Subscribe to Updates
Get the latest creative news from FooBar about art, design and business.
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
- ಎಸ್ ಐಆರ್ | ಬಿಎಲ್ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್ ಗೌಡ ಗಂಭೀರ ಆರೋಪ
- ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
- ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
- ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
Author: admin
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಮುಂಜಾನೆ ಬಳಗದ ಸದಸ್ಯರುಗಳು, ಸಿದ್ದರಾಮೇಶ್ವರ ಬಡಾವಣೆ, ತುಮಕೂರು ಇವರುಗಳ ಸಹಯೋಗದೊಂದಿಗೆ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿತ್ತು. ಸಿದ್ದಗಂಗಾ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯೋಪಾಧ್ಯಾಯ ಶಿವರುದ್ರಪ್ಪ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕೆ 1947ರವರೆಗೆ ಹಲವು ದಶಕಗಳ ಕಾಲ ನಮ್ಮ ಪೂರ್ವಜರು ಹೋರಾಡಿರುವುದನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬೇಕು. ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಒಂದಾದ ನಾಯಕರಂತೆ ಇಂದು ನಾವು ನಮ್ಮೆಲ್ಲರ ನಡುವೆ ಇರುವ ಕೋಮುವಾದ, ಭ್ರಷ್ಟಾಚಾರ, ನಮ್ಮ ದೇಶದ ಶಾಂತಿಗೆ ಧಕ್ಕೆ ತರುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಂದಾಗಬೇಕಿದೆ. ಅದಕ್ಕೆ ವಿದ್ಯಾರ್ಥಿಗಳು,ಜನಸಾಮಾನ್ಯರು ಪ್ರಪಂಚದ ಜ್ಞಾನ ಬೆಳೆಸಿಕೊಂಡು, ನಾಯಕತ್ವದ ಗುಣಗಳನ್ನು ರೂಡಿಸಿಕೊಳ್ಳಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ನಾವುಗಳು ಮೊದಲು ದೇಶ ಪ್ರೇಮವನ್ನು ಹೊಂದಬೇಕು ಎಂದು ತಿಳಿಸಿದರು.…
ಹಿಮಾಚಲ ಪ್ರದೇಶದಲ್ಲಿ ಮಳೆಗೆ 50 ಮಂದಿ ಬಲಿ. ಸಿಲುಕಿರುವ ಸುಮಾರು 20 ಮಂದಿಯನ್ನು ರಕ್ಷಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಶಿಮ್ಲಾ ಮತ್ತು ಮಂಡಿಯಲ್ಲಿ ಭಾರೀ ಮಳೆಯಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸರ್ಕಾರ ರದ್ದುಗೊಳಿಸಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ಮುಂದೂಡಲಾಗಿದೆ. ಭಾರೀ ಮಳೆಯಿಂದಾಗಿ ಋಷಿಕೇಶದಲ್ಲಿ ಗಂಗಾನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಭಾರೀ ಹಾನಿಯಾಗಿದೆ. ಹಿಮಾಚಲದಲ್ಲಿ ಕಲ್ಕಾ ಶಿಮ್ಲಾ ರೈಲ್ವೇ ಹಳಿ ಕೊಚ್ಚಿ ಹೋಗಿದೆ. ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶವೊಂದರಲ್ಲೇ ಕಳೆದ 24 ಗಂಟೆಗಳಲ್ಲಿ 50 ಸಾವುಗಳು ವರದಿಯಾಗಿವೆ. ವಿವಿಧೆಡೆ ಸಿಲುಕಿರುವ ಸುಮಾರು 20 ಮಂದಿಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಶಿಮ್ಲಾ ಮತ್ತು ಮಂಡಿಯಲ್ಲಿ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖ್ ಮಾತನಾಡಿ, ಸರ್ಕಾರವು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು ಜನರು…
ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ ಘಟನೆ ನಡೆದಿದೆ. ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬೆಟಾಲಿಯನ್ ನ ಪೇದೆಗಳಾದ ಮೈಸೂರಿನ ಕುಂಬಾರಕೊಪ್ಪಲು ಬಡಾವಣೆ ನಿವಾಸಿ ಪಿ.ಮಹೇಶ್ (23) ಹಾಗೂ ಬಿಜಾಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಮರನಾಥ ತಾಳಿಕೋಟೆ (24) ಮೃತಪಟ್ಟವರು. ನಗರದ ಸಿದ್ದಾರ್ಥ ಬಡಾವಣೆ ಸಮೀಪದ ಫುಡ್ ಸ್ಟ್ರೀಟ್ ನಲ್ಲಿ ಊಟ ಸೇವಿಸಿದ ಬಳಿಕ ತಮ್ಮ ಪಲ್ಸರ್ ಬೈಕಿನಲ್ಲಿ ಕೆಎಸ್ ಆರ್ ಪಿ ಬೆಟಾಲಿಯನ್ ಕೇಂದ್ರದತ್ತ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಮಹೀಂದ್ರ ಥಾರ್ ವಾಹನ ಪೇದೆಗಳಿದ್ದ ಬೈಕಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಲ್ಸರ್ ಬೈಕ್ ಸುಮಾರು ಹತ್ತು ಮೀಟರ್ ದೂರ ಹೋಗಿ ಬಿದ್ದಿದ್ದರೆ, ಇಬ್ಬರೂ ಪೇದೆಗಳು ಮೇಲೆಕ್ಕೆ ಎಗರಿ ನೆಲಕ್ಕೆ ಅಪ್ಪಳಿಸಿದ್ದಾರೆ. ಇದರಿಂದಾಗಿ ಇಬ್ಬರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ…
ಲೋ ಬಿಪಿಯಿಂದ ಹೃದಯಾಘಾತವಾಗಿ ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಸುಮಾ ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದರು. ಅನಾರೋಗ್ಯ ಹಿನ್ನೆಲೆ ಆಗಸ್ಟ್ 9 ರಂದು ಸುಮಾ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಾಪಸ್ ಆಗಿದ್ದರು. ನಂತರ ಮತ್ತೆ ಆಗಸ್ಟ್.11 ರಂದು ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಆಗಸ್ಟ್ 13 ರ ಸಂಜೆ ಸುಮಾ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಸ್ವಾತಂತ್ರ್ಯ ದಿನದ ಸೇನಾ ಪದಕಗಳನ್ನು ಪ್ರಕಟಿಸಲಾಗಿದೆ. ಮೇಜರ್ ವಿಕಾಸ್ ಬಿದಿರು, ಮೇಜರ್ ಮುಸ್ತಫಾ ಬೋಹ್ರಾ, ಹವಾಲ್ದಾರ್ ವಿವೇಕ್ ಸಿಂಗ್ ತೋಮರ್ ಮತ್ತು ರೈಫಲ್‌ಮ್ಯಾನ್ ಕುಲ್ ಭೂಷಣ್ ಮಂಡಾ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಘೋಷಿಸಿತು. ಸೇನೆಯಿಂದ ಮೇಜರ್ ವಿಜಯ್ ವರ್ಮಾ, ಮೇಜರ್ ಸಚಿನ್ ನೇಗಿ, ಮೇಜರ್ ರಾಜೇಂದ್ರ ಪ್ರಸಾದ್ ಜಟ್ಟ್, ಮೇಜರ್ ರವೀಂದ್ರನ್ ಸಿಂಗ್ ರಾವತ್, ನಾಯಕ್ ಭೀಮ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಕಾನ್ ಸ್ಟೆಬಲ್ ಸಫೀವುಲ್ಲಾ ಖಾದಿರಿ ಮತ್ತು ಸಿಆರ್‌ಪಿಎಫ್ ಕಾನ್ ಸ್ಟೆಬಲ್ ಗಮಿತ್ ಮುಖೇಶ್ ಕುಮಾರ್ ಅವರಿಗೂ ಶೌರ್ಯ ಚಕ್ರ ನೀಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಅಂತರಾಜ್ಯ ರಸ್ತೆಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ನುಡಿದರು. 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯಗಳು. ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು ತಿಳಿಸಿದರು. ಕೃಷಿ, ತೋಟಗಾರಿಕೆ ಉತ್ತೇಜನಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುವುದು. ಕೌಶಲ್ಯಾಭಿವೃದ್ಧಿ ಯೋಜನೆ ಮೂಲಕ ಯುವಕರಿಗೆ ತರಬೇತಿ ನೀಡಲಾಗುವುದು. ಕೈಗಾರಿಕೆ ಕ್ಷೇತ್ರದಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗುತ್ತೆ. ಮೈಸೂರು, ಮಂಗಳೂರು, ಧಾರವಾಡ-ಹುಬ್ಬಳ್ಳಿ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಗಳ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೈಗಾರಿಕಾ ವಲಯಗಳ ನಡುವೆ ಸಂಪರ್ಕಿಸಲು ರಸ್ತೆ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದರು. ಭಾರತದ…
77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಸ್ತಾರವಾದ ಆಚರಣೆಗಳೊಂದಿಗೆ ಆಚರಿಸುತ್ತದೆ. ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆರಂಭವಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಪುಷ್ಪಾರ್ಚನೆ ಮಾಡಿದರು. ಕೆಂಪು ಕೋಟೆಗೆ ಆಗಮಿಸಿದ ಪ್ರಧಾನಿ ಗೌರವ ವಂದನೆ ಸ್ವೀಕರಿಸಿದರು. ಪ್ರಧಾನಿ ಧ್ವಜಾರೋಹಣ ನೆರವೇರಿಸಿದ ಬಳಿಕ ಉತ್ಸವಕ್ಕೆ ಚಾಲನೆ ದೊರೆಯಿತು. ಸುಮಾರು 1800 ಆಹ್ವಾನಿತ ಅತಿಥಿಗಳು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 50 ದಾದಿಯರು ಮತ್ತು ಅವರ ಕುಟುಂಬ ಸದಸ್ಯರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿದೆ ಎಂಬುದು ಗಮನಾರ್ಹ. ಕೆಂಪುಕೋಟೆ ತಲುಪಿದ ಪ್ರಧಾನಿಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬರ ಮಾಡಿಕೊಂಡರು. ಪ್ರಧಾನಿಯವರನ್ನು ಸ್ವಾಗತಿಸಲು ಸೇನಾ ಮುಖ್ಯಸ್ಥರು ಕೂಡ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವರ್ಣ ಪೇಟ ಧರಿಸಿ ಕೆಂಪು ಕೋಟೆಗೆ ಆಗಮಿಸಿದರು. ಪ್ರಧಾನಿಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ವಾಯುಪಡೆಯ ಹೆಲಿಕಾಪ್ಟರ್ ಕೆಂಪು ಕೋಟೆಯ ಮೇಲೆ ಪುಷ್ಪವೃಷ್ಟಿ ಮಾಡಿತು. ಕೆಂಪುಕೋಟೆಯಲ್ಲಿ ಲೋಪದೋಷದ ವ್ಯವಸ್ಥೆ ಮಾಡಲಾಗಿದೆ. ಕೆಂಪು ಕೋಟೆಯು…
ಮಳೆ ಕಡಿಮೆಯಾದ ಹಿನ್ನೆಲೆ ಟೊಮೆಟೊ ಬೆಲೆ ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುತ್ತಿದ್ದಂತೆ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ. ಆದ್ರೆ ಮತ್ತೊಂದು ಕಡೆ ಸದ್ದಿಲ್ಲದೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆ ಕಂಡು ಬಂದಿದೆ. ಮುಂಗಾರು ಮಳೆ ಕೈಕೊಟ್ಟು ಚಿತ್ರದುರ್ಗ, ದಾವಣಗೆರೆ ಹಾಗೂ ಕರ್ನಾಟಕದ ಇತರೆಡೆಯಿಂದ ಈರುಳ್ಳಿ ಲಭ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್ ನಲ್ಲಿ ಬೆಳೆ ಕೊರತೆ ಇದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಇಂದು ಧ್ವಜಾರೋಹಣ ನೆರವೇರಿಸಿದರು. ಮಠದಲ್ಲಿ ವ್ಯಾಸಂಗ ಮಾಡುತ್ತಿರುವ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಕಾಲದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿದ್ದಗಂಗಾ ಮಠದ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶ್ರೀ ಸಿದ್ದಲಿಂಗಸ್ವಾಮೀಜಿ, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಜಿಲ್ಲಾಧಿಕಾರಿ ಶ್ರೀನಿವಾಸ್ ಮೂರ್ತಿ, ಜಿಲ್ಲಾವರಿಷ್ಟಾಧಿಕಾರಿ ರಾಹುಲ್ ಕುಮಾರ್ ಭಾಗಿಯಾಗಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಸಿಕ್ಕಿದೆ ಎಂದು ಲೂಟಿ ಹೊಡೆಯುವುದಲ್ಲ. ಎಂದು ಹೆಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ, ಅಧಿಕಾರ ಸಿಕ್ಕಿದೆ ಎಂದು ಸ್ಟೇಚ್ಛಾಚಾರ ಪ್ರದರ್ಶನ ಮಾಡುವುದಲ್ಲ. ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಸಚಿವರಾಗಿದ್ದಾರೆ. ಲೂಟಿ ಮಾಡುವುದನ್ನು ಬಿಟ್ಟು ಜನರ ಸೇವೆ ಮಾಡಲಿ. ಅವರು ಪ್ರಾಮಾಣಿಕರಾದ್ರೆ, ರಾಜ್ಯಪಾಲರವರೆಗೂ ದೂರು ಹೋಗಿದ್ದೇಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನ್ನಾಡುವುದು ಬಹಳ ಇದೆ. ಎಲ್ಲವನ್ನೂ ಮಾತನ್ನಾಡುತ್ತೇನೆ. ಇಂದೇ ಎಲ್ಲಾ ಏಕೆ ಮಾತನ್ನಾಡಬೇಕು? ನಾಳೆ, ನಾಡಿದ್ದು ಮಾತನ್ನಾಡಲೇಬೇಕು. ನಿಮ್ಮ ಮುಂದೆಯೇ ತಾನೇ ಎಲ್ಲವನ್ನೂ ಹೇಳಬೇಕು. ಖಂಡಿತವಾಗಿ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಿನ್ನೆ ತಡರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದ ಬಳಿ ಮಾಧ್ಯಮಗಳ ಮುಂದೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನನ್ನ ನೋಡಿದ್ರೆ ಕಾಂಗ್ರೆಸ್…