Author: admin

ತುಮಕೂರು: ಬಿಜೆಪಿ ಪ್ರಣಾಳಿಕೆಯಲ್ಲಿ ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿ ವಿಚಾರಕೇ ಸಂಬಂಧಿಸಿದಂತೆ ಏಕರೂಪ ನಾಗರಿಕ ಸಂಹಿತೆ ಜಾರಿಯಾದ್ರೆ ದಲಿತರ ಮೇಲೆ ಪ್ರಭಾವ ಬೀರಲ್ಲ ಎಂದು ಕೇಂದ್ರ ಸಚಿವ ಎ ನಾರಾಯಣ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಮಾತನಾಡಿದ ಅವರು, ದಲಿತರ ವಿರುದ್ದ ಚಕಾರ ಎತ್ತುವ ಧೈರ್ಯ ದೇಶದಲ್ಲಿ ಯಾವುದೇ ಪಾರ್ಟಿ ಅಧಿಕಾರಕ್ಕೆ ಬಂದರೂ ಸಾದ್ಯವಿಲ್ಲ. ದಲಿತರ ವಿರುದ್ದವಾಗಿ ಸಂಸತ್ ನಲ್ಲಿ ಇದುವರೆಗೂ ಒಂದೇ ಒಂದು ಹೇಳಿಕೆ ಕೇಳಿ ಬಂದಿಲ್ಲ‌ ಎಂದರು. ದಲಿತರಿಗೆ  ತೊಂದರೆಯಾಗುವಂತಹ ಯಾವುದೇ ಕಾನೂನು ಬಿಜೆಪಿ ಜಾರಿಗೆ ತರುವುದಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ  ನೀಡಿದೆ‌ ಎಂದರು. ಚುನಾವಣೆಗಾಗಿ ಕೊಡುವುದಾದ್ರೇ ಬೇಡಾ..ಎಂದು ಆರ್ ಎಸ್ ಎಸ್, ಸಂಘ ಪರಿವಾರ ಎಲ್ಲರೂ ಸಹಮತ ನೀಡಿ‌ ಒಳಮೀಸಲಾತಿ‌ ಜಾರಿ ಮಾಡಿದೆ. ಕೇಂದ್ರದಲ್ಲೂ ಪ್ರಧಾನಿ ಮೋದಿಯವರು ಒಳಮೀಸಲಾತಿಯನ್ನ  ಅನುಮೋದನೆ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು. ಬಿಜೆಪಿ ಋಣ ತೀರಿಸುವ ಕೆಲಸವನ್ನ ಸಮಾಜ ಮಾಡುತ್ತದೆ ಎನ್ನುವ ನಂಬಿಕೆ ಇದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ತುರುವೇಕೆರೆ: ರಾಜ್ಯಾದ್ಯಂತ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಇವರಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೊಡಗಿಹಳ್ಳಿ ಹನುಮಂತಯ್ಯ ಹೇಳಿದರು. ಕೊಡಗಿಹಳ್ಳಿ ಹನುಮಂತಯ್ಯ ನವರು ಬೆಮೆಲ್ ಕಾಂತರಾಜುರವರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯದಲ್ಲಿ 16 ದಲಿತ ಸಂಘಟನೆ ಒಕ್ಕೂಟಗಳ ವತಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಕುರಿತಂತೆ ನಾವು ಈ ಬಾರಿ ಷರತ್ತು ಬದ್ಧವಾಗಿ ಬೆಂಬಲಿಸಲಿದ್ದೇವೆ ಎಂದರು. ದಲಿತ ಸಂಘಟನೆಗಳ ಐಕ್ಯತ ಒಕ್ಕೂಟದ ಮುಖಂಡ ಮಾ.ನ. ಗುರುದತ್ ಮಾತನಾಡಿ ಸಂವಿಧಾನವನ್ನೇ ಬದಲಾಯಿಸುತ್ತೇವೆಂದು ಹೇಳಿಕೊಂಡವರನ್ನು ನಾವು ಸೋಲಿಸಬೇಕಿದೆ.  223 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ನ್ನು ಬೆಂಬಲಿಸಲು ಕೇಂದ್ರ ಸಮಿತಿಯು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಆದೇಶ ನೀಡಿದೆ ಎಂದರು. ಕಾರಣ ಇಷ್ಟೇ ದಲಿತರನ್ನು ತುಳಿಯುತ್ತಿರುವಂತಹ ಸಮಾಜ ವಿರೋಧಿ ಬಿಜೆಪಿಯನ್ನು ಬೆಂಬಲಿಸದಿರಲು ಕೇಂದ್ರ ಸಮಿತಿಯಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ನಾವು ಪತ್ರಿಕಾ ಹೇಳಿಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು. ಚಲವಾದಿ ಮಹಾಸಭಾಧ್ಯಕ್ಷ ಡೊಂಕಿಹಳ್ಳಿ ರಾಮಣ್ಣ…

Read More

ಹಾಸನ: ಪತಿಯ ಸಾವಿನ ಆಘಾತವನ್ನು ಸಹಿಸಲಾಗದೇ ಪತ್ನಿಯು ತೀವ್ರವಾಗಿ ರೋದಿಸುತ್ತಲೇ ಪತಿಯ ಮೃತದೇಹದ ಮುಂದೆಯೇ ಪ್ರಾಣ ಬಿಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಪಡುವಳಲು ಗ್ರಾಮದಲ್ಲಿ ಇಂದು ನಡೆದಿದೆ. ನಿನ್ನೆ ರಾತ್ರಿ ಪತಿ ರವೀಶ್(39) ಹೃದಯಾಘಾತದಿಂದ ಮೃತಪಟ್ಟಿದ್ದು, ಇಂದು ಬೆಳಗ್ಗೆ ಪತಿಯ ಮೃತದೇಹದ ಮುಂದೆ ಅಳುತ್ತಿದ್ದ ಪತ್ನಿ ಪ್ರಮೀಳಾ(32) ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆನ್ನಲಾಗಿದೆ. ಪತಿ ಪತ್ನಿ ಸಾವಿನಲ್ಲೂ ಒಂದಾಗಿದ್ದರೆ, ಇತ್ತ ಇಬ್ಬರು ಗಂಡು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪಾಲಕರ ಮೃತದೇಹದ ಮುಂದೆ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹೆಚ್.ಡಿ.ಕೋಟೆಯ ಕೆ.ಎಡತೊರೆ ಗ್ರಾಮದಲ್ಲಿ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ಕೆ.ಎಡತೊರೆ ಗ್ರಾಮದಲ್ಲಿನ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶಾಸಕ ಅನಿಲ್ ಚಿಕ್ಕಮಾದುರವರ ಬರುವಿಕೆಯನ್ನು ಕಾಯುತ್ತಿದ್ದರು. ಈ ವೇಳೆ ಇದೇ ಮಾರ್ಗವಾಗಿ ಟೈಗರ್ ಬ್ಲಾಕ್ ಬಿಜೆಪಿ ಕಾರ್ಯಕರ್ತರು ಬೈಕ್ ಗಳಲ್ಲಿ ತೆರಳುತ್ತಿದ್ದರು. ಇವರಿಗೆ ಕಾಂಗ್ರೆಸ್ ನ ಕಾರ್ಯಕರ್ತರು ರಸ್ತೆ ಬಿಟ್ಟಿಲ್ಲ ಎನ್ನಲಾಗಿದೆ. ಅಲ್ಲದೇ ಬೈಕ್ ನಲ್ಲಿದ್ದ ಬಿಜೆಪಿ ಬಾವುಟಗಳನ್ನು ಕಿತ್ತುಕೊಂಡು ಧ್ವಜವನ್ನು ತುಳಿದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೆಲ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಇದರಿಂದಾಗಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಕೈ ಕೈ ಮಿಲಾಯಿಸಿದ್ದಾರೆ. ಇದೇ ವೇಳೆ ಸ್ಥಳದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಶಾಸಕ ಅನಿಲ್ ಚಿಕ್ಕಮಾದು ಗಲಾಟೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಸಮಾಧಾನಪಡಿಸದೆ ಕಾರ್ ಹತ್ತಿ ಸ್ಥಳದಿಂದ ತೆರಳಿದ್ದಾರೆನ್ನಲಾಗಿದೆ.ಬಳಿಕ ಅಲ್ಲೇ ಇದ್ದ ಗ್ರಾಮಸ್ಥರು ಎರಡೂ ಪಕ್ಷದವರನ್ನು ಸಮಾಧಾನಪಡಿಸಿ, ಗಲಾಟೆಯನ್ನು ನಿಯಂತ್ರಣಕ್ಕೆ…

Read More

ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯ ಬಂಧನವಾಗಿದ್ದು ,ಹಲವು ದಿನಗಳಿಂದ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ಒಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಮೇಶ್ ಕಿಟ್ಟಿ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಸುದೀಪ್ ಅವರ ಆತ್ಮೀಯರಾಗಿದ್ದ ರಮೇಶ್ ಕಿಟ್ಟಿ , ಸುದೀಪ್ ಚಾರಿಟಬಲ್ ಟ್ರಸ್ಟ್ ನೋಡಿಕೊಳ್ಳುತ್ತಿದ್ದರು. ಸುದೀಪ್ ಮತ್ತು ರಮೇಶ್ ನಡುವಿನ ಹಣಕಾಸು ವೈಷಮ್ಯವೇ ಬೆದರಿಕೆ ಪತ್ರಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಹಣಕಾಸಿನ ವೈಷಮ್ಯವೇ ಬೆದರಿಕೆ ಪತ್ರಕ್ಕೆ ಕಾರಣವೆಂದು ಸ್ವತಃ ರಮೇಶ್ ಕಿಟ್ಟಿನೇ ಒಪ್ಪಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಅಲ್ಲದೇ, ಈ ಪ್ರಕರಣದ ಹಿಂದೆ ಇನ್ನೂ ಹಲವರು ಇದ್ದಾರೆಂದು ಶಂಕಿಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನನಗೆ 5ರ ಅದೃಷ್ಟ ಒಲಿದಿದ್ದು, ನನ್ನ ಕ್ರಮ ಸಂಖ್ಯೆ ಐದು, 5ನೇ ಬಾರಿ ವಿಧಾನಸಭೆ ಚುನಾವಣೆಗೆ ನಿಂತಿದ್ದೇನೆ, ಇದೇ ಐದರಿಂದ ಚುನಾವಣಾ ಕಣಬು ಬದಲಾವಣೆಯಾಗುತ್ತದೆ ಎಂದು ಮಾಜಿ ಶಾಸಕ ಎಸ್.ಆರ್.ಶ್ರೀ ನಿವಾಸ್ ಅಚ್ಚರಿ ಹೇಳಿಕೆ ನೀಡಿದರು. ಗುಬ್ಬಿ ತಾಲೂಕಿನ ಅಮ್ಮನಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಮ್ಮನಘಟ್ಟ, ಇಸ್ಲಾಂನಗರ, ಎನ್.ಮತ್ತಿಘಟ್ಟ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಚಾರ ಮಾಡಿ ಮತಯಾಚನೆ ಮಾಡಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ತಾಲೂಕಿನ 27 ಗ್ರಾಮ ಪಂಚಾಯಿತಿಗಳು ಸಂಪೂರ್ಣವಾಗಿ ಇಂದಿಗೆ ಮುಗಿದಿದ್ದು, ಹೋದ ಎಲ್ಲಾ ಭಾಗದಲ್ಲಿಯೂ ಸಹ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗಾಗಿ ಈ ಬಾರಿ ಪಕ್ಷ ಬದಲಾವಣೆಯಾಗಿದ್ದು ಬಿಟ್ಟರೆ ಮತದಾರರು ನನ್ನ ಜೊತೆಯಲ್ಲಿಯೇ ಇದ್ದಾರೆ ಎಂದು ತಿಳಿಸಿದರು. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುರುವೇಕೆರೆ: ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಭರ್ಜರಿ ಪ್ರಚಾರ ನಡೆಸಿದ್ದು, ತಾಲೂಕಿನ ಸೂಳೆಕೆರೆ ಗ್ರಾಮದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ತೆರಳಿ ,ದೇವರಿಗೆ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಮತಯಾಚನೆ ಪ್ರಾರಂಭಿಸಿದರು. ಈ ಪ್ರಚಾರದ ಕಾರ್ಯಕ್ರಮದಲ್ಲಿ ಸೂಳೆಕೆರೆ ಗ್ರಾಮದ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದು, ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಎಂ.ಟಿ.ಕೃಷ್ಣಪ್ಪ ಪರ ಮತಯಾಚನೆ ಮಾಡಿದರು. ಸೂಳೆಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಸಿದ ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ನಾಯಕರಿಗೆ ಜೈಕಾರ ಕೂಗುತ್ತಾ, ಮತದಾರರನ್ನು ತಮ್ಮತ್ತ ಸೆಳೆದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೋಹಾ ಡೈಮಂಡ್ ಲೀಗ್‌ ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದಿದ್ದಾರೆ ಕತಾರ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಟೂರ್ನಿಯಲ್ಲಿ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ 88.67 ಮೀಟರ್ ದೂರ ಎಸೆದು ಚಿನ್ನ ಗೆದ್ದರು. ಮೊದಲ ಯತ್ನದಲ್ಲಿ ಉತ್ತಮ ಅಂತರವನ್ನು ತೆರವುಗೊಳಿಸಿದ ನೀರಜ್, ಉಳಿದ ಸಂದರ್ಭಗಳಲ್ಲಿ 90 ಮೀಟರ್ ದಾಟುವ ಭರವಸೆ ಹೊಂದಿದ್ದರು. ಆದಾಗ್ಯೂ, ಹಾಲಿ ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್ 85.88 ಮೀ ಎಸೆದ ಕಾರಣ ಸ್ಪರ್ಧೆಯು ಕಠಿಣವಾಯಿತು. ನೀರಜ್ ಐದು ಬಾರಿ 88.67ಮೀ, 86.04ಮೀ, 85.47ಮೀ, ಫೌಲ್, 84.37ಮೀ ಮತ್ತು 86.52ಮೀ ದೂರವನ್ನು ದಾಟಿದರು. ಜೆಕ್ ತಾರೆ ಜಾಕುಬ್ ವಾಡಿಲ್ಜೆಕ್ 88.63ಮೀ ಮತ್ತು 88.47ಮೀಟರ್‌ಗಳೊಂದಿಗೆ ಎರಡನೇ ಸ್ಥಾನ ಪಡೆದರು. ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಕುಬ್ ಬೆಳ್ಳಿ ಪದಕ ವಿಜೇತರಾಗಿದ್ದರು. ನೀರಜ್ ಇಂದು ತಮ್ಮ ಜಾವೆಲಿನ್ ವೃತ್ತಿಜೀವನದ ನಾಲ್ಕನೇ ಅತ್ಯುತ್ತಮ ಅಂತರವನ್ನು ತೆರವುಗೊಳಿಸಿದರು. ಋತುವಿನ ಯಶಸ್ವಿ ಆರಂಭವು ಇತರ ಪಂದ್ಯಾವಳಿಗಳಲ್ಲಿ ಆಟಗಾರನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಈ ಋತುವಿನಲ್ಲಿ ನೀರಜ್ ಅವರ ಪ್ರಮುಖ…

Read More

ಮಣಿಪುರದ ನಂತರ ಮೇಘಾಲಯದಲ್ಲಿ ಸಂಘರ್ಷ ಏರ್ಪಟ್ಟಿದೆ. ರಾಜಧಾನಿ ಶಿಲ್ಲಾಂಗ್‌ ನಲ್ಲಿ ಕುಕಿ ಮತ್ತು ಮೈಥೇಯ್ ಸಮುದಾಯದ ಸದಸ್ಯರು ಘರ್ಷಣೆ ನಡೆಸಿದರು. ಎರಡೂ ಸಮುದಾಯದ 16 ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಮಿಜೋ ಮಾಡರ್ನ್ ಸ್ಕೂಲ್ ಬಳಿಯ ನಾಂಗ್ರಿಮ್ ಹಿಲ್ಸ್‌ನಲ್ಲಿ ಘರ್ಷಣೆ ಸಂಭವಿಸಿದೆ. ಗಲಭೆ ಮತ್ತು ಹಿಂಸಾಚಾರಕ್ಕೆ ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎರಡು ಸಮುದಾಯದ ಜನರಿಗೆ ಎಚ್ಚರಿಕೆ ನೀಡಿದರು. ಚುರಾಚಂದ್‌ಪುರದ ಥೋರ್ಬಾಂಗ್‌ನಲ್ಲಿ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ರ್ಯಾಲಿ ನಡೆಸಿದ ನಂತರ ಮಣಿಪುರದಲ್ಲಿ ಘರ್ಷಣೆಗಳು ಸಂಭವಿಸಿದವು. ಮೇಟಿ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಇದರ ನಂತರ ಮೇಘಾಲಯದಲ್ಲಿ ಹಿಂಸಾಚಾರದ ಘಟನೆ ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್. ಬಾರಾಮುಲ್ಲಾದ ಕರ್ಹಾಮಾ ಕುಂಚಾರ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ. ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇತರ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. 24 ಗಂಟೆಗಳಲ್ಲಿ ಜಮ್ಮುವಿನಲ್ಲಿ ಇದು ಎರಡನೇ ಎನ್‌ಕೌಂಟರ್ ಆಗಿದೆ. ನಿನ್ನೆ, ರಾಜೌರಿಯ ಕ್ಯಾಂಡಿ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಐವರು ಯೋಧರು ಪ್ರಾಣ ಕಳೆದುಕೊಂಡಿದ್ದರು. ಮೇ 3 ರಂದು ರಾಜೌರಿ ವಲಯದ ಕ್ಯಾಂಡಿ ಅರಣ್ಯದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಆಧರಿಸಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More