Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ಹುಬ್ಬಳ್ಳಿ: ಜಾತಿ, ಧರ್ಮಗಳನ್ನು ಬದಿಗಿಟ್ಟು ಬಡವರು ಮತ್ತು ಹಿಂದುಳಿದವರು ತಮ್ಮ ಹಕ್ಕುಗಳು, ಸಂವಿಧಾನ ಹಾಗೂ ದೇಶದ ಸ್ವಾತಂತ್ರ್ಯವನ್ನು ರಕ್ಷಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೋರಾಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಬಡವರಿಗೆ ಮನೆ ಹಂಚಿಕೆ ಮತ್ತು ಕೊಳೆಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಒಗ್ಗಟ್ಟಿನ ಕರೆ: “ಮೂರ್ಖ ಸರ್ಕಾರಕ್ಕೆ ಪಾಠ ಕಲಿಸಲು ಬಡವರೆಲ್ಲರೂ ಒಂದಾಗಬೇಕು. ನಾವು ಹೋರಾಡದಿದ್ದರೆ ನಮ್ಮ ಸಂವಿಧಾನ ಮತ್ತು ಸ್ವಾತಂತ್ರ್ಯ ಕೈತಪ್ಪಿ ಹೋಗುತ್ತದೆ. ನಾವು ಮತ್ತೆ ಗುಲಾಮರಂತೆ ಬದುಕಬೇಕಾದ ಸ್ಥಿತಿ ಬರುತ್ತದೆ” ಎಂದು ಖರ್ಗೆ ಎಚ್ಚರಿಸಿದರು. ಸರ್ವಾಧಿಕಾರದ ಭೀತಿ: ಮುಂಬರುವ ಚುನಾವಣೆಗಳಲ್ಲಿ ಜನರು ಬಿಜೆಪಿ ವಿರುದ್ಧ ಒಗ್ಗಟ್ಟಾಗದಿದ್ದರೆ ದೇಶದಲ್ಲಿ ಹಿಟ್ಲರ್, ಮುಸೊಲಿನಿ ಅಥವಾ ಸದ್ದಾಂ ಹುಸೇನ್ ಅಂತಹ ಸರ್ವಾಧಿಕಾರಿಗಳು ಆಡಳಿತ ನಡೆಸುವ ಅಪಾಯವಿದೆ ಎಂದು ಅವರು ಆತಂಕ…
ತುಮಕೂರು: ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ, ಕಾರ್ಪೊರೇಷನ್ ವ್ಯಾಪ್ತಿಯ ಎಲ್ಲಾ ಇ–ಖಾತಾ ಪ್ರಕ್ರಿಯೆ ಕಳೆದ 45 ದಿನಗಳಿಂದ ಸ್ಥಗಿತಗೊಳಿಸಿರುವುದು ಗಂಭೀರ ಸಮಸ್ಯೆಯಾಗಿದೆ. ಈ ಬಗ್ಗೆ ಸರ್ಕಾರ ಹೆಚ್ಚೆತ್ತುಕೊಂಡು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಲ್ಯಾಂಡ್ ಡೆವಲಪರ್ಸ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸ್ಫೂರ್ತಿ ಡೆವಲಪರ್ಸ್ ಮಾಲೀಕ ಎಸ್.ಪಿ. ಚಿದಾನಂದ್ ಒತ್ತಾಯಿಸಿದ್ದಾರೆ. ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಇ–ಪೌತಿ ಸಾಫ್ಟ್‌ವೇರ್ ಅಳವಡಿಕೆಯ ಕಾರಣದಿಂದ ಈ ಸ್ಥಗಿತ ಉಂಟಾಗಿದೆ. ಸರ್ಕಾರ ಯಾವುದೇ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳುವಾಗ ಹಾಲಿಯಿರುವ ಪ್ರಕ್ರಿಯೆಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಬೇಕು ಅಥವಾ ಒಂದು ಹಳ್ಳಿ ಅಥವಾ ಪಟ್ಟಣವನ್ನು ಪೈಲೆಟ್ ಪ್ರಾಜೆಕ್ಟ್ ಆಗಿ ಮಾಡಿಕೊಂಡು ಹೊಸ ವ್ಯವಸ್ಥೆ ಅಲ್ಲಿ ಜಾರಿ ಮಾಡಿ, ಅದರ ಸಾಧಕಬಾಧಕಗಳನ್ನು ಪರಿಶೀಲಿಸಿದ ನಂತರ ರಾಜ್ಯಾದ್ಯಂತ ಜಾರಿ ಮಾಡಬೇಕು ಎಂದರು. ಇ–ಖಾತಾ ಸ್ಥಗಿತದಿಂದ ಹೊಸ ನಿವೇಶನ, ವಸತಿಕೊಳ್ಳುವವರಿಗೆ ಮಾರಾಟ ಮಾಡುವವರಿಗೆ, ಬ್ಯಾಂಕುಗಳಿಂದ ಸಾಲಸೌಲಭ್ಯಗಳು ದೊರೆಯದೆ ತೊಂದರೆಯಾಗಿದೆ. ಸಿ.ಸಿ ಮತ್ತು ಓ.ಸಿ. ಪಡೆಯುವ ಪ್ರಕ್ರಿಯೆ ಸುಮಾರು ಎರಡು…
ಅರಸೀಕೆರೆ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆ ಶಾಲೆಯ ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿ ಸೇರ್ಪಡೆಯಾಗಿದ್ದು, ಇಡೀ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮವಾಗಿ ಈ ಸಾಧನೆ ಮಾಡಿದಂತಾಗಿದೆ. ಇಲ್ಲಿನ 10 ತರಗತಿಯ ವಿದ್ಯಾರ್ಥಿ ಹೃತಿಕ್.ಹೆಚ್ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ತನ್ನ ವಿಜ್ಞಾನ ಮಾದರಿಯಾದ ಶಾಲೆ ಮತ್ತು ಆಸ್ಪತ್ರೆಯ ಸೂಚನಾ ವ್ಯವಸ್ಥೆ ಮತ್ತು ಅಗ್ನಿನಂದಕ ರೋಬೋ ಕಾರ್ ವೈಯಕ್ತಿಕ ವಿಭಾಗದಲ್ಲಿ ಐದನೇ ಸ್ಥಾನಗಳಿಸಿದ ಹೆಗ್ಗಳಿಕೆ ಸಾಧಿಸಿದ್ದಾನೆ. 10ನೇ ತರಗತಿಯ ಹೃತಿಕ್ ಹೆಚ್. ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಬಹುಮಾನಗಳಿಸಿ ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ ಆಗಿದ್ದರು. ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಕೊಲ್ಲೂರಿನಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಗಾಡಿಯಂ ಶಾಲೆಯಲ್ಲಿ ದಿನಾಂಕ : 19—01–2026 ರಿಂದ 23—01–2026 ರವರೆಗೆ ಸುಮಾರು ಐದು ದಿನಗಳ ಕಾಲ ನಡೆದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವು ಶುಕ್ರವಾರ ಮುಕ್ತಾಯವಾಗಿದ್ದು, ಈ ವಿಜ್ಞಾನ ಮೇಳದಲ್ಲಿ ಅವರು ಪ್ರದರ್ಶಿಸಿದ ಮಾದರಿ ವೈಯಕ್ತಿಕ ವಿಭಾಗದಲ್ಲಿ ಐದನೇ ಸ್ಥಾನ…
ತಿಪಟೂರು: ರಾಜ್ಯಪಾಲರು ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಗಂಭೀರ ದಾಳಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ.ಶಶಿಧರ್ ಟೂಡಾ ಅವರು ತೀವ್ರವಾಗಿ ಖಂಡಿಸಿದರು. ತಿಪಟೂರು ನಗರಸಭೆ ವೃತ್ತದ ಎದುರು ಯಾವುದೇ ಪಕ್ಷದ ಧ್ವಜ, ವೇದಿಕೆ ಅಥವಾ ಮೈಕ್ ಇಲ್ಲದೆ, ಒಬ್ಬರೇ ಭಿತ್ತಿ ಪತ್ರ ಹಿಡಿದು ನಡೆಸಿದ ಏಕವ್ಯಕ್ತಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು“ನಾನು ಇಂದು ಇಲ್ಲಿ ಒಬ್ಬನೇ ನಿಂತಿದ್ದೇನೆ. ಆದರೆ ನನ್ನ ಹಿಂದೆ ಕರ್ನಾಟಕದ ಜನತೆಯ ಧ್ವನಿ ಇದೆ. ಇದು ಯಾವುದೇ ವ್ಯಕ್ತಿಯ ವಿರುದ್ಧದ ಹೋರಾಟವಲ್ಲ, ಯಾವುದೇ ಹುದ್ದೆಯ ವಿರುದ್ಧದ ಆಕ್ರೋಶವಲ್ಲ. ಇದು ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ಆಕ್ರಮಣದ ವಿರುದ್ಧದ ಹೋರಾಟ” ಎಂದು ಹೇಳಿದರು. ರಾಜ್ಯಪಾಲರು ವಿಧಾನಸಭೆಯಲ್ಲಿ ಮಾತನಾಡಲು ನಿರಾಕರಿಸಿರುವುದು ಸಣ್ಣ ಅಥವಾ ತಾಂತ್ರಿಕ ವಿಚಾರವಲ್ಲ. ಅದು ಜನರಿಂದ ಆಯ್ಕೆಯಾದ ಸರ್ಕಾರದ ಧ್ವನಿಯನ್ನು ಮೌನಗೊಳಿಸುವ ಪ್ರಯತ್ನವಾಗಿದೆ. ಇದು ವಿಧಾನಸಭೆಯ ಗೌರವವನ್ನು ತುಳಿಯುವ ನಡೆ ಮತ್ತು ಪ್ರಜಾಪ್ರಭುತ್ವದ ಮೇಲೆ ನೇರ ದಾಳಿ…
ತುರುವೇಕೆರೆ: ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ ತುರುವೇಕೆರೆ ಘಟಕದ ವತಿಯಿಂದ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಹಾಗೂ ಫಲಾನುಭವಿಗಳ ಸಭೆಯನ್ನು ಪಟ್ಟಣದ ಶ್ರೀ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಿ, ಸದಸ್ಯರುಗಳಿಗೆ ಸಾರ್ವಜನಿಕರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವಂತೆ ಮನವಿ ಮಾಡಿದರು. ಹಲವು ಗಣ್ಯರನ್ನು ತಾಲೂಕು ಘಟಕದ ವತಿಯಿಂದ ಗೌರವಿಸಲಾಯಿತು. ತಾಲೂಕು ಘಟಕದ ಅಧ್ಯಕ್ಷ ಎಚ್. ಎಂ. ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಭಿವೃದ್ಧಿಗೆ ಕೈ ಜೋಡಿಸದ ಸ್ವಾರ್ಥಿಗಳನ್ನು ವಜಾಗೊಳಿಸಿ: ಜಿಲ್ಲಾ ಉಪಾಧ್ಯಕ್ಷ ರಂಗನಾಥ್ ಮಾತನಾಡಿ, ನಮ್ಮ ಸಂಘದ ಕೆಲವು ಸದಸ್ಯರು ಕೇವಲ ಗುರುತಿನ ಚೀಟಿ ಪಡೆದು ತಮ್ಮ ಅನುಕೂಲಕ್ಕೆ ಬಳಸುತ್ತಿದ್ದಾರೆ. ಸಂಘದ ಅಭಿವೃದ್ಧಿಗೆ ಕೈಜೋಡಿಸದ ಅಂತಹ ಸದಸ್ಯರುಗಳನ್ನು ವಜಾ ಮಾಡಬೇಕು. ಸಂಘದ ಬೆಳವಣಿಗೆಗೆ ನೂತನ ಸದಸ್ಯರನ್ನು ನೋಂದಾಯಿಸಿಕೊಳ್ಳಬೇಕು ಎಂದರು. ಜಿಲ್ಲಾ ಕಾರ್ಯದರ್ಶಿ ಸಂಜು, ತಿಪಟೂರು ತಾ. ಅಧ್ಯಕ್ಷ ಸತೀಶ್, ಚಿ.ನಾ.ಹಳ್ಳಿ ಅಧ್ಯಕ್ಷ ಮಂಜುನಾಥ್,…
ಗುಬ್ಬಿ: ಇತ್ತೀಚೆಗೆ ವಿದ್ಯಾರ್ಥಿಗಳು ಹೆಚ್ಚು ಮೊಬೈಲ್ ಬಳಕೆಯಿಂದ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕಾನೂನು ಸೇವಾ ಪ್ರಾಧಿಕಾರದ ಸರ್ಕಾರಿ ಅಭಿಯೋಜಕಿ ಕೆ.ಶೋಭಾ ತಿಳಿಸಿದರು. ತಾಲೂಕಿನ ಕೆ.ಜಿ.ಟೆಂಪಲ್ ನಾಗಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜಕರ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸೈಬರ್ ಕ್ರೈಂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಸಾಕಷ್ಟು ದೊಡ್ಡ ಮಟ್ಟದಲ್ಲಿ ಎಲ್ಲೆಡೆ ಹಬ್ಬುತ್ತಿದೆ. ಸೈಬರ್ ವಂಚಕರ ಆಮಿಷಕ್ಕೆ ಒಳಗಾಗಿ ಮೋಸ ಹೋಗುತ್ತಿದ್ದಾರೆ. ಅದರೊಂದಿಗೆ ತಮ್ಮ ಜೀವನದಲ್ಲಿ ಹಲವಾರು ಸಮಸ್ಯೆಗಳಿಗೆ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಅದರಿಂದ ಕಾನೂನು ತೊಡಕುಗಳಿಗೆ ಹಾಗೂ ಮುಂದಿನ ಪೀಳಿಗೆಗೆ ದೊಡ್ಡ ಹೊಡೆತ ಬೀಳುತ್ತಿದೆ ಎಂದು ಹೇಳಿದರು. ವಕೀಲರ ಸಂಘದ ಉಪಾಧ್ಯಕ್ಷ ಸಿ.ಕೆ.ರವೀಂದ್ರ ಮಾತನಾಡಿ, ಓದಿನ ಜೊತೆಯಲ್ಲಿ ಸಮಾಜದ ಆಗು ಹೋಗುಗಳ ಬಗ್ಗೆ ಮಾಹಿತಿ ಸಹ ಪಡೆಯುವಂತಹ ವಿದ್ಯಾರ್ಥಿಗಳು…
ತುಮಕೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26ರಂದು ಬೆಳಿಗ್ಗೆ 7.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರು ಹುತಾತ್ಮರಾದ ದಿನದ ಸ್ಮರಣಾರ್ಥವಾಗಿ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ನೌಕರರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತುಮಕೂರು ಜಿಲ್ಲೆ, ತಾಲ್ಲೂಕು, ನಗರ ಸವಿತಾ ಸಮಾಜದ ವತಿಯಿಂದ ಜನವರಿ 27ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಗಾರ್ಡನ್ ರಸ್ತೆ ಸವಿತಾ ಸಮುದಾಯ ಭವನದಲ್ಲಿ ‘ಸವಿತಾ ಮಹರ್ಷಿ ಜಯಂತಿ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು. ಕಾರ್ಯಕ್ರಮ ಕುರಿತು ಚಿಕ್ಕನಾಯಕನಹಳ್ಳಿ ಸಾದರಹಳ್ಳಿಯ ನಿವೃತ್ತ ಪದವೀಧರ ಮುಖ್ಯ ಶಿಕ್ಷಕ ಜಿ. ಗೋವಿಂದರಾಜು ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಸವಿತಾ ಸಮಾಜದಲ್ಲಿ ವಿಶೇಷ ಸೇವೆ ಸಲ್ಲಿಸಿರುವವರನ್ನು ಸನ್ಮಾನಿಸಲಾಗುವುದು. ಜಿಲ್ಲೆಯ ವಿವಿಧ ಇಲಾಖೆಗಳ ಮುಖ್ಯಸ್ಥರು/ಸಿಬ್ಬಂದಿ ವರ್ಗ, ವಿವಿಧ ಸಮುದಾಯದ ಮುಖಂಡರು, ಗಣ್ಯರು, ಕಲಾವಿದರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ನಗರದ ವರಿನ್ ಅಂತರಾಷ್ಟ್ರೀಯ ವಸತಿ ಶಾಲೆಯ 30 ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಸಾಮಾನ್ಯ ಜ್ಞಾನದ ಒಲಂಪಿಯಾಡ್ ಪರೀಕ್ಷೆಯಲ್ಲಿ ಚಿನ್ನದ ಪದಕಗಳಿಸಿದ್ದಾರೆ. ಇಂಟರ್ನ್ಯಾಷನಲ್ ಜನರಲ್ ನಾಲೆಡ್ಜ್ ಒಲಂಪಿಯಾಡ್ ಪರೀಕ್ಷೆಯು ವಿದ್ಯಾರ್ಥಿಗಳ ಪಠ್ಯೇತರ ಜ್ಞಾನ ಸಂಪನ್ನತೆ, ಜಾಗೃತ ಮನಸ್ಥಿತಿ, ತಾರ್ಕಿಕ ಆಲೋಚನೆ ಜೀವನ ಕೌಶಲ ಇತ್ಯಾದಿ ಅಂಶಗಳನ್ನು ಪರೀಕ್ಷಿಸುವ ಗುರಿ ಹೊಂದಿದೆ. ವರಿನ್ ವಿದ್ಯಾರ್ಥಿಗಳು ತಮ್ಮ ಬುದ್ಧಿಮತ್ತೆ, ಜ್ಞಾನಗಳಿಗೆ ಪ್ರಸ್ತುತ ವಿದ್ಯಮಾನಗಳ ಅರಿವು ಇತ್ಯಾದಿ ಜ್ಞಾನ ಸ್ಥಿರತೆಯನ್ನು ಸ್ಪಷ್ಟವಾಗಿ ದಾಖಲಿಸುವ ಮೂಲಕ ಚಿನ್ನದ ಪದಕ ಮತ್ತು ಅಭಿನಂದನಾ ಪತ್ರವನ್ನು ಗಳಿಸಿರುತ್ತಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಾಧನೆ ಪ್ರಶಂಸನೀಯವಾಗಿದೆ. ವಿಜೇತರೆಲ್ಲರನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗ ಪ್ರಶಂಸಿಸಿ ಹರ್ಷ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಹಿರಿಯ ನಟ ದುನಿಯಾ ವಿಜಯ್ ಅವರು ನಾಯಕರಾಗಿ ಅಭಿನಯಿಸಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಬಿಡುಗಡೆ ಅಂಗವಾಗಿ ಶುಕ್ರವಾರ ನಗರದ ಮಾರುತಿ ಚಿತ್ರಮಂದಿರದಲ್ಲಿ ದುನಿಯಾ ವಿಜಯ್ ಅಭಿಮಾನಿಗಳು ಸಿಹಿ ವಿತರಿಸಿ ಸಂಭ್ರಮಿಸಿದರು. ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿ ಅಭಿಮಾನ ಮೆರೆದರು. ವಿಜಯಸೇನೆ ರಾಜ್ಯಾದ್ಯಕ್ಷ ಹೆಚ್. ಎನ್.ದೀಪಕ್ ಈ ಸಂಭ್ರಮ ಸಮಾರಂಭದಲ್ಲಿ ಭಾಗಿಯಾಗಿ, ಲ್ಯಾಂಡ್‌ಲಾರ್ಡ್ ಸಿನಿಮಾ ತುಮಕೂರು ಜಿಲ್ಲೆಯ ವಿವಿಧೆಡೆ ಚಿತ್ರೀಕರಣವಾಗಿದೆ. ಇತಿಹಾಸ ಪ್ರಸಿದ್ಧ ಕೈದಾಳದ ಚನ್ನಕೇಶವಸ್ವಾಮಿ ದೇವಸ್ಥಾನ ಸುತ್ತಮುತ್ತ ಹಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಈ ಸಿನಿಮಾ ಯಶಸ್ವಿಯಾಗಲಿ, ದುನಿಯಾ ವಿಜಯ್ ಅವರು ಮುಂದೆ ಮತ್ತಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡದ ಕೀರ್ತಿ ಬೆಳಗಲಿ ಎಂದು ಹೇಳಿದರು. ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಂಕರ್ ಮಾತನಾಡಿ, ದುನಿಯಾ ವಿಜಯ್ ಅಭಿಮಾನಿಗಳ ಸಂಘದವರು ಚಿತ್ರ ಬಿಡುಗಡೆಯನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಿ ಮಾದರಿಯಾಗಿದ್ದಾರೆ. ಜಿಲ್ಲೆಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಿನಿಮಾ ವೀಕ್ಷಣೆ ಮಾಡಿ ಚಿತ್ರವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಚಿತ್ರ ಬಿಡುಗಡೆ…