Subscribe to Updates
Get the latest creative news from FooBar about art, design and business.
- ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
- ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
- ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
- ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
- ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ, ಕಲಾತಂಡಗಳ ಮೆರುಗು
- ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
- ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
- ಬೀದರ್ | ಪ್ರತಿ ಟನ್ ಕಬ್ಬಿಗೆ 2,950ರೂ. ನಿಗದಿ: ಪ್ರತಿಭಟನೆ ಕೈ ಬಿಟ್ಟ ರೈತರು
Author: admin
ಚಿಕ್ಕೋಡಿ : ಲಕ್ಷ್ಮಣ ಸವದಿ ಪಕ್ಷ ಬಿಟ್ಟು ಹೋಗಿದ್ದು ಪೀಡೆ ತೊಲಗಿದಂತಾಗಿದೆ ಎಂದು ಸವದಿ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲಿ ಕಿಡಿಕಾರಿದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತಾನಾಡಿದ ಅವರು, ಸೋತವರನ್ನು ಪಕ್ಷ ಡಿಸಿಎಂ ಮಾಡಿತ್ತು. ಆದರೆ ಅವನು ಪಕ್ಷ ನಿಷ್ಠೆ ತೋರಿಸಿಲ್ಲ. ಬದಲಾಗಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದಾನೆ, ನಮಗೆ ಒಳ್ಳೆದಾಗಿದೆ. ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಹೋಗುತ್ತಾನೆ ಎಂಬ ಯೋಚನೆ ಸವದಿ ತಲೆಯಲ್ಲಿ ಇತ್ತು. ಆದರೆ ನನಗೆ ಮಂತ್ರಿ ಸ್ಥಾನವಿಲ್ಲದಿದ್ದರೂ ನಾನು ಪಕ್ಷದಲ್ಲೇ ಇದ್ದೇನೆ, ಉದ್ದ ಅಂಗಿ ಹಾಕಿರುವವನು ಪಕ್ಷದಿಂದ ಹೊರಗೆ ಹೋಗಿರುವುದು ನನಗೆ ಸಂತೋಷ ತಂದಿದೆ ಎಂದರು. ಒಂದೂವರೆ ವರ್ಷ ಸವದಿ ಮಂತ್ರಿ ಇದ್ದರೂ ಅಥಣಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಲಿಲ್ಲ. ಸವದಿಯನ್ನು ವಿಶೇಷ ವಿಮಾನದಲ್ಲಿ ಡಿಕೆಶಿ ಕರೆದುಕೊಂಡು ಹೋಗಿದ್ದಾನೆ. ಡಿಕೆಶಿ ಕುತಂತ್ರಿ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ದೇವನಹಳ್ಳಿ: ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ, ಅವರಿಗೆ 53-ವರ್ಷ ವಯಸ್ಸಾಗಿತ್ತು. ಕುಟುಂಬ ಮೂಲಗಳ ಪ್ರಕಾರ ಅವರು ಕಳೆದ ಕೆಲ ವಾರಗಳಿಂದ ಪದೇಪದೆ ಎದೆನೋವಿನಿಂದ ಬಳಲುತ್ತಿದ್ದರು ಮತ್ತು ಎರಡು ಬಾರಿ ಚಿಕಿತ್ಸೆಯೂ ಕೊಡಿಸಲಾಗಿತ್ತು. ಕಳೆದ ರಾತ್ರಿ ಅವರು ತೀವ್ರ ಎದೆನೋವಿಗೊಳಗಾಗಿದ್ದರಿಂದ ಕೂಡಲೇ ಅವರನ್ನು ನಾರಾಯಣ ಹೃದಯಾಲಯದಲ್ಲಿ ದಾಖಲಿಸಲಾಗಿದೆ. ದುರದೃಷ್ಟಶಾತ್ ಅವರನ್ನು ಉಳಿಸುವುದು ಸಾಧ್ಯವಾಗಿಲ್ಲ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದ ವೆಂಕಟಸ್ವಾಮಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಬಯಸಿದ್ದರು. ಆದರೆ ಟಿಕೆಟ್ ಸಿಗದ ಕಾರಣ ತೀವ್ರವಾಗಿ ನೊಂದುಕೊಂಡಿದ್ದರು. ಹೃದಯಾಘಾತಕ್ಕೆ ಅದು ಕೂಡ ಕಾರಣವಾಯಿತು ಅಂತ ಅವರ ಬೆಂಬಲಿಗರು ವಿಷಾದದಿಂದ ಹೇಳುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬಾಗಲಕೋಟೆ: ಶಾಸನಗಳ ಗತವೈಭವ ತಿಳಿಯಲು ಮತ್ತು ನಾಡಿನ ಪರಂಪರೆಯನ್ನು ಅರಿಯಲು ಸಾಹಿತಿಗಳ ಸಂಶೋಧನೆ ಮತ್ತು ಗ್ರಂಥಗಳು ಅವಶ್ಯಕ. ಅವರ ಸಾಲಿನಲ್ಲಿ ಡಾ. ವಿಜಯಕುಮಾರ ಕಟಗಿಹಳ್ಳಿಮಠ ಒಬ್ಬರಾಗಿದ್ದು ಅನೇಕ ಗ್ರಂಥಗಳ ಸಂಪಾದನೇ ಮತ್ತು ವಿಮರ್ಶೆಯ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಪೂಜ್ಯ ಶ್ರೀ ಪ್ರಭುಸ್ವಾಮಿ ಚರಂತಿಮಠ ಹೇಳಿದರು. ನಗರದ ಬಿ.ವಿ.ವಿ ಸಂಘದ ನೂತನ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ. ವಿಜಯಕುಮಾರ ಎಸ್. ಕಟಗಿಹಳ್ಳಿಮಠ ಅವರ ಗೌರವಾಭಿನಂದನೆ ಮತ್ತು ಅಂತರ್ಭುವಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಮರೇಗುದ್ದಿಯ ಅಡವಿಸಿದ್ಧೇಶ್ವರಮಠದ ಪೂಜ್ಯಶ್ರೀ ನಿರುಪಾಧೀಶ ಮಹಾಸ್ವಾಮಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುವೆಂಪು, ಬೇಂದ್ರೆ ಬಳಗದಂತೆ ಕಟಗಿಹಳ್ಳಿಮಠ ಅವರ ಶಿಷ್ಯಬಳಗವು ಅಪಾರವಾಗಿದೆ. ವಿದ್ಯಾರ್ಥಿಗಳು ದೇಶದ ಆಸ್ತಿಯಾಗಬೇಕಾದರೆ ಶಿಕ್ಷಣ ಮತ್ತು ಶಿಕ್ಷಕರ ಪಾತ್ರದೊಡ್ಡದು. ಕಟಗಿಹಳ್ಳಿಮಠ ಅವರು ಸುಸಂಸ್ಕೃತ ಕುಟುಂಬ ಸಾಹಿತ್ಯ, ಸಂಗೀತ, ಮತ್ತು ಕಲೆಯನ್ನು ನಿರಂತರ ಪ್ರೊತ್ಸಾಹಿಸುತ್ತಾ ಬಂದಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಖ್ಯಾಥಿತಿಯಾದ ಜಾನಪದ ವಿದ್ವಾಂಸ ಶ್ರೀರಾಮ ಇಟ್ಟಣ್ಣವರು ಮಾತನಾಡಿ ಡಾ.…
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಬೆನ್ನಲ್ಲೇ ಅಸಮಾಧಾನಗೊಂಡಿದ್ದ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಲಕ್ಷ್ಮಣ ಸವದಿ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್‍ಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಈ ವೇಳೆ ಮಾತನಾಡಿದ ಅವರು, ನಾನು ಸೋತರೂ ನನಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದರು. ಅದನ್ನು ಮರೆತು ಈಗ ಪಕ್ಷ ಬಿಡುತ್ತಿದ್ದಾರೆ ಎಂದು ಈಗ ಬಿಜೆಪಿ ನಾಯಕರು , ಟೀಕೆ ಮಾಡುತ್ತಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಒಂದು ವಚನ ಕೊಟ್ಟಿದ್ದರು. ಅಥಣಿಯಿಂದ 2023ರ ಚುನಾವಣೆಗೆ ಟಿಕೆಟ್ ನೀಡುತ್ತೇನೆ ಎಂದಿದ್ದರು. ಆದರೆ ಯಾವುದೇ ಮಾಹಿತಿ ಇಲ್ಲದೆ ನನ್ನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಯಾವುದೇ ಜವಾಬ್ದಾರಿಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು. ಕೊಟ್ಟ ಮಾತಿನಂತೆ ಈ…
ಬೆಳಗಾವಿ: ಇದು ಪ್ರಜಾಪ್ರಭುತ್ವದ ಬೆಳವಣಿಗೆಯ ದೃಶ್ಯ ಚುನಾವಣೆ ಸಂದರ್ಭದಲ್ಲಿ ಬಂದ ವೈರಿಗಳು ಜೋಡು ಎತ್ತಿನಂತೆ ಹೆಗಲ ಮೇಲೆ ಕೈ ಹಾಕಿ ಸಾಗುತ್ತಿರುವ ದೃಶ್ಯ ಬೆಳಗಾವಿಯಲ್ಲು ಕಂಡುಬಂದಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕರು ಶೇಠ್ ಹಾಗೂ ಭಾರತೀಯ ಜನತಾ ಪಕ್ಷದ ಶಾಸಕರಾದ ಅನಿಲ್ ಬೆನಕೆ ಇಬ್ಬರು ಹೆಗಲ ಮೇಲೆ ಕೈಹಾಕಿ ಮಾತನಾಡುತ್ತಿರುವ ದೃಶ್ಯ ಇಂದು ಕಂಡು ಬಂದಿದ್ದು ಈ ದೃಶ್ಯ ಎಲ್ಲರ ಗಮನ ಸಳದಿದೆ. ಬೆಳಗಾವಿಯ ರಾಜಕೀಯ ಪಡಸಾಲೆಯಲ್ಲಿ ಗುಸು ಗುಸು ಮಾತುಗಳು ಶುರುವಾಗಿವೆ. ಲಕ್ಷ್ಮಣ್ ಸೌದಿ ಅವರ ಜೊತೆ ಅನಿಲ್ ಬೆನಕೆ ಕೂಡ ಕಾಂಗ್ರೆಸ್ ಜೊತೆ ಕೈ ಜೋಡಿಸಲಿದ್ದಾರಾ? ಎಂಬ ಚರ್ಚೆ ಶುರುವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಗೋಕಾಕ್: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಪ್ರವಾಸಿ ಮಂದಿರ ಬಳಿ ನಡೆದಿದೆ. 6 ಜನ ಸ್ನೇಹಿತರು ಸೇರಿ ಮಧ್ಯಾಹ್ನ ಘಟಪ್ರಭಾ ನದಿಗೆ ಈಜಲು ಹೋಗಿದ್ದಾರೆ. ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿರಿಗೆರೆ ನಿವಾಸಿಗಳು ಎಂದು ಗುರುತಿಸಲಾಗಿದೆ. ಇದೀಗ 4 ಮಂದಿಯ ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಆದಷ್ಟು ಬೇಗನೆ ಪ್ರಕಟಿಸುವ ಸಲುವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮೌಲ್ಯ ಮಾಪನವನ್ನು ಇನ್ನಷ್ಟು ಚುರುಕು ಮಾಡಿದೆ. ಅಂದರೆ ಮೌಲ್ಯ ಮಾಪನಕ್ಕೆ ಶಿಕ್ಷಕರ ಕೊರತೆ ಇದ್ದ ಕಾರಣ ಪದವಿ ಪೂರ್ವ ಶಿಕ್ಷಣ ಇಲಾಖೆಯು ಖಾಸಗಿ ಶಿಕ್ಷಕರ ನೇಮಕವನ್ನು ಮಾಡಿಕೊಂಡು ಮೌಲ್ಯ ಮಾಪನವನ್ನು ಮಾಡಲಿದೆ. ಮೌಲ್ಯ ಮಾಪನ ಮುಗಿದರೆ ಆದಷ್ಟು ಬೇಗನೆ ಫಲಿತಾಂಶವನ್ನು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಆದರೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮೊದಲು ತಿಳಿಸಿದ ಹಾಗೆ ಏಪ್ರಿಲ್ ಮೂರನೇ ವಾರ ಅಥವಾ ಕೊನೆಯ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವುದಿಲ್ಲ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮುಂದಿನ ಮೇ ತಿಂಗಳ ಮೊದಲ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಲಾಗಿದೆ. ಆದರೆ ಈ ಬಾರಿಯು ಸಹ ಯಾವುದೇ ರೀತಿಯ ನಿಗದಿತ ದಿನಾಂಕವನ್ನು ಶಿಕ್ಷಣ ಇಲಾಖೆ ಸೂಚಿಸಿರುವುದಿಲ್ಲ. ಏಕೆಂದರೆ ಮೇ ಎರಡನೇ ವಾರದಲ್ಲಿ ಚುನಾವಣೆ ಮತ್ತು ಜೂನ್ 1 ರಿಂದ ಶಾಲಾ ಕಾಲೇಜು ಪ್ರಾರಂಭವಾಗುವುದರಿಂದ ಪದವಿ ಪೂರ್ವ ಶಿಕ್ಷಣ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತುಮಕೂರು ಕಛೇರಿಯಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ್ ಆರ್. ರವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಕೇಂದ್ರ ಸಿಬ್ಬಂದಿಗಳಾದ ತಬ್ರೇಜ್ ಖಾನ್, ಲಕ್ಷ್ಮಿಕಾಂತ್ ಜಿ.ಹೆಚ್. ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ದೆಹಲಿ : ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಏಪ್ರಿಲ್ 16 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಎಎಪಿ ಮುಖಂಡ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈಗಾಗಲೇ ಸಿಬಿಐ ಬಂಧಿಸಿದೆ. ಅಬಕಾರಿ ನೀತಿ 2021-22 ಅನ್ನು ಕಳೆದ ವರ್ಷ ನಲ್ಲಿ ರದ್ದುಪಡಿಸಲಾಗಿತ್ತು. ಮತ್ತು ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಲಾಗಿತ್ತು ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಿಲ್ಲಾ ವಕೀಲರ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ವಕೀಲರ ಸಂಘದ ಅಧ್ಯಕ್ಷರಾದ ದೊಡ್ಡಮನೆ ಗೋಪಾಲಗೌಡರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅಂಬೇಡ್ಕರ್ ಅವರು, ಎಲ್ಲ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಿಕೊಟ್ಟ ಮಹಾನ್ ಪುರುಷ , ಮನುಷ್ಯರನ್ನು ಮನುಷ್ಯರನ್ನಾಗಿ ನೋಡದೆ ವಸ್ತುವನ್ನಾಗಿ ನೋಡುತ್ತಿದ್ದ ಕಾಲದಲ್ಲಿ, ಎಲ್ಲರನ್ನು ಮನುಷ್ಯರನ್ನಾಗಿ ನೋಡುವ ರೀತಿ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿಕೊಟ್ಟ ಮಹಾನ್ ಪುರುಷರು ಎಂದು ತಿಳಿಸಿದರು. ಸಂವಿಧಾನದಲ್ಲಿ ನ್ಯಾಯಾಂಗ ವ್ಯವಸ್ಥೆಯನ್ನು ಉತ್ತುಂಗದಲ್ಲಿರಿಸಿದ ವ್ಯಕ್ತಿ ಬಾಬಾ ಸಾಹೇಬರು ಎಂದರೆ ತಪ್ಪಾಗಲಾರದು. ಭಾರತವು 75 ವರ್ಷಗಳಿಂದಲೂ ಯಾವುದೇ ಸಮಸ್ಯೆಯಿಲ್ಲದೆ ಆಡಳಿತ ವ್ಯವಸ್ಥೆ ನಡೆಸುತ್ತಿದೆ ಎಂದರೆ, ನಮ್ಮ ಸಂವಿಧಾನದ ಶಕ್ತಿ ಎಂಥಹದು ಎಂದು ತಿಳಿಯುತ್ತದೆ ಎಂದು ತಿಳಿಸಿದರು. ನಮ್ಮ ಸಂವಿಧಾನದ ಮೂಲಕ ಶೋಷಿತ ಸಮಾಜಕ್ಕೆ ನ್ಯಾಯ ಒದಗಿಸಿದ ವ್ಯಕ್ತಿ ಅಂಬೇಡ್ಕರ್ ಆಗಿದ್ದು, ಅವರು ಮಹಾನ್ ರಾಷ್ಟೀಯವಾದಿ ಎಂದ ಅವರು, ಅಂಬೇಡ್ಕರ್ ಅವರನ್ನು ಫೋಟೋ ಇಟ್ಟು ಪೂಜೆ ಮಾಡದೆ,…