Author: admin

ತುಮಕೂರು:   ಬಿಜೆಪಿಯ ಲಾಲ್ ಕೃಷ್ಣ ಅಡ್ವಾಣಿ ಅವರು 75 ವರ್ಷ ಪೂರ್ಣಗೊಳಿಸಿದ ನಂತರ ಆ ಪಕ್ಷದಲ್ಲಿನ ನಿಯಮಾವಳಿ ಪ್ರಕಾರ ತೆರೆಮರೆಗೆ ಸರಿದಿದ್ದಾರೆ. ಅದೇ ರೀತಿ ಬಿಜೆಪಿ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳು ರಾಷ್ಟ್ರಮಟ್ಟದಲ್ಲಿ ಆಗಬಹುದು ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಬಗೆಗಿನ ಕುರಿತು ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರು ನಿರ್ಧರಿಸಲಿದ್ದಾರೆ ಎಂದರು. ಪ್ರಸ್ತುತ ರಾಜಕೀಯ ಚಟುವಟಿಕೆಗಳಲ್ಲಿ ಸಾಕಷ್ಟು ಊಹಾಪೋಹಗಳು ಕೇಳಿ ಬರುತ್ತಿದ್ದು ಅದಕ್ಕೆ ಯಾವುದೇ ರೀತಿ ಅರ್ಥ ಕಲ್ಪಿಸಬೇಕಿಲ್ಲ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಪಕ್ಷ ಸಾಕಷ್ಟು ಸದೃಢವಾಗಿದೆ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ರಾಜ್ಯದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ ಕೆಲವು ಸಣ್ಣಪುಟ್ಟ ಬದಲಾವಣೆಗಳು ಆಗಬಹುದು ಆದರೆ ಕೆಲವು ಊಹಾಪೋಹಗಳು ಕೂಡ ಇದ್ದು ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ  ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ ಮನೆಯೊಳಗೇ ನುಗ್ಗಿದ್ದ ಪರಿಣಾಮ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಬಿ.ಎಚ್.ರಸ್ತೆಯ ಪಕ್ಕದಲ್ಲಿ  ಜಮೀನಿನಲ್ಲಿ ಪುಟ್ಟಣ್ಣ ಎಂಬುವವರ ಮನೆಗೆ  ಬಸ್ಸು ನುಗ್ಗಿದೆ.  ಆಗುಂಬೆ ಯಿಂದ ಕೋಲಾರ ಹೋಗುತ್ತಿದ್ದ  ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ 10ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಆತನ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಪತಿಯ ಮರ್ಡರ್ ಮಾಡಿರುವ ಘಟನೆ ತುಮಕೂರು ಜಿಲ್ಲೆ,‌ ತಿಪಟೂರು ತಾಲೂಕಿನ ಕಾಡುಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಶಂಕರಮೂರ್ತಿ(50) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಪತ್ನಿ ಸುಮಂಗಳ, ಪ್ರಿಯಕರ ನಾಗರಾಜು‌ ಎಂಬುವನಿಂದ ಕೃತ್ಯ ಜೂನ್ 24ರಂದು ನಡೆದಿದೆ. ಶಂಕರಮೂರ್ತಿ ಅವರ ಕಣ್ಣಿಗೆ‌ ಖಾರದ ಪುಡಿ  ಎರಚಿ, ದೊಣ್ಣೆಯಿಂದ ಹೊಡೆದು, ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಂದು ಹಾಕಲಾಗಿತ್ತು. ತಿಪಟೂರು‌ ನಗರದ ಕಲ್ಪತರು ಕಾಲೇಜಿನ ಗರ್ಲ್ಸ್ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ‌ ಮಾಡಿಕೊಂಡಿದ್ದ ಸುಮಂಗಳ, ಪಕ್ಕದ  ಕರಡಾಳುಸಂತೆ ಗ್ರಾಮದ ನಾಗರಾಜು ಜೊತೆ ಪ್ರೀತಿಸುತ್ತಿದ್ದಳು. ಕೊಲೆ‌ ಮಾಡಿದ ಬಳಿಕ ಮೃತದೇಹವನ್ನ ಗೋಣಿಚೀಲದಲ್ಲಿ ತುಂಬಿ 30 ಕಿಲೋಮೀಟರ್ ದೂರ ಸಾಗಿಸಿರುವ ದುಷ್ಕರ್ಮಿಗಳು, ತುರುವೇಕೆರೆ ತಾಲೂಕಿನ ದಂಡನಿಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಬಾವಿಯೊಂದಕ್ಕೆ ಎಸೆದಿದ್ದರು. ಪೊಲೀಸ್ ಠಾಣೆಯಲ್ಲಿ ಮೊದಲಿಗೆ  ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡಿದ್ದ ನೊಣವಿನಕೆರೆ ಪೊಲೀಸರು, ಅನುಮಾನಗೊಂಡು ಬಳಿಕ ಶಂಕರಮೂರ್ತಿಯ ತೋಟದ ತೆರಳಿ ಪರಿಶೀಲಿಸಿದ್ದರು. ಅಲ್ಲಿ ಶಂಕರಮೂರ್ತಿ ಮಲಗಿದ್ದ‌…

Read More

ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಕಂಪು ಪಸರಿಸಿರುವ ಬಾನು ಮಷ್ತಾಕ್ ಅವರಿಗೆ ಇದೀಗ ಮತ್ತೊಂದು ಗೌರವ ದೊರೆತಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಸರಗೂರು:  ಶಾಲೆಯ ಹಳೆಯ ನೆನಪುಗಳು ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ ಎಂದು  ರಾಷ್ಟ್ರೀಯ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ಸಮಾಜ ಸೇವಕರೂ ಆದ ಸೋಮಣ್ಣ ಅಭಿಪ್ರಾಯಪಟ್ಟರು. ತಾಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಗರೆ ಗ್ರಾಮ ಪ್ರೌಢಶಾಲೆಯಲ್ಲಿ  ಶನಿವಾರದಂದು ಗುರುವಂದನೆ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಗುರುವಂದನಾ,  ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಅಂದಿನಿಂದ ಇಲ್ಲಿಯವರೆಗೂ ಸೇವೆ ಸಲ್ಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ವಿದ್ಯಾರ್ಥಿ ಜೀವನದ ನೂರಾರು ನೆನಪುಗಳು ಕಣ್ಣು ಮುಂದೆ ಬರುವಂತೆ ಮಾಡಿದೆ. ಗುರುವಿನ ಶ್ರೇಷ್ಠತೆ ವಿದ್ಯಾರ್ಥಿ ಜೀವನದಲ್ಲಿ ತಿಳಿಯುವುದಕ್ಕಿಂತ ವೃತ್ತಿ ಜೀವನದ ಪಯಣದಲ್ಲಿ ತಿಳಿಯುವುದು ಹೆಚ್ಚು ಎಂದರು. ಗುರುಗಳ ಮಾರ್ಗದರ್ಶನದಲ್ಲಿ ನಾವು ವಿದ್ಯೆ, ಸಂಸ್ಕಾರವನ್ನು ಕಲಿತು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವುದರಿಂದ ಸಮಾಜದಲ್ಲಿ ದೊಡ್ಡಮಟ್ಟದಲ್ಲಿ ಬೆಳೆದಿದ್ದೇವೆ. ಗುರುಗಳು ನಮ್ಮ ಪಾಲಿಗೆ ದೇವರಿದ್ದಂತೆ. ಇಂದಿನ ಯುವ ಪೀಳಿಗೆ ಗುರುಗಳ ಮಾರ್ಗದಲ್ಲಿ ನಡೆದಾಗ ಸದೃಢ ಸಮಾಜ ನಿರ್ಮಾಣ ಮಾಡಲು…

Read More

ಸರಗೂರು: ತಾಲೂಕಿನಲ್ಲಿ ಯಾವುದಾದರೂ  ಕಾನೂನು ಬಾಹಿರ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬಂದ ಕೂಡಲೇ ನಮ್ಮ ಗಮನಕ್ಕೆ ತನ್ನಿ ಅವರ ಮೇಲೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ವೃತ ನಿರೀಕ್ಷಕ ಪ್ರಸನ್ನ ಕುಮಾರ್ ತಿಳಿಸಿದರು. ಪಟ್ಟಣದ ವೃತ್ತ ನಿರೀಕ್ಷಕ ಕಚೇರಿಯಲ್ಲಿ  ಪತ್ರಕರ್ತರ ಸಭೆ ನಡೆಸಿ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದ ನಂತರ ಮಾತನಾಡಿದರು. ಸರಗೂರು ತಾಲೂಕು ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಅನೇಕ ಸಮಸ್ಯೆಗಳ ಬಗ್ಗೆ ಹಂತ ಹಂತವಾಗಿ ತಿಳಿದುಕೊಳ್ಳಲಾಗುವುದು, ಪಟ್ಟಣ ಇನ್ನಿತರ ಪ್ರದೇಶಗಳಲ್ಲಿ ಜೂಜಾಟ ,ಗಾಂಜಾ, ಅಕ್ರಮ ಲಾಟರಿ, ಅಕ್ರಮ ಮದ್ಯ ಮಾರಾಟ, ಸಂಚಾರ ಸಮಸ್ಯೆ, ಶಾಲಾ ಕಾಲೇಜಿನ ವ್ಯಾಪ್ತಿಯಲ್ಲಿ ಪುಂಡರ ಹಾವಳಿ, ಬಸ್ ನಿಲ್ದಾಣದಲ್ಲಿ ನೋ ಪಾರ್ಕಿಂಗ್ ನಲ್ಲಿ ಕಾರು ಬೈಕ್ ನಿಲ್ಲಿಸುವುದು, ಇನ್ನಿತರ ಸಮಸ್ಯೆಗಳನ್ನು ನಿಯಂತ್ರಿಸುವ ಕ್ರಮ ವಹಿಸಲಾಗುವುದು, ಪಟ್ಟಣದಲ್ಲಿ ಲಾಟರಿ ಮಾರಾಟ ಮಾಡಲು ಮುಂದಾಗಿರುವ ವ್ಯಕ್ತಿಗಳನ್ನು ಕಂಡು ಬಂದರೆ ಸಾರ್ವಜನಿಕರು ನೇರವಾಗಿ ನನಗೆ ಕರೆ ಮೂಲಕ ತಿಳಿಸಿ, ಎರಡನೇ ಮುಖ್ಯ ರಸ್ತೆಯಲ್ಲಿ ಎಸ್.ಬಿ.ಐ ಬ್ಯಾಂಕ್ ಹಾಗೂ ಕರ್ನಾಟಕ…

Read More

ಧಾರವಾಡ: ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ? ಎಂದು ಸಚಿವ ಸಂತೋಷ್ ಲಾಡ್ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. ತುರ್ತು ಪರಿಸ್ಥಿತಿಯ ಬಗ್ಗೆ ಬಿಜೆಪಿ ಚರ್ಚೆ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ಪಹಲ್ಗಾಮ್​​, ಪುಲ್ವಾಮಾ ದಾಳಿ ಕುರಿತು ಕೇಳ‌ಬಾರದು ಎಂದು ಅವರು ಇಂಥ ಅಭಿಯಾನಗಳನ್ನು ತರುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆಗಳು ಜನರಿಗೆ ಗೊತ್ತಾಗಬಾರದೆಂಬುದು ಇವರ ಉದ್ದೇಶ ಎಂದು ಟೀಕಿಸಿದರು. ಇವರ ಪ್ರಕಾರ ನಮ್ಮನ್ನು ಯಾವುದೇ ಬೇರೆ ದೇಶಕ್ಕೆ ಹೋಲಿಸಿ ನೋಡುವಂತಿಲ್ಲ. ಬೇರೆ ರಾಜ್ಯಕ್ಕೂ ಹೋಲಿಸಿ ನೋಡುವಂತಿಲ್ಲ. ನಮ್ಮ ದೇಶವೇ ಗ್ರೇಟ್, ನಮ್ಮ ಪ್ರಧಾನಿಯೇ ಗ್ರೇಟ್. ತುರ್ತು ಪರಿಸ್ಥಿತಿ ಈಗ ಪ್ರಸ್ತುತವೇ? ಚರ್ಚಿಸುವ ವಿಷಯವೇ? ಎಂದು ಅವರು ಕೇಳಿದರು. ಇದೇ ವೇಳೆ, ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡಲಿದ್ದಾರೆ ಎಂಬ ಆರ್.ಅಶೋಕ್ ಹೇಳಿಕೆಗೆ, ಯಾರು ಸಿಎಂ ಆಗ್ತಾರೆ ಅಂತ ಅಶೋಕ್ ಅವರನ್ನೇ ಕೇಳಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು: ಮಹದೇವಪುರದ ಅಪಾರ್ಟ್ಮೆಂಟ್​ವೊಂದರಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯನ್ನೇ ಹತ್ಯೆ ಮಾಡಿ, ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. 38 ವರ್ಷದ ಮಹಿಳೆ ತ್ರಿಪರ್ಣಾ ಪೈಕ್ ದೊಡ್ಡಾನೆಕುಂದಿಯ ಅಕ್ಮೆ ಬ್ಯಾಲೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಸಂಖ್ಯೆ ಜೆ-404 ರಲ್ಲಿ ವಾಸವಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘವು ಅವರ ಫ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಬಿಬಿಎಂಪಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಪಶುಸಂಗೋಪನಾ ತಂಡ ಫ್ಲಾಟ್‌ಗೆ ಭೇಟಿ ನೀಡಿದ್ದು, ಈ ವೇಳೆ ಮಹಿಳೆ ಅಧಿಕಾರಿಗಳು ಮನೆ ಪ್ರವೇಶಿಸಲು ನಿರಾಕರಿಸಿದ್ದಾರೆ. ಬಳಿಕ ಅಧಿಕಾರಿಗಳು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ವೇಳೆ ಹೊಯ್ಸಳ ಗಸ್ತು ತಿರುಗುವ ತಂಡ ಸ್ಥಳಕ್ಕೆ ಬಂದು ಬಿಬಿಎಂಪಿ ತಂಡವನ್ನು ಒಳಗೆ ಬಿಡುವಂತೆ ಮನವೊಲಿಸಿತು. ಅವರು ಒಳಗೆ ಹೋದಾಗ, ದುರ್ವಾಸಣೆ ಬರುತ್ತಿರುವುದು ಕಂಡು ಬಂದಿದೆ. ಅಲ್ಲದೆ, ಎರಡು ನಾಯಿಗಳನ್ನು ಸರಿಯಾಗಿ ನೋಡಿಕೊಳ್ಳದಿರುವುದೂ ಕಂಡು ಬಂದಿದೆ. ಈ ನಡುವೆ ದುರ್ವಾಸನೆಯ ಮೂಲ ಪತ್ತೆಗೆ ಮುಂದಾದಾಗ ಕೊಳೆತು ನಾರುತ್ತಿದ್ದ…

Read More

ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಚ್.ಎ.ರಮೇಶ್ ಅವರಿಗೆ ಬ್ರೈನ್ ಟ್ಯೂಮರ್ ಆಗಿ ಎರಡು ಕಣ್ಣುಗಳು ಕಾಣದಾಗಿದ್ದವು. ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೂ ಸಹ ಕಣ್ಣುಗಳು ಮೊದಲಿನಂತಾಗಲಿಲ್ಲ. ವೈದ್ಯರು ಕೂಡ ದೇವರ ಮೇಲೆ ಭಾರ ಹಾಕಿ ಇನ್ನೆರಡು ತಿಂಗಳಲ್ಲಿ ಕಣ್ಣು ಬಂದರು ಬರಬಹುದು ಎಂದು ಹೇಳಿ ಕಳಿಸಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸಾಕಿ ಸಲುಹಬೇಕಿದ್ದ  ಕುಟುಂಬದ ಯಜಮಾನ ಎರಡು ಕಣ್ಣು ಕಾಣದೆ ಅಸಹಾಯಕ ಸ್ಥಿತಿಗೆ ಜಾರಿಕೊಂಡಿದ್ದ ಪರಿಣಾಮ ಮಕ್ಕಳ ವಿದ್ಯಾಭ್ಯಾಸ ಕುಟುಂಬದ ನಿರ್ವಹಣೆ ನೆನೆದು ಪತ್ನಿ ಚಿಂತಾಕ್ರಾಂತರಾಗಿದ್ದರು. ವಿಷಯ ತಿಳಿದ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಪತ್ರಕರ್ತನ ಮನೆಗೆ ಧಾವಿಸಿ ಬಂದು ವೈಯಕ್ತಿಕವಾಗಿ ಐವತ್ತು ಸಾವಿರ ಧನಸಹಾಯ ನೀಡಿದರು. ಅಲ್ಲದೆ ಪತ್ರಕರ್ತರ ಪತ್ನಿಗೆ ಉದ್ಯೋಗ ಕೊಡಿಸುವ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಭರವಸೆಯನ್ನ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿ ಬಂದಿದ್ದಾರೆ. ಶಾಸಕ ಸಿ.ಬಿ.ಸುರೇಶ್…

Read More

ಕೊರಟಗೆರೆ : ಗ್ರಾಮೀಣ ಭಾಗದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಅದನ್ನು ನಿರ್ವಹಿಸುವುದು ಬಹಳ ಕಷ್ಠ. ಡಯಾಲಿಸಿಸ್ ಸೆಂಟರ್ ಕೊರಟಗೆರೆ ಜನತೆಯ ಆಸ್ತಿ, ಇದನ್ನು  ನೀವೇ ಕಾಪಾಡಿಕೊಳ್ಳಬೇಕು ಎಂದು ಪಾವಗಡ ರಾಮಕೃಷ್ಣ ಆಶ್ರಮದ ಜಪಾನಂದ ಸ್ವಾಮೀಜಿ ತಿಳಿಸಿದರು. ಸಿದ್ದರಬೆಟ್ಟ ರೋಟರಿ ಸಂಸ್ಥೆ ಮತ್ತು ರೇಣುಕಾ ಆಸ್ಪತ್ರೆ ಸಹಯೋಗದಲ್ಲಿ ನೂತನವಾಗಿ ಆರಂಭಿಸಿದ ರೋಟರಿ–ರೇಣುಕಾ ಡಯಾಲಿಸಿಸ್ ಸೆಂಟರ್‌ನ್ನು ಶ್ರೀಗಳು ತಮ್ಮ ಅಮೃತ ಹಸ್ತದಿಂದ ಚಾಲನೆ ನೀಡಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ರಾಮಕೃಷ್ಣ ಆಶ್ರಮದಿಂದ ಈಗಾಗಲೇ ಮಧುಗಿರಿಯಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಪ್ರತಿನಿತ್ಯ ಹತ್ತಾರು ಮಂದಿ ರೋಗಿಗಳಿಗೆ ಹಾರೈಕೆ ಮಾಡುತ್ತಿದ್ದು, ಉಚಿತವಾಗಿ 30 ಸಾವಿರ ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ, 650 ಮಂದಿ ಅಂಗವಿಕಲರಿಗೆ ಚಿಕಿತ್ಸೆ, ಇಲ್ಲಿಯವರೆಗೂ ತುಮಕೂರು ವಿವಿಯಲ್ಲಿ 8.60 ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಆಹಾರ ಒದಗಿಸಿದ್ದು, 4 ಕೋಟಿಗೂ ಅಧಿಕ ಹಣ ಖರ್ಚಾಗಿದೆ. ಆಧ್ಯಾತ್ಮಿಕ ಶಕ್ತಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ಶ್ರೀಮಠ ಸಾಗುತ್ತಿದೆ ಎಂದು ಹೇಳಿದರು. ಸಿದ್ದರಬೆಟ್ಟ…

Read More