Author: admin

ಬೆಂಗಳೂರು: ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್  ಆಗಿದ್ದರೆ ,ಬಾಲಕರು 69.05% ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರು ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದು, ಇದೀಗ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಶಿಸಿದ್ದಾರೆ. ಇಂದು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅವರ ರಾಜಕೀಯ ಪ್ರಬುದ್ಧ ನಡೆಯನ್ನು ಪ್ರಶಂಶಿಸಿದರು. ಅಲ್ಲದೇ ಪಕ್ಷ ಸದಾ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದರು. ಇದರಿಂದ ಕೆಎಸ್ ಈಶ್ವರಪ್ಪ ಫುಲ್ ಖುಷ್ ಆಗಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿರುವ ಬಗ್ಗೆ ಈಶ್ವರಪ್ಪನವರು ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮೋದಿ ಬೆಳಗ್ಗೆ ಕಾಲ್ ಮಾಡಿದಾಗ ನನಗೆ ಅಚ್ಚರಿ ಆಯ್ತು. ಮೋದಿ ಅವರು ಹೀಗೆ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸುತ್ತಿರುವುದು ಸಂತೋಷವಾಗಿದೆ. ಇದು ಎಲ್ಲ ಕಾರ್ಯಕರ್ತ ರಿಗೆ ಸ್ಫೂರ್ತಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ನಡೆದ ದಾಳಿ ಭಯೋತ್ಪಾದಕ ದಾಳಿ ಎಂದು ಸೇನೆ ಖಚಿತಪಡಿಸಿದೆ. ಮಧ್ಯಾಹ್ನ ಸೇನಾ ಟ್ರಕ್ ಮೇಲೆ ನಡೆದ ದಾಳಿಯಲ್ಲಿ ಐವರು ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಓರ್ವ ಯೋಧ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಹನದಲ್ಲಿದ್ದವರೆಲ್ಲರೂ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವಿಭಾಗದ ಸೈನಿಕರು. ಭಯೋತ್ಪಾದಕರು ವಾಹನದತ್ತ ಗುಂಡು ಹಾರಿಸಿ ನಂತರ ಗ್ರೆನೇಡ್‌ಗಳನ್ನು ಎಸೆದರು. ಗ್ರೆನೇಡ್ ದಾಳಿಯಲ್ಲಿ ವಾಹನ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿ ಪಡೆಗಳನ್ನು ನಿಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಉಗ್ರರಿಗಾಗಿ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಈವೆಂಟ್ ಮ್ಯಾನೇಜ್‌ಮೆಂಟ್ ಏಜೆನ್ಸಿಯೊಂದರ ಮಾಲೀಕರನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಬಾಲಿವುಡ್ ಗಾಯಕ ಯೋ ಯೋ ಹನಿ ಸಿಂಗ್ ಮತ್ತು ಆತನ ತಂಡದ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಲಾಗಿದೆ. ಈವೆಂಟ್ ಏಜೆನ್ಸಿಯಾದ ಫೆಸ್ಟಿವಿನಾ ಮ್ಯೂಸಿಕ್ ಫೆಸ್ಟಿವಲ್ ಮಾಲೀಕ ವಿವೇಕ್ ರವಿ ರಾಮನ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರ ಪ್ರಕಾರ, ಅವರ ಏಜೆನ್ಸಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಹನಿ ಸಿಂಗ್ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಿದ ನಂತರ ವಿವಾದ ಉಂಟಾಗಿದೆ. ಇದರ ಬೆನ್ನಲ್ಲೇ ಹನಿ ಸಿಂಗ್ ಮತ್ತು ಆತನ ತಂಡ ತನ್ನನ್ನು ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರಿನಲ್ಲಿ, ಗಾಯಕ ಮತ್ತು ಅವರ ತಂಡವು ಮುಂಬೈನ ಸಹಾರ್‌ನಲ್ಲಿರುವ ಜೆಡಬ್ಲ್ಯೂ ಮ್ಯಾರಿಯೆಟ್‌ಗೆ ತನ್ನನ್ನು ಕರೆದೊಯ್ದು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ರಾಮನ್ ದೂರಿನಲ್ಲಿ ಹೇಳಿಕೊಂಡಿದ್ದಾರೆ, ತನಗೆ ಗಂಭೀರ ಗಾಯಗಳಾಗಿವೆ ಆದರೆ ಪೊಲೀಸರು ಈ ಪ್ರಕರಣದಲ್ಲಿ ಇನ್ನೂ ಎಫ್‌ಐಆರ್ ದಾಖಲಿಸಿಲ್ಲ. ದೂರು ಪ್ರಾಥಮಿಕ ತನಿಖೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 15 ರಂದು…

Read More

ಉದ್ಯೋಗದಾತ ತನ್ನ ಸಂಬಳವನ್ನು ನೀಡಲಿಲ್ಲ ಎಂದು ಆರೋಪಿಸಿ 49 ವರ್ಷದ ವ್ಯಕ್ತಿ ನೇಣು ಬಿಗಿದುಕೊಂಡಿದ್ದಾನೆ. ರಾಜಸ್ಥಾನದ ಜೈಪುರದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ವ್ಯಕ್ತಿ ಬಿಡುಗಡೆ ಮಾಡಿರುವ ಆಡಿಯೋ ಸಂದೇಶದಲ್ಲಿ, ಸಂಬಳಕ್ಕೆ ಬೇಡಿಕೆಯಿಟ್ಟಾಗ ಉದ್ಯೋಗದಾತರಿಂದ ನಿರಂತರವಾಗಿ ಮಾನಸಿಕ ಹಿಂಸೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂಜಯ್ ಪಾಂಡೆ (49) ಆತ್ಮಹತ್ಯೆ ಮಾಡಿಕೊಂಡವರು. ಆಡಿಯೋ ಕ್ಲಿಪ್‌ನಲ್ಲಿ, ಸಂಜಯ್ ತನ್ನ ಉದ್ಯೋಗದಾತ ಶಬ್ಬೀರ್ ಖಾನ್ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರ ಜೊತೆ ನಿಕಟ ಸಂಬಂಧ ಹೊಂದಿರುವ ರಫೀಕ್ ಖಾನ್ ಅವರ ಬೆಂಬಲದೊಂದಿಗೆ ಇದನ್ನು ಮಾಡಲಾಗುತ್ತಿದೆ ಎಂದು ಸಂಜಯ್ ಹೇಳಿದರು. ಪಾಂಡೆ  ಶಬ್ಬೀರ್   ಖಾನ್ ನಡೆಸುತ್ತಿರುವ ಸಾರಿಗೆ ಸಂಸ್ಥೆಯ ಉದ್ಯೋಗಿಯಾಗಿದ್ದಾರೆ. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಶಬ್ಬೀರ್  ಖಾನ್ ವಿರುದ್ಧ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸಹಾಯಕ ಆಯುಕ್ತ ಬಸ್ಸಿ, ಮೇಘ್ ಚಂದ್ ಮೀನಾ ತಿಳಿಸಿದ್ದಾರೆ. ಇದೇ ವೇಳೆ ಘಟನೆಯಲ್ಲಿ ಬಿಜೆಪಿ ಕಾಂಗ್ರೆಸ್ ಸರ್ಕಾರದ…

Read More

41 ವರ್ಷದ ಮಧುಸ್ಮಿತಾ ಜೆನಾ, ಒಡಿಯಾ ಮೂಲದ ಮತ್ತು ಮ್ಯಾಂಚೆಸ್ಟರ್‌ನ ಪ್ರೌಢಶಾಲಾ ಶಿಕ್ಷಕಿ, ಸೀರೆಯನ್ನು ಧರಿಸಿ 42.5 ಕಿಮೀ ಮ್ಯಾರಥಾನ್ ಓಡಿದರು. ಜೆನಾ ನಾಲ್ಕು ಗಂಟೆ 50 ನಿಮಿಷಗಳಲ್ಲಿ ಸೀರೆ ಉಟ್ಟು ಮ್ಯಾರಥಾನ್ ಪೂರ್ಣಗೊಳಿಸಿದರು. ಜೆರ್ಸಿಯನ್ನು ಆಡುವ ಜನರಲ್ಲಿ, ಜೆನಾ ಅವರ ಸಾಂಪ್ರದಾಯಿಕ ಸಂಬಲ್ಪುರಿ ಕೈಮಗ್ಗದ ಸೀರೆ ವೈರಲ್ ಆಗಿದೆ. ಮ್ಯಾರಥಾನ್‌ನಲ್ಲಿ ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಿರುವ ಜೆನಾ ಅವರ ಚಿತ್ರಗಳು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ‘ಪಟ್ಟಾ’ ಸೀರೆಯನ್ನು ಧರಿಸಿದ ಜನರು ಯುಎಸ್ ಓಪನ್ ಆಡುತ್ತಿದ್ದಾರೆ ಮತ್ತು ತಾಶಾರ್ ರೇಷ್ಮೆ ಸೀರೆಗಳನ್ನು ಧರಿಸಿ ಟ್ರಯಥ್ಲಾನ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂಬಂತಹ ತಮಾಷೆಯ ಕಾಮೆಂಟ್‌ಗಳೊಂದಿಗೆ ವೀಡಿಯೊ ವೈರಲ್ ಆಗಿದೆ. ಜೆನಾ ಅವರು ಮ್ಯಾಂಚೆಸ್ಟರ್ ಮ್ಯಾರಥಾನ್ ಟ್ವಿಟರ್ ಐಡಿಯಲ್ಲಿ ಸೀರೆ ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದು ವೈರಲ್ ಆದ ನಂತರ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ, ಸೀರೆ ಧರಿಸಿ ಮ್ಯಾರಥಾನ್ ಓಡುವ ಮೊದಲ ವ್ಯಕ್ತಿ ನಾನೇ ಎಂದು ಜೆನಾ ಹೇಳಿದ್ದಾರೆ. ಸೀರೆ ಉಟ್ಟು ಓಡುವುದು…

Read More

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್‌ನ ಆಡಳಿತಗಾರ ಮತ್ತು ಜನತೆಗೆ ಈದ್-ಉಲ್-ಫಿತರ್ ಶುಭಾಶಯಗಳನ್ನು ಕೋರಿದ್ದಾರೆ. ಕುವೈತ್ ಎಮಿರ್ ಹಿಸ್ ಹೈನೆಸ್ ಶೇಖ್ ನವಾಫ್ ಅಲ್ ಅಹ್ಮದ್ ಅಲ್ ಜಾಬರ್ ಅಲ್ ಸಬಾಹ್ ಅವರು ಕಳುಹಿಸಿದ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈದ್-ಉಲ್-ಫಿತರ್‌ನ ಶುಭ ಸಂದರ್ಭದಲ್ಲಿ, ಪ್ರಪಂಚದಾದ್ಯಂತದ ಜನರ ಶಾಂತಿ, ಏಕತೆ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸುವುದಾಗಿ ಪ್ರಧಾನಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೊರಟಗೆರೆ : ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಕುಡಿಯುವ ನೀರನ್ನು ಜನಸಾಮಾನ್ಯರಿಗೆ ಒದಗಿಸುವಲ್ಲಿ ಗ್ರಾಮ ಪಂಚಾಯತಿ ವಿಫಲವಾಗಿರುವ ಘಟನೆ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಬುಕ್ಕಪಟ್ಟಣ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕಡೆ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನರು ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಖಾಲಿ ಕೊಡಗಳೊಂದಿಗೆ ಮಹಿಳೆಯರು, ಸುತ್ತ ಮುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈ ಬಾರಿ ವರುಣನ ಕೃಪೆಯಿಂದ ಸಾಕಷ್ಟು ಮಳೆಯಾಗಿ ಕೆರೆ–ಕಟ್ಟೆಗಳು ತುಂಬಿದ್ದವು, ಗ್ರಾಮ ಪಂಚಾಯಿತಿಯು ಸಮರ್ಪಕವಾಗಿ ನೀರು ಸರಬರಾಜು ಮಾಡದೆ ನಿರ್ಲಕ್ಷ್ಯ ವಹಿಸಿದ ನಡೆಗೆ ಗ್ರಾಮದ ಮಹಿಳೆಯರು ಹಾಗೂ ಊರಿನ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಆಕ್ರೋಶ ಹೊರಹಾಕಿದ ಘಟನೆ ನಡೆಯಿತು. ಗ್ರಾಮದ ಮಹಿಳೆ ಲಕ್ಷಮ್ಮ ಮಾತನಾಡಿ, ನಮಗೆ ಪೈಪ್ ಲೈನ್ ಮೂಲಕ ನೀರು ಸರಬರಾಜು ಮಾಡುತ್ತಿದ್ದರು, ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ, ಗ್ರಾ.ಪಂ.ನವರು ಟ್ಯಾಂಕರ್ ಗಳ ಮುಖಾಂತರ ಕಲುಶಿತ ನೀರನ್ನು ಸರಬರಾಜು…

Read More

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಐವರು ಯೋಧರು ಹುತಾತ್ಮರಾದ ಉಗ್ರರ ದಾಳಿಯ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿದೆ. ಘಟನೆಯು ಭಯೋತ್ಪಾದಕ ದಾಳಿ ಎಂದು ಸೇನೆಯು ದೃಢಪಡಿಸಿದ ನಂತರ ಎನ್‌ಐಎ ತನಿಖೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. ಭಯೋತ್ಪಾದನಾ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿ ನಡೆದಿದೆ. ಗಡಿ ನಿಯಂತ್ರಣ ರೇಖೆ ಬಳಿ ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ದಾಳಿ ನಡೆದಿದೆ. ವಾಹನವು ಬಿಂಬರ್ ಗಲಿಯಿಂದ ಪೂಂಚ್ ಕಡೆಗೆ ಬರುತ್ತಿತ್ತು. ಭಯೋತ್ಪಾದಕರ ಗ್ರೆನೇಡ್ ದಾಳಿಯಿಂದಾಗಿ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಎನ್‌ಐಎ ತಂಡ ನಿನ್ನೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಯಲಿರುವ ಜಿ20 ಅಂಗವಾಗಿ ನಡೆದ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದಾಳಿ ನಡೆಸಿದ ಉಗ್ರರಿಗಾಗಿ ಸೇನೆ ಇನ್ನೂ ಶೋಧ ನಡೆಸುತ್ತಿದೆ.  ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪೂಂಚ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದರು.…

Read More

ಗೋಕಾಕ್: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿಯವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಶೋಕ್ ಪೂಜಾರಿ ಮನೆಗೆ ಭೇಟಿ ನೀಡಿ, ಮನವೊಲೀಸಿದರು. ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡ ಅಶೋಕ್ ಪೂಜಾರಿ ಅಸಮಾಧಾನ ಆಗಿದ್ದರು. ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಅಶೋಕ್ ಪೂಜಾರಿ ಅವರು ನಿರ್ಧರಿಸಿದ್ದರು. ಕಾರಣ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕ ಅಶೋಕ ಪಟ್ಟಣ, ಲಕ್ಷ್ಮಣ ಸವದಿ, ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ಸೇರಿದಂತೆ ಅನೇಕ ನಾಯಕರು ಅಶೋಕ್ ಪೂಜಾರಿ ಅವರನ್ನು ಮನವೋಲಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ಹೈಕಮಾಂಡ್‌ ನಿರ್ದೇಶನದಂತೆ ಜಿಲ್ಲೆಯಲ್ಲಿ ಬಂಡಾಯ ಎದ್ದ ಅಭ್ಯರ್ಥಿಗಳನ್ನು ಮನವೊಲಿಸುವ ಪ್ರಯತ್ನ ಮಾಡಿದ್ದು, ಒಟ್ಟಾರೇ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More