Subscribe to Updates
Get the latest creative news from FooBar about art, design and business.
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
- ಎಸ್ ಐಆರ್ | ಬಿಎಲ್ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್ ಗೌಡ ಗಂಭೀರ ಆರೋಪ
- ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
- ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
- ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
Author: admin
ಮೈಸೂರು: ಸೈಕಲ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ ಅಭಿಷೇಕ್ ವೃತ್ತದಲ್ಲಿ ನಡೆದಿದೆ. ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಾಜಿ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ ಪುತ್ರ. ಬಾಲಾಜಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ವೇಗವಾದ ಸೈಕಲ್ ಚಾಲನೆಯಿಂದ ಮಕ್ಕಳು (Children) ಸೈಕಲ್ ನಿಯಂತ್ರಣವನ್ನು ಕಳೆದುಕೊಂಡಿದ್ದು, ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಾಜಿ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಬಾಲಕ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ: ಹಳೇ ದ್ವೇಷದ ಹಿನ್ನೆಲೆ ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ. ಕ್ರಿಸ್ಟಲ್ (28) ಹತ್ಯೆಯಾದ ದುರ್ದೈವಿ. ಗುರುವಾರ ರಾತ್ರಿ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿರುವ ಬಾರ್‌ವೊಂದರಲ್ಲಿ ಕ್ರಿಸ್ಟಲ್ ಸ್ನೇಹಿತರು ಹಾಗೂ ರಂಜಿತ್ ಸ್ನೇಹಿತರು ಇಬ್ಬರು ಒಂದೇ ಬಾರಿನಲ್ಲಿ ಮದ್ಯಪಾನ ಮಾಡುತ್ತಿದ್ದ ಸಂದರ್ಭ ರಂಜಿತ್ ಹಾಗೂ ಕ್ರಿಸ್ಟಲ್ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಗಲಾಟೆಯನ್ನು ಗಮನಿಸಿದ ಬಾರ್ ಮ್ಯಾನೇಜರ್ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಸ್ಥಳಕ್ಕೆ ಆಗಮಿಸುವ ವೇಳೆ ಕ್ರಿಸ್ಟಲ್ ತಂಡ ಹಾಗೂ ರಂಜಿತ್ ತಂಡದ ಯುವಕರು ಬಾರ್ ಒಳಗೆ ನುಗ್ಗಿ ಇನ್ನಷ್ಟು ಗಲಾಟೆ ಮಾಡಿಕೊಂಡು ಬಾರ್‌ನ ಶೌಚಾಲಯದ ಬಾಗಿಲು ಮುರಿದಿದ್ದಾರೆ. ಬಳಿಕ ಪೊಲೀಸರು ಕ್ರಿಸ್ಟಲ್ ನ ಜೊತೆ ಇದ್ದ ಮೈಕೆಲ್ ಹಾಗೂ ಮತ್ತೊಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿದ್ದಾರೆ. ಆದರೆ ಗಲಾಟೆ ಮಾಡಿದ ರಂಜಿತ್ ಹಾಗೂ ಕ್ರಿಸ್ಟಲ್ ಇಬ್ಬರಿಗೂ…
ಗೋಕಾಕ: ಗೋಕಾಕ ಪಾಲ್ಸ್ ಗೆ ಇಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಗೋಕಾಕ ಪಾಲ್ಸ್‌ಗೆ ವರ್ಷಕ್ಕೆ 3ರಿಂದ 4 ಲಕ್ಷ ಜನ ಭೇಟಿ ನೀಡುತ್ತಾರೆ. ಪ್ರವಾಸಿಗರ ಸುರಕ್ಷೆತೆಗಾಗಿ ಹಲವು ಕ್ರಮ ಕೈಗೊಳ್ಳುವುದಕ್ಕಾಗಿಯೇ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ ಪಾಲ್ಸ್ ಗೆ ಭೇಟಿ ನೀಡಿದ್ದಾಗಿ ತಿಳಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರಸಿದ್ದ ಗೋಕಾಕ ಜಲಪಾತಕ್ಕೆ ಅಪಾರ ಸಂಖ್ಯೆಯ ಪ್ರಯಾಣಿಕರು ಭೇಟಿ ನೀಡುತ್ತಾರೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಲಪಾತದ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಮಾಹಿತಿ ಪಡೆದಿದ್ದು, ಶೀಘ್ರವೇ ಗೋಕಾಕ ಪಾಲ್ಸ್ ನ್ನು ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಾಂಕಾ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಸೇರಿದಂತೆ ಸ್ಥಳೀಯ ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಮಂಗಳವಾರ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮೈಸೂರು ಮೃಗಾಲಯದ ವಾರದ ರಜೆ ರದ್ದು ಮಾಡಲಾಗಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಮಂಗಳವಾರದ ವಾರದ ರಜೆ ರದ್ದು ಮಾಡಲಾಗಿದೆ. ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೈಸೂರು ಮೃಗಾಲಯ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಳ ಮೇಲೆ ನಿಯಂತ್ರಣ ಹೊಂದುವ ಸಂಬಂಧ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ದೆಹಲಿ ಸೇವಾ ಮಸೂದೆಗೆ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ 2023ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ, ಈ ಮಸೂದೆಯು ಕಾನೂನಾಗುತ್ತದೆ ಮತ್ತು ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಸೇವಾ ಮಸೂದೆಯನ್ನು ಆಗಸ್ಟ್ 3 ರಂದು ಲೋಕಸಭೆಯಲ್ಲಿ ಮತ್ತು ಆಗಸ್ಟ್ 7 ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿತ್ತು. ಈ ಕಾಯಿದೆಯು ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀಡುತ್ತದೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ಕೇಂದ್ರ…
ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೇರಿದಂತೆ ನಾನಾ ವೃತ್ತಿಪರ ಕೋರ್ಸುಗಳಿಗೆ ಅನ್ವಯವಾಗುವಂತೆ ಅರ್ಹ ನೀಟ್ ಮತ್ತು ಸಿಇಟಿ ಅಭ್ಯರ್ಥಿಗಳು ನಮೂದಿಸಿರುವ ಆಪ್ಷನ್ಸ್ ಗಳನ್ನು ದಾಖಲಿಸಿ ಮೆರಿಟ್ ಮತ್ತು ರೋಸ್ಟ ಆಧಾರದ ಮೇಲೆ ಗುರುವಾರ (ಆ. 10) ಅಣಕು ಸೀಟು ಹಂಚಿಕೆ ಮಾಡಿ, ಫಲಿತಾಂಶ ಪ್ರಕಟಿಸಿದೆ. ಅಭ್ಯರ್ಥಿಗಳು ತಾವು ಬಯಸಿದಲ್ಲಿ ತಮ್ಮ ಆಪ್ಷನ್ಸ್ ಪರಿಷ್ಕರಿಸಲು ಅಥವಾ ಬದಲಿಸಲು ಈಗ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ, “ಮೊದಲನೇ ಸುತ್ತಿನಲ್ಲಿ ಆಪ್ಷನ್ಸ್ ನಮೂದಿಸದೆ ಇದ್ದಂತಹ ಅಭ್ಯರ್ಥಿಗಳು ಕೂಡ ಈ ಅವಕಾಶ ಬಳಸಿಕೊಳ್ಳಬುದು. ಅಂತಿಮ ದಾಖಲಾತಿಯನ್ನು ಆಧರಿಸಿ ಪ್ರಾಧಿಕಾರವು ಆ. 16ರಂದು ಮೊದಲನೇ ಸುತ್ತಿನ ನೈಜ ಸೀಟು ಹಂಚಿಕೆಯನ್ನು ಪ್ರಕಟಿಸಲಿದೆ’ ಎಂದಿದ್ದಾರೆ. ಅಲ್ಲದೆ, ಇದಾದ ನಂತರ ಅಭ್ಯರ್ಥಿಗಳಿಗೆ ಸೀಟುಗಳ ಬಗ್ಗೆ ನಿರ್ಧರಿಸಲು ನಾಲ್ಕು ಆಯ್ಕೆಗಳನ್ನು ಕೊಡಲಾಗುವುದು. ಅಭ್ಯರ್ಥಿಗಳು ಪೋಷಕರೊಡನೆ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಇದರಿಂದ ಕಾಲಾವಕಾಶ ಸಿಗಲಿದೆ. ವಿವರಗಳಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://kea.…
ಬೆಂಗಳೂರು: ಪೈಂಟಿಂಗ್ ಕೆಲಸಕ್ಕೆಂದು ಹೋಗಿ ಮನೆಯಿಂದ ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿ ಉಮೇಶ್ ಪ್ರಸಾದ್ ಜಾಧವ (32) ಅವರನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಆರೋಪಿ ಕೆಲಸ ಹುಡುಕಿಕೊಂಡು ಬಂದಿದ್ದ. ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳವು ಮಾಡಿ ಊರಿಗೆ ಪರಾರಿಯಾಗಿದ್ದ. ‘ಇತ್ತೀಚೆಗೆ ಪುನಃ ಬೆಂಗಳೂರಿಗೆ ಬಂದಿದ್ದಾಗ ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಬಳ ಕಡಿಮೆ ಎಂದು ಕೆಲಸ ಬಿಟ್ಟಿದ್ದು, ಪೈಂಟಿಂಗ್ ಕೆಲಸ ಮಾಡುತ್ತಿದ್ದ. ಪೈಂಟಿಂಗ್ ವೇಳೆ ಮನೆಯಲ್ಲಿ ಆಭರಣವಿಟ್ಟಿರುವ ಜಾಗ ತಿಳಿದುಕೊಳ್ಳುತ್ತಿದ್ದ. ಪೈಂಟಿಂಗ್ ಕೆಲಸ ಅಂತಿಮ ಹಂತದಲ್ಲಿರುವಾಗ, ಚಿನ್ನಾಭರಣ ಕದ್ದುಕೊಂಡು ಪರಾರಿಯಾಗುತ್ತಿದ್ದ. ಸದ್ಯ ಈತನಿಂದ 100 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮಂಗಳವಾರ ಸ್ವಾತಂತ್ರೋತ್ಸವ ಪ್ರಯುಕ್ತ ರಜೆ ಇರುವುದರಿಂದ ಸೋಮವಾರವನ್ನು ಅದಕ್ಕೆ ಜೋಡಿಸಿಕೊಂಡು ಸಾಲು ರಜೆ ಹಾಕಿ ಪ್ರವಾಸ, ಊರಿಗೆ ಹೋಗುವವರಿಗೆ ಖಾಸಗಿ ಬಸ್ ಗಳ ದರ ದುಬಾರಿ ಆಗಿದೆ. ಶನಿವಾರ, ಭಾನುವಾರ ವಾರದ ರಜೆಗಳಾದರೆ ಮಂಗಳವಾರ ಸ್ವಾತಂತ್ರೋತ್ಸವದ ರಜೆ ಸೋಮವಾರ ಒಂದು ರಜೆ ಹಾಕಿದರೆ ನಾಲ್ಕು ರಜೆಗಳನ್ನು ಒಮ್ಮೆಲೆ ಪಡೆಯಬಹುದು ಎಂದು ಅನೇಕರು ರಜೆ ಹಾಕಿದ್ದಾರೆ. ಆದರೆ, ಶುಕ್ರವಾರವೇ ಬಸ್ ಗಳ ದರ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಹೋಗುವವರಿಗೆ ಖಾಸಗಿ ಬಸ್ ಗಳಲ್ಲಿ 7 700ರಿಂದ 2 1,000ವರೆಗೆ ಇದ್ದ ದರ ಈಗ 1850ರಿಂದ 73, 500ರವರೆಗೆ ಏರಿಕೆಯಾಗಿದೆ. ಮಂಗಳೂರಿಗೆ ತೆ 700ರಿಂದ 1950ರವರೆಗೆ ಇದ್ದಿದ್ದು? 1400-72000ಕ್ಕೇರಿದೆ. ಶಿರಸಿಗೆ 7 700-7900 ಇದ್ದಿದ್ದು 1850-12,150ರವರೆಗೆ ಹೆಚ್ಚಳವಾಗಿದೆ. ಇದೇ ರೀತಿ ರಾಜ್ಯದ ವಿವಿಧ ನಗರಗಳಿಗೆ ತೆರಳುವವರಿಗೆ ಬಸ್ ದರ ಹೊಳೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.…
ಬೆಂಗಳೂರು: ಸರ್ಕಾರದ ಮೇಲೆ ಜವಾಬ್ದಾರಿ ಇದೆ. ನಿಮ್ಮ ಪರವಾಗಿ ಇರ್ತೀವಿ ಅಂತ ಗುತ್ತಿಗೆದಾರರಿಗೆ ನಾವು ಹೇಳುವುದಿಲ್ಲ. ಯಾರನ್ನೂ ನಾವು ಎತ್ತಿ ಕಟ್ಟುವ ಕೆಲಸ ಮಾಡುವುದಿಲ್ಲ. ನಮ್ಮ ಸರ್ಕಾರದಲ್ಲಿ ಇಂತ ವ್ಯಕ್ತಿ ಅಂತ ಎಲ್ಲೂ ಹೇಳಿಲ್ಲ. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಹಣಕ್ಕೆ ಡಿಮ್ಯಾಂಡ್ ಇಟ್ಟಿರೋದನ್ನು ಗುತ್ತಿಗೆದಾರರು ನೇರವಾಗಿ ಆಪಾದನೆ ಮಾಡುತ್ತಿದ್ದಾರೆ. ನಮ್ಮ ಮೇಲೆ ಮಾಡಿದ್ದ 40% ಆರೋಪವನ್ನೂ ತನಿಖೆಗೆ ಕೊಡಲಿ. ಇವರ ಕಾಲದಲ್ಲಿ ಆಗುತ್ತಿರುವ ಇರುವ ಆರೋಪಗಳಿಗೂ ತನಿಖೆಗೆ ಮುಂದಾಗಲಿ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಬಿಬಿಎಂಪಿಯ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಒಟ್ಟು 9 ಮಂದಿಗೆ ಗಾಯವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಅದರಲ್ಲಿ 2 ಮಹಿಳೆಯರು, 7 ಪುರುಷರಿಗೆ ಗಾಯವಾಗಿದೆ ಎಂಬ ಮಾಹಿತಿ ತಿಳಿದಿದೆ. ಮುಖ್ಯ ಅಭಿಯಂತರರಾದ ಶಿವಕುಮಾರ್ ರವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆತರಲಾಗಿದೆ. ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಗಳ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಯಿತು. ಇನ್ನು ಗಾಯಗೊಂಡವರ ಹೆಸರಿನ ಪಟ್ಟಿ ಕೂಡ ಬಿಡುಗಡೆ ಮಾಡಲಾಗಿದೆ. 1. ಶಿವಕುಮಾರ್, ಮುಖ್ಯ ಅಭಿಯಂತರರು. 2. ಕಿರಣ್, ಕಾರ್ಯಪಾಲಕ ಅಭಿಯಂತರರು. 3. ಸಂತೋಷ್ ಕುಮಾರ್, ಕಾರ್ಯಪಾಲಕ ಅಭಿಯಂತರರು. 4. ವಿಜಯಮಾಲ, ಕಾರ್ಯಪಾಲಕ ಅಭಿಯಂತರರು. 5. ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರು. 6. ಸಿರಾಜ್, ಪ್ರಥಮ ದರ್ಜೆ ಸಹಾಯಕರು. 7. ಜ್ಯೋತಿ, ಆಪರೇಟರ್, 8. ಶ್ರಿನಿವಾಸ್, ಪ್ರಾಜೆಕ್ಟ್ ಮ್ಯಾನೇಜೆಂಟ್ ಕನ್ಸಲ್ವೆಂಟ್. 9. ಮನೋಜ್, ಗಣಕಯಂತ್ರ ನಿರ್ವಾಹಕರು ಎಂದು ಗುರುತಿಸಲಾಗಿದೆ.