Author: admin

ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ‘ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ. ‘ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ. ಪಿ. ನಗರ 7ನೇ ಹಂತದಲ್ಲಿ ವಾಸವಿದ್ದ. ರಾಷ್ಟ್ರ ರಕ್ಷಣಾ ಪಡೆ ಹೆಸರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದ. ಎಲ್ಲ ಕೃತ್ಯಗಳ ಬಗ್ಗೆ ವರದಿ ಸಿದ್ಧಪಡಿಸಿ ವಶಕ್ಕೆ ಪಡೆಯಲಾಗಿದೆ’ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಸ್ವಾತಂತ್ರ್ಯ ದಿನಾಚರಣೆಯಂದು ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಮ್ಮ ಮೆಟ್ರೋ ಸಂಸ್ಥೆ, ಪೇಪರ್ ಟಿಕೆಟ್ ಪರಿಚಯಿಸಿದೆ. ಅದರಂತೆ, ಲಾಲ್‌ ಬಾಗ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್‌ಸಿಎಲ್, ಲಾಲ್ ಬಾಗ್‌ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕ ಪ್ರಯಾಣಕ್ಕೆ ಅನುಕೂಲವಾಗಲೆಂದು ನಮ್ಮ ಮೆಟ್ರೋ 15ರ ಆಗಸ್ಟ್ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆದಂದು ಲಾಲ್‌ ಬಾಗ್‌ ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ ಗಳನ್ನು ಪರಿಚಯಿಸಲಿದೆ ಎಂದು ತಿಳಿಸಿದೆ. 15 ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರುಪಾಯಿಗೆ ನಿಗಧಿಪಡಿಸಲಾಗಿದೆ. ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಬಿಎಂಆರ್ ಸಿಎಲ್‌ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ಜರುಗಿಸುವುದಾಗಿ ಶಾಲಾ ಶಿಕ್ಷಣ ಸಚಿವ ಸಚಿವ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ರಾಜ್ಯಾದ್ಯಂತ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ, ಅನುಮತಿ ಪಡೆಯದೆ ಉನ್ನತೀಕರಿಸಿರುವ ಶಾಲೆಗಳು 76, ಇತರೆ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು-495 ಶಾಲೆಗಳಿವೆ. ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿದ ಖದೀಮನೊಬ್ಬ ಸರ ಕಸಿದುಕೊಂಡು ಪರಾರಿಯಾದ ಘಟನೆ ಎನ್‌ಆರ್‌ಐ ಬಡಾವಣೆಯ 5ನೇ ಕ್ರಾಸ್ ನ ಮಾರುತಿ ಪ್ರತೀಕ್ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 9ರ ರಾತ್ರಿ 8.30ರ ವೇಳೆ ಮೊಮ್ಮಗಳ ಜೊತೆ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಫಾಲೋ ಮಾಡಿದ ಸರಗಳ್ಳ, ಹಿಂಬದಿಯಿಂದ ಕೈಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಳೆದಿದ್ದಾನೆ. ಸರ ಎಳೆದ ರಭಸಕ್ಕೆ ವೃದ್ಧ ಕೆಳಗೆ ಬಿದ್ದಿದ್ದಾರೆ. ಖದೀಮ ಸ್ಥಳದಿಂದ ಪರಾರಿಯಾಗಿದ್ದಾನೆ. ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸರಗಳ್ಳನಿಗೆ ಶೋಧ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಪಾವಗಡ: ಬೋಲೆರೋ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಪಾವಗಡ ತಾಲ್ಲೂಕಿನ ಕಡಮಲಕುಂಟೆ ಕ್ರಾಸ್ ಬಳಿ ನಡೆದಿದ್ದು, ಇಬ್ಬರು ಬೈಕ್ ಸವಾರರು ಬಲಿಯಾಗಿ, ಓರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಪರಾರಿಯಾದ ವಾಹನವನ್ನು ಪೊಲೀಸರು ನಾಗಲಮಡಿಕೆ ಬಳಿ ಸೆರೆ ಹಿಡಿದಿದ್ದಾರೆ. ಬೈಕ್ ಅಪಘಾತಕ್ಕೆ ಬಲಿಯಾದವರು ಆಂಧ್ರಪ್ರದೇಶದ ಚಿನ್ನಕೋಟಪಲ್ಲಿಗೆ ಗ್ರಾಮಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ  8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

‘ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಕೊಲೆ ಪ್ರಕರಣದ ಹಿಂದಿನ 10 ವರ್ಷಗಳಲ್ಲಿ ನೂರಾರು ಅಸಹಜ ಸಾವಿನ ಪ್ರಕರಣಗಳು ವರದಿಯಾಗಿವೆ. ಈ ಎಲ್ಲ ಪ್ರಕರಣಗಳ ಸಮಗ್ರ ತನಿಖೆಗೆ ಕಾನೂನಾತ್ಮಕ ಹೋರಾಟ ಮಾಡಲಾಗುವುದು’ ಎಂದು ಪ್ರಗತಿಪರ ಸಂಘಟನೆಗಳ ಪ್ರಮುಖರು ತಿಳಿಸಿದರು. ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ದ್ರಾವಿಡ ಸಂಘದ ಅಧ್ಯಕ್ಷ ಅಗ್ನಿ ಶ್ರೀಧರ್, ‘ಸೌಜನ್ಯಾ ಪ್ರಕರಣ ಧರ್ಮಸ್ಥಳದ ಗ್ರಾಮಕ್ಕೆ ಮಾತ್ರ ಸೀಮಿತವಾಗಿಲ್ಲ. ಸೌಜನ್ಯಾ ರಾಜ್ಯದ ಎಲ್ಲ ಮನೆಗಳ ಮಗಳಾಗಿದ್ದಾಳೆ. ಈ ಪ್ರಕರಣದ ತಾರ್ಕಿಕ ಅಂತ್ಯಕ್ಕೆ ಕಾನೂನಾತ್ಮಕ ಹೋರಾಟ ನಮ್ಮ ಮುಂದಿರುವ ಆಯ್ಕೆ, ಈ ಪ್ರಕರಣದ ಬಳಿಕ ಅಲ್ಲಿ ಅಸಹಜ ಮರಣ ವರದಿಯಾಗಿಲ್ಲ. ಆದ್ದರಿಂದ, ಇದೊಂದೇ ಪ್ರಕರಣದ ಮರು ತನಿಖೆಯ ಬದಲು, ಅಲ್ಲಿ ಹಿಂದಿನ 10 ವರ್ಷಗಳ ಕಾಲ ನಡೆದ ಎಲ್ಲ ಅಸಹಜ ಮರಣ ಪ್ರಕರಣಗಳ ತನಿಖೆ ನಡೆಯಬೇಕು. ಆಗ ನಿಜವಾದ ಅಪರಾಧಿ ಯಾರೆಂಬುದು ತಿಳಿಯುತ್ತದೆ. ಹೈಕೋರ್ಟ್‌ನಲ್ಲಿ ಮುಂದಿನ 15 ದಿನಗಳ ಒಳಗೆ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು’ ಎಂದು ಹೇಳಿದರು. ನಮ್ಮತುಮಕೂರು.ಕಾಂನ…

Read More

ಬಿಬಿಎಂಪಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡ ನೌಕರರು ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಬೆಂಕಿ ಅವಘಡದಲ್ಲಿ ಬಿಬಿಎಂಪಿ ನೌಕರರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಸಂಬಂಧ ಗಾಯಾಳುಗಳ ಆರೋಗ್ಯ ವಿಚಾರಿಸಲು ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಬಂದಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಸಿಎಂ ಮಾಹಿತಿ ಪಡೆದರು. ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಬೆಂಕಿ ಬಿದ್ದಿದೆ: ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಈ ಅವಘಡ ಕುರಿತಂತೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಶಾರ್ಟ್ ಸರ್ಕ್ಯೂಟ್‌ ನಿಂದ ಬೆಂಕಿ ಬಿದ್ದಿದೆ ಎಂದು ಹೇಳುತ್ತಿದ್ದಾರೆ. ಆಕಸ್ಮಿಕ ಬೆಂಕಿಯಿಂದ ಕೆಲವರಿಗೆ ಗಾಯವಾಗಿದೆ. ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಬೆಂಕಿ ಬಿದ್ದಿದೆ. ನಾವು ಅಲ್ಲಿಗೆ ಹೋಗಿ ನೋಡಿದ ಮೇಲೆ ಎಲ್ಲಾ ತಿಳಿಯುತ್ತದೆ ಎಂದಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149…

Read More

ಬೆಂಗಳೂರು: ವಸಂತ ನಗರದಲ್ಲಿರುವ ಶಾಂಗ್ರಿಲಾ ಪಂಚತಾರಾ ಹೋಟೆಲ್‌ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಸಂಬಂಧ ಹೈಗೌಂಡ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಹೋಟೆಲ್‌ ನ ಇ- ಮೇಲ್‌ ಗೆ ಆಗಸ್ಟ್ 8ರಂದು ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸಿದ ಬಳಿಕವೇ ಹೋಟೆಲ್‌ ನ ಪ್ರತಿನಿಧಿ ಶುಕ್ರವಾರ ಠಾಣೆಗೆ ಬಂದು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ಹೋಟೆಲ್‌ ನಲ್ಲಿ ತಪಾಸಣೆ ಸಹ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ’ ಎಂದು ಪೊಲೀಸ್ ಮೂಲಗಳು ಹೇಳಿವೆ. ‘ಬೆಂಗಳೂರು ಮಾತ್ರವಲ್ಲದೇ ದೇಶದ ಹಲವೆಡೆ ಇರುವ ಶಾಂಗ್ರಿಲಾ ಹೋಟೆಲ್‌ ಗಳ ಇ-ಮೇಲ್‌ ಗೆ ಬೆದರಿಕೆ ಸಂದೇಶ ಬಂದಿರುವುದಾಗಿ ದೂರುದಾರ ತಿಳಿಸಿದ್ದಾರೆ. ಸಾಮೂಹಿಕವಾಗಿ ಸಂದೇಶ ಕಳುಹಿಸಿ ಹೋಟೆಲ್‌ ನವರಿಗೆ ಬೆದರಿಕೆಯೊಡ್ಡಿರುವುದು ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಆನೆ ದಂತಗಳನ್ನು ಮಾರಲು ಯತ್ನಿಸುತ್ತಿದ್ದ ಆರೋಪದಡಿ ಶ್ರೀಶೈಲ ಎಂಬಾತನನ್ನು ಆರ್. ಎಂ. ಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಜೆ. ಸಿ. ನಗರ ನಿವಾಸಿ ಶ್ರೀಶೈಲ, ಉದ್ಯಮಿಯೊಬ್ಬರ ಮನೆಯಲ್ಲಿ ಉದ್ಯಾನ ನಿರ್ವಹಣೆ ಕೆಲಸ ಮಾಡುತ್ತಿದ್ದ. ಸ್ನೇಹಿತ ಸಮೀವುದ್ದೀನ್ ನೀಡಿದ್ದ ದಂತವನ್ನು ವರ್ಷದಿಂದ ಮನೆಯಲ್ಲಿಟ್ಟುಕೊಂಡಿದ್ದ’ ಎಂದು ಪೊಲೀಸರು ಹೇಳಿದರು. ‘ಆರೋಪಿ ಯಶವಂತಪುರ ಕೈಗಾರಿಕೆ ಪ್ರದೇಶದ ಉಲ್ಲಾಸ್ ರಸ್ತೆಯಲ್ಲಿ ಆ. 10ರಂದು ನಿಂತಿದ್ದು, ಚೀಲದಲ್ಲಿ ಆನೆ ದಂತಗಳಿದ್ದವು. ಸ್ಥಳೀಯರೊಬ್ಬರು ಠಾಣೆಗೆ ಮಾಹಿತಿ ನೀಡಿದ್ದರು. ಈತನಿಂದ 7. 42 ಕೆ. ಜಿ ತೂಕದ 5 ದಂತಗಳನ್ನು ಜಪ್ತಿ ಮಾಡಲಾಗಿದೆ’ ಎಂದರು. ‘ಆನೆ ದಂತಗಳನ್ನು ನೀಡಿದ್ದ ಪ್ರಮುಖ ಆರೋಪಿ ಸಮೀವುದ್ದೀನ್ ವಾಪಸು ಒಯ್ದಿರಲಿಲ್ಲ. ದಂತಗಳನ್ನು ಎಲ್ಲಿಂದ ತರಲಾಗಿತ್ತು ಎಂಬುದು ಸಮೀವುದ್ದೀನ್ ಬಂಧನದ ಬಳಿಕವೇ ತಿಳಿಯಲಿದೆ’ ಎಂದು ಪೊಲೀಸರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe…

Read More

ಕಾಮಗಾರಿಗಳ ಕುರಿತು 4 ತಂಡ ರಚಿಸಿ ತನಿಖೆ ಮಾಡಿಸುತ್ತಿದ್ದೇವೆ ಎಂದು ಬೆಳಗಾವಿ ಸಾಂಬ್ರಾ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ಗುಣಮಟ್ಟದ ಕಾಮಗಾರಿ ಆಗಿದೆಯಾ ಇಲ್ವಾ ಗೊತ್ತಾಬೇಕು. ಬೆಂಗಳೂರಿನಲ್ಲಿ 4 ತಂಡ ರಚನೆ ಮಾಡಿ ತನಿಖೆ ಮಾಡಿಸುತ್ತಿದ್ದೇವೆ. ವರದಿ ಕೊಟ್ಟ ಬಳಿಕ‌ ತಪ್ಪು ಮಾಡಿಲ್ಲ ಅಂದ್ರೆ ಬಿಲ್ ಕೊಡುತ್ತೇವೆ. ಈ ರಾಜ್ಯವನ್ನು ಬಿಜೆಪಿಯವರು ಹಾಳು ಮಾಡಿದ್ದಾರೆ ಎಂದರು. ನಾವು 135 ಸ್ಥಾನ ಗೆದ್ದಿದ್ದಕ್ಕೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಎಷ್ಟೇ ದುಡ್ಡು ಖರ್ಚು ಮಾಡಿದರೂ ಬಿಜೆಪಿಯವರು ಗೆಲ್ಲಲಿಲ್ಲ. ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುವ ಗುರಿ ಇದೆ ಎಂದು ಬೆಳಗಾವಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More