Subscribe to Updates
Get the latest creative news from FooBar about art, design and business.
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
Author: admin
ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿಗೆ ಟೆಂಡರ್ ಕೊನೆಗೂ ಸರ್ಕಾರದ ಅಂಗಳಕ್ಕೆ ತಲುಪಿದೆ. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಮುಂದಿನ ಸಚಿವ ಸಂಪುಟದ ಮುಂದೆ ಗುತ್ತಿಗೆ ಅನುಮೋದನೆ ವಿಷಯ ಮಂಡಿಸಲಿದ್ದಾರೆ. ನಾಲ್ಕು ಬಾರಿ ಟೆಂಡರ್ ಕರೆದಿದ್ದ ಈ ಬಾಕಿ ಕಾಮಗಾರಿಗೆ ಮಾರ್ಚ್‌ನಲ್ಲೇ ಗುತ್ತಿಗೆದಾರರು ಅಂತಿಮಗೊಂಡಿದ್ದರು. ಅವರೊಂದಿಗೆ ಚೌಕಾಸಿ ಮಾಡುವ ಪ್ರಕ್ರಿಯೆಗೆ ಬಿಬಿಎಂಪಿ ಅಧಿಕಾರಿಗಳು ಅಧಿಕ ಸಮಯ ತೆಗೆದುಕೊಂಡಿದ್ದರು. ಈ ವಿಳಂಬ ನೀತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೂ ಆಕ್ರೋಶಗೊಂಡಿದ್ದರು. ಬಿಬಿಎಂಪಿ ಅಧಿಕಾರಿಗಳು ಕೊನೆಗೂ ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿಗೆ ಟೆಂಡರ್ ಮೊತ್ತಕ್ಕಿಂತ ಶೇ 18. 30ರಷ್ಟು ಹೆಚ್ಚಿನ ಮೊತ್ತಕ್ಕೆ ಗುತ್ತಿಗೆದಾರರ ಮನವೊಲಿಸಿದ್ದಾರೆ. ಜುಲೈ 17ರಂದು ಈ ಟೆಂಡರ್ ಅನುಮೋದನೆಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕಳುಹಿಸಿಕೊಟ್ಟಿದ್ದಾರೆ. ‘ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿ ಟೆಂಡರ್ ಅನುಮೋದನೆ ಸರ್ಕಾರಕ್ಕೆ ಬಂದಿದೆ. ಈ ಮುಂದಿನ ಸಚಿವ ಸಂಪುಟದ ಮುಂದೆ ಅದನ್ನು ತರುವಂತೆ ರಾಕೇಶ್ ಸಿಂಗ್…
ತಮಿಳುನಾಡಿನ ಧರ್ಮಪುರಿಯಿಂದ ನಗರಕ್ಕೆ ಬಸ್ ನಲ್ಲಿ ಬಂದು ರಾಜಧಾನಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮಾಡುತ್ತಿದ್ದ ಕುಖ್ಯಾತ ಖದೀಮನನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿಯಾಗಿದ್ದು 30 ಲಕ್ಷ ತೂಕದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದ ಆರೋಪಿ ಕಳೆದ 25 ವರ್ಷಗಳ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬನಶಂಕರಿ, ಸಿ. ಕೆ. ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ, ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 13ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದ. 2016ರಿಂದ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ರಾಮಸ್ವಾಮಿ ಹಿಂದೆ ವ್ಯವಸ್ಥಿತವಾಗಿ ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಧರ್ಮಪುರಿಯ ಬಸ್ ನಿಲ್ದಾಣದ ಪಾರ್ಕಿಂಗ್ ನಲ್ಲಿ ಬೈಕ್ ನಿಲ್ಲಿಸಿ ಅಲ್ಲಿಂದ ಬಸ್ ನಲ್ಲಿ ನಗರಕ್ಕೆ ಬಂದು ಬೀಗ ಹಾಕಿರುವ ಮನೆಗಳನ್ನ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ. ಕದ್ದ…
ಶಿಕ್ಷಣ ಕ್ಷೇತ್ರದ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ಪಠ್ಯಕ್ರಮ ಬದಲಾಯಿಸದೆ ಹೊಸ ಪಠ್ಯಕ್ರಮದಲ್ಲಿ ಸಣ್ಣ ಬದಲಾವಣೆಗಳನ್ನು ತರಲಾಗಿದೆ ಎಂದರು. ಪಠ್ಯಕ್ರಮ ವನ್ನು ಪರಿಶೀಲಿಸಿದ ನಂತರ, ವಿದ್ಯಾರ್ಥಿಗಳ ವೃತ್ತಿ ಜೀವನಕ್ಕೆ ಅಗತ್ಯವಾದ ಪಾಠಗಳನ್ನು ಮಾತ್ರ ಉಳಿಸಿಕೊಳ್ಳ ಲಾಗುತ್ತದೆ. ಪಠ್ಯಗಳನ್ನು ಪರಿಷ್ಕರಿಸುವ ಹಿಂದೆ ಯಾವುದೇ ರಾಜಕೀಯ ಅಜೆಂಡಾ ಇಲ್ಲ ಎಂದು ಸ್ಪಷ್ಟಪಡಿಸಿದರು. ಜಿಲ್ಲೆಗಳಲ್ಲಿ ಶಿಕ್ಷಕರ ವರ್ಗಾವಣೆ ಆನ್ ಲೈನ್ ಮೂಲಕ ಮಾಡಲಾಗಿದೆ. ಈ ವಿಚಾರವಾಗಿ ನ್ಯಾಯಾಲಯವು ಅನುಮತಿ ನೀಡಿದ ನಂತರ 13,500 ಖಾಯಂ ಶಿಕ್ಷಕರನ್ನು ನೇಮಿಸಲು ಸರ್ಕಾರ ಯೋಜಿಸಿದೆ ಎಂದು ಹೇಳಿದರು. ಕಾಂಗ್ರೆಸ್ ಗೆ ಜನರು ನೀಡಿ ರುವ ಉತ್ತಮ ಜನಾದೇಶವನ್ನು ಬಳಸಿಕೊಂಡು ಸಮಾಜದಲ್ಲಿರುವ ಆರ್ಥಿಕ ವರ್ಗ ಹಾಗೂ ದುರ್ಬಲ ವರ್ಗದವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರ ಮಧು ಬಂಗಾರಪ್ಪ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಜುಲೈ 26 ಪ್ರತಿವರ್ಷ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸುತ್ತೇವೆ. 1999 ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಮಡಿದ ಭಾರತೀಯ ಸೈನಿಕರ ಶೌರ್ಯ ಮತ್ತು ಪರಾಕ್ರಮಕ್ಕೆ ಗೌರವ ಸಲ್ಲಿಸಲು ಪ್ರತಿವರ್ಷ ಜುಲೈ 26 ರಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. 1999 ರಲ್ಲಿ ಪಾಕಿಸ್ತಾನಿ ಸೈನಿಕರು ಜಮ್ಮು-ಕಾಶ್ಮಿರದಲ್ಲಿ ಗಡಿ ನಿಯಂತ್ರಣಾ ರೇಖೆಯನ್ನು ದಾಟಿ ನಮ್ಮ ಬೆಟ್ಟಗಳನ್ನು ವಶಪಡಿಸಿಕೊಂಡಿದ್ದರು. ಇವರ ವಿರುದ್ಧ ಭಾರತೀಯ ಸೈನಿಕರು ವೀರಾವೇಶದಿಂದ ಹೋರಾಡಿ ವಿಜಯಶಾಲಿಯಾದರು. ಈ ಮಿಲಿಟರಿ ಕಾರ್ಯಾಚರಣೆಗೆ “ಕಾರ್ಗಿಲ್ ಯುದ್ಧ” ಎಂದು ಕರೆಯುತ್ತಾರೆ. ಇಡೀ ಕಾರ್ಯಾಚರಣೆಗೆ ಆಪರೇಷನ್ ವಿಜಯ್ ಎಂದು ಹೆಸರಿಸಲಾಗಿದೆ. 2023 ಜುಲೈ 26ರಕ್ಕೆ ಕಾರ್ಗಿಲ್ ಯುದ್ಧ ಸಂಭವಿಸಿ 24 ವರ್ಷವಾಯಿತು. 1999 ರಲ್ಲಿ ಕಾರ್ಗಿಲ್ ಯುದ್ಧವು ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (LoC) ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯಿತು. ಅಲ್ಲಿ ಭಾರತೀಯ ಸೇನೆಯು ಪಾಕಿಸ್ತಾನಿ ಸೈನಿಕರನ್ನು ಬಗ್ಗು ಬಡಿಯುವ ಮೂಲಕ ‘ಆಪರೇಷನ್ ವಿಜಯ್’ ಅಡಿಯಲ್ಲಿ ಪ್ರಸಿದ್ಧ ‘ಟೈಗರ್ ಹಿಲ್’…
ತುಮಕೂರು: ತುಮಕೂರು ತಾಲೂಕು ಮಲ್ಲೇನಹಳ್ಳಿಯಲ್ಲಿ ಇರುವ ಕಾಡುಗೊಲ್ಲ ಸಮುದಾಯದ ಮೂಢನಂಬಿಕೆಗೆ ನವಜಾತ ಶಿಶು ಎಂದು ಮೃತಪಟ್ಟಿರುವ ಘಟನೆ ನಡೆದಿದೆ. ಕಾಡುಗೊಲ್ಲ ಸಮುದಾಯದವರು ಬಾಣಂದಿರನ್ನು ಗ್ರಾಮದ ಒಳಗೆ ಸೇರಿಸದೆ ಊರವರೆಗಿನ ಗುಡಿಸಿಲಿನಲ್ಲಿ ವಾಸ ಮಾಡಲು ಸೂಚಿಸುತ್ತಾರೆ ಇದು ಅವರ ಕಟ್ಟುಪಾಡು ಆಗಿದೆ. ಇದೀಗ 10 ದಿನಗಳ ಹೆಣ್ಣು ಮಗುವೊಂದು ಮೃತಪಟ್ಟಿದೆ. ಜುಲೈ 18ರಂದು ಊರ ಹೊರಗಿನ ಗುಡಿಸಿಲಿನಲ್ಲಿ ಬಾಣಂತಿ ಹಾಗೂ ಮಗುವನ್ನು ಇರಿಸಲಾಗಿತ್ತು. ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಶೀತಪೀಡಿದ ವಾತಾವರಣ ಹಾಗೂ ತುಂತುರು ಮಳೆ ಆಗುತ್ತಿದ್ದು ಈ ನಡುವೆ ಮೂಡನಂಬಿಕೆ ಇನ್ನು ಪಾಲಿಸಿಕೊಂಡು ಬರುತ್ತಿರುವ ಗ್ರಾಮಸ್ಥರ ಜಿದ್ದಿಗೆ ಮಗು ಬಲಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA
ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದ್ದು, ಬಿ. ಕೆ. ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಸಿಂಗಾಪೂರ್ ಕಾರ್ಯತಂತ್ರದ ಕಥೆ ಹೇಳಿದ್ದಾರೆ. ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೊದಲ ದಿನದಿಂದ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರುವ ವಿಧಾನ, ಸೀಕ್ರೆಟ್ ಬ್ಯಾಲೆಟ್ ಬಳಕೆ ಮಾಡಿರುವುದು ಬಹುಮತ ಇದ್ದರೂ ಇಷ್ಟು ಸರ್ಕಸ್ ಮಾಡಿದ್ದು ಎಲ್ಲವೂ ಸರಿ ಇಲ್ಲ ಅಂತ ಆರ್ಥವಾಗುತ್ತದೆ. ಸಿದ್ದರಾಮಯ್ಯ ಗ್ಯಾರೆಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಬಹಿರಂಗವಾಗಿಯೇ ಹೇಳಿದ್ದಾರೆ. ಸಚಿವರುಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ಅರ್ಧ ಸತ್ಯ ಎಂದರು. ಉಪ-ಮುಖ್ಯಮಂತ್ರಿ ಡಿ.…
ತುಮಕೂರು: ಕಳೆದ ಮೂರು ದಿನಗಳಿಂದಲೂ ತುಮಕೂರು ಜಿಲ್ಲೆಯಾದ್ಯಂತ ವಿವಿಧಡೆ ಉತ್ತಮ ಮಳೆ ಆಗುತ್ತಿದ್ದು, ಜಿಟಿ ಜಿಟಿ ಮಳೆಯಿಂದಾಗಿ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ತುಮಕೂರು ಜಿಲ್ಲೆಯಲ್ಲಿ ದಿನವಿಡೀ ಸುರಿಯುತ್ತಿರುವ ಜಡಿ ಮಳೆಯಿಂದ ಕೆಲವೆಡೆ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ಕೆಲ ಕಾಲ ಬಿಡುವು ಕೊಡುವ ಮಳೆರಾಯ ಮತ್ತೆ ಹನಿ ರೂಪದಲ್ಲಿ ಧರೆಗೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೆಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಮಳೆಯಲ್ಲಿ ಕೊಡೆ ಹಿಡಿದು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಬಿಟ್ಟು ಬಿಡದೆ ಸುರಿದ ಮಳೆ ವಿವರ ಪ್ರಕಾರ: ತುಮಕೂರು ತಾಲೂಕಿನ ವ್ಯಾಪ್ತಿಯಲ್ಲಿ 5.2 ಮಿ.ಮೀ . , ಗುಬ್ಬಿ ತಾಲೂಕಿನ 10ಮಿ.ಮೀ. , ಕುಣಿಗಲ್ ತಾಲೂಕಿನಲ್ಲಿ 5 ಮಿ.ಮೀ. , ತಿಪಟೂರು ತಾಲೂಕಿನಲ್ಲಿ 4.3 ಮಿ.ಮೀ. , ಚಿಕ್ಕನಾಯಕನಹಳ್ಳಿ. ತಾಲೂಕಿನ ಭಾಗದಲ್ಲಿ 7.3 ಮಿ.ಮೀ., ತುರುವೆಕೆರೆ 10 ಮಿ.ಮೀ., ಮಧುಗಿರಿ 3.3 ಮಿ.ಮೀ., ಶಿರಾ 5.2…
ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಆರ್. ನಾರಾಯಣ್ ಅವರನ್ನು ಅಮಾನತುಗೊಳಿಸಲಾಗಿದೆ. ಮಾರ್ಚ್‌ನಲ್ಲಿ ಸ್ಥಳ ನಿಯುಕ್ತಿಗೊಳಿಸುವ ಸಮಾಲೋಚನಾ ಸಭೆಗೂ ಭಾಗವಹಿಸಲಿರಲಿಲ್ಲ. ಚುನಾವಣಾ ಕಾರ್ಯ ನಿರ್ವಹಿಸಲು ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ನಂತರ, ಮೇ ತಿಂಗಳಲ್ಲಿ ನಡೆಸಿದ್ದ ಸಮಾಲೋಚನಾ ಸಭೆಗೂ ಗೈರಾಗಿದ್ದರು. ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಎಂದು ಆದೇಶ ಹೊರಡಿಸಲಾಗಿದೆ. ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಬೆಂಗಳೂರಿನ ಬಿದರಹಳ್ಳಿ ಗ್ರಾಮಕ್ಕೆ 72 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಲಿಂಬಾವಳಿ ಹೇಳಿದ್ದಾರೆ. ಬಿದರಹಳ್ಳಿ ಗ್ರಾಮ ಪಂಚಾಯತಿ ಸಭೆಯಲ್ಲಿ ಅವರು ಮಾತನಾಡಿದರು. ಈ ಗ್ರಾಮ ಪಂಚಾಯತಿಯು ಒಟ್ಟು 8 ಗ್ರಾಮಗಳನ್ನು ಒಳಗೊಂಡಿದ್ದು, ಈ ಹಿಂದೆ ಕ್ಷೇತ್ರದ ಶಾಸಕರಾಗಿದ್ದ ಅರವಿಂದ ಲಿಂಬಾವಳಿ ಅವರು ಕಳೆದ ಅವಧಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ 72 ಕೋಟಿ ರೂ. ಗಳ ಅನುದಾನ ಬಿಡುಗಡೆ ಮಾಡಿದ್ದು ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಆದಷ್ಟು ಶೀಘ್ರವಾಗಿ ಆ ಕಾಮಗಾರಿಗಳೆಲ್ಲ ಪೂರ್ಣಗೊಳ್ಳಲಿವೆ ಎಂದು ಶಾಸಕಿ ಮಂಜುಳಾ ಲಿಂಬಾವಳಿ ತಿಳಿಸಿದರು. ಬೆಂಗಳೂರಿನ ಬಿದರಹಳ್ಳಿಯಲ್ಲಿ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ ನಡೆಸಲಾಯಿತು. ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿದರಹಳ್ಳಿ ಗ್ರಾಮ ಪಂಚಾಯತಿ ಬಳಿ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಬಿದರಹಳ್ಳಿ ಗ್ರಾಮ ಪಂಚಾಯತಿಯ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆಯಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಭಾಗವಹಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ನಿರ್ವಾಹಣಾಧಿಕಾರಿಗಳಾದ ವಸಂತಕುಮಾರ್,…
ಕರ್ನಾಟಕ ಪೊಲೀಸ್ ಪ್ರಾಧಿಕಾರದ ಅಧ್ಯಕ್ಷ ಮತ್ತು ಇಬ್ಬರ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಎರಡು ವಾರ ಗಡುವು ನೀಡಿರುವ ಹೈಕೋರ್ಟ್, ‘ಒಂದೊಮ್ಮೆ ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು’ ಎಂದು ನಿರ್ದೇಶನ ನೀಡಿದೆ. ಈ ಕುರಿತಂತೆ ವಕೀಲರಾದ ಸುಧಾ ಕಾಟಾ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಎರಡು ವಾರಗಳ ಕಾಲಾವಕಾಶ ನೀಡಲಾಗುತ್ತಿದ್ದು, ಒಂದೊಮ್ಮೆ ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಅಥವಾ ಬಾಕಿ ಉಳಿದರೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಚಾರಣೆಗೆ ಖುದ್ದಾಗಿ ಹಾಜರಾಗಿ ವಿವರಣೆ ನೀಡಬೇಕು’ ಎಂದು ತಾಕೀತು ಮಾಡಿ ವಿಚಾರಣೆ ಮುಂದೂಡಿತು. ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ ಮತ್ತು…