Author: admin

ತುಮಕೂರು:  ಪಕ್ಷ ಸಂಘಟನೆಗೆ ಅವಕಾಶ ಸಿಕ್ಕರೆ ನಾನು ಸಚಿವ ಸ್ಥಾನವನ್ನು ತೊರೆಯುತ್ತೇನೆ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವಂತಹ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ಅಧಿಕಾರ ಬರುತ್ತೆ ಎಂದರೆ ಯಾರು ಬೇಡ ಅನ್ನುತ್ತಾರೆ ಹೀಗಾಗಿ ನಾನು ಸಾಕಷ್ಟು ನಿರೀಕ್ಷೆಯಲ್ಲಿದ್ದೇನೆ ಎಂದರು. ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ ಅಧಿಕಾರ ಸಿಗುತ್ತೆ ಅಂತಾನೆ ನಾವು ಹೋರಾಟ ಮಾಡುತ್ತಿರುತ್ತಾರೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಜನ ವಿರೋಧಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರಿಗೆ ಮಾತನಾಡಿದ ಅವರು,  15,000 ಲಂಚ ಕೊಟ್ಟವರಿಗೆ ವಸತಿ ಇಲಾಖೆ ವತಿಯಿಂದ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಎಲ್ಲ ಇಲಾಖೆಯಲ್ಲಿಯೂ ಅತ್ಯಂತ ಭ್ರಷ್ಟಾಚಾರ ನಡೆಯುತ್ತಿದೆ ಎಂದರು. ಕಾಮಗಾರಿ ನಡೆಸಲು ಗ್ರಾಂಟ್ ಮಂಜೂರು ಮಾಡಿಸಲು ಕೂಡ ಲಂಚ ನೀಡಬೇಕಾಗುತ್ತಿದೆ. ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಮಾಡಿಸಿಕೊಳ್ಳಲು ಕೂಡ ಲಂಚ ನೀಡಬೇಕಾಗುತ್ತದೆ ದಂಧೆ ನಡೆಯುತ್ತಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ಈ ಭ್ರಷ್ಟ ಸರ್ಕಾರದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲದಂತಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:   ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಅಲ್ಲದೆ ಭ್ರಷ್ಟಾಚಾರದಲ್ಲಿ ಆಗ್ರಹಿಸಿ ಜೆಡಿಎಸ್ ಪಕ್ಷದ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ನಾಗರಾಜ್ ಜಿಲ್ಲಾಧ್ಯಕ್ಷ ಆಂಜಿನಪ್ಪ ಸೇರಿದಂತೆ ಅನೇಕ ಮಂದಿ ಹಾಜರಿದ್ದರು. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬಡವರಿಗೆ ಹಂಚಲಾಗುತ್ತಿರುವ ಮನೆಯನ್ನು ಲಂಚ ಸ್ವೀಕಾರ ಮಾಡಿ ಹಂಚುತ್ತಿದ್ದಾರೆ ಎಂದು  ಪ್ರತಿಭಟನಾಕಾರರು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಸಿದ್ಧರಾಮಯ್ಯ ಇರುವುದರಿಂದ ನಾನು ರಾಜಕಾರಣ ಮಾಡುತ್ತಿರುವುದು. ಅವರಿಲ್ಲದಿದ್ದರೇ ರಾಜಕೀಯ ಬಿಡುತ್ತೇನೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಕಾಂಗ್ರೆಸ್‌ನಲ್ಲಿ ಮೂರು ಪವರ್ ಸೆಂಟರ್ ಇದೆ. ಹೈಕಮಾಂಡ್ , ಕೆಪಿಸಿಸಿ ಅಧ್ಯಕ್ಷ ಹಾಗೂ ಸಿಎಂ ಮೂವರು ಪವರ್ ಸೆಂಟರ್ ಇದೆ. ಸಿಎಂ ಬದಲಾವಣೆ ಅನ್ನೋದನ್ನು ಕಾಲ ನಿರ್ಣಯ ಮಾಡಲಿದೆ. ಕೆಲ ಮಾಧ್ಯಮದವರು ರಾಜಣ್ಣನವರು ಸಿದ್ದರಾಮಯ್ಯನವರಿಂದ ದೂರವಾಗಿದ್ದಾರೆಂದು ಸುದ್ದಿ ಮಾಡಿದ್ದಾರೆ. ನಾನು ಯಾವತ್ತೂ ಸಿಎಂ ಸಿದ್ದರಾಮಯ್ಯರ ಜೊತೆ ಇದ್ದೇನೆ. ಇವತ್ತೂ, ನಾಳೆ, ಯಾವತ್ತೂ ನಾನು ಸಿದ್ದರಾಮಯ್ಯ ಬಣ ಎಂದರು. ಆಗಸ್ಟ್– ಸೆಪ್ಟೆಂಬರ್ ಕ್ರಾಂತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕ್ರಾಂತಿ ಎಂದರೆ ಹಸಿರು ಕ್ರಾಂತಿಯೂ ಆಗಬಹುದು ಅಲ್ವಾ? ಬರೀ ಕಾಂಗ್ರೆಸ್‌ ನಲ್ಲಿ ಮಾತ್ರ ಕ್ರಾಂತಿ ಎಂದು ಯಾಕೆ ಭಾವಿಸುತ್ತೀರಾ? ಬಿಜೆಪಿಯಲ್ಲೂ ಕ್ರಾಂತಿ ಆಗುತ್ತಿದೆ. ಕೇಂದ್ರದಲ್ಲೂ ಕ್ರಾಂತಿ ಆಗಬಹುದು. ಬಿಜೆಪಿಯಲ್ಲೂ 75 ವರ್ಷದ ನಂತರ ಹುದ್ದೆಯಿಂದ ಕೆಳಗೆ ಇಳಿಬೇಕು. 75 ವರ್ಷ ಆದ ಕಾರಣ ಅಡ್ವಾಣಿಯನ್ನು ಪ್ರಧಾನಿ…

Read More

ಸರಗೂರು: ಬಿ ಮಟಕರೆ ಗ್ರಾಮ ಪಂಚಾಯಿತಿ ಮೂರನೇ ಅವಧಿಯ ಉಪಾಧ್ಯಕ್ಷ ಸ್ಥಾನಕ್ಕೆ ಗೌರಿಬಾಯಿ ಹೇಮಾಜಿ ನಾಯ್ಕ ಅವಿರೋಧವಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಆಯ್ಕೆಗೊಂಡಿದ್ದಾರೆ. ತಾಲೂಕಿನ ಬಿ ಮಟಕೇರೆ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರದಂದು ಗ್ರಾಪಂ ಆವರಣದಲ್ಲಿ ಚುನಾವಣೆ ನಿಗದಿಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ  ಗೌರಿಬಾಯಿ ಹೇಮಾಜಿನಾಯ್ಕ ರವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ಉಪವಿಭಾಗ ಕಬಿನಿ ನೀರಾವರಿ ಇಲಾಖೆ ಸಹಾಯಕ ಎಇಇ ಉಷಾ ಗೌರಿಬಾಯಿ ಹೇಮಾಜಿನಾಯಕ ರವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ನೂತನ ಉಪಾಧ್ಯಕ್ಷೆ ಗೌರಿ ಬಾಯಿ ಮಾತನಾಡಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಜೊತೆಗೂಡಿ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಎಂದು ಹೇಳಿದರು. ನಂತರ ಗ್ರಾಪಂ ಸದಸ್ಯ ಹಾಗೂ ತಾಲ್ಲೂಕು ಎಸ್ಸಿ ಎಸ್ಟಿ ಸಮಿತಿ ಸದಸ್ಯ ಕುರ್ಣೇಗಾಲ ಬೆಟ್ಟ ಸ್ವಾಮಿ ಮಾತನಾಡಿ ಶಾಸಕ ಅನಿಲ್ ಚಿಕ್ಕಮಾದು ರವರ  ಮಾರ್ಗದರ್ಶನದಲ್ಲಿ ಎಲ್ಲ ಸದಸ್ಯರ ಸಹಕಾರದಿಂದ ಪಂಚಾಯಿತಿಯ ಎಲ್ಲ ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು. ರಸ್ತೆ, ಕುಡಿಯುವ ನೀರು, ಸ್ವಚ್ಛತೆಗೆ, ಬೀದಿ…

Read More

ಸರಗೂರು:  ಕಂದಾಯ ಇಲಾಖೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡುವ ಉದ್ದೇಶದಿಂದ ಲ್ಯಾಪ್‍ ಟಾಪ್ ನೀಡಲಾಗುತ್ತಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಹೇಳಿದರು. ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ಶುಕ್ರವಾರ ದಂದು ಗ್ರಾಮಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ ಟಾಪ್ ವಿತರಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಆಸ್ತಿ, ಭೂದಾಖಲೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸೇವೆಗಳನ್ನು ಪಾರದರ್ಶಕವಾಗಿ ವಿತರಿಸಲು ಇದರಿಂದ ಅನುಕೂಲವಾಗುತ್ತದೆ. ಜತೆಗೆ ಎಲ್ಲಾ ಕಡತಗಳ ವಿಲೇವಾರಿ ಆನ್‍ಲೈನ್ ಮೂಲಕ ಆಗಬೇಕು. ಕೆಲಸ ವಿಳಂಬವಾಗಬಾರದು ಮತ್ತು ದಾಖಲೆಗಳನ್ನು ಕಳೆದುಹೋಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಡಿಜಿಟಲೀಕರಣ ಮಾಡಲಾಗುತ್ತಿದೆ. ರೈತರಿಗೆ ಉತ್ತಮ ಸೇವೆ ನೀಡುವುದು ಇದರ ಮುಖ್ಯ ಉದ್ದೇಶ ಎಂದು ಹೇಳಿದರು. ಡಿಜಿಟಲೀಕರಣದಿಂದ ದಾಖಲೆಗಳ ಅವಶ್ಯಕತೆ ಇದ್ದಾಗ ಸುಲಭವಾಗಿ ಪಡೆಯಬಹುದು. ರೈತರು ವಿನಾಕಾರಣ ಕಚೇರಿಗೆ ಅಲೆಯುವುದು ತಪ್ಪುತ್ತದೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಕಂಪ್ಯೂಟರ್ ಮತ್ತು ಸ್ಕ್ಯಾನರ್ ಒದಗಿಸುವುದರಿಂದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ಕಂದಾಯ ಗಳಿಗೆ ನೀಡಲಾಗಿದೆ ಎಂದು ಹೇಳಿದರು. ತಾಲ್ಲೂಕಿಗೆ 29 ವೃತ್ತಗಳು ಬರುತ್ತದೆ.ಗ್ರಾಮಲ್ಕೇಕಿಗರು 19 ಸಿಬ್ಬಂದಿಗಳು ಇದ್ದಾರೆ. 9 ಲ್ಯಾಪ್ಟಾಪ್ ಬಂದಿದೆ. ಇನ್ನೂ…

Read More

ಹಾಸನ:  ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರಿದಿದ್ದು, ಇಂದು ಮತ್ತೊಬ್ಬರ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದು, ಕಳೆದ 1 ತಿಂಗಳಿನ ಅಂತರದಲ್ಲಿ ಜಿಲ್ಲೆಯಲ್ಲಿ 16 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಇನ್ನಿಲ್ಲದಂತೆ ಕಾಡುತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಯಾರನ್ನೂ ಬಿಡುತ್ತಿಲ್ಲ. ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಸರಗೂರು:  ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು’ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಮೋಹನಕುಮಾರಿ  ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕೆಂಪೇಗೌಡ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರದಂದು ಹಮ್ಮಿಕೊಂಡ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು. ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ’ ಎಂದರು. ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಕಲೆಗಳ ಬೆಳೆವಣಿಗೆ ಜೊತೆಗೆ ಎಲ್ಲಾ ಸಮುದಾಯದವರಿಗೆ ಅಧಿಕಾರ,ಶಿಕ್ಷಣ, ಸವಲತ್ತನ್ನು ನಾಡಪ್ರಭು ಕೆಂಪೇಗೌಡರು ನೀಡಿದ್ದರು’ ಎಂದು ಹೇಳಿದರು. ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಗ್ರಾಪಂ ಸದಸ್ಯ ಮಾಜಿ ಅಧ್ಯಕ್ಷ ಸುಧೀರ್ ಮಾತನಾಡಿ, ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯುಳ್ಳ ಆಡಳಿತಗಾರನಾಗಿದ್ದು, ಕೆರೆಗಳ ನಿರ್ಮಾಣಗಳ ಮೂಲಕ ಕೃಷಿ ಅಭಿವೃದ್ಧಿ…

Read More

ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ಅರಣ್ಯ ವಲಯದಲ್ಲಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವಿಗೀಡಾಗಿದ್ದು, ತನಿಖಾ ತಂಡ ಆದಷ್ಟು ಬೇಗ ಸತ್ಯವನ್ನು ಬಹಿರಂಗಪಡಿಸಬೇಕು ಮತ್ತು ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಒತ್ತಾಯಿಸಿದ್ದಾರೆ. ಮಲೆ ಮಹದೇಶ್ವರರ ವಾಹನವೆಂದು ಹುಲಿಯನ್ನು ಪೂಜಿಸುವ ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಸಾವನ್ನಪ್ಪಿರುವ ಸುದ್ದಿ ಅತ್ಯಂತ ಆಘಾತಕಾರಿ, ಅಮಾನವೀಯ ಹಾಗೂ ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ. ಹುಲಿಗಳ ಸಾವಿಗೆ ವಿಷ ಪ್ರಾಶನವಾಗಿದ್ದರೆ ಅದು ಅತ್ಯಂತ ಹೇಯ ಹಾಗೂ ಖಂಡನೀಯ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ರಚಿಸಿರುವ ತನಿಖಾ ತಂಡ ಶೀಘ್ರ ಸತ್ಯಾಂಶವನ್ನು ಬಯಲಿಗೆಳೆದು ದುಷ್ಕರ್ಮಿಗಳನ್ನು ಬಂಧಿಸಲಿ ಎಂದು ಒತ್ತಾಯಿಸುವೆ’ ಎಂದು ಅವರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. ಹುಲಿಗಳು ಸಾವಿಗೀಡಾದ ಸ್ಥಳದ ಬಳಿಯೇ ಹಸುವಿನ ಮೃತದೇಹ ಪತ್ತೆಯಾಗಿದ್ದು, ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿಗೆ ವಿಷಪ್ರಾಶನ…

Read More

ಶಿವಮೊಗ್ಗ: ವಿದ್ಯುತ್ ಸ್ಪರ್ಶದಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃಷ್ಣಪ್ಪ (55) ಮತ್ತು ಅವರ ಪತ್ನಿ ವಿನೋದ (42) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಗೆ ಮನೆಯ ವಿದ್ಯುತ್ ಮೋಟಾರ್‌ ನ ವೈರ್‌ ಸಂಪರ್ಕವಾಗಿದ್ದು, ಮಳೆಯಿಂದ ನೆಂದಿದ್ದ ತಂತಿಯಲ್ಲಿ ಬಟ್ಟೆ ಒಣಗಿಸಲು ಹಾಕಲು ವಿನೋದ ಮುಂದಾಗಿದ್ದು, ಈ ವೇಳೆ ವಿದ್ಯುತ್ ಶಾಕ್ ತಗುಲಿದೆ. ಅವರನ್ನು ರಕ್ಷಿಸಲು ಹೋದ ಕೃಷ್ಣಪ್ಪ ಅವರಿಗೂ ವಿದ್ಯುತ್ ಶಾಕ್ ಹೊಡೆದಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸೊರಬ ಪೊಲೀಸ್ ಠಾಣೆಯ ಪಿಎಸ್ ಐ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಪುತ್ರ‌ನಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More