Subscribe to Updates
Get the latest creative news from FooBar about art, design and business.
- ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
- ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
- ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
- ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
- ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ, ಕಲಾತಂಡಗಳ ಮೆರುಗು
- ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
- ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
- ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು
Author: admin
ನವ ದೆಹಲಿ: ಹೆಲ್ತ್ ಡ್ರಿಂಕ್ ಬೋರ್ನ್‌ವಿಟಾದಲ್ಲಿ ಸಕ್ಕರೆಯ ಮಟ್ಟ ಅಧಿಕವಾಗಿರುದರಿಂದ ಇದರ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗದಿಂದ (NCPCR) ಬೋರ್ನ್‌ವೀಟಾ ತಯಾರಕ ( Bournvita ) ಮೋಂಡೆಲ್ಜ್ ಇಂಡಿಯಾ ಇಂಟರ್‌ನ್ಯಾಶನಲ್‌ಗೆ ನೋಟಿಸ್ ಜಾರಿಮಾಡಿದೆ. ಇದರ ಬಗ್ಗೆ ಪರಾಮರ್ಶೆ ನಡೆಸಬೇಕು ಹಾಗೂ ದಿಕ್ಕು ತಪ್ಪಿಸುವ ಜಾಹೀರಾತು ಮತ್ತು ಪ್ಯಾಕೇಜಿಂಗ್ ಲೇಬಲ್‌ಗಳನ್ನು ಹಿಂತೆಗೆದುಕೊಳ್ಳುವಂತೆ (misleading advertisements) ಎನ್‌ಸಿಪಿಸಿಆರ್ ಸೂಚನೆ ನೀಡಿದೆ. ಮಕ್ಕಳ ಹಕ್ಕುಗಳ ಆಯೋಗವು ಕಂಪನಿಗೆ ನೀಡಿರುವ ನೋಟಿಸ್‌ನಲ್ಲಿ, ನಿಮ್ಮ ಉತ್ಪನ್ನದಲ್ಲಿ ಅಧಿಕ ಸಕ್ಕರೆಯ ಪ್ರಮಾಣ ಹೆಚ್ಚು ಇರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದೆ. ಇದು ಮಕ್ಕಳ ಆರೋಗ್ಯ ದ ಮೇಲೆ ತುಂಬಾ ಹಾನಿಯುಂಟಾಗುತ್ತದೆ ಇದರ ಬಗ್ಗೆ ವಿವರಣೆ ನೀಡುವಂತೆ ತಿಳಿಸಿದೆ. ಕಂಪನಿಯ ಅಧ್ಯಕ್ಷ ದೀಪಕ್ ಅಯ್ಯರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕುರಿತ ಸಂಸ್ಥೆಯು ಆಹಾರ ವಿಚಾರದಲ್ಲಿ ದಿಕ್ಕು ತಪ್ಪಿಸುವ ಜಾಹೀರಾತು ನೀಡುವ ಕಂಪನಿಗಳ ವಿರುದ್ಧ ಹೆಚ್ಚು ಕ್ರಮ ಕೈಗೊಳ್ಳಬೇಕು ಎಂದು ಎಫ್‌ಎಸ್‌ಎಸ್‌ಎಐಗೆ ಮಕ್ಕಳ ಹಕ್ಕುಗಳ ಆಯೋಗವು…
ಬೆಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ಹೋಗಲು ಸಂಚು ರೂಪಿಸಿದ್ದ ಪಂಜಾಬ್ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಾಬ್ ಮೂಲದ ಕುಲ್ವಂತ್ ಸಿಂಗ್ ಬಂಧಿತ ಆರೋಪಿ. ಈತ ಆಸ್ಟ್ರೇಲಿಯಾಗೆ ಹೋಗಲು ನಕಲಿ ಪಾಸ್‌ಪೋರ್ಟ್ ಮಾಡಿಸಿದ್ದ. ಹಳೆ ಪಾಸ್‌ಪೋರ್ಟ್ ನಲ್ಲಿ ವೀಸಾ ರಿಜೆಕ್ಟ್ ಆಗಿದ್ದ ಕಾರಣ ನಕಲಿ ಆಧಾರ್ ಕಾರ್ಡ್ ಸಲ್ಲಿಸಿ ನಕಲಿ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ಈತನ ಸಹೋದರ ಕೂಡ ಆಸ್ಟ್ರೇಲಿಯಾದಲ್ಲಿ ಕೆಲಸ ಮಾಡಿಕೊಂಡಿದ್ದ. ಹೀಗಾಗಿ ತಾನೂ ಕೂಡ ಆಸ್ಟ್ರೇಲಿಯಾಗೆ ತೆರಳಿ ಹಣ ಮಾಡಲು ಈ ರೀತಿ ಅಡ್ಡ ದಾರಿ ಹಿಡಿದು ಪಾಸ್‌ಪೋರ್ಟ್ ಮಾಡಿಸಿರುವುದಾಗಿ ವಿಚಾರಣೆ ವೇಳೆ ಆರೋಪಿ ಬಾಯಿಬಿಟ್ಟಿದ್ದಾನೆ. ಲೇಬರ್ ವೀಸಾದಲ್ಲಿ ವಿದೇಶಕ್ಕೆ ತೆರಳಲು ಆರೋಪಿ ಬಯಸಿದ್ದ. ಅನುಮಾನಗೊಂಡ ಏರ್‌ಪೋರ್ಟ್ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ ಮಾಡಿದಾಗ ವಿಷಯ ಬೆಳಕಿಗೆ ಬಂದಿದೆ. ಆರೋಪಿ ತನಿಖೆ ವೇಳೆ ಎರಡು ಪಾಸ್‌ಪೋರ್ಟ್ ಇರುವುದು ಗೊತ್ತಾಗಿದೆ. ಈ ಹಿನ್ನಲೆ ಆರೋಪಿಯನ್ನ ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಮುಂಬೈ ಪಾಸ್‌ಪೋರ್ಟ್ ಕಚೇರಿಯಲ್ಲಿ ನಕಲಿ ಮಾಡಿರುವುದು ತಿಳಿದು…
ಬೆಳಗಾವಿ: 5 ವರ್ಷದ ಹಿಂದೆ 2018ರ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿ ಮತದಾರರಿಗೆ ನೀಡಿದ್ದ ಭರವಸೆಗಳಲ್ಲಿ ಶೇ.98ರಷ್ಟು ಈಡೇರಿಸಿದ್ದೇನೆ. ವಿರೋಧ ಪಕ್ಷದ ಶಾಸಕಿಯಾಗಿದ್ದರಿಂದ 2 ಭರವಸೆಗಳು ಮಾತ್ರ ಬಾಕಿ ಉಳಿದಿದ್ದು, ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದ್ದು ಅವುಗಳನ್ನೂ ಮೊದಲ ಆದ್ಯತೆಯ ಮೇಲೆ ಈಡೇರಿಸುತ್ತೇನೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಪ್ರಯುಕ್ತ ಕಂಗ್ರಾಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಅವರು ಪ್ರಚಾರ ನಡೆಸುತ್ತಿದ್ದರು. ಕ್ಷೇತ್ರ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹಿಂದುಳಿದಿದ್ದರಿಂದ ಕಳೆದ ಬಾರಿ ಮೂಲಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿದ್ದೇನೆ. ರಸ್ತೆ, ಚರಂಡಿ, ಕುಡಿಯುವ ನೀರು, ಶಾಲೆ, ದೇವಸ್ಥಾನ, ಸಮುದಾಯ ಭವನಗಳ ಬೇಡಿಕೆಗಳನ್ನು ಈಡೇರಿಸಿದ್ದೇನೆ. ಇದರ ಜೊತೆಗೆ, ಕಾಲೇಜು ಮತ್ತು ಆಸ್ಪತ್ರೆ ಕಟ್ಟಿಸುವ ಯೋಜನೆಯನ್ನೂ ನಾನು ಹಾಕಿಕೊಂಡಿದ್ದೆ. ಆದರೆ ನಮ್ಮ ಸರಕಾರವಿಲ್ಲದ್ದರಿಂದ ಅದು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನು ಈಡೇರಿಸುತ್ತೇನೆ ಎಂದು ಅವರು…
ಬೆಂಗಳೂರು: ಲಿಫ್ಟ್‌ಗೆ ಸಿಲುಕಿ ಉತ್ತರಪ್ರದೇಶದ ಮೂಲದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಜೆ.ಸಿ ರಸ್ತೆಯ ಭರತ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್ (26) ಸಾವನ್ನಪ್ಪಿದ್ದಾರೆ. ಆಟೋಮೊಬೈಲ್‌ನಲ್ಲಿ ಕೆಲಸ ಮಾಡುತ್ತಿದ್ದ ವಿಕಾಸ್ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೇಸಿಗೆಯಲ್ಲಿ ಕಂಡುಬರುವ ಸಾಮಾನ್ಯವಾಗಿ ಕಣ್ಣಿನ ರೋಗಗಳಲ್ಲಿ ಒಂದಾದ ಕೆಂಪು ಕಣ್ಣಿನ ಸಮಸ್ಯೆ . ಇದು ಕಣ್ಣಿನಲ್ಲಿ ಬರುವಂತಹ ರೋಗವಾಗಿದೆ. ಕಾಂಜಕ್ಟಿವಾ ಎಂಬುದು ಕಣ್ಣಿನ ಹೊರಭಾಗದ ತೆಳುವಾದ ಬಿಳಿ ಪದರವಾಗಿದೆ. ಕಣ್ಣಿನ ಸಮಸ್ಯೆ ಎನ್ನುವುದು ಒಂದು ಸೋಂಕು ಮತ್ತು ಊತವಾಗಿರುತ್ತದೆ. ಈ ರೋಗವನ್ನು ಕಣ್ಣಿನ ಕಾಯಿಲೆ ಎಂದು ಕರೆಯಲಾಗುತ್ತದೆ. ಇದು ಸಾಮಾನ್ಯವಾಗಿ ವೈರಸ್ ನಿಂದ ಉಂಟಾಗುತ್ತದೆ.ಬೇಸಿಗೆಯ ಸಮಯದಲ್ಲಿ ಸಾಮಾನ್ಯವಾಗಿ ಕಣ್ಣಿನಲ್ಲಿ ಕೆಂಪಾಗುವಿಕೆ, ಕಣ್ಣಿನಲ್ಲಿ ನೋವು , ಕಣ್ಣುಗಳಲ್ಲಿ ನೀರು ಬರುವುದು , ಕಣ್ಣುರೆಪ್ಪೆಗಳಲ್ಲಿ ಊತ, ತುರಿಕೆ, ಬೆಳಿಗ್ಗೆ ಎದ್ದಾಗ ಕೀವು ಇರುವುದರಿಂದ ಕಣ್ಣು ತೆರೆಯಲು ತುಂಬಾ ಕಷ್ಟವಾಗುತ್ತದೆ, ಇತ್ಯಾದಿ. ರೋಗ ಹರಡುವುದು ಹೇಗೆ ? ಬೇರೆಯವರಿಗೆ ಕೆಂಪು ಕಣ್ಣಿನ ಕಾಯಿಲೆ ಇದ್ದಾಗ ಅವರ ಕಣ್ಣಿನ ದ್ರವದಲ್ಲಿ ವೈರಸ್ ಇರುತ್ತದೆ. ಆದ್ದರಿಂದ ಬೇರೆಯವರಿಗೆ ಈ ರೋಗ ಹರಡಲು ಕಾರಣವಾಗುತ್ತದೆ. ರೋಗ ಮುಕ್ತ ಕಣ್ಣನ್ನು ಸ್ಪರ್ಶಿಸಿದಾಗ ರೋಗ ಹರಡಬಹುದು. ರೋಗದಿಂದ ಬಳಲುತ್ತಿರುವ ವ್ಯಕ್ತಿಯು ಬಳಸುವ ಎಲ್ಲಾ ವಸ್ತುಗಳಲ್ಲಿ ಕೀಟಾಣುಗಳು ಇರುತ್ತವೆ. ಆದ್ದರಿಂದ ಈ ವಸ್ತುಗಳನ್ನು ಬೇರೆಯವರು…
ಚಿಕ್ಕಬಳ್ಳಾಪುರ: ಸತತ 60 ವರ್ಷಗಳ ಕಾಲ ಪರಿಶಿಷ್ಟರ ಮತಗಳನ್ನು ಪಡೆದ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಿದ ಕೊಡುಗೆ ಕೇವಲ ಶೂನ್ಯ ಎಂದು ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದ್ದಾರೆ. ತಾಲೂಕಿನ ಅವುಲಗುರ್ಕಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸಿದೆ. ಈ ಭಾಗದ ರೈತರು ಹೂ ಬೆಳೆಯಲು ನೀರಿನ ಸಮಸ್ಯೆ ಹಿಂದೆ ಎಷ್ಟಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಬಿಜೆಪಿ ನೀಡಿದ ಭರವಸೆಯಂತೆ ಎರಡು ವರ್ಷದಲ್ಲಿ ಕ್ಷೇತ್ರದ ಎಲ್ಲ ಕೆರೆಗಳನ್ನು ತುಂಬಿಸಲಾಗಿದೆ. ಇದರಿಂದಾಗಿ ರೈತರು ಸಮೃದ್ಧಿಯಾಗಿ ಬೆಳೆಗಳನ್ನು ಬೆಳೆಯಲು ಅನುಕೂಲವಾಗಿದೆ ಎಂದಿದ್ದಾರೆ. ಚಿಕ್ಕಬಳ್ಳಾಪುರದಿಂದ ಕೇತೇನಹಳ್ಳಿವರೆಗೂ ಹೋಗಲು ಈ ಹಿಂದೆ ಸಾಹಸ ಪಡಬೇಕಿತ್ತು. ಈ ಅಲ್ಪ ದೂರವನ್ನು ಕ್ರಮಿಸಲು ಸುಮಾರು ಒಂದು ಗಂಟೆ ಸಮಯ ಬೇಕಿತ್ತು. ಅಂತಹ ಕೆಟ್ಟ ರಸ್ತೆಯನ್ನು ಈಗ ದುರಸ್ತಿ ಮಾಡಲಾಗಿದೆ. ಇದೇ ದೂರವನ್ನು ಈಗ ಕೇವಲ 15 ನಿಮಿಷದಲ್ಲಿ ಸೇರಬಹುದಾಗಿದೆ. ಅಲ್ಲದೆ ಈ ಪ್ರದೇಶದ ರೈತರು ಕೃಷಿಯನ್ನು ಬಿಡುವ…
‘ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲು ಅನುಭವಿಸಲಿದೆ ಎಂದು ಅರಿತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹತಾಶರಾಗಿ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇಂದು ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡಿರುವುದು ಬಹಳ ಸಂತೋಷವಾಗಿದೆ. ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮೋದಿ ಅವರು ತಮ್ಮ ಸರ್ಕಾರ ಜನರ ವಿಶ್ವಾಗಳಿಸಲು ವಿಫಲವಾಗಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾಗಿವೆ. ಅವರು 2014ರ ಚುನಾವಣೆ ಸಮಯದಲ್ಲಿ ದೇಶದ ಮತದಾರರಿಗೆ ಮತದಾನ ಮಾಡುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಿ ಮತ ಹಾಕಿ ಎಂದಿದ್ದರು. ಈಗ ಅದನ್ನೇ ಮಾಡಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಿದ್ದೇವೆ. ಮೀಸಲಾತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಮೀಸಲಾತಿ ಎಲ್ಲಿದೆ? ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅವರು ತಮ್ಮ ಆದೇಶಕ್ಕೆ ತಡೆ…
ಮೈಸೂರು: ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ತಮ್ಮ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ ಹಾಗೂ ನಟ ದುನಿಯಾ ವಿಜಯ್ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವುದಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ನಡುವೆ ತಾವೂ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅತ್ಯಧಿಕ ಮತಗಳಿಂದ ಸಿದ್ದರಾಮಯ್ಯ ಅವರು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್…
ನವದೆಹಲಿ: ಕಳೆದ ನಾಲ್ಕು ದಿನಗಳಿಂದ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ಧರಣಿ ಕುಳಿತಿದ್ದು, ಇಂದು ಐದನೇ ದಿನವೂ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮತ್ತು ಅದರ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಕುಸ್ತಿಪಟುಗಳು ಬುಧವಾರ ತಡರಾತ್ರಿ ಜಂತರ್ ಮಂತರ್‌ನಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಿ ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು. ಭಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಸೇರಿದಂತೆ ಧರಣಿಯಲ್ಲಿ ಕುಳಿತಿದ್ದ ಕುಸ್ತಿಪಟುಗಳು ಛತ್ತೀಸ್‌ಗಢದ ದಾಂತೇವಾಡದಲ್ಲಿ ಹುತಾತ್ಮರಾದ ಯೋಧರಿಗೆ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ, ಕುಸ್ತಿಪಟುಗಳು ತಮ್ಮ ಮಾತನ್ನು ಪ್ರಧಾನಿ ಕೂಡ ಆಲಿಸಬೇಕು ಎಂದು ಕೇಳಿಕೊಂಡರು. ಕುಸ್ತಿಪಟುಗಳು ತಮ್ಮ ಕುಂದು ಕೊರತೆಗಳನ್ನು ಪ್ರಧಾನಿ ಬಳಿ ಹೇಳಿಕೊಳ್ಳಲು ಸಮಯಾವಕಾಶ ನೀಡುವಂತೆ ಮನವಿ ಮಾಡಿದರು. ಕುಸ್ತಿ ಫೆಡರೇಶನ್ ಅಧ್ಯಕ್ಷ ಭೂಷಣ್ ಶರಣ್ ಸಿಂಗ್ ವಿರುದ್ಧ ತನಿಖೆಗೆ…
ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ: ಸಾರ್ವಜನಿಕ ದೊಡ್ಡ ಆಸ್ಪತ್ರೆಯ ಕನಸು, ಹೈಟೇಕ್ ಸರಕಾರಿ ಬಸ್ ಡಿಪೋ, ಗ್ರಾಮೀಣ ಭಾಗಕ್ಕೆ ಸಾರಿಗೆ ಸಂಪರ್ಕ.. ನಿರುದ್ಯೋಗ ನಿವಾರಣೆಗೆ ಫ್ಯಾಕ್ಟರಿಗಳ ನಿರ್ಮಾಣ.. ಬೈರಗೊಂಡ್ಲು ಬಫರ್ ಡ್ಯಾಂ ನಿರ್ಮಾಣದ ನೀರಾವರಿ ಯೋಜನೆ.. ಪ್ರವಾಸಿ ತಾಣಗಳ ಅಭಿವೃದ್ದಿಗೆ ಆಧ್ಯತೆ.. ಹೈಟೇಕ್ ಗ್ರಂಥಾಲಯ ಸ್ಥಾಪನೆಯ ಕನಸು ಇನ್ನೂ ಕೊರಟಗೆರೆ ಕ್ಷೇತ್ರದಲ್ಲಿ ನನಸಾಗಿಯೇ ಉಳಿದಿದೆ.. ಸುವರ್ಣಮುಖಿ, ಜಯಮಂಗಳಿ ಮತ್ತು ಗರುಡಾಚಲ ಎಂಬ 3ನದಿಗಳು ಹಾದುಹೋಗಲಿದೆ. ಸಸ್ಯಸಂಜೀವಿನಿ ಕ್ಷೇತ್ರ ಸಿದ್ದರಬೆಟ್ಟ, ಏಳುಸುತ್ತಿನ ಕೋಟೆ ಚನ್ನರಾಯನ ದುರ್ಗ ಮತ್ತು ಗೊರವನಹಳ್ಳಿ ಮಹಾಲಕ್ಷ್ಮೀ ಸನ್ನಿಧಾನ ಇರುವಂತಹ ವಿಶೇಷವಾದ ಪ್ರಕೃತಿ ಮತ್ತು ಪ್ರವಾಸಿ ತಾಣ ನಮ್ಮ ಕೊರಟಗೆರೆ ಕ್ಷೇತ್ರ. ರಾಜಕೀಯ ಕೈಮೇಲಾಟಕ್ಕೆ ಸಿಮೀತವಾದ ಕೊರಟಗೆರೆ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲತೆಯಾಗಿ ಯುವಕರು ಉದ್ಯೋಗಕ್ಕಾಗಿ ಹೊರರಾಜ್ಯಕ್ಕೆ ತೆರಳುವ ದುಸ್ಥಿತಿ ಬಂದಿದೆ. ಉದ್ಯೋಗ ಇಲ್ಲದೇ ಹೊರರಾಜ್ಯಕ್ಕೆ ವಲಸೆ: ಬಜ್ಜನಹಳ್ಳಿ ಸಮೀಪದ ಕಣ್ವಾ ಗಾರ್ಮೆಂಟ್ಸ್ ಗೆ 2020ರಲ್ಲಿ ಬೀಗಬಿದ್ದ ಪರಿಣಾಮ 4 ಸಾವಿರ ಉದ್ಯೋಗಕ್ಕೆ ಕತ್ತರಿಬಿದ್ದಿದೆ. ಕೊರಟಗೆರೆ ಕ್ಷೇತ್ರದಿಂದ…