Subscribe to Updates
Get the latest creative news from FooBar about art, design and business.
- ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
- ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
- ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
- ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ
- ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
- ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
- ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ: ಮುರಳೀಧರ ಹಾಲಪ್ಪ ಕಿಡಿ
- ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
Author: admin
ಮೈಸೂರು: ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯಲ್ಲಿ ಗುರುವಾರ ಸುಮಾರು 20ಕ್ಕೂ ಹೆಚ್ಚು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿರುವ ಘಟನೆ ನಡೆದಿದೆ. ಹುಚ್ಚು ನಾಯಿಯ ಹಾವಳಿಯಿಂದ ಬೇಸತ್ತ ಜನರು ಒಂದು ಹುಚ್ಚು ನಾಯಿಯನ್ನು ಕೊಂದು ಹಾಕಿದ್ದಾರೆ. ಇನ್ನೂ ಎರಡು ಹುಚ್ಚು ನಾಯಿಗಳು ಸುತ್ತಾಡುತ್ತಾ ಭೀತಿ ಸೃಷ್ಟಿಸಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಮೈಸೂರಿನ ಮೇಟಗಳ್ಳಿ ದೇವಾಲಯದ ಬಸವ ಹುಚ್ಚುನಾಯಿ ಕಚ್ಚಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿತ್ತು. ಕೆಲವು ದಿನಗಳ ಹಿಂದೆ ಬಸವನಿಗೆ ಹುಚ್ಚುನಾಯಿ ಕಚ್ಚಿತ್ತು. ಸ್ಥಳೀಯರು ಸೇರಿ ಬಸವನನ್ನು ಕಟ್ಟಿ ಹಾಕಿ ಚಿಕಿತ್ಸೆ ಕೊಡಿಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಆದರೆ ರೇಬಿಸ್ ಹೆಚ್ಚಾಗಿ ಬಸವ ನಾಯಿಯಂತೆ ಶಬ್ದ ಮಾಡುತ್ತಾ ಸ್ಥಳೀಯರಿಗೆ ಭೀತಿ ಉಂಟು ಮಾಡಿತ್ತು. ಪಶುವೈದ್ಯರು ಬಸವನಿಗೆ ಚಿಕಿತ್ಸೆ ಪ್ರಾರಂಭಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವ ಮೃತಪಟ್ಟಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮೃತಪಟ್ಟ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂಬುದು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಚಾಮರಾಜನಗರ ಸಿಸಿಎಫ್ ಹೀರಾಲಾಲ್ ಅವರು, ಮೃತ ತಾಯಿ ಹುಲಿಗೆ 8 ವರ್ಷಗಳಾಗಿದ್ದು, ಮರಿಗಳು ಸುಮಾರು 10 ತಿಂಗಳು ವಯೋಮಾನದವಾಗಿವೆ ಎಂದು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಐವರು ದನಗಾಹಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಲಿಗಳ ಕಳೇಬರ ಪತ್ತೆಯಾದ ಅಣತಿ ದೂರದಲ್ಲೇ ಹಸುವಿನ ಮೃತದೇಹ ಸಿಕ್ಕಿದ್ದು, ಕ್ರಿಮಿನಾಶಕ ಸಿಂಪಡಣೆ ಮಾಡಿರುವುದು ತಿಳಿದುಬಂದಿದೆ. ವಿಷ ಹಾಕಿದ್ದ ಹಸುವನ್ನು ತಿಂದು ಹುಲಿಗಳು ಅಸುನೀಗಿರುವುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಮೈಸೂರು: 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆಯಲ್ಲಿ ಉದ್ಯೋಗಿಯೊಬ್ಬ ಸರ್ಕಾರಿ ಕಚೇರಿಯ ಕೊಠಡಿಯಲ್ಲಿನ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನಡೆದಿದೆ. ಹೊರ ಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ ಉದ್ಯೋಗಿ. ಕಳೆದ 6 ತಿಂಗಳಿಂದ ಸಂಬಳ ನೀಡದ್ದಕ್ಕೆ ಬೇಸರಗೊಂಡಿದ್ದ ಉದ್ಯೋಗಿ ದೀಪಕ್ ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಪ್ರಶ್ನೆ ಮಾಡಿದ್ದಾನೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಚೇರಿಯಲ್ಲೇ ನೇಣಿಗೆ ಶರಣಾಗಲು ಯತ್ನಿಸಿ ಟವೆಲ್ ನಿಂದ ಫ್ಯಾನ್‌ಗೆ ಬಿಗಿದುಕೊಳ್ಳಲು ಮುಂದಾಗಿದ್ದಾನೆ. ತಕ್ಷಣ ದೀಪಕ್‌ನನ್ನು ಸಹ ಸಿಬ್ಬಂದಿ ತಡೆದು ವಾಪಸ್ ಕಳುಹಿಸಿದ್ದಾರೆ. ಇದೇ ವಿಚಾರಕ್ಕೆ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ. ಘಟನೆ ನಂತರ ಈ ದಿನವೇ ಸಂಬಳ ಹಾಕಲಾಗುತ್ತೆ ಎಂದು ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಹೇಳಿದ್ದಾರೆ. ಆತ ಹೊರ ಗುತ್ತಿಗೆ ನೌಕರ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ. ಇನ್ನು…
ಬೆಂಗಳೂರು: ಸೆಪ್ಟಂಬರ್ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಆಗಲಿದೆ ಎನ್ನುವ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಇಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ವಿಧಾನಸೌಧಲ್ಲಿ ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹವಿಲ್ಲ. ಸಚಿವ ಕೆ.ಎನ್.ರಾಜಣ್ಣ ಹೇಳಿಕೆಯನ್ನು ನಿರ್ಲಕ್ಷಿಸಿ ಎಂದಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು. ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂಬ ಪ್ರಶ್ನೆಗೆ, ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು. ಪಕ್ಷದಲ್ಲಿ ಆಂತರಿಕ ಕಲಹವಿಲ್ಲ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಎತ್ತಿನಹೊಳೆ ಕಾಮಗಾರಿ ಮೂಲಕ ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈಗ ಬಂದು ನೋಡಲಿ, ನಾವು ನೀರು ಹರಿಸುವ ವ್ಯವಸ್ಥೆಗೆ ಚಾಲನೆ ನೀಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ಕಣ್ಣಿನಿಂದ ನೋಡಲಿ ಎಂದು ಇಂದು ಎತ್ತಿನಹೊಳೆ ಕಾಮಗಾರಿ ಮೂಲಕ ನೀರನ್ನು ಹರಿಸಿದ್ದೇವೆ ಎಂದು ಹೇಳಿದರು. ಕಾಮಗಾರಿಗೆ ಪೂರಕವಾಗಿರುವಂತಹ ಅರಣ್ಯ ಭೂಮಿಯನ್ನು ಕೂಡ ಈಗಾಗಲೇ ಮಂಜೂರು ಮಾಡಲಾಗಿದೆ ಎಂದು ಹೇಳಿದರು. ಎತ್ತಿನಹೊಳೆ ಕಾಮಗಾರಿ ಮೂಲಕ ಹರಿದು ಬರುತ್ತಿರುವ ಕನಿಷ್ಠ ಮೂರು ಟಿಎಂಸಿ ನೀರನ್ನು ಸಂಗ್ರಹಿಸಲು ಚಿಕ್ಕಬಳ್ಳಾಪುರ ಹಾಗೂ ಕೊರಟಗೆರೆ ಗಡಿಭಾಗದಲ್ಲಿ ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು. ಈ ರೀತಿ ನೀರು ಸಂಗ್ರಹಿಸಲು ಸಾಧ್ಯವಾಗದಿದ್ದರೆ ಚಿಕ್ಕಬಳ್ಳಾಪುರ ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ನೀರು ಕೊಡಲು ಕಷ್ಟವಾಗಲಿದೆ ಎಂದು ಹೇಳಿದರು. ನಮ್ಮತುಮಕೂರಿನ…
ಹಾಸನ: ಕಳೆದ 1 ತಿಂಗಳಿನಲ್ಲಿ ಹಾಸನದಲ್ಲಿ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ 22 ವರ್ಷದ ಮತ್ತೊಬ್ಬಳು ಯುವತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ 22 ವರ್ಷದ ಪದವೀಧರೆ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ–ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದರು. ನಿನ್ನೆ ಸುಪ್ರಿಯಾಗೆ ಎದೆನೋವು ಕಾಣಿಸಿಕೊಂಡಿದ್ದು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಕೂಡಲೇ ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಸುಪ್ರಿಯಾ ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಕೊರಟಗೆರೆ : ಭಾರತ ವಿಶ್ವದಲ್ಲಿಯೇ ಯುವ ಬಲಿಷ್ಠ ಮತ್ತು ಸದೃಢ ರಾಷ್ಟ್ರವಾಗಿದೆ. ಈ ಬಲಿಷ್ಠ ರಾಷ್ಟ್ರವನ್ನು ಮಣಿಸಲು ಅನ್ಯ ದೇಶಗಳು ಡ್ರಗ್ಸ್ ಮೂಲಕ ದೇಶಕ್ಕೆ ಕಾಲಿಟ್ಟಿವೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು. ತುಮಕೂರು ಜಿಲ್ಲಾ ಪೋಲಿಸ್, ಮಧುಗಿರಿ ಉಪ ವಿಭಾಗ, ಕೊರಟಗೆರೆ ಪೋಲಿಸ್ ಠಾಣೆ ವತಿಯಿಂದ ಸ್ಕೌಟ್ಸ್ ಅಂಡ್ ಗೈಡ್ಸ್ ಸಹಯೋಗದಲ್ಲಿ ವಿದ್ಯಾರ್ಥಿಗಳ ಜೊತೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದವರೆಗೆ ‘‘ವಿಶ್ವ ಮಾದಕ ದ್ರವ್ಯಗಳ ವಿರೋಧಿ’’ ದಿನದ ಬಗ್ಗೆ ಹಮ್ಮಿಕೊಳ್ಳಲಾದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶೇ.೫೮ ರಿಂದ ೬೦%ರಷ್ಟು ಮಂದಿ ಯುವಕರಿರುವ ಬಲಿಷ್ಠ ದೇಶ ಭಾರತ. ಕಳೆದ ಎರಡು ದಶಕದಲ್ಲಿ ಆರ್ಥಿಕತೆ, ಸಾಮಾಜಿಕತೆ, ಶೈಕ್ಷಣಿಕತೆ ಗುಣಮಟ್ಟವನ್ನು ಕುಗ್ಗಿಸಲು ಅನ್ಯ ದೇಶಗಳಿಂದ ಮಾದಕ ವಸ್ತುಗಳು ಹೆಚ್ಚಾಗಿ ರಫ್ತು ಆಗುತ್ತಿವೆ. ೧೯೮೭ ಡಿ.೭ರಂದು ವಿಶ್ವ ಸಂಸ್ಥೆಯು ಸಾಮಾನ್ಯ ಸಭೆಯಲ್ಲಿ ಜೂ.೨೬ರಂದು ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರಪಯೋಗ ಮತ್ತು ಕಾನೂನು ಬಾಹಿರ…
ಬೀದರ್ : ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್ ಗಳ ಸುಮಾರು 430 ಕೋಟಿ ರೂ. ಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಚಿವರಾದ ಈಶ್ವರ್ ಖಂಡ್ರೆ ಮತ್ತು ರಹೀಮ್ ಖಾನ್ ಅವರು ಒತ್ತಾಯಿಸಿದ್ದಾರೆ. ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಹಳ್ಳಿಖೇಡ್ ನ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸುವ ಮತ್ತು ಕಾರ್ಖಾನೆಯು ವಿವಿಧ ಸಹಕಾರಿ ಬ್ಯಾಂಕ್ ನಿಂದ ಪಡೆದಿರುವ ಸಾಲದ ಮರುಪಾವತಿ ಕುರಿತ ಸಭೆಯಲ್ಲಿ ಮಾತನಾಡಿದ ಈಶ್ವರ್ ಖಂಡ್ರೆ ಅವರು, ಈ ಹಿಂದೆಯೂ ಬಿ ಎಸ್ ಎಸ್ ಕೆ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶ ಆಗಿದೆ. ಆದರೆ ತಾರ್ಕಿಕ ಅಂತ್ಯ ಕಂಡಿಲ್ಲ. ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ದಂಡನೆ ಆಗಬೇಕು ಎಂದು ಆಗ್ರಹಿಸಿದರು ಕಾರ್ಖಾನೆಯು ಡಿಸಿಸಿ ಬ್ಯಾಂಕ್ ನಿಂದ 115…
ಮೈಸೂರು: ಮೈಸೂರಿನ ಹೆಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿನ ಕಬಿನಿ ಡ್ಯಾಂಗೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿದ್ದರು. ಇದೇ ವೇಳೆ ಕಬಿನಿ ಡ್ಯಾಂನಲ್ಲಿ ಶಿವಣ್ಣ ಜೊತೆ ಫೋಟೊಗೆ ಅಭಿಮಾನಿಗಳು ಮುಗಿಬಿದ್ದರು. ರಸ್ತೆಯಲ್ಲಿ ಹೋಗುವಾಗ ಹಾಡಿ ಮಕ್ಕಳನ್ನ ಕಂಡು ಮಕ್ಕಳ ಜೊತೆ ಶಿವಣ್ಣ ದಂಪತಿ ಫೋಟೊ ತೆಗೆಸಿಕೊಂಡರು. ಕೆಲ ದಿನಗಳ ಹಿಂದಷ್ಟೇ ತಮ್ಮ 40ನೇ ವರ್ಷದ ಸಿನಿ ಪ್ರಯಾಣದ ಸಂಭ್ರಮವನ್ನು ಶಿವರಾಜ್ ಕುಮಾರ್ ಆಚರಿಸಿದ್ದರು. ಸುಮಾರು 125 ಚಿತ್ರಗಳಲ್ಲಿ ನಟಿಸಿರುವ ಶಿವರಾಜ್ ಕುಮಾರ್ ಅವರು ಈಗಲೂ ಐದಕ್ಕೂ ಹೆಚ್ಚು ಸಿನಿಮಾಗಳು ಅವರ ಕೈಯಲ್ಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನದ ಕೊರತೆಯಿಂದಾಗಿ ರಾಜ್ಯದಾದ್ಯಂತ ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ ರಾಜ್ಯ ಸರ್ಕಾರವನ್ನು ಟೀಕಸಿದ್ದಾರೆ. ಮಾಗಡಿಯ ಮತ್ತೀಕೆರೆ ಗ್ರಾಮದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಮೂಲಭೂತ ಸೌಲಭ್ಯಗಳಿಗೆ ಶಾಶ್ವತವಾಗಿ ಅನುದಾನವನ್ನು ಒದಗಿಸಬೇಕು. ಆದರೆ, ಸರ್ಕಾರ ಈ ನಿಟ್ಟಿನಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಬೆಂಗಳೂರಿನ ಹಲವು ರಸ್ತೆಗಳು ಮತ್ತು ಫ್ಲೈಓವರ್ ಗಳ ನಿರ್ಮಾಣ ಕಾಮಗಾರಿಗಳು ಅರ್ಧಕ್ಕೆ ನಿಂತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಸ್ತೆಗಳಲ್ಲಿ ಇರೋದು ಗುಂಡಿಗಳೋ ಇಲ್ಲವೇ ಬಾವಿಗಳೋ ಗೊತ್ತಾಗುವುದಿಲ್ಲ, ಇಂತಹ ಸ್ಥಿತಿಯನ್ನು ಸರಿಪಡಿಸಲು ಸರ್ಕಾರ ಗಮನಹರಿಸಬೇಕು ಎಂದು ಛಾಟಿ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW