Author: admin

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯಲ್ಲಿ ಇಂದು(ಭಾನುವಾರ) ಜಗಜ್ಯೋತಿ ಬಸವೇಶ್ವರವರ 890ನೇ ಜಯಂತ್ಯೋತ್ಸವನ್ನು ಸರಳವಾಗಿ ಆಚರಿಸಲಾಯಿತು. ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ ಲೋಕೇಶ ಆರ್ ರವರು ಮಹಾನ್ ಮಾನವತಾ ವಾದಿ, ಕ್ರಾಂತಿಯೋಗಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಬಿವಿಪಿ ತುಮಕೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ: ಬಸಣ್ಣನವರು ಜಗತ್ತಿಗೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ ಅವರ ಪ್ರತಿಯೊಂದು ವಾಕ್ಯ ನಮಗೆಲ್ಲಾ ದಾರಿದೀಪ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಲಾದ ಪತ್ರಿಕಾಗೋಷ್ಠಿ ಮುಂಚಿತವಾಗಿ ಬಸವಣ್ಣ ಜಯಂತಿ ಪ್ರಯುಕ್ತ ಬಸವಣ್ಣನವರ ಪುಷ್ವಾರ್ಚನೆಯನ್ನು ಮಾಡಿ ನಂತರ ಮಾತನಾಡಿದ ಅವರು, ನಮ್ಮ ಪಕ್ಷದ ಪಂಚರತ್ನ ಮಹತ್ವ ಯೋಜನೆಯ ಬಗ್ಗೆ ಜನರಿಗೆ ತಿಳಿಸಲು ಪಕ್ಷದ ವತಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ಹೊಳವನಹಳ್ಳಿ ಗ್ರಾಮದಲ್ಲಿ ಸಭೆಯನ್ನು ಆಯೋಜಿಸಿದ್ದು, ಈ ಸಭೆಗೆ ಮುಖ್ಯ ಅತಿಥಿಗಳಾಗಿ ಮಣ್ಣಿನ ಮಗ ಮಾಜಿ ಪ್ರಧಾನಿ ದೇವಗೌಡ ಅಪ್ಪಾಜಿ ಅವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ಆಗಮಿಸಲಿದ್ದು, ಹೆಚ್ಚಿನ ಸಂಖೈಯಲ್ಲಿ ಕಾರ್ಯಕರ್ತರು, ಮುಖಂಡರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು. ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ, ಜೆಡಿಎಸ್ ಪಕ್ಷದ ಪ್ರಚಾರವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಹೊಳವನಹಳ್ಳಿ ಗ್ರಾಮದಲ್ಲಿ ಸಭೆಯನ್ನು ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವಗೌಡರು ಹಾಗೂ…

Read More

ಬೆಳಗಾವಿ: ವಿಶ್ವಗುರು, ಕ್ರಾಂತಿಯೋಗಿ, ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಹಿರೇಬಾಗೇವಾಡಿಯ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ‌ ಮಾಡಿ, ಗೌರವ ಸಲ್ಲಿಸಿದರು. ಅನುಭವ ಮಂಟಪ’ದ ಮೂಲಕ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ನೀಡಿ, ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ, ಶೋಷಣೆ, ಮೂಢನಂಬಿಕೆಯ‌ ವಿರುದ್ಧ ಸಮರ ಸಾರಿದ ಬಸವಣ್ಣನವರ ತತ್ವಾದರ್ಶಗಳು ಸದಾಕಾಲವೂ ಸ್ಮರಣೀಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು. 12 ನೇ ಶತಮಾನದಲ್ಲಿಯೇ ಸಾಮಾಜಿಕ ಕ್ರಾಂತಿಗೆ ನಾಂದಿಹಾಡಿದವರು ವಿಶ್ವಗುರು ಬಸವಣ್ಣನವರು. ಅಂದಿನ ಕಾಲಕ್ಕೆ ಪ್ರಜಾಪ್ರಭುತ್ವ, ಕಾಯಕ, ಸ್ತ್ರೀ ಸಮಾನತೆಗೆ ಮಹತ್ವ ಕೊಡುವ ಮೂಲಕ ಜಾತೀಯತೆ ಅಳಿಸಲು ಪ್ರಧಾನ ಆದ್ಯತೆಯನ್ನು ನೀಡಿ ಭಕ್ತಿ ಮಾರ್ಗವನ್ನು ಪ್ರತಿಪಾದಿಸಿದ ಅಪರೂಪದ ವಿಶ್ವಗುರು ಬಸವಣ್ಣನವರು. ಬಸವಣ್ಣ ಕೇವಲ ಸಾಮಾಜಿಕ ಕ್ರಾಂತಿಗೆ ಮಾತ್ರವಲ್ಲ ರಾಜಕೀಯವಾಗಿಯೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಂದಿ ಹಾಡಿದವರು. ಜನಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ವಚನ ಸಾಹಿತ್ಯದ ಮೂಲಕ ಜನರಲ್ಲಿನ ಅಂಧ ಶ್ರದ್ಧೆ ತೊಡೆದು…

Read More

ಬೆಳಗಾವಿ: ಇವನಾರವ ಇವನಾರವ ಎನ್ನದೆ ಇವ ನಮ್ಮ ಮನೆಯ ಮಗನೆಂದು ಜಾತಿ ಮತ ಪಂಥಗಳನ್ನ ಹೋಗಲಾಡಿಸಿ ಸಮಾನತೆಯ ಜಾತಿ ವರ್ಣರಹಿತ ಸಮಾಜ ನಿರ್ಮಾಣ ಮಾಡಿದ ಜಗಜ್ಯೋತಿ ಬಸವಣ್ಣ ಜಗಕ್ಕೆ ಬೆಳಕುತೊರಿದ 12 ಶತಮಾನದ ಅವರ ವಚನ ಸಾಹಿತ್ಯ ಎಂದೆಂದಿಗೂ ಅಜರಾಮರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿದರು. ನಗರದ ಆರ್.ಪಿ.ಡಿ ವೃತ್ತದಲ್ಲಿರುವ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬಸವ ಜಯಂತಿ ನಿಮಿತ್ಯ ಹಮ್ಮಿಕೊಂಡ ಸಭೆಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ  ಪುಷ್ಪನಮನ ಸಲ್ಲಿಸಿ ಮಾತನಾಡಿ,ಸಮಾಜದಲ್ಲಿದ್ದ ಅಮಾನವೀಯ ವ್ಯವಸ್ಥೆಯ ವಿರುದ್ಧ ಹೋರಾಡಿ ಮಾನವೀಯತೆಯ ಜೀವನ ಮಾರ್ಗಗಳನ್ನೇ ರೂಪಿಸಿದರು. ಸಮಾಜ ಸುಧಾರಕರ ಸಾಲಿನಲ್ಲಿ ಬಸವಣ್ಣನವರು ಅನನ್ಯತೆಯ ವ್ಯಕ್ತಿತ್ವ ಸಂಪನ್ನರಾಗಿ ಕರ್ನಾಟಕದ ನೆಲದಲ್ಲಿ ಲಿಂಗಾಯತ ಧರ್ಮಸ್ಥಾಪಿಸಿ ಹೋರಾಟ ಮಾಡಿರುವುದು ಚಾರಿತ್ರಿಕ ಸತ್ಯ ಎಂದರು. ವಿಭಾಗ ಪ್ರಭಾರಿ ಚಂದ್ರಶೇಖರ ಕವಾಟಗಿ, ಜಿಲ್ಲಾ ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ ಮಾತನಾಡಿ, ಬಸವಣ್ಣನವರು ಕಟ್ಟಿ ಬೆಳೆಸಿದ ಸಂಘಟನೆಯೇ ಶರಣ ಚಳವಳಿ. ಬಸವಣ್ಣನವರು ಈ ದೇಶದ ಸಾಮಾಜಿಕ ಸಾಂಸ್ಕೃತಿಕ ಧಾರ್ಮಿಕ ಚರಿತ್ರೆಯನ್ನು ಬಲ್ಲವರು. ಮಾನವೀಯ ವಿವೇಕದ…

Read More

ಬೆಂಗಳೂರು : ಸೀರೆ ಎಂದರೆ ಮಹಿಳೆಯರಿಗೆ ಬಹಳ ಅಚ್ಚುಮೆಚ್ಚು , ರೇಟು ಎಷ್ಟಾದರೂ ತೊಂದರೆ ಇಲ್ಲ ಸೀರೆ ಬೇಕೇ ಬೇಕು ಎಂದು ಹಠ ಹಿಡಿಯುವ ಮಹಿಳೆಯರನ್ನು ನೋಡುತ್ತೆವೆ. ಆದರೆ ಇನ್ನೂ, ಡಿಸ್ಕೌಂಟ್ ಸೇಲ್ ನಲ್ಲಿ ಸೀರೆ ಕೊಡ್ತೀವಿ ಅಂದರೆ ಈ ಮಹಿಳೆಯರು ಬಿಡ್ತಾರಾ..? ಹೌದು, ಬೆಂಗಳೂರಿನಲ್ಲಿ ಡಿಸ್ಕೌಂಟ್ ಸೇಲ್ ಗೆ ಹಾಕಿರುವ ಸಿಲ್ಕ್ ಸೀರೆಯನ್ನು ತೆಗೆದುಕೊಳ್ಳಲು ಮಹಿಳೆಯರು ಮುಗಿಬಿದ್ದು ಮಹಿಳೆಯರು ಸೀರೆಗಾಗಿ ತುಂಬಾ ಜಗಳ ಕೂಡ ಆಡಿದ್ದಾರೆ ಎಂದು ವರದಿಯಾಗಿದೆ. ಮಲ್ಲೇಶ್ವರಂ ನ 8 ನೇ ಕ್ರಾಸ್ ನಲ್ಲಿರುವ ಕೆನರಾ ಯೂನಿಯನ್ ಹಾಲ್ ನಲ್ಲಿ ಕರ್ನಾಟಕ ಸಿಲ್ಕ್ ಎಂಪೋರಿಯಮ್ ಡಿಸ್ಕೌಂಟ್ ಸೇಲ್ ಹಾಕಿದ್ದು, ಸಿಲ್ಕ್ ಸೀರೆ ಮೇಲೆ ಶೇ 35 ರಷ್ಟು ಡಿಸ್ಕೌಂಟ್ ಘೋಷಿಸಿದ ಹಿನ್ನೆಲೆ ಮಹಿಳೆಯರು ಮುಗಿಬಿದ್ದಿದ್ದಾರೆ. ಸೀರೆ ಕೊಂಡುಕೊಳ್ಳುವ ವೇಳೆ ಮಹಿಳೆಯರ ನಡುವೆ ಮಾತಿಗೆ ಮಾತು ಬೆಳೆದು ಜಡೆ ಹಿಡಿದು ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆಯ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್‌ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಅನ್ವಿತಾ.ಡಿ.ಎನ್‌ ಅವರು 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೇ ರ‍್ಯಾಂಕ್  ಪಡೆದಿದ್ದಾರೆ. ರಾಜ್ಯದಲ್ಲಿ ಒಂಭತ್ತು ವಿದ್ಯಾರ್ಥಿಗಳು 596 ಅಂಕಗಳನ್ನು ಗಳಿಸಿದ್ದಾರೆ. ಅನ್ವಿತಾ.ಡಿ.ಎನ್‌ ಅವರು ತೀರ್ಥಹಳ್ಳಿ ತಾಲೂಕು ಮಲ್ಲೇಸರ ಗ್ರಾಮದವರು. ತಂದೆ ನಾಗರಾಜ ಅವರು ಕೃಷಿಕರು. ತಾಯಿ ಅನುಸೂಯ. ಮಗಳು ರ‍್ಯಾಂಕ್‌ ಪಡೆದ ವಿಚಾರ ತಿಳಿದು ತುಂಬಾ ಖುಷಿಯಾಗಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ದ ಜೊತೆಗೆ ಮಾತನಾಡಿದ ಅನ್ವಿತಾ.ಡಿ.ಎನ್‌ ಅವರು, ʼಕಾಲೇಜಿನ ಉಪನ್ಯಾಸಕರು ತುಂಬ ಸಪೋರ್ಟಿವ್‌ ಆಗಿದ್ದರು. ಯಾವುದೇ ಸಂದೇಹಗಳಿದ್ದರು ಕೇಳಿದಾಗಲೆ ಅದನ್ನು ಬಗೆಹರಿಸುತ್ತಿದ್ದರು. ಇನ್ನು, ಆಯಾ ದಿನದ ಪಾಠಗಳನ್ನು ಅಂದೇ ವರ್ಕ್‌ ಮಾಡುತ್ತಿದ್ದೆ. ಊರಿನಿಂದ ಓಡಾಡುವುದು ತುಂಬಾ ಕಷ್ಟ ವಾಗಿತ್ತು. ಹಾಗಾಗಿ ವಿಕಾಸ ಕಾಲೇಜಿನ ಹಾಸ್ಟೆಲ್‌ನಲ್ಲಿದ್ದೆ.  ಅದ್ದರಿಂದ ಓದಲು ತುಂಬಾ ಅನುಕೂಲವಾಯಿತು. ಹೆಚ್ಚು ಅಂಕ ಪಡೆದ ವಿಚಾರ ತಿಳಿದು ಅಪ್ಪ, ಅಮ್ಮ ತುಂಬಾ ಖುಷಿಯಾಗಿದ್ದಾರೆ. ಮುಂದೆ ಯುಪಿಎಸ್‌ಸಿ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಯೋಚನೆ ಇದೆ.ʼ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಬೆಂಗಳೂರು ಗ್ರಾಮಾಂತರ : ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ, ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾ ಗಿದ್ದಾರೆಂದು ಹೇಳಲಾಗಿದೆ ಈ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆ ಮಾಕಳಿ ತಿರುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಸ್‌ ಚಾಲಕನಿಗೆ ನಿಯಂತ್ರಣ ಸಿಗದೆ ಬಸ್‌ ಪಲ್ಟಿ ಯಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.ಅಷ್ಟೇ ಅಲ್ಲದೇ ಬಸ್‌ ಪಲ್ಟಿಯಾಗಿದ್ದಕ್ಕೆ ಪ್ರಯಾಣಿಕರೆಲ್ಲರೂ ಹೆದರಿ ಕಂಗಾಲಾಗಿದ್ದಾರೆ. ಘಟನಾಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತಂಪಾಗಿಸಲು ನಾವು ನೀರನ್ನು  ಫ್ರಿಜ್‌ನಲ್ಲಿ   ಇಡುತ್ತೇವೆ. ನಾವು ಐಸ್ ಕ್ರೀಮ್ ಕೂಡ ಇಡುತ್ತೇವೆ. ಅಲ್ಲದೆ  ಫ್ರಿಜ್‌ ನಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಇಡುವುದರಿಂದ ತಾಜಾತನದಿಂದ ಕೂಡಿರುತ್ತದೆ. ಆದರೆ ಫ್ರಿಜ್‌ನಲ್ಲಿ ತಾಪಮಾನವನ್ನು ಹೊಂದಿಸುವಲ್ಲಿ ನಾವು ತಪ್ಪು ಮಾಡುತ್ತೇವೆ. ಪರಿಣಾಮವಾಗಿ ಫ್ರಿಜ್‌ನ   ಶೀತದಿಂದ ತರಕಾರಿಗಳು ಹಾಳಾಗುತ್ತವೆ ಎಂದು ತಜ್ಞರು ಸಲಹೆ ನೀಡುತ್ತಾರೆ.  ಗ್ರಾಹಕರು ಫ್ರಿಜ್‌ನಲ್ಲಿನ ತಾಪಮಾನವನ್ನು ಹೆಚ್ಚಿಸುವ ಅಥವಾ ಕಡಿಮೆ ಮಾಡುವತ್ತ ಗಮನಹರಿಸಬೇಕು. 37 ಮತ್ತು 40 ಫ್ಯಾರನ್‌ಹೀಟ್ ನಡುವಿನ ರೆಫ್ರಿಜರೇಟರ್ ತಾಪಮಾನವು ಚಳಿಗಾಲ ಅಥವಾ ಬೇಸಿಗೆಯಲ್ಲಿ ಉತ್ತಮವಾಗಿರುತ್ತದೆ. ಫ್ರೀಜರ್‌ನಲ್ಲಿ ತಾಪಮಾನವನ್ನು ಯಾವಾಗಲೂ ಶೂನ್ಯ ಫ್ಯಾರನ್‌ಹೀಟ್‌ನಲ್ಲಿ ಇರಿಸಬೇಕು. ಕೆಲವರು ರಾತ್ರಿ ಮಲಗುವಾಗ    ಫ್ರಿಜ್‌  ಆಫ್ ಮಾಡುತ್ತಾರೆ. ಹೀಗೆ ಮಾಡುವುದರಿಂದ  ಫ್ರಿಜ್‌ ನಲ್ಲಿರುವ ಆಹಾರ ಪದಾರ್ಥಗಳು ಕೆಡುವುದಿಲ್ಲ ಎಂದು ಭಾವಿಸುತ್ತಾರೆ. ಆದರೆ ಇಲ್ಲಿ ದೊಡ್ಡ ತಪ್ಪು ನಡೆಯುತ್ತಿದೆ. ಫ್ರಿಜ್‌  ಆಫ್ ಮಾಡಿ ಬಾಗಿಲು ಮುಚ್ಚುವುದರಿಂದ ಸ್ವಲ್ಪ ಸಮಯದ ನಂತರ ಫ್ರಿಜ್‌  ಒಳಗಿನ ತಾಪಮಾನ ಹೆಚ್ಚಾಗುತ್ತದೆ. ಪರಿಣಾಮವಾಗಿ ಫ್ರಿಜ್‌ನಲ್ಲಿರುವ ಪದಾರ್ಥಗಳು ಹಾಳಾಗುತ್ತವೆ. ಅಲ್ಲದೇ…

Read More

ತೆಲುಗು, ತಮಿಳು ಭಾಷೆಗಳಲ್ಲಿ ಹಲವು ಚಿತ್ರಗಳಲ್ಲಿ ನಟಿಸಿ ಉತ್ತಮ ನಟನಾಗಿ ಗುರುತಿಸಿಕೊಂಡಿದ್ದ ಶರತ್ ಬಾಬು ಅನಾರೋಗ್ಯಕ್ಕೆ ತುತ್ತಾಗಿದ್ದರು. ಚೆನ್ನೈನಲ್ಲಿ ನೆಲೆಸಿರುವ ಅವರು ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ಚಿಕಿತ್ಸೆಗಾಗಿ ಕುಟುಂಬಸ್ಥರು ಶುಕ್ರವಾರ ಹೈದರಾಬಾದ್‌ಗೆ ಕರೆತಂದಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಖಲಿಸ್ತಾನ್ ನಾಯಕ ಮತ್ತು ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ಬಂಧನ. ಪಂಜಾಬ್‌ನ ಮೋಗಾ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ. ಅಮೃತ್ ಪಾಲ್ ಸಿಂಗ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಅಮೃತ್ ಪಾಲ್ ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪೊಲೀಸರಿಗೆ ಬೇಕಾಗಿದ್ದ ಅಮೃತಪಾಲ್ ಸಿಂಗ್ ಅವರ ಎಂಟು ಮಂದಿ ಸಹಾಯಕರನ್ನು ಈಗಾಗಲೇ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಹಲವು ದಿನಗಳಿಂದ ಪಂಜಾಬ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಅಮೃತಪಾಲ್ ಅವರ ಅನುಯಾಯಿ ಲೋಕಪ್ರೀತ್ ತೂಫಾನ್ ಅವರನ್ನು ಪಂಜಾಬ್ ಪೊಲೀಸರು ಈ ವರ್ಷದ ಫೆಬ್ರವರಿಯಲ್ಲಿ ಬಂಧಿಸಿದ್ದರು. ಇದಾದ ಬಳಿಕ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More