Subscribe to Updates
Get the latest creative news from FooBar about art, design and business.
- ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
- ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
- ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
- ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
- ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
- ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
- ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
- ತುಮಕೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
Author: admin
ಮೈಸೂರು: ಕೇರಳದ ವಯನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಿದ ಪರಿಣಾಮ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.ಹೆಚ್ ಡಿ ಕೋಟೆ ತಾಲ್ಲೂಕು ಬೀಚನಹಳ್ಳಿ ಗ್ರಾಮದ ಬಳಿ ಇರುವ ಕಬಿನಿ ಜಲಾಶಯ 84 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದ ಇಂದಿನ ನೀರಿನ ಮಟ್ಟ 78.31 ಅಡಿ, ಜಲಾಶಯದ ಇಂದಿನ ಒಳಹರಿವು 20,749 ಕ್ಯೂಸೆಕ್, ಜಲಾಶಯದ ಹೊರಹರಿವು 3333 ಕ್ಯೂಸೆಕ್, ಗರಿಷ್ಠ 19.52 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಇದೆ. ಜಲಾಶಯದಲ್ಲಿ ಸದ್ಯಕ್ಕೆ 16.09 ಟಿಎಂಸಿ ನೀರು ಸಂಗ್ರಹವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ನದಿಗೆ ಒಳಹರಿವು ಹೆಚ್ಚಳವಾಗಿದೆ. ಕೊಯ್ನಾ ಜಲಾಶಯ ಪ್ರದೇಶ 150 ಮಿಮೀ, ಮಹಾಬಳೇಶ್ವರ 185 ಮಿಮೀ, ನವಜಾ 201ಮಿಮೀ ಮಳೆಯಾಗುತ್ತಿರುವ ಹಿನ್ನೆಲೆ ಕೊಯ್ನಾ ಡ್ಯಾಂಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕೊಯ್ನಾ ಜಲಾಶಯದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆ ಕೃಷ್ಣಾ ನದಿಗೆ 1 ಲಕ್ಷ 14 ಸಾವಿರ ಕ್ಯೂಸೆಕ್ ಕ್ಕಿಂತ ಹೆಚ್ಚು ನೀರು ಬಿಡಲಾಗುತ್ತಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ 9 ಕೆಳಹಂತದ ಸೇತುವೆಗಳ ಜಲಾವೃತವಾಗಿದ್ದು, ಕುಡಚಿ – ಉಗಾರ ಸೇತುವೆ ಮುಳುಗಡೆ ಹಂತ ತಲುಪಿದೆ. ಕುಡಚಿ – ಉಗಾರ ಸೇತುವೆ ಮುಳುಗಡೆಗೆ ಕೇವಲ 5 ಅಡಿ ಮಾತ್ರ ಬಾಕಿ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ದಿವಂಗತ ಹಾಸ್ಯ ಚಕ್ರವರ್ತಿ ನರಸಿಂಹ ರಾಜು ರವರ 100ನೇ ವರ್ಷದ ಹುಟ್ಟುಹಬ್ಬವನ್ನು ಅವರು ಜನಿಸಿದ ತಿಪಟೂರು ನಗರದ ಕೋಟೆ ಭಾಗದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಾಸ್ಯ ಚಕ್ರವರ್ತಿ ಕರ್ನಾಟಕದ ಚಾರ್ಲಿ ಚಾಂಪಿಯನ್ ನರಸಿಂಹರಾಜುರವರ ಇಬ್ಬರು ಪುತ್ರಿಯರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು, ಜೊತೆಯಲ್ಲಿ ನರಸಿಂಹರಾಜುರವರ ಅಳಿಯಂದಿರು ಮೊಮ್ಮಕ್ಕಳು ಸಹ ಇದ್ದರು. ಈ ಸಂದರ್ಭದಲ್ಲಿ ವಾರ್ಡ್ ನಂಬರ್ 2ರ ನಗರಸಭಾ ಸದಸ್ಯರಾದ ಡಾ.ಓಹಿಲಾ ತರಕಾರಿ ಗಂಗಾಧರ್, ಮಾಜಿ ನಗರಸಭಾ ಸದಸ್ಯರಾದ ಪ್ರಸನ್ನ ಕುಮಾರ್, ಗುಡಿ ಗೌಡರಾದ ಪ್ರಕಾಶಣ್ಣನವರು, ಎಲೆ ಕಮಲಮ್ಮ, ಬದ್ರಿ, ಎಲೆ ಭಾಸ್ಕರ್, ಕೋಟಿ ನಿವಾಸಿ ಪರಿಸರ ಪ್ರೇಮಿ ಬಾವಿಮನೆ ಶಿವಣ್ಣ, ಕಿರ ತೆರೆ ಚಿತ್ರನಟ ದಯಾನಂದ್ ಸಾಗರ್, ವಿಜಯ್ ಕುಮಾರ್, ಹಾಗೂ ಕೋಟೆ ವಾರ್ಡಿನ ನಿವಾಸಿಗಳು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಿಲ್ಲಾ ವ್ಯಾಪ್ತಿಯ ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿನ ವಿದ್ಯಾರ್ಥಿನಿಯರಿಗೆ ಕನಿಷ್ಠ ರಕ್ಷಣೆ ಒದಗಿಸದೆ ಇರುವುದನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತುಮಕೂರು ಜಿಲ್ಲಾ ಘಟಕ ಖಂಡಿಸಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಗೇಟ್ ಹಾರಿ ಕಾರೊಂದರಲ್ಲಿ ಹೋಗಿರುವ ಘಟನೆಗೆ ಸಂಬಂಧಿಸಿದಂತೆ ಆಟೋ ಚಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿರುವುದು ಆ ಬಡ ಹೆಣ್ಣುಮಕ್ಕಳನ್ನು ನಿಮ್ಮ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿನಿ ನಿಲಯದಲ್ಲಿ ನಿಮ್ಮನ್ನು ಮತ್ತು ಇಲಾಖೆಯನ್ನು ನಂಬಿ ಬಿಟ್ಟಿರುವ ಪೋಷಕರಿಗೆ ಅಲ್ಪವಾದರೂ ಸಮಾಧಾನ ತಂದು ಕೊಟ್ಟಿದ್ದರೂ ಸಹ ನಿಮ್ಮ ಇಲಾಖೆಯ ಮೇಲೆ ನಂಬಿಕೆ ಕಡಿಮೆ ಆಗಿದೆ ಎಂದಿದೆ. ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯೋರ್ವಳು ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಹಾರಿ ಯಾವುದೋ ಕಾರಿನಲ್ಲಿ ಹೊರಗೆ ಹೋಗಿ ನಂತರ ಬೆಳಗಿನ ಜಾವ 5 ಗಂಟೆಗೆ ಅದೇ ಕಾಂಪೌಂಡ್ ಹಾರಿ ಬಂದಿರುವುದು ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ವಿಪರ್ಯಾಸವೆಂದರೆ …
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎರಡೂ ಜಿಲ್ಲೆಗಳಲ್ಲಿ ಜುಲೈ 25ರಂದು ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಇಲ್ಲಿನ ಜಿಲ್ಲಾಧಿಕಾರಿಗಳ ಆದೇಶಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ…
ತುಮಕೂರು: ಬಸ್ಸಿನಲ್ಲಿ ಮಹಿಳೆಯರ ಹೊಡೆದಾಟ ಘಟನೆಯ ಬಗ್ಗೆ ಇದೀಗ ಮತ್ತಷ್ಟು ಮಾಹಿತಿಗಳು ಲಭ್ಯವಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ತುಮಕೂರು ಬಸ್ ನಿಲ್ದಾಣ ತಲುಪುತ್ತಿದ್ದಂತೆ ಮಹಿಳೆಯರಿಬ್ಬರು ಸಿಟಿಗಾಗಿ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಮಹಿಳೆ ಒಬ್ಬರು ತುಮಕೂರು ಬಸ್ ನಿಲ್ದಾಣದಿಂದ ಬೆಳಗಾವಿಗೆ ಸೀಟನ್ನು ಕಾಯ್ದಿರಿಸಿದ್ದರು. ಆ ಸೀಟಿನಲ್ಲಿ ಬೆಂಗಳೂರಿನಿಂದ ಬಂದಂತಹ ಮಹಿಳೆಯೊಬ್ಬರು ಕುಳಿತಿದ್ದರು ಅದನ್ನು ಬಿಟ್ಟು ಕೊಡುವಂತೆ ಕೇಳಿದರೂ ಬಿಟ್ಟು ಕೊಟ್ಟಿಲ್ಲ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಒಂದು ಹಂತದಲ್ಲಿ ಇಬ್ಬರೂ ತಲೆ ಕೂದಲನ್ನು ಹಿಡಿದುಕೊಂಡು ಕಿತ್ತಾಡಿಕೊಂಡಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಹಾಗೂ ಚಾಲಕ ಇವರಿಬ್ಬರ ಜಗಳವನ್ನು ಬಿಡಿಸಲು ಎಷ್ಟೇ ಪ್ರಯತ್ನ ಪಟ್ಟರು ಸಾಧ್ಯವಾಗಲಿಲ್ಲ. ಬದಲಾಗಿ ಜಗಳ ಬಿಡಿಸಲು ಹೋದ ವ್ಯಕ್ತಿಗೆ ನೀನ್ಯಾವನೋ ಕೇಳಲು ಬೇವ*** ಎಂದು ಅವಾಚ್ಯ ಶಬ್ದಗಳಿಂದ ಮಹಿಳೆ ಬೈದಿದ್ದು, ಮತ್ತೆ ತನ್ನ ರೌದ್ರಾವತಾರ ತೋರಿದ್ದಾಳೆ. ಮಹಿಳೆಯರ ಜಗಳ ನಿಲ್ಲದ ಹಿನ್ನೆಲೆಯಲ್ಲಿ ಬೇಸತ್ತ ಬಸ್…
ತುಮಕೂರು: ಸೀಟ್ ಗಾಗಿ ಇಬ್ಬರು ಮಹಿಳೆಯರ ನಡುವೆ ಜಗಳ ನಡೆದಿದ್ದು ಬಿಡಿಸಲು ಹೋದ ಕಂಡೆಕ್ಟರ್ ಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿರುವ ಘಟನೆ ತುಮಕೂರು ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಬಸ್ ನಲ್ಲಿ ತುಮಕೂರು ಬಸ್ ನಿಲ್ದಾಣದಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಕಾದಾಟ ಆರಂಭಿಸಿದ್ದಾರೆ. ಮಹಿಳೆಯರ ಜಗಳ ತಡೆಯಲು ಹೋದ ಕಂಡೆಕ್ಟರ್ ಗೆ ಚಪ್ಪಲಿಯಿಂದ ಥಳಿಸಿದ್ದಾಳೆ. ಮಹಿಳೆ ಹಲ್ಲೆ ನಡೆಸಿದ್ದರಿಂದಾಗಿ ಕಂಡೆಕ್ಟರ್ ತುಮಕೂರು ಟೌನ್ ಪೊಲೀಸ್ ಠಾಣೆ ಎದುರು ಬಸ್ ನಿಲ್ಲಿಸಿ ದೂರು ನೀಡಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA
ನವದೆಹಲಿ: ಮಣಿಪುರದ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ, ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ. ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು,ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಸುಮಾರು 160 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಮನ್ವಯತೆ ಸಾಧಿಸುವ ಪ್ರಯತ್ನಗಳು ನಡೆಯುತ್ತಿದ್ದರೂ ಹಿಂಸಾಚಾರ ಹತೋಟಿಗೆ ತರಲು ಮಣಿಪುರ ಸರ್ಕಾರಗಳು ವಿಫಲವಾಗಿದೆ. ಇತ್ತೀಚೆಗೆ ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಪ್ರತಿಭಟನೆ ನಡೆಸಿದ ಪರಿಣಾಮ ಘಟನೆ ಹಿಂಸಾಚಾರ ಇನ್ನಷ್ಟು ತಾರಕ್ಕೇರಿದೆ. ಮಣಿಪುರದ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಸಂಸತ್‌ನಲ್ಲಿ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಣಿಪುರದಲ್ಲಿ ಅಮಾನವೀಯ ಘಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರ ಮತ್ತು ಅಲ್ಲಿನ ರಾಜ್ಯ ಸರ್ಕಾರ ಸತ್ತಿದೆ. ಮಣಿಪುರದ ಮುಖ್ಯಮಂತ್ರಿಯನ್ನು ವಜಾ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕು’ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಗ್ರಹಿಸಿದರು. ಎಎಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಶನಿವಾರ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ‘ಕರ್ನಾಟಕದಲ್ಲಿ ಸದನ ಹೇಗೆ ನಡೆಯುತ್ತಿದೆ ಎಂಬುದನ್ನು ನೋಡಿದ್ದೀರಿ. ವಾದ, ಪ್ರತಿವಾದ ಮಾಡಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸಿಟ್ಟನ್ನು ಮಾತಿನ ಮೂಲಕ ತೋರಿಸಬೇಕು. ಕಾಗದ ಹರಿದು, ಸ್ಪೀಕರ್ ಮೇಲೆ ಎಸೆದು ತೋರಿಸುವುದಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು. ‘ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ, ಲೋಕಸಭಾ ಚುನಾವಣೆಗಳು ಒಂದು ವರ್ಷದ ಒಳಗೆ ನಡೆಯಲಿವೆ. ಇದೇ ಸಮಯದಲ್ಲಿ ಘಟಬಂಧನ್ ಕೂಡ ನಡೆದಿದೆ. ನಾವೇನು ಮಾಡಬೇಕು ಎಂಬ ಪ್ರಶ್ನೆ ಈ ಸಂದರ್ಭದಲ್ಲಿ ಮೂಡುತ್ತದೆ. ಪ್ರಜಾಪ್ರಭುತ್ವ ಉಳಿಸಲು, ಸಂವಿಧಾನ ರಕ್ಷಿಸಲು, ಕೋಮುವಾದ ದೂರ ಮಾಡಲು ರಾಷ್ಟ್ರಮಟ್ಟದಲ್ಲಿ ಪಕ್ಷಗಳು ಕೈಜೋಡಿಸಿವೆ. ಆದರೆ, ರಾಜ್ಯದಲ್ಲಿನ ಚುನಾವಣೆಗಳಲ್ಲಿ…
ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ನಿಟ್ಟಿನಲ್ಲಿ ಈ ಹಿಂದೆ ನೀಡಿದ್ದ ನಿರ್ದೇಶನಗಳ ಅನ್ವಯ ಸಮಗ್ರ ನಿಯಮಗಳನ್ನು ಜಾರಿ ಮಾಡದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೆರೆ-ರಾಜಕಾಲುವೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ, ‘ಸಿಟಿಜನ್ ಆ್ಯಕ್ಷನ್ ಗ್ರೂಪ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ‘ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡುವ ಸಂದರ್ಭದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದೆ ಕೈ ಕಟ್ಟಿ ಕುಳಿತುಕೊಂಡಿದ್ದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ಬಿಬಿಎಂಪಿ ತಿಳಿಸಿಲ್ಲ’ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿದೆ. ‘ಒತ್ತುವರಿ ತೆರವು ಸಂದರ್ಭದಲ್ಲಿ ಕಾರ್ಯಾಚರಣೆಗೆ ಅಡ್ಡಿಪಡಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದರೂ, ಅಂತಹ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ವಿವರಿಸಿಲ್ಲ’ ಎಂದು ಹೇಳಿದೆ. ವೈಜ್ಞಾನಿಕ ಸಲಹೆಗಳನ್ನು ಪಡೆದುಕೊಂಡು ಸಮಗ್ರವಾದ ಯೋಜನೆ ರೂಪಿಸಿ ಎಂದು ಬಿಬಿಎಂಪಿಗೆ…