Author: admin

ಮಂಡ್ಯ: ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಕಮಾಲ್ ಮಾಡಲು ರಣತಂತ್ರ ನಡೆಸುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಸಕ್ಕರೆ ನಾಡಿಗೆ ಮೋದಿ ಭೇಟಿ ನೀಡಿ ಹವಾ ಎಬ್ಬಿಸಿದ್ದರು. ಈಗ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಂಟ್ರಿ ಕೊಡುತ್ತಿದ್ದಾರೆ. ಆ ಮೂಲಕ ಒಕ್ಕಲಿಗ ಮತ ಸೆಳೆಯುವ ಪ್ಲಾನ್ ನಡೆದಿದೆ. ಹಳೇ ಮೈಸೂರು ಮೇಲೆ ಹೆಚ್ಚು ಫೋಕಸ್ ಮಾಡಿರುವ ಬಿಜೆಪಿ ಈ ಬಾರಿ ಮಂಡ್ಯದಲ್ಲೂ ಎರಡ್ಮೂರು ಕ್ಷೇತ್ರಗಳನ್ನ ಗೆಲ್ಲುವ ಗುರಿ ಹೊಂದಿದೆ. ಅದಕ್ಕಾಗಿಯೇ ರಾಷ್ಟ್ರೀಯ ನಾಯಕರು ಮಂಡ್ಯಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಇಂದು ಬೆಳಗ್ಗೆ 10:30ಕ್ಕೆ ಮೈಸೂರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ ಯೋಗಿ ಆದಿತ್ಯನಾಥ್, ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಸಂಜಯ್ ವೃತ್ತದಿಂದ ಮಹಾವೀರ್ ವೃತ್ತದವರೆಗೆ 1 ಕಿ.ಮೀ. ರೋಡ್ ಶೋ ಮಾಡಲಿದ್ದಾರೆ. ಸಿಲ್ವರ್ ಜುಬಿಲಿ ಪಾರ್ಕ್ ಬಹಿರಂಗ ಸಭೆಯಲ್ಲಿ ಯೋಗಿ ಭಾಷಣ ಮಾಡುವ ಮೂಲಕ ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ್…

Read More

ಬೆಳಗಾವಿ: ನಗರದಲ್ಲಿ ಪ್ರಚಾರ ನಡೆಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿವೃದ್ಧಿಯ ಬಗ್ಗೆ ಮಾತನಾಡಲು ಬರುತ್ತಿಲ್ಲ. ಬದಲಾಗಿ ತಮ್ಮ ಪಕ್ಷದಲ್ಲಿನ ಶೇ.40 ಭ್ರಷ್ಟಾಚಾರದ ಸಾಧನೆಯ ಬಗ್ಗೆ ಮಾತನಾಡಲು ಬರುತ್ತಿದ್ದಾರೆ ಎಂದು ಆಮ್ ಆದ್ಮಿ ಉತ್ತರ ಮತಕ್ಷೇತ್ರದ ಅಭ್ಯರ್ಥಿ ರಾಜಕುಮಾರ ಟೋಪಣ್ಣ  ಆರೋಪಿಸಿದರು. ಮಂಗಳವಾರ ಅಜಂನಗರ, ಶಾಹುನಗರ ಕಡೆಗಳಲ್ಲಿ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಬೆಳಗಾವಿಗೆ ಬಂದಾಗ ಸ್ಮಾರ್ಟ್ಸಿಟಿ ಯೋಜನೆಯ ಒಂದು ಕಾಮಗಾರಿಯನ್ನು ಉದ್ಘಾಟನೆ ಮಾಡಿಸಲಿಲ್ಲ. ಬ್ರಿಟಿಷ್ ಕಾಲದ ರೈಲ್ವೆ ನಿಲ್ದಾಣದ ಉನ್ನತಿಕರಣಗೊಳಿಸಿರುವುದನ್ನು ಉದ್ಘಾಟನೆ ಮಾಡಿಸಿದ್ದು ನಾಚಿಗೇಡಿತನದ ಸಂಗತಿ ಎಂದರು. ಬೆಳಗಾವಿಗೆ ಬರುವ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿ-ಧಾರವಾಡಕ್ಕೆ ತೆಗೆದುಕೊಂಡು ಹೋದರು. ಆದರೆ ಬೆಳಗಾವಿಯ ಬುಡಾದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಅವರು ಮಾತನಾಡುವುದಿಲ್ಲ. ಅವರ ಪಕ್ಷ ನಡೆಸಿದ 40% ಕಮಿಷನ್ ಸಾಧನೆಯ ಬಗ್ಗೆ ಮಾತನಾಡಲು ಬರುತ್ತಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ ಎಂದರು. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಹೊಸದ್ದು, ಇತ್ತೀಚೆಗೆ ನಮ್ಮ…

Read More

ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಮೊಬಿಲಿಟಿ ವರದಿಯ ಪ್ರಕಾರ, ಹಣಕಾಸು ವರ್ಷ 2022-2023 ರಲ್ಲಿ ಸುಮಾರು 7.3 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ದೇಶದಲ್ಲಿ ಅತೀ ಹೆಚ್ಚು ಮಾರಾಟವಾಗಿವೆ ಎಂದು ತಿಳಿಸಿದೆ. ಇದರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಲಾಗಿದೆ. ಮಾರುಕಟ್ಟೆಯಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗಳದೇ​ ಮೇಲುಗೈ ಆಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಗಳ ದರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಧಿಕ ಸಂಖ್ಯೆಯ ಎಲೆಕ್ಟ್ರಿಕ್‌ ವಾಹನಗಳು ರಸ್ತೆಗಿಳಿಯುತ್ತಿವೆ. ಪರಿಸರ ಮಾಲಿನ್ಯ ತಡೆಗಟ್ಟುವ ದೃಷ್ಟಿಯಿಂದಲೂ ಈ ವಾಹಗಳಿಗೆ ತುಂಬಾ ಡಿಮ್ಯಾಂಡ್‌ ಇದೆ.ಭಾರತದ ಮಾರುಕಟ್ಟೆಯಲ್ಲೂ ಇಂಧನ ಆಧಾರಿತ ಬೈಕ್‌, ಸ್ಕೂಟರ್‌ಗಿಂತ ವಿದ್ಯುತ್‌ ಚಾಲಿತ ವಾಹನಗಳ ಮಾರುಕಟ್ಟೆ ಹೆಚ್ಚು ಬೆಳವಣಿಗೆ ಆಗುತ್ತಿದೆ. ಹೆಚ್ಚುತ್ತಿರುವ ವಾಹನ ಜಾಗೃತಿ, ಬೆಲೆ ಈ ಎಲ್ಲಾ ಅಂಶಗಳನ್ನು ಆಧರಿಸಿ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಗಳು ಭಾರತದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿವೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

21 ವರ್ಷಗಳ ನಂತರ ಕೊಲ್ಲೂರಿನಲ್ಲಿ ಬ್ರಹ್ಮರಥೋತ್ಸವ ಜರುಗಲಿದ್ದು. ಆದ್ದರಿಂದ ಭಕ್ತರಿಗೆ ಮೇ ತಿಂಗಳಿನಲ್ಲಿ ಎರಡು ದಿನಗಳ ಕಾಲ ಕೊಲ್ಲೂರು ಮೂಕಾಂಬಿಕೆಯ ದರ್ಶನ ಇರುವುದಿಲ್ಲ. ಕರ್ನಾಟಕವೊಂದೇ ಅಲ್ಲದೇ, ದೇಶದಲ್ಲೇ ಅತ್ಯಂತ ಪ್ರಸಿದ್ಧಿ ಗಳಿಸಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ ಭಕ್ತರಿಗೆ ಮಹತ್ವದ ಸುದ್ದಿಯೊಂದು ದೇವಾಲಯದ ಆಡಳಿತ ಮಂಡಳಿ ಭಕ್ತರಿಗೆ ಪ್ರಮುಖವಾದ ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಕರಾವಳಿಯ ಪ್ರಮುಖ ದೇವಾಲಯವಾದ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಭಕ್ತರು ವಿವಿಧ ಬೇರೆ ಬೇರೆ ರಾಜ್ಯ ಗಳಿಂದ ಆಗಮಿಸಿ ದೇವಿಯ ದರ್ಶನ ಭಾಗ್ಯ ಪಡೆಯುತ್ತಿದ್ದಾರೆ. ಕೊಲ್ಲೂರು ಮೂಕಾಂಬಿಕೆ ದೇಗುಲದಲ್ಲಿ ಏಪ್ರಿಲ್ 30ರಿಂದ ಮೇ 11ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಬರೋಬ್ಬರಿ 21 ವರ್ಷಗಳ ನಂತರ ಕೊಲ್ಲೂರಿನಲ್ಲಿ ಬ್ರಹ್ಮರಥೋತ್ಸವ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಭಕ್ತರಿಗೆ ಪ್ರಮುಖವಾದ ಸೂಚನೆ ನೀಡಿದೆ. ಮೇ 1ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಪೀಠದ ಚಲನೆ ನಡೆಯಲಿದ್ದು. ಹೀಗಾಗಿ…

Read More

ವಾಶಿಂಗ್ಟನ್ : ಮತ್ತೊಮ್ಮೆ ಅಮೆರಿಕದ ಅಧ್ಯಕ್ಷರಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಜೋ ಬಿಡೆನ್ ಘೋಷಣೆ ಮಾಡಿದ್ದಾರೆ. ಇವರ ಜೊತೆಗೆ ಉಪಾಧ್ಯಕ್ಷ ಸ್ಥಾನಕ್ಕೆ ಕಮಲಾ ಹ್ಯಾರಿಸ್ ಕೂಡ ಪುನರಾಯ್ಕೆ ಬಯಸಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂದಿನ ವರ್ಷಗಳಲ್ಲಿ ನಮಗೆ ಹೆಚ್ಚಿನ ಹಕ್ಕು ಸಿಗಲಿವೆಯೇ ಅಥವಾ ಹಕ್ಕುಗಳು ಕಡಿಮೆಯಾಗಲಿವೆಯೇ ಎಂಬುದು ಈಗ ನಾವು ಎದುರಿಸುತ್ತಿರುವ ಒಂದು ಪ್ರಶ್ನೆಯಾಗಿದೆ ಎಂದು ಬಿಡೆನ್ ವೀಡಿಯೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏನು ಉತ್ತರ ನೀಡಬೇಕೆಂದು ನನಗೆ ತಿಳಿದಿದೆ. ಅದ್ದರಿಂದ ನಾನು ಮರು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಬಿಡೆನ್ ಹೇಳಿದ್ದಾರೆ. 80 ವರ್ಷದ ಬಿಡೆನ್ ಅವರು ಈಗಾಗಲೇ ಅಮೆರಿಕದ ಇತಿಹಾಸದಲ್ಲಿ ಅತ್ಯಂತ ಹೆಚ್ಚು ವಯಸ್ಸಾದ ಅಧ್ಯಕ್ಷರಾಗಿದ್ದಾರೆ. ಅಷ್ಟೊಂದು ಹಿರಿಯರಾದ ಅವರು ಮತ್ತೊಮ್ಮೆ ಅಧ್ಯಕ್ಷರಾಗುವುದು ಎಷ್ಟು ಸೂಕ್ತ ಎಂಬುದು ಅವರದೇ ಪಕ್ಷ ಡೆಮಾಕ್ರಟಿಕ್ ಪಕ್ಷದವರೂ ಪ್ರಶ್ನಿಸುತ್ತಿದ್ದಾರೆ. ಆದರೆ ಬಿಡೆನ್ ಎರಡನೇ ಬಾರಿಗೆ ಸ್ಪರ್ಧಿಸಲು ನಿರ್ಧರಿಸಿದ್ದರಿಂದ ಮತದಾರರು ಅವರ ಪರವಾಗಿ ರಾಲಿ ಮಾಡುತ್ತಿದ್ದಾರೆ. ಜೋ ಬಿಡೆನ್ ಅವರು ಕಳೆದ ತಿಂಗಳು ಉಕ್ರೇನ್‌ನ ಕೈವ್‌…

Read More

ಮಾರ್ಚ್ 31 ರಿಂದ ಏಪ್ರಿಲ್‌ 15 ರವರೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಮೇ 2 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ . ಏಪ್ರಿಲ್‌ 24 ರಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನ  ಆರಂಭವಾಗಿದೆ. ಶಿಕ್ಷಕರು ರಾಜ್ಯ ವಿಧಾನಸಭಾ ಚುನಾವಣೆ ಕರ್ತವ್ಯದಲ್ಲಿಯೂ ಹಾಜರಾಗಬೇಕಿದೆ. ಈ ನಡುವೆ ದ್ವಿತೀಯ ಪಿಯುಸಿಯಂತೆ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಕೂಡ ಆದಷ್ಟು ಬೇಗನೆ ಪ್ರಕಟಿಸುವ ನಿಟ್ಟಿನಲ್ಲಿ ಮಂಡಳಿ ಕಾರ್ಯನಿರ್ವಹಿಸುತ್ತಿದೆ. ಚುನಾವಣಾ ಪರಿಸ್ಥಿತಿ ನೋಡಿಕೊಂಡು ಫಲಿತಾಂಶವನ್ನು ಪ್ರಕಟಿಸುವುದಾಗಿ ಮಂಡಳಿ ತಿಳಿಸಿದೆ. ಕರ್ನಾಟಕ ಎಸ್ಸೆಸ್ಸೆಲ್ಸಿ ಫಲಿತಾಂಶ ವನ್ನು ಮೊಬೈಲ್‌ ನಲ್ಲಿ ನೋಡುವುದು ಹೇಗೆ? ಮೊದಲು ನೀವು ನಿಮ್ಮ ಮೊಬೈಲ್‌ನಲ್ಲಿ ಗೂಗಲ್‌ ಪ್ಲೇ ಸ್ಟೋರ್‌ ಗೆ ಹೋಗಿ ಅಲ್ಲಿ SSLC Result App ಡೌನ್ಲ್ಡೋಡ್‌ ಮಾಡಿ ನಂತರ ಕರ್ನಾಟಕ ಎಸ್ಸೆಸ್ಸೆಲ್ಸಿ ಫಲಿತಾಂಶದ ವೆಬ್ಸೈಟ್ karresults.nic.in ಮೇಲೆ ಕ್ಲಿಕ್‌ ಮಾಡಬೇಕು. ನಂತರ ಅಲ್ಲಿ ನೀವು “sslc result 2023“ ಲಿಂಕ್‌ ಮೇಲೆ ಕ್ಲಿಕ್‌ ಮಾಡಬೇಕು. ನಂತರ ನಿಮ್ಮ ರಿಜಿಸ್ಟರ್‌ ನಂಬರ್‌ ಅನ್ನು…

Read More

ನವದೆಹಲಿ: ಅಮೆರಿಕ ಮತ್ತು ರಷ್ಯಾ ನಡುವೆ ಉಕ್ರೇನ್​ ಯುದ್ಧದ ವಿಚಾರವಾಗಿ ಪರಸ್ಪರ ತುಂಬಾ ಚರ್ಚೆ ನಡೆಯುತ್ತಿದೆ.ಜಗತ್ತಿನ ದೈತ್ಯ ಶಕ್ತಿಗಳಾದ ಅಮೆರಿಕ, ರಷ್ಯಾದಿಂದ ಭಾರತ ಶಸ್ತ್ರಾಸ್ತ್ರ ಗಳನ್ನು ಖರೀದಿ ಮಾಡಲು ಸಾಜ್ಜಾಗಿದೆ.ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರಿದ್ದು, ಉಕ್ರೇನ್​ಗೆ ಅಮೆರಿಕ ಬೆಂಬಲ ನೀಡಿದ್ದರ ಮಧ್ಯೆ ಈ ಪ್ರಸ್ತಾವ ಮಹತ್ವ ಪಡೆದುಕೊಂಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಎರಡೂ ರಾಷ್ಟ್ರಗಳ ಮಿತ್ರನಾದ ಭಾರತ ನೌಕಾಪಡೆಗೆ ಬೇಕಾದ ಶಸ್ತ್ರಾಸ್ತ್ರಗಳನ್ನು ಉಭಯ ರಾಷ್ಟ್ರಗಳಿಂದ ಖರೀದಿಸಲು ಮುಂದಾಗಿದೆ. ರಕ್ಷಣಾ ಪಡೆಗಳು ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ರಕ್ಷಣಾ ಸಚಿವಾಲಯವು ಇದನ್ನು ಪರಿಶೀಲನೆ ನಡೆಸುತ್ತಿದೆ. ಭಾರತೀಯ ನೌಕಾಪಡೆಯು ರಷ್ಯಾದಿಂದ 20 ಕ್ಕೂ ಹೆಚ್ಚು ಕ್ಲಬ್ ಆಯಂಟಿ ಶಿಪ್ ಕ್ರೂಸ್ ಕ್ಷಿಪಣಿಗಳು ಮತ್ತು ಅಮೆರಿಕದ ಹಾರ್ಪೂನ್ ಹಡಗು ವಿರೋಧಿ ಕ್ಷಿಪಣಿ ಸಾಧನದ ಉಪಕರಣಗಳನ್ನು ಪಡೆಯಲು ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. . ಭಾರತೀಯ ನೌಕಾಪಡೆಯು ಈಗಾಗಲೇ ತನ್ನ ಜಲಾಂತರ್ಗಾಮಿ ವಿರೋಧಿ ಯುದ್ಧ ವಿಮಾನ ಮತ್ತು ಜಲಾಂತರ್ಗಾಮಿ ನೌಕೆಗಳಲ್ಲಿ ಹಾರ್ಪೂನ್ ಕ್ಷಿಪಣಿಗಳನ್ನು…

Read More

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಬಿ.ಇನಾಮದಾರ್ ನಿಧನ ಹಿನ್ನೆಲೆ ಇಂದು ಬೆಳಗಾವಿ ಜಿಲ್ಲೆ ಕಿತ್ತೂರು ಕ್ಷೇತ್ರದಲ್ಲಿ ನಿಗದಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ರೋಡ್​ಶೋ ರದ್ದು ಮಾಡಲಾಗಿದೆ. ಕಿತ್ತೂರು ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರಗಳಲ್ಲಿ ನಿಗದಿಯಂತೆ ಸಿಎಂ ಪ್ರಚಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಹಿರೇಬಾಗೇವಾಡಿ, ಬೆಳಗಾವಿ ನಗರ, ಬೈಲಹೊಂಗಲದಲ್ಲಿ ನಿಗದಿಯಂತೆ ಸಿಎಂ ರೋಡ್ ಶೋ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬಾಗಲಕೋಟೆ: ಜಿಲ್ಲೆ ತೇರದಾಳ ಕ್ಷೇತ್ರ ವ್ಯಾಪ್ತಿಯ ರಬಕವಿಬನಹಟ್ಟಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್, ಸವದಿ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲಿಂಗಾಯತರಿಗೆ ಅವಮಾನ ಮಾಡಿರುವ ಪಕ್ಷಕ್ಕೆ ಹೋಗಿದ್ದಾರೆ. ಕಾಂಗ್ರೆಸ್​ಗೆ ಆ ಇಬ್ಬರು ನಾಯಕರಿಂದ ಯಾವುದೇ ಲಾಭವಿಲ್ಲ. ಲಿಂಗಾಯತ ಸಿಎಂಗಳನ್ನು ಅವಮಾನಿಸಿದ್ದು ಕಾಂಗ್ರೆಸ್ ಪಕ್ಷ. ಆದರೆ ಬಿಜೆಪಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದೆ. ಮಾಜಿ ಸಿಎಂ ಬಿಎಸ್​ವೈಗೆ ಮೋಸ ಮಾಡಿದ್ದು ಜೆಡಿಎಸ್​ನವರು. ಜೆಡಿಎಸ್​ ಎಷ್ಟೇ ಸೀಟ್ ಗೆದ್ದರೂ ಕಾಂಗ್ರೆಸ್​ ಜತೆ ಹೋಗ್ತಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿಗೆ ಮತ್ತೊಮ್ಮೆ ಸ್ಪಷ್ಟ ಬಹುಮತ ನೀಡಿ. ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಗೈದಿದ್ದು ಪಿಎಫ್​ಐನವರು. ಪಿಎಫ್​ಐ ಸಂಘಟನೆಯನ್ನು ಮೋದಿ ಸರ್ಕಾರ ನಿಷೇಧಿಸಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನು ಸಂವಿಧಾನದ 200ನೇ ವಿಧಿಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ತೆಲಂಗಾಣ ವಿಧಾನಸಭೆ ಅಂಗೀಕರಿಸಿರುವ ಹತ್ತು ವಿಧೇಯಕಗಳ ಕುರಿತು ತಕ್ಷಣ ನಿರ್ಧಾರ ಕೈಗೊಳ್ಳುವಂತೆ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರಿಗೆ ಸೂಚಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಪೀಠವೂ ಗಮನಿಸಿದೆ. ರಾಜ್ಯಪಾಲರು ಎಲ್ಲ ವಿಧೇಯಕಗಳನ್ನು ಅಂಗೀಕರಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ನಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ‘ಸಾಧ್ಯವಾದಷ್ಟು ಬೇಗ ನಿರ್ಧಾರ ಕೈಗೊಳ್ಳಿ’ ಎಂಬ ಸಾಂವಿಧಾನಿಕ ನಿರ್ದೇಶನ ಮಹತ್ವದ್ದಾಗಿದ್ದು, ಸಂಬಂಧಪಟ್ಟವರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More