Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ತುಮಕೂರು: ಭಾರತ ಸಂವಿಧಾನ ಜಗತ್ತಿನಲ್ಲಿಯೇ ದೊಡ್ಡದಾದ, ವಿಸ್ತಾರವಾದ ಭಾರತೀಯರಿಗೆ ತಮ್ಮ ಹಕ್ಕುಗಳನ್ನು ಕೊಟ್ಟ ಸಂವಿಧಾನವಾಗಿದೆ. ಏಕೆಂದರೆ ಭಾರತದಲ್ಲಿ ಬಹಳಷ್ಟು ಧರ್ಮಗಳಿವೆ, ಭಾಷೆಗಳಿವೆ, ಜಾತಿಗಳಿವೆ. ಭೌಗೋಳಿಕವಾಗಿಯೂ ವೈವಿಧ್ಯತೆಯಿಂದ ಕೂಡಿದೆ. ಇವೆಲ್ಲವನ್ನೂ ಗೌರವಿಸಿ, ಅವುಗಳಿಗೆ ಬೇಕಾದ ಹಕ್ಕು ಮತ್ತು ಕರ್ತವ್ಯಗಳನ್ನು ಕೊಟ್ಟಂತದ್ದು ಸಂವಿಧಾನ. ಹಾಗಾಗಿ ಭಾರತೀಯ ಸಂವಿಧಾನ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದುದು ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣದ ಕಾರ್ಯದರ್ಶಿಗಳಾದ ಎನ್.ಬಿ.ಪ್ರದೀಪ್ ಕುಮಾರ್ ರವರು ಅಭಿಪ್ರಾಯಪಟ್ಟರು. ಅವರು ನಗರದ ವಿದ್ಯಾವಾಹಿನಿ, ವಿದ್ಯಾನಿಧಿ ಪದವಿ ಪೂರ್ವ ಕಾಲೇಜು, ವಿದ್ಯಾವಾಹಿನಿ ಐಟಿಐ ಕಾಲೇಜುಗಳ ವತಿಯಿಂದ ಜ.26 ರಂದು ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವನ್ನು 1950 ಜನವರಿ 26 ರಂದು ಅಧಿಕೃತವಾಗಿ ಜಾರಿಗೆ ತಂದು, ಸರ್ವತಂತ್ರ ಸ್ವತಂತ್ರ ಗಣರಾಜ್ಯವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಂಡು ಬದುಕುತ್ತಿರುವುದರಿಂದ ಭಾರತ ಪ್ರಗತಿಯತ್ತ ಸಾಗುತ್ತಿದೆ. ವಿಶೇಷವಾಗಿ ಕಳೆದ 30 ವರ್ಷಗಳಲ್ಲಿ ಇಂಟರ್ನೆಟ್ ಬಂದ ಮೇಲೆ ಇನ್ನಷ್ಟು ವೇಗವಾಗಿ ಪ್ರಗತಿಯತ್ತ ಸಾಗುತ್ತಿರುವುದು ಸಂತೋಷಕರವಾದುದು. ಭಾರತದಲ್ಲಿ ನೈಸರ್ಗಿಕ…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಹಂದಿಕೇರಾ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಎಸ್‌ಡಿಎಂಸಿ (SDMC) ಅಧ್ಯಕ್ಷರಾದ ಉಮಾಕಾಂತ ಬೋಸ್ಲೆ ಹಾಗೂ ಜ್ಞಾನೋಬಾ ವಾಗ್ಮಾರೆ ಅವರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಗುರುಗಳಾದ ರೋಹಿದಾಸ್ ಮೆತ್ರೆ ಹಾಗೂ ಆರ್.ಆರ್. ಪಾಟೀಲ್ ಅವರು ಗಣರಾಜ್ಯೋತ್ಸವದ ಮಹತ್ವದ ಕುರಿತು ಪ್ರಾಸ್ತವಿಕ ನುಡಿಗಳನ್ನಾಡಿ, ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು. ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳ ಭಾಷಣ ಸ್ಪರ್ಧೆ ಹಾಗೂ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿಶೇಷವಾಗಿ, 2025ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಉಮಕಾಂತ್ ನಾಗಮಾರಪಳ್ಳಿ ಅಭಿಮಾನಿ ಬಳಗದ ವತಿಯಿಂದ ಅಮೂಲ್ ಬಿರಾದಾರ್ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅವರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲರಿಗೂ ಶಂಕರ ಭೋಸಲೆ ಅವರು ಭೋಜನದ ವ್ಯವಸ್ಥೆ ಮಾಡಿದ್ದರು. ಇಡೀ…
ಕೋಲಾರ: ಜಿಲ್ಲೆಯಲ್ಲಿ ರೈತ ಸಂಘದ ನಾಯಕನೊಬ್ಬನಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದುಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡ ಎಂಬಾತನನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಆರೋಪಿ ರಾಮೇಗೌಡ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೌರ್ಜನ್ಯದ ಪರಿಣಾಮ ಬಾಲಕಿ ಇದೀಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಬಾಲಕಿಯ ಕುಟುಂಬಸ್ಥರಿಗೆ ಈ ವಿಷಯ ತಿಳಿದ ತಕ್ಷಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸ್ ಕ್ರಮ: ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ರಾಮೇಗೌಡನನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ. ರೈತರ ಹಕ್ಕುಗಳಿಗಾಗಿ ಹೋರಾಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಇಂತಹ ನೀಚ ಕೃತ್ಯದಲ್ಲಿ ಭಾಗಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ…
ತುಮಕೂರು: ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಅಪಘಾತಗಳ ಸರಣಿ ಮುಂದುವರಿದಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಕಳೆದ ಕೇವಲ ಒಂದು ತಿಂಗಳ ಅವಧಿಯಲ್ಲಿ (ಡಿಸೆಂಬರ್ 25 ರಿಂದ ಜನವರಿ 26 ರವರೆಗೆ) ಸಂಭವಿಸಿದ ವಿವಿಧ ರಸ್ತೆ ಅಪಘಾತಗಳಲ್ಲಿ ಬರೋಬ್ಬರಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತಗಳ ಸರಣಿ: ಡಿಸೆಂಬರ್ 25: ಹಿರಿಯೂರು ಬಳಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಮಗು ಸೇರಿದಂತೆ 7 ಮಂದಿ ದುರ್ಮರಣಕ್ಕೀಡಾಗಿದ್ದರು. ಜನವರಿ 1: ತುಮಕೂರು ಹೊರವಲಯದ ಕೋರಾ ಬಳಿ ಬೈಕ್ ಸವಾರನ ಸಾವು. ಜನವರಿ 9: ವಸಂತನರಸಾಪುರ ಬಳಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಮಗು ಸೇರಿದಂತೆ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದರು. ಜನವರಿ 26: ನೆಲಹಾಳ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾಫ್ಟ್‌ವೇರ್ ಎಂಜಿನಿಯರ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಮುಖ ಕಾರಣಗಳು: ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಹೆಚ್ಚಿನ ಅಪಘಾತಗಳಿಗೆ ರಸ್ತೆ ಬದಿಯಲ್ಲಿ ಅಸಮರ್ಪಕವಾಗಿ ನಿಲ್ಲಿಸುವ ಲಾರಿಗಳೇ ಕಾರಣ ಎಂಬ…
ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧೀಜಿಯವರ ಹೆಸರನ್ನು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಹೆಸರನ್ನು ಗ್ರಾಮೀಣ ಮಟ್ಟದಲ್ಲಿ ಶಾಶ್ವತಗೊಳಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಈ ಘೋಷಣೆ ಮಾಡಿದರು. ಕೇಂದ್ರದ ವಿರುದ್ಧ ವಾಗ್ದಾಳಿ: ಕೇಂದ್ರ ಸರ್ಕಾರವು ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಮತ್ತು ಬಡವರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು. ಮನ್ರೇಗಾ (MNREGA) ಯೋಜನೆಗಾಗಿ ಆಗ್ರಹ: ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ ಕಿಡಿ: ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರದ ಹೊಸ ಯೋಜನೆಗಳು ಬಡವರ ಹಿತದೃಷ್ಟಿಯಿಂದ ಇಲ್ಲ. ಬಡವರ ಪರವಾಗಿ ಹೋರಾಡುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಹೇಳಿದರು.…
ಗುಬ್ಬಿ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಒಂದಾದರೆ ಹೆಚ್ಚು ಅಭಿವೃದ್ಧಿಯನ್ನು ಕಾಣಬಹುದು ಎಂಬುದನ್ನು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ತೋರಿಸಿದ್ದಾರೆ ಎಂದು ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ತಿಳಿಸಿದರು. ಪಟ್ಟಣದ ಲಯನ್ಸ್ ಸಂಸ್ಥೆಯ ಕಚೇರಿ ಆವರಣದಲ್ಲಿ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ,ಲಯನ್ಸ್ ಕ್ಲಬ್, ಗುಬ್ಬಿ ಇವರ ಆಶಯದಲ್ಲಿ ಏರ್ಪಡಿಸಿದ್ದ ಗುಬ್ಬಿ ಲಯನ್ಸ್ ಕ್ಲಬ್ ಸರ್ವೀಸ್ ಟ್ರಸ್ಟ್(ರಿ.) ನೂತನ ಕಛೇರಿ ಉದ್ಘಾಟನೆ, ಮತ್ತು ಸಾರ್ವಜನಿಕರ ಉಪಯೋಗಕ್ಕಾಗಿ ನೂತನ ಉಚಿತ ಮುಕ್ತಿವಾಹನ ಲೋಕಾರ್ಪಣೆ ಮತ್ತು ಲಯನ್ಸ್ ಕ್ಲಬ್ ಪಕ್ಕದ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗೆ ಭೂಮಿಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದ್ದು ಮುಂದಿನ ಹತ್ತು ವರ್ಷದಲ್ಲಿ ಗುಬ್ಬಿ ತುಮಕೂರು ಎರಡು ಒಂದಾಗಿ ಒಂದೇ ನಾಣ್ಯದ ಎರಡು ಮುಖಗಳಾಗುವುದರಲ್ಲಿ ಸಂಶಯವಿಲ್ಲ ಎಂದರು. ಗುಬ್ಬಿ ಅತಿ ವೇಗವಾಗಿ ಬೆಳೆಯುತ್ತಿರುವುದರಿಂದ ಗುಬ್ಬಿಯ ಸುತ್ತಮುತ್ತ ರೈತರು ಯಾವುದೇ ಕಾರಣಕ್ಕೂ ತಮ್ಮ ಜಮೀನುಗಳನ್ನು ಮಾರಾಟ ಮಾಡಬೇಡಿ. ಮುಂದೊಂದು ದಿನ ಉತ್ತಮ ಬೆಲೆ…
ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ಸುಗಳ ಮೇಲೆ ಅಳವಡಿಸಲಾಗಿದ್ದ ಗುಟ್ಕಾ ಜಾಹೀರಾತುಗಳನ್ನು ಕೆಲವರು ಹರಿದು ಹಾಕಿರುವ ಘಟನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರಿಗೆ ಸಂಸ್ಥೆಯ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಬಸ್ಸುಗಳ ಮೇಲೆ ವಿವಿಧ ಜಾಹೀರಾತುಗಳನ್ನು ಪ್ರದರ್ಶಿಸಲು ಅವಕಾಶ ನೀಡಲಾಗಿದೆ. ಆದರೆ, ಗುಟ್ಕಾ ಕಂಪನಿಯ ಜಾಹೀರಾತುಗಳನ್ನು ಹಾಕಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೆಲವರು ಬಸ್ಸಿನ ಮೇಲಿದ್ದ ಜಾಹೀರಾತಿನ ಪೋಸ್ಟರ್‌ಗಳನ್ನು ಹರಿದು ಹಾಕಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, “ಸಾರಿಗೆ ಸಂಸ್ಥೆಯು ಆರ್ಥಿಕ ಸಂಕಷ್ಟದಲ್ಲಿದ್ದು, ಆದಾಯ ಕ್ರೋಢೀಕರಣಕ್ಕಾಗಿ ಜಾಹೀರಾತುಗಳನ್ನು ಅವಲಂಬಿಸಿದೆ. ಆದರೆ ಸರ್ಕಾರದ ಆಸ್ತಿಯಾದ ಬಸ್ಸುಗಳ ಮೇಲಿರುವ ಪೋಸ್ಟರ್ ಗಳನ್ನು ಕಾನೂನು ಕೈಗೆತ್ತಿಕೊಂಡು ಹರಿಯುವುದು ಸರಿಯಲ್ಲ. ಏನೇ ಆಕ್ಷೇಪಗಳಿದ್ದರೂ ಅದನ್ನು ಕಾನೂನುಬದ್ಧವಾಗಿ ತಿಳಿಸಬೇಕು,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಸಾರಿಗೆ ಇಲಾಖೆಯ ಜಾಹೀರಾತು ನೀತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಹಾನಿಕಾರಕ ಉತ್ಪನ್ನಗಳ ಜಾಹೀರಾತುಗಳನ್ನು ಬಸ್ಸುಗಳ ಮೇಲೆ…
ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು ಸಮಾಜೋತ್ಸವದಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಗುಬ್ಬಿ ಪಟ್ಟಣದ ನಾಗಲೀಂಗೇಶ್ವರ ಸ್ವಾಮಿ ದೇವಾಲಯದಿಂದ ಹೊರಟ ಹಿಂದೂ ಮೆರವಣಿಗೆ ಗೋಸಲ ಚನ್ನಬಸವೇಶ್ವರ ದೇವಾಲಯದವರೆಗೆ ವಿವಿಧ ಮಠಾಧೀಶರುಗಳು ಹಾಗೂ ವಿವಿಧ ಜನಪದ ಕಲಾ ತಂಡಗಳು ಲಿಂಗದ ವೀರರ ಕುಣಿತ ಹಾಗೂ ನಂದಿಧ್ವಜಾ ಕುಣಿತ ಹಾಗೂ ದೇವರುಗಳ ಉತ್ಸವದೊಂದಿಗೆ ಸಾವಿರಾರು ಹಿಂದೂಗಳು ಮೆರವಣಿಗೆಯಲ್ಲಿ ಭಾಗವಹಿಸಿ ಸಾಥ್ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಷ್ವ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಮಾತನಾಡಿ, ಇಡೀ ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾದರೆ, ಜೀವನದಲ್ಲಿ ಮುಂದೆ ಬರಲು ಸಾಧ್ಯವಿಲ್ಲ. ಆದ್ದರಿಂದ ನಾವೆಲ್ಲ ಹಿಂದೂಗಳು ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟಬೇಕು. ಸನಾತನ ಧರ್ಮ ಪರಂಪರೆ ಹಾಗೂ ಭಾರತೀಯತೆಯ ಉಳಿಸಿ ಬೆಳೆಸುವ ಧ್ಯೇಯದಿಂದ ಪ್ರಾರಂಭಗೊಂಡ ಆರ್ ಎಸ್ ಎಸ್ ನೂರು ಸಂಘಟನೆ ನೂರು ವರ್ಷ ಕಳೆದಿದೆ. ಈ ಹಿನ್ನಲೆಯಲ್ಲಿ ಹಿಂದೂಗಳಲ್ಲಿ ಸಂಘಟನೆಯ ಜಾಗೃತಿ ಮೂಡಿಸುವ…
ನವದೆಹಲಿ: ದೇಶದ 77ನೇ ಗಣರಾಜ್ಯೋತ್ಸವವನ್ನು ಇಂದು ದೆಹಲಿಯ ಕರ್ತವ್ಯ ಪಥದಲ್ಲಿ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಈ ಬಾರಿಯ ಪರೇಡ್ ನಲ್ಲಿ ಭಾರತದ ಸಶಸ್ತ್ರ ಪಡೆಗಳು ತಮ್ಮ ಅದ್ಭುತ ಪರಾಕ್ರಮವನ್ನು ಪ್ರದರ್ಶಿಸಿದವು, ವಿಶೇಷವಾಗಿ ‘ಆಪರೇಷನ್ ಸಿಂಧೂರ್’ನಲ್ಲಿ ಬಳಸಲಾದ ಶಸ್ತ್ರಾಸ್ತ್ರಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು. ಮುಖ್ಯ ಅತಿಥಿಗಳು: ಈ ಬಾರಿಯ ಗಣರಾಜ್ಯೋತ್ಸವಕ್ಕೆ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿ ಪರೇಡ್‌ನ ಗೌರವ ವಂದನೆ ಸ್ವೀಕರಿಸಿದರು. ಆಪರೇಷನ್ ಸಿಂಧೂರ್ ಪರಾಕ್ರಮ: ಪರೇಡ್ ನ ಪ್ರಮುಖ ಆಕರ್ಷಣೆಯೆಂದರೆ ‘ಆಪರೇಷನ್ ಸಿಂಧೂರ್’ ಶೌರ್ಯದ ಪ್ರದರ್ಶನ. ಈ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ರಹ್ಮೋಸ್ ಮತ್ತು ಎಸ್-400 ಕ್ಷಿಪಣಿ ವ್ಯವಸ್ಥೆಗಳು, ಸಂಯೋಜಿತ ಕಾರ್ಯಾಚರಣಾ ಕೇಂದ್ರದ ಪ್ರತಿಕೃತಿಗಳು ಕರ್ತವ್ಯ ಪಥದಲ್ಲಿ ಸಾಗಿದವು. ಸೇನಾ ಶಕ್ತಿ ಪ್ರದರ್ಶನ: ದೇಶೀಯವಾಗಿ ತಯಾರಾದ ಅರ್ಜುನ್ ಟ್ಯಾಂಕ್…
ಹುಬ್ಬಳ್ಳಿ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಅತ್ಯಂತ ಅನುಭವಿ ಮುಖ್ಯಮಂತ್ರಿ ಅಧಿಕಾರದಲ್ಲಿದ್ದರೂ ರಾಜ್ಯದ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಹಂಚಿಕೆ ಮಾಡಿಲ್ಲ. ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು: ಅಭಿವೃದ್ಧಿ ಶೂನ್ಯ: ಕಳೆದ ಎರಡೂವರೆ ವರ್ಷಗಳಿಂದ ಅಧಿಕಾರದಲ್ಲಿದ್ದರೂ ರಾಜ್ಯದಲ್ಲಿ ಯಾವುದೇ ಹೊಸ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ, ಸಾಮಾನ್ಯ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಲಾಗುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು. ಮದ್ಯ ಮಾರಾಟಕ್ಕೆ ಉತ್ತೇಜನ: ಸರ್ಕಾರ ತನ್ನ ಖಜಾನೆ ತುಂಬಿಸಿಕೊಳ್ಳಲು ಮದ್ಯ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ದಿನಸಿ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡುವ ಪರಿಸ್ಥಿತಿ ಬಂದೊದಗಿದೆ. ಅಬಕಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆಗಳನ್ನು ಗಮನಿಸಿದರೆ, ಇದು ನಾಚಿಕೆಗೇಡಿನ ಸರ್ಕಾರ ಎಂದು ಅವರು ಆಕ್ರೋಶ…