Author: admin

ಬೆಳಗಾವಿ: ಚುನಾವಣೆಯಲ್ಲಿ ಎಲ್ಲ‌ ಅಭ್ಯರ್ಥಿಗಳು ನೀತಿ ಸಂಹಿತೆ ಪಾಲನೆ ಮಾಡಿ ಪ್ರಚಾರ ಮಾಡಬೇಕು. ಆದರೆ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್   ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕುರಿತು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ದಾಖಲೆ ಸಮೇತ ದೂರು ಸಲ್ಲಿಸಲಾಗಿದೆ ಎಂದು ಬೆಳಗಾವಿ ಆಪ್ ಜಿಲ್ಲಾಧ್ಯಕ್ಷ ಶಂಕರ ಹೆಗಡೆ ಒತ್ತಾಯಿಸಿದರು. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆಯಾದ ಮೇಲೆ ಎಲ್ಲ‌ ಪಕ್ಷದ ಅಭ್ಯರ್ಥಿಗಳು ನೀತಿ ಸಂಹಿತೆ ಪಾಲನೆ ಮಾಡಿಕೊಂಡು ಪ್ರಚಾರ ಮಾಡಬೇಕು. ಆದರೆ ಬಿಜೆಪಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಬಸವೇಶ್ವರ ಜಯಂತಿ, ಜೈನ ಬಸ್ತಿ ಸೇರಿದಂತೆ ಸುಮಾರು ಕಡೆಗಳಲ್ಲಿ ಪಕ್ಷದ ಶಾಲು ಹಾಕಿಕೊಂಡು ಪ್ರಚಾರ ನಡೆಸಿದ್ದಾರೆ. ಎಲ್ಲ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದರು. ಬೆಳಗಾವಿ ಉತ್ತರ ಮತಕ್ಷೇತ್ರದ ಆಪ್ ಅಭ್ಯರ್ಥಿ ರಾಜಕುಮಾರ ಟೋಪಣ್ಣವರ ಮಾತನಾಡಿ, ಜಿಲ್ಲಾ ಚುನಾವಣಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯ ವೀಕ್ಷಕರು ಏನು ಮಾಡುತ್ತಿದ್ದಾರೆ. ಉಷಾತಾಯಿ ದೇವಸ್ಥಾನದಲ್ಲಿ…

Read More

ಉಗಾರ/ ಹಾರೂಗೇರಿ: ಬೆಲೆ ಏರಿಕೆ,ಭ್ರಷ್ಟಾಚಾರಗಳಿಂದ ತತ್ತರಿಸಿ ಹೋಗಿರುವ ಜನರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇ ಬೇಕೆಂದು ತೀರ್ಮಾನಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮಂಗಳವಾರ ಕಾಗವಾಡ ಕ್ಷೇತ್ರದ ಉಗಾರದಲ್ಲಿ ರಾಜು ಕಾಗೆಯವರ ಪರವಾಗಿ ಹಾಗೂ ಕುಡಚಿ ಕ್ಷೇತ್ರದ ಹಾರೂಗೇರಿಯಲ್ಲಿ ಮಹೇಂದ್ರ ತಮ್ಮಣ್ಣವರ್ ಪರವಾಗಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಅದಕ್ಕೆ ಇಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಜನರೇ ಸಾಕ್ಷಿ. ನನ್ನ ಮತ ಕ್ಷೇತ್ರವಾಗಿರುವ ಬೆಳಗಾವಿ ಗ್ರಾಮೀಣದಲ್ಲೂ ಜನರು ನಾನು ಪ್ರಚಾರಕ್ಕೆ ಹೋದಲ್ಲೆಲ್ಲ ಬರಮಾಡಿಕೊಳ್ಳುವ ರೀತಿ ನೋಡಿದರೆ ಕಾಂಗ್ರೆಸ್ ಖಂಡಿತ ಅತ್ಯಧಿಕ ಬಹುಮತದಿಂದ ಈ ಬಾರಿ ಸರಕಾರ ರಚಿಸಲಿದೆ ಎನ್ನುವುದು ಗೊತ್ತಾಗುತ್ತದೆ. ಬೆಲೆ ಏರಿಕೆಯಿಂದಾಗಿ ಜೀವನ ನಡೆಸಲಾಗದೆ ತತ್ತರಿಸಿ ಹೋಗಿರುವ ಜನರು ಕಾಂಗ್ರೆಸ್ ಪಕ್ಷದ ನಾಲ್ಕು ಗ್ಯಾರಂಟಿಗಳನ್ನು ಖಾತರದಿಂದ ಕಾಯುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ…

Read More

ತಮಿಳುನಾಡಿನ ಸರ್ಕಾರಿ ಕಾಲೇಜಿನಲ್ಲಿ 9 ಹಿರಿಯ ವಿದ್ಯಾರ್ಥಿಗಳ ಅಮಾನತು. ಪ್ರಥಮ ವರ್ಷದ ವಿದ್ಯಾರ್ಥಿಗಳು ರಾಗಿಂಗ್     ಮಾಡಿದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ತಿರುವಣ್ಣಾಮಲೈ ಅರಿಜರ್ ಅಣ್ಣಾ ಸರ್ಕಾರಿ ಕಲಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ತರಗತಿಗಳಿಗೆ ಹಾಜರಾಗದಂತೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್‌ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು  ರಾಗಿಂಗ್   ಮಾಡಿದ ಹಿರಿಯ ವಿದ್ಯಾರ್ಥಿಗಳನ್ನು  ಅಮಾನತು  ಮಾಡಲಾಗಿದೆ.  ಈ ಕುರಿತ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲಾಗಿದೆ. ಹಿರಿಯ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳನ್ನು ಚಾಟಿಯಿಂದ ಹೊಡೆಯುತ್ತಿರುವ ವಿಡಿಯೋಗಳು ಹೊರಬಿದ್ದಿವೆ. ಇದಾದ ಬಳಿಕ ರಾಗಿಂಗ್   ನಡೆಸಿದ ತನಿಖೆಯ ಆಧಾರದ ಮೇಲೆ ಹಿರಿಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಹಾಸ್ಟೆಲ್ ಮತ್ತು ತರಗತಿಗೆ ಪ್ರವೇಶಿಸಲು ಅವರಿಗೆ ಅವಕಾಶವಿಲ್ಲ  ಎಂದು  ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

6 ರಿಂದ 2 ವರ್ಷದ ಮೂವರು ಸಹೋದರಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅವರ ತಾಯಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಮೃತಾ (6), ಜ್ಯೋತಿ (4) ಮತ್ತು ಪ್ರೀತಿ (2) ಮೃತದೇಹಗಳು ಪತ್ತೆಯಾಗಿವೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಬಾವಿಯಲ್ಲಿ ಶವಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾವಿಯಲ್ಲಿ ತಾಯಿಯೂ ಇದ್ದ ರು ಎಂದು ಸ್ಥಳೀಯರು ಹೇಳಿದ್ದು, ಶವ ಪತ್ತೆಯಾಗಿಲ್ಲ. ಮಕ್ಕಳ ತಂದೆ ಜೀವನ್ ಬಾಮ್ನಿಯಾ (32) ಅವರು ಸಂಬಂಧಿಕರ ಮನೆಗೆ ಹೋಗಿ ಹಿಂತಿರುಗಿ ನೋಡಿದಾಗ ಅವರ ಪುತ್ರಿಯರು ಕಾಣೆಯಾಗಿದ್ದಾರೆ. ಬಳಿಕ ಸ್ಥಳೀಯರನ್ನು ಒಟ್ಟುಗೂಡಿಸಿ ಹುಡುಕಾಟ ಆರಂಭಿಸಿದ್ದಾರೆ. ಶೋಧದ ವೇಳೆ ಅವರ ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್…

Read More

2017 ರಲ್ಲಿ ಟೆಹ್ರಾನ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇರಾನ್ ನ್ಯಾಯಾಲಯವು US  ಗೆ  312 ಮಿಲಿಯನ್ ದಂಡ ವಿಧಿಸಿದೆ. 18 ಜನರ ಸಾವಿಗೆ ಕಾರಣವಾದ ದಾಳಿಯಲ್ಲಿ ಯುಎಸ್ ವಿರುದ್ಧ ಯಾವುದೇ ನೇರ ಪುರಾವೆಗಳು ಕಂಡುಬಂದಿಲ್ಲ. ಯುಎಸ್ ಸರ್ಕಾರ ಮತ್ತು ಮಾಜಿ ಅಧ್ಯಕ್ಷರಾದ ಜಾರ್ಜ್ ಡಬ್ಲ್ಯೂ. ಬುಷ್ ಮತ್ತು ಬರಾಕ್ ಒಬಾಮಾ ಇರಾನ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಟೆಹ್ರಾನ್ ನ್ಯಾಯಾಲಯದ ತೀರ್ಪು ಭಯೋತ್ಪಾದಕರ ದಾಳಿಯಲ್ಲಿ ಸಾವನ್ನಪ್ಪಿದ ಮೂವರ ಕುಟುಂಬ ಸಲ್ಲಿಸಿದ ದೂರನ್ನು ಆಧರಿಸಿದೆ. ಇರಾನ್ ಸುದ್ದಿ ಸಂಸ್ಥೆಯ ಪ್ರಕಾರ, ಭಯೋತ್ಪಾದಕ ಸಂಘಟನೆಯನ್ನು ಸಂಘಟಿಸುವಲ್ಲಿ ಮತ್ತು ಅವರಿಗೆ ಅಗತ್ಯ ಸೂಚನೆಗಳನ್ನು ನೀಡುವಲ್ಲಿ ಯುಎಸ್ ಪಾತ್ರವನ್ನು ಆಧರಿಸಿ ತೀರ್ಪು ನೀಡಲಾಗಿದೆ. ಯುಎಸ್ ಸರ್ಕಾರ, ಮಾಜಿ ಅಧ್ಯಕ್ಷರಾದ ಜಾರ್ಜ್ ಡಬ್ಲ್ಯೂ ಬುಷ್, ಬರಾಕ್ ಒಬಾಮಾ, ಸೆಂಟ್ರಲ್ ಕಮಾಂಡ್ (ಸೆಂಟ್ಕಾಮ್), ಅದರ ಮಾಜಿ ಕಮಾಂಡರ್ ಟಾಮಿ ಫ್ರಾಂಕ್ಸ್, ಕೇಂದ್ರೀಯ ಗುಪ್ತಚರ ಸಂಸ್ಥೆ, ಖಜಾನೆ ಇಲಾಖೆ, ಶಸ್ತ್ರಾಸ್ತ್ರ ತಯಾರಕರಾದ ಲಾಕ್ಹೀಡ್ ಮಾರ್ಟಿನ್ ಮತ್ತು ಅಮೇರಿಕನ್ ಏರ್ಲೈನ್ಸ್ ಗ್ರೂಪ್ ಗೆ  ಶಿಕ್ಷೆ ವಿಧಿಸಲಾಗಿದೆ. …

Read More

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಹಣ ಹಂಚುತ್ತಿದ್ದಾರೆನ್ನಲಾದ ಫೋಟೋ ವೈರಲ್ ಆಗಿದೆ. ಅಂಬೇವಾಡಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ್ ಅವರ ಸಹೋದರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ ಮನ್ನೋಳ್ಕರ್ ಹಣ ಹಂಚುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗದ ಹಿನ್ನೆಲೆಯಲ್ಲಿ ಹತಾಶರಾಗಿ ಹಣ ಹಂಚುವ ಮೂಲಕ ಕಾರ್ಯಕರ್ತರು ಹಾಗೂ ಮತದಾರರನ್ನು ಸೆಳೆಯುವ ಯತ್ನ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಈ ಕುರಿತು ಚುನಾವಣೆ ಅಧಿಕಾರಿಗಳು ವಿಚಾರಣೆ ನಡೆಸಿದರೆ ಸಂಪೂರ್ಣ ವಿವರ ಬಹಿರಂಗವಾಗಬಹುದು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವಪ್ರಸಾದ್ ಮೌರ್ಯ ಬೆಳಗಾವಿ ನಗರ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಭಾರತೀಯ ಜನತಾ ಪರವಾಗಿ ಮತ ಯಾಚಿಸಿದರು. ದಕ್ಷಿಣ ಮತಕ್ಷೇತ್ರದ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿ ಅಭಯ್ ಪಾಟೀಲ್ ಅವರಿಗೆ  ಸಾಥ್ ನೀಡಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಉತ್ತರ ಪ್ರದೇಶದ ಉಪಮುಖ್ಯಮಂತ್ರಿಗಳಾದ ಕೇಶವಪ್ರಸಾದ್ ಮೌರ್ಯ ಅವರು ಚೆನ್ನಮ್ಮ ವೃತ್ತ   ತಲುಪಿದಾಗ  ವೀರ ರಾಣಿ   ಕಿತ್ತೂರ ಚೆನ್ನಮ್ಮಗೆ ಗೌರವ ವಂದನೆ ಸಲ್ಲಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ಫು ಇಂದು ಭಾರತಕ್ಕೆ ಆಗಮಿಸಲಿದ್ದಾರೆ. ಚೀನಾದ ರಕ್ಷಣಾ ಸಚಿವರ ಭಾರತ ಭೇಟಿಯು ಶಾಂಘೈ ಕಾರ್ಪೊರೇಷನ್ ಶೃಂಗಸಭೆಯ ಭಾಗವಾಗಿದೆ. ಈ ಭೇಟಿಯ ವೇಳೆ ಗಡಿ ಸಂಘರ್ಷದ ವಿಚಾರವಾಗಿ ಮಾತುಕತೆ ನಡೆಯಲಿದೆ ಎಂದು ವರದಿಯಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ಫು ನಡುವೆ ದ್ವಿಪಕ್ಷೀಯ ಸಭೆ ನಡೆಯಲಿದೆ. ಸಭೆಯಲ್ಲಿ ಭಾರತವು ಡೆಪ್ಸಾಂಗ್ ಮತ್ತು ಚಾರ್ಡಿಂಗ್ ನಿಂಗ್ಲುಂಗ್ ಜಂಕ್ಷನ್‌ನಲ್ಲಿ ಪಡೆಗಳನ್ನು ಹಿಂತೆಗೆದುಕೊಳ್ಳುವ ವಿಷಯವನ್ನು ಪ್ರಸ್ತಾಪಿಸುತ್ತದೆ. ಸೇನಾ ಮಟ್ಟದ ಮಾತುಕತೆಯಲ್ಲಿ 2020ರ ಹಿಂದಿನ ಯಥಾಸ್ಥಿತಿ ಕಾಯ್ದುಕೊಳ್ಳುವ ಭಾರತದ ಪ್ರಸ್ತಾವನೆಯನ್ನು ಚೀನಾ ಒಪ್ಪಲಿಲ್ಲ. ಗಾಲ್ವಾನ್ ಬಿಕ್ಕಟ್ಟು ಉಭಯ ದೇಶಗಳ ನಡುವಿನ ಸಂಬಂಧವನ್ನು ಹದಗೆಡಿಸಿದ ಏಪ್ರಿಲ್ 2020 ರ ನಂತರ ಚೀನಾದ ರಕ್ಷಣಾ ಸಚಿವರ ಭಾರತಕ್ಕೆ ಇದು ಮೊದಲ ಭೇಟಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More

ತುರುವೇಕೆರೆ ತಾಲೂಕಿನ ತಾಳ್ಕೆರೆ ಗ್ರಾಮ ಪಂಚಾಯಿತಿ ವತಿಯಿಂದ ಚೆಂಡೂರು ಗ್ರಾಮದಲ್ಲಿ ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ  ಬೂತ್ ವಾಕ್ ಕಾರ್ಯಕ್ರಮ ನಡೆಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ,  ಭಿತ್ತಿ ಪತ್ರ, ಫಲಕಗಳ ಪ್ರದರ್ಶನ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ತಾಳ್ಕೆರೆ ಗ್ರಾಮ ಪಂಚಾಯಿತಿ ಪಿ ಡಿ ಓ ಅಭಿಷೇಕ್ ಮತ್ತು ಗ್ರಾಮ ಪಂಚಾಯಿತಿಯ ಸಿಬ್ಬಂದಿ  ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಛತ್ತೀಸ್‌ ಗಢದಲ್ಲಿ ನಕ್ಸಲರ ದಾಳಿಯಲ್ಲಿ ವ್ಯಾನ್ ಚಾಲಕ ಸೇರಿ 10 ಪೊಲೀಸರು ಹುತಾತ್ಮರಾಗಿದ್ದಾರೆ. ಸುಧಾರಿತ ಸ್ಪೋಟಕ ಬಳಕೆ ಮಾಡಿ ಮಿನಿ ವ್ಯಾನ್‌ ನಲ್ಲಿ ಸಂಚಾರ ನಡೆಸುತ್ತಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ಈ ದಾಳಿ ನಡೆಸಿದ್ದಾರೆ. ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರು ವಾಪಸ್ ಆಗುವಾಗ ಈ ದಾಳಿ ನಡೆಸಲಾಗಿದೆ. ಛತ್ತೀಸ್‌ ಗಢದ ಮುಖ್ಯಮಂತ್ರಿಗಳು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಕ್ಷಣವೇ ನಕ್ಸಲರ ವಿರುದ್ಧ ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದಾಳಿಯ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಛತ್ತೀಸ್‌ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಜೊತೆ ಮಾತುಕತೆ ನಡೆಸಿದರು. ನಕ್ಸಲರ ವಿರುದ್ಧದ ಕಾರ್ಯಾಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More