Subscribe to Updates
Get the latest creative news from FooBar about art, design and business.
- ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
- ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
- ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
- ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
- ಎಸ್ ಐಆರ್ | ಬಿಎಲ್ ಒಗಳ ಕರ್ತವ್ಯಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಅಡ್ಡಿ: ಕಾಂಗ್ರೆಸ್ ವಕ್ತಾರ ಎಚ್.ಎಸ್.ದೀಪಕ್ ಗೌಡ ಗಂಭೀರ ಆರೋಪ
- ಗ್ರಾಮೀಣ ಮಹಿಳೆಯರು ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆಯಿರಿ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ನಂಜೇಗೌಡ ಕರೆ
- ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ
- ತೆಂಗಿನಕಾಯಿ ಸಂಸ್ಕರಣಾ ಕಾರ್ಖಾನೆ ಮೇಲೆ ದಾಳಿ: 7 ಬಾಲ ಕಾರ್ಮಿಕರ ರಕ್ಷಣೆ
Author: admin
ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿರಿಸಿದ್ದ ಹಣವನ್ನು ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಬೇರೆ ಬೇರೆ ಕಾಮಗಾರಿಗಳಿಗೆ ಬಳಸಿಕೊಂಡಿತ್ತು. ಇಂತಹ ಪಕ್ಷದ ನಾಯಕರು ಈ ದಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನಮ್ಮ ಸರ್ಕಾರದ ಬಗ್ಗೆ ಟೀಕಿಸುತ್ತಿರುವುದು ವಿಪರ್ಯಾಸವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್. ಸಿ. ಮಹದೇವಪ್ಪ ಕಿಡಿಕಾರಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ನೈತಿಕತೆ ಇಲ್ಲದೇ ಮಾತನಾಡುತ್ತಿರುವ ಇವರ ಮಾತುಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಕಾಯ್ದೆಯಡಿ ಭಾಗಶಃ ಅನುದಾನವನ್ನು ನೀಡಲಾಗಿದ್ದು, ಇಲ್ಲಿ ಎಲ್ಲಿಯೂ ನಿಯಮಾವಳಿಗಳನ್ನು ಮೀರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜಧಾನಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆರಂಭಿಸಿರುವ ‘ಬ್ರಾಂಡ್ ಬೆಂಗಳೂರು’ ಅಭಿಯಾನಕ್ಕೆ 10,479 ಸಲಹೆಗಳು ಸ್ವೀಕಾರವಾಗಿವೆ. ಗುರುವಾರ ಜ್ಞಾನಭಾರತಿ ಆವರಣದಲ್ಲಿ ಆಯೋಜಿಸಲಾಗಿದ್ದ ಘನತ್ಯಾಜ್ಯ ನಿರ್ವಹಣೆ ಪಾಲುದಾರರ ಸಭೆಯಲ್ಲಿ ಬಂದಂತಹ ಸಲಹೆಗಳು ಮತ್ತು ನಾಗರಿಕರಿಂದ ಈಗಾಗಲೇ ಬಂದಿರುವ ಎಲ್ಲ ಸಲಹೆಗಳನ್ನು ಕ್ರೋಢೀಕರಿಸಿ ಅಧ್ಯಯನ ನಡೆಸಿ ಅಂತಿಮವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ. ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಸಲಹೆಗಳನ್ನು ಬೇರ್ಪಡಿಸಿ ವರದಿ ಸಿದ್ಧಪಡಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ. ನಾಗರಿಕರಿಂದ ಬಂದಿರುವ ಸಲಹೆಗಳ ಸಂಬಂಧ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್, ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಬೆಂಗಳೂರು ವಿವಿ ರಿಜಿಸ್ಟರ್ ಶೇಖ್ ಲತೀಫ್ ಮಾತನಾಡಿ, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸ್ವಚ್ಛ ಬೆಂಗಳೂರು ವಿಭಾಗಕ್ಕೆ ನಮ್ಮ ವಿವಿ ಶೈಕ್ಷಣಿಕ ಪಾಲುದಾರವಾಗಿದೆ. ಸ್ವಚ್ಛ ಬೆಂಗಳೂರು ವಿಭಾಗಗಕ್ಕೆ ಬಂದಿರುವ ಸಲಹೆಗಳನ್ನು ಈಗಾಗಲೇ ವಿಂಗಡಿಸಲಾಗಿದೆ. ವಿಚಾರ ಸಂಕಿರಣದಲ್ಲಿ ಬಂದಿರುವ ಸಲಹೆಗಳನ್ನೂ ಒಟ್ಟುಗೂಡಿಸಿ ವರದಿ ತಯಾರಿಸಲಾಗುವುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಆರೋಗ್ಯ ಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಮಸ್ಯೆಗಳನ್ನ ಅಲಿಸಿದರು. ಬಿ. ಆರ್. ಎಸ್ ನವರು ನೀಡಬೇಕಾಗಿದ್ದ, ಬಾಕಿ ವೇತನವನ್ನ 45 ದಿನಗಳ ಒಳಗಾಗಿ ಪಾವತಿಸುವುದಾಗಿ ಸಚಿವರು ಸಿಬ್ಬಂದಿಗಳಿಗೆ ಭರವಸೆ ನೀಡಿದರು. ಇಎಸ್‌ಐ, ಪಿಎಫ್ ಕುರಿತಂತೆ ಅಗಸ್ಟ್ 31 ರೊಳಗೆ ಕ್ರಮ ಕೈಗೊಳ್ಳುವಂತೆ ಸಂಜೀವಿನಿ ಸಂಸ್ಥೆಯವರಿಗೆ ಇದೇ ವೇಳೆ ತಾಕೀತು ಮಾಡಲಾಯಿತು. ಆರೋಗ್ಯ ಸಚಿವರ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟು, ಡಯಾಲಿಸಿಸ್ ಕೇಂದ್ರಗಳಲ್ಲಿ ತಮ್ಮ ಕಾರ್ಯ ಮುಂದುವರಿಸಲು ಸಿಬ್ಬಂದಿಗಳು ನಿರ್ಧರಿಸಿದ್ದಾರೆ. ಸಭೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಎಂ. ಡಿ ಎನ್. ಎಚ್. ಎಮ್ ನವೀನ್ ಭಟ್ ಪಾಲ್ಗೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಓರ್ವ ವ್ಯಕ್ತಿ ಸರಾಸರಿ ವಿದ್ಯುತ್ ಬಳಕೆ 199 ಯೂನಿಟ್ ಇದ್ದು, ಈ ಬಾರಿ 203 ಯುನಿಟ್ ಬಳಸಿದ್ರೆ ಯೋಜನೆ ಲಾಭ ಇಲ್ಲ. ಸರಾಸರಿ ಬಳಕೆ ಮೇಲೆ 10% ಹೆಚ್ಚುವರಿ ಸೇರಿದ್ರೆ 200 ಯೂನಿಟ್ ಮೀರಬಾರದು. ಆದರೆ 185 ಸರಾಸರಿ ಯುನಿಟ್ ಬಳಸ್ತಿದ್ದವರು ಈ ಬಾರಿ 199 ಯುನಿಟ್ ಬಳಸಿದ್ರೆ ಯೋಜನೆಗೆ ಅರ್ಹರಾಗ್ತಾರೆ. ಇಲ್ಲವೇ 185 ಯೂನಿಟ್ ಬಳಸುವವರು 10% ಹೆಚ್ಚುವರಿ ಯುನಿಟ್ ಗೆ ಅವಕಾಶ ಇದೆ ಎಂದು 203 ಯುನಿಟ್ ಬಳಸಿದ್ರೆ ಆತ ಸಂಪೂರ್ಣ ಬಿಲ್ ಕಟ್ಟಬೇಕು. ಹೀಗೆ ಅನೇಕ ಹಿಡನ್ ಕಂಡೀಷನ್ ಅನ್ನು ಇಂಧನ ಇಲಾಖೆ ಅಪ್ಲೈ ಮಾಡಿದೆ. ಗೃಹಜ್ಯೋತಿ ಯೋಜನೆ ಶೂನ್ಯ ಬಿಲ್ ವಿಚಾರದಲ್ಲಿ ಕಳೆದ ವರ್ಷ 200 ಯುನಿಟ್ ಮೇಲಿದ್ದವರಿಗೆ ಅನ್ವಯ ಇಲ್ಲ. ಅಂತವರು ಈ ತಿಂಗಳು 150 ಯುನಿಟ್ ಬಳಸಿದ್ರೂ ಬಿಲ್ ಕಟ್ಟೇಕು. ಅವರೇಜ್ 200 ಯುನಿಟ್ ಮೇಲಿದ್ದವರು ಯೋಜನೆಯಿಂದ ಹೊರಗುಳಿಯಲಿದ್ದಾರೆ. ಅಂಥವರು ಈ ತಿಂಗಳು 150 ಯುನಿಟ್ ಬಳಸಿದ್ರೂ ಬಿಲ್ ಕಟ್ಟಬೇಕು. 2022 ಏಪ್ರಿಲ್ 1 ರಿಂದ…
ಗೃಹ ಇಲಾಖೆ ಅಧಿಕಾರಿಗಳ ಟ್ರಾನ್ಸ್ ಫರ್ ನಲ್ಲಿ ಏನಾಗುತ್ತಿದೆ ಅನ್ನೋ ಅನುಮಾನ ಕಾಡಲು ಆರಂಭಿಸಿದೆ. ಈ ವರ್ಗಾಣೆಯಲ್ಲೂ ಗೃಹ ಇಲಾಖೆಗೆ ಯಾಕಿಷ್ಟು ಗೊಂದಲ ಎನ್ನುವಂತಾಗಿದೆ. 2 ತಿಂಗಳಾದ್ರೂ ಸರಿಯಾಗಿ ಅಧಿಕಾರಿಗಳ ವರ್ಗಾವಣೆ ಆಗಿಲ್ಲ. ದಿನೇ ದಿನೆ ಪೊಲೀಸರ ಟ್ರಾನ್ಸ್ ಫರ್ ಮುಂದಕ್ಕೆ ಹೋಗುತ್ತಿದ್ದು, ಇನ್ಸ್ ಪೆಕ್ಟರ್ ಗಳ ವರ್ಗಾವಣೆಯಲ್ಲೂ ಗೃಹ ಇಲಾಖೆ ಗೊಂದಲ ಎದ್ದು ಕಾಣಿದೆ. ಮೊದಲಿಗೆ ಗೃಹ ಇಲಾಖೆಯಿಂದ 211 ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಆ ಬಳಿಕ 69 ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿರುವುದು ಈಗ ಗೊಂದಲ ಸೃಷ್ಟಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
2024 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳನ್ನು ನಡೆಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗುತ್ತಿದೆ. ಇತ್ತ ಎನ್ ಡಿ ಎ ಹಾಗೂ ಅದರ ಮೈತ್ರಿ ಪಕ್ಷಗಳ ಸಂಸದರ ಜೊತೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಒನ್ ಟು ಒನ್ ಮಾತುಕತೆ ಆಡುತ್ತಿದ್ದು, ನಿನ್ನೆ ತಡರಾತ್ರಿ ದಕ್ಷಿಣ ಭಾರತದ ಸಂಸದರ ನಿಯೋಗವನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ. ಇನ್ನು ಭೇಟಿಯ ಬಳಿಕ ದಕ್ಷಿಣ ಭಾರತದ ಊಟದ ಶೈಲಿಯನ್ನು ಕಂಡು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಬಾಳೆ ಎಲೆ ಊಟವನ್ನು ಸಂಸದರೊಟ್ಟಿಗೆ ಮಾಡಿದ್ದು, ಪಣಿಯಾರು, ಅಪ್ಪಂ, ತರಕಾರಿ ಕುರ್ಮಾ, ಪಪ್ಪು, ಸಾರು, ಅಡೈ ಅವಿಯಲ್ ಸವೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮುಂದಿನ ದಿನಗಳಲ್ಲಿ ನಗರದಲ್ಲಿ ಅಳವಡಿಕೆಯಾಗುವ ಪ್ರತಿ ಅನಧಿಕೃತ ಜಾಹೀರಾತು ಫಲಕಕ್ಕೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ತಲಾ 50 ಸಾವಿರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಬೇಕು ಎಂದು ಸೂಚನೆ ನೀಡಿದೆ. ನಗರದಲ್ಲಿ ಅನಧಿಕೃತ ಫೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ ಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಮಾಯಿಗೇಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯದಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಎಜುಕೇಷನ್ (ಸಿಬಿಎಸ್ಸಿ) ಮತ್ತು ಕೌನ್ಸಿಲ್ ಪಾರ್ ದಿ ಇಂಡಿಯನ್ ಸ್ಕೂಲ್ ಆಫ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್‌ಸಿಐ) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿ, ಕಾನೂನು ರೂಪಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ, ಹಲವು ಮಕ್ಕಳ ಪೋಷಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿ.ಸೋಮಸೇಖರ್ ಎಂಬುವರು ಸೇರಿದಂರೆ 19 ಮಂದಿ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ. ಕನ್ನಡ ಮಾತೃಭಾಷೆಯಲ್ಲದ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಮಧ್ಯಭಾಗದಲ್ಲಿ ಕರ್ನಾಟಕದ ಶಾಲೆಗಳಿಗೆ ಸೇರುವ ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡಿರುವುದರಿಂದ ಕನ್ನಡ ಭಾಷೆ ಅಧ್ಯಯನ ಮಾಡಲು ಕಷ್ಟವಾಗುತ್ತದೆ. ಅಲ್ಲದೆ, ಕನ್ನಡ ಭಾಷೆಯನ್ನು ಕಡ್ಡಾಯ ಮಾಡದಿದ್ದಲ್ಲಿ ಪ್ರಸ್ತುತ ನೀಡಿರುವ ಎನ್‌ಒಸಿಯನ್ನು ಹಿಂಪಡೆಯುವುದಾಗಿ ರಾಜ್ಯದ ಅಧಿಕಾರಿಗಳು…
ಜಾಮೀನು ಕೊಡಿಸುವಂತೆ ಹಲ್ಲೆ ಮಾಡಿ, ಹಣ ದೋಚಿದ್ದ ರೌಡಿಶೀಟರ್ ಸಹಿತ ಮೂವರು ಆರೋಪಿಗಳನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ರಾಜೇಶ್, ಮಂಜ ಹಾಗೂ ನವೀನ ಬಂಧಿತ ಆರೋಪಿಗಳು. ವಕೀಲ ಗಿರಿಧರ್ ಎಂಬುವವರು ನೀಡಿದ ದೂರಿನನ್ವಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ದೂರುದಾರ ಗಿರಿಧರ್ ತಮ್ಮ ಸ್ನೇಹಿತನಾಗಿದ್ದ ಹರ್ಷಿತ್ ಜೊತೆ ಜುಲೈ 24ರಂದು ಕಾರಿನಲ್ಲಿ ತೆರಳಿದ್ದರು. ಈ ವೇಳೆ ಸಮೀಪದಲ್ಲೇ ತನ್ನ ಸ್ನೇಹಿತ ರಾಜೇಶ್ ನ ಮನೆಯಿದೆ, ಭೇಟಿಯಾಗೋಣ’ ಎಂದು ಹೇಳಿದ್ದ ಹರ್ಷಿತ್ ನೊಂದಿಗೆ ಗಿರಿಧರ್ ತೆರಳಿದ್ದರು. ಮನೆಯಲ್ಲಿ ರಾಜೇಶ್, ಜಾನ್, ಭರತ್ ಎಂಬಾತ ಸೇರಿದಂತೆ ಐವರು ಇದ್ದರು. ಮನೆಯಲ್ಲಿ ಏಕಾಏಕಿ ಗಿರಿಧರ್ ಗೆ ‘ನೀನು ಏನು ಮಾಡುತ್ತೀಯೋ ಗೊತ್ತಿಲ್ಲ. ತಕ್ಷಣ 5 ಲಕ್ಷ ರೂ. ತರಿಸಿಕೊಡಬೇಕು. ಹಾಗು ನಮ್ಮ ಕಡೆಯ ಎಂಟು ಜನರಿಗೆ ಜಾಮೀನು ಕೊಡಿಸಬೇಕು ಎಂದು ಬೆದರಿಕೆ ಹಾಕಿದ್ದರು ಎಂದು ದೂರು ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಮಾಧ್ಯಮಗಳು ಅತ್ಯಂತ ಯೋಗ್ಯ ವಿಧಾನದಲ್ಲಿ ಸುದ್ದಿಗಳನ್ನು ಪ್ರಕಟಿಸಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ರುವ ಪ್ರಕರಣ ರದ್ದು ಕೋರಿ ವಿವಿಧ ಪತ್ರಿಕೆಗಳ ಸಂಪಾದಕರು ಮತ್ತು ವರದಿಗಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ಮಾಧ್ಯಮಗಳಲ್ಲಿ ತಾಲಿಬಾನ್, ಗೂಂಡಾ, ಪುಂಡಾಟಿಕೆ ಎಂಬ ಪದಗಳ ಬಳಕೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ತಿಳಿಸಿದೆ. ಪತ್ರಕರ್ತರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸಾರ್ವಜನಿಕರ ಅಗತ್ಯತೆಗಳನ್ನು ಪೂರೈಸುತ್ತವೆ. ಈ ಸುದ್ದಿಗಳು ಸಮಾಜದ ಮೇಲೆ ವ್ಯಾಪಕ ಪರಿಣಾಮ ಬೀರುತ್ತವೆ. ಹೀಗಾಗಿ ಸುದ್ದಿ ಮಾಧ್ಯಮಗಳು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸೂಚಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್…