Author: admin

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರ ದಲ್ಲಿ ಬಿಜೆಪಿ ಹಾಗೂ ಮುತಾಲಿಕ್ ನಡುವೆ ವಾರ್ ಶುರುವಾಗಿದೆ. ಚುನಾವಣೆ ಘೋಷಣೆಗೆ ಮುನ್ನ ಆರೋಪಗಳ ಸುರಿಮಳೆ ಮಾಡುತ್ತಿದ್ದ ಮುತಾಲಿಕ್‍ಗೆ ಬಿಜೆಪಿ ಉತ್ತರ ಕೊಟ್ಟಿರಲಿಲ್ಲ. ಇದೀಗ ಸುನಿಲ್ ಕುಮಾರ್ ಗೆ ಮತ ಹಾಕಿ ಮುಟ್ಟಾಳ ರಾಗಬೇಡಿ ಎಂಬ ಮುತಾಲಿಕ್ ಪೋಸ್ಟರ್ ವಿರುದ್ಧ ಕಮಲ ಪಡೆ ತಿರುಗಿಬಿದ್ದಿದೆ. ಕಾರ್ಕಳದ ಜನತೆ ಮತ್ತೊಮ್ಮೆ ಸುನಿಲ್ ಕುಮಾರ್ ಅವರನ್ನು ಗೆಲ್ಲಿಸಿದ್ರೆ ನಿಮ್ಮಷ್ಟು ಮುಟ್ಟಾಳರು ಮತ್ತೊಬ್ಬರಿಲ್ಲ. ನೀವು ಮತ್ತೆ ಮುಟ್ಟಾಳರಾಗುವಿರಾ. ಹೀಗಂತಾ ಪ್ರಮೋದ್ ಮುತಾಲಿಕ್ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್ ಹಾಕುತ್ತಿದ್ದಂತೆ ಕಾರ್ಕಳದ ಬಿಜೆಪಿ ಕಾರ್ಯಕರ್ತರು ಕೆರಳಿ ಕೆಂಡವಾಗಿದ್ದಾರೆ. ನೂರಾರು ಜನ ಮುತಾಲಿಕ್ ಪೋಸ್ಟರ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಮತದಾರರಿಗೆ ಅವಮಾನವಾಯ್ತು. ಇದರ ಫಲ ನೀವು ಫಲಿತಾಂಶದ ದಿನ ಅನುಭವಿಸ್ತೀರಿ. ಯಾರದ್ದೊ ಕುಮ್ಮಕ್ಕಿನಿಂದ ಯಾರದ್ದೋ ದುಡ್ಡು ತೆಗೆದುಕೊಂಡು ಎಲ್ಲಿಂದಲೋ ಕಾರ್ಕಳಕ್ಕೆ ಬಂದಿದ್ದೀರಿ. ಈ ಬಾರಿ ಕಾರ್ಕಳದಲ್ಲಿ ನಿಮಗೆ ಸರಿಯಾಗಿ ಬುದ್ಧಿ ಕಲಿಸುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ರಾಮನಗರ: ಹಾಸನದ ವಿಷಯದಲ್ಲಿ ನನ್ನ ಸ್ಟ್ಯಾಂಡ್ ಬದಲಾಗಲ್ಲ. ದೇವೇಗೌಡರು ಜನಾಭಿಪ್ರಾಯ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ ಎಂದು ಹೆಚ್‍.ಡಿ ಕುಮಾರಸ್ವಾಮಿ ತಿಳಿಸಿದರು. ಹಾಸನ ಟಿಕೆಟ್ ಗೊಂದಲ ವಿಚಾರವಾಗಿ ಮಾತನಾಡಿದ ಅವರು, ಹಾಸನ ಟಿಕೆಟ್ ಬಗ್ಗೆ ಹಲವಾರು ಚರ್ಚೆ ಆಗಿದೆ. ಈ ಬಗ್ಗೆ ಸುಗಮವಾಗಿ ತೀರ್ಮಾನ ಆಗುತ್ತದೆ. ದೇವೇಗೌಡರು ಇವತ್ತು ದೆಹಲಿಗೆ ಹೋಗಿದ್ದಾರೆ. ದೆಹಲಿಯಿಂದ ಬಂದ ಬಳಿಕ ಟಿಕೇಟ್ ತೀರ್ಮಾನ ಘೋಷಣೆ ಮಾಡುತ್ತಾರೆ. ದೇವೇಗೌಡರು ದೆಹಲಿಯಿದ ಬಂದ ಮೇಲೆ ಎಲ್ಲಾ ಗೊತ್ತಾಗಲಿದೆ ಎಂದ ಅವರು, ಟಿಕೆಟ್ ಸಿಗದಿದ್ದರೆ ಭವಾನಿ ರೇವಣ್ಣ ಪಕ್ಷೇತರ ಸ್ಪರ್ಧೆ ಕುರಿತು ಚರ್ಚೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕನಕಗಿರಿ: ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮಾದರಿ‌ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಸೇರಿದಂತೆ ಐದು ಜನರ ವಿರುದ್ಧ ಸೋಮವಾರ ಎಫ್ಐಆರ್ ದಾಖಲಾಗಿದೆ. ಪಕ್ಷದ ಪೋಸ್ಟರ್ ಜೊತೆಗೆ ಉಚಿತ ಸೇವೆ ಎಂದು ಆಂಬುಲೆನ್ಸ್ ಮೇಲೆ ಬರೆಯಲಾಗಿತ್ತು. ಕನಕಗಿರಿಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಈ ವಾಹನವನ್ನು ಪೊಲೀಸರು ಎರಡು ದಿನಗಳ ಹಿಂದೆ ಜಪ್ತಿ ಮಾಡಿದ್ದರು. ಕನಕಗಿರಿ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ವೆಂಕಟರಮಣ ದಾಸರಿ, ಆಂಬುಲೆನ್ಸ್ ವಾಹನದ ಮಾಲೀಕ ಜಿ. ನವೀನಕುಮಾರ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಿ ಅರುಣಾ ಮತ್ತು ಆಂಬುಲೆನ್ಸ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಾಹನದ ಮೇಲೆ ರೆಡ್ಡಿ, ಅರುಣಾ ಮತ್ತು ದಾಸರಿ ಭಾವಚಿತ್ರಗಳು ಇದ್ದವು. ಅನುಮತಿ ಪಡೆಯದೇ ಕಲ್ಯಾಣ ಪ್ರಗತಿ ಪಕ್ಷಕ್ಕೆ ಸೇರಿದ ವಾಹನ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿತ್ತು. ಆದ್ದರಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮಧ್ಯಪ್ರದೇಶ : ಬಾವಿ ಕುಸಿದು 36 ಜನರು ಸಾವನ್ನಪ್ಪಿದ ನಂತರ ಮಧ್ಯಪ್ರದೇಶ ಸರ್ಕಾರ ಇಂದೋರ್‌ನ ಬೆಳೇಶ್ವರ ಮಹಾದೇವ ದೇವಾಲಯದ ಅಕ್ರಮ ಕಟ್ಟಡದ ಭಾಗಗಳನ್ನು ನೆಲಸಮಗೊಳಿಸಿದೆ. ಅಧಿಕಾರಿಗಳು ಐದಕ್ಕೂ ಹೆಚ್ಚು ಬುಲ್ಡೋಜರ್‌ಗಳಿಂದ ಕಟ್ಟಡಗಳನ್ನು ಕೆಡವಿದರು. ಘಟನೆಗೆ ಸಂಬಂಧಿಸಿದಂತೆ ದೇವಸ್ಥಾನದ ಟ್ರಸ್ಟ್‌ನ 2 ಜನರ ವಿರುದ್ಧ ಅಕ್ರಮ ನಿರ್ಮಾಣಕ್ಕಾಗಿ ಪ್ರಕರಣ ದಾಖಲಾಗಿದೆ. ದುರಂತದ ನಂತರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಜಿಲ್ಲಾಧಿಕಾರಿಗಳ ಸಭೆ ಕರೆದು ಹಳತಾದ ಬಾವಿಗಳ ಪಟ್ಟಿಯನ್ನು ಕೇಳಿದರು. ಅಪಾಯಕಾರಿ ಸ್ಥಿತಿಯಲ್ಲಿರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ದೇವಸ್ಥಾನದ ಉಸ್ತುವಾರಿ ವಹಿಸಿರುವ ಖಾಸಗಿ ಟ್ರಸ್ಟ್ ಸುಮಾರು 200 ವರ್ಷಗಳಷ್ಟು ಹಳೆಯದಾದ ಬಾವಿಯ ಭಾಗಗಳನ್ನು ಕೆಡವಿರುವುದನ್ನು ವಿರೋಧಿಸಿ, ಇದು ನಂಬಿಕೆಗೆ ಧಕ್ಕೆ ತರುತ್ತದೆ ಎಂದು ಹೇಳಿದರು. ರಾಮ ನವಮಿಯ ದಿನದಂದು ದೇವಾಲಯದ ಬಾವಿಯಲ್ಲಿನ ಚಪ್ಪಡಿ ಕುಸಿದು ಬಿದ್ದಿದ್ದು, ಇಂದೋರ್ ಮುನ್ಸಿಪಾಲಿಟಿ ಅಧಿಕಾರಿಗಳಿಗೆ ಭದ್ರತೆ ಒದಗಿಸಲು ಮತ್ತು ಅಹಿತಕರ…

Read More

ನವದೆಹಲಿ: ಅದಾನಿ ಸಮೂಹದ ವಿರುದ್ಧದ ಆರೋಪಗಳ ಕುರಿತು ಜಂಟಿ ಸಂಸದೀಯ ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಸದನದಲ್ಲಿ ಕೋಲಾಹಲ ಸೃಷ್ಟಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಇತ್ತೀಚೆಗೆ ನಿಧನರಾದ ಪುಣೆ ಸಂಸದ ಗಿರೀಶ್ ಬಾಪಟ್ ಮತ್ತು ಕೇರಳದ ಮಾಜಿ ಸಂಸದ ಇನ್ನೋಸೆಂಟ್ ವರೀದ್ ಅವರಿಗೆ ಸಂತಾಪ ಸೂಚಕವಾಗಿ ಲೋಕಸಭೆ ಕಲಾಪವನ್ನೂ ಮುಂದೂಡಲಾಯಿತು. ಅದಾನಿ ಸಮೂಹದ ವಿರುದ್ಧದ ಷೇರು ಅಕ್ರಮದ ಆರೋಪಗಳ ಕುರಿತು ಜಂಟಿ ಸಂಸದೀಯ ತನಿಖೆಗೆ ಆಗ್ರಹಿಸಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿರುವುದರಿಂದ ಉಬಯ ಸದನಗಳು ಹಲವು ಬಾರಿ ಮುಂದೂಡಿಕೆಯಾಗಿವೆ. ಹೀಗಾಗಿ ಚರ್ಚೆ ಇಲ್ಲದೇ ಬಜೆಟ್‌ ಅನುಮೋದನೆಗೊಂಡಿದೆ. ಸಂಸತ್ತಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ಎರಡನೇ ಭಾಗವು ಏ.6ರ ವರೆಗೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…

Read More

ತಾಕತ್ ಇದ್ದರೆ ಪ್ರತಿ ಕುಟುಂಬದ ಮಹಿಳೆಯರಿಗೆ 5 ಸಾವಿರ ರೂಪಾಯಿ ಘೋಷಣೆ ಮಾಡಿ ಎಂದು ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಬಿಜೆಪಿಗೆ ಸವಾಲು ಹಾಕಿದ್ದಾರೆ. ತಿಗಳ ಮತ್ತು ನಾಯಕರ ಸಮುದಾಯದ ಸಮಾವೇಶದಲ್ಲಿದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜನರ ಹಸಿವನ್ನು ನೀಗಿಸುವ ಕೆಲಸ ಮಾಡಿದರೆ, ಬಿಜೆಪಿ ಸರ್ಕಾರ ಅನ್ನವನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಬೆಲೆ ಏರಿಕೆ ಒಂದನ್ನು ಬಿಟ್ಟು, ಬಿಜೆಪಿಯವರ ಕೈಯಿಂದ ಇನ್ನೇನನ್ನೂ ಮಾಡಲು ಸಾಧ್ಯವಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರ ಏನು ಮಾಡುತ್ತಿದೆ ಎನ್ನುವುದನ್ನು ತಿಳಿಯ ಬೇಕಾದ್ರೆ ವಿಧಾನ ಸೌಧದ ಕಂಬಗಳಿಗೆ ಕಿವಿಕೊಟ್ಟು ಕೇಳಿ,  ಪ್ರತಿ ಕಂಬವೂ 40 ಪರ್ಸೆಂಟ್ ಕಮಿಷನ್ ಎಂದು ಹೇಳುತ್ತದೆ ಎಂದು ಅವರು ವ್ಯಂಗ್ಯವಾಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಕೊಟ್ಟಂತಹ ಮಾತುಗಳನ್ನು ನೆರವೇರಿಸಿದೆ ಮುಂದೆಯೂ ಮಾತಿಗೆ ಬದ್ದವಿರುತ್ತೇವೆ.  ಈಗಲೂ ಅಷ್ಟೇ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಪ್ರತಿ ಕುಟುಂಬದ ಮಹಿಳೆಗೆ 2000, 10 ಕೆಜಿ ಅಕ್ಕಿ, 200…

Read More

ರಾತ್ರಿ ವೇಳೆಯಲ್ಲಿ ದುಷ್ಕರ್ಮಿಗಳು ರೈತನ ತೋಟಕ್ಕೆ ಬೆಂಕಿಯಿಟ್ಟು ಪರಾರಿಯಾದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬಂದ್ರೆಹಳ್ಳಿಯಲ್ಲಿ ನಡೆದಿದೆ. ಬಂದ್ರೆಹಳ್ಳಿ ಗ್ರಾಮದ ರೈತ ಮಧು ಅವರಿಗೆ ಸೇರಿದ ತೋಟಕ್ಕೆ ಬೆಂಕಿ ಹಚ್ಚಲಾಗಿದೆ.  ತಡ ರಾತ್ರಿ ವೇಳೆ ತೋಟಕ್ಕೆ ಬೆಂಕಿ ಹತ್ತಿಕೊಂಡಿರುವುದನ್ನು ಕಂಡು ಬೆಂಕಿ ಆರಿಸಲು ಹರಸಾಹಸ ಪಟ್ಟರೂ ತೆಂಗು, ತೇಗ, ಹುಣಸೇ ಮರಗಳು ಸುಟ್ಟ ಭಸ್ಮವಾಗಿವೆ. ತಡ ರಾತ್ರಿ ವೇಳೆ ಯಾರೋ ದುಷ್ಕರ್ಮಿಗಳು ತೋಟಕ್ಕೆ ಬೆಂಕಿ ಹಚ್ಚಿದ್ದಾರೆ. ತಡ ರಾತ್ರಿ ತೋಟ ಹೊತ್ತಿ ಉರಿದಿದ್ದು, ರೈತನಿಗೆ ಭಾರೀ ನಷ್ಟವಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವಿಚಾರವಾಗಿ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರು ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮೊದಲು ಕೋಲಾರದಲ್ಲಿ ಸ್ಪರ್ಧೆ ಮಾಡ್ಬೇಕು ಅಂತ ತೀರ್ಮಾನ ಮಾಡಿದ್ರು. ಅಲ್ಲಿನ ಮುಖಂಡರೆಲ್ಲಾ ಬಂದು ನಮ್ಮ ಕೋಲಾರದಲ್ಲಿ ಸ್ಪರ್ಧೆ ಮಾಡಿ. ಬಾದಾಮಿ ಬಹಳ ದೂರ ಆಗುತ್ತೆ ಅಂತ ಅವರಿಗೆ ಒತ್ತಾಯ ಮಾಡಿ ಕರ್ಕೊಂಡು ಹೋಗಿ, ಒಂದು ರೀತಿಯಲ್ಲಿ ಕಮಿಟ್ಮೆಂಟ್ ಮಾಡಿಸಿದ್ರು. ಆ ನಂತರ ಅವರು ಅದನ್ನ ಒಪ್ಪಿಕೊಂಡು ಕೋಲಾರದಲ್ಲಿ ಸ್ಪರ್ಧೆ ಮಾಡೋಕೆ ತೀರ್ಮಾನ ಮಾಡಿದ್ರು. ತದ ನಂತರ ಅವರಿಗೆ ಬೇರೆ ಏನು ಅಭಿಪ್ರಾಯ ಬಂತು. ವರುಣಾದಲ್ಲಿ ಸ್ಪರ್ಧೆ ಮಾಡ್ತಿನಿ ಅಂದ್ರು.  ವರುಣಾದಲ್ಲಿ ಅವರ ಹೆಸರನ್ನ ಘೋಷಣೆ ಮಾಡಿದ್ದಾರೆ.  ಈಗ ಕೋಲಾರದವರು ನೀವು ಮೊದಲು ಆ ರೀತಿ ಹೇಳಿ, ಈಗ, ನಿಲ್ಲೋದಿಲ್ಲ ಹಾಗೇ- ಹೀಗೆ ಹೇಳೋದು ಬೇಡ. ನೀವು ಎರಡು ಕಡೆ ಸ್ಪರ್ಧೆ ಮಾಡಿ ಅಂತ ಒತ್ತಾಯ ಮಾಡ್ತಿದ್ದಾರೆ.  ಅದಕ್ಕೆ ಸಿದ್ದರಾಮಯ್ಯ ನಾನು ಈ ವಿಚಾರವನ್ನ ಹೈಕಮಾಂಡ್…

Read More

ನವದೆಹಲಿ: ಮಲೇಷ್ಯಾದಲ್ಲಿ ಪಫರ್ ಮೀನು ತಿಂದು 83 ವರ್ಷದ ಲಿಮ್ ಸಿವ್ ಗುವಾನ್ ಎಂಬ ವೃದ್ಧ ಮಹಿಳೆ ಸಾವನ್ನಪ್ಪಿದ್ದಾರೆ, ಆಕೆಯ ಪತಿ ಕೋಮಾದಲ್ಲಿದ್ದಾರೆ ಎಂದು ನ್ಯೂಯಾರ್ಕ್ ವರದಿ ಮಾಡಿದೆ. ಈ ವರದಿಯ ಪ್ರಕಾರ, ವೃದ್ಧ ದಂಪತಿಯ ಮಗಳು ಸ್ಥಳೀಯ ಅಂಗಡಿಯಿಂದ ಮೀನು ಖರೀದಿಸಿದ್ದಾರೆ ಎಂದು ಹೇಳಲಾಗಿದೆ. ಯವಾಗಲು ಅದೇ ಅಂಗಡಿಯಿಂದ ಮೀನು ಖರೀದಿಸುತ್ತಿರುವುದರಿಂದ ಈ ಬಾರಿ ಮೀನು ಕೊಳ್ಳುವ ವೇಳೆ ಗುಣಮಟ್ಟವನ್ನು ಪರಿಶೀಲಿಸಲಿಲ್ಲ ಎನ್ನಲಾಗಿದೆ. ವರದಿಯ ಪ್ರಕಾರ, ಮಧ್ಯಾಹ್ನದ ಊಟಕ್ಕೆ ಮೀನನ್ನು ಸೇವಿಸಿದ ನಂತರ, ಮಹಿಳೆ ನಡುಗಲು ಮತ್ತು ಉಸಿರಾಟದ ತೊಂದರೆಗಳನ್ನು ಅನುಭವಿಸಲು ಪ್ರಾರಂಭಿಸಿದರು. ಆಕೆಯ ಪತಿಯಲ್ಲಿ ಕೂಡ ಸುಮಾರು ಒಂದು ಗಂಟೆಯ ನಂತರ ಇದೇ ರೀತಿಯ ರೋಗಲಕ್ಷಣಗಳು ಕಂಡುಬಂದವು ಎಂದು ಹೇಳಲಾಗಿದೆ. ಅ ಸಮಯದಲ್ಲಿ ಅವರ ಮಗ ದಂಪತಿಯನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೃದ್ಧ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಕೋಮಾದಲ್ಲಿರುವ ಆಕೆಯ ಪತಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ದುಬೈ: ಮುಂದಿನ ತಿಂಗಳಿನಿಂದ ವರ್ಷಾಂತ್ಯದ ವರೆಗೆ ಪ್ರತಿ ದಿನ 5 ಲಕ್ಷ ಬ್ಯಾರೆಲ್‌ಕಚ್ಚಾ ತೈಲ ಉತ್ಪಾದನೆಯನ್ನು ಕಡಿತಗೊಳಿಸಲು ಸೌದಿ ಅರೇಬಿಯಾ ನಿರ್ಧರಿಸಿದೆ. ಜಗತ್ತಿನ ಪ್ರಮುಖ ತೈಲೋತ್ಪಾದನೆ ಮಾಡುವ ಸೌದಿ ಅರೇಬಿಯಾದ ಈ ನಿರ್ಧಾರದಿಂದ ಬೆಲೆ ಏರಿಕೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಸೌದಿ ಅರೇಬಿಯಾ ಮತ್ತು ಅಮೆರಿಕ ನಡುವಿನ ಬಾಂಧವ್ಯದಲ್ಲಿ ಬಿರುಕು ಮೂಡಿರುವಂತೆಯೇ ಈ ನಿರ್ಧಾರ ಪ್ರಕಟವಾಗಿದೆ ಎಂದು ಹೇಳಲಾಗಿದೆ. ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟ- ಒಪೆಕ್‌, ಒಕ್ಕೂಟದ ಸದಸ್ಯರಲ್ಲದೇ ಇರುವ ರಾಷ್ಟ್ರಗಳ ಜತೆಗೆ ಈ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಸೌದಿ ಅರೇಬಿಯಾದ ಇಂಧನ ಸಚಿವಾಲಯ ಭಾನುವಾರ ಈ ಘೋಷಣೆ ಮಾಡಿದೆ. ಯುಎಇ ಪ್ರತಿ ದಿನ 1.44 ಲಕ್ಷ ಬ್ಯಾರೆಲ್‌, ಕುವೈತ್‌1.28 ಲಕ್ಷ ಬ್ಯಾರೆಲ್‌, ಇರಾಕ್‌ 2.11 ಲಕ್ಷ ಬ್ಯಾರೆಲ್‌, ಒಮನ್‌ 40 ಸಾವಿರ, ಅಲ್ಜೀರಿಯಾ ಪ್ರತಿ ದಿನ 48 ಸಾವಿರ ಬ್ಯಾರೆಲ್‌ ಕಚ್ಚಾ ತೈಲ ಉತ್ಪಾದನೆ ಇಳಿಕೆ ಮಾಡಲಿವೆ. ರಷ್ಯಾ ಮತ್ತು ಉಕ್ರೇನ್‌ ನಡುವಿನ ಸಂಗ್ರಾಮದಿಂದ ಜಗತ್ತಿನಾದ್ಯಂತ ಉಂಟಾಗಿರುವ…

Read More