Subscribe to Updates
Get the latest creative news from FooBar about art, design and business.
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
Author: admin
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಏಗ್ಗಿಲ್ಲದೇ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಮಂತ್ರಿ ಮಹೋದಯಗಳ ವರ್ಗಾವಣೆ ದಂಧೆ ನಿಜವೆಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ. ಆರ್. ಪಾಟೀಲರ ಪತ್ರದಿಂದ ಸಾಬೀತಾಗುತ್ತಿದೆ. ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದರು. ಕಾಂಗ್ರೆಸ್ ನವರಿಗೆ ಕೇವಲ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮಗಳನ್ನು ಕಳ್ಳತನ ಮಾಡುವುದು ಗೊತ್ತಿದೆಯೇ ಹೊರತು, ಭ್ರಷ್ಟಾಚಾರ ಮುಕ್ತ ಸರ್ಕಾರ ಇದ್ದಲ್ಲಿ ಮಾತ್ರ ಈ ರೀತಿಯ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬಹುದು ಮತ್ತು ದೆಹಲಿ ಮಾದರಿಯ ಸಾಲ ಮುಕ್ತ ಬಜೆಟ್ ಗಳನ್ನು ಘೋಷಿಸಬಹುದು ಎಂಬುದು ಗೊತ್ತಿಲ್ಲ. ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ಕೂಡಲೇ ಹೇಗಾದರೂ ಮಾಡಿ ವಸೂಲಿ ಮಾಡಿಕೊಳ್ಳಬೇಕೆಂಬ ಧಾವಂತ ಕಾಂಗ್ರೆಸ್ ಶಾಸಕರುಗಳಲ್ಲಿ ಇರುವುದು ಬಿ. ಆರ್. ಪಾಟೀಲರ ಪತ್ರದಿಂದ ಸ್ಪಷ್ಟವಾಗುತ್ತಿದೆ ಎಂಬ ಅನುಮಾನ ರಾಜ್ಯದ ಜನತೆಯಲ್ಲಿ ಹಾಗೂ ನಮ್ಮಲ್ಲೂ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು…
ಶಾಸಕ ತನ್ವಿರ್ ಸೇರವರ ವಿನಂತಿ ಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಎಚ್ಚರಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟಿಕರಣ ರಾಜಕಾರಣ, ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇನ್ನೊಂದೆಡೆ ಕೆ. ಜೆ. ಹಳ್ಳಿ- ಡಿ. ಜೆ. ಹಳ್ಳಿ ಘಟನೆಯಡಿ ಮಾರಣಾಂತಿಕ ಹಲ್ಲೆ, ದಲಿತ ಶಾಸಕನ ಮನೆ ಸುಟ್ಟು ಹಾಕಿದ್ದು, ಬಂಧನಕ್ಕೆ ಒಳಗಾದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ರೌಡಿಗಳನ್ನು, ಪುಡಿ ರೌಡಿಗಳನ್ನು ಬಿಡುಗಡೆ ಮಾಡಲು ಮತ್ತು ಕೇಸು ರದ್ದತಿಗೆ ತನ್ನೀರ್ ಸೇರ್ ಅವರು ಗೃಹ ಸಚಿವ ಪರಮೇಶ್ವರರಿಗೆ ವಿನಂತಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಹರ್ಷ ಹತ್ಯೆ ಕೇಸನ್ನೂ ರದ್ದು ಮಾಡಿ ಬಂಧಿತರನ್ನು ಬಿಡುಗಡೆ ಮಾಡಲು ಕೋರಿದ್ದಾರೆ. ಇದನ್ನು ಸರಕಾರವು ಮನ್ನಿಸಬಾರದು ಎಂದು ಆಗ್ರಹಿಸಿದ್ದಾರೆ. ಮಂಗಳೂರು ಗಲಭೆಯ ಕೇಸನ್ನೂ ರದ್ದು ಮಾಡಲು ಮನವಿ ಮಾಡಿದ್ದಾರೆ ಎಂದಿರುವ ಅವರು, ಬಿಜೆಪಿ ಸರಕಾರವು…
ಹೆಣ್ಣೂರಿನ ವಿನ್ಸೆಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಾರ್ವೇಶ್ ಸಾವವನ್ನಪ್ಪಿದ ವಿದ್ಯಾರ್ಥಿ. ಮಂಗಳವಾರ ಬೆಳಗ್ಗೆ ಎಂದಿನಂತೆ ಕಾಲೇಜಿಗೆ ಹೋಗಿದ್ದ ಮಾರ್ವೇಶ್ ಮನೆಗೆ ಬಂದಿರಲಿಲ್ಲ. ಇದರಿಂದ ಪೋಷಕರು ಆತಂಕದಲ್ಲಿದ್ದರು. ಈ ವೇಳೆ ಸ್ನೇಹಿತನೋರ್ವ ಮನೆಗೆ ಬಂದು ವಿಚಾರಿಸಿ ಹೋಗಿದ್ದ. ಅನಂತರ ನಿನ್ನೆ ರಾತ್ರಿ ಜಿಹಾನ್ ಆಸ್ಪತ್ರೆಗೆ ಸುನಿಲ್ ಎಂಬಾತ ಮಾರ್ವೇಶ್ ನನ್ನ ಚಿಕಿತ್ಸೆ ಕರೆತಂದಿದ್ದ. ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ಖಚಿತಪಡಿಸಿ ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು ಆಸ್ಪತ್ರೆಗೆ ಸೇರಿಸಿದ ಸುನಿಲ್ ಎಂಬಾತನನ್ನ ವಿಚಾರಿಸಿದಾಗ ಯಾರೋ ಅಪರಿಚಿತರು ಲಿಂಗರಾಜಪುರ ಬಳಿ ಮಾರ್ವೇಶ್ ನನ್ನ ಒಪ್ಪಿಸಿದ್ದರು. ಹೀಗಾಗಿ ಆಸ್ಪತ್ರೆಗೆ ಸೇರಿಸಿದ್ದೇನೆ ಎಂದು ಹೇಳಿಕೆ ನೀಡಿದ್ದ. ಮತ್ತೊಂದೆಡೆ ಪೋಷಕರು ಸಹ ನಿನ್ನೆ ಸಂಜೆ ಮನೆ ಬಳಿ ಮಾರ್ವೇಶ್ ಬಗ್ಗೆ ವಿಚಾರಿಸಿದ್ದ ವ್ಯಕ್ತಿ ಬಗ್ಗೆ ಅನುಮಾನವಿದ್ದು ಆತನ ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯ ಗೊತ್ತಾಗಲಿದೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.…
ದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿ ಘಾಟ್ ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು. ಗೊಂದಲ ಇರುವ ಬಗ್ಗೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬರುತ್ತೇವೆ. ಶಿರಾಡಿ ಘಾಟ್ ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು. 38 ರಾಷ್ಟ್ರೀಯ ಹೆದ್ದಾರಿಗಳು ಅಪ್ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮವಾದ…
ಜೌನ್ ಪುರ: ತನ್ನ ಸ್ವಂತ ಅಣ್ಣನ ಮಗಳನ್ನು ಕುಟುಂಬದ ಸದಸ್ಯರ ಮುಂದೆ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶದ ಜೌನ್ ಪುರ ಜಿಲ್ಲೆಯ ತಾಜುದ್ದೀನ್ ಪುರ ಗ್ರಾಮದಲ್ಲಿ ನಡೆದಿದೆ. ಇದೀಗ ಈ ಮದುವೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಇಬ್ಬರೂ ತಮ್ಮ ಕುಟುಂಬದ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ. ಶುಭಂ ಎಂಬ ವ್ಯಕ್ತಿ ತನ್ನ ಅಣ್ಣನ ಮಗಳಾದ ರಿಯಾಳನ್ನು ಮಡಿಯಾಹುನ್ ಕೊಟ್ವಾಲಿ ಪ್ರದೇಶದಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ. ಮೊದಲು ಈ ವಿವಾಹಕ್ಕೆ ಇಬ್ಬರ ಮನೆಯವರು ಕೂಡ ವಿರೋಧ ವ್ಯಕ್ತಪಡಿಸಿದ್ದರು, ಆದರೆ ಶುಭಂ ಮತ್ತು ರಿಯಾ ಈ ಮೊದಲೇ ನಾವು ಪ್ರೀತಿ ಮಾಡುತ್ತಿದ್ದೇವೆ, ಮದುವೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದು ಗಟ್ಟಿ ತೀರ್ಮಾನವನ್ನು ಮಾಡಿಕೊಂಡಿದ್ದರು. ಈ ಕಾರಣಕ್ಕೆ ಮನೆಯವರು ಕೂಡ ಈ ಮದುವೆಗೆ ಒಪ್ಪಿಗೆ ನೀಡಿದ್ದಾರೆ. ಇನ್ನೂ ಮದುವೆಯ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಭಂ ಮತ್ತು ರಿಯಾ ಮೂರು ವರ್ಷಗಳಿಂದ…
ತುರುವೇಕೆರೆ: ಯಾರು ಕಷ್ಟದಲ್ಲಿ ಸಹಾಯ ಮಾಡುತ್ತಾರೋ, ಅವರನ್ನು ನೀವು ಸನ್ಮಾನಿಸಿ ಗೌರವಿಸುತ್ತೀರಾ.. ಇದೆ ನಿಜವಾದ ಬಾಂಧವ್ಯ, ನನ್ನ ಬಗ್ಗೆ ಇರುವ ನಿಮ್ಮಗಳ ನಿಜವಾದ ಕಾಳಜಿ, ಎಂದು ಶಾಸಕ ಎಂ.ಪಿ.ಕೃಷ್ಣಪ್ಪ ರವರು ಅಭಿಪ್ರಾಯ ಪಟ್ಟರು. ಪಟ್ಟಣದ ವಾಣಿಜ್ಯ ಸಂಕೀರ್ಣದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಬಹಳ ಸಂತೋಷ ಒಂದು ಕಡೆ ಮೂರು ತಿಂಗಳ ಹಿಂದೆ ಮಾಜಿ ಶಾಸಕರಿಗೆ ನೀವು ನಿಂದಿಸುತ್ತಿದ್ದು, ಅದು ನನ್ನ ಗಮನಕ್ಕೆ ಬಂದಿದೆ. ಈಗ ನನಗೆ ಸನ್ಮಾನ ಮಾಡುತ್ತಿದ್ದೀರಾ, ಇದೆ ಪ್ರೀತಿಯ ನಡುವೆ ಇರುವ ವ್ಯತ್ಯಾಸ. ಯಾರು ಕಷ್ಟದಲ್ಲಿ ಸಹಾಯ ಮಾಡುತ್ತಿರೋ ಅವರನ್ನು ನೀವು ನೆನಪಿಸಿಕೊಳ್ಳುತ್ತೀರಾ ಇದೆ ನಿಜವಾದ ಬಾಂಧವ್ಯ. ಈಗ ತಾನೆ ಒಂದು ಕಾಲೇಜಿನಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದೇ ಅಲ್ಲಿ ಸುಮಾರು 700 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಹಿಂದೆ ನಾನು ಶಾಸಕನಾಗಿದ್ದಾಗ ಆ ಕಾಲೇಜಿಗೆ ನಿವೇಶನವನ್ನು ಮಂಜೂರು ಮಾಡಿಸಿದ್ದೆ. ಆದ್ದರಿಂದ ಇಷ್ಟು ಮಕ್ಕಳು ಕಲಿಯುತ್ತಿರುವುದನ್ನು ನೋಡಿ ನನಗೆ ಸಂತೋಷವಾಯಿತು. ಇನ್ನು ಆ…
ಕರ್ನಾಟಕ-ಗೋವಾ ಗಡಿಯ ಕ್ಯಾಸಲರಾಕ್ ಬಳಿ ಹಳಿ ಮೇಲೆ ಗುಡ್ಡ ಕುಸಿದಿದ್ದರಿಂದ ನಿನ್ನೆಯಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ ನೈಋತ್ಯ ರೈಲ್ವೆ ಇಲಾಖೆ ನಾಲ್ಕು ಮಾರ್ಗಗಳಲ್ಲಿ ಮಾರ್ಗ ಬದಲಾವಣೆ ಮಾಡಿದೆ. ಯಶವಂತಪುರ-ವಾಸ್ಕೋಡಿಗಾಮ ರೈಲು ಸಂಖ್ಯೆ 17309, ವಾಸ್ಕೋಡಿಗಾಮ-ಯಶವಂತಪುರ ರೈಲು ಸಂಖ್ಯೆ 17310 ಸಂಚಾರ ರದ್ದು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಮಿನಾಕ್ಷಿ ಅವರ ಅವಧಿಮುಗಿದ ಹಿನ್ನೆಲೆಯಲ್ಲಿ ಇಂದು ತೆರವಾದ ಸ್ಥಾನಕ್ಕೆ ನಾಲ್ಕು ಅರ್ಜಿಹಾಕಿದ್ದರು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಹೆಂದ್ರರವರು ಹಾಗೂ ಉಪಾದ್ಯಕ್ಷರಾಗಿ ಕೃಷ್ಣೇಗೌಡರು ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದರು. ಇದೇ ವೇಳೆ ಬೆಂಬಲಿಗರು ಪಟಾಕಿ ಸಿಡಿಸಿ ಹೂ ಗುಚ್ಚ ನೀಡಿ ಅಧ್ಯಕರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು. ಶುಭ ಹಾರೈಸಿದ್ದರು. ಈ ಸಂದರ್ಭದಲ್ಲಿ ಶ್ರವಣೂರು ಗ್ರಾಮ ಪಂಚಾಯಿತಿಯ ಸದ್ಯಸರು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA
ಗಣೇಶ್ ಕೆ.ಪಿ., ಪುತ್ತೂರು ತುಮಕೂರು ತಾಲೂಕು ಮಲ್ಲೇನಹಳ್ಳಿಯ ಗೊಲ್ಲರಹಟ್ಟಿಯಲ್ಲಿ ಬಾಣಂತಿ, ಮಗುವನ್ನ ಊರ ಹೊರಗಿಟ್ಟಿದ್ದ ಘಟನೆ ಸಾಕಷ್ಟು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಅಧಿಕಾರಿಗಳ ಗಮನಕ್ಕೂ ಬಂದಿತ್ತು. ಇಷ್ಟಾಗಿದ್ದರೂ ತಾಯಿ ಮತ್ತು ಮಗುವಿನ ರಕ್ಷಣೆಗೆ ಮುಂದಾಗದೇ ಇರುವುದು ಜಿಲ್ಲಾಡಳಿತ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಾಗಿದೆ. ಇದೀಗ ಮಗು ಸಾವನ್ನಪ್ಪಿದ್ದು, ಇದನ್ನು ಸಾವು ಎನ್ನಬೇಕೋ, ಕೊಲೆ ಎನ್ನಬೇಕೋ? ಎನ್ನುವ ಪ್ರಶ್ನೆಗೆ ಜಿಲ್ಲಾಡಳಿತ ಉತ್ತರಿಸಬೇಕಿದೆ. ಮಹಿಳೆಯರನ್ನು ನಿಕೃಷ್ಟವಾಗಿ ಕಾಣುವ ಆಚರಣೆಗಳು ಈ ಸಮುದಾಯದಲ್ಲಿದೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಸರಿಯಾದ ಕಾನೂನು ಕ್ರಮಕೈಗೊಳ್ಳದೇ ಇರುವುದರಿಂದ ಇಂದಿಗೂ ಈ ಸಾಮಾಜಿಕ ಪಿಡುಗು ಕಾಡುಗೊಲ್ಲ ಸಮುದಾಯ ಮಹಿಳೆಯರನ್ನು ಪ್ರಾಣಿಗಿಂತಲೂ ಹೀನವಾಗಿ ಕಾಣುವಂತಹ ಸಂದರ್ಭವನ್ನು ಸೃಷ್ಟಿಸಿದೆ. ಮಹಿಳೆ ಹಾಗೂ ನವಜಾತ ಶಿಶುವನ್ನು ಹೊರಗೆ ಇಟ್ಟಿರುವ ವಿಚಾರದ ಬಗ್ಗೆ “ನಮ್ಮತುಮಕೂರು” ಮಾಧ್ಯಮ ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ಈ ವರದಿ ಇಡೀ ರಾಜ್ಯದಲ್ಲೇ ಸಂಚಲನವನ್ನು ಸೃಷ್ಟಿಸಿತ್ತು. ರಾಜ್ಯದಲ್ಲಿ ವ್ಯಾಪಕವಾಗಿ ಈ ಘಟನೆ ಟೀಕೆಗೆ ಗುರಿಯಾಗಿತ್ತು. ಇಷ್ಟೆಲ್ಲ ನಡೆದರೂ ಆ…
ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವ ವೇಳೆ ವೃದ್ಧರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ ಪ್ರಕರಣ ಸಂಬಂಧ ಬಿಎಂಆರ್‌ಸಿಎಲ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿರುವ ಟಿ. ಮುತ್ತುರಾಜು ಅವರ ತಂದೆ ತಿಮ್ಮೇಗೌಡ (67) ಮೃತಪಟ್ಟವರು. ತಿಮ್ಮೇಗೌಡ ಅವರದ್ದು ಚಾಮರಾಜನಗರ ಜಿಲ್ಲೆಯ ಕಂಡಯ್ಯನಪಾಳ್ಯ ಗ್ರಾಮ. ಬಿಎಂಆರ್‌ಸಿಎಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ದೂರು ನೀಡಲಾಗಿದೆ. ‘ತಿಮ್ಮೇಗೌಡ ಅವರು ಮಗನ ಮನೆಗೆ ಬಂದಿದ್ದರು. ಜುಲೈ 20ರಂದು ಊರಿಗೆ ವಾಪಸ್ ತೆರಳಲು ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣಕ್ಕೆ ಬಂದಿದ್ದರು. ಮಾರ್ಗ ಮಧ್ಯದಲ್ಲಿ ಮೆಟ್ರೊ ರೈಲಿನ ಒಳಗೆ ಕುಸಿದು ಬಿದ್ದಿದ್ದರು. ಅವರನ್ನು ಪ್ರಯಾಣಿಕರು ಎಂ. ಜಿ ರಸ್ತೆ ನಿಲ್ದಾಣದಲ್ಲಿ ಇಳಿಸಿದ್ದರು. ನಿಲ್ದಾಣದಲ್ಲಿದ್ದ ಪ್ರಯಾಣಿಕರೇ ಅವರನ್ನು ಆಟೊದಲ್ಲಿ ಕರೆದೊಯ್ದು ಇನ್ ಫೆಂಟ್ರಿ ರಸ್ತೆಯ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೆಟ್ರೊ ರೈಲಿನ ಒಳಗಡೆ ಮೆಟ್ರೊ ಅಧಿಕಾರಿಗಳು…