Subscribe to Updates
Get the latest creative news from FooBar about art, design and business.
- ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
- ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
- ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
- ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
- ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
- ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
- ಜೈಲಿನಲ್ಲೇ ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ‘ಸ್ಪೆಷಲ್ ಕ್ಲಾಸ್’!
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ
Author: admin
ಗುಬ್ಬಿ: ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರ ಸ್ವಾಮಿ (ಗುಬ್ಬಿಯಪ್ಪ) ಅವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಉಪವಿಭಾಗಾಧಿಕಾರಿಗಳು ಹಾಗೂ ದೇವಾಲಯದ ಆಡಳಿತಾಧಿಕಾರಿ ನಹೀದಾ ಜಮ್ ಜಮ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ದೇವಾಲಯದ ದಾಸೋಹ ಸಭಾಂಗಣದಲ್ಲಿ ಕರೆಯಲಾಗಿತ್ತು. ಸಭೆಯಲ್ಲಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಹಶೀಲ್ದಾರ್ ಆರತಿ ಬಿ. ಕಳೆದ ಬಾರಿ ನಡೆದ ಜಾತ್ರಾ ಮಹೋತ್ಸವದ ಸಾಧಕ ಬಾಧಕಗಳನ್ನು ಚರ್ಚಿಸಿ ಜಾತ್ರೆಯ ಸಂದರ್ಭದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ 18 ಕೋಮಿನ ಮುಖಂಡರು, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ, ದಾಸೋಹ ಸಮಿತಿ ಸೇರಿದಂತೆ ಹಲವು ಮುಖಂಡರ ಚರ್ಚೆ ನಡೆಸಿ ಬೆಸ್ಕಾಂ, ಆರೋಗ್ಯ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರತಿಬಾರಿಯೂ ಜಾತ್ರೆಯ ಸಂದರ್ಭದಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು, ಜಾತ್ರೆಯ ಸಂದರ್ಭದಲ್ಲಿ ಜಿಲ್ಲೆಯ ಮೂಲೆ ಮೂಲೆಯಿಂದ ಹಾಗೂ ಹೊರ ಜಿಲ್ಲೆಗಳಿಂದ ಭಕ್ತರು ಬರುವುದರಿಂದ ಕೆಎಸ್ಆರ್‌ಟಿಸಿ ಅವರು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಲಾಯಿತು, ಜೊತೆಗೆ ಸಾವಿರಾರು ಜನ ಭಾಗವಹಿಸುವುದರಿಂದ ಪೊಲೀಸ್ ಇಲಾಖೆಯು ಸಹ…
ವರದಿ: ಹಾದನೂರು ಚಂದ್ರ ಸರಗೂರು: ಪಟ್ಟಣದಲ್ಲಿ ನಾಯಕ ಸಮಾಜದ ವತಿಯಿಂದ ಶ್ರೀ ಚಿಕ್ಕದೇವಮ್ಮನವರ 49ನೇ ವರ್ಷದ ಅಂಗವಾಗಿ ಶುಕ್ರವಾರ ವಿಶೇಷ ಪೂಜಾ ಮಹೋತ್ಸವ ಹಾಗೂ ಪಲ್ಲಕ್ಕಿ ಉತ್ಸವದ ಮೆರವಣಿಗೆ ವಿಜೃಂಭಣೆಯಿಂದ ನಡೆಸಲಾಯಿತು. ಮಹೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದ ನಾಯಕ ಸಮಾಜದ ಬೀದಿಗಳನ್ನು ವಿವಿಧ ಬಗೆಯ ತಳಿರು ತೋರಣಗಳಿಂದ ಅಲಂಕರಿಸಿ, ಪ್ರತಿ ಬೀದಿಗಳಲ್ಲಿ ರಂಗೋಲಿ ಬಿಡಿಸಿ ಬಣ್ಣ, ಬಣ್ಣದ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಚಿಕ್ಕದೇವಮ್ಮನವರ ದೇವಾಲಯದಲ್ಲಿ ಮುಂಜಾನೆಯಿಂದಲೇ ಹೋಮ, ಹವನ ನಡೆಸಿ, ಗಣಪತಿ ಹೋಮ ಪುಣ್ಯಾಹ, ಕಳಸ ಪ್ರತಿಷ್ಠಾಪಿಸಿ, ನವಗ್ರಹದ ಹೋಮ, ದುರ್ಗಹೋಮ ಸೇರಿದಂತೆ ವಿವಿಧ ಹೋಮಗಳು ಹಾಗೂ ವಿವಿಧ ಪೂಜಾ ಕೈಂಕರ್ಯಗಳು ವಿಶೇಷವಾಗಿ ಜರುಗಿದವು. ಇದಕ್ಕೂ ಮುನ್ನ ಕಪಿಲ ನದಿಗೆ ತೆರಳಿ ಗಂಗೆ ಪೂಜೆ ನಡೆಸಲಾಯಿತು. ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ವಿವಿಧ ಹೂವುಗಳಿಂದ ಅಲಂಕರಿಸಿ, ಪಲ್ಲಕ್ಕಿ ಮೇಲೆ ಅಮ್ಮನವರ ವಿಗ್ರಹ ಕೂರಿಸಿ ಪೂರ್ಣಕುಂಬ ಕಳಸದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಂಗಳವಾದ್ಯ ಮೊಳಗಿದವು. ಸತ್ತಿಗೆ, ಬ್ಯಾಂಡ್‌ಸೆಟ್, ವೀರಗಾಸೆ ಕುಣಿತ ಮೆರವಣಿಗೆಗೆ ಮೆರಗು…
ಗದಗ: ಕಷ್ಟದ ಬದುಕಿನಲ್ಲೂ ಪ್ರಾಮಾಣಿಕತೆಯನ್ನು ಮರೆಯದ 14 ವರ್ಷದ ಬಾಲಕನೊಬ್ಬ ತನಗೆ ಸಿಕ್ಕ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸುವ ಮೂಲಕ ನಾಡಿನ ಗಮನ ಸೆಳೆದಿದ್ದಾನೆ. ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಪ್ರಜ್ವಲ್ ರಿತ್ತಿ ಎಂಬಾತನೇ ಈ “ಹೀರೋ”. ಏನಿದು ಘಟನೆ? ಲಕ್ಕುಂಡಿ ಗ್ರಾಮದ ನಾಲ್ಕನೇ ವಾರ್ಡ್‌ನಲ್ಲಿರುವ ತಮ್ಮ ನಿವೇಶನದಲ್ಲಿ ಪ್ರಜ್ವಲ್ ಮತ್ತು ಆತನ ಮಾವ ಮನೆಗಾಗಿ ತಳಪಾಯ ಅಗೆಯುತ್ತಿದ್ದರು. ಈ ವೇಳೆ ಗುದ್ದಲಿ ಹಾರಿಸಿದಾಗ ತಾಮ್ರದ ಬಿಂದಿಗೆಯೊಂದು ಪತ್ತೆಯಾಗಿದೆ. ಅದನ್ನು ತೆಗೆದು ನೋಡಿದಾಗ ಅದರಲ್ಲಿ ವಿಜಯನಗರ ಕಾಲದ್ದಿರಬಹುದು ಎಂದು ಅಂದಾಜಿಸಲಾದ ಬಂಗಾರದ ನಾಣ್ಯಗಳು ಮತ್ತು ಆಭರಣಗಳಿದ್ದವು. ಪ್ರಾಮಾಣಿಕತೆಯ ಪರಾಕಾಷ್ಠೆ: ಬಡತನದಲ್ಲಿದ್ದರೂ ಪ್ರಜ್ವಲ್ ಅದಕ್ಕೆ ಆಸೆಪಡಲಿಲ್ಲ. ಕೂಡಲೇ ಆತ ಪಂಚಾಯಿತಿ ಸದಸ್ಯರಿಗೆ ಮತ್ತು ಗ್ರಾಮದ ಹಿರಿಯರಿಗೆ ವಿಷಯ ತಿಳಿಸಿದನು. ನಂತರ ಅಧಿಕಾರಿಗಳ ಸಮ್ಮುಖದಲ್ಲಿ ಆ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. “ಚಿನ್ನ ನೋಡಿದಾಗ ಇದು ನನಗೆ ಬೇಡ ಅನ್ನಿಸಿತು. ಹಿಂದೆ ನಿಧಿ ತಿಂದವರ ಮನೆ ಉದ್ದಾರ ಆಗಿಲ್ಲ ಎಂಬ ಮಾತನ್ನು…
ಬಳ್ಳಾರಿಯಲ್ಲಿ ಬ್ಯಾನರ್ ವಿವಾದದ ಕಿಚ್ಚು ತಣ್ಣಗಾಗುವ ಮೊದಲೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ‘ಮಾಡೆಲ್ ಹೌಸ್’ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕಂಟೋನೆಂಟ್ ಪ್ರದೇಶದ ಜಿ–ಸ್ಟಾರ್ ಲೇಔಟ್‌ನಲ್ಲಿ ಸುಮಾರು 73 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಈ ಸುಸಜ್ಜಿತ ಮಾದರಿ ಮನೆಯ ಬಾಗಿಲು, ಕಿಟಕಿಗಳನ್ನು ಮುರಿದ ದುಷ್ಕರ್ಮಿಗಳು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಕೃತ್ಯದ ಹಿಂದೆ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಕೈವಾಡವಿದೆ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಗಂಭೀರವಾಗಿ ಆರೋಪಿಸಿದ್ದಾರೆ. “ಬಳ್ಳಾರಿಯ ಭಸ್ಮಾಸುರನೇ ಈ ಬೆಂಕಿ ಹಚ್ಚುವ ಕೆಲಸ ಮಾಡಿಸಿದ್ದಾರೆ” ಎಂದು ಅವರು ಕಿಡಿಕಾರಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರೂ, ಮನೆಯ ಬೆಲೆಬಾಳುವ ಪೀಠೋಪಕರಣಗಳು ಹಾಗೂ ಕಟ್ಟಿಗೆಯ ಕಂಬಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಯಿಂದಾಗಿ ಬಳ್ಳಾರಿಯಲ್ಲಿ…
ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಸಹಯೋಗದಲ್ಲಿ ತುಮಕೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2025–26’ರ ಸಮಾರೋಪ ಸಮಾರಂಭದಲ್ಲಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಿ, ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಇಂತಹ ಮಹತ್ವದ ರಾಜ್ಯಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸುವ ಶಕ್ತಿ ಹಾಗೂ ಸಾಮರ್ಥ್ಯವಿದೆ ಎಂಬುದನ್ನು ಇಡೀ ರಾಜ್ಯಕ್ಕೆ ತಿಳಿಸಿರುವ ಹೆಮ್ಮೆ ನಮಗಿದೆ ಎಂದರು. ತುಮಕೂರಿನಲ್ಲಿ ಕ್ರೀಡಾಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶದಿಂದ 60 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಕ್ರೀಡಾಂಗಣದಲ್ಲಿ ಅಭ್ಯಾಸ ಪಡೆದ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಕ್ರೀಡಾಭಿವೃದ್ಧಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ, ಹಾಕಿ ಕ್ರೀಡಾಂಗಣ ಹಾಗೂ ಟೆನ್ನಿಸ್ ಅಕಾಡೆಮಿ…
ಸರಗೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಸುಮಾರು ವರ್ಷಗಳ ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಕಿಮ್ಮತ್ತು ಕೊಟ್ಟಿರುವ ಹಾಗೂ ಸಾಗುವಳಿ ಚೀಟಿ ನೀಡಬೇಕೆಂದು ಒತ್ತಾಯಿಸಿ ಸರಗೂರು ಅಭಿವೃದ್ಧಿ ಹೋರಾಟ ಸಮಿತಿ ಹಾಗೂ ಭೂ ಹಕ್ಕುದಾರರ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳದೊಂದಿಗೆ ಗುರುವಾರದಂದು ಜಿಲ್ಲಾಧಿಕಾರಿಗಳು ಬರಬೇಕು ಪಟ್ಟು ಹಿಡಿದು ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ್ ಮೋಹನಕುಮಾರಿರವರಿಗೆ ಮನವಿ ಸಲ್ಲಿಸಿದರು. ನಂತರ ಸಭೆ ಕುರಿತು ಮಾತನಾಡಿದ ಸರಗೂರು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ ರವರು ಕುಂದೂರು, ಲಂಕೆ, ಹುನಗಹಳ್ಳಿ, ಹಾದನೂರು, ಪುರದಕಟ್ಟೆ, ಬರಗಿ, ಮೊಳೆಯೂರು ಇನ್ನೂ ಗ್ರಾಮಗಳಲ್ಲಿ ಸಾವಿರಾರು ರೈತರಿಗೆ ಭೂಮಿಯನ್ನು ಉಳುಮೆ ಮಾಡಿಕೊಂಡು ಬರುತ್ತಿದ್ದಾರೆ. ಅನುಭೋಗದಲ್ಲಿ ಇದ್ದರೂ ಸಾಗುವಳಿ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂದು ತಾಲೂಕು ಆಡಳಿತ ವಿರುದ್ಧ ವಿವಿಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ನೂರಾರು ವರ್ಷಗಳಿಂದ ರೈತರು ಭೂಮಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಸಾಗುವಳಿ ಕ್ರಮಬದ್ಧಗೊಳಿಸಬೇಕೆಂದು ಈ ಹಿಂದೆ ಹಲವು ಬಾರಿ ಶಾಸಕರು ಹಾಗೂ…
ಸರಗೂರು: ಆದಿಕರ್ನಾಟಕ ಮಹಾಸಭಾ ಮಾಜಿ ಗೌರವಾಧ್ಯಕ್ಷ ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ ಪಟ್ಟಣ ಪ್ರವಾಸ ಮಂದಿರದಲ್ಲಿ ಮಂಗಳವಾರದಂದು ಆದಿ ಕರ್ನಾಟಕ ಮಹಾಸಭಾದ ವತಿಯಿಂದ ನಡೆಯಿತು. ಬಸವರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನುಡಿನಮನ ಸಲ್ಲಿಸಲಾಯಿತು. ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನಾ ರಾಜಣ್ಣ ಮಾತನಾಡಿ, ಮಹಾಸಭಾದ ಗೌರವಾಧ್ಯಕ್ಷ ಬಸವರಾಜು, ‘ಯಾರನ್ನೂ ದ್ವೇಷಿಸದ, ಟೀಕಿಸದ, ಅಸೂಯೆ ಪಡದ ಅಜಾತ ಶತ್ರು. ರಾಜ್ಯ ಕಂಡ ಅತ್ಯಂತ ಮೇಧಾವಿ, ಮುತ್ಸದ್ದಿ ರಾಜಕಾರಣಿ ಎಂದರು. ಸುಶಿಕ್ಷಿತ, ಬುದ್ಧಿವಂತ ರಾಜಕಾರಣಿ. ಎಲ್ಲರನ್ನೂ ವಿಶ್ವಾಸದಿಂದ ಕಾಣುತ್ತಿದ್ದ ಅಪರೂಪದ ನಾಯಕ. ಸಾರ್ವಜನಿಕರು ಹಾಗೂ ಸಮಾಜದವರನ್ನು ಅತ್ಯಂತ ಆತ್ಮೀಯವಾಗಿ ಕಂಡು ಸ್ಪಂದಿಸುತ್ತಿದ್ದರು ಎಂದು ನೆನಪಿಸಿಕೊಂಡರು. ಮಹಾಸಭಾದ ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ಬಸವರಾಜು ಅವರು ಸಾರ್ವಜನಿಕ ಜೀವನದಲ್ಲಿ ಎಂದಿಗೂ ಏಕವಚನ ಪದ ಬಳಕೆ ಮಾಡದಂತೆ ನಡೆದುಕೊಂಡಿದ್ದರು. ಅವರ ವ್ಯಕ್ತಿತ್ವ ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಹೇಳಿದರು. ದಲಿತ ಸಮುದಾಯಕ್ಕೆ ಸಮಾಜಕ್ಕೆ ಉತ್ತಮವಾಗಿ ಸಂದೇಶಗಳನ್ನು ನೀಡುತ್ತಾ ಯುವ ಪೀಳಿಗೆ ಯುವಕರಿಗೆ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡಿರುವ ನ್ಯಾಯಾಲಯ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರಕರಣದ ಹಿನ್ನೆಲೆ: ಈ ಹಿಂದೆ ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠವು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಓಲಾ (Ola), ಊಬರ್ (Uber) ಸೇರಿದಂತೆ ವಿವಿಧ ಅಗ್ರಿಗೇಟರ್ ಕಂಪನಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದವು. ಹೈಕೋರ್ಟ್ ಆದೇಶದ ಪ್ರಮುಖಾಂಶಗಳು: ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದೆ. ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್‌ಗಳು ತಮ್ಮ ವಾಹನಗಳನ್ನು ಸಾರಿಗೆ ವಾಹನಗಳಾಗಿ ಬಳಸಲು ಅನುಮತಿ ಕೋರಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಹ ಅರ್ಜಿಗಳನ್ನು ಪರಿಶೀಲಿಸಿ ಸರ್ಕಾರವು ಅನುಮತಿ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ.…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ತನಿಖೆ ನಡೆಸಿ, ಆರೋಪಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಜ್ಯ ಗೃಹ ಇಲಾಖೆಯು ಒಟ್ಟು 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ. ಯಾರಿಗೆ ಎಷ್ಟು ಬಹುಮಾನ? ಡಿಜಿ ಮತ್ತು ಐಜಿಪಿ ಹುದ್ದೆಯ ಅಧಿಕಾರಿಗಳು: ತಲಾ 20,000 ರೂ.ಗಳಂತೆ ಒಟ್ಟು 25 ಲಕ್ಷ ರೂ. ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ ಶ್ರೇಣಿಯ ಅಧಿಕಾರಿಗಳು: ತಲಾ 8,000 ರೂ.ಗಳಂತೆ ಒಟ್ಟು 3 ಲಕ್ಷ ರೂ. ಇತರೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ: ತಲಾ 5,000 ರೂ.ಗಳಂತೆ ಒಟ್ಟು 2 ಲಕ್ಷ ರೂ. ಜಿಲ್ಲಾ ಮಟ್ಟದ ಅಧಿಕಾರಿಗಳು: ತಲಾ 5,000 ರೂ.ಗಳಂತೆ ಒಟ್ಟು 1 ಲಕ್ಷ ರೂ. ಯಶಸ್ವಿ ತನಿಖೆಗೆ ಸಂದ ಗೌರವ: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಸಂಕೀರ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಭೇದಿಸಿ, ಸೂಕ್ತ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯದಲ್ಲಿ ಅಪರಾಧ ಸಾಬೀತುಪಡಿಸುವಲ್ಲಿ…
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಬಸ್ ಹರಿದು ನಾಲ್ಕು ವರ್ಷದ ಹೆಣ್ಣುಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆಯ ವಿವರ: ಮೃತ ಬಾಲಕಿಯನ್ನು ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಎಂದು ಗುರುತಿಸಲಾಗಿದೆ. ಸಾರಿಗೆ ಬಸ್ ಗಬ್ಬೂರಿನಿಂದ ದೇವದುರ್ಗಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಗು ರಸ್ತೆ ದಾಟಲು ಪ್ರಯತ್ನಿಸುತ್ತಿದ್ದಾಗ, ಬಸ್ ಬರುವುದನ್ನು ಗಮನಿಸದೆ ಅಚಾನಕ್ಕಾಗಿ ಅಡ್ಡ ಬಂದಿದೆ ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ಮಗು ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲು: ಘಟನೆಗೆ ಸಂಬಂಧಿಸಿದಂತೆ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯವೇ ಅಥವಾ ಮಗು ಆಕಸ್ಮಿಕವಾಗಿ ಅಡ್ಡ ಬಂದಿದ್ದರಿಂದ ಈ…