Author: admin

ಬೆಂಗಳೂರು: ಒಂದು ಕಡೆ ಕಾಂಗ್ರೆಸ್ ಆಪರೇಷನ್ ಆಟ ಶುರು ಮಾಡಿದ್ರೆ, ಇತ್ತ ಬಿಜೆಪಿ ಅದನ್ನು ದೊಡ್ಡ ಮಟ್ಟದಲ್ಲಿ ತಡೆಯುತ್ತೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದ್ರೆ ನಿನ್ನೆ(ಆಗಸ್ಟ್ 21) ನಡೆದ ಬಿಜೆಪಿ ಕೋರ್ಕಮಿಟಿ ಸಭೆಯಲ್ಲಿ ಆದ ಚರ್ಚೆ, ನಾಯಕರ ಮನಸ್ಥಿತಿ ಬೇರೆಯದ್ದನ್ನೇ ಹೇಳುತ್ತಿದೆ. ಕಾಂಗ್ರೆಸ್‌ನತ್ತ ಮುಖ ಮಾಡಿರುವ ಬಾಂಬೆ ಫ್ರೆಂಡ್ಸ್‌ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ ಎಂಬ ಮನಸ್ಥಿತಿಗೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ. ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಅಸಮಾಧಾನದ ಬಗ್ಗೆ ಚರ್ಚೆ ನಡೆಸಿದ್ದು, ಬಿಜೆಪಿಗೆ ವಲಸೆ ಬಂದವರು ತಿರಗಾ ಕಾಂಗ್ರೆಸ್ ಬಾಗಿಲು ತಟ್ಟಿದರೆ ಸಿಕ್ಕಾಪಟ್ಟೆ ತಲೆಕೆಡಿಸಿಕೊಳ್ಳುವುದು ಬೇಡ ಎಂಬ ಮನಸ್ಥಿತಿಗೆ ಬಿಜೆಪಿ ರಾಜ್ಯ ನಾಯಕರು ಬಂದಿದ್ದಾರೆ. ಆಪರೇಷನ್ ಹಸ್ತದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದು ಬೇಡ. ‘ಪಕ್ಷ ಬಿಡುವವರ ಮನವೊಲಿಸೋಣ ಆದ್ರೆ ಅಂಗಲಾಚುವುದು ಬೇಡ. 2024ರ ಲೋಕಸಭೆ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿ. ಪಕ್ಷ ಸಂಘಟನೆ ಬಲಗೊಳಿಸುವ…

Read More

ವೀಡಿಯೊ ಕರೆ ಚಿತ್ರೀಕರಿಸಿಕೊಂಡು ನಿವೃತ್ತ ಸರ್ಕಾರಿ ನೌಕರರೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಸ್ಥಳೀಯ ನಿವಾಸಿಯಾಗಿರುವ 74 ವರ್ಷ ವಯಸ್ಸಿನ ನಿವೃತ್ತ ನೌಕರರೊಬ್ಬರು ಸುಲಿಗೆ ಬಗ್ಗೆ ದೂರು ನೀಡಿದ್ದಾರೆ. ಮಹಿಳೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More

ಬಾಗಲಕೋಟೆ: ಏಕಾಗ್ರತೆ, ಸಮರ್ಥಣಾಭಾವ, ಬದ್ಧತೆ ಮತ್ತು ನಿರ್ಧಿಷ್ಟ ಗುರಿ ಇಟ್ಟುಕೊಂಡು ಅಧ್ಯಯನದಲ್ಲಿ ತೊಡಗುವುದರಿಂದ ಯಶಸ್ಸು ಸಾಧ್ಯ ಎಂದು ಎಸ್.ಬಿ ವಿಸ್ಡಮ್ ಕರಿಯರ್ ಅಕಾಡೆಮಿ ಅಧ್ಯಕ್ಷರಾದ ಶರಣಯ್ಯ ಭಂಡಾರಿಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಸ್.ಬಿ ವಿಸ್ಡಮ್ ಕರಿಯರ್ ಅಕಾಡೆಮಿ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ, ಉದ್ಯೋಗ ಮಾರ್ಗದರ್ಶಿ ಕೋಶ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಸಂಘದ ನೂತನ ಸಬಾಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆಯ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಗರೀಕರಣ, ಜಾಗತೀಕರಣ, ಕೈಗಾರಿಕರಣದ ಅಭಿವೃದ್ಧಿಯಿಂದ ಪ್ರತಿ ಕ್ಷೇತ್ರದಲ್ಲಿಯೂ ಸ್ಪರ್ಧೆ ಏರ್ಪಡುತ್ತಿದ್ದು ಉದ್ಯೋಗ ಕ್ಷೇತ್ರವು ಮೊದಲ ಸ್ಥಾನದಲ್ಲಿದೆ. ಇಲ್ಲಿ ನಮ್ಮ ಕನಸಿನ ಹುದ್ದೆ ಪಡೆದುಕೊಳ್ಳಬೇಕೆಂದರೆ ನಿರ್ಧಿಷ್ಟವಾದ ನಡೆ ಮತ್ತು ವಿಭಿನ್ನ ಆಲೋಚನೆಗಳು ಅವಶ್ಯ ಎಂದರು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಸೂಕ್ಷ್ಮ ಅದ್ಯಯನ ಅವಶ್ಯಕ. ಯಶಸ್ಸು ಒಂದು ದಿನದ ಕೊಡುಗೆಯಲ್ಲ‌, ನಿರಂತರ ಪ್ರಯತ್ನದ ಫಲವಾಗಿದೆ‌‌. ಕೇವಲ ಒಂದು ವಿಷಯದ ಆಯ್ಕೆಯಿಂದ…

Read More

ಬೆಂಗಳೂರು:ಬಾಹ್ಯಾಕಾಶ ಲೋಕದಲ್ಲಿ ಭಾರತ ಹೊಸ ಇತಿಹಾಸ ಸೃಷ್ಟಿಸಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -3 ಯೋಜನೆಯ ಲ್ಯಾಂಡರ್ ಶಶಿಯ ಸ್ಪರ್ಶಕ್ಕೆ ರೆಡಿಯಾಗಿದೆ. ಇಂದು (ಆಗಸ್ಟ್ 23) ಸಂಜೆ 6.04 ಕ್ಕೆ ಚಂದ್ರನ ದಕ್ಷಿಣ ಧ್ರುವ ಮೇಲ್ಮೈ ಮೇಲೆ ಲ್ಯಾಂಡರ್ ಲ್ಯಾಂಡ್ ಆಗಲು ಸಮಯ ನಿಗದಿ ಮಾಡಲಾಗಿದೆ. ಆದ್ರೆ ಸಂಜೆ 5.45 ಕ್ಕೆ ಲ್ಯಾಂಡರ್ ಇಳಿಯುವ ಪ್ರಕ್ರಿಯೆ ಆರಂಭವಾಗಲಿದೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ಸೂರ್ಯ ರಶ್ಮಿ ಬಿದ್ದ ಬಳಿಕವಷ್ಟೇ ಲ್ಯಾಂಡಿಂಗ್ ಸಾಧ್ಯವಾಗಲಿದೆ. ಬರೋಬ್ಬರಿ 45 ದಿನಗಳ ಪ್ರಯಾಣದ ಮೂಲಕ ವಿಕ್ರಮ್ ಲ್ಯಾಂಡರ್ ಮೂರು ಲಕ್ಷ 84 ಸಾವಿರ ಕಿಲೋ ಮೀಟರ್ ದೂರ ಇರುವ ಚಂದ್ರನ ಸಮೀಪಕ್ಕೆ ತಲುಪಿದೆ. ಇನ್ನು ಚಂದ್ರನ ಕಕ್ಷೆಗೆ ಸೇರಿದ ಬಳಿಕ ನೌಕೆ ಈವರೆಗೂ ಐದು ಬಾರಿ ಪ್ರದಕ್ಷಿಣೆ ಹಾಕಿದೆ. ಇದೀಗ ಲ್ಯಾಂಡರ್‌ ನಿಧಾನಕ್ಕೆ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಪ್ರಾರಂಭಿಸುತ್ತಿದ್ದು, ಲ್ಯಾಂಡರ್ನಿಂದ ಪ್ರಗ್ಯಾನ್ ರೋವರ್ ಹೊರಬರುವ ಕ್ಷಣಗಣನೆ ಶುರುವಾಗಿದೆ. ಬರೋಬ್ಬರಿ 45 ದಿನಗಳ ಪ್ರಯಾಣದ ಮೂಲಕ ವಿಕ್ರಮ್ ಲ್ಯಾಂಡರ್ ಮೂರು ಲಕ್ಷ…

Read More

ಬಹು ನಿರೀಕ್ಷಿತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಚಂದ್ರಯಾನ 3 ಈಗ ಚಂದ್ರನಿಂದ ಕೇವಲ 25 ಕಿಲೋಮೀಟರ್ ದೂರದಲ್ಲಿದೆ ಎಂದು ಇಸ್ರೋ ಹೇಳಿದ್ದು ಯಶಸ್ವಿ ಲ್ಯಾಂಡಿಂಗ್ ನಡೆಯಲಿ ಎಂದು ದೇಶಾದ್ಯಂತ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಉತ್ತರಾಖಂಡದ ಋಷಿಕೇಶದಲ್ಲಿ ಗಂಗಾರತಿ ಮಾಡಲಾಯ್ತು. ಋಷಿಕೇಶದ ಪರಮಾರ್ಥ ನಿಕೇತನ ಘಾಟ್‌ ನಲ್ಲಿ ಕೈಯಲ್ಲಿ ತ್ರಿವರ್ಣ ಧ್ವಜದೊಂದಿಗೆ ಗಂಗಾ ಆರತಿ ಮಾಡಿದರು. ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯಲಿ, ದೇಶದ ಕೀರ್ತಿ ಪತಾಕೆ ಮೇಲಕ್ಕೆ ಹಾರಲಿ ಅಂತಾ ಪ್ರಾರ್ಥಿಸಲಾಯ್ತು. ಮೈಸೂರು ಬಿಜೆಪಿ ಮುಖಂಡರು ಮಂತ್ರಾಲಯಕ್ಕೆ ತೆರಳಿ ಗುರು ರಾಘವೇಂದ್ರರಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ. ಪೂಜೆ ಸಲ್ಲಿಸುವ ಸಲುವಾಗಿ ನಿನ್ನೆ(ಆ.22) ರಂದೇ 82 ಬಿಜೆಪಿ ಕಾರ್ಯಕರ್ತರು ಮೈಸೂರಿನಿಂದ ಮಂತ್ರಾಲಯಕ್ಕೆ ಹೋಗಿದ್ದಾರೆ. ಇಂದು ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಶಾಸಕ ಶ್ರೀವತ್ಸ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮತ್ತೊಂದೆಡೆ ಕೊಪ್ಪಳ ಜಿಲ್ಲೆ ಗಂಗಾವತಿಯ ಸೇಂಟ್ ಪಾಲ್ಸ್ ಶಾಲೆಯ ಮಕ್ಕಳು ಚಂದ್ರಯಾನ-3…

Read More

ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ಹೃದಯಾಘಾತ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟೀ ಕುಡಿಯಲು ಆಟೋ ನಿಲ್ಲಿಸಿ ತೆರಳುತ್ತಿದ್ದ ಚಾಲಕ ತಿಮ್ಮೇಶ್, ಆಟೋದಿಂದಲೇ ಇಳಿಯುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಎದೆಯನ್ನು ಸಾವರಿಸಿಕೊಳ್ಳುತ್ತ ಆಟೋದಿಂದ ತಿಮ್ಮೇಶ್ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ತಿಮ್ಮೇಶ್, ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈ ಸಂಬಂಧ ಸಂಪಂಗಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತಮ್ಮ ಮೇಲೆ ಕಳ್ಳತನ ಆರೋಪ ಹೊರಿಸಿದ್ದರಿಂದ ನೊಂದಿದ್ದರು ಎನ್ನಲಾದ ಜಿಮೋನ್ ವರ್ಗಿಸ್ (43)ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಪುಲಿಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳದ ಜಿಮೋನ್ ವರ್ಗಿಸ್, ಕೆಲಸ ಹುಡುಕಿಕೊಂಡು ವರ್ಷದ ಹಿಂದೆ ನಗರಕ್ಕೆ ಬಂದಿದ್ದರು. ಮಹಿಳಾ ಉದ್ಯಮಿಯೊಬ್ಬರ ಮನೆಯಲ್ಲಿ ಚಾಲಕರಾಗಿ ಕೆಲಸಕ್ಕೆ ಸೇರಿದ್ದರು. ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ ಶೌಚಾಲಯದ ಕಿಟಕಿಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.

Read More

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಎದುರಾಗಲಿದೆ. ರಾಜ್ಯವನ್ನು ಕಗ್ಗತ್ತಲಲ್ಲಿ ಮುಳುಗಿಸುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಮಂಡ್ಯದಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಮಧ್ಯಮ ವರ್ಗದವರ ಕರೆಂಟ್ ಬಿಲ್ ಡಬಲ್ ಬರುತ್ತಿದೆ. ಇದರಿಂದ ಸಣ್ಣ, ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಒಬ್ಬರಿಂದ ಕಿತ್ತುಕೊಂಡು ಮತ್ತೊಬ್ಬರಿಗೆ ಕೊಡುವ ಕೆಲಸ ಆಗ್ತಿದೆ. ಉಚಿತ ಯೋಜನೆಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ವಸ್ತುಗಳ ಬೆಲೆ ಏರಿಕೆಯಾಗಿ ಸಂಕಷ್ಟ ಎದುರಾಗಿದೆ ಎಂದು ವಾಗ್ದಾಳಿ ನಡೆಸಿದರು.

Read More

ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ನೇಣು ಹಾಕಿಕೊಂಡು ಕಾಲೇಜು ಪ್ರಿನ್ಸಿಪಾಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಾಜ ಮುದಗಲ್(56) ಆತ್ಮಹತ್ಯೆ ಮಾಡಿಕೊಂಡ ಪ್ರಿನ್ಸಿಪಾಲ್. ಇಂದು “ಜಾನಪದ ಜಾತ್ರೆ ಹೊನ್ನ ಸಂಭ್ರಮ ಎಂಬ ಕಾರ್ಯಕ್ರಮ ಇತ್ತು. ನಿನ್ನೆ ವಿವಿಧ ಕಡೆ ತೆರಳಿ ಆಮಂತ್ರಣ ಕೊಟ್ಟು ಬಂದಿದ್ದ ಪ್ರಿನ್ಸಿಪಾಲ್, ಇಂದು ಬೆಳಿಗ್ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Read More

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಾಲೀಮು ನಡೆಸುತ್ತಿದ್ದು, ಬೆಂಗಳೂರು ಉತ್ತರ ಕ್ಷೇತ್ರ ಗೆಲ್ಲಲು ಡಿಸಿಎಂ ಡಿಕೆ ಶಿವಕುಮಾರ್ ತಂತ್ರ ರೂಪಿಸಿದ್ದಾರೆ. ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ 8 ವಿಧಾನಸಭೆ ಕ್ಷೇತ್ರಗಳಿದ್ದು, ಈ ಪೈಕಿ 3 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್, 5 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಇದ್ದಾರೆ. ಆದರೆ ಬಿಜೆಪಿಯ ಮೂವರು ಶಾಸಕರಾದ ಎಸ್.ಟಿ ಸೋಮಶೇಖರ್, ಬೈರತಿ ಬಸವರಾಜು, ಕೆ.ಗೋಪಾಲಯ್ಯಗೆ ಕಾಂಗ್ರೆಸ್ ಗಾಳ ಹಾಕಿದ್ದು, ಘರ್‌ ವಾಪ್ಸಿ ಮಾಡಿಕೊಳ್ಳಲು ಕಾಂಗ್ರೆಸ್ ಸ್ಕೆಚ್ ಹಾಕಿದೆ. ಮೂವರು ಶಾಸಕರು ಕಾಂಗ್ರೆಸ್‍ಗೆ ಮರಳಿದರೆ ಕಾಂಗ್ರೆಸ್ ಬಲ ವೃದ್ಧಿಯಾಗಲಿದೆ. ಉಪಚುನಾವಣೆ ಮೂಲಕ ಹಾಲಿ 3:5 ಬಲವನ್ನು, 5:3 ಮಾಡಿಕೊಳ್ಳಲು ತಂತ್ರ ರೂಪಿಸಿದ್ದು, ಮೂವರ ಬಲದಿಂದ ಸುಲಭ ಜಯದ ಲೆಕ್ಕಾಚಾರವನ್ನು ಡಿಕೆಶಿ ಹೆಣೆದಿದ್ದಾರೆ ಎನ್ನಲಾಗಿದೆ. ಮಧ್ಯೆ ಈ ಬಾರಿ ಬಿಜೆಪಿಯಲ್ಲಿ ಹಾಲಿ ಸಂಸದ ಡಿವಿ ಸದಾನಂದ ಗೌಡ ಅವರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ಎಂಬ ಚರ್ಚೆಯೂ ಇದೆ. ಇದು ನಿಜವಾದರೆ, ಕಾಂಗ್ರೆಸ್‍ನಿಂದ ಸಮರ್ಥ ಒಕ್ಕಲಿಗ ಅಭ್ಯರ್ಥಿ ಕಣಕ್ಕಿಳಿಸಿ ಗೆಲ್ಲುವ…

Read More