Author: admin

ತುಮಕೂರು : ಕ್ಯಾಂಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ತುಮಕೂರು ತಾಲ್ಲೂಕಿನ ಓಬಳಾಪುರದಲ್ಲಿ ನಡೆದಿದೆ. ರವಿಕುಮಾರ್ ಗಂಭೀರವಾಗಿ ಗಾಯಗೊಂಡವರು. ಗಾಯಗೊಂಡ ರವಿಕುಮಾರ್ ಅವರನ್ನ ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಇನ್ನು ಗಾಯಗೊಂಡ ರವಿಕುಮಾರ್ ಮಧುಗಿರಿ ತಾಲ್ಲೂಕಿನ ಬಡಚೌಡನಹಳ್ಳಿ ಗ್ರಾಮದ ನಿವಾಸಿ. ಕ್ಯಾಂಟರ್   ಸ್ಟೇರಿಂಗ್ ಲಾಕ್ ಆದ ಪರಿಣಾಮ ಈ ಘಟನೆ ನಡೆದಿದೆ ಅಂತಾ ಸ್ಥಳೀಕರು ತಿಳಿಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಈ ತಿಂಗಳು 9  ದಿನಗಳ ಬ್ಯಾಂಕ್ ರಜೆಗಳು ಬರಲಿವೆ. ಅದರಲ್ಲಿ ಬಹಳಷ್ಟು ಶುಕ್ರವಾರ ಮತ್ತು ಶನಿವಾರವೂ ಆಗಿರುವುದರಿಂದ ಬ್ಯಾಂಕ್ ವಹಿವಾಟುಗಳು ಮುಚ್ಚುವ ಮೊದಲು ಈ ದಿನಗಳ ಬಗ್ಗೆ ಕಾಳಜಿ ವಹಿಸಬೇಕು. ಏಪ್ರಿಲ್ 7 ಶುಭ ಶುಕ್ರವಾರ. ಏಪ್ರಿಲ್ 8 ರ ಶನಿವಾರವೂ ಬ್ಯಾಂಕ್ ರಜೆ. ಏಪ್ರಿಲ್ 9 ಭಾನುವಾರ. ಆದ್ದರಿಂದ, ಈ ವಾರ ಮೂರು ದಿನಗಳ ಬ್ಯಾಂಕ್ ರಜೆ ಇರುತ್ತದೆ. ಈ ದಿನಗಳಲ್ಲಿ ಬ್ಯಾಂಕ್ ವಹಿವಾಟು ಸಾಧ್ಯವಿಲ್ಲ. ಮುಂದಿನ ವಾರ ಶುಕ್ರವಾರ ಏಪ್ರಿಲ್ 14 ಅಂಬೇಡ್ಕರ್ ಜಯಂತಿ ಮತ್ತು ಏಪ್ರಿಲ್ 15 ಶನಿವಾರ ವಿಷು. ಈ ಎರಡು ದಿನಗಳ ನಂತರ ಭಾನುವಾರದ ನಂತರ, ಈ ವಾರವೂ ಮೂರು ದಿನಗಳ ಬ್ಯಾಂಕ್ ರಜೆ ಇರುತ್ತದೆ. ಮುಂದಿನ ವಾರ ಏಪ್ರಿಲ್ 21 ರಂದು ಈದ್-ಉಲ್-ಫಿತರ್. ಈ ದಿನ ಬ್ಯಾಂಕ್ ಕೆಲಸ ಮಾಡುವುದಿಲ್ಲ. ಏಪ್ರಿಲ್ 22 ರ ಶನಿವಾರ ಮತ್ತು ಏಪ್ರಿಲ್ 23 ರ ಭಾನುವಾರವೂ ಬ್ಯಾಂಕ್ ರಜೆ ಇರುತ್ತದೆ. ಮುಂದಿನ ಭಾನುವಾರ, ಏಪ್ರಿಲ್ 30…

Read More

ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಪೊಲೀಸರ ಕೈಗೆ ಸಿಗದಂತೆ ನಾಪತ್ತೆಯಾಗಿದ್ದ ಮೂವರು ರೌಡಿಶೀಟರ್‌ಗಳನ್ನು ಬಂಧಿಸುವಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಖತಾರ್ನಾಕ್ ರೌಡಿಶೀಟರ್‌ಗಳಾದ ಮಹಮ್ಮದ್ ಜಬೀವುದ್ದೀನ್, ಮಹಮ್ಮದ್ ಮೆಹತಾಬ್ ಹಾಗೂ ದಿನೇಶ್ ಬಂಧಿತ ರೌಡಿಗಳು. ಈ ಮೂವರ ಮೇಲೆ ಬರೋಬ್ಬರಿ ಅರವತ್ತಕ್ಕೂ ಹೆಚ್ಚು ಕೇಸ್‌ಗಳಿದ್ದು, ಪೊಲೀಸರ ಕೈಗೆ ಸಿಗದಂತೆ ಓಡಾಡುತ್ತಿದ್ದರು. ಇಂತಹವರನ್ನೇ ಟಾರ್ಗೆಟ್ ಮಾಡಿ ಹುಡುಕಾಟ ನಡೆಸಿದ ಸಿಸಿಬಿ ಕೊನೆಗೂ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಂಗಳೂರು ಸಿಸಿಬಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ನಗರದಲ್ಲಿ ಆ್ಯಕ್ಟಿವ್ ಆಗಿರುವ ರೌಡಿಶೀಟರ್‌ಗಳು, ವಾರೆಂಟ್ ಇದ್ದರೂ ಕೂಡ ಕೋರ್ಟ್‌ಗೆ ಹಾಜರಾಗದೆ ನಾಪತ್ತೆಯಾಗಿರುವ ರೌಡಿಶೀಟರ್‌ಗಳ ಮೇಲೆ ಕಣ್ಣಿಟ್ಟಿದ್ದಾರೆ. ಆ ನಿಟ್ಟಿನಲ್ಲಿ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು, ಕಳೆದ ಹತ್ತು ವರ್ಷಗಳಿಂದ ಪೊಲೀಸರ ಕೈಗೆ ಸಿಗದಂತೆ ನಾಪತ್ತೆಯಾಗಿದ್ದ ಮೂವರು ರೌಡಿಶೀಟರ್‌ಗಳನ್ನು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬೆಳಗಾವಿ: ಬೆಳ್ಳಂಬೆಳಗ್ಗೆ ಬೆಳಗಾವಿ ಚುನಾವಣಾ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಎರಡು ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹಿರೇಬಾಗೇವಾಡಿ ಟೋಲ್ ಬಳಿ ಖಾಸಗಿ ಬಸ್‌ನಲ್ಲಿ ಸಾಗಿಸುತ್ತಿದ್ದ ಕಂತೆ ಕಂತೆ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಂಬೈನಿಂದ ಮಂಗಳೂರು ಕಡೆಗೆ ಹೊರಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಪಾಸಣೆ ನಡೆಸುವ ಸಂದರ್ಭದಲ್ಲಿ ಹಣದ ಬ್ಯಾಗ್ ಪತ್ತೆಯಾಗಿದೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೊರಟಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ, ತಾಲ್ಲೂಕು ಪಂಚಾಯಿತಿಯ ಅನುಷ್ಠಾನಾಧಿಕಾರಿಗಳ ನೇತೃತ್ವದಲ್ಲಿ,  ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತಂಡದೊಂದಿಗೆ, ಎಲ್ಲಾ ಗ್ರಾಮಗಳಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.  ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಅಗ್ರಹಾರ, ಬುಕ್ಕಾಪಟ್ಟಣ,ಕುರಂಕೋಟೆ, ತೋವಿನಕೆರೆ, ಬೂದಗವಿ ಮತ್ತು ತುಂಬಾಡಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.  ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜಿಲ್ಲಾಡಳಿತವು ಆದೇಶಿಸಿರುವ ಕಾರ್ಯಕ್ರಮಗಳ ಪಟ್ಟಿಯಂತೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲ್ಲೂಕು  ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಸಿಡಿಪಿಓ ಅಂಬಿಕಾ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ದೀಪ ಹಾಗೂ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರ…

Read More

ತುಮಕೂರು  ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದಿಂದ ಹಿಂದುಳಿದ ವರ್ಗಗಳ ಸಮಾವೇಶ ಮಾಡಲು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ನಿರೀಕ್ಷೆಗೂ ಹೆಚ್ಚು ಮುಖಂಡರು ಭಾಗವಹಿಸಿದ್ದು ವಿಶೇಷವಾಗಿತ್ತು.  ಸಭೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಮಾತನಾಡಿ, ನಾವು ಕೆಲವರಿಗೆ ಮಾತ್ರ ಈ ಪೂರ್ವಭಾವಿ ಸಭೆ ಬರುವಂತೆ ಆಹ್ವಾನ ನೀಡಿದ್ದೆವು. ಈ ಸಭೆಗೆ ಇಷ್ಟು ಮುಖಂಡರು ಭಾಗವಹಿಸಿದ್ದು ಬಹಳ ಖುಷಿಯ ಸಂಗತಿ ಎಂದರು. ದೇವೇಗೌಡರ ಅಂದಿನ ದೂರದೃಷ್ಟಿಯ ಕಾರಣ ಇಂದು ಬಹುತೇಕ ಎಲ್ಲಾ ಸಮುದಾಯಕ್ಕೆ ಮೀಸಲಾತಿ ಸಿಕ್ಕಿದೆ. ಹಾಗಾಗಿ  ಈ ಬಾರಿ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯದ ಗದ್ದುಗೆ ಏರಲು ತಾವೆಲ್ಲ  ಶ್ರಮಿಸಬೇಕು ಎಂದು ಕರೆ ನೀಡಿದರು. ಇದೇ ವೇಳೆ ಕೆಲ ಸಮುದಾಯಗಳ ಮುಖಂಡರು ಮಾತನಾಡಿ, ಈ ಬಾರಿ 2013 ರ ಫಲಿತಾಂಶ ಮರುಕಳಿಸುತ್ತಿದೆ.  ಈ ಬಾರಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಖಚಿತ. ಮತ್ತೊಮ್ಮೆ ಕೊರಟಗೆರೆ ಜೆಡಿಎಸ್ ಭದ್ರಕೋಟೆ ಎಂಬುದು ಸಾಬೀತಾಗಲಿದೆ ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ…

Read More

ತುಮಕೂರು:  ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 2019-20ರಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಕೊರಟಗೆರೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅನಿಲ್ ಕುಮಾರ್ ಕಮಿಷನರ್ ಆಗಿದ್ದ ವೇಳೆ 1300 ಕೋಟಿ ಅಕ್ರಮ ನಡೆಸಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ಡಾ. ವಿಶ್ವನಾಥ್  ಆರೋಪಿಸಿದರು. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಅನಿಲ್ ಕುಮಾರ್ ಅವರು  ಬಿಬಿಎಂಪಿ ಕಮಿಷನರ್ ಆಗಿದ್ದ ಸಂದರ್ಭದಲ್ಲಿ ಮೂರು ಪ್ರಮುಖ ಅಕ್ರಮಗಳು ನಡೆಸಿದ್ದಾರೆ, ಸ್ಮಾರ್ಟ್ ಪಾರ್ಕಿಂಗ್ ಗೆ 31.6 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಅಷ್ಟು ಹಣ ಖರ್ಚಾಗದಿದ್ದರೂ ಹೆಚ್ಚುವರಿಯಾಗಿ 2 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ, ಅನಿಲ್ ಕುಮಾರ್ ಗುತ್ತಿಗೆ ಸಂಸ್ಥೆಯಾದ ಬಿಲ್ಡಿಂಗ್ಸ್ ಕಂಟ್ರೋಲ್ ಸಲ್ಯೂಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಇದನ್ನು ಬಿಡುಗಡೆ ಮಾಡಿಸಿದ್ದಾರೆ ಎಂದು ದೂರಿದರು. ಅಲ್ಲದೇ ಕಮಿಷನರ್ ಆಗಿದ್ದ ವೇಳೆ ಮಳೆ ನೀರಿನ ಹೂಳು ತೆಗೆಯುವ ಕಾಮಗಾರಿಯಲ್ಲಿ ಅವ್ಯವಹಾರವಾಗಿದೆ. ಎಂಟು ವಲಯಗಳ ಗುತ್ತಿಗೆಯನ್ನು ಮೆಸರ್ಸ್ಯೋಗ ಅಂಡ್ ಕಂಪನಿ ಎಂಬ ಒಂದೇ…

Read More

ತುಮಕೂರು: ಮುಂಬರುವ ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗೃತ ಕ್ರಮವಾಗಿ ತುಮಕೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತ ಮತದಾನ ಪ್ರಕ್ರಿಯೆ ಪೂರಕವಾಗಿ ಕೆಲಸ ನಿರ್ವಹಿಸಲು ಬಿಎಸ್ ಎಫ್ ನ ಆರು ತುಕಡಿಗಳು ನಗರಕ್ಕೆ ಬಂದಿಳಿದಿವೆ. ಶಸ್ತ್ರ ಸಜ್ಜಿತ ಬಿಎಸ್ಎಫ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ತುಮಕೂರು ನಗರದ ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಇಂದು 400 ಸಿಬ್ಬಂದಿಗಳು ರೂಟ್ ಮಾರ್ಚ್ ನಡೆಸಿದರು. ಸ್ಥಳೀಯರಲ್ಲಿ ಶಾಂತಿಯುತ ಹಾಗೂ ಮುಕ್ತ ಮತದಾನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ ಎಂಬ ಒಂದು ವಾತಾವರಣವನ್ನು ನಿರ್ಮಿಸಲು ಈ ಕ್ರಮ ಕೈಗೊಳ್ಳಲಾಯಿತು. ಶಸ್ತ್ರ ಸಜ್ಜಿತ ಪೊಲೀಸ್ ಸಿಬ್ಬಂದಿಗಳು ಹಾಗೂ ಬಿಎಸ್ ಎಫ್ ಸಿಬ್ಬಂದಿಗಳು ತುಮಕೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರದ ಶಾಂತಿನಗರ, ಗೂಡ್ಸ್ ಷೆಡ್ ಕಾಲೋನಿ, ಮರಳು ರೆಡ್ಡಿ ದಿಣ್ಣೆ, ಬನಶಂಕರಿ ಬಡಾವಣೆ,  ಕುರಿಪಾಳ್ಯ ಬಡಾವಣೆ, ಚಾಂದಿನಿ ಚೌಕ ಬಡಾವಣೆ, ಪಿಎಚ್ ಕಾಲೋನಿ, ತಿಲಕ್ ಪಾರ್ಕ್ ವ್ಯಾಪ್ತಿಯ ರಸ್ತೆಗಳು, ಬಿಜಿ ಪಾಳ್ಯ, ಸಂತೆಪೇಟೆ, ಮಂಡಿಪೇಟೆ,…

Read More

ಮಧುಗಿರಿ : ಹಾಲಿ ಶಾಸಕರಾದ ಎಂ.ವಿ.ವೀರಭದ್ರಯ್ಯ ರಿಂದ  ಇತಿಹಾಸದಲ್ಲೇ ಕಂಡರಿಯದಂತಹ  ತಲೆ ತಗ್ಗಿಸುವ  ಘಟನೆ ನಡೆದಿದೆ ಎಂದು   ಜಿಲ್ಲಾ ಡಿ ಎಸ್ ಎಸ್ ಸಂಘಟನಾ ಸಂಚಾಲಕರಾದ ಡಾ.ದೊಡ್ಡೇರಿ ಕಣಿಮಯ್ಯ ತಿಳಿಸಿದರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಈ ಹಿಂದೆ ಮಧುಗಿರಿ ಕ್ಷೇತ್ರವನ್ನು ಆಳಿದ ಮಹಾನೀಯರ ಕಾಲದಲ್ಲೂ  ಇಂತಹ ಘಟನೆ ಎಂದಿಗೂ ನಡೆದಿಲ್ಲ, ಆದರೆ ಈ ಬಾರಿಯ ಹಾಲಿ  ಶಾಸಕರಿಂದ ಆದ ಅವಮಾನದಿಂದ  ಕ್ಷೇತ್ರದ ಮತದಾರರು   ತಲೆತಗ್ಗಿಸುವಂತಾಗಿದೆ, ಮತದಾರರಿಗೆ ಆದ ಅವಮಾನವನ್ನು ಖಂಡಿಸುತ್ತಾ ಈ ದಿನ ತಾಲೂಕಿನ ಎಲ್ಲಾ ಪ್ರಗತಿಪರ, ದಲಿತಪರ, ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳಿಂದ  ಪತ್ರಿಕಾಗೋಷ್ಠಿ ನಡೆಸಿದ್ದೇವೆ ಎಂದರು. ಶಾಸಕರ ಅವಧಿಯಲ್ಲಿ ಬಹು ಜನರಿಗೆ ದಲಿತರಿಗೆ, ಅಲ್ಪಸಂಖ್ಯಾತರಿಗೆ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಆಗಿಲ್ಲ, ಕಳೆದ ಕೋರೋಣ  ಸಾಂಕ್ರಾಮಿಕ ರೋಗದ ಸಮಯದಲ್ಲಿ ಕ್ಷೇತ್ರದ ಮತದಾರರ ಕಷ್ಟಕ್ಕೆ ಸ್ಪಂದಿಸದ ಶಾಸಕರು,  ಈಗ ಚುನಾವಣೆ ಸಮೀಪ ಇರುವ  ಸಂದರ್ಭದಲ್ಲಿ   ಮತದಾರರಿಗೆ   ಹಣದ, ಪ್ರವಾಸದ ಅಮಿಷಾಗಳು ಒಡ್ಡುತ್ತಿರುವುದು ಖಂಡನೀಯವಾಗಿದೆ.   ಕ್ಷೇತ್ರದ ಮತದಾರರ…

Read More

ಇಂಡಿಯನ್ ಪ್ರೀಮಿಯರ್ ಲೀಗ್ 2023 ರ ಎಂಟನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಇಂದು ಪಂಜಾಬ್ ಕಿಂಗ್ಸ್ ಅನ್ನು ಎದುರಿಸಲಿದೆ. ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಸಂಜು ಮತ್ತು ಅವರ ತಂಡ ಇಂದು ಹೊರ ಬರುತ್ತಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 7 ರನ್‌ಗಳಿಂದ ಸೋಲಿಸಿದ ಪಂಜಾಬ್ ಕೂಡ ಆತ್ಮವಿಶ್ವಾಸದಲ್ಲಿದೆ. ಗುವಾಹಟಿಯ ಬರಸ್ಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾತ್ರಿ 7.30 ಪಂದ್ಯ ನಡೆಯಲಿದೆ. ಸನ್‌ರೈಸರ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿದ ನಂತರ ರಾಯಲ್ಸ್ ತನ್ನ ಗೆಲುವಿನ ಸರಣಿಯನ್ನು ಮುಂದುವರಿಸುವ ಗುರಿಯನ್ನು ಹೊಂದಿದೆ. ಕಳೆದ ಪಂದ್ಯದಲ್ಲಿ ರಾಜಸ್ತಾನ ತಂಡದ ಅಮೋಘ ಫಾರ್ಮ್‌ಗೆ ಸಾಕ್ಷಿಯಾಗಿತ್ತು. ಇಂಗ್ಲೆಂಡನ್ನು ವಿಶ್ವ ಚಾಂಪಿಯನ್ ಮಾಡಿದ ಜೋಸ್ ಬಟ್ಲರ್ ಪ್ರಮುಖ ಶಕ್ತಿಯಾಗಿದ್ದಾರೆ. ನಾಯಕ ಸಂಜು ಸ್ಯಾಮ್ಸನ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಾಟಿಕಲ್ ಮತ್ತು ರಿಯಾನ್ ಪರಾಗ್ ಅವರಂತಹ ಪ್ರತಿಭೆಗಳ ಸೇರ್ಪಡೆಯೊಂದಿಗೆ, ಬ್ಯಾಟಿಂಗ್ ಲೈನ್ ಅಪ್ ಯಾವುದೇ ಬೌಲಿಂಗ್ ಲೈನ್-ಅಪ್ ಅನ್ನು ಪುಡಿಮಾಡುತ್ತದೆ.ಮೊದಲ ಪಂದ್ಯದಲ್ಲಿ ರಾಜಸ್ಥಾನ ಪರ ಬಟ್ಲರ್…

Read More