Subscribe to Updates
Get the latest creative news from FooBar about art, design and business.
- ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
- ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
- ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
- ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
Author: admin
ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಲಕ್ಕಯ್ಯ ಬಡಾವಣೆಯ ಪೊಲಮ್ಮಾಸ್ ಹೋಟೆಲ್ ಬಳಿ ನಡೆದಿದೆ. ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲಮ್ಮಾಸ್ ಮೆಸ್ ಪಕ್ಕದ ಬಿಲ್ಡಿಂಗ್ ನ ಕೆಳಮಹಡಿಯಲ್ಲಿ ಅಡುಗೆ ಅನಿಲ ಸೋರಿಕೆ ಯಿಂದ ಸ್ಫೋಟ ಸಂಭವಿಸಿದೆ. ಪರಿಣಾಮ, ಕಟ್ಟಡದ ಹೊರಭಾಗದಲ್ಲಿ ಮಲಗಿದ್ದ ರವಿ (40) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸರ ಹೆಸರಿನಲ್ಲಿ ನಕಲಿ ‘ಎಕ್ಸ್ ಟ್ವಿಟರ್’ ಖಾತೆ ಸೃಷ್ಟಿಸಿ, ಅದರಲ್ಲಿ ಐಪಿಎಲ್ ಪಂದ್ಯಗಳ ಸ್ಕೋರ್ ಹಾಗೂ ಮತ್ತಿತರ ಮಾಹಿತಿ ಟ್ವಿಟ್ ಮಾಡಿ ಪೊಲೀಸರಂತೆ ಬಿಂಬಿಸುತ್ತಿದ್ದ ತಮಿಳುನಾಡಿನ ವ್ಯಕ್ತಿಯನ್ನು ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಚೆಟಪೇಟ್ ನ ಮಗೇಶ್ ಕುಮಾರ್ ಬಂಧಿತ ಆರೋಪಿ, ಪ್ರಕರಣ ದಾಖಲಾದ ಮೇಲೆ ವಿಶೇಷ ತಂಡ ರಚಿಸಲಾಗಿತ್ತು. ವಿಶೇಷ ತಂತ್ರಜ್ಞಾನದ ನೆರವಿನಿಂದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿ ನಿಷಾಗೆ ನಗರದ ತ್ವರಿತ ವಿಶೇಷ ನ್ಯಾಯಾಲಯವು (ಎಫ್‌ಟಿಎಸ್ -4) ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧಿಯು 2018ರ ಫೆಬ್ರವರಿ 26ರಂದು ಮನೆಯ ಅಕ್ಕಪಕ್ಕ ಆಟವಾಡುತ್ತಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ಬಳಿಕ ಮಗುವಿನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ. ಕೊತ್ತನೂರು ಪೊಲೀಸರು ಆತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಆತನನ್ನು ಬಂಧಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಬೆಂಗಳೂರು: ವಿಕ್ರಂ ಲ್ಯಾಂಡರ್ ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಸಿ ಜಗತ್ತಿಗೆ ಸಾಧ್ಯವಾಗದ ಸಾಧನೆಯನ್ನು ಇದೀಗ ಇಸ್ರೋ ಮಾಡಿ ತೋರಿಸಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 26ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಇಸ್ರೋ ಕೇಂದ್ರ ಕಚೇರಿಗೆ ತೆರಳಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಬ್ರಿಕ್ಸ್ ಶೃಂಗಸಭೆ ಹಿನ್ನೆಲೆ ನರೇಂದ್ರ ಮೋದಿ ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಪ್ರವಾಸದಲ್ಲಿದ್ದಾರೆ. ಸಭೆಯ ನಡುವೆಯೂ ಮೋದಿ ಚಂದ್ರಯಾನ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಲೈವ್ ಆಗಿ ವೀಕ್ಷಿಸಿದ್ದರು. ಯಶಸ್ವಿ ಲ್ಯಾಂಡಿಂಗ್ ಬಳಿಕ ವಿಜ್ಞಾನಿಗಳನ್ನು ಅಭಿನಂದಿಸಿದ್ದರು. ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಬಳಿಕ ಇಸ್ರೋ ಅಧ್ಯಕ್ಷ ಸೋಮನಾಥ್ ಜೊತೆ ಮೋದಿ ದೂರವಾಣಿ ಮೂಲಕ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದರು. ಆದರೂ ಮೋದಿ ಇದೀಗ ಬೆಂಗಳೂರಿಗೆ ಬರಲಿದ್ದು, ಇಸ್ರೋ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಲು ನಿರ್ಧರಿಸಿದ್ದಾರೆ. ಅತ್ಯುನ್ನತ ಸಾಧನೆ ಮಾಡಿದ ವಿಜ್ಞಾನಿಗಳಿಗೆ ಗೌರವ ನೀಡಲಿದ್ದಾರೆ. ಬುಧವಾರ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗುತ್ತಿದ್ದಂತೆಯೇ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ…
ಹೆಚ್.ಡಿ.ಕೋಟೆ: ಪಟ್ಟಣದಲ್ಲಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಇತ್ತೀಚೆಗೆ ಅಪರಾಧಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತಿದ್ದು ಇದನ್ನು ತಡೆಯಲು ನಮ್ಮ ಜೊತೆ ಸಹಕರಿಸಿ ಎಂದು ವೃತ್ತ ನಿರೀಕ್ಷಕ ಶಬೀರ್ ಹುಸೇನ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಪಟ್ಟಣದ ಪ್ರಮುಖ ವಾರ್ಡ್ ಗಳಿಗೆ ಅಪರಾಧ ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಯಾವ ರೀತಿ ನಿರ್ವಹಿಸಬೇಕೆಂಬುದರ ಬಗ್ಗೆ ಮಾಹಿತಿ ನೀಡಲು ಹೆಚ್.ಡಿ.ಕೋಟೆ ಪಟ್ಟಣದಲ್ಲಿ ಆಟೋ ಮೂಲಕ ಮಾಹಿತಿ ನೀಡಲು ಚಾಲನೆ ನೀಡಿದರು. ಶಬೀರ್ ಹುಸೇನ್ ರವರು ಸಾರ್ವಜನಿಕರಿಗೆ ಕರಪತ್ರವನ್ನು ನೀಡಿ ಅಪರಾಧಗಳು ನಡೆಯದಂತೆ ಕಾಪಾಡಲು ನಮ್ಮ ಇಲಾಖೆಯ ಜೊತೆ ನಿಮ್ಮ ಸಹಕಾರ ಅತೀ ಮುಖ್ಯ ಎಂದು ಹೇಳಿದರು. ನಿಮ್ಮ ವಾರ್ಡ್ ಗಳಲ್ಲಿ ಮತ್ತು ನಿಮ್ಮ ಗ್ರಾಮದಲ್ಲಿ ಯಾರಾದರು ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದರೆ ನಮ್ಮ ಇಲಾಖೆಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದರು. ಈ ಸಂಧರ್ಭದಲ್ಲಿ ವೃತ್ತ ನಿರೀಕ್ಷಕ ಶಬೀರ್ ಹುಸೇನ್, ಉಪನಿರೀಕಗಷಕರಾದ ಸುರೇಶ್, ಪ್ರಕಾಶ್, ರಾಮು, ಪೇದೆಗಳಾದ ಯೊಗೇಶ್, ಸುಭಾನ್, ಮೋಹನ್, ಕಬೀರ್, ಶಕೀಲವತಿ, ಭೂಮಿಕ ಹಾಗೂ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.…
ತುಮಕೂರು: ತುಮಕೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಟ್ರಾಮಾ ಕೇರ್ ಸೆಂಟರ್ ಗೆ ಅರೆ ವೈದ್ಯಕೀಯ ಸಿಬ್ಬಂದಿ ಹುದ್ದೆಗೆ ನೇರ ನೇಮಕಾತಿ ಪ್ರಕ್ರಿಯೆ . ದಿಢೀರ್ ಸ್ಥಗಿತಗೊಂಡು ಮುಂದೂಡಿಕೆ ಮಾಡಿರುವುದರಿಂದ ಆಕಾಂಕ್ಷಿಗಳು ಬೇಸರಗೊಂಡು ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಸುಮಾರು 68 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಜಿಲ್ಲಾಡಳಿತದ ವತಿಯಿಂದ ಆಹ್ವಾನ ನೀಡಲಾಗಿತ್ತು. ಆದರೆ ನಿನ್ನೆ ಸಂಜೆ ನೇರ ಸಂದರ್ಶನ ಮುಂದೂಡಿ ಸೂಚನಾ ಪತ್ರ ಜಿಲ್ಲಾಸ್ಪತ್ರೆ ಅಧಿಕಾರಿಗಳು ಹೊರಡಿಸಿದ್ದರು. ಸೂಚನಾ ಪತ್ರ ತಲುಪುವ ಮೊದಲೇ ನೇರ ಸಂದರ್ಶನಕ್ಕೆ ಹಾಜರಿದ್ದ ಅಭ್ಯರ್ಥಿಗಳು, ನಮಗೆ ರದ್ದಾಗಿರುವ ವಿಚಾರ ಗೊತ್ತಿಲ್ಲ ಸಂದರ್ಶನ ಮಾಡಿ ಎಂದು ಪಟ್ಟು ಇಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಉಳಿದವರಿಗೆ ಅನ್ಯಾಯವಾಗಲಿದೆ ನಾವು ಸೂಚನಾ ಪತ್ರ ಹೊರಡಿಸಿದ್ದೇವೆ ಎಂದ ಇಲಾಖಾ ಸಿಬ್ಬಂದಿ ಸ್ಪಷ್ಟನೆ ಕೊಡುತ್ತಿದ್ದಾರೆ. ಕಳೆದ ಅರ್ಧ ಗಂಟೆಯಿಂದ ಆಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಡೆಪ್ಯೂಟಿ ತಹಶೀಲ್ದಾರ್, ಕಂದಾಯ ಅಧಿಕಾರಿಗಳ ಮೇಲೆ ಹಲವಾರು ದೂರುಗಳಿವೆ: ಅಧಿಕಾರಿಗಳಿಗೆ ಸಚಿವ ಕೆ.ಎನ್.ರಾಜಣ್ಣ ಎಚ್ಚರಿಕೆ
ಮಧುಗಿರಿ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ. ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಮಧುಗಿರಿ ತಾಲ್ಲೂಕು.ಐಡಿ.ಹಳ್ಳಿ ಹೋಬಳಿಯ ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗದಲ್ಲಿ ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂದಾಯ ಇಲಾಖೆ, ಆರ್.ಡಿ.ಪಿ.ಆರ್ ಇಲಾಖೆ ಗಳಿಗೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಎಲ್ಲಾ ಇಲಾಖೆಗಳಿಗೆ ಸಾರ್ವಜನಿಕರು ಈಗಾಗಲೇ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿವೇಶನ ಇರುವರಿಗೆ ಗೃಹ ನಿರ್ಮಾಣ ಸೌಲಭ್ಯ ಹಾಗೂ ನಿವೇಶನ ಇಲ್ಲದವರಿಗೆ ನಿವೇಶನಗಳನ್ನು ಮಂಜೂರು ಮಾಡಬೇಕು, ಆಗಸ್ಟ್ 30ರಂದು ಎಲ್ಲಾ ಅರ್ಹ ಮಹಿಳಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ, ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸೌಲಭ್ಯಗಳನ್ನು ತಲುಪುಸುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಿ ಪಂಚಾಯತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುತ್ತದೆ…
ಕೊರಟಗೆರೆ: ಶಿರಾದ ಗುತ್ತಿಗೆದಾರ ಮತ್ತು ತೋವಿನಕೆರೆಯ ರೈತನಿಂದ ಹನುಮೇನಹಳ್ಳಿಯ ಎಲೆಕ್ಟ್ರಿಕಲ್ ಗುತ್ತಿಗೆದಾರನ ಮೂಲಕ 3 ಲಕ್ಷಕ್ಕೆ ಬೇಡಿಕೆಯಿಟ್ಟು 50 ಸಾವಿರ ಲಂಚ ಪಡೆಯುವಾಗ ಕೊರಟಗೆರೆ ಬೆಸ್ಕಾಂ ಎಇಇ ತುಮಕೂರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಕೊರಟಗೆರೆ ಪಟ್ಟಣದ ಬೆಸ್ಕಾಂ ಇಲಾಖೆಯ ಮೇಲೆ ತುಮಕೂರು ಲೋಕಾಯುಕ್ತ ಇಲಾಖೆಯ ಎಸ್ಪಿ ವಲೀಬಾಷ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ ಎಇಇ ಬಿ.ಜಿ.ಅರಸರಾಜು ಮತ್ತು ಕೊರಟಗೆರೆ ತಾಲೂಕು ಹನುಮೇಹಳ್ಳಿ ಗ್ರಾಮದ ಎಲೆಕ್ಟ್ರಿಕಲ್ ಗುತ್ತಿಗೆದಾರ ಅಂಬರೀಶ ಎಂಬಾತನ ಬಂಧಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮದ ಸತ್ಯನಾರಾಯಣಚಾರ್ ಎಂಬಾತನ ಜಮೀನಿಗೆ ವಿದ್ಯುತ್ ಸಂಪರ್ಕ ಮತ್ತು ಟ್ರಾನ್ಸ್’ಫಾರಂ ಅಳವಡಿಕೆಗೆ ಶಿರಾ ಮೂಲದ ಗುತ್ತಿಗೆದಾರ ಹರೀಶ್ ಎಂಬಾತನಿಗೆ 3 ಲಕ್ಷ ಬೇಡಿಕೆ ಇಟ್ಟು 50 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಸಂಪರ್ಕಕ್ಕೆ ಗುತ್ತಿಗೆದಾರ ಅಲೆದಾಟ: ಕುರಂಕೋಟೆಯ ರೈತ ಸತ್ಯನಾರಾಯಣಚಾರ್ ಮತ್ತು ಶಿರಾ…
ಮಾರಕಾಸ್ತ್ರಗಳೊಂದಿಗೆ ಹಲ್ಲೆ ನಡೆಸಲು ಗ್ರಾಮಕ್ಕೆ ನುಗ್ಗಿದ್ದ ಪುಡಿ ರೌಡಿಗಳ ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ತುಮಕೂರು: ಪುಂಡರ ಗುಂಪೊಂದು ಗ್ರಾಮಕ್ಕೆ ನುಗ್ಗಿ ಹಲ್ಲೆ ನಡೆಸಲು ರಾತ್ರೋರಾತ್ರಿ ಬಂದಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ಹೊಸ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಹಲ್ಲೆ ಮಾಡಲು ಮಾರಕಾಸ್ತ್ರಗಳ ಸಹಿತ ಬಂದ ಪುಂಡರನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೊಸಪಾಳ್ಯ ಯುವಕರಿಗೆ ಥಳಿಸಲು ಸ್ಕೆಚ್ ಹಾಕಿದ್ದ ಪುಂಡರ ಗುಂಪು. ತುಮಕೂರು ಮೂಲದವ ರೆಂದು ಅಂದಾಜಿಸಲಾಗಿದೆ. ಮಾರಕಾಸ್ತ್ರಗಳ ಸಹಿತ ಲಾಂಗು, ಮಚ್ಚು ಹಿಡಿದು ಹಲ್ಲೆ ನಡೆಸಲು ಹೊಂಚು ಹಾಕ್ತಿದ್ರು. ಇದನ್ನ ಗಮನಿಸಿ ಪುಂಡರನ್ನ ಮಾರಕಾಸ್ತ್ರಗಳ ಸಹಿತ ರೇಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ. ಹಲ್ಲೆ ಮಾಡಲು ಯತ್ನಿಸಿದ 6 ಜನ ಪುಂಡರನ್ನ ವಶಕ್ಕೆ ಪಡೆದ ಚಿಕ್ಕನಾಯಕನಹಳ್ಳಿ ಪೊಲೀಸರು, ಪುಂಡರ ಬಳಿಯಿದ್ದ ಮಚ್ಚು, ಲಾಂಗು, ಸೇರಿದಂತೆ ಹಲವು ಮಾರಕಾಸ್ತ್ರಗಳನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಹುಡುಗಿ ವಿಚಾರಕ್ಕೆ ಹೊಸಪಾಳ್ಯ ಯುವಕರಿಗೆ ಹಲ್ಲೆ ನಡೆಸಲು ಬಂದಿದ್ದರು. ಘಟನೆ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ…
16 ವರ್ಷದ ಬಾಲಕಿಯ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ಹೈದರಾಬಾದ್ ನಲ್ಲಿ (Hyderabad) ನಡೆದಿದೆ. ಹೈದರಾಬಾದ್ ನ ನಂದನವನಂ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ರಾಚಕೊಂಡ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. POCSO ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಅಬೇದ್ ಬಿನ್ ಖಲೀದ್, ತಹಸೀನ್, ಮಂಕಾಳ ಮಹೇಶ್, ಎಂ ನರಸಿಂಗ್, ಅಶ್ರಫ್, ಫೈಝಲ್ ಮತ್ತು ಇಮ್ರಾನ್ ಎಂದು ಗುರುತಿಸಲಾಗಿದೆ.