Author: admin

ಕಡೂರು: ಚಿಕ್ಕಮಗಳೂರಿನ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ವಿಚಾರವಾಗಿ ವೈಎಸ್‌ವಿ ದತ್ತಾ ಜತೆ ‘ಕೈ’ ಅಭ್ಯರ್ಥಿ ಆನಂದ್ ಶುಕ್ರವಾರ ನಡೆಸಿದ ಸಭೆ ವಿಫಲವಾಗಿದೆ. ಪಕ್ಷೇತರ ಅಭ್ಯರ್ಥಿಯಾಗುವ ಬಗ್ಗೆ ಆನಂದ್ ಸಮ್ಮುಖದಲ್ಲೇ ದತ್ತಾ ಸುಳಿವು ನೀಡಿದ್ದಾರೆ. ಇದು ಕಡೂರು ರಾಜಕೀಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ಸುಳಿವು ನೀಡಿದೆ. ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ಮನೆಗೆ ತೆರಳಿ ಅವರ ಮನವೊಲಿಸಲು ಆನಂದ್ ಮುಂದಾಗಿದ್ದರು. ಆದರೆ, ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ದತ್ತಾ ಸ್ಪಷ್ಟಪಡಿಸಿದ್ದಾರೆ. ಬೆಂಬಲಿಗರ ತೀರ್ಮಾನವೇ ಅಂತಿಮ. ಭಾನುವಾರ ಬೆಂಬಲಿಗರ ಜೊತೆ ಸಭೆ ನಡೆಸಿ ತೀರ್ಮಾನಿಸುತ್ತೇನೆ ಎಂದು ದತ್ತಾ ಹೇಳಿದ್ದಾರೆ. ಪಕ್ಷೇತರರಾಗುವಂತೆ ದತ್ತಾಗೆ ಬೆಂಬಲಿಗರು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ಎದುರೇ ಬೆಂಬಲಿಗರು ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 7ರಂದು ಗದಗ ಜಿಲ್ಲೆ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಮೊದಲ ವರ್ಷಧಾರೆಯಾಗಿದೆ. ಗದಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮೋಡ ಮುಸುಕಿದ ವಾತಾವರಣ ಇದ್ದು, ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ಸಿಡಿಲು ಸಹಿತ ಮಳೆಯಾಗಿದೆ.  ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರಿಗೆ ಸಿಡಿಲು ಬಡಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶರಣಪ್ಪ ಪುರದ (20), ದೇವರಾಜ್ ಬಾಡಗಿ (16) ಮೃತಪಟ್ಟವರು. ಘಟನೆಯಲ್ಲಿ 12 ವರ್ಷದ ಸುನೀಲ್ ಪುರದ ಎಂಬ ಬಾಲಕನಿಗೂ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ನಾಲ್ಕು ಕುರಿಗಳು, ಒಂದು ಆಡು ಕೂಡ ಸಾವನ್ನಪ್ಪಿವೆ. ಸದ್ಯ ಮೃತರಾಗಿರುವ ಶರಣಪ್ಪ ಹಾಗೂ ದೇವರಾಜ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಗದಗ ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನ್ನವರ…

Read More

ರಾಮನಗರ: ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರದ ಬಗ್ಗೆ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ. ನಮಗೆ ಪಂಚರತ್ನ ಯೋಜನೆಯೇ ಸ್ಟಾರ್ ಯೋಜನೆಗಳು. ನಮ್ಮ ಪಕ್ಷದ ಕಾರ್ಯಕರ್ತರೇ ಸ್ಟಾರ್‌ ಪ್ರಚಾರಕರು. ದೇವೇಗೌಡರ 60 ವರ್ಷದ ರಾಜಕಾರಣ, ಅಭಿವೃದ್ಧಿ ಕೊಡುಗೆಯನ್ನು ಜನ ಮರೆತಿಲ್ಲ. ಹೀಗಾಗಿ ನಾವು ಯಾವುದೇ ಸಿನಿಮಾ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು:ಎರಡು ಮಕ್ಕಳ ತಾಯಿಯೊಬ್ಬರು, ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 6 ವರ್ಷದ ಹಿಂದೆ ಮದುವೆಯಾಗಿದ್ದ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು ನಂದಿನಿ ಪತಿ ಸಲೂಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಅದರಂತೆ ನಿನ್ನೆ(ಏಪ್ರಿಲ್ 06) ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಎರಡು ಮಕ್ಕಳ ತಾಯಿಯೊಬ್ಬರು ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ‌(30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, 6 ವರ್ಷದ ಹಿಂದೆ ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಏಪ್ರಿಲ್ 6ರಂದು ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ  ಎಂದು ಹೇಳಲಾಗಿದೆ. ಈ ಪ್ರಕರಣ ತೀರಾ ವಿಚಿತ್ರವಾಗಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಿಚಾರಣೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಅಮುಲ್ ​ನಲ್ಲಿ ಕೆಎಂಎಫ್ ​​ಹಾಲು ಒಕ್ಕೂಟ ವಿಲೀನ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದರೂ, ಪ್ರತಿಪಕ್ಷಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ವಿರುದ್ಧ ಹರಿಹಾಯ್ದಿದ್ದಾರೆ. “ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ…!!” ಎಂದು ಟ್ವೀಟ್​ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಡಾ.ಜಿ.ಪರಮೇಶ್ವರ್ ಗೆ ಕೊರಟಗೆರೆ ಕ್ಷೇತ್ರದಲ್ಲಿ ಸೋಲಿನ ಭಯ ಕಾಡ್ತಿದೆ. ಅದಕ್ಕಾಗಿಯೇ ನಮ್ಮ ವೀರಶೈವ–ಲಿಂಗಾಯಿತ ಸಮಾಜದ ಸಮಾವೇಶ ಮಾಡ್ತಾ ಇದ್ದಾರೆ. ಕೊರಟಗೆರೆ ವೀರಶೈವ–ಲಿಂಗಾಯಿತರ ನಡೆ ಪರಮೇಶ್ವರ್ ಕಡೆ ಸಮಾವೇಶಕ್ಕೆ ನಮ್ಮ ಸಮಾಜದ ಮುಖಂಡರು ಬರುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರೈತಮೋರ್ಚ ಜಿಲ್ಲಾಧ್ಯಕ್ಷ ವಿಶ್ವನಾಥ್ ಅಪ್ಪಾಜಪ್ಪ ತಿಳಿಸಿದರು. ಕೊರಟಗೆರೆ ಪಟ್ಟಣದ ಕಾಮಧೇನು ಭವನದಲ್ಲಿ ಕೊರಟಗೆರೆ ವೀರಶೈವ ಲಿಂಗಾಯಿತ ಸಮುದಾಯದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ವೀರಶೈವ ಮತ್ತು ಲಿಂಗಾಯಿತ ಸಮುದಾಯ ಬೇರ್ಪಡಿಸುವ ಕೆಲಸವನ್ನು ಸಿದ್ದರಾಮಯ್ಯ ಸರಕಾರ ಮಾಡಿತ್ತು. ನಮ್ಮ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಿರುವ  ಬೊಮ್ಮಾಯಿ ನೇತೃತ್ವದ ಬಿಜೆಪಿ ಪಕ್ಷದ ಪರವಾಗಿಯೇ ವೀರಶೈವ ಲಿಂಗಾಯಿತ ಸಮುದಾಯ ಇರಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಬೃಹತ್ ಸಮಾವೇಶ ಏರ್ಪಡಿಸುತ್ತೇವೆ ಎಂದು ಹೇಳಿದರು. ಬಿಜೆಪಿ ಯುವಮೋರ್ಚ ರಾಜ್ಯಕಾರ್ಯ ಕಾರಣಿ ಸದಸ್ಯ ರುದ್ರೇಶ್ ಮಾತನಾಡಿ, ವೀರಶೈವ ಲಿಂಗಾಯಿತ ಸಮಾಜವು ಬಿಜೆಪಿ ಸರಕಾರದ ಪರವಾಗಿಯೇ ಇದೆ. ನಮ್ಮ ಸಮಾಜಕ್ಕೆ ಕಾಂಗ್ರೆಸ್ ಮತ್ತು…

Read More

ತಿಪಟೂರು ತಾಲೂಕು ಕಾಂಗ್ರೆಸ್ ನಲ್ಲಿ ಲೋಕೇಶ್ವರ್ ಬಣ,  ಷಡಕ್ಷರಿ ಬಣ ಎಂಬುವುದು ಇಲ್ಲ, ಪಕ್ಷದ ಹೈಕಮಾಂಡ್ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಿದ ಬಳಿಕ ಲೋಕೇಶ್ ಅವರು ಪಕ್ಷದ ನಿಯಮಕ್ಕೆ ಬದ್ಧರಾಗಿ ಗೆಲುವಿಗೆ ಹೆಗಲು ಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಲೋಕೇಶ್ವರ್ ಹಾಗೂ ಕೆ.ಷಡಕ್ಷರಿ ಅವರು ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ  ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಕ್ಷೇತ್ರದ ಸಮಸ್ಯೆಗಳನ್ನು ಮುಂದಿಟ್ಟು ಮತಯಾಚಿಸುತ್ತೇವೆ, ಜೊತೆಯಾಗಿ ಕೆಲಸ ಮಾಡುತ್ತೇವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕೆ.ಷಡಕ್ಷರಿ  ಹೇಳಿದರು. ಲೋಕೇಶ್ ಅವರು ಮಾತನಾಡಿ, ತಡವಾಗಿಯಾದರೂ ಒಳ್ಳೆ ನಿರ್ಧಾರ ಕೈಗೊಳ್ಳಲಾಗಿದೆ. ಸಣ್ಣ ಸಣ್ಣ ನದಿ ಸಮುದ್ರ ಸೇರಿದ ನಂತರ, ನೀರೆಲ್ಲ ಒಂದಾದಂತೆ, ನಾವು ಒಂದಾಗಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ಹಣಕಾಸು ನೀತಿಯನ್ನು ಘೋಷಣೆ ಮಾಡಿದ್ದು, ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ವ್ಯಾಪ್ತಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಪ್ರಕಟಣೆಯ ಪ್ರಕಾರ, ಸಾಲಗಾರರು ಬ್ಯಾಂಕ್‌ಗಳಿಂದ ಡಿಜಿಟಲ್ ಕ್ರೆಡಿಟ್ ಲೈನ್‌ಗಳನ್ನು ಪ್ರವೇಶಿಸಲು UPI ಅನ್ನು ಬಳಸಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ. ಆರ್‌ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ಪ್ರಕಾರ ‘ಯುಪಿಐ ಭಾರತದಲ್ಲಿ ಚಿಲ್ಲರೆ ಪಾವತಿಗಳ ಮಾದರಿಯನ್ನು ಬದಲಾಯಿಸಿದೆ. ಕಾಲಕಾಲಕ್ಕೆ ಹೊಸ ಉತ್ಪನ್ನಗಳು ಮತ್ತು ವೈಶಿಷ್ಟ್ಯಗಳನ್ನು ಅಭಿವೃದ್ಧಿಪಡಿಸಲು ಯುಪಿಐನ ಬಲವನ್ನು ಬಳಸಿಕೊಳ್ಳಲಾಗಿದೆ. ಮಾರ್ಚ್ 2023 ರಲ್ಲಿ, UPI 8.7 ಶತಕೋಟಿ ವಹಿವಾಟುಗಳನ್ನು ದಾಖಲಿಸಿಕೊಂಡಿದೆ. ಅಲ್ಲದೆ, ವರ್ಷದಿಂದ ವರ್ಷಕ್ಕೆ, ನೈಜ-ಸಮಯದ ಪಾವತಿಗಳು 60 ಪ್ರತಿಶತದಷ್ಟು ಹೆಚ್ಚಾಗುತ್ತಿದೆ . UPI ಮೂಲಕ ಪಾವತಿಗಳು ಕಳೆದ 12 ತಿಂಗಳುಗಳಲ್ಲಿ ಗಣನೀಯವಾಗಿ ಬೆಳೆದಿದ್ದು, ದೈನಂದಿನ ವಹಿವಾಟು 36 ಕೋಟಿಗಳನ್ನು ದಾಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ತುರುವೇಕೆರೆ ವಿಧಾನಸಭಾ ಕ್ಷೇತ್ರದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಹಟ್ಟಯ್ಯ ಎನ್. ಅವರನ್ನು ಆಯ್ಕೆ ಮಾಡಲಾಯಿತು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಎನ್. ಮೂರ್ತಿ ಅವರು ಅಭ್ಯರ್ಥಿಯನ್ನು ಘೋಷಿಸಿದರು.  ಇದೇ ವೇಳೆ ಮಾತನಾಡಿದ ಹಟ್ಟಯ್ಯ ಅವರು, ಈ ಚುನಾವಣೆಯಲ್ಲಿ ನಮ್ಮ ಆರ್ ಪಿಐ ಪಕ್ಷದ ಚಿಹ್ನೆಯಾದ ಪೆನ್ನಿಗೆ ಮತ ಹಾಕುವಂತೆ ಮನವಿ ಮಾಡಿಕೊಂಡರು. ನಮ್ಮ ದೇಶಕ್ಕೆ ನಿರುದ್ಯೋಗ ಬಹುದೊಡ್ಡ ಸವಾಲಾಗಿದೆ, ಕೋಮು, ಜಾತಿ ಘರ್ಷಣೆ ತೀವ್ರಗೊಂಡಿವೆ, ಸ್ವಜನ ಪಕ್ಷಪಾತದ ದುರಾಡಳಿತ, ತೀವ್ರ ಭ್ರಷ್ಟಾಚಾರದಿಂದ ರಾಜಕಾರಣ ದಿವಾಳಿಯಾಗಿದೆ, ಜಾಗತಿಕ ಸಮೀಕ್ಷೆಯಂತೆ ಹಸಿವಿನಿಂದ ಭೀಕರ ಸಾವನ್ನಪ್ಪುವ 121 ದೇಶಗಳಲ್ಲಿ ಭಾರತ 107ನೇ ಸ್ಥಾನ ಪಡೆದಿದೆ ಎಂದರು. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇಲ್ಲಿಯವರೆಗೂ, ಯಾವ ಪಕ್ಷವೂ ಮಾಡದ ಅಭಿವೃದ್ಧಿ ಕೆಲಸ ಮಾಡಲಾಗುವುದು, ನಮ್ಮ ಪಕ್ಷ ಜಿಲ್ಲೆಯಾದ್ಯಂತ 10 ಕ್ಷೇತ್ರಗಳಿಂದಲೂ  ಸ್ಪರ್ಧಿಸಲಿದ್ದು, ಐದರಿಂದ ಆರು ಕ್ಷೇತ್ರಗಳಲ್ಲಿ  ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷರಾದ ಚಂದ್ರು,…

Read More