Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ತಿಪಟೂರು: ನಿರುದ್ಯೋಗಿ ಯುವಕ–ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜನವರಿ 31ರ ಶನಿವಾರದಂದು ನಗರದ ಎಸ್.ವಿ.ಪಿ. ವಿದ್ಯಾಸಂಸ್ಥೆಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಈ ಮೇಳವನ್ನು ಉದ್ಘಾಟಿಸಲಿದ್ದಾರೆ. ತಾಲೂಕಿನಲ್ಲಿ ವಿದ್ಯೆ ಇದ್ದರೂ ಉದ್ಯೋಗವಿಲ್ಲದೆ ಸಂಕಷ್ಟದಲ್ಲಿರುವ ನಿರುದ್ಯೋಗಿಗಳಿಗಾಗಿ ಇದು ಮೂರನೇ ಬಾರಿ ಆಯೋಜಿಸುತ್ತಿರುವ ಬೃಹತ್ ಮೇಳವಾಗಿದೆ ಎಂದು ಹೇಳಿದರು. ಅರ್ಹತೆ ಮತ್ತು ನೋಂದಣಿ ವಿವರ: ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಫಾರ್ಮಸಿ ಸೇರಿದಂತೆ ಬಿ.ಎ., ಬಿ.ಕಾಂ ನಂತಹ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು. ಈಗಾಗಲೇ 500ಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿಗೆ ಇನ್ನು ಮೂರು ದಿನಗಳ ಕಾಲಾವಕಾಶವಿದ್ದು, ಆಸಕ್ತರು ಶೀಘ್ರವಾಗಿ ಹೆಸರು ನೋಂದಾಯಿಸಿಕೊಳ್ಳಲು ಕೋರಿದ್ದಾರೆ. ಸ್ಥಳದಲ್ಲೇ ನೇಮಕಾತಿ ಪತ್ರ: ಈ ಮೇಳದಲ್ಲಿ 80ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಆಯ್ಕೆಯಾದ…
ಗುಬ್ಬಿ: ಗುಬ್ಬಿ ತಾಲೂಕಿನ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹಲಸಿನ ನಾಗೇನಹಳ್ಳಿ ಗ್ರಾಮದ ಕಾಂತರಾಜು ಎರಡು ಮತಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದರು. ಈ ಹಿಂದೆ ಅಧ್ಯಕ್ಷರಾಗಿದ್ದ ನರಸಯ್ಯ ಅವರ ಅವಿಶ್ವಾಸದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂತರಾಜು ದಿಲೀಪ್ ಕುಮಾರ್ ಹಾಗೂ ಲೋಕೇಶ್ ಮೂರು ಜನ ನಾಮಪತ್ರವನ್ನು ಸಲ್ಲಿಸಿದ್ದರು. ಮತ್ತಿಕೆರೆ ಗ್ರಾಮದ ಲೋಕೇಶ್ ರವರು ನಾಮಪತ್ರವನ್ನು ವಾಪಸ್ ಪಡೆದರು. ಚುನಾವಣೆ ಕಣದಲ್ಲಿ ಕಾಂತರಾಜು ಹಾಗೂ ದಿಲೀಪ್ ಕುಮಾರ್ ಇಬ್ಬರು ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಗಳು ಚುನಾವಣೆಯನ್ನು ನಡೆಸಿದರು. ಕಾಂತರಾಜ್ ಒತ್ತು ಮತಗಳನ್ನು ಪಡೆದರೆ ಪ್ರತಿಸ್ಪರ್ಧಿ ದಿಲೀಪ್ ಕುಮಾರ್ 8 ಮತಗಳನ್ನು ಪಡೆದು ಪರಾಜಿತಗೊಂಡರು 10 ಮತಗಳನ್ನು ಪಡೆದ ಕಾಂತರಾಜ್ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣೆ ಪ್ರಕ್ರಿಯೆಯನ್ನು ಉಪ ತಹಶೀಲ್ದಾರ್ ಪ್ರಶಾಂತ್ ನಡೆಸಿಕೊಟ್ಟರು. ನೂತನ ಅಧ್ಯಕ್ಷ ಕಾಂತರಾಜು ಮಾತನಾಡಿ, ನನ್ನನ್ನು ಅಧ್ಯಕ್ಷರಾಗಿ ಮಾಡಿದ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮೆಲ್ಲಾ ಸದಸ್ಯರ ಸಹಕಾರದೊಂದಿಗೆ ಎಂ.ಎನ್.ಕೋಟೆ…
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಪ್ರಮುಖ ನಾಯಕರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ ಎನ್ನಲಾದ ವೈರಲ್ ಆಡಿಯೋ ಕುರಿತು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಆಡಿಯೋ ನಕಲಿ ಹಾಗೂ ಎಐ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ಪಿತೂರಿ ಎಂದು ಅವರು ಆರೋಪಿಸಿದ್ದಾರೆ. ಘಟನೆಯ ಹಿನ್ನೆಲೆ: ನಾಗಮಂಗಲದ ಜೆಡಿಎಸ್ ಕಾರ್ಯಕರ್ತರೊಬ್ಬರ ಜೊತೆ ಶಿವರಾಮೇಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಅದರಲ್ಲಿ ಅವರು ಕುಮಾರಸ್ವಾಮಿ ಹಾಗೂ ದಿವಂಗತ ಅಂಬರೀಶ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಹೇಳಲಾಗಿತ್ತು. ಎಐ ತಂತ್ರಜ್ಞಾನದ ಬಳಕೆ: “ವೈರಲ್ ಆಗಿರುವ ಆಡಿಯೋದಲ್ಲಿರುವ ಬಹುತೇಕ ಮಾತುಗಳು ನನ್ನದಲ್ಲ. ಕೇವಲ 2 ನಿಮಿಷ 42 ಸೆಕೆಂಡ್ ಇದ್ದ ಆಡಿಯೋವನ್ನು ಎಐ ತಂತ್ರಜ್ಞಾನ ಬಳಸಿ 20 ನಿಮಿಷಕ್ಕೆ ವಿಸ್ತರಿಸಲಾಗಿದೆ. ತಮಗೆ ಬೇಕಾದ ಪದಗಳನ್ನು ಸೇರಿಸಿ ನನ್ನ ತೇಜೋವಧೆ ಮಾಡಲು ಈ ಸಂಚು ರೂಪಿಸಲಾಗಿದೆ,” ಎಂದು ಅವರು ತಿಳಿಸಿದ್ದಾರೆ. ಫೋನ್…
ಬೆಂಗಳೂರು: ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ಅವರು ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ನಗರದಲ್ಲಿ ಸರಣಿ ಅಪಘಾತ ಎಸಗಿದ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಈ ಸಂಬಂಧ ಹಲಸೂರು ಸಂಚಾರಿ ಪೊಲೀಸರು ನಟನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ವಿವರ: ಹಿರಿಯ ನಟ ಮದನ್ ಪಟೇಲ್ ಅವರ ಪುತ್ರ ಮಯೂರ್ ಪಟೇಲ್ ಅವರು ಬುಧವಾರ ರಾತ್ರಿ ತಮ್ಮ ಟೊಯೊಟಾ ಫಾರ್ಚೂನರ್ ಕಾರಿನಲ್ಲಿ ದೊಮ್ಮಲೂರು ರಸ್ತೆಯಾಗಿ ಸಂಚರಿಸುತ್ತಿದ್ದರು. ಈ ವೇಳೆ ಅತಿಯಾದ ವೇಗ ಮತ್ತು ಮದ್ಯದ ಅಮಲಿನಲ್ಲಿದ್ದ ಅವರು ಕಾರಿನ ಮೇಲಿನ ನಿಯಂತ್ರಣ ಕಳೆದುಕೊಂಡು, ರಸ್ತೆ ಬದಿ ನಿಂತಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಸರಣಿ ಅಪಘಾತದಲ್ಲಿ ಶ್ರೀನಿವಾಸ್ ಮತ್ತು ಅಭಿಷೇಕ್ ಎಂಬುವವರಿಗೆ ಸೇರಿದ ವಾಹನಗಳು ಸೇರಿದಂತೆ ಒಂದು ಸರ್ಕಾರಿ ವಾಹನಕ್ಕೂ ಭಾರೀ ಹಾನಿಯಾಗಿದೆ. ಅಪಘಾತದ ತೀವ್ರತೆಗೆ ಸ್ಥಳೀಯರು ಮತ್ತು ಪಾದಚಾರಿಗಳು ಆತಂಕಗೊಂಡಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಗಸ್ತು ಪಡೆಯು ನಟ ಮಯೂರ್ ಪಟೇಲ್…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಮೇಲೆ ಗುಟ್ಕಾ ಮತ್ತು ಪಾನ್ ಮಸಾಲಾ ಜಾಹೀರಾತುಗಳನ್ನು ಪ್ರದರ್ಶಿಸುತ್ತಿರುವುದಕ್ಕೆ ಸಾರ್ವಜನಿಕರಿಂದ ಮತ್ತು ಕನ್ನಡಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಸ್ ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. ಶೇ. 40ರಷ್ಟು ಮಾತ್ರ ಅವಕಾಶ: ಬಸ್ ಗಳ ಹೊರಭಾಗದ ಒಟ್ಟು ವಿಸ್ತೀರ್ಣದಲ್ಲಿ ಕೇವಲ ಶೇ. 40ರಷ್ಟು ಜಾಗವನ್ನು ಮಾತ್ರ ಜಾಹೀರಾತುಗಳಿಗೆ ಬಳಸಲು ಅವಕಾಶವಿದೆ. ಆದರೆ ಕೆಲವು ಬಸ್ ಗಳಲ್ಲಿ ಸಂಪೂರ್ಣವಾಗಿ (Full Cover) ಜಾಹೀರಾತು ಹಾಕುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂದು ಸಚಿವರು ಒಪ್ಪಿಕೊಂಡಿದ್ದಾರೆ. ಎರಡು ತಿಂಗಳ ಹಿಂದೆಯೇ ಸೂಚನೆ: ಈ ಬಗ್ಗೆ ಎರಡು ತಿಂಗಳ ಹಿಂದೆಯೇ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದ್ದು, ನಿಯಮ ಮೀರಿ ಜಾಹೀರಾತು ಪ್ರದರ್ಶಿಸದಂತೆ ತಿಳಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಆದಾಯದ ಮೂಲ: ಬಿಎಂಟಿಸಿಗೆ ಜಾಹೀರಾತುಗಳ ಮೂಲಕ ವಾರ್ಷಿಕವಾಗಿ ಸುಮಾರು 60 ಕೋಟಿ ರೂಪಾಯಿ…
ದೊಡ್ಡಆಲದಮರ(ಹನುಮಂತನಗರ), ಜೋಡಿದೇವರಹಳ್ಳಿ, ನಾಗೇನಹಳ್ಳಿ, ಜೋಗಿಹಳ್ಳಿ, ಸೀಬಿಅಗ್ರಹಾರ, ಕುಂಟೇಗೌಡನಹಳ್ಳಿ, ನೆಲದಿಮ್ಮನಹಳ್ಳಿ, ಬಾಳಬಸವನಹಳ್ಳಿ, ಕಾಳೆನಳ್ಳಿ, ಅಮಲಗುಂದಿ, ಎಲ್. ಎಚ್. ಪಾಳ್ಯ, ಅಜ್ಜಯನಪಾಳ್ಯ, ಕಾಗೆನಿಂಗನಹಳ್ಳಿ, ಭೋವಿಪಾಳ್ಯ, ಎಲದಬಾಗಿ, ಮತ್ತು ಜವನಹಳ್ಳಿ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಬ್ರಹ್ಮಸಂದ್ರ ಕೆಪಿಎಸ್ ಮ್ಯಾಗ್ನೆಟ್ ಅಡಿಯಲ್ಲಿ ಮುಚ್ಚುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ, ಇಂದು ದೊಡ್ಡಆಲದಮರದಲ್ಲಿ ಬೃಹತ್ ಪೋಷಕರ ಪ್ರತಿಭಟನಾ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ AIDSO ರಾಜ್ಯ ಉಪಾಧ್ಯಕ್ಷರಾದ ಚಂದ್ರಕಲಾರವರು ಮಾತನಾಡುತ್ತಾ, “ಅಕ್ಟೋಬರ್ 15 ಹಾಗೂ ಡಿಸೆಂಬರ್ 30 2025 ರಂದು ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಆದೇಶಗಳ ಪ್ರಕಾರ, ರಾಜ್ಯಾದಾದ್ಯಂತ ಗ್ರಾಮ ಪಂಚಾಯಿತಿಗೆ ಒಂದು ಸರ್ಕಾರಿ ಶಾಲೆಯಂತೆ, ಕೇವಲ ೬೦೦೦ ಶಾಲೆಗಳು ಉಳಿದು ೪೦,೦೦೦ ಸರ್ಕೆಕಾರಿ ಶಾಲೆಗಳು ನಶಿಸುವವು. ಅಂದರೆ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಐದು ಕಿಲೋಮೀಟರ್ ವ್ಯಾಪ್ತಿಯ ಉಳಿದ ಎಲ್ಲಾ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ಇದಾಗಿದೆ. ಈಗಾಗಲೇ ಕಳೆದ 15 ವರ್ಷಗಳಲ್ಲಿ ರಾಜ್ಯ ಸರ್ಕಾರದ ಪ್ರಕಾರ 17 ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ…
ಗುಬ್ಬಿ: ಗುಬ್ಬಿ ತಾಲೂಕಿನ ತ್ಯಾಗಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜನವರಿ 30ರಂದು ನೂರು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದುಳಿದ ವರ್ಗದ ಮಾಜಿ ಸದಸ್ಯ ಯೋಗಾನಂದ ಕುಮಾರ್ ತಿಳಿಸಿದರು. ಗುಬ್ಬಿ ತಾಲೂಕಿನ ತ್ಯಾಗಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತ್ಯಾಗಟೂರು ಸರ್ಕಾರಿ ಶಾಲೆ ನೂರು ದಿನದ ಸಂಭ್ರಮಾಚರಣೆಯಲ್ಲಿದೆ. ಈ ಸರ್ಕಾರಿ ಶಾಲೆಯಲ್ಲಿ 130 ಮಕ್ಕಳು ಇದ್ದು, ಇಲ್ಲಿನ ಶಿಕ್ಷಕರು ಶಿಕ್ಷಕಿಯರು ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಹಿನ್ನಲೆಯಲ್ಲಿ ಶತಮನೋತ್ಸವ ಆಚರಿಸಿಕೊಳಲು ಸಿದ್ದವಾಗಿದೆ. ಶತಮಾನೋತ್ಸವಕ್ಕೆ ಕಾರ್ಯಕ್ರಮಕ್ಕೆ ತುಮಕೂರು ರಾಮಕೃಷ್ಣ ಮಠದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಗಳು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ವಹಿಸಲಿದ್ದು, ಅಧ್ಯಕ್ಷತೆಯನ್ನು ತೆಂಗು ನಾರು ಮಹಾಮಂಡಳಿಯ ನಿಕಟಪೂರ್ವ ಅಧ್ಯಕ್ಷರಾದ ಟಿಎಸ್ ಕಿಡಿಗಾರಪ್ಪ ವಹಿಸಲಿದ್ದಾರೆ. ಸಂಜೆ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ತುಮಕೂರು ಉಸ್ತುವಾರಿ ಸಚಿವ ಜಿ ಪರಮೇಶ್ವರ್ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ವಹಿಸಲಿದ್ದಾರೆ. ಎಂದು ತಿಳಿಸಿದರು. ಗ್ರಾಮ…
ಕೊರಟಗೆರೆ: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಎಂದು ಪೊಲೀಸ್ ಇಲಾಖೆಯ ಪಿಎಸ್ ಐ ತೀರ್ಥೇಶ್ ತಿಳಿಸಿದರು. ಪಟ್ಟಣದಲ್ಲಿ ತಾಲೂಕು ದಲಿತ ಸಂಘರ್ಷ ಸಮಿತಿ ಸಹಯೋಗದಲ್ಲಿ ಪೊಲೀಸ್ ಇಲಾಖೆ ವತಿಯಿಂದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ ಸಂಚಾರ ನಿಯಮಗಳನ್ನು ಅನುಸರಿಸಬೇಕು ಹಾಗೂ ಕಾರುಗಳಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸುವುದು ಮತ್ತು ಚಾಲನಾ ಪರವಾನಗಿ, ಇನ್ಶೂರೆನ್ಸ್ ಸೇರಿದಂತೆ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ಸಾವು, ನೋವುಗಳನ್ನು ತಪ್ಪಿಸಬಹುದು ಎಂದು ಹೇಳಿದರು. ದಲಿತ ಸಂಘರ್ಷ ಸಮಿತಿ ತಾ.ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಅಪಘಾತಗಳನ್ನು ತಡೆಯಲು ಹಲವು ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅನುಸರಿಸಬೇಕು, ದ್ವಿಚಕ್ರ ವಾಹನ ಸವಾರರು ಮನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದ್ದು, ಅಪಘಾತಗಳ ತಡೆಗೆ ಇಂತಹ ಅಭಿಯಾನಗಳು ಸಹಕಾರಿಯಾಗಲಿವೆ…
ತುರುವೇಕೆರೆ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ (ಮೂಲ ಸಂಘಟನೆ) ತಾಲೂಕು ಅಧ್ಯಕ್ಷರಾಗಿ ಕಣಕೂರು ಚಂದ್ರಶೇಖರ್ ರವರು ಆಯ್ಕೆಯಾಗಿದ್ದಾರೆ. ತಿಪಟೂರು ತಾಲ್ಲೂಕಿನ ನೊಣವಿನಕೆರೆಯ ಶ್ರೀ ಕ್ಷೇತ್ರ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ತಾಲೂಕುಗಳ ಅಧ್ಯಕ್ಷರ ಆಯ್ಕೆಯ ಸಭೆಯಲ್ಲಿ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷರಾದ ಮಹದೇವಯ್ಯ ಮತ್ತು ಜಿಲ್ಲಾಧ್ಯಕ್ಷರಾದ ಬಿ.ಆರ್.ಯೋಗೇಶ್ ಗೌಡ ರವರು ಅಧಿಕೃತವಾಗಿ ಆದೇಶ ಪತ್ರ ನೀಡಿದ್ದಾರೆ ಎಂದು ನೂತನ ಅಧ್ಯಕ್ಷರಾದ “ಕಣಕೂರು ಚಂದ್ರಶೇಖರ್ “ಮಾಧ್ಯಮಕ್ಕೆ ತಿಳಿಸಿದ್ದಾರೆ. ಸಭೆಯಲ್ಲಿ ಹಾಸನ ಜಿಲ್ಲಾಧ್ಯಕ್ಷರಾದ ರೂಪತಾರ, ತಿಪಟೂರು ತಾಲೂಕು ಅಧ್ಯಕ್ಷರಾದ ಈಶ್ವರ್, ಶಿರಾ ತಾಲೂಕು ಮಹಿಳಾ ಅಧ್ಯಕ್ಷರಾದ ನಾಗರತ್ನ, ತುಮಕೂರು ಗ್ರಾಮಾಂತರ ಅಧ್ಯಕ್ಷರಾದ ನಟರಾಜು ಸೇರಿದಂತೆ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳು ವಿವಿಧ ತಾಲೂಕುಗಳ ಅಧ್ಯಕ್ಷರುಗಳು ಭಾಗವಹಿಸಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿ, ಶುಭ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸತ್ನಾ (ಮಧ್ಯಪ್ರದೇಶ): ವೈದ್ಯಕೀಯ ತುರ್ತು ಸಂದರ್ಭದಲ್ಲಿ ಜೀವ ಉಳಿಸಬೇಕಾದ ಆಂಬುಲೆನ್ಸ್ ವ್ಯವಸ್ಥೆಯ ನಿರ್ಲಕ್ಷ್ಯದಿಂದಾಗಿ 67 ವರ್ಷದ ವೃದ್ಧರೊಬ್ಬರು ಆಸ್ಪತ್ರೆಯ ಗೇಟ್ ತಲುಪಿದರೂ ಚಿಕಿತ್ಸೆ ಸಿಗದೆ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದ ಸತ್ನಾದಲ್ಲಿ ನಡೆದಿದೆ. ಘಟನೆಯ ವಿವರ: ರಾಮನಗರ ನಿವಾಸಿ ರಾಮ್ ಪ್ರಸಾದ್ (67) ಎಂಬುವವರು ಶನಿವಾರ ಬೆಳಿಗ್ಗೆ ಚಳಿ ಕಾಯಿಸಿಕೊಳ್ಳುತ್ತಿದ್ದಾಗ ದಿಢೀರನೆ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಸತ್ನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು. ಕುಟುಂಬಸ್ಥರು ರಾಮ್ ಪ್ರಸಾದ್ ಅವರನ್ನು 108 ಆಂಬುಲೆನ್ಸ್ ಮೂಲಕ ಸತ್ನಾ ಜಿಲ್ಲಾ ಆಸ್ಪತ್ರೆಗೆ ಕರೆತಂದರು. ಆದರೆ, ಆಸ್ಪತ್ರೆಯ ಆವರಣ ತಲುಪಿದಾಗ ಆಂಬುಲೆನ್ಸ್‌ನ ಹಿಂಭಾಗದ ಬಾಗಿಲು (Door) ಒಳಗಿನಿಂದ ಜಾಮ್ ಆಗಿತ್ತು. ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಬಾಗಿಲು ತೆರೆಯಲು ಸಾಧ್ಯವಾಗಲಿಲ್ಲ. ಪ್ರಾಣ ಉಳಿಸಲು ಹರಸಾಹಸ: ರೋಗಿಯ ಸ್ಥಿತಿ ಗಂಭೀರವಾಗಿದ್ದರಿಂದ ಆತಂಕಕ್ಕೊಳಗಾದ ಸಂಬಂಧಿಕರು ಮತ್ತು ಆಂಬುಲೆನ್ಸ್ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಚಾಲಕ ಕಿಟಕಿಯ ಮೂಲಕ ಒಳಗೆ…