Author: admin

ಮಣಿಪುರದಲ್ಲಿ ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಕಳೆದ ಮೂರು ತಿಂಗಳಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ ಎಂದರು. ಸಜೀವ ದಹನ, ಮಹಿಳೆಯರ ನಗ್ನ ಮೆರವಣಿಗೆಯಂತಹ ಭೀಭತ್ಸ ಕೃತ್ಯಗಳು ಸರಣಿ ರೂಪದಲ್ಲಿ ನಡೆಯುತ್ತಿವೆ. ಕೊಲೆ ಅತ್ಯಾಚಾರಗಳಿಗೆ ಲೆಕ್ಕವೇ ಇಲ್ಲ. ಮಣಿಪುರ ಭಾರತದಲ್ಲಿದಿಯೇ ಅಥವಾ ಅಫ್ಘಾನಿಸ್ತಾನದಲ್ಲಿದೆಯೇ.? ಮಣಿಪುರ ಗಲಭೆ ನಿಯಂತ್ರಿಸಲು ಪ್ರಧಾನಿಯವರಿಗೆ ಸಾಧ್ಯವಿಲ್ಲವೇ.? ಎಂದು ಪ್ರಶ್ನೆ ಮಾಡಿದರು. ಮಣಿಪುರ ಹಿಂಸಾಚಾರವನ್ನು ಕಳೆದ 3 ತಿಂಗಳಿಂದ ಜೀವಂತವಾಗಿ ಬಿಟ್ಟಿರುವುದು ಕೇಂದ್ರದ ಅಸಹಾಯಕತೆಗಿಂತ ಹೆಚ್ಚಾಗಿ ಹೇಡಿತನ ತೋರಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರದ ಪರಿಸ್ಥಿತಿ ನಿಭಾಯಿಸುವಲ್ಲಿ ಅಲ್ಲಿನ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಮೋದಿಯವರ 56 ಇಂಚಿನ ಎದೆಯಲ್ಲಿ ಹಿಂಸಾಚಾರ ಸದ್ದಡಗಿಸುವ ಎದೆಗಾರಿಕೆ ಯಾಕಿಲ್ಲ.? ಎಂದು ಪ್ರಶ್ನೆ ಮಾಡಿದರು. ಕೇಂದ್ರ ಸರ್ಕಾರವು ಮಣಿಪುರದ ಬಿಜೆಪಿ ಸರ್ಕಾರವನ್ನು ಕೂಡಲೇ ವಜಾ ಮಾಡಲಿ ಎಂದು…

Read More

ದಲಿತ ಸಮುದಾಯದಲ್ಲಿ ಭೂಮಿ ಶೇ 6ರಷ್ಟು ಇದ್ದರೆ, ಶೇ 78 ಭಾಗ ಮೇಲ್ಟಾತಿ ಕೈಯಲ್ಲಿದೆ. ಇದು ರಾಜಕೀಯ ಶಕ್ತಿಯನ್ನು ಅವರಿಗೆ ತಂದುಕೊಟ್ಟಿದೆ’ ಎಂದು ವಕೀಲ ಹರಿರಾಮ್ ತಿಳಿಸಿದರು. ದಲಿತ ವಿಮೋಚನಾ ಸೇನೆ ವತಿಯಿಂದ ಪ್ರೊ. ಬಿ. ಕೃಷ್ಣಪ್ಪ ಅವರ 85ನೇ ಜಯಂತ್ಯುತ್ಸವದ ಅಂಗವಾಗಿ ನಡೆದ ಬಹುಜನ ಸ್ವಾಭಿಮಾನ ದಿನಾಚರಣೆ ಮತ್ತು ಮಾಳವ ನಾರಾಯಣ ಅವರು ರಚಿಸಿರುವ ‘ಕರ್ನಾಟಕದ ಅಂಬೇಡ್ಕರ್ ಪ್ರೊ. ಬಿ. ಕೃಷ್ಣಪ್ಪ’ ಕೃತಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಕೈಗಾರಿಕೆ, ಉದ್ಯಮ, ಮಾಧ್ಯಮ, ಸಹಕಾರಿ ಕ್ಷೇತ್ರಗಳಲ್ಲಿ ದಲಿತರಿಗೆ ನಿರೀಕ್ಷಿತ ಪ್ರಾತಿನಿಧ್ಯ ದೊರೆತಿಲ್ಲ. ಇದರಿಂದಾಗಿ ಆರ್ಥಿಕವಾಗಿಯೂ ಶೂನ್ಯವಾಗಿದ್ದಾರೆ ಎಂದರು. ‘ಶಿಕ್ಷಣ ಪಡೆಯುತ್ತಿರುವ ದಲಿತ ಯುವಸಮುದಾಯದವರಲ್ಲಿ ನಿಮ್ಮ ಗುರಿ ಏನು ಎಂದು ಕೇಳಿದರೆ ಸರ್ಕಾರಿ ಉದ್ಯೋಗ ಪಡೆಯುವುದು ಎಂದು ಹೇಳುತ್ತಿದ್ದಾರೆ. ಆದರೆ, ಈಗಿನ ಉದ್ಯೋಗಗಳಲ್ಲಿ ಶೇ 0. 6ರಷ್ಟು ಮಾತ್ರ ಸರ್ಕಾರಿ ಉದ್ಯೋಗವಾಗಿದೆ. ಅದರಲ್ಲಿ ದಲಿತರಿಗೆ ಶೇ 0. 2ರಷ್ಟು ಮಾತ್ರ ಸಿಗುತ್ತಿದೆ ಎಂದು ತಿಳಿಸಿದರು. ನಿವೃತ್ತ ಪ್ರಾಧ್ಯಾಪಕ ಎಚ್. ಗೋವಿಂದಯ್ಯ…

Read More

ರಾಜ್ಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ಇಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತುರ್ತು ಸಭೆ ನಡೆಸುವ ಮೂಲಕ ಮಳೆಯ ಮಾಹಿತಿ ಕಲೆ ಹಾಕಿದ್ದಾರೆ. ಕಂದಾಯ ಸಚಿವ ಕೃಷ್ಣಭೈರೇಗೌಡ ವಿಕಾಸಸೌಧದಲ್ಲಿ ಸಭೆ ನಡೆಸಿದ್ದು, ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಹಿಂದೆ ಹೇಳಿದ್ದೆ ಜುಲೈ ತಿಂಗಳಲ್ಲಿ ಮಳೆಯಾಗುತ್ತೆ ಅಂತ ಹವಾಮಾನ ಇಲಾಖೆ ಹೇಳಿತ್ತು. ಜೂನ್ ತಿಂಗಳಲ್ಲಿ 56 % ಮಳೆ ಕೊರತೆ ಇತ್ತು. ಒಂದು ವಾರದ ಹಿಂದೆ 29% ಇಳಿದಿತ್ತು. ನಿನ್ನೆಗೆ 19% ಮಳೆ ಕೊರತೆ ಕಡಿಮೆ ಆಗಿದೆ. ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ಶೇ 14% ಕೊರತೆ ಇದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಜಾಸ್ತಿ ಕೊರತೆ ಇದೆ. ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಲ್ಲಿ ಕೊರತೆ ಇದೆ. ಒಂದು ವಾರದಲ್ಲಿ ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ರಾಜ್ಯದ ಬಹುತೇಕ ಮಳೆ ಕೊರತೆ ಇತ್ತು.…

Read More

ಬೆಂಗಳೂರು ದಕ್ಷಿಣ ವಲಯ – 1ರ ಹನುಮಂತನಗರದ ಸುಂಕೇನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಐನೂರಕ್ಕೂ ಹೆಚ್ಚು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆಯನ್ನು ಗೋ ಸಂರಕ್ಷಕ, ಸಮಾಜ ಸೇವಕರಾದ ಮಹೇಂದ್ರ ಮುನ್ನೋತ್ ಅವರು ಮಾಡಿದರು. ನಂತರ ಅವರು ಮಾತನಾಡಿ ಉಳ್ಳವರು ತಮ್ಮ ಗಳಿಕೆಯಲ್ಲಿ ಇಂತಿಷ್ಟು ಎಂದು ಸ್ವಲ್ಪ ಹಣವನ್ನು ಉಳಿಸಿ ಅದನ್ನು ಸಮಾಜದ ಅವಶ್ಯಕತೆ ಇರುವವರಿಗೆ ನೀಡಿ ಜನ್ಮ ಸಾರ್ಥಕ ಪಡಿಸಿಕೊಳ್ಳಿ ಎಂದರು. ಪ್ರತಿ ವರ್ಷ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಲಕ್ಷಾಂತರ ನೋಟ್ ಪುಸ್ತಕವನ್ನು ನೀಡುತ್ತು ಬಂದಿದ್ದೇನೆ ಎಂದರು. ಶಾಲಾ ಅಭಿವೃದ್ಧಿ ಮಂಡಳಿ ಸದಸ್ಯೆ ಹಾಗೂ ಗ್ರೇನ್ ಮರ್ಚೆಂಟ್ ಕೋ-ಅಪರೆಟಿವ್ ಬ್ಯಾಂಕ್ ನ ನಿರ್ದೇಶಕಿ ಎನ್. ಮಾಲಿನಿ ಮಾತನಾಡಿ ಸರಕಾರಿ ಶಾಲೆಯ ಮಕ್ಕಳಿಗೆ ಅವಶ್ಯಕತೆ ಇರುವ ಸಾಮಗ್ರಿಗಳನ್ನು ದಾನಿಗಳು ನೀಡಿ ಆ ಮಕ್ಕಳ ಓದಿಗೆ ನೇರವಾಗುತ್ತಿರುವುದು ಅಭಿನಂದನೀಯವದದು ಎಂದರು, ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ವಿದ್ಯಾ ದಾನ. ಅದಕ್ಕೆ ಸಹಕರಿಸುತ್ತಿರುವ ಎಲ್ಲರಿಗೂ ನಮ್ಮ ಕೋಟಿ ನಮನಗಳು…

Read More

ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರನ್ನು ಇರಿಸಲು 1923 ರಲ್ಲಿ ಬ್ರಿಟಿಷರು ನಿರ್ಮಿಸಿದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹವು ದೇಶದ ಅತಿದೊಡ್ಡ ಜೈಲುಗಳಲ್ಲಿ ಒಂದಾಗಿದೆ. 100 ವರ್ಷಗಳ ಹಳೆಯದಾದ ಈ ಜೈಲು ನಮ್ಮ ರಾಷ್ಟ್ರದ ಇತಿಹಾಸದ ಭಾಗವಾಗಿದೆ. ಬೆಳಗಾವಿಯಿಂದ 6 ಕಿಮೀ ದೂರದಲ್ಲಿ, ಹಿಂಡಲಗಾ ಜೈಲನ್ನು ಸುಮಾರು 99 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿದೆ. 99 ಎಕರೆಯಲ್ಲಿ 30 ಎಕರೆಯಷ್ಟು ಭೂಮಿಯನ್ನು ಕೃಷಿ ಮತ್ತು ಜಾನುವಾರುಗಳಿಗೆ ಮೇಯಿಸಲು ಮೀಸಲಿಡಲಾಗಿದೆ. ಇದು ಹಸಿರು ಸೆರೆಮನೆಯಾಗಿದ್ದು, ವಿಭಾಗಗಳ ನಡುವಿನ ತೆರೆದ ಸ್ಥಳಗಳಲ್ಲಿ ಹೇರಳವಾದ ಮರಗಳು ಮತ್ತು ಸಸ್ಯವರ್ಗವನ್ನು ಹೊಂದಿದೆ. ಈ ಪರಿಸರವನ್ನು ಕಾಪಾಡಿಕೊಳ್ಳಲು ಸಿಬ್ಬಂದಿ ಮತ್ತು ಕೈದಿಗಳ ಪರಿಶ್ರಮವಿದೆ. ಜೈಲು ಎರಡು ದೊಡ್ಡ ಸಂಕೀರ್ಣಗಳನ್ನು ಒಳಗೊಂಡಿದೆ. ಒಂದು ಸಂಕೀರ್ಣವು ಪುರುಷ ಅಪರಾಧಿಗಳಿಗೆ ಬ್ಯಾರಕ್‌ ಗಳನ್ನು ಹೊಂದಿದೆ. ಇನ್ನೊಂದು ವಿಚಾರಣಾಧೀನ ಕೈದಿಗಳಿಗೆ. ಅಪರಾಧಿಗಳ ಕೆಲಸಕ್ಕೆ ನೇಕಾರಿಕೆ, ಮತ್ತು ಟೈಲರಿಂಗ್ ಸೌಲಭ್ಯವಿದೆ. ಅಂಡರ್ ಟ್ರಯಲ್ ವಿಭಾಗದಲ್ಲಿ ಸೆಲ್‌ ಗಳು ಮತ್ತು ಬ್ಯಾರಕ್‌ ಗಳಿವೆ. ಇಲ್ಲಿ ಗ್ರಂಥಾಲಯ, ಮರಗೆಲಸ ವಿಭಾಗ, ಟೈಲರಿಂಗ್…

Read More

ಎಸ್ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳಲ್ಲಿ ಕೆಲವೊಂದು ಮಹತ್ವದ ಮಾರ್ಪಾಡುಗಳನ್ನು ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದು, ಇದರ ಬಗ್ಗೆ ಇಲಾಖೆಯ ಹಿರಿಯ ಅಧಿಜಾರಿಗಳ ಜೊತೆಗೆ ಚರ್ಚೆ ನಡೆಯುತ್ತಿದೆ ಎಂದು ಖುದ್ದು ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಏನಿದು ಪೂರಕ ಪರೀಕ್ಷೆಯಲ್ಲಿ ಹೊಸದಾದ ಮಾರ್ಪಾಡು ಎಂಬುದನ್ನು ನೋಡುವುದಾದ್ರೆ, ಈವರೆಗೂ ಎಸ್ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಗಳಿಗೆ ಶೈಕ್ಷಣಿಕ ವರ್ಷದಲ್ಲಿ ಬರುವ ಪರೀಕ್ಷೆಯಲ್ಲಿ ಅನುತ್ತೀರ್ಣರಾದ್ರೆ, ಅಂತಹ ವಿದ್ಯಾರ್ಥಿಗಳಿಗೆ ಒಂದು ವರ್ಷ ಹಾಳಾಗದಂತೆ ಇಲಾಖೆ ಎರಡು ತಿಂಗಳೊಳಗೆ ಪರೀಕ್ಷೆ ನಡೆಸಿ, ಅವರು ಉತ್ತೀರ್ಣರಾಗುವಂತೆ ನೋಡಿಕೊಳ್ಳುತ್ತಿತ್ತು. ಇದೀಗ ಇದೇ ಪದ್ಧತಿಯಂತೆ ಒಂದು ಪೂರಕ ಪರೀಕ್ಷೆಯ ಬದಲಿಗೆ ಎರಡು ಪೂರಕ ಪರೀಕ್ಷೆಗಳನ್ನು ನಡೆಸಿ, ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುವಂತೆ ನೋಡಿಕೊಳ್ಳುವ ಹೊಸ ಕ್ರಮದ ಬಗ್ಗೆ ಇಲಾಖಾ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಒಮ್ಮೆ ಇದು ಅಂತಿಮವಾದ್ರೆ, ಸಿಎಂ ಗಮನಕ್ಕೆ ಇದನ್ನು ತಂದು ಬಳಿಕ ಅನುಷ್ಠಾನ ಮಾಡಲು ಸಚಿವ ಮಧು ಬಂಗಾರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನ ವಿವಿ ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಜಾನ್ ಇಗ್ವಾಯತ್ (30) ಬಂಧಿತ ಆರೋಪಿ. ಆರೋಪಿ ಹಾಗೂ ಮತ್ತೋರ್ವ ನೈಜೀರಿಯಾ ಪ್ರಜೆ ವಿದ್ಯಾರ್ಥಿ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದರು. ಆದರೆ ಗೋವಾದಿಂದ ಮಾದಕ ವಸ್ತುಗಳನ್ನು ತಂದು ಕಾಲೇಜು ವಿದ್ಯಾರ್ಥಿಗಳು, ಸಾಫ್ಟ್ ವೇರ್ ಉದ್ಯೋಗಿಗಳಿಗೆ ಹಾಗೂ ಪಾರ್ಟಿಗಳಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ಕುರಿತು ಮಾಹಿತಿ ಪಡೆದು ದಾಳಿ ನಡೆಸಿದ ವಿವಿ ಪುರಂ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಗಳು ಶೌಚಾಲಯದಲ್ಲಿ ಅಡಗಿಸಿಟ್ಟಿದ್ದ ಮಾದಕ ಪದಾರ್ಥ ಸೇರಿದಂತೆ ಸುಮಾರು 2 ಕೋಟಿ ಮೌಲ್ಯದ 1 ಕೆ. ಜಿ 20 ಗ್ರಾಂ ಎಂಡಿಎಂಎ, ದ್ವಿಚಕ್ರ ವಾಹನ, ಮೊಬೈಲ್ ಫೋನ್‌ ಗಳನ್ನ ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಬೆಂಗಳೂರು: ಪ್ರೇಮ ವೈಫಲ್ಯಕ್ಕೆ ಬೇಸತ್ತು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಸಂಜೆ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯ ಜೆ ಎಸ್ ನಗರದಲ್ಲಿ ನಡೆದಿದೆ. ನವೀನ್ (27) ಆತ್ಮಹತ್ಯೆಗೆ ಶರಣಾದ ಯುವಕ. ಚಾಮರಾಜನಗರ ಜಿಲ್ಲೆಯ ಚಿಕ್ಕಲೂರು ಮೂಲದ ನವೀನ್ ಕುಟುಂಬದವರೊಂದಿಗೆ ಬೆಂಗಳೂರಲ್ಲಿ ವಾಸವಿದ್ದ. ಬಾಳೆಕಾಯಿ ಮಂಡಿ ಇಟ್ಟುಕೊಂಡು ವ್ಯವಹಾರ ಮಾಡುತ್ತಿದ್ದ. ಯುವತಿಯೊಬ್ಬಳನ್ನು ನವೀನ್ ಪ್ರೀತಿಸುತ್ತಿದ್ದು, ಆಕೆ ಪ್ರೀತಿ ನಿರಾಕರಿಸಿದ ಕಾರಣ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನವೀನ್ ಪ್ರೇಮ ವೈಫಲ್ಯದ ಬಗ್ಗೆ ಡೆತ್ ನೋಟ್‌ ನಲ್ಲಿ  ಬರೆದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರಾಣ ಕಳೆದುಕೊಂಡಿದ್ದಾನೆ. ಮೃತ ನವೀನ್ ಕುಟುಂಬಸ್ಥರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕುಟುಂಬಸ್ಥರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಬೆಂಗಳೂರು ಮೂಲದ ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಸಂಕಷ್ಟಕ್ಕೆ ಸಿಲುಕುವ ಲಕ್ಷಣಗಳು ಗೋಚರಿಸುತ್ತಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ಎರಡು ದಿನಗಳ ಹಿಂದೆ ಬೆಂಗಳೂರು ಮೂಲದ ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್‌ ನ ಕಾರ್ಯ ನಿರ್ವಹಣೆಗೆ ಹಲವು ನಿರ್ಬಂಧಗಳನ್ನು ವಿಧಿಸಿದ್ದು, ನಿನ್ನೆಯಿಂದಲೇ ಜಾರಿಗೆ ಬರುವ ಕೆಲ ನಿರ್ಬಂಧಗಳನ್ನು ಹೇರಿದೆ. ಯಾವುದೇ ಹೂಡಿಕೆಗೆ ನಿರ್ಬಂಧ, ಸಾಲ ಎರವಲು ಪಡೆಯುವಂತಿಲ್ಲ, ಹೊಸದಾಗಿ ಠೇವಣಿ ಸ್ವೀಕರಿಸುವಂತಿಲ್ಲ, ಯಾವುದೇ ದೊಡ್ಡ ಮೊತ್ತದ ಪಾವತಿ ಮಾಡುವಂತಿಲ್ಲ. ಆರ್‌ಬಿಐ ಅನುಮತಿ ಇಲ್ಲದೇ ಬ್ಯಾಂಕ್‌ ನ ಆಸ್ತಿ ಮಾರಾಟ ಮಾಡುವಂತಿಲ್ಲ. ಪರಭಾರೆಯನ್ನು ಮಾಡುವಂತಿಲ್ಲ. ಒಪ್ಪಂದಗಳನ್ನು ಮಾಡಿಕೊಳ್ಳುವಂತಿಲ್ಲ. ಇನ್ನು ಗ್ರಾಹಕರು ತಮ್ಮ ಖಾತೆಯಿಂದ 50 ಸಾವಿರಕ್ಕಿಂತ ಹೆಚ್ಚು ಹಣ ಹಿಂಪಡೆಯುವಂತಿಲ್ಲ. ಹೀಗೆ ಹಲವು ನಿರ್ಬಂಧಗಳನ್ನು ಆರ್‌ಬಿಐ ಹೇರಿದ್ದು, ಬೆಂಗಳೂರು ಮೂಲದ ಮತ್ತೊಂದು ಬ್ಯಾಂಕ್ ಮುಳುಗಿ ಹೋಗುವ ಆತಂಕ ಸೃಷ್ಠಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಲಕ್ನೋ: ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ ನಡೆದಿದೆ. ಮೃತನನ್ನು ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಆತ ತವರು ಮನೆಯಲ್ಲಿದ್ದ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗಲು ತೆರಳಿದ್ದ ವೇಳೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಈ ಕೃತ್ಯ ಎಸಗಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿದ್ದಂತೆ ಆತ ಕೂಗಿಕೊಂಡು ಮನೆಯಿಂದ ಹೊರಗೆ ಓಡಿಹೋಗಿದ್ದಾನೆ. ಕೂಡಲೇ ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂಧ ಮೃತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ಆರೋಪಿಗಳ ವಿರುದ್ಧ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ದಾಖಲಿಸಲಾಗಿತ್ತು. ಈಗ ಸಂತ್ರಸ್ತ ಮೃತಪಟ್ಟಿದ್ದು ಅದನ್ನು ತಿದ್ದುಪಡಿ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತನ ಸಹೋದರ ನೀಡಿದ ದೂರಿನಲ್ಲಿ ಧರ್ಮೇಂದ್ರ ಮತ್ತು ಆತನ ಪತ್ನಿ ಪ್ರೀತಿ 2019 ರಲ್ಲಿ ಮದುವೆಯಾಗಿದ್ದರು. ಮದುವೆಯ ಆರಂಭದಿಂದಲೂ ಪ್ರೀತಿ ಮತ್ತು…

Read More