Author: admin

ಹೆಣ್ಣೂರಿನ ವಿನ್ಸೆಂಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಾರ್ವೇಶ್ ಸಾವವನ್ನಪ್ಪಿದ ವಿದ್ಯಾರ್ಥಿ. ಮಂಗಳವಾರ ಬೆಳಗ್ಗೆ ಎಂದಿನಂತೆ ಕಾಲೇಜಿಗೆ ಹೋಗಿದ್ದ ಮಾರ್ವೇಶ್ ಮನೆಗೆ ಬಂದಿರಲಿಲ್ಲ. ಇದರಿಂದ ಪೋಷಕರು ಆತಂಕದಲ್ಲಿದ್ದರು. ಈ ವೇಳೆ ಸ್ನೇಹಿತನೋರ್ವ ಮನೆಗೆ ಬಂದು ವಿಚಾರಿಸಿ ಹೋಗಿದ್ದ. ಅನಂತರ ನಿನ್ನೆ ರಾತ್ರಿ ಜಿಹಾನ್ ಆಸ್ಪತ್ರೆಗೆ ಸುನಿಲ್ ಎಂಬಾತ ಮಾರ್ವೇಶ್ ನನ್ನ ಚಿಕಿತ್ಸೆ ಕರೆತಂದಿದ್ದ. ಅಷ್ಟೊತ್ತಿಗಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ಖಚಿತಪಡಿಸಿ ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು ಆಸ್ಪತ್ರೆಗೆ ಸೇರಿಸಿದ ಸುನಿಲ್ ಎಂಬಾತನನ್ನ ವಿಚಾರಿಸಿದಾಗ ಯಾರೋ ಅಪರಿಚಿತರು ಲಿಂಗರಾಜಪುರ ಬಳಿ ಮಾರ್ವೇಶ್ ನನ್ನ ಒಪ್ಪಿಸಿದ್ದರು. ಹೀಗಾಗಿ ಆಸ್ಪತ್ರೆಗೆ ಸೇರಿಸಿದ್ದೇನೆ ಎಂದು ಹೇಳಿಕೆ ನೀಡಿದ್ದ. ಮತ್ತೊಂದೆಡೆ ಪೋಷಕರು ಸಹ ನಿನ್ನೆ ಸಂಜೆ ಮನೆ ಬಳಿ ಮಾರ್ವೇಶ್ ಬಗ್ಗೆ ವಿಚಾರಿಸಿದ್ದ ವ್ಯಕ್ತಿ ಬಗ್ಗೆ ಅನುಮಾನವಿದ್ದು ಆತನ ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯ ಗೊತ್ತಾಗಲಿದೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.…

Read More

ದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿ ಘಾಟ್ ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು. ಗೊಂದಲ ಇರುವ ಬಗ್ಗೆ ನಾವು ಪರಿಹಾರ ಕಂಡುಕೊಂಡಿದ್ದೇವೆ. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಬರುತ್ತೇವೆ. ಶಿರಾಡಿ ಘಾಟ್ ನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಸಮಸ್ಯೆ ಇದೆ. ಒಂದು ಎಕರೆ ಜಮೀನು ಸಮಸ್ಯೆ ಇರಬಾರದು. ರಾಜ್ಯದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಸಿಎಂ ಸಿದ್ಧರಾಮಯ್ಯ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು. 38 ರಾಷ್ಟ್ರೀಯ ಹೆದ್ದಾರಿಗಳು ಅಪ್ಗ್ರೇಡ್ ಆಗಬೇಕಿದೆ. ಬೆಂಗಳೂರಿನಲ್ಲಿ ಸುರಂಗ ನಿರ್ಮಿಸುವ ಬಗ್ಗೆ ಆಸಕ್ತಿ ವಹಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದಾರೆ. ಅಂತಿಮವಾದ…

Read More

ಜೌನ್‌ ಪುರ: ತನ್ನ ಸ್ವಂತ ಅಣ್ಣನ ಮಗಳನ್ನು ಕುಟುಂಬದ ಸದಸ್ಯರ ಮುಂದೆ ಮದುವೆಯಾಗಿರುವ ಘಟನೆ ಉತ್ತರ ಪ್ರದೇಶದ ಜೌನ್‌ ಪುರ ಜಿಲ್ಲೆಯ ತಾಜುದ್ದೀನ್‌ ಪುರ ಗ್ರಾಮದಲ್ಲಿ ನಡೆದಿದೆ. ಇದೀಗ ಈ ಮದುವೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಇಬ್ಬರೂ ತಮ್ಮ ಕುಟುಂಬದ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ. ಶುಭಂ ಎಂಬ ವ್ಯಕ್ತಿ ತನ್ನ ಅಣ್ಣನ ಮಗಳಾದ ರಿಯಾಳನ್ನು ಮಡಿಯಾಹುನ್ ಕೊಟ್ವಾಲಿ ಪ್ರದೇಶದಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ವಿವಾಹವಾಗಿದ್ದಾರೆ. ಮೊದಲು ಈ ವಿವಾಹಕ್ಕೆ ಇಬ್ಬರ ಮನೆಯವರು ಕೂಡ ವಿರೋಧ ವ್ಯಕ್ತಪಡಿಸಿದ್ದರು, ಆದರೆ ಶುಭಂ ಮತ್ತು ರಿಯಾ ಈ ಮೊದಲೇ ನಾವು ಪ್ರೀತಿ ಮಾಡುತ್ತಿದ್ದೇವೆ, ಮದುವೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದೇವೆ ಎಂದು ಗಟ್ಟಿ ತೀರ್ಮಾನವನ್ನು ಮಾಡಿಕೊಂಡಿದ್ದರು. ಈ ಕಾರಣಕ್ಕೆ ಮನೆಯವರು ಕೂಡ ಈ ಮದುವೆಗೆ ಒಪ್ಪಿಗೆ ನೀಡಿದ್ದಾರೆ. ಇನ್ನೂ ಮದುವೆಯ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಭಂ ಮತ್ತು ರಿಯಾ ಮೂರು ವರ್ಷಗಳಿಂದ…

Read More

ತುರುವೇಕೆರೆ: ಯಾರು ಕಷ್ಟದಲ್ಲಿ ಸಹಾಯ ಮಾಡುತ್ತಾರೋ, ಅವರನ್ನು ನೀವು ಸನ್ಮಾನಿಸಿ ಗೌರವಿಸುತ್ತೀರಾ.. ಇದೆ ನಿಜವಾದ ಬಾಂಧವ್ಯ, ನನ್ನ ಬಗ್ಗೆ ಇರುವ ನಿಮ್ಮಗಳ ನಿಜವಾದ ಕಾಳಜಿ, ಎಂದು ಶಾಸಕ ಎಂ.ಪಿ.ಕೃಷ್ಣಪ್ಪ ರವರು ಅಭಿಪ್ರಾಯ ಪಟ್ಟರು. ಪಟ್ಟಣದ ವಾಣಿಜ್ಯ ಸಂಕೀರ್ಣದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಬಹಳ ಸಂತೋಷ ಒಂದು ಕಡೆ ಮೂರು ತಿಂಗಳ ಹಿಂದೆ ಮಾಜಿ ಶಾಸಕರಿಗೆ ನೀವು ನಿಂದಿಸುತ್ತಿದ್ದು, ಅದು ನನ್ನ ಗಮನಕ್ಕೆ ಬಂದಿದೆ. ಈಗ ನನಗೆ ಸನ್ಮಾನ ಮಾಡುತ್ತಿದ್ದೀರಾ, ಇದೆ ಪ್ರೀತಿಯ ನಡುವೆ ಇರುವ ವ್ಯತ್ಯಾಸ. ಯಾರು ಕಷ್ಟದಲ್ಲಿ ಸಹಾಯ ಮಾಡುತ್ತಿರೋ ಅವರನ್ನು ನೀವು ನೆನಪಿಸಿಕೊಳ್ಳುತ್ತೀರಾ ಇದೆ ನಿಜವಾದ ಬಾಂಧವ್ಯ. ಈಗ ತಾನೆ ಒಂದು ಕಾಲೇಜಿನಲ್ಲಿ ಕಾರ್ಯಕ್ರಮಕ್ಕೆ ತೆರಳಿದ್ದೇ ಅಲ್ಲಿ ಸುಮಾರು 700 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈ ಹಿಂದೆ ನಾನು ಶಾಸಕನಾಗಿದ್ದಾಗ ಆ ಕಾಲೇಜಿಗೆ ನಿವೇಶನವನ್ನು ಮಂಜೂರು ಮಾಡಿಸಿದ್ದೆ. ಆದ್ದರಿಂದ ಇಷ್ಟು ಮಕ್ಕಳು ಕಲಿಯುತ್ತಿರುವುದನ್ನು ನೋಡಿ ನನಗೆ ಸಂತೋಷವಾಯಿತು. ಇನ್ನು ಆ…

Read More

ಕರ್ನಾಟಕ-ಗೋವಾ ಗಡಿಯ ಕ್ಯಾಸಲರಾಕ್ ಬಳಿ ಹಳಿ ಮೇಲೆ ಗುಡ್ಡ ಕುಸಿದಿದ್ದರಿಂದ ನಿನ್ನೆಯಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ ನೈಋತ್ಯ ರೈಲ್ವೆ ಇಲಾಖೆ ನಾಲ್ಕು ಮಾರ್ಗಗಳಲ್ಲಿ ಮಾರ್ಗ ಬದಲಾವಣೆ ಮಾಡಿದೆ. ಯಶವಂತಪುರ-ವಾಸ್ಕೋಡಿಗಾಮ ರೈಲು ಸಂಖ್ಯೆ 17309, ವಾಸ್ಕೋಡಿಗಾಮ-ಯಶವಂತಪುರ ರೈಲು ಸಂಖ್ಯೆ 17310 ಸಂಚಾರ ರದ್ದು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮ  ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಮಿನಾಕ್ಷಿ ಅವರ ಅವಧಿಮುಗಿದ ಹಿನ್ನೆಲೆಯಲ್ಲಿ ಇಂದು  ತೆರವಾದ ಸ್ಥಾನಕ್ಕೆ ನಾಲ್ಕು ಅರ್ಜಿಹಾಕಿದ್ದರು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಹೆಂದ್ರರವರು ಹಾಗೂ ಉಪಾದ್ಯಕ್ಷರಾಗಿ ಕೃಷ್ಣೇಗೌಡರು ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಗಳು  ತಿಳಿಸಿದರು. ಇದೇ ವೇಳೆ ಬೆಂಬಲಿಗರು ಪಟಾಕಿ ಸಿಡಿಸಿ ಹೂ ಗುಚ್ಚ ನೀಡಿ ಅಧ್ಯಕರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು. ಶುಭ ಹಾರೈಸಿದ್ದರು. ಈ ಸಂದರ್ಭದಲ್ಲಿ ಶ್ರವಣೂರು ಗ್ರಾಮ ಪಂಚಾಯಿತಿಯ ಸದ್ಯಸರು ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/F93PYUrewdsCfgROQBejv5 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ: https://www.youtube.com/channel/UCtrQuDOToxHu8dzMaHjoYXA

Read More

ಗಣೇಶ್ ಕೆ.ಪಿ., ಪುತ್ತೂರು ತುಮಕೂರು ತಾಲೂಕು ಮಲ್ಲೇನಹಳ್ಳಿಯ ಗೊಲ್ಲರಹಟ್ಟಿಯಲ್ಲಿ ಬಾಣಂತಿ, ಮಗುವನ್ನ ಊರ ಹೊರಗಿಟ್ಟಿದ್ದ ಘಟನೆ ಸಾಕಷ್ಟು ಮಾಧ್ಯಮಗಳಲ್ಲಿ ವರದಿಯಾಗಿತ್ತು.  ಅಧಿಕಾರಿಗಳ ಗಮನಕ್ಕೂ ಬಂದಿತ್ತು. ಇಷ್ಟಾಗಿದ್ದರೂ ತಾಯಿ ಮತ್ತು ಮಗುವಿನ ರಕ್ಷಣೆಗೆ ಮುಂದಾಗದೇ ಇರುವುದು ಜಿಲ್ಲಾಡಳಿತ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಾಗಿದೆ. ಇದೀಗ ಮಗು ಸಾವನ್ನಪ್ಪಿದ್ದು, ಇದನ್ನು ಸಾವು ಎನ್ನಬೇಕೋ, ಕೊಲೆ ಎನ್ನಬೇಕೋ? ಎನ್ನುವ ಪ್ರಶ್ನೆಗೆ ಜಿಲ್ಲಾಡಳಿತ ಉತ್ತರಿಸಬೇಕಿದೆ. ಮಹಿಳೆಯರನ್ನು ನಿಕೃಷ್ಟವಾಗಿ ಕಾಣುವ ಆಚರಣೆಗಳು ಈ ಸಮುದಾಯದಲ್ಲಿದೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಸರಿಯಾದ ಕಾನೂನು ಕ್ರಮಕೈಗೊಳ್ಳದೇ ಇರುವುದರಿಂದ ಇಂದಿಗೂ ಈ ಸಾಮಾಜಿಕ ಪಿಡುಗು ಕಾಡುಗೊಲ್ಲ ಸಮುದಾಯ ಮಹಿಳೆಯರನ್ನು ಪ್ರಾಣಿಗಿಂತಲೂ ಹೀನವಾಗಿ ಕಾಣುವಂತಹ ಸಂದರ್ಭವನ್ನು ಸೃಷ್ಟಿಸಿದೆ. ಮಹಿಳೆ ಹಾಗೂ ನವಜಾತ ಶಿಶುವನ್ನು ಹೊರಗೆ ಇಟ್ಟಿರುವ ವಿಚಾರದ ಬಗ್ಗೆ “ನಮ್ಮತುಮಕೂರು” ಮಾಧ್ಯಮ ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ಈ ವರದಿ ಇಡೀ ರಾಜ್ಯದಲ್ಲೇ ಸಂಚಲನವನ್ನು ಸೃಷ್ಟಿಸಿತ್ತು. ರಾಜ್ಯದಲ್ಲಿ ವ್ಯಾಪಕವಾಗಿ ಈ ಘಟನೆ ಟೀಕೆಗೆ ಗುರಿಯಾಗಿತ್ತು. ಇಷ್ಟೆಲ್ಲ ನಡೆದರೂ ಆ…

Read More

ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವ ವೇಳೆ ವೃದ್ಧರೊಬ್ಬರು ಕುಸಿದುಬಿದ್ದು ಸಾವನ್ನಪ್ಪಿದ ಪ್ರಕರಣ ಸಂಬಂಧ ಬಿಎಂಆರ್‌ಸಿಎಲ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿರುವ ಟಿ. ಮುತ್ತುರಾಜು ಅವರ ತಂದೆ ತಿಮ್ಮೇಗೌಡ (67) ಮೃತಪಟ್ಟವರು. ತಿಮ್ಮೇಗೌಡ ಅವರದ್ದು ಚಾಮರಾಜನಗರ ಜಿಲ್ಲೆಯ ಕಂಡಯ್ಯನಪಾಳ್ಯ ಗ್ರಾಮ. ಬಿಎಂಆರ್‌ಸಿಎಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ದೂರು ನೀಡಲಾಗಿದೆ. ‘ತಿಮ್ಮೇಗೌಡ ಅವರು ಮಗನ ಮನೆಗೆ ಬಂದಿದ್ದರು. ಜುಲೈ 20ರಂದು ಊರಿಗೆ ವಾಪಸ್ ತೆರಳಲು ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣಕ್ಕೆ ಬಂದಿದ್ದರು. ಮಾರ್ಗ ಮಧ್ಯದಲ್ಲಿ ಮೆಟ್ರೊ ರೈಲಿನ ಒಳಗೆ ಕುಸಿದು ಬಿದ್ದಿದ್ದರು. ಅವರನ್ನು ಪ್ರಯಾಣಿಕರು ಎಂ. ಜಿ ರಸ್ತೆ ನಿಲ್ದಾಣದಲ್ಲಿ ಇಳಿಸಿದ್ದರು. ನಿಲ್ದಾಣದಲ್ಲಿದ್ದ ಪ್ರಯಾಣಿಕರೇ ಅವರನ್ನು ಆಟೊದಲ್ಲಿ ಕರೆದೊಯ್ದು ಇನ್‌ ಫೆಂಟ್ರಿ ರಸ್ತೆಯ ಸ್ಪರ್ಶ ಆಸ್ಪತ್ರೆಗೆ ದಾಖಲಿಸಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೆಟ್ರೊ ರೈಲಿನ ಒಳಗಡೆ ಮೆಟ್ರೊ ಅಧಿಕಾರಿಗಳು…

Read More

ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿಗೆ ಟೆಂಡರ್ ಕೊನೆಗೂ ಸರ್ಕಾರದ ಅಂಗಳಕ್ಕೆ ತಲುಪಿದೆ. ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ಮುಂದಿನ ಸಚಿವ ಸಂಪುಟದ ಮುಂದೆ ಗುತ್ತಿಗೆ ಅನುಮೋದನೆ ವಿಷಯ ಮಂಡಿಸಲಿದ್ದಾರೆ. ನಾಲ್ಕು ಬಾರಿ ಟೆಂಡರ್ ಕರೆದಿದ್ದ ಈ ಬಾಕಿ ಕಾಮಗಾರಿಗೆ ಮಾರ್ಚ್‌ನಲ್ಲೇ ಗುತ್ತಿಗೆದಾರರು ಅಂತಿಮಗೊಂಡಿದ್ದರು. ಅವರೊಂದಿಗೆ ಚೌಕಾಸಿ ಮಾಡುವ ಪ್ರಕ್ರಿಯೆಗೆ ಬಿಬಿಎಂಪಿ ಅಧಿಕಾರಿಗಳು ಅಧಿಕ ಸಮಯ ತೆಗೆದುಕೊಂಡಿದ್ದರು. ಈ ವಿಳಂಬ ನೀತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೂ ಆಕ್ರೋಶಗೊಂಡಿದ್ದರು. ಬಿಬಿಎಂಪಿ ಅಧಿಕಾರಿಗಳು ಕೊನೆಗೂ ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿಗೆ ಟೆಂಡರ್ ಮೊತ್ತಕ್ಕಿಂತ ಶೇ 18. 30ರಷ್ಟು ಹೆಚ್ಚಿನ ಮೊತ್ತಕ್ಕೆ ಗುತ್ತಿಗೆದಾರರ ಮನವೊಲಿಸಿದ್ದಾರೆ. ಜುಲೈ 17ರಂದು ಈ ಟೆಂಡರ್ ಅನುಮೋದನೆಗೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕಳುಹಿಸಿಕೊಟ್ಟಿದ್ದಾರೆ. ‘ಈಜಿಪುರ ಮೇಲ್ಸೇತುವೆ ಬಾಕಿ ಕಾಮಗಾರಿ ಟೆಂಡರ್ ಅನುಮೋದನೆ ಸರ್ಕಾರಕ್ಕೆ ಬಂದಿದೆ. ಈ ಮುಂದಿನ ಸಚಿವ ಸಂಪುಟದ ಮುಂದೆ ಅದನ್ನು ತರುವಂತೆ ರಾಕೇಶ್ ಸಿಂಗ್…

Read More

ತಮಿಳುನಾಡಿನ ಧರ್ಮಪುರಿಯಿಂದ ನಗರಕ್ಕೆ ಬಸ್ ನಲ್ಲಿ ಬಂದು ರಾಜಧಾನಿಯಲ್ಲಿ ಮನೆಗಳ್ಳತನ ಮಾಡುತ್ತಿದ್ದ ಮಾಡುತ್ತಿದ್ದ ಕುಖ್ಯಾತ ಖದೀಮನನ್ನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿಯಾಗಿದ್ದು 30 ಲಕ್ಷ ತೂಕದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ತಮಿಳುನಾಡು ಮೂಲದ ಆರೋಪಿ ಕಳೆದ 25 ವರ್ಷಗಳ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬನಶಂಕರಿ, ಸಿ. ಕೆ. ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ, ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 13ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದ. 2016ರಿಂದ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ರಾಮಸ್ವಾಮಿ ಹಿಂದೆ ವ್ಯವಸ್ಥಿತವಾಗಿ ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಧರ್ಮಪುರಿಯ ಬಸ್ ನಿಲ್ದಾಣದ ಪಾರ್ಕಿಂಗ್ ನಲ್ಲಿ ಬೈಕ್ ನಿಲ್ಲಿಸಿ ಅಲ್ಲಿಂದ ಬಸ್ ನಲ್ಲಿ ನಗರಕ್ಕೆ ಬಂದು ಬೀಗ ಹಾಕಿರುವ ಮನೆಗಳನ್ನ ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ. ಕದ್ದ…

Read More