Author: admin

ತುಮಕೂರು: ಕಾಂಗ್ರೆಸ್ ಯಾವಾಗಲೂ ಪ್ರಾಮಾಣಿಕ ಅಭ್ಯರ್ಥಿಗಳನ್ನು ಗುರುತಿಸಿ ಅವಕಾಶ ಕೊಡುತ್ತಿದೆ, ಸತ್ಯಕ್ಕೆ, ಪ್ರಾಮಾಣಿಕತೆಗೆ ದೊರೆತಿರುವ ಗೆಲುವು ಅಂತಾ ಭಾವಿಸುತ್ತೇನೆ ಎಂದು ತುಮಕೂರು ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹ್ಮದ್ ಹೇಳಿದರು. ಕಾಂಗ್ರೆಸ್ ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ಕೊಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು. ತುಮಕೂರು ನಗರದ ಏಳಿಗೆ ಹಾಗೂ ಶಾಂತಿಗಾಗಿ ಶ್ರಮಿಸುತ್ತೇನೆ. ಎಲ್ಲಾ ಪಕ್ಷದಲ್ಲೂ ಭಿನ್ನಾಭಿಪ್ರಾಯ ಇರುತ್ತದೆ. ಎಲ್ಲರನ್ನೂ ವಿಶ್ವಾಸದಿಂದ ತೆಗೆದುಕೊಂಡು ಹೋಗ್ತೇನೆ. ನಾನು ಹಿರಿಯ ಮುಖಂಡ ಷಫಿ ಅಹ್ಮದ್ ಜೊತೆ 20 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಷಫಿ ಅಹ್ಮದ್ ಸೇರಿ ಎಲ್ಲಾ ಅಸಮಾನಿತರ ಜೊತೆ ಸೌಹಾರ್ದಯುತವಾಗಿ ಮಾತನಾಡ್ತೇನೆ. ಷಫಿ ಅಹ್ಮದ್ ಹಾಗೂ ಪಕ್ಷದ ಮುಖಂಡರ ಜೊತೆಯಲ್ಲೇ ಪ್ರಚಾರ ಕಾರ್ಯ ಮಾಡ್ತೇನೆ ಎಂದು ಅವರು ಹೇಳಿದರು. ಅರ್ಹರನ್ನು ಪಕ್ಷ…

Read More

ರಾಯಚೂರು: ಬಿಜೆಪಿ ಶಾಸಕನ ಭಾವಚಿತ್ರವಿದ್ದ ಅಂಬುಲೆನ್ಸ್‌ನ್ನು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸೀಜ್ ಮಾಡಿದ ಪ್ರಕರಣ ದೇವದುರ್ಗದ ಅರಕೇರಾದಲ್ಲಿ ನಡೆದಿದೆ. ಶಾಸಕ ಶಿವನಗೌಡ ನಾಯಕ್ ಭಾವಚಿತ್ರವಿದ್ದ ಅಂಬುಲೆನ್ಸ್ ಅರಕೆರಾದ ನಾಡಗೌಡ ಆಸ್ಪತ್ರೆ ಬಳಿ ನಿಂತಿತ್ತು. ಈ ವೇಳೆ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಅಂಬುಲೆನ್ಸ್ ವಶಕ್ಕೆ ಪಡೆದಿದ್ದಾರೆ. ಚಾಲಕ ಫಕೀರಯ್ಯ ಹಾಗೂ ಆಂಬ್ಯುಲೆನ್ಸ್ ಮಾಲೀಕ ಹನುಂತರಾಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದೇವದುರ್ಗದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಶಾಸಕನ ಭಾವಚಿತ್ರವನ್ನು ಅಂಬುಲೆನ್ಸ್‌ನಲ್ಲಿ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮೈಸೂರು:  ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳಷ್ಟೇ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಇಂದು ವಿಶ್ವ ಆರೋಗ್ಯ ದಿನ. ವಿಶ್ವ ಆರೋಗ್ಯ ಸಂಸ್ಥೆ ಅಸ್ತಿತ್ವಕ್ಕೆ ಬಂದು ಎಪ್ಪತ್ತೈದು ವರ್ಷಗಳು ಕಳೆದಿವೆ. ಜಾಗತಿಕ ಸವಾಲನ್ನು ಒಡ್ಡುವ ನೈಸರ್ಗಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವುದು ಈ ದಿನದ ಉದ್ದೇಶವಾಗಿದೆ. ಆರೋಗ್ಯ ರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತದ ಜನರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು WHO ಗುರಿ ಹೊಂದಿದೆ. ಈ ವರ್ಷದ ಥೀಮ್ ಎಲ್ಲರಿಗೂ ಆರೋಗ್ಯಕರ ಜೀವನ. ವ್ಯಕ್ತಿಯ ಆರೋಗ್ಯದ ಗುಣಮಟ್ಟವು ಜೀವನ ಪರಿಸ್ಥಿತಿಗಳಿಗೆ ಸಂಬಂಧಿಸಿದೆ. ಆಫ್ರಿಕನ್ ದೇಶಗಳು ಸೇರಿದಂತೆ ಎಬೋಲಾ ಮತ್ತು ಸಾರ್ಸ್ ವೈರಸ್‌ನಂತಹ ಗಂಭೀರ ಸಾಂಕ್ರಾಮಿಕ ರೋಗಗಳು ಬಿಕ್ಕಟ್ಟಾಗುತ್ತಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಅದಕ್ಕೆ ಸಾಮೂಹಿಕ ಪ್ರಯತ್ನ ಬೇಕು. ದೇಶವು ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ಸಂದರ್ಭದಲ್ಲಿ  ವಿಶ್ವ ಆರೋಗ್ಯ ದಿನವನ್ನು  ಆಚರಿಸಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್…

Read More

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಬಿಜೆಪಿಯು ಪ್ರಚಾರಕ್ಕೆ ಸ್ಟಾರ್ ನಟರ ಮೊರೆ ಹೋಗಿದ್ದು , ಈ ನಡುವೆ ಎಲ್ಲಾ ಸ್ಟಾರ್ ನಟರು ಬಿಜೆಪಿ ಪರ ಪ್ರಚಾರಕ್ಕೆ ಬಂದರೆ ಸ್ವಾಗತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನಟ ಕಿಚ್ಚ ಸುದೀಪ್ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ ಬೊಮ್ಮಾಯಿ ಅವರು ಹೇಳಿದ ಕಡೆಗಳಲ್ಲಿಯೂ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್, ನಟ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕ ಪಕ್ಷದ ಸ್ಟಾರ್ ಕ್ಯಾಂಪೇನರ್ ಆಗಿಯೇ ಪ್ರಚಾರ ಮಾಡುತ್ತಾರೆ. ಈಗಾಗಲೇ ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಸುದೀಪ್ ಎಲ್ಲೆಲ್ಲಿ ಪ್ರಚಾರ ಮಾಡ್ತಾರೆಂದು ಶೀಘ್ರವೇ ತೀರ್ಮಾನ ಮಾಡಲಾಗುತ್ತದೆ  ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಗೋಕಾಕ: ಕಾಂಗ್ರೆಸ್‌ ಹೈಕಮಾಂಡ್‌ 2ನೇ ಪಟ್ಟಿ ಇಂದು ಬಿಡುಗಡೆಗೊಳಿಸಿದ್ದು, ಶೀಘ್ರವೇ 3ನೇ ಪಟ್ಟಿ ಬಿಡುಗಡೆಗೊಳಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಆಯಾಮಗಳಿಂದ ಸರ್ವೇ ಮಾಡಿ ಹೈಕಮಾಂಡ್‌ ಅಭ್ಯರ್ಥಿಗಳ ಆಯ್ಕೆ ಮಾಡಿದ್ದು, ಸ್ಥಳೀಯ ನಾಯಕರ ಅಭಿಪ್ರಾಯ ಕೂಡ ಪಡೆದಿದೆ. ಕೆಲವು ಕ್ಷೇತ್ರಗಳ ಆಕಾಂಕ್ಷಿಗಳು ಒಮ್ಮತ ಸೂಚಿಸಿದ್ದಾಗ ತಾವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು. ನಾಳೆ 3ನೇ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಏಕೆಂದರೆ ಅಭ್ಯರ್ಥಿಗಳು ಮತದಾರರ ಮನೆ ಮನೆಗೆ ತಲುಪಬೇಕು. ಕೆಲವು ಕ್ಷೇತ್ರಗಳಲ್ಲಿ ಹೊಸಬರಿಗೆ ನೀಡಿದ್ದಾರೋ, ಹಳಬರಿಗೆ ಟಿಕೆಟ್‌ ನೀಡದ್ದಾರೋ ಅನ್ನುವುದು ಮುಖ್ಯವಲ್ಲ. ಪಕ್ಷದ ತೀರ್ಮಾನವೇ  ಅಂತಿಮವೆಂದು ಹೇಳಿದರು. ಚಿತ್ರ ನಟ ಸುದೀಪ್‌ ಅವರಿಗೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಲು ಅಥವಾ ಯಾವುದೇ ಪಕ್ಷದ ಪರ ಪ್ರಚಾರ ಮಾಡಲು ನಿರ್ಬಂಧವಿಲ್ಲ. ನನಗೆ ಬೇಕಾದ ವ್ಯಕ್ತಿಗಳ ಪರ ಅಷ್ಟೇ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾರಣ ಸುದೀಪ್‌ ನಿಲುವಿನಲ್ಲಿ ಸ್ಪಷ್ಟತೆ ಇಲ್ಲ ಎಂದರು.…

Read More

ಇಂದು ಜಗತ್ತಿನಾದ್ಯಂತ ಕ್ರೈಸ್ತರು ಕ್ರಿಸ್ತನ ಸಂಕಟದ ನೆನಪಿಗಾಗಿ ಶುಭ ಶುಕ್ರವಾರವನ್ನು ಆಚರಿಸುತ್ತಾರೆ. ದೇವಾಲಯಗಳಲ್ಲಿ ಬೆಳಗಿನ ಪ್ರಾರ್ಥನೆ ಮತ್ತು ವಿಶೇಷ ಸೇವೆಗಳು ನಡೆಯಲಿವೆ. ಇಡೀ ಪ್ರಪಂಚದ ಪಾಪಗಳನ್ನು ಕಳೆದುಕೊಳ್ಳಲು ಶಿಲುಬೆಗೇರಿಸಿದ ದೇವರ ಮಗನಾದ ಕ್ರಿಸ್ತನ ಸ್ಮರಣೆಯೊಂದಿಗೆ ವಿವಿಧ ಚರ್ಚ್‌ಗಳಲ್ಲಿ ವೇ ಆಫ್ ದಿ ಕ್ರಾಸ್ ಇರುತ್ತದೆ. ಯೊವಾನ್ನನು ಬರೆದ ಯೇಸು ಕ್ರಿಸ್ತರ ಪೂಜ್ಯ ಯಾತನೆಗಳ ವೃತ್ತಾಂತ 18:1–19:42 ನಿರೂಪಕ ಯೇಸು ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು. ಅವರು ತಮ್ಮ ಶಿಷ್ಯರೊಡನೆ ಆಗಾಗ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು. ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯ ಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನು ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು. ಯೇಸುವಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, ಯೇಸು: ನೀವು ಯಾರನ್ನು ಹುಡುಕುತ್ತಿದ್ದೀರಿ ? ನಿರೂಪಕ: ಎಂದು ಕೇಳಿದರು, ಅವರು,…

Read More

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆಮಾಡುವಂಥ ಪ್ರಚೋದನಾಕಾರಿ ಭಾಷಣ ಸಚಿವರು ಮಾಡಿದ್ದರು. ತಮಿಳು ಭಾಷಿಕರನ್ನು ಎತ್ತಿಕಟ್ಟಿ ಹಲ್ಲೆ ಮಾಡಲು ಸೂಚನೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಸಚಿವ ಮುನಿರತ್ನ ಮಾಡಿದ್ದು ಎನ್ನಲಾದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದ ಆರ್​ಆರ್​ ನಗರ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದರು. ಇದರ ಮೇರೆಗೆ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಶಾಸಕ ಸಂಜೀವ್ ಮಠಂದೂರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗುತ್ತಿದ್ದ, ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಶಾಸಕ ಸಂಜೀವ್ ಮಠಂದೂರು ಉಪ್ಪಿನಂಗಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇದರ ಬೆನಲ್ಲೇ ಇದೀಗ ಫೋಟೋದಲ್ಲಿ ಇರುವ ಮಹಿಳೆ ಸಹ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಿಳೆ, ನನ್ನ ವೈಯಕ್ತಿಕ ಫೋಟೋಗಳನ್ನು ಪುತ್ತೂರಿನ ಶಾಸಕರ ಫೋಟೋ ಜೊತೆ ಜೋಡಿಸಿದ್ದು, ಎಡಿಟ್ ಮಾಡಿದ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ. ಇದರಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತುಂಬಾ ನೋವಾಗಿದೆ. ಓರ್ವ ಮಹಿಳೆ ಮೇಲೆ ಈ ರೀತಿ ದೌರ್ಜನ್ಯ ಎಸಗುತ್ತಿದ್ದಾರೆ. ಶಾಸಕರಿಗೂ ನನಗೂ ಸಂಬಂಧವಿಲ್ಲ. ಆದರೂ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಶಿಥಿಲಾವಸ್ಥೆಯಲ್ಲಿರುವ ಹಾಗೂ ನೂತನವಾಗಿ ನಿರ್ಮಿಸಲಾಗುತ್ತಿರುವ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಗುರುತಿಸಿ ಅದಕ್ಕೆ ಸೂಕ್ತ ಆರ್ಥಿಕ ನೆರವನ್ನು ಒದಗಿಸಿ ಅದರ ಕಾಯಕಲ್ಪಕ್ಕೆ ಕಂಕಣ ತೊಟ್ಟಿರುವ ಡಾ.ವೀರೇಂದ್ರ ಹೆಗ್ಗಡೆಯವರ ಕಾರ್ಯ ಪ್ರಶಂಸನೀಯ ಎಂದು ಶ್ರೀರಾಮ ಮಂದಿರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಂದ್ರ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲ್ಲೂಕಿನ ದೊಡ್ಡಪೇಟೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀರಾಮ ಮಂದಿರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಮಂಜೂರಾದ 2 ಲಕ್ಷ ಮೌಲ್ಯದ ಡಿ ಡಿ ಯನ್ನು ಸ್ವೀಕರಿಸಿ ಅವರು ಮಾತನ್ನಾಡಿದರು. ಯೋಜನೆಯ ಜಿಲ್ಲಾ ನಿರ್ದೇಶಕಿ ದಯಾಶೀಲ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ತಿಪಟೂರು ತಾಲ್ಲೂಕಿನಲ್ಲಿ ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, 2022-23 ನೇ ಸಾಲಿನಲ್ಲಿ ಇಡೀ ರಾಜ್ಯದಲ್ಲೇ ಗುರುತಿಸಲ್ಪಟ್ಟಿದೆ. ತಾಲ್ಲೂಕಿನಲ್ಲಿ ಸುಮಾರು 120 ಕೋಟಿಯಷ್ಟೂ ಆರ್ಥಿಕ ವ್ಯವಹಾರ ನಡೆದಿದ್ದು, ಇದು ಪಾರದರ್ಶಕವಾಗಿಯೂ ಹಾಗೂ ಸಮರ್ಪಕ ಸದ್ವಿನಿಯೋಗವಾಗಿರುವುದು ಶ್ರೀ ಕ್ಷೇತ್ರದ ಆರ್ಥಿಕ ಶಿಸ್ತಿನ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು ಸಂದರ್ಭದಲ್ಲಿ ಮಂದಿರ ಅಭಿವೃದ್ಧಿ ಸಮತಿಯ ಕಾರ್ಯಾಧ್ಯಕ್ಷ ರಮೇಶ್, ಕೋಶಾಧಿಕಾರಿ…

Read More