Author: admin

2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಮಹತ್ವದ ಸಭೆ ಇಂದು ದೆಹಲಿಯಲ್ಲಿ ನಡೆಯಲಿದೆ. ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರತ್ ಪವಾರ್ ಅವರು ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಲಿದ್ದಾರೆ. ನಿನ್ನೆ ಶರತ್ ಪವಾರ್ ಅವರು ಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಪ್ರತಿಪಕ್ಷಗಳು ಒಗ್ಗಟ್ಟಾಗಿವೆ  ಎಂದು  ಸಭೆಯ ನಂತರ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದರು. ಇದು ಆರಂಭವಷ್ಟೇ, ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್ ಮತ್ತು ಇತರರನ್ನು ತನ್ನೊಂದಿಗೆ ಉಳಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಶರತ್ ಪವಾರ್ ಹೇಳಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿ ವಿರುದ್ಧ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಒಂದೇ ಜಂಟಿ ಅಭ್ಯರ್ಥಿ ಎಂಬ ಸೂತ್ರವನ್ನು ಮುಂದಿಡುತ್ತಿದ್ದಾರೆ. ಆಗ ಮಾತ್ರ ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಲು ಸಾಧ್ಯ ಎಂದು ನಿನ್ನೆ ನಿತೀಶ್ ಕುಮಾರ್ ಕಾಂಗ್ರೆಸ್ ನಾಯಕತ್ವಕ್ಕೆ ಮಾಹಿತಿ ನೀಡಿದ್ದಾರೆ. ನಿತೀಶ್ ಕುಮಾರ್ ಅವರು ಇಂದು ಇತರ ವಿರೋಧ ಪಕ್ಷದ ನಾಯಕರೊಂದಿಗೆ…

Read More

ಇಂದು ರಾಷ್ಟ್ರೀಯ ಜಲ ದಿನ. ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ದೇಶದಲ್ಲಿ ಜಲ ದಿನವನ್ನಾಗಿ ಆಚರಿಸಲಾಗುತ್ತದೆ. ಜಲಸಂಪನ್ಮೂಲ ಅಭಿವೃದ್ಧಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯನ್ನು ಏಪ್ರಿಲ್ 14ರಂದು ರಾಷ್ಟ್ರೀಯ ಜಲ ದಿನವನ್ನಾಗಿ ಆಚರಿಸಲು 2016ರಲ್ಲಿ ಅಂದಿನ ಕೇಂದ್ರ ಸಚಿವ ಸಂಪುಟ ನಿರ್ಧರಿಸಿತ್ತು. ಅಂದಿನ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಅವರು ಈ ಕುರಿತು ಘೋಷಣೆ ಮಾಡಿದ್ದರು. ಅಂಬೇಡ್ಕರ್ ಅವರ ಜನ್ಮದಿನದಂದು ಅಮೂಲ್ಯವಾದ ಜಲಸಂಪನ್ಮೂಲ ನಿರ್ವಹಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಲೋಚನೆ ಇದೆ. ಅಂಬೇಡ್ಕರ್ ಅವರ ಪಾತ್ರ ಸಂವಿಧಾನ ರಚನೆಯಲ್ಲಿ ಮಾತ್ರವಲ್ಲ. ದೇಶದ ಜಲಸಂಪನ್ಮೂಲ ನಿರ್ವಹಣೆಗಾಗಿ ಅಖಿಲ ಭಾರತ ನೀತಿಯನ್ನು ರೂಪಿಸುವಲ್ಲಿ ಅಂಬೇಡ್ಕರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅಂಬೇಡ್ಕರ್ ಅವರು ಹಿರಾಕುಡ್ ಸೇರಿದಂತೆ ಯೋಜನೆಗಳ ಮುಖ್ಯ ಯೋಜಕರೂ ಆಗಿದ್ದರು. 1942-46ರ ಅವಧಿಯಲ್ಲಿ ದೇಶದ ಜಲಸಂಪನ್ಮೂಲವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಲು ಹೊಸ ಜಲವಿದ್ಯುತ್ ನೀತಿಯನ್ನು ರೂಪಿಸುವಲ್ಲಿ ಅಂಬೇಡ್ಕರ್‌ರ ಕೊಡುಗೆ ಅಮೂಲ್ಯವಾದುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ನಾ ದಿವಾಕರ ಭಾರತ ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಭೌಗೋಳಿಕ ಅಖಂಡತೆ ಹಾಗೂ ರಾಷ್ಟ್ರೀಯ ಭದ್ರತೆಯ ಆಶಯಗಳ ನಡುವೆಯೂ ಆಂತರಿಕವಾಗಿ ಭಾರತೀಯ ಸಮಾಜ ತನ್ನ ಪ್ರಾಚೀನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಕೊಂಡಿಗಳನ್ನು ಇಂದಿಗೂ ಜೀವಂತವಾಗಿಯೇ ಇರಿಸಿಕೊಂಡಿರುವುದರಿಂದ, ಸಾಂವಿಧಾನಿಕವಾಗಿ ನಿಷೇಧಿಸಲಾಗಿರುವ ಅಸ್ಪೃಶ್ಯತೆ-ಅಸಮಾನತೆಗಳು ಇನ್ನೂ ಜೀವಂತವಾಗಿದೆ. ಹಾಗೆಯೇ ಸಂವಿಧಾನವು ಈ ದೇಶದ ಸಾರ್ವಭೌಮ ಪ್ರಜೆಗಳಿಗೆ ವಿಧ್ಯುಕ್ತವಾಗಿ ನೀಡುವ ಸಮಾನತೆಯ ನೆಲೆಗಳು ಮೇಲ್ನೋಟಕ್ಕೆ ಸುಂದರವಾಗಿ ಕಾಣುವಂತಿದ್ದರೂ, ಒಳಹೊಕ್ಕು ನೋಡಿದಾಗ ಮಹಿಳಾ ಸಂಕುಲದ ನಡುವೆ, ಆದಿವಾಸಿಗಳ ಆವರಣದಲ್ಲಿ, ಶೋಷಿತ ಸಮುದಾಯಗಳ ಅಂಗಳದಲ್ಲಿ, ಅಲ್ಪಸಂಖ್ಯಾತರ ಚೌಕಟ್ಟುಗಳಲ್ಲಿ ಹಾಗೂ ದುಡಿಯುವ ವರ್ಗಗಳ ಜೋಪಡಿಗಳ ನಡುವೆ ಅಸಮಾನತೆಯ ನೆಲೆಗಳು ತಮ್ಮ ಸೂಕ್ಷ್ಮ ಎಳೆಗಳನ್ನು ಇಂದಿಗೂ ಉಳಿಸಿಕೊಂಡಿರುವುದನ್ನು ಗುರುತಿಸಬಹುದು. ಸಂವಿಧಾನಾತ್ಮಕವಾಗಿ ನಿಷೇಧಿತವಾಗಿರುವ ಅಸ್ಪೃಶ್ಯತೆಯ ಆಚರಣೆಗಳು ರೂಪಾಂತರ ಹೊಂದಿ ಹೊಸ ಆಯಾಮಗಳನ್ನು ಪಡೆದುಕೊಳ್ಳುತ್ತಿರುವಂತೆಯೇ, ಶ್ರೇಣೀಕೃತ ಜಾತಿ ವ್ಯವಸ್ಥೆ ಮತ್ತು ವರ್ಣಾಶ್ರಮ ಧರ್ಮದ ಮೂಲ ಸೆಲೆಗಳು ತಮ್ಮ ಮೂಲ ತಾತ್ವಿಕ ಸ್ವರೂಪದಲ್ಲೇ ಉಳಿದುಕೊಂಡಿವೆ. ಈ ಜಟಿಲ ಸಿಕ್ಕುಗಳ ನಡುವೆಯೇ ಭಾರತ ಮತ್ತೊಂದು ಚಾರಿತ್ರಿಕ ದಿನವನ್ನು ಆಚರಿಸುತ್ತಿದೆ. ಏಪ್ರಿಲ್‌…

Read More

ಬೆಂಗಳೂರು: ಈ ನಡುವೆ ಬಿಜೆಪಿಯಲ್ಲಿ ಟಿಕೆಟ್‌ ಘೋಷಣೆಯಾದ ಬಳಿಕ ಹಲವು ಮಂದಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.  ಬಿಜೆಪಿ ಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಇಂದು ಬೆಂಗಳೂರಿಗೆ ಆಗಮಿಸಿ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಹಾಲಿ ಎಂಎಲ್‌ಸಿ ಚನ್ನರಾಜ್‌ ಜೊತೆಗೆ ಆಗಮಿಸಿದ್ದು, ಇದೇ ವೇಳೆ ಅವರು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಕ್ಷ್ಮಣ ಸವದಿ ಅವರು ಇಂದು ಸಂಜೆ ಸಭಾಪತಿಗಳನ್ನು ಭೇಟಿಯಾಗಿ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಇದೇ ವೇಳೆ ಅವರು ಬಿಜೆಪಿ ಪಾರ್ಟಿಯ ಪ್ರಾಥಮಿಕ ಸ್ಥಾನಕ್ಕೂ ಕೂಡ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಮುಂದಿನ ರಾಜಕೀಯದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುಂಚೆ ನಿನ್ನೆ ಕಾಂಗ್ರೆಸ್‌ ಶಾಸಕ ರಾಜು ಕೂಡ ಸವದಿ ಜೊತೆಗೆ ಮಾತನಾಡಿದ್ದರು, ಈ ಮೂಲಕ ಅವರನ್ನು ಕಾಂಗ್ರೆಸ್‌ಗೆ   ಕರೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರು ಎನ್ನುವ ಸಂದೇಶವನ್ನು ಅವರು ತಿಳಿಸಿದ್ದು. ಬೆಳಗಾವಿಯಲ್ಲಿರುವ…

Read More

ದೇಶದಲ್ಲಿ 10,150 ಮಂದಿಗೆ ಹೊಸದಾಗಿ ಕೊರೊನಾ  ಸೋಂಕು ತಗುಲಿದೆ.ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಸಕ್ರಿಯ ಸೋಂಕಿತರ ಸಂಖ್ಯೆ 44,998 ಇದೆ, ಬುಧವಾರ ದೇಶದಲ್ಲಿ 7,830 ಮಂದಿಗೆ ಕೊರೊನಾ ಸೋಂಕು ತಗುಲಿತ್ತು. ಮಂಗಳವಾರ 5,675 ಮಂದಿ ಸೋಂಕಿಗೆ ತುತ್ತಾಗಿದ್ದರು. ಇದೀಗ  ಕೊರೊನಾ    ಬಹುಬೇಗ ಎಲ್ಲ ಕಡೆ ಹರಡುತ್ತಿದೆ. ದೈನಂದಿನ ಧನಾತ್ಮಕತೆಯ ದರ ಶೇ.4.42ರಷ್ಟಿದ್ದರೆ, ವಾರದ ಧನಾತ್ಮಕತೆಯ ದರ ಶೇ. 4.02ರಷ್ಟಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳು ತಗುಲಿದವರ ಸಂಖ್ಯೆ   ಶೇ.0.10ಯಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್​-19 ಚೇತರಿಕೆ ದರವು ಶೇ.98.71ರಷ್ಟಿದೆ, ಸಾವಿನ ಪ್ರಮಾಣ ಶೇ.1.19ರಷ್ಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,42,10,127ಕ್ಕೆ ಏರಿಕೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು  ತೊಡಗಿಸಿಕೊಳ್ಳುವುದು  ನಿಷೇಧಿಸಲಾಗಿದೆ. ರಾಜಕೀಯ ಪಕ್ಷಗಳ  ಮೆರವಣಿಗೆ  , ಸಾರ್ವಜನಿಕ ಭಾಷಣ, ಮನೆ ಮನೆಗೆ ಭೇಟಿ ನೀಡುವುದು, ಪಕ್ಷದ ಚಿಹ್ನೆಯಿರುವ ಪುಸ್ತಕ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರ ಹಂಚುವುದು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎ ದಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆ ಟಿಕೆಟ್​ ಕೈ ತಪ್ಪಿದ್ದಕ್ಕೆ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಎಂಪಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮೂಡಿಗೆರೆಯಿಂದ ಕಣಕ್ಕಿಳಿಯಲು ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದ್ರೆ, ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಬಿಜೆಪಿ ಹೈಕಮಾಂಡ್​ ದೀಪಕ್ ದೊಡ್ಡಯ್ಯ ಎನ್ನುವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಇದರಿಂದ ಅಸಮಧಾನಗೊಂಡ ಎಂಪಿ ಕುಮಾರಸ್ವಾಮಿ ಅವರು ಇಂದು(ಏಪ್ರಿಲ್ 13) ಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ.ಪಿ.ಕುಮಾರಸ್ವಾಮಿ, ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವೂ ಗೆಲ್ಲುವುದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತಿಳಿಸುತ್ತೇನೆ. ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಬೆಂಗಳೂರು: ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಗೆ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಮುಂಬೈ: 12 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ  ಅತ್ಯಾಚಾರ ಎಸಗಿದ ಆರೋಪದಡಿ ಶಾಲೆಯ ಗಣಿತ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. 57 ವರ್ಷದ ಆರೋಪಿ ಶಿಕ್ಷಕ ಕಳೆದ ಮೂರು ತಿಂಗಳಿನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ ಆರನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಕೆಲವು ದಿನಗಳಿಂದ ಆಕೆಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಆಕೆಯ ತಾಯಿ ಏನಾಯಿತು ಎಂದು ವಿಚಾರಿಸಿದಾಗ ಸಂತ್ರಸ್ತೆ ತನಗಾದ ಅನ್ಯಾಯವನ್ನು ವಿವರಿಸಿದ್ದಾಳೆ . ಏಪ್ರಿಲ್ 5ರಂದು ಆರೋಪಿಯು ಪರೀಕ್ಷೆಯ ನಂತರ ತನ್ನನ್ನು ಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ವರ್ಷ ಡಿಸೆಂಬರ್ 10ರಿಂದ ತನ್ನನ್ನು ಮದುವೆಯಾಗುವುದಾಗಿ ಹೇಳಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ನಮ್ಮ ನಡುವಿನ ಸಂಬಂಧವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಕೊರಟಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಏ.13 ರಿಂದ ಏ.20 ರವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಈ ಅವಧಿಯಲ್ಲಿ ಸಾರ್ವಜನಿಕ ರಜಾ ದಿನಗಳು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಯಾವಕಾಶವಿದ್ದು, ಈ ಅವಧಿಯಲ್ಲಿ ಜನಸಂದಣಿ ನಿಯಂತ್ರಿಸಲು ಕೊರಟಗೆರೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಛೇರಿಯ ಸುತ್ತಮುತ್ತ 100 ವೀಟರ್ ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಚುನಾವಣಾಧಿಕಾರಿ ಹಾಲಸಿದ್ದಪ್ಪ ಪೂಜೇರಿ ತಿಳಿಸಿದರು. ಅವರು ಕೊರಟಗೆರೆ ತಾಲೂಕು ಕಛೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ 134 ಕೊರಟಗೆರೆ (ಎಸ್.ಸಿ) ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿ ಏ.13 ರಿಂದ ಏ.20 ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭರ್ತಿ ಮಾಡಿದ ನಾಮಪತ್ರ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ ಇತರೆ ದಿನಗಳಲ್ಲಿ ನಿಗದಿಪಡಿಸಿದ ನಮೂನೆಗಳಲ್ಲಿ ಸಲ್ಲಿಸಬಹುದಾಗಿದೆ, ಅಭ್ಯರ್ಥಿಗಳು ವೆಬ್ ಸೈಟ್  ಅಥವಾ   ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ನಾಮಪತ್ರ ಸಲ್ಲಿಸಲು ಏ.20 ರ…

Read More