Author: admin

ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಠಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಮಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬುಧವಾರ ಪ್ರಚಾರ ನಡೆಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಜನರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಂದ ಮುಕ್ತಿ ನೀಡಲಿವೆ. ಜೊತೆಗೆ ಪ್ರಣಾಳಿಕೆಯಲ್ಲಿ ಸಹ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಲಾಗಿದೆ. ರೈತರಿಗಾಗಿ, ಯುವಕರಿಗಾಗಿ, ಮಹಿಳೆಯರಿಗಾಗಿ ವಿವಿಧ ಯೋಜನೆಗಳನ್ನು ಘೋಷಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಎಲ್ಲ ಯೋಜನೆಗಳು ಜಾರಿಯಾಗಲಿವೆ ಎಂದು ಹೆಬ್ಬಾಳಕರ್ ತಿಳಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು. ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24…

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಪಾಯೆನ್ ಕ್ರಿರಿ ಪ್ರದೇಶದಲ್ಲಿ ಎನ್‌ ಕೌಂಟರ್ ನಡೆದಿದೆ. ಈ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದಾರೆ. ಹತ್ಯೆಯಾದ ಉಗ್ರರಿಂದ ಎಕೆ 47 ರೈಫಲ್, ಹಲವಾರು ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚೆನ್ನೈನಲ್ಲಿ ನಿಧನರಾದ ಖ್ಯಾತ ನಟ ಹಾಗೂ ನಿರ್ದೇಶಕ ಮನೋಬಾಲಾ ಅವರಿಗೆ ಅಂತಿಮ ನಮನ ಸಲ್ಲಿಸಲು ವಿಜಯ್  ಖುದ್ದಾಗಿ ಆಗಮಿಸಿದ್ದರು. ಮನೋಬಾಲಾ ಹಲವಾರು ವಿಜಯ್ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ತೇರಿ, ನನ್ಪನ್, ತುಪ್ಪಾಕಿ, ತಲೈವಾ, ವೆಟ್ಟೈಕಾರನ್ ಹೀಗೆ ಹಲವು ಚಿತ್ರಗಳು ಆ ಪಟ್ಟಿಯಲ್ಲಿವೆ. ನಟ, ನಿರ್ದೇಶಕರಾಗಿ ಮನರಂಜನಾತ್ಮಕವಾಗಿದ್ದ ಮನೋಬಾಲಾ ಅವರ ನಿಧನವನ್ನು ತಮಿಳಿಗರು ತುಂಬ ನೋವಿನಿಂದ ಹೊತ್ತುಕೊಂಡಿದ್ದಾರೆ. ಪಿತ್ತಜನಕಾಂಗದ ಕಾಯಿಲೆಯಿಂದ ನಿನ್ನೆ ಮಧ್ಯಾಹ್ನ 1 ಗಂಟೆಗೆ ಮನೋಬಾಲಾ ನಿಧನರಾಗಿದ್ದಾರೆ. ನಾಲ್ಕು ದಶಕಗಳ ಕಾಲದ ಚಿತ್ರರಂಗದಲ್ಲಿ 40 ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಮನೋಬಾಲಾ ತಮಿಳು, ಮಲಯಾಳಂ ಮತ್ತು ತೆಲುಗು ಸೇರಿದಂತೆ ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಭಾರತಿರಾಜ ಅವರ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದ ಮನೋಬಾಲಾ ಅವರು 1982ರಲ್ಲಿ ಆಗಾಯ ಗಂಗಾ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ರಂಗ ಪ್ರವೇಶಿಸಿದರು. ನಂತರ ಪಿಳ್ಳೈ ನಿಲಾ, ಊರ್ಕಾವಲನ್, ಮಾಲ್ ವೆಟ್ಟಿ ಮೈನರ್ ಮುಂತಾದ ಹಲವು ಚಿತ್ರಗಳಲ್ಲಿ ನಟಿಸಿದರು. 2000 ರ ಮೊದಲಾರ್ಧದಲ್ಲಿ, ಮನೋಬಾಲಾ…

Read More

ಜಂತರ್ ಮಂತರ್‌ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಮತ್ತು ದೆಹಲಿ ಪೊಲೀಸರನ್ನು ತಳ್ಳಿಹಾಕುತ್ತಾರೆ. ಈ ಘರ್ಷಣೆಯಲ್ಲಿ ವಾಗ್ವಾದ ನಡೆದು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದರು. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. ಸಂಘರ್ಷದ ವೇಳೆ ಪೊಲೀಸರು ಥಳಿಸಿದ್ದಾರೆ ಎಂದು ಕುಸ್ತಿಪಟುಗಳು ದೂರಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೂ ಮುನ್ನ ಪ್ರತಿಭಟನಾಕಾರರು ರಾತ್ರಿ ವೇಳೆ ಪ್ರತಿಭಟನಾ ಪಂತದಲ್ಲಿ ವಿದ್ಯುತ್ ಕಡಿತಗೊಳಿಸಿದ್ದಾರೆ ಎಂದು ಆರೋಪಿಸಿದ್ದರು. ಮುಷ್ಕರದ ಆರಂಭದಿಂದಲೂ ದೆಹಲಿ ಪೊಲೀಸರ ಕಡೆಯಿಂದ ಕೆಲವು ಹಸ್ತಕ್ಷೇಪವಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಇದರ ಮುಂದುವರಿದ ಭಾಗವೇ ಈಗಿನ ಸಂಘರ್ಷ. ಲೈಂಗಿಕ ಕಿರುಕುಳದ ದೂರಿನಲ್ಲಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳ ಮುಷ್ಕರ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ದೆಹಲಿ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಸದ್ಯ ಘರ್ಷಣೆ ಸಾಧ್ಯತೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿಯೇ ಇದ್ದಾರೆ. ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು…

Read More

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲಾ ಹೋಬಳಿಯ ಮಲಗೋನಹಳ್ಳಿಯಲ್ಲಿ ಮತಗಟ್ಟೆಯ ಮೇಲ್ಛಾವಣಿ ಮುರಿದು ಬೀಳುವ ಸ್ಥಿತಿಯಲ್ಲಿದ್ದ ಬಗ್ಗೆ ನಮ್ಮತುಮಕೂರು ಮಾಧ್ಯಮ ವರದಿ ಮಾಡಿದ್ದು, ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು, ವರದಿ ಪ್ರಸಾರವಾಗಿ 14 ಗಂಟೆಗಳೊಳಗೆ ಕಟ್ಟಡದ ಮೇಲ್ಚಾವಣಿ ರಿಪೇರಿ ಕೆಲಸ ಮಾಡುತ್ತಿದ್ದಾರೆ. ಮಲಗೋನಹಳ್ಳಿ ಮತಗಟ್ಟೆಯು ಕಟ್ಟಡದ ಚಾವಣಿಯ ತೀರು ಮುರಿದು ಬೀಳುವ ಹಂತದಲ್ಲಿದ್ದರು ಸಹ ಅಧಿಕಾರಿಗಳು ಗಮನಿಸದೆ ಜಾಣಕುರುಡು ತೋರಿಸಿದ್ದರು. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಆದೇಶ ನೀಡಿತ್ತು ಅದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ಅಧಿಕಾರಿಗಳು ನಿದ್ರೆಗೆ ಜಾರಿದ್ದರು. ಮತಗಟ್ಟೆ ಅವ್ಯವಸ್ಥೆಯ ಬಗ್ಗೆ ನಮ್ಮತುಮಕೂರು ವಾಹಿನಿಯು ಸವಿವರ ವಾದ ವರದಿ ಪ್ರಕಟಿಸಿದ್ದು, ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮತಗಟ್ಟೆಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಿದ್ದು, ಇದೀಗ ಕಟ್ಟಡದ ಮೇಲ್ಛಾವಣಿ ರಿಪೇರಿ ಕೆಲಸ ಆರಂಭಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಬೆಳಗಾವಿ :ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ್, ವಧಾನ ಪರಿಷತ್ ಸದಸ್ಯ ಸತೇಜ್ ಪಾಟೀಲ ( ಬಂಟಿ ಪಾಟೀಲ್ ) ಹಾಗೂ ಮಾಜಿ ಸಚಿವ ವಿಶ್ವಜಿತ್ ಕದಂ ಅವರು ಗುರುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ ಪ್ರಚಾರ ಸಭೆಯಲ್ಲಿ ಅಶೋಕ ಚವ್ಹಾಣ, ಸತೇಜ್ ಪಾಟೀಲ್ ಮತ್ತು ವಿಶ್ವಜೀತ್ ಕದಂ ಪಾಲ್ಗೊಳ್ಳುವರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೇಂದ್ರ ಸರ್ಕಾರವು ಸಲಿಂಗಕಾಮಿಗಳ ಹಕ್ಕುಗಳನ್ನು ನಿರ್ಧರಿಸಲು ಸಮಿತಿಯನ್ನು ನೇಮಿಸುತ್ತದೆ. ಸಮಿತಿಯ ಅಧ್ಯಕ್ಷರು ಸಂಪುಟ ಕಾರ್ಯದರ್ಶಿ ಸಲಿಂಗಕಾಮದ ವಿಷಯವನ್ನು ಸಂವಿಧಾನ ಪೀಠವು ಪರಿಗಣಿಸುತ್ತಿದೆ. ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಹಕ್ಕು ಇಲ್ಲ ಮತ್ತು ಸಂಸತ್ತು ಶಾಸನದ ಮೂಲಕ ಜಾರಿಗೊಳಿಸಬೇಕಾದ ವಿಷಯ ಎಂಬುದು ಕೇಂದ್ರ ಸರ್ಕಾರದ ನಿಲುವು. ಸಲಿಂಗಕಾಮಿ ಹಕ್ಕುಗಳು ಯಾವುವು ಮತ್ತು ಅಲ್ಲ ಎಂಬುದನ್ನು ಸಮಿತಿಯು ನಿರ್ಧರಿಸುತ್ತದೆ. ವಿಶೇಷ ವಿವಾಹ ಕಾಯ್ದೆಯ ಭಾಗವಾಗಿ ಸಲಿಂಗ ದಂಪತಿಗಳಿಗೆ ವಿವಾಹ ನೋಂದಣಿಗೆ ಅವಕಾಶ ನೀಡಬೇಕೆಂಬ ಮನವಿಯನ್ನು ಪರಿಗಣಿಸಬೇಡಿ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. ಈ ಹಿಂದೆ ಕೇಂದ್ರ ಸರ್ಕಾರ ಸಲಿಂಗ ವಿವಾಹದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು. ಸಲಿಂಗ ವಿವಾಹವು ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಉಲ್ಲೇಖಿಸಿ ದೇಶದಲ್ಲಿ ಸಲಿಂಗ ವಿವಾಹವನ್ನು ಗುರುತಿಸುವ ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಒಂದೇ ಲಿಂಗದ ವ್ಯಕ್ತಿಗಳ ನಡುವಿನ ದೈಹಿಕ ಸಂಭೋಗ ಮತ್ತು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಭಾರತೀಯ ಕುಟುಂಬದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ.…

Read More

ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ ಕೊರಟಗೆರೆ : 30 ವರ್ಷದ ಮಾದಿಗ ಸಮಾಜದ ಒಳಮೀಸಲಾತಿ ಕನಸನ್ನು ಬಿಜೆಪಿ ಸರಕಾರ ನನಸು ಮಾಡಲು ಹೊರಟಿದೆ.. ಆದರೇ ಕಾಂಗ್ರೇಸ್ ಪಕ್ಷ ಒಳಮೀಸಲಾತಿ ಆದೇಶವನ್ನು ಮತ್ತೇ ತೆಗೆಯುವ ಶಪಥ ಮಾಡಿದೆ.. ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯು ನಮ್ಮ ಮಾದಿಗ ಸಮಾಜವು ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಲಿದೆ ಎಂದು ಕೇಂದ್ರ ಸಚಿವ ಎಲ್.ಮುರುಗನ್ ತಿಳಿಸಿದರು. ಕೊರಟಗೆರೆ ಪಟ್ಟಣದ ಪಂಚಾಜನ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಮಾದಿಗ ದಂಡೋರ ಸಂಘದಿಂದ ಮಂಗಳವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ಮಾದಿಗ ಸಮಾಜಕ್ಕೆ ಬಿಜೆಪಿ ಪಕ್ಷವು 12ಸೀಟು ನೀಡಿದೆ.. ಆದರೇ ಕಾಂಗ್ರೆಸ್ ಪಕ್ಷ ಕೇವಲ 6ಸೀಟು ನೀಡಿ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡಿದೆ. ಮಾದಿಗ ಸಮಾಜವನ್ನು ಕಾಂಗ್ರೆಸ್ ಪಕ್ಷ ಕೇವಲ ಪ್ರಚಾರ ಮತ್ತು ಮತಕ್ಕಾಗಿ ಮಾತ್ರ 70 ವರ್ಷದಿಂದ ಬಳಕೆ ಮಾಡಿಕೊಂಡಿದೆ. 2023ರ ಚುನಾವಣೆಗೆ ಮೀಸಲು ಕ್ಷೇತ್ರಗಳಲ್ಲಿ ರಾಜ್ಯದ ಮಾದಿಗ ಸಮಾಜ ಬಿಜೆಪಿ ಪಕ್ಷಕ್ಕೆ ಬೆಂಬಲ…

Read More

ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪನವರ ಸೋಲಿಗೆ ನಾವೇ ಕಾರಣಕರ್ತರಾದೆವು. ಈ ಬಾರಿ ತುರುವೇಕೆರೆಯಲ್ಲಿ ಎಂ.ಟಿ.ಕೃಷ್ಣಪ್ಪನ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರು ಶ್ರಮಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕರೆ ನೀಡಿದರು. ಗುಬ್ಬಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪನವರ ಪರ ದೇವೇಗೌಡರು ಮತಯಾಚಿಸಿದರು. ಮಾಜಿ ಶಾಸಕ ಜೆಡಿಎಸ್ ಅಭ್ಯರ್ಥಿ ಎಂ.ಟಿ. ಕೃಷ್ಣಪ್ಪ ಮಾತನಾಡಿ, ಭಾರತದ ಇತಿಹಾಸದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಪಕ್ಷ ಅದು ಜೆಡಿಎಸ್ ಎಂದರು. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ಉದ್ದೇಶದಿಂದ ಸ್ಥಾಪನೆಯಾಗಿದ್ದ ಕಾಂಗ್ರೆಸ್ ಪಕ್ಷವನ್ನು ಸ್ವಾತಂತ್ರ್ಯ ನಂತರ ನೆಹರು ಕುಟುಂಬ ಗಾಂಧೀಜಿಯವರ ಹೆಸರಿನಲ್ಲಿ ರಾಜಕೀಯ ಪಕ್ಷವಾಗಿ ಮಾಡಿಕೊಂಡಿದ್ದು ವಿಪರ್ಯಾಸ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಸಂಜಯ್ ಬಾಟ್ಯಾ ಹೇಳಿದರು. ಬುಧವಾರ ಗುಬ್ಬಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ದಲಿತ ಮುಖಂಡರು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರವೇ ಗಾಂಧೀಜಿ ಕಂಡಿದ್ದ ದೇಶದ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಾ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಹೇಳಿದರು. ಡಿಎಸ್ ಎಸ್ ಮುಖಂಡ ನಿಟ್ಟೂರು ಗಂಗಾರಾಮ್ ಮಾತನಾಡಿ, ಬಿಜೆಪಿ ಪಕ್ಷವು ದಲಿತರನ್ನು ಗುರುತಿಸಿ ಉನ್ನತ ಸ್ಥಾನಮಾನಗಳನ್ನು ನೀಡಿದೆ. ತಾಲ್ಲೂಕಿನಲ್ಲಿ ಪರಿಶಿಷ್ಟರು ಪಕ್ಷದ ಪರವಾಗಿ ಇದ್ದು, ಬಿಜೆಪಿ ಅಭ್ಯರ್ಥಿ ಎಸ್.ಡಿ.ದಿಲೀಪ್ ಕುಮಾರ್ ರವರನ್ನು ಗೆಲ್ಲಿಸಿಕೊಳ್ಳುತ್ತೇವೆ. ಡಿಎಸ್ ಎಸ್ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರು ದಲಿತ ಹೋರಾಟಗಾರರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ ಅವರಿಗೆ ಅನುಕೂಲವಾಗುವ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕರೆ…

Read More