Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಬರಗೂರು: ಬುಡಕಟ್ಟಿಗೆ ಸೇರಿರುವ ಕಾಡುಗೊಲ್ಲರು ತಮ್ಮ ಕುಲದಲ್ಲಿ ಜನಿಸಿ ಬಹುದೊಡ್ಡ ಜನಪದ ಬದುಕನ್ನು ಬದುಕಿ, ಜೀವಪರವಾಗಿದ್ದ ಸಾಂಸ್ಕೃತಿಕ ವೀರಗಾರರನ್ನು ಕುಲದೈವಗಳೆಂದು ಪೂಜಿಸಿಕೊಂಡು ಬಂದಿದ್ದಾರೆ. ಶೀಲ ಮತ್ತು ಶೌಚಕ್ಕಾಗಿ ನಿಷ್ಠೆಯಿಂದ ಜನಪದ ದೈವಗಳ ಸಾಹಸದ ಬಗ್ಗೆ ಪದಗಳನ್ನು ಕಟ್ಟಿಕೊಂಡು, ಕಥನ ಕಾವ್ಯಗಳನ್ನು ಹಾಡುತ್ತಾ ಬದುಕಿನ ಬಂಡಿ ಎಳೆದ ಕಾಡುಗೊಲ್ಲರು ದೈವಾರಾಧನೆಯ ಜೊತೆಗೆ ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡಬೇಕು ಎಂದು ಸೂಪರಿಂಟೆಂಡೆಂಟ್ ಎಂಜಿನಿಯರ್ ತಿಮ್ಮರಾಯಪ್ಪ ಹೇಳಿದರು. ತಾಲೂಕಿನ ಬರಗೂರು ಸಿದ್ದನಕುಂಟೆ ಸಿದ್ದೇಶ್ವರಸ್ವಾಮಿ ದೇವಾಲಯದಲ್ಲಿ ಗುರುವಾರ ನಡೆದ ವಿಶೇಷ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಳ್ಳಿ ಮುಳ್ಳಿನ ಬೇಲಿಯ ಒಳಗೆ ಊರಿನಿಂದ ದೂರದಲ್ಲಿ ಹಟ್ಟಿ ಕಟ್ಟಿಕೊಂಡು ಪ್ರತ್ಯೇಕವಾಗಿ ರೀತಿ ರಿವಾಜುಗಳನ್ನು ರೂಢಿಸಿಕೊಂಡು ಕಟ್ಟಿಮನೆ, ಗುಡಿಕಟ್ಟುಗಳಿಂದ ನ್ಯಾಯಾಲಯದಂತೆ ಮೌಖಿಕ ಪರಂಪರೆಯಲ್ಲಿ ಬದುಕನ್ನು ರೂಢಿಸಿಕೊಂಡಿದ್ದರು. ಜನಪದ ವಿದ್ವಾಂಸರ ಸಂಶೋಧನೆಯಂತೆ ಕಾಡುಗೊಲ್ಲರ ಹಟ್ಟಿಗಳು ಜನಪದ ಕಥನಕಾವ್ಯಗಳ ಕಣಜಗಳಿದ್ದಂತೆ ಎಂದು ದಾಖಲಿಸಿದ್ದಾರೆ ಎಂದರು. ದೇವಾಲಯಗಳು ಕೇವಲ ದೇವರ ಮೇಲಿನ ಆರಾಧನೆಗೆ ಸೀಮಿತವಾಗದೆ ಸಾಂಸ್ಕೃತಿಕ, ಜಾಗೃತಿಯ ಕೇಂದ್ರಗಳಾಗಬೇಕು. ಕಾಡುಗೊಲ್ಲರು ದೈವಾರಾಧನೆಯ ಜೊತೆಗೆ ಮಕ್ಕಳಿಗೆ…
ತುರುವೇಕೆರೆ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ 2026–27 ನೇ ಸಾಲಿಗೆ ಅಧಿಸೂಚನೆ ಹೊರಡಿಸಿರುವ ಬೆಳೆಗಳಿಗೆ ಸಾಲ ಪಡೆದಿರುವ/ಪಡೆಯುವ ರೈತರಿಗೆ ಕಡ್ಡಾಯವಾಗಿ ವಿಮೆಗೆ ಒಳಪಡಿಸಿದ್ದು ಹಾಗೂ ಬೆಳೆ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದೆ. ಬೆಳೆ ವಿಮೆಗೆ ಒಳಪಟ್ಟ ಅಡಕೆ, ಮಾವು, ಪಪ್ಪಾಯಿ ಮತ್ತು ದಾಳಿಂಬೆ ಬೆಳೆಗಳಿಗೆ ತುರುವೇಕೆರೆ ತಾಲ್ಲೂಕಿಗೆ ಸಂಬಂಧಪಟ್ಟ ಬೆಳೆಗಳಿಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ / ಗ್ರಾಮ ಒನ್ ಮತ್ತು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದಾಗಿರುತ್ತದೆ. ಈ ಯೋಜನೆಯಲ್ಲಿ ಒಳಪಡಿಸಲಾಗುವ ಎಲ್ಲಾ ಬೆಳೆಗಳಿಗೆ ಬೆಳೆ ಸಾಲ ಪಡೆದಿರುವ ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆಗೆ ಒಳಪಡಿಸುವುದು ಹಾಗೂ ಬೆಳೆ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿ ಬೆಳೆ ವಿಮೆಗೆ ಒಳಪಡಿಸಲಾಗುವುದು ಎಂದು ತಿಳಿಸಿದೆ. ಅಡಕೆ,…
ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಸಿಂಗನಹಳ್ಳಿ ಗ್ರಾಮ ವಾಸಿ ಶನಿವಾರಪ್ಪ ಬಿನ್ ಲೇಟ್ ಚಿಕ್ಕಪ್ಪಯ್ಯ ರವರಿಗೆ ಸೇರಿದ ಊರಿನ ಹೊರ ಭಾಗದಲ್ಲಿರುವ ಮನೆ ಹಿಂಬದಿಯ ಸ.ನ 159/2 ರಲ್ಲಿ ಕುರಿಗಳಿಗೆ ಮೇವು ತರಲು ಹೊರ ಹೋಗಿದ್ದಾಗ ಗುರುವಾರ ಸುಮಾರು ಬೆಳಗ್ಗೆ 10 ಗಂಟೆ ಸಮಯದಲ್ಲಿ ಬೀದಿ ನಾಯಿಗಳ ಗುಂಪೊಂದು ಕುರಿ ಶೆಡ್ ಗೆ ನುಗ್ಗಿ ಕುರಿಗಳ ಮೇಲೆ ದಾಳಿ ನಡೆಸಿ, 24 ಕುರಿಗಳು ಸಾವನ್ನಪ್ಪಿದ್ದು, 7 ಕುರಿಗಳು ಗಾಯಗೊಂಡಿವೆ. ಸ್ಥಳಕ್ಕೆ ಪಂಚಾಯಿತಿ ಸಿಬ್ಬಂದಿ, ಪಶು ವೈದ್ಯಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅನುಗ್ರಹ ಯೋಜನೆಯಡಿ ಪರಿಹಾರ ಮೊತ್ತ ಕೊಡಿಸಲಾಗುವುದು: ಘಟನೆ ಬಗ್ಗೆ ಪಶು ಪಾಲನೆ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಎಸ್.ಕೆ. ಮಾತನಾಡಿ, ಮೃತಪಟ್ಟಿರುವ ಕುರಿಗಳಿಗೆ ಸರ್ಕಾರದ ಅನುಗ್ರಹ ಯೋಜನೆಯಡಿ ತಲಾ ಒಂದು ಕುರಿಗೆ 7500 ರೂ. ಪರಿಹಾರದ ಮೊತ್ತವನ್ನು ನೇರವಾಗಿ ಮೃತ ಕುರಿ ಮಾಲೀಕರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು. ನಮ್ಮತುಮಕೂರಿನ…
ತುಮಕೂರು: ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ ಗೂಳೂರು ಬಳಿ 106 ಎಕರೆ 23 ಗುಂಟೆ ವಿಸ್ತೀರ್ಣದ ಅಮೂಲ್ಯ ಸಾರ್ವಜನಿಕ ಆಸ್ತಿಯನ್ನು ಸರ್ಕಾರದ ಸ್ವಾಧೀನದಲ್ಲಿ ಉಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಹತ್ವದ ಆದೇಶದ ಮೂಲಕ ಕ್ರಮ ವಹಿಸಿದ್ದಾರೆ. ತುಮಕೂರು ತಾಲ್ಲೂಕಿನ ಗೂಳೂರು ಹೋಬಳಿಯ ಕೊಂಡಾಪುರ ಗ್ರಾಮದ ಸರ್ವೆ ನಂ.3 ಹಾಗೂ ಕಲ್ಲುಮಠ ಗ್ರಾಮದ ಸರ್ವೆ ನಂ.13, 17 ಮತ್ತು 20ರ ಜಮೀನುಗಳಿಗೆ ಸಂಬಂಧಿಸಿದಂತೆ 1974ರಲ್ಲಿ ಭೂಸುಧಾರಣಾ ಕಾಯ್ದೆ, 1961ರ ಕಲಂ 48ಎ(1)ರ ಅಡಿಯಲ್ಲಿ ಗೇಣಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ ಇಂಡೆಕ್ಸ್ ಆಫ್ ಲ್ಯಾಂಡ್ ದಾಖಲೆಗಳ ಪ್ರಕಾರ ಈ ಜಮೀನುಗಳು ದೇವದಾಯ ಇನಾಂ ಜಮೀನುಗಳಾಗಿರುವುದರಿಂದ ಭೂಸುಧಾರಣಾ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಹಿಂಬರಹ ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ಮೇಲ್ಮನವಿ ಹಾಗೂ ನ್ಯಾಯಾಂಗ ಪ್ರಕ್ರಿಯೆಗಳು ನಡೆದಿದ್ದು, ಅಂತಿಮವಾಗಿ ಕರ್ನಾಟಕ ಉಚ್ಛ ನ್ಯಾಯಾಲಯವು ದಿನಾಂಕ 02-06-1999ರಂದು ನೀಡಿದ ಆದೇಶದಲ್ಲಿ, ಸದರಿ ಜಮೀನುಗಳು ಮೈಸೂರು (ಧಾರ್ಮಿಕ ಮತ್ತು ದತ್ತಿ) ಇನಾಮುಗಳ ನಿರ್ಮೂಲನಾ…
ಕೆಲವೊಮ್ಮೆ ತೀವ್ರವಾದ ಮಸಾಜ್ ಮಾಡಿಸಿಕೊಳ್ಳುವಾಗ, ಮೈತುಂಬಾ ಹಚ್ಚೆ (Tattoos) ಹಾಕಿಸಿಕೊಳ್ಳುವಾಗ ಅಥವಾ ಕಠಿಣವಾದ ಕ್ರೀಡೆಗಳಲ್ಲಿ ತೊಡಗಿಕೊಂಡಾಗ ಉಂಟಾಗುವ ನೋವಿನಲ್ಲಿ ಕೆಲವರು ಒಂದು ರೀತಿಯ ನಿರಾಳತೆ ಅಥವಾ ಆನಂದವನ್ನು ಅನುಭವಿಸುತ್ತಾರಂತೆ, ನೋವಿನಲ್ಲಿ ಆನಂದ ಅನುಭವಿಸುವುದು ಹೇಗೆ? ಎನ್ನುವ ಜೈವಿಕ ಮತ್ತು ಮಾನಸಿಕ, ಲೈಂಗಿಕ ಕಾರಣಗಳ ಬಗ್ಗೆ ತಜ್ಞರು ಏನು ಹೇಳುತ್ತಾರೆ ಎನ್ನುವುದನ್ನು ನೋಡೋಣ… ನೋವು ಮತ್ತು ‘ಹ್ಯಾಪಿ ಹಾರ್ಮೋನ್ಗಳ’ ಆಟ ಸಾಮಾನ್ಯವಾಗಿ ನೋವು ಎನ್ನುವುದು ನಮ್ಮ ದೇಹವನ್ನು ಅಪಾಯದಿಂದ ರಕ್ಷಿಸುವ ಒಂದು ರಕ್ಷಣಾತ್ಮಕ ವ್ಯವಸ್ಥೆಯಾಗಿದೆ (Defense Mechanism). ಆದರೆ ಕೆಲವರಲ್ಲಿ ನೋವು ಅನುಭವಿಸಿದಾಗ ಮೆದುಳಿನಲ್ಲಿ ಓಪಿಯಾಡ್ಸ್ (Opioids), ಡೋಪಮೈನ್ (Dopamine) ಮತ್ತು ಸಿರೊಟೋನಿನ್ (Serotonin) ನಂತಹ ನ್ಯೂರೋಕೆಮಿಕಲ್ ಗಳು ಬಿಡುಗಡೆಯಾಗುತ್ತವೆ. ಡೋಪಮೈನ್ ನಮ್ಮನ್ನು ಸದಾ ಸಂತೋಷ ಹಾಗೂ ಪ್ರೇರಣೆಯಿಂದ ಇರಿಸುವ ಹಾರ್ಮೋನ್ ಆಗಿದೆ. ತೀವ್ರವಾದ ವ್ಯಾಯಾಮದ ನಂತರ ಸ್ನಾಯುಗಳು ನೋಯುತ್ತಿದ್ದರೂ, ಈ ಹಾರ್ಮೋನ್ ಗಳ ಬಿಡುಗಡೆಯಿಂದಾಗಿ ಮನಸ್ಸಿಗೆ ಒಂದು ರೀತಿಯ ವಿಚಿತ್ರ ಆನಂದ ಮತ್ತು ನಿರಾಳತೆ (Euphoric Experience) ಸಿಗುತ್ತದೆ. ‘ನೋ ಪೇನ್,…
ತುಮಕೂರು: ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವ ಬೆಳೆ ಎಂದರೆ ಸಿಲ್ಕು ಮತ್ತು ಮಿಲ್ಕು ಮಾತ್ರವೇ ಆಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಹಾಗೂ ರೇಷ್ಮೆ ಇಲಾಖೆ ಸಹಯೋಗದಲ್ಲಿ ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ರೇಷ್ಮೆ ಬೆಳೆಗಾರರ ಕಾರ್ಯಾಗಾರ ಹಾಗೂ ‘ನನ್ನ ರೇಷ್ಮೆ-ನನ್ನ ಹೆಮ್ಮೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ ಒಂದು ಎಕರೆ ಭೂಮಿ ಇದ್ದರೆ ಒಂದು ಕುಟುಂಬವನ್ನು ಸಾಕುವಷ್ಟು ಸಾಮರ್ಥ್ಯ ಇರುವುದು ರೇಷ್ಮೆ ಬೆಳೆಗೆ ಮಾತ್ರ ಎಂದು ಹೇಳಿದ ಅವರು, ವಿಶೇಷವಾಗಿ ತುಮಕೂರು ಜಿಲ್ಲೆಯ ರೈತರನ್ನು ಕೈಹಿಡಿಯುವುದು ರೇಷ್ಮೆ ಬೆಳೆ ಮತ್ತು ಹೈನುಗಾರಿಕೆ ಮಾತ್ರ ಎಂದು ಅಭಿಪ್ರಾಯಪಟ್ಟರು. ರೇಷ್ಮೆ ಉದ್ದಿಮೆ ಕೇವಲ ಬೆಳೆ ಅಲ್ಲ, ಇದೊಂದು ಕೈಗಾರಿಕೆ ಎಂದು ಅವರು ಆ ಕಾರಣದಿಂದಲೇ ಈ ಇಲಾಖೆಯನ್ನು ಕೈಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಇಡಲಾಗಿದೆ ಎಂದರು. ಕಡಿಮೆ ಭೂಮಿಯಲ್ಲಿ ಅತ್ಯಧಿಕ ಲಾಭ ತರಬಹುದಾದ ರೇಷ್ಮೆ ಬೆಳೆಯ ವಿಸ್ತೀರ್ಣವನ್ನು ಹೆಚ್ಚು ಮಾಡಬೇಕಿದೆ ಎಂದ ಅವರು, ರೇಷ್ಮೆ ಬೆಳೆಗಾರರಿಗೆ ಸರ್ಕಾರದಿಂದಲೂ…
ತುಮಕೂರು: ಪತ್ನಿ ಬೇರೆಯವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆಂಬ ಅನುಮಾನದಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊರವಲಯದ ಹೆಗ್ಗೇರೆಯಲ್ಲಿ ನಡೆದಿದೆ. ಮೃತರನ್ನು ಎಸ್.ಕೆ.ಚಂದನ್ (25) ಎಂದು ಗುರುತಿಸಲಾಗಿದೆ. ಹೆಗ್ಗೇರೆಯ ಚಂದನ್ ಮತ್ತು ಗುಬ್ಬಿ ತಾಲ್ಲೂಕಿನ ಮಂಚಲದೊರೆಯ ಮಮತಾ ಅವರು ಪ್ರೀತಿಸುತ್ತಿದ್ದರು. ಮೂರು ತಿಂಗಳ ಹಿಂದೆಯಷ್ಟೇ ಇವರಿಬ್ಬರ ಮದುವೆ ದೇವಸ್ಥಾನದಲ್ಲಿ ನಡೆದಿತ್ತು. ಹೆಗ್ಗೇರೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಜುಲೈ 3 ರಂದು ವಾಸದ ಮನೆಯಲ್ಲಿ ಚಂದನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಪತ್ನಿ ಮಮತಾ, ಮೋಹನ್ ಕುಮಾರ್ ಅವರುಗಳೇ ಕಾರಣ. ಇಬ್ಬರೂ ಓಡಿ ಹೋಗಿದ್ದಾರೆ. ನನ್ನ ಜೀವನ ಹಾಳು ಮಾಡಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ, ಮರ್ಯಾದೆ ತೆಗೆದಿದ್ದಾರೆ” ಎಂದು ಡೆತ್ ನೋಟ್ ನಲ್ಲಿ ಆರೋಪಿಸಲಾಗಿದೆ. ಚಂದನ್ ತಾಯಿ ಎಸ್.ದಾಕ್ಷಾಯಿಣಿ ಅವರು ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಮತಾ ಅವರನ್ನು ಬಂಧಿಸಿ…
ತುಮಕೂರು: ಜಿಲ್ಲಾ ಮೀನುಗಾರಿಕೆ ಇಲಾಖೆಯು ತಿಪಟೂರು ತಾಲೂಕು ನೋಣವಿನಕೆರೆ ಗ್ರಾಮ ಕೆರೆ ಅಂಚಿನ ಮೀನು ಕೃಷಿ ಕೊಳದ ಬಳಿ ಜುಲೈ 10ರಂದು ಬೆಳಿಗ್ಗೆ 10 ಗಂಟೆಗೆ ಆಮೀನು ಕೃಷಿಕರ ದಿನಾಚರಣೆಯನ್ನು ಆಚರಿಸಲಿದೆ. ದಿನಾಚರಣೆ ಕಾರ್ಯಕ್ರಮದಲ್ಲಿ ಮೀನುಮರಿ ಪಾಲನಾ ಚಟುವಟಿಕೆ, ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಮೀನು ಕೃಷಿ ಬಗ್ಗೆ ಮಾಹಿತಿ ನೀಡಲಾಗುವುದು. ಜಿಲ್ಲೆಯ ಎಲ್ಲಾ ತಾಲೂಕುಗಳ ಮೀನುಗಾರರು, ಮೀನು ಕೃಷಿಕರು ಮತ್ತು ಸಂಪನ್ಮೂಲ ವ್ಯಕ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕೆಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಗ್ರಾಮಗಳಲ್ಲಿ ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ನೂತನ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದ್ದು, ಅದನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೂಚಿಸಿದರು. ಅವರು ಜಿಪಂ ವತಿಯಿಂದ ಹಮ್ಮಿಕೊಂಡಿರುವ ಗ್ರಾಮ ಪಂಚಾಯತಿಗಳಿಗೆ ನೂತನವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನೆರವೇರಿಸುವುದಾಗಿ ಸಿಎಂ ಸಹ ತಿಳಿಸಿದ್ದು, ಅಲ್ಲಿಯವರೆಗೆ ಗ್ರಾಮ ಪಂಚಾಯಿತಿಗಳ ಆಡಳಿತವನ್ನು ಪಾರದರ್ಶಕ, ಸಮಾನವಾಗಿ ನಡೆಸಿಕೊಂಡು ಹೋಗುವ ಮಹತ್ವದ ಹೊಣೆ ಆಡಳಿತಾಧಿಕಾರಿಗಳು, ಪಿಡಿಒ, ಕಾರ್ಯದರ್ಶಿಗಳ ಮೇಲಿರುತ್ತದೆ. ಹಳ್ಳಿಗಳಲ್ಲಿ ಕುಡಿಯುವ ನೀರು ಸೇರಿದಂತೆ ನಾಗರಿಕ ಸೌಲಭ್ಯಗಳ ಬಳಕೆ ವಿಷಯವಾಗಿ ತಾರತಮ್ಯ, ಜನಾಂಗೀಯ ಸಂಘರ್ಷಗಳು ನಡೆಯುತ್ತಿರುತ್ತವೆ. ಅಸಮಾನತೆ ಆಚರಣೆ, ಶಾಂತಿಗೆ ಭಂಗ ತರುವ ಘಟನೆಗಳಿಗೆ ಆಸ್ಪದ ಕೊಡದಂತೆ ಎಚ್ಚರಿಕೆ ವಹಿಸಬೇಕೆಂದು ನಿರ್ದೇಶಿಸಿದರು. ಗ್ರಾಮ ಪಂಚಾಯತಿ ಪರಿಕಲ್ಪನೆ ಮಹಾತ್ಮ ಗಾಂಧೀಜಿ ಅವರದ್ದಾಗಿದ್ದು, ನಮ್ಮ ಆಡಳಿತವನ್ನು ನಾವೇ ಮಾಡಿಕೊಳ್ಳಬೇಕು ಎಂಬುದು ಈ ಸರಳ ತತ್ವದ ಉದ್ದೇಶ. ಸ್ವಾತಂತ್ರ್ಯ ನಂತರ ಸಂವಿಧಾನದಲ್ಲಿ ಅಳವಡಿಸಿಕೊಂಡು…
ತುಮಕೂರು: ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ದೇಶಕ್ಕೇ ಮಾದರಿಯಾಗಿಸುವ ಗುರಿ ಹೊಂದಿದ್ದು, ನಗರವನ್ನು ಸ್ವಚ್ಛ, ಸುಂದರ ಮತ್ತು ಮಾದರಿ ನಗರವನ್ನಾಗಿ ರೂಪಿಸುವ ಜವಾಬ್ದಾರಿ ಮಹಾನಗರ ಪಾಲಿಕೆ ಹಾಗೂ ಪೌರಕಾರ್ಮಿಕರ ಮೇಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೇಳಿದರು. ನಗರದ ಮಹಾನಗರ ಪಾಲಿಕೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ ವಿತರಣೆ, ಪಿಪಿಪಿ-ಎಲ್ಇಡಿ ಯೋಜನೆಯಡಿ ಹೆಚ್ಚುವರಿ ಬೀದಿದೀಪಗಳ ಅಳವಡಿಕೆ, ಯುಜಿಡಿ ಸಿಬ್ಬಂದಿಗೆ ನಮಸ್ತೆ ಕಿಟ್ಸ್ ವಿತರಣೆ, ಪೌರಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ಹಾಗೂ ಶಾಲಾ ಶುಲ್ಕ ಮರುಪಾವತಿ, ಕಾರ್ಯನಿರತ ಪತ್ರಕರ್ತರಿಗೆ ನಗದುರಹಿತ ಆರೋಗ್ಯ ವಿಮೆ ಸೌಲಭ್ಯ ಮತ್ತು ವಿವಿಧ ಸಿವಿಲ್ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ನಗರದ ವೇಗದ ಅಭಿವೃದ್ಧಿಯನ್ನು ಉಲ್ಲೇಖಿಸಿದ ಅವರು, ತುಮಕೂರು ಶೀಘ್ರದಲ್ಲೇ ಬೆಂಗಳೂರಿನ ವಿಸ್ತರಣೆಯ ಭಾಗವಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ 14 ಪಂಚಾಯಿತಿಗಳನ್ನು ಮಹಾನಗರ ಪಾಲಿಕೆಗೆ ಸೇರಿಸಿ ನಗರವನ್ನು ಇನ್ನಷ್ಟು ವಿಸ್ತರಿಸುವ ಯೋಜನೆಯಿದೆ. ರಸ್ತೆ, ಚರಂಡಿ, ಬೀದಿದೀಪ ಹಾಗೂ 18 ಉದ್ಯಾನವನಗಳ…