರಿ ನೌಕರರಿಗೂ ಭದ್ರತೆಯ ಭೀತಿ ಎದುರಾಗಿದೆ. ಕಳೆದ ಒಂದು ತಿಂಗಳಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಸರ್ಕಾರಿ ನೌಕರರು ವರ್ಗಾವಣೆಯನ್ನು ಖರೀದಿಸಿದ್ದಾರೆ. ಗಲಭೆ ಪೀಡಿತ ಮಣಿಪುರದಲ್ಲಿ ಸುರಕ್ಷಿತ ತಾಣಗಳ ಹುಡುಕಾಟದಲ್ಲಿ ಸರ್ಕಾರಿ ನೌಕರರು ಸ್ಥಳಾಂತರಕ್ಕೆ ಒತ್ತಾಯಿಸುತ್ತಿದ್ದಾರೆ. ಡಿಜಿಪಿ ಪಿ. ಡೌಗಲ್ ಮೇಲಿನ ದಾಳಿಯ ನಂತರ, ತ್ರಿಪುರಾ ಕೇಡರ್ ಐಪಿಎಸ್ ಅಧಿಕಾರಿ ರಾಜೀವ್ ಸಿಂಗ್ ಅವರನ್ನು ಮಣಿಪುರ…
ಬೆಂಗಳೂರು: ಬೈಕ್ ಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ನಂದಿನಿ ಲೇಔಟ್ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 3 ಲಕ್ಷ ರೂ. ಮೌಲ್ಯದ 7 ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹಲವು ವರ್ಷಗಳಿಂದ ಬೈಕ್ ಗಳನ್ನು ಕದಿಯುತ್ತಿದ್ದ. ಬೇಗೂರು, ನೆಲಮಂಗಲ, ರಾಜಗೋಪಾಲ್ ನಗರಗಳಲ್ಲಿ ಕೃತ್ಯವೆಸಗಿದ್ದ. ಅಷ್ಟೇ ಅಲ್ಲದೆ ಜೈಲಿಗೆ ಹೋಗಿ ಬಂದು ಮತ್ತೆ ಕಳ್ಳತನ ಮುಂದುವರಿಸಿದ್ದ. ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
“ಮುಂದಿನ 5 ವರ್ಷ ನಿಖಿಲ್ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ” ಎಂದು ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್ ಗೆ ಹೇಳಿದ್ದೇನೆ. ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಇದೆ. ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈಗಾಗಲೇ 3 ಚಿತ್ರ ನಿರ್ಮಾಣ ಮಾಡಲು ಹಲವು ಸಂಸ್ಥೆಗಳು ಬಂದಿವೆ. ಈಗಾಗಲೇ ನಿಖಿಲ್ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಮಂಡ್ಯ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ತಯಾರಿರಲಿಲ್ಲ. ಕಾರ್ಯಕರ್ತರು ಹಾಗೂ ಶಾಸಕರ ಒತ್ತಡಕ್ಕೆ ನಿಖಿಲ್ ತಲೆ ಕೊಟ್ಟ. ಸೋಲು, ಗೆಲವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ. ಹೆಚ್.ಡಿ.ದೇವೇಗೌಡರು, ನಾನು ಚುನಾವಣೆಯಲ್ಲಿ ಸೋತಿಲ್ವಾ? ಎಂದರು.
ಸ್ನೇಹಿತನೊಂದಿಗೆ ತೆರಳುತ್ತಿದ್ದ ಯುವತಿಯನ್ನು ನಿಂದಿಸಿದ್ದಲ್ಲದೇ, ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದ ಆರೋಪದಡಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಪೂರ್ವ ವಿಭಾಗದ ಸೈಬರ್ ಕೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಮೂಲದ ವಿದ್ಯಾರ್ಥಿಯ ವಿರುದ್ಧ 21 ವರ್ಷದ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.