Subscribe to Updates
Get the latest creative news from FooBar about art, design and business.
- ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
- ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
- ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
- ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ
- ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
- ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
- ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ: ಮುರಳೀಧರ ಹಾಲಪ್ಪ ಕಿಡಿ
- ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
Author: admin
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ ಮ್ಯಾಜಿಸ್ಟೀರಿಯಲ್ ತನಿಖೆಯ ನೇತೃತ್ವ ವಹಿಸಿರುವ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸದ್ಯ, ಜಿಲ್ಲಾಧಿಕಾರಿ ಜಗದೀಶ್ ನೀಡಿದ್ದ ನೋಟಿಸ್‌ಗೆ ಸಂಬಂಧಿಸಿದಂತೆ ಅವರು ತನಿಖೆಗೆ ಹಾಜರಾಗಿ ಪ್ರಶ್ನೆ ಗೆ ಉತ್ತರ ನೀಡಿ ಅವರು ತೆರಳಿದಿದ್ದಾರೆ. ಜಿಲ್ಲಾಧಿಕಾರಿಗಳು ಬಿ ದಯಾನಂದ ಅವರಿಗೆ, ಕಬ್ಬನ್ ಪಾರ್ಕ್ ಇನ್ಸ್‌ಪೆಕ್ಟರ್ ನಿಮಗೆ ಮಾಹಿತಿ ನೀಡಿದ್ದಾರಾ?. ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಬರುತ್ತಾರೆ ಎಂದು ನಿರೀಕ್ಷೆ ಇತ್ತಾ? ಒಂದು ವೇಳೆ ನಿರೀಕ್ಷೆ ಇಟ್ಟಿದ್ದಾರೆ ಯಾಕೆ ನೀವು ಸರಿಯಾದ ರೀತಿ ಬಂದೋಬಸ್ ಮಾಡಲಿಲ್ಲ?. ನೀವು ಆರ್ ಸಿಬಿ ತಂಡಕ್ಕೆ ಅಥವಾ ಡಿಎನ್ ಎ ತಂಡಕ್ಕೆ ನೋಟಿಸ್ ನೀಡಿದ್ದೀರಾ?. ನಿಮಗೆ ಸಾವಿನ ಬಗ್ಗೆ ಯಾವಾಗ ತಿಳಿಯಿತು? ಎಂದೆಲ್ಲಾ ಪ್ರಶ್ನೆಗಳನ್ನು ಕೇಳಿ…
ತಿಪಟೂರು: ತಾಲ್ಲೂಕಿನ ಹಳೇಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಶಾಲಾ ಮಕ್ಕಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜನಜಾಗೃತಿ ವೇದಿಕೆ ಸದಸ್ಯರಾದ ಶ್ಯಾಮಸುಂದರ್, ಈಗಿನ ಯುವ ಪೀಳಿಗೆ ಹಾಗೂ ವಿದ್ಯಾರ್ಥಿಗಳು ತಾವು ಸ್ವತಂತ್ರರು ಎಂಬ ಕುರುಡು ಭಾವನೆಗಳಿಗೊಳಪಟ್ಟು ಗಾಂಜಾ, ಹೆರಾಯಿನ್, ಬ್ರೌನ್ ಶುಗರ್ ಹಾಗೂ ಸಿಂಥಟಿಕ್ ಡ್ರಗ್ಸ್ ಗಳಂತ ಮಾಹಾಮಾರಿ ಮಾದಕ ವಸ್ತುಗಳಿಗೆ ಬಲಿಯಾಗಿ ತಮ್ಮ ದೈಹಿಕ ಹಾಗೂ ಮಾನಸಿಕ ಸ್ಥಿಮಿತಗಳನ್ನು ಕಳೆದುಕೊಳ್ಳುವುದರೊಟ್ಟಿಗೆ, ಆರ್ಥಿಕವಾಗಿ ದಿವಾಳಿಯಾಗುವುದರೊಟ್ಟಿಗೆ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡಿ ತಮ್ಮ ಅತ್ಯಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದರು. ತಾಲ್ಲೂಕು ಯೋಜನಾಧಿಕಾರಿ ಉದಯ್ ಕೆ. ಮಾತನಾಡಿ, ಸಾಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಎಲ್ಲಾ ವಿಭಾಗದಲ್ಲಿಯೂ ರಾಜ್ಯದ ಜನತೆಯ ಒಳಿತಿಗೆ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಲೇ ಬಂದಿದ್ದಾರೆ. ಗ್ರಾಮಾಭಿವೃದ್ಧಿ…
ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ–ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ –2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ. ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ಕುವೆಂಪು ಅವರ ಒಂದು…
ತುಮಕೂರು: ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ ಕುರಿತಂತೆ, ಜಿಲ್ಲಾ ಪಂಚಾಯತ್ ತುಮಕೂರು ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ, ಜಲ ಜೀವನ್ ಮಿಷನ್ ಯೋಜನೆಯ ಎಲ್ಲಾ 10 ತಾಲೂಕುಗಳ ಗುತ್ತಿಗೆದಾರರ ಸಭೆಯನ್ನು ಆಯೋಜನೆ ಮಾಡಲಾಗಿತ್ತು, ಸದರಿ ಸಭೆಯಲ್ಲಿ ಗುತ್ತಿಗೆದಾರರ ಸಮಸ್ಯೆಗಳನ್ನು ಕುರಿತಂತೆ, ಕಾಮಗಾರಿಗಳನ್ನು ತುರ್ತಾಗಿ ಮುಕ್ತಾಯಗೊಳಿಸಲು ಸುದೀರ್ಘವಾಗಿ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಯಿತು. ಗುತ್ತಿಗೆದಾರರು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೊಂಡು ವಿಳಂಬ ಮಾಡದೆ ನಿಗದಿತ ಕಾಲಾವಧಿಯಲ್ಲಿ ಮುಕ್ತಾಯ ಮಾಡಿ ಹರ್ ಘರ್ ಜಲ್ ಘೋಷಣೆ ಮಾಡಿ ಗ್ರಾಮ ಪಂಚಾಯಿತಿ್ಗೆ ಹಸ್ತಾಂತರ ಮಾಡಲು ತಿಳಿಸಲಾಯಿತು. ಬಾಕಿ ಇರುವ ಕಾಮಗಾರಿಗಳ ಬಿಲ್ ಗಳ ಪ್ರಸ್ತಾವನೆಗಳನ್ನು ಎಲ್ಲಾ ಉಪ ವಿಭಾಗಗಳಿಂದ ಪಡೆದು 1 ವಾರದೊಳಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಬಿಲ್ ಪಾವತಿಗೆ ಅಗತ್ಯ ಕ್ರಮವಹಿಸಲು ಕಾರ್ಯಪಾಲಕ ಇಂಜಿನಿಯರ್ ರವರಿಗೆ ಸೂಚನೆ ನೀಡಲಾಯಿತು. EOT ಪ್ರಸ್ತಾವನೆಗಳನ್ನು ಯೋಜನೆ ಮಾರ್ಗಸೂಚಿ ಪ್ರಕಾರ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ 15 ದಿವಸದೊಳಗಾಗಿ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಿ, ಅನುಮೋದನೆ ಪಡೆಯಲು ಕಾರ್ಯಪಾಲಕ ಇಂಜಿನಿಯರ್…
ಬೀದರ್: 2025–26 ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಳಿರಾಮ್ ಕುಶಾಲರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ ಇತ್ಯಾದಿ ಉತ್ತೇಜನ ಯೋಜನೆ, ಎಂಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಯೋಜನೆ, ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಉತ್ತೇಜನ ಯೋಜನೆ ಹಾಗೂ ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಹರಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅರ್ಹರು SSP (https://ssp.karnataka.gov.in ) ಹಾಗೂ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in ) ಮೂಲಕ ಆ.30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 89513 91061 ಗೆ ಸಂಪರ್ಕಿಸಬಹುದು ಎಂದು…
ಚಿಕ್ಕೋಡಿ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ರೇಣುಕಾ ಸಂಜಯ್ ಬಂಡಗಾರ (15) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಟವಾಡುತ್ತಿದ್ದ ವೇಳೆ ಏಕಾಏಕಿ ಈಕೆಗೆ ಹೃದಯಾಘಾತವಾಗಿದೆ. ತಕ್ಷಣ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಆಸ್ಪತ್ರೆಗೆ ರವಾನಿಸಲು ಯತ್ನಿಸಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತೀಚೆಗೆ ಸಣ್ಣ ವಯಸ್ಸಿನಲ್ಲೇ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಶಾಸಕರು ತಮಗೆ ನೀಡಲಾದ ಅನುದಾನದಿಂದ ಎಂದಿಗೂ ತೃಪ್ತರಾಗುವುದಿಲ್ಲ. ನಮ್ಮಲ್ಲಷ್ಟೇ ಅಲ್ಲ, ಎಲ್ಲಾ ಸರ್ಕಾರಗಳೂ ಈ ಸಮಸ್ಯೆಯನ್ನು ಎದುರಿಸುತ್ತವೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ. ಶಾಸಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಕಷ್ಟಸಾಧ್ಯ. ಹಾಗಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ಮುಖ್ಯಮಂತ್ರಿಗಳು ಶಾಸಕರ ಜೊತೆ ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದು ಹೇಳಿದರು. ಈ ಮೊದಲು ಶಾಸಕಾಂಗ ಸಭೆಯಲ್ಲಿ ತಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಶಾಸಕರಿಗೆ ಅವಕಾಶ ನೀಡಲಾಗಿತ್ತು. ಸಾಕಷ್ಟು ಚರ್ಚೆಗಳೂ ಆಗಿವೆ. ಇದೆಲ್ಲಾ ಸಣ್ಣಪುಟ್ಟ ಸಮಸ್ಯೆ, ಬಗೆಹರಿಯುತ್ತದೆ. ಹೈಕಮಾಂಡ್ ಮುಖ್ಯಮಂತ್ರಿಯವರಿಗೆ ಯಾವ ರೀತಿಯ ಸೂಚನೆ ನೀಡಿದೆಯೋ ಗೊತ್ತಿಲ್ಲ. ಒಂದು ವೇಳೆ ಸೂಚನೆ ನೀಡಿದ್ದರೆ ಅದರಂತೆ ನಡೆದುಕೊಳ್ಳುತ್ತಾರೆಂದು ತಿಳಿಸಿದರು. ಶಾಸಕರು ತಮ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಅದು ರಾಜ್ಯದ ಸಮಸ್ಯೆ ಅಲ್ಲ. ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಂದಕ್ಕೂ ತಲಾ 50 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳು…
ಇತ್ತೀಚಿಗೆ ತುಮಕೂರು ಮತ್ತು ಹಾಸನ ಜಿಲ್ಲೆಗಳ ಪ್ರವಾಸದಲ್ಲಿದ್ದ ಭಾರತ ಸರ್ಕಾರದ ರೈಲ್ವೇ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವರಾದ ಸೋಮಣ್ಣನವರಿಗೆ ತಿಪಟೂರು ಹಾಗೂ ಅರಸೀಕೆರೆಯ ತೆಂಗು ಬೆಳೆಯುವ ರೈತರು ತೆಂಗು ಬೆಳೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೀಟ ಮತ್ತು ರೋಗಗಳ ತೀವ್ರತೆಯ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣರವರ ಬಳಿ ವಿವರಿಸಿದ್ದರು. ಈ ಪರಿಸ್ಥಿತಿ ಮುಂದುವರೆದರೆ ಶೀಘ್ರದಲ್ಲಿಯೆ ಎಲ್ಲಾ ತೆಂಗಿನ ತೋಟಗಳು ನಾಶವಾಗುವ ಅಪಾಯವಿದೆ ಎಂಬ ಆತಂಕವನ್ನು ರೈತರು ವ್ಯಕ್ತಪಡಿಸಿದರು. ಕೃಷಿ ಕ್ಷೇತ್ರದಲ್ಲಿ ತೆಂಗಿನಕಾಯಿ ಬೆಳೆಗೂ ರಕ್ಷಣೆಯ ಅಗತ್ಯವಿದೆ ಹಾಗೂ ಜಿಲ್ಲೆಯ ತೆಂಗಿನ ಕೃಷಿಯ ಉಳಿವಿಗಾಗಿ ತ್ವರಿತ ಕ್ರಮಕೈಗೊಳ್ಳಬೇಕಾಗಿ ಸಚಿವರಲ್ಲಿ ಮನವಿ ಮಾಡಿಕೊಂಡರು. ತೆಂಗು ಬೆಳೆಯ ರೋಗದ ಪರಿಸ್ಥಿಯ ಗಂಬೀರತೆಯನ್ನು ಗಮನಿಸಿದ ಸಚಿವರು ತಕ್ಷಣ ಕ್ರಮಕೈಗೊಳ್ಳುವುದಾಗಿ ಮತ್ತು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವರ ಗಮನಕ್ಕೆ ತಂದು ಈ ಬಗ್ಗೆ ಕ್ರಮ ಜರುಗಿಸುವ ಭರವಸೆ ನೀಡಿದ್ದರು. ಈ ವಿಷಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಜಾಗೃತಗೊಳಿಸಲು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಿಗೆ ಅಧಿಕೃತ…
ಮಂಗಳೂರು: ರಾಜ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಅನ್ನೋದು ಸತ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದ ಬಜೆಟ್ ನಲ್ಲಿ ಒಂದು ಲಕ್ಷದ ಹದಿನಾರು ಸಾವಿರ ಕೋಟಿ ಅಂದಾಜು ಸಾಲ ಇದೆ. ಒಂದು ವೇಳೆ ಖಜಾನೆ ತುಂಬಿ ತುಳುಕಿದ್ರೆ ಬೆಲೆ ಏರಿಕೆ ಯಾಕೆ ಮಾಡ್ತಿದ್ರು? ಖಜಾನೆ ತುಂಬಿ ತುಳುಕಿದ್ರೆ ಸಾಲ ಯಾಕೆ ಮಾಡ್ತಿದ್ರು? ಎಂದು ಪ್ರಶ್ನಿಸಿದ್ದಾರೆ. ಶಾಸಕ ರಾಜುಕಾಗೆ ಹೇಳಿದ ಹಾಗೆ ಅಭಿವೃದ್ಧಿ ಆಗುತ್ತಿಲ್ಲ ಅನ್ನೋದು ಸ್ಪಷ್ಟವಾಗಿದೆ. ಎರಡು ವರ್ಷದ ಹಿಂದೆ ಈಡುಗಾಯಿ ಹೊಡೆದ ಕಾಮಗಾರಿ ಇನ್ನು ಆಗಿಲ್ಲ ಎಂದು ಸ್ವತಃ ರಾಜು ಅವರೇ ಹೇಳಿದ್ದಾರೆ. ಆಡಳಿತ ಪಕ್ಷದವರೇ ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಎಂದಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಟೆಹ್ರಾನ್: ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಮೂವರನ್ನು ಇರಾನ್ ಗಲ್ಲಿಗೇರಿಸಿದ್ದು, ಇದ್ರಿಸ್ ಅಲಿ, ಆಜಾದ್ ಶೋಜೈ ಮತ್ತು ರಸೂಲ್ ಅಹ್ಮದ್ ರಸೂಲ್ ಗಲ್ಲಿಗೇರಿಸಲಾದವರು ಎಂದು ಹೇಳಲಾಗಿದೆ. ಈ ಮೂವರು ಶಸ್ತ್ರಾಸ್ತ್ರಗಳನ್ನು ಇರಾನ್ ಗೆ ತರಲು ಯತ್ನಿಸಿದ್ದರು. ಈ ಮೂಲಕ ಇಸ್ರೇಲ್ ಗೆ ಸಹಕಾರ ಒದಗಿಸಿದ್ದರು ಎಂದು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಈ ಮೂವರಿಗೆ ಟರ್ಕಿ ಗಡಿಯ ಸಮೀಪದ ಉರ್ಮಿಯಾದಲ್ಲಿ ಬುಧವಾರ ಮರಣದಂಡನೆ ವಿಧಿಸಲಾಗಿದೆ. ಶಿಕ್ಷೆಗೆ ಗುರಿಯಾದ ಮೂವರು ನೀಲಿ ಜೈಲು ಸಮವಸ್ತ್ರದಲ್ಲಿರುವ ಫೋಟೋಗಳನ್ನು ಇರಾನ್ ನ ಕೋರ್ಟ್ ಹಂಚಿಕೊಂಡಿದೆ. ಇನ್ನೂ ಸಂಘರ್ಷದ ಸಮಯದಲ್ಲಿ, ಇಸ್ರೇಲ್ ಜೊತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಕನಿಷ್ಠ 700 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಇಸ್ರೇಲ್ ನ ಗುಪ್ತಚರ ಸಂಸ್ಥೆ ಮೊಸಾದ್ ಜೊತೆ ಸಂಪರ್ಕದಲ್ಲಿದ್ದ ಗೂಢಚಾರಿಯನ್ನು ಸಹ ಗಲ್ಲಿಗೇರಿಸಲಾಗಿದೆ. ಸುಪ್ರೀಂ ಕೋರ್ಟ್ ಸಂಪೂರ್ಣ ವಿಚಾರಣೆ ನಡೆಸಿ ಅಪರಾಧಿಗೆ ಈ ಶಿಕ್ಷೆ ವಿಧಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…