Author: admin

ತುಮಕೂರು: ಮರಳೇನಹಳ್ಳಿ ಗೋಮಾಳದಲ್ಲಿರುವ ಹಿಂದುಳಿದ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ 1ರ ಮರಳೇನಹಳ್ಳಿ ಗೋಮಾಳದಲ್ಲಿ ಹಿಂದುಳಿದ ಸಮುದಾಯಗಳಾದ (ಲಿಂಗಾಯತ, ತಿಗಳ, ಕುರುಬ ಮತ್ತು ಗೊಲ್ಲ) ಕಳೆದ 70 ವರ್ಷಗಳಿಂದಲೂ 80ಕ್ಕೂ ಅಧಿಕ ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿನ ಜನರು ದಿನನಿತ್ಯ ಸಂಚರಿಸುವ ರಸ್ತೆಯನ್ನು ಸ್ಥಳೀಯ ಪ್ರಭಾವಿಗಳಾದ ನವೀನ್ ಲ್ಯಾಂಡ್ ಮಾಫಿಯಾ ವಿನಾಕಾರಣ ತಂತಿ ಕಾಂಪೌಂಡ್ ನಿರ್ಮಿಸಿ ಮರಳೇನಹಳ್ಳಿ ಗೋಮಾಳಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸರ್ವೇ ನಂ, 62/2 ರಲ್ಲಿ 1.16 ಗುಂಟೆ ಇದ್ದು 5-08.00 ಗುಂಟೆ ಜಮೀನನ್ನು 3 ತಿಂಗಳ ಹಿಂದೆ ಖರೀದಿಸಿ ಗೋಮಾಳ ರಸ್ತೆಗೆ ಅಡ್ಡ ಕಾಂಪೌಂಡ್ ಹಾಕಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದಾರೆ. ಮರಳೇನಹಳ್ಳಿ ಗೋಮಾಳದಲ್ಲಿ ವಾಸಿಸುವ ಜನರಿಗೆ ಇರುವುದಿಲ್ಲ. ಈ ಹಿಂದೆ ತುಮಕೂರು ಮಹಾನಗರ ಪಾಲಿಕೆ 2013-14ನೇ ಸಾಲಿನ ವಿಶೇಷ ಅನುದಾನದ 100 ಕೋಟಿಯಲ್ಲಿ 43 ಲಕ್ಷ ರೂಗಳಲ್ಲಿ ಜಲ್ಲಿ ರಸ್ತೆ ಹಾಕಿರುವುದು ಸರಿಯಷ್ಟೇ. ಆದರೂ ಸಹ ಪ್ರಭಾವಿಗಳು ಸರ್ವೇ ನಂ, 62/2…

Read More

ತುಮಕೂರು: ಸುಪ್ರೀಂಕೋರ್ಟ್‌ನ ಆದೇಶದಂತೆ ಹಾಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಬೇಕು, ನೇರ ಪಾವತಿ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಅಕ್ಷಯ್ ಎಂ.ಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಮಂಜುಳ ಅವರ ನೇತೃತ್ವದಲ್ಲಿ ನೂರಾರು ಹೊರಗುತ್ತಿಗೆ ನೌಕರರು ಜಿಲ್ಲಾಸ್ಪತ್ರೆಯಿಂದ ಟೌನ್‌ಹಾಲ್, ಅಶೋಕರಸ್ತೆ, ಚರ್ಚ್ ಸರ್ಕಲ್, ಗುಬ್ಬಿಸರ್ಕಲ್, ಶ್ರೀರಾಮನಗರ ರಸ್ತೆ, ಡಿ.ಹೆಚ್.ಓ ಕಚೇರಿ ಮುಂಭಾಗದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಸೇವಾಭದ್ರತೆ ಕಲ್ಪಿಸಿ: ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಎಂ.ಗೌಡ, ಆಯುಷ್ಮಾನ್, ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದು,…

Read More

ಬೆಂಗಳೂರು: ಹಿರಿಯ ಕೆಎಎಸ್ (KAS) ಅಧಿಕಾರಿಯೊಬ್ಬರ ವಿರುದ್ಧ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ ಆಯುಕ್ತ ಹಾಗೂ ಹಿರಿಯ ಕೆಎಎಸ್ ಅಧಿಕಾರಿ ಡಿ.ಬಿ. ನಟೇಶ್ ಅವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಫೆಬ್ರವರಿ 18ರಂದು ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಅಧಿಕಾರಿ ಡಿ.ಬಿ. ನಟೇಶ್ ಅವರ ಫೋಟೋಗಳನ್ನು ಬಳಸಿ ನಕಲಿ ದಾಖಲೆಗಳು ಮತ್ತು ಆಡಿಯೋ ಕ್ಲಿಪ್‌ಗಳನ್ನು ಸೃಷ್ಟಿಸಲಾಗಿದೆ. ಈ ನಕಲಿ ದಾಖಲೆಗಳನ್ನು ಸ್ನೇಹಮಯಿ ಕೃಷ್ಣ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಪ್‌ಲೋಡ್ ಮಾಡಿ, ಅಧಿಕಾರಿಯ ಮಾನಹಾನಿ ಮಾಡುವ ಉದ್ದೇಶದಿಂದ ಸುಳ್ಳು ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮುಂಬಡ್ತಿಗಾಗಿ ಕೋಟ್ಯಂತರ ರೂಪಾಯಿ ಲಂಚ ನೀಡಲಾಗಿದೆ ಎಂಬರ್ಥದ ಸ್ಫೋಟಕ ಆರೋಪಗಳನ್ನು ಇತ್ತೀಚೆಗೆ ಕೃಷ್ಣ ಅವರು ಮಾಡಿದ್ದರು.…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ (NOHP) ಅಡಿಯಲ್ಲಿ ವಿಶೇಷ ಜಾಗೃತಿ ಮತ್ತು ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂತಪುರ ಸಮುದಾಯ ಆರೋಗ್ಯ ಕೇಂದ್ರದ ದಂತ ವೈದ್ಯಾಧಿಕಾರಿಗಳಾದ ಡಾ. ರೇಣುಕಾ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಣ್ಣ ಮಕ್ಕಳಿಗೆ ಹಲ್ಲಿನ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದರು. ದಿನಕ್ಕೆ ಎಷ್ಟು ಬಾರಿ ಹಲ್ಲುಜ್ಜಬೇಕು?: ಮಕ್ಕಳು ಪ್ರತಿದಿನ ಕನಿಷ್ಠ ಎರಡು ಬಾರಿ ಹಲ್ಲುಜ್ಜುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಅತಿಯಾದ ಚಾಕ್ಲೆಟ್ ಸೇವನೆ ಮತ್ತು ಎಣ್ಣೆ ಪದಾರ್ಥಗಳ ಬಳಕೆಯಿಂದ ಹಲ್ಲುಗಳ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಸಿದ ಅವರು, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸಲಹೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಡಾ. ರೇಣುಕಾ ಅವರು ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳಿಗೆ ಉಚಿತ ಬ್ರಶ್‌ಗಳನ್ನು ವಿತರಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.…

Read More

ಕೊರಟಗೆರೆ: ಫೆ.2ರಂದು ಕೊರಟಗೆರೆ ಪಟ್ಟಣದ ಸಿವಿಲ್ ಬಸ್ ನಿಲ್ದಾಣದಲ್ಲಿ ಹೊಳವನಹಳ್ಳಿ ಗ್ರಾಮದ ಅಶೋಕ ಎಂಬುವರು ಬಸ್ಸು ಹತ್ತುವಾಗ ಅಶೋಕರವರ ಜೇಬಿನಿಂದ OPPO ಕಂಪನಿಯ ಸುಮಾರು 25,000/-ರೂ ಬೆಲೆ ಬಾಳುವ ಮೊಬೈಲ್ ಪೋನ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ದರು. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೊ.ನಂ–27/2026, ಕಲಂ–303(2), 313, 317(4) ಬಿ.ಎನ್.ಎಸ್–2023 ರೀತ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ. ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಮತ್ತು ಪುರುಷೋತ್ತಮ.ಎಂ.ಎಲ್.ರವರ ನೇತೃತ್ವದಲ್ಲಿ, ಮಧುಗಿರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮಂಜುನಾಥ ರವರ ಮಾರ್ಗಸೂಚನೆ ಮೇರೆಗೆ, ಕೊರಟಗೆರೆ ವೃತ್ತ ನಿರೀಕ್ಷಕರಾದ ಅನಿಲ್.ಆರ್.ಪಿ., ಕೊರಟಗೆರೆ ಪೊಲೀಸ್ ಠಾಣಾ ಪಿ.ಎಸ್.ಐ ತೀರ್ಥೇಶ್, ವೈ.ಜಿ.ಕೋಳಾಲ ಪೊಲೀಸ್ ಠಾಣಾ ಪಿ.ಎಸ್.ಐ. ಅಭಿಷೇಕ್.ಎಸ್.ಆರ್., ಹಾಗೂ ಕೊರಟಗೆರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಗಂಗಾಧರ್, ಪ್ರಸನ್ನ ಕುಮಾರ್, ಮಹೇಶ್, ಸಂಜೀವರೆಡ್ಡಿ, ದೊಡ್ಡಲಿಂಗಯ್ಯ, ಜಗದೀಶ್ ಕುಮಾರ್, ಪಾಂಡುರಂಗ ರಾವ್, ರವಿ,…

Read More

ಬಳ್ಳಾರಿ:   ಜಿಲ್ಲೆಯಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ 15,652 ಹಾಗೂ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ 23,271 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಹಿತದೃಷ್ಟಿಯಿಂದ ಜಿಲ್ಲಾಡಳಿತ ವತಿಯಿಂದ ಸ್ನೇಹಮಹಿ ವಾತಾವರಣ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಹೇಳಿದರು. ಗುರುವಾರ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತಂತೆ ಪರೀಕ್ಷೆಗಳ ವೇಳಾಪಟ್ಟಿ, ವಿದ್ಯಾರ್ಥಿಗಳ ಸಂಖ್ಯೆ, ಭದ್ರತಾ ವ್ಯವಸ್ಥೆಗಳು, ಉಚಿತ ಸಾರಿಗೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮಗಳ ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ದ್ವಿತೀಯ ಪಿಯುಸಿ: ದ್ವಿತೀಯ ಪಿಯುಸಿ ಪರೀಕ್ಷೆ–1 ಇದೇ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 15,652 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಇವರಲ್ಲಿ 13,286 ಹೊಸ ಅಭ್ಯರ್ಥಿಗಳು(ಹುಡುಗ-5,580 ಮತ್ತು ಹುಡುಗಿಯರು-7,706), 1,899 ಮರು ಪರೀಕ್ಷಾರ್ಥಿಗಳು, 467 ಖಾಸಗಿ ಅಭ್ಯರ್ಥಿಗಳು ಒಳಗೊಂಡಿದ್ದಾರೆ. ಬಳ್ಳಾರಿ ನಗರ-12, ಸಿರುಗುಪ್ಪ-03, ಸಂಡೂರು-02, ಕಂಪ್ಲಿ-02…

Read More

ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು “ದುರದೃಷ್ಟಕರ ಘಟನೆ” ಎಂದು ಬಣ್ಣಿಸಿರುವ ಅವರು, ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಭಾವಚಿತ್ರ ಮೆರವಣಿಗೆಯ ಮೇಲೆ ದುಷ್ಕರ್ಮಿಗಳು ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದಾರೆ. ಈ ಸಂಘರ್ಷದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸಿಎಂ ಹೇಳಿದ್ದೇನು? ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಕರ್ನಾಟಕದ ಶಕ್ತಿ ಇರುವುದು ಏಕತೆ ಮತ್ತು ಸಹೋದರತ್ವದಲ್ಲಿ. ಜನರು ಯಾವುದೇ ರೀತಿಯ ಪ್ರಚೋದನೆ ಅಥವಾ ಅಪಪ್ರಚಾರಗಳಿಗೆ ಕಿವಿಗೊಡಬಾರದು. ರಾಜ್ಯದಲ್ಲಿ ಶಾಂತಿ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯ ಆರೋಪಿ ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.…

Read More

ಬಾಗಲಕೋಟೆ: ನಗರದಲ್ಲಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮುಖ್ಯ ಆರೋಪಿ ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸಿದ್ಧಾರ್ಥ್ ಗೋಯೆಲ್, “ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈವರೆಗೆ 8 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಘಟನೆಯ ಮುಖ್ಯ ಆರೋಪಿ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಏಳು ಮಂದಿ ಸೇರಿದ್ದಾರೆ,” ಎಂದು ತಿಳಿಸಿದರು. ಗುರುವಾರ ಸಾಯಂಕಾಲ ಶಿವಾಜಿ ಜಯಂತಿ ನಿಮಿತ್ತ ಹಳೆಯ ನಗರದ ಕಿಲ್ಲಾ ಓಣಿಯಲ್ಲಿ ಮೆರವಣಿಗೆ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೆರವಣಿಗೆಯು ಮಸೀದಿಯ ಮುಂಭಾಗ ಸಾಗುತ್ತಿದ್ದ ವೇಳೆ ಕಿಡಿಗೇಡಿಯೊಬ್ಬ ಕಲ್ಲು ತೂರಾಟ ನಡೆಸಿದ್ದಾನೆ. ಈ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ಬಿದ್ದಿದ್ದು, ಎಸ್‌ಪಿ ಸಿದ್ಧಾರ್ಥ್ ಗೋಯೆಲ್ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ…

Read More

ತುಮಕೂರು: ರುಡ್‌ ಸೆಟ್ ಸಂಸ್ಥೆ ವತಿಯಿಂದ ಏಪ್ರಿಲ್ 8 ರಿಂದ 31 ದಿನಗಳ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 5 ಕಡೆಯ ದಿನವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9241482541, 9740982585, 9113880324 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಸಹಯೋಗದಲ್ಲಿ, ಕಾರವಾರದ ನಗರಸಭೆ ಉದ್ಯಾನವನದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಜಯಂತಿಯನ್ನು ಛತ್ರಪತಿ ಶಿವಾಜಿ ಪುತ್ಥಳಿಗೆ ಹಾರ ಹಾಕಿ ಹಾಗೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ ಉದ್ಘಾಟಿಸಿದರು. ಶಿವಾಜಿ ಕುರಿತು ವಿಷೇಶ ಉಪನ್ಯಾಸ ನೀಡಿ ಕಮಲಾಕರ ವಿಶ್ವನಾಥ ಕಾಂಬ್ಳೆ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ತಾಯಿ ಜೀಜಾಬಾಯಿ, ರಾಜಕೀಯ ಗುರು ದಾದಾಜಿ ಕೊಂಡದೇವ ಅವರ ಮಾರ್ಗದರ್ಶನದಿಂದ ಅವರು ಹದಿನಾರನೇ ವಯಸ್ಸಿನಲ್ಲೇ ತೋರಣ ಕೋಟೆಯನ್ನು ಗೆಲ್ಲುವ ಮೂಲಕ ಸ್ವರಾಜ್ಯ ಸ್ಥಾಪನೆಗೆ ಮೊದಲ ಹೆಜ್ಜೆ ಇಟ್ಟರು. ನಂತರ ಬಿಜಾಪುರ ಸುತ್ತ ಮುತ್ತಲಿನ ಕೋಟೆ, ಔರಂಗಜೇಬು ಅವರ ಕೋಟೆಗಳನ್ನು ವಶ ಪಡಿಸಿಕೊಂಡನು. ಶಿವಾಜಿ ಅವರನ್ನು ಗೆಲುವಿನ ರಾಜ ಎಂದು ಕರೆಯಲಾಗುತ್ತದೆ. ಭಾರತದ ಸಂಸ್ಕೃತಿ , ಪಂರಂಪರೆ ಮತ್ತು ಮೌಲ್ಯಗಳನ್ನು ಉಳಿಸುವಲ್ಲಿ ಶಿವಾಜಿಯ ಕೊಡುಗೆ ಆಪಾರ. ದೇಶದಲ್ಲಿ ಮೊದಲ ನೌಕಾಸೇನೆ ಕಟ್ಟಿದ್ದು, ಮುಂದಾಲೋಚನೆ ಹಾಗೂ…

Read More