Subscribe to Updates
Get the latest creative news from FooBar about art, design and business.
- ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
- ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
- ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
- ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
- ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ, ಕಲಾತಂಡಗಳ ಮೆರುಗು
- ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
- ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
- ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು
Author: admin
ದೊಡ್ಡಬಳ್ಳಾಪುರದಲ್ಲಿ ಹಾಲಿ ಬಿಜೆಪಿ ಸದಸ್ಯರು ಕಾಂಗ್ರೇಸ್ ಸೇರ್ಪಡೆಯಾಗಿದ್ದಾರೆ. ನಾಲ್ವರು ಬಿಜೆಪಿ ಸದಸ್ಯರು ಇಬ್ಬರು ಪಕ್ಷೇತರರು ಸೇರಿದಂತೆ ಆರು ಜನ ಸದಸ್ಯರು ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಯುವ ಅಭ್ಯರ್ಥಿ ದೀರಜ್ ಗೆ ಟಿಕೇಟ್ ನೀಡಿದಕ್ಕೆ ಮುನಿಸಿಕೊಂಡಿದ್ದ ಬಿಜೆಪಿ ನಗರಸಭೆ ಸದಸ್ಯರು ಬಂಡಾಯ ಶಮನವಾಗದ ಹಿನ್ನೆಲೆ ಕಾಂಗ್ರೆಸ್ ಸೇರಿದ್ದಾರೆ. ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಹಾಲಿ ಶಾಸಕ ವೆಂಕಟರಮಣಯ್ಯ ನೇತೃತ್ವದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಹಾಲಿ ಸದಸ್ಯರು ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ ಉತ್ತರ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಡಾ.ರವಿ ಪಾಟೀಲ್ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸದಾಶಿವನಗರ, ಅಂಬೇಡ್ಕರ್ ನಗರ, ಶಾಹೂನಗರ, ಬಿ.ಕೆ.ಕಂಗ್ರಾಳಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಹಿಳೆಯರು ರವಿ ಪಾಟೀಲರಿಗೆ ಆರತಿ ಬೆಳಗಿ ಸ್ವಾಗತಿಸಿ, ಜಯವಾಗಲಿ ಎಂದು ಹಾರೈಸಿದರು. ಪ್ರತಿ ಮನೆಯನ್ನು ಸಂಪರ್ಕಿಸುವ ಮೂಲಕ ಬೆಳಗಾವಿಯ ಅಭಿವೃದ್ಧಿಗೆ ನಮ್ಮನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು. ವಿಶೇಷವೆಂದರೆ ಈ ಸಂದರ್ಭದಲ್ಲಿ ಮಹಿಳೆಯರು ರವಿ ಪಾಟೀಲರಿಗೆ ಆರತಿ ಬೆಳಗಿ, ಸ್ವಾಗತಿಸಿ ಜಯವಾಗಲಿ ಎಂದು ಹಾರೈಸಿದರು. ಅವರ ಪತ್ನಿ ಸುನೀತಾ ಪಾಟೀಲ್ ಅವರಿಗೂ ಮಹಿಳೆಯರು ಅರಿಶಿನ ಮತ್ತು ಕುಂಕುಮ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ರವಿ ಪಾಟೀಲ್ ಪರ ಘೋಷಣೆಗಳನ್ನು ಕೂಗಿದರು. ಅಲ್ಲದೇ ಬೀದಿ ಬದಿ ವ್ಯಾಪಾರಿಗಳ ಬಳಿಗೆ ತೆರಳಿದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್ ಸರ್ಕಾರದ ಯೋಜನೆಗಳನ್ನು ತಿಳಿಸಿ ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಗೋಕಾಕ್ : ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ, ಇಂತಹ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೆಸೆದು , ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿ, ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ. ಜನತೆಗೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದ್ದೇವೆ. ಬಡವರ ಪರ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಬಿಜೆಪಿಯಿಂದ 10% ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಅದರ ಬದಲಿಗೆ ಯದ್ವಾತದ್ವಾ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ ಎಂದ ಅವರು, ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಗುತ್ತಿಗೆದಾರರು ಪಿಎಂಗೆ ಪತ್ರ ಬರೆದಿದ್ದಾರೆ. ಮೋದಿ ಹೇಳ್ತಾರೆ ‘ನಾ ಖಾವೂಂಗಾ, ನಾ ಖಾನೆದೂಂಗಾ’ ಎಂದು. ನಾನು ಪಿಎಂ ಮೋದಿಗೆ ಕೇಳ್ತೀನಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ಭ್ರಷ್ಟಾಚಾರ ಮಾಡಲು ಯಾಕೇ ಅವಕಾಶ ಕೊಟ್ಟಿದ್ದಿರಾ? ಎಂದು ಬಿಜೆಪಿ ಸರ್ಕಾರ ವಿರುದ್ದ ಚಾಟಿ ಬೀಸಿದರು. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ: ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ…
ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ ಭಾರೀ ಭೂಕಂಪ ಸಂಭವಿಸಿದೆ. 7.3 ತೀವ್ರತೆಯ ಭೂಕಂಪದ ನಂತರ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 4 ರ ತೀವ್ರತೆಯ ನಂತರದ ಕಂಪನಗಳೂ ವರದಿಯಾಗಿವೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಭೂಕಂಪನ ಸಂಭವಿಸಿದೆ ಎಂದು ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಸುಮಾತ್ರದ ಪಶ್ಚಿಮ ಕರಾವಳಿಯ ಪ್ರದೇಶವಾಗಿದೆ. ಸುಮಾತ್ರಾ ರಾಜಧಾನಿ ಪಡಂಗ್‌ನಲ್ಲಿ ಪ್ರಬಲ ಕಂಪನದ ಅನುಭವವಾಗಿದೆ. ಜನರು ಈಗಾಗಲೇ ಸೈಬರ್‌ರೂಟ್ ದ್ವೀಪದಿಂದ ಸ್ಥಳಾಂತರಗೊಂಡಿದ್ದಾರೆ. ಸುಮಾತ್ರಾ ಅತ್ಯಂತ ಭೂಕಂಪನ ಪೀಡಿತ ಪ್ರದೇಶವಾಗಿದೆ. ಸುಮಾತ್ರಾ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿದೆ, ಇದು ಭೂಮಿಯ ಫಲಕಗಳು ಘರ್ಷಣೆಯಾಗುವ ಪ್ರದೇಶವಾಗಿದೆ. ಇದು ಭೂಕಂಪಗಳ ಅಪಾಯವನ್ನು ಹೆಚ್ಚಿಸುತ್ತದೆ. ಸುನಾಮಿ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…
ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಇ-ಪಾಸ್‌ಬುಕ್ ಸೇವೆ ಮುಷ್ಕರಕ್ಕೆ ಇಳಿದಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಂದಿ ದೂರು ಸಲ್ಲಿಸಿದ್ದಾರೆ. ಈ ವರ್ಷ ಎರಡನೇ ಬಾರಿಗೆ ಇ-ಪಾಸ್ ಬುಕ್ ಸೇವೆ ಮುಷ್ಕರ ನಡೆಸುತ್ತಿದೆ. ಇಪಿಎಫ್‌ಒ ವೆಬ್‌ಸೈಟ್ ಅಥವಾ ಉಮಾಂಗ್ ಆ್ಯಪ್‌ನಿಂದ ಇ-ಪಾಸ್‌ಬುಕ್ ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಳಕೆದಾರರು ದೂರಿದ್ದಾರೆ. ಹಲವರು ಟ್ವಿಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಇಪಿಎಫ್‌ಒ – ‘ಆತ್ಮೀಯ ಸದಸ್ಯರೇ, ಅನಾನುಕೂಲತೆಗಾಗಿ ಕ್ಷಮಿಸಿ. ಸಂಬಂಧಪಟ್ಟ ತಂಡ ಸಮಸ್ಯೆ ಬಗೆಹರಿಸಲು ಶ್ರಮಿಸುತ್ತಿದೆ. ಒಂದು ಕ್ಷಣ ನನ್ನನ್ನು ಕ್ಷಮಿಸಿ. ಸೇವೆಯು ಶೀಘ್ರದಲ್ಲೇ ಲಭ್ಯವಾಗಲಿದೆ, ”ಎಂದು ಇಪಿಎಫ್‌ಒ ಹೇಳಿದೆ. ಈ ವರ್ಷದ ಜನವರಿಯಲ್ಲಿ ಇ-ಪಾಸ್‌ಬುಕ್ ಸೇವೆಯೂ ಮುಷ್ಕರ ನಡೆಸಿತ್ತು. ಉದ್ಯೋಗಿ ಮತ್ತು ಉದ್ಯೋಗದಾತರು ಮಾಡಿದ ಠೇವಣಿಗಳನ್ನು ಮತ್ತು ಪಿಎಫ್‌ನಲ್ಲಿರುವ ಒಟ್ಟು ಮೊತ್ತವನ್ನು ಇ-ಪಾಸ್‌ಬುಕ್ ಮೂಲಕ ನಿಖರವಾಗಿ ತಿಳಿಯಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…
ಕೊರಟಗೆರೆ:15ವರ್ಷಗಳಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಅವಕಾಶ ನೀಡಿದ್ದೀರಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಈ ಬಾರಿ ಬಿಜೆಪಿ ಬೆಂಬಲಿಸಿ ಕ್ಷೇತ್ರದಲ್ಲಿನ ಕುಂದುಕೊರತೆಗಳನ್ನು ಸರಿಪಡಿಸಲು ಸಹಕರಿಸಿ ಎಂದು ಬಿಜೆಪಿ ಅಭ್ಯರ್ಥಿ ಬಿ.ಎಚ್.ಅನಿಲ್ ಕುಮಾರ್ ಮನವಿ ಮಾಡಿದರು. ಕೋರ ಹೋಬಳಿಯ ಗೊಲ್ಲಹಳ್ಳಿ ಸುಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು ಮತಯಾಚನೆ ಪ್ರಾರಂಭಿಸಿದ ಬಿ.ಹೆಚ್ ಅನಿಲ್ ಕುಮಾರ್ ಮತದಾರರನ್ನು ಉದ್ದೇಶಿ ಮಾತನಾಡಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿಯ ಗೊಲ್ಲಹಳ್ಳಿ ಗ್ರಾಮದ ಮನೆ ಮನೆಗೆ ತೆರಳಿ ಬಿಜೆಪಿ ಯೋಜನೆಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡಿದರು, ಕ್ಷೇತ್ರದಲ್ಲಿ ಅಭ್ಯರ್ಥಿ ಅನಿಲ್ ಕುಮಾರ್ ರವರಿಗೆ ಆರತಿ ಬೆಳಗುವುದರ ಮೂಲಕ ಪ್ರತಿ ಗ್ರಾಮದಲ್ಲಿ ಅದ್ಧೂರಿ ಸ್ವಾಗತ ಕೋರಿ ಮತ ನೀಡುವ ಆಶ್ವಾಸನೆ ನೀಡುತ್ತಿರುವುದೇ ಬಿಜೆಪಿ ಗೆದ್ದು ಇತಿಹಾಸ ಬರೆಯಲಿದೆ. ಕೋರಾ ಹೋಬಳಿ ಸುಮಾರು 80 ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಕಮಲ ಗುರುತಿಗೆ ಮತನೀಡಿ ಎಂದು ಮನವಿ ಮಾಡಿದರು. ಎಲ್ಲಾ ಗ್ರಾಮಗಳಲ್ಲಿಯೂ…
ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್(74) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಲಂಗ್ಸ್ ಹಾಗೂ ಲಿವರ್ ಸಮಸ್ಯೆಯಿಂದ ಡಿ.ಬಿ.ಇನಾಂದಾರ್ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಇನಾಮದಾರ್, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕನ್ನಡ ನಟ ಸಂಪತ್ ಜೆ ರಾಮ್ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಸಂಪತ್ ರಾಮ್ ಬೆಂಗಳೂರಿನ ನೆಲಮಂಗಲದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಂಪತ್ ಅವರು ‘ಅಗ್ನಿಸಾಕ್ಷಿ’ ಮತ್ತು ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ನಂತಹ ಅನೇಕ ಧಾರಾವಾಹಿಗಳು ಮತ್ತು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಸಂಪತ್ ಜೆ ರಾಮ್ ಅವರ ಸ್ನೇಹಿತ ಹಾಗೂ ನಟ ರಾಜೇಶ್ ಧ್ರುವ ಅವರು ಸಂಪತ್ ಸಾವನ್ನು ಫೇಸ್ ಬುಕ್ ಪೋಸ್ಟ್ ಮೂಲಕ ಖಚಿತಪಡಿಸಿದ್ದಾರೆ. ‘ನಿಮ್ಮ ನಿಧನವನ್ನು ತಡೆದುಕೊಳ್ಳುವ ಶಕ್ತಿ ನಮಗಿಲ್ಲ. ಇನ್ನೂ ಎಷ್ಟು ಸಿನಿಮಾಗಳು ಬರಲಿವೆ. ನಿಮ್ಮ ಕನಸು ನನಸಾಗಲು ಇನ್ನೂ ಸಮಯವಿದೆ. ದಯವಿಟ್ಟು ಹಿಂತಿರುಗಿ’- ರಾಜೇಶ್ ಫೇಸ್ ಬುಕ್ ಗಳಲ್ಲಿ ಬರೆದರು. ಅವಕಾಶಗಳು ಸಿಗದೇ ಸಂಪತ್ ಹತಾಶರಾಗಿದ್ದರು ಎಂದು ಆಪ್ತ ಮೂಲಗಳು ವರದಿ ಮಾಡಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…
ತಿರುವನಂತಪುರಂ: ಪ್ರದಾನಿ ನರೇಂದ್ರ ಮೋದಿಯವರು ಬಂದರು ನಗರ ಕೊಚ್ಚಿಯಲ್ಲಿ ಭಾರತದ ಮೊದಲ ವಾಟರ್ ಮೆಟ್ರೋ ಸೇವೆಗೆ ಇಂದು (ಮಂಗಳವಾರ) ಚಾಲನೆ ನೀಡಲಿದ್ದಾರೆ. ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂಪಾಯಿಯಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳನ್ನು ಈ ಮೆಟ್ರೋ ಸಂಚಾರ ಮಾಡಲಿದ್ದು, 8 ಎಲೆಕ್ಟ್ರಿಕ್ ಬೋಟ್‌ಗಳು, 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆಗೆ ಸಿದ್ಧವಾಗಿದೆ. ಈ ವಾಟರ್ ಮೆಟ್ರೋ ಯೋಜನೆಯು 78 ಕಿಲೋಮೀಟರ್ ವ್ಯಾಪಿಸಿದ್ದು, ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಗೋಕಾಕ್/ ಬೈಲಹೊಂಗಲ : : ದೇಶದ ಭದ್ರತೆ, ಸಮಗ್ರತೆಗಾಗಿ ಮತ್ತು ಸರ್ವ ಜನಾಂಗಗಳನ್ನು ಒಂದೇ ದೃಷ್ಟಿಯಿಂದ ನೋಡುವ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕಿ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮತದಾರರಲ್ಲಿ ಮನವಿ ಮಾಡಿದ್ದಾರೆ. ಗೋಕಾಕ್ ಹಾಗೂ ಬೈಲಹೊಂಗಲದಲ್ಲಿ ಸೋಮವಾರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ತತ್ವ ಸಿದ್ದಾಂತಗಳಿದ್ದು, ಸರ್ವ ಜನಾಂಗಗಳನ್ನು ಒಂದೇ ದೃಷ್ಟಿಯಿಂದ ನೋಡುತ್ತ ಬಂದಿದೆ. ಕಾಂಗ್ರೆಸ್ ಪಕ್ಷದ ಇತಿಹಾಸವೇ ಈ ದೇಶದ ಇತಿಹಾಸವಾಗಿದೆ. ಹಾಗಾಗಿಯೇ ಇಂದು ರಾಜ್ಯಾದ್ಯಂತ ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, ಪಕ್ಷದ ಅಭ್ಯರ್ಥಿಗಳಿಗೆ ಮತ ಕೊಡುವ ಮೂಲಕ ಹೆಚ್ಚಿನ ಶಕ್ತಿ ತುಂಬಬೇಕು ಎಂದು ವಿನಂತಿಸಿದರು. ಗೋಕಾಕ್ ಕ್ಷೇತ್ರದ ಪಕ್ಷದ…