Author: admin

ಕಲಬುರಗಿ/ರಾಯಚೂರು: ಇರಾನ್ ಕೆಲವು ನಿರ್ಣಾಯಕ ಸಮಯದಲ್ಲಿ ಭಾರತವನ್ನು ಬೆಂಬಲಿಸಿದ್ದು, ಕಚ್ಚಾ ತೈಲದ ಶೇಕಡಾ 50 ರಷ್ಟು ಇರಾನ್‌ ನಿಂದ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಇರಾನ್–ಇಸ್ರೇಲ್ ಯುದ್ಧದಲ್ಲಿ ಭಾರತ ಸರ್ಕಾರ ಇರಾನ್ ರಾಷ್ಟ್ರವನ್ನು ಬೆಂಬಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರಾನ್ –ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಅಮೆರಿಕಾ ಇಸ್ರೇಲ್ ಪರ ಮಧ್ಯ ಪ್ರವೇಶಿಸಿ ಯುದ್ಧಕ್ಕೆ ಇಳಿದಿದೆ. ವಿಶ್ವದಾದ್ಯಂತ ಯುದ್ಧ ನಡೆದರೆ ಪ್ರಪಂಚದಲ್ಲಿ ಅಶಾಂತಿ ಸೃಷ್ಠಿಯಾಗುತ್ತದೆ. ಯುದ್ಧಬೇಡವೆಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಈಗಾಗಲೇ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದಾರೆ. ವಿಶ್ವ ಗುರು ಎಂದು ಪ್ರಚಾರ ಪಡೆಯುವ ದೇಶದ ಪ್ರಧಾನಿ ಮೋದಿಯವರು, ವಿವಿಧ ರಾಷ್ಟ್ರಗಳಿಗೆ ಭೇಟಿ ನೀಡುವುದರಿಂದ ಹಾಗೂ ಅನೇಕ ದೇಶಗಳೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆಂದು ಹೇಳಲಾಗುವುದರಿಂದ, ಯುದ್ಧವನ್ನು ನಿಲ್ಲಿಸಲು ಪ್ರಯತ್ನಿಸಬೇಕೆಂದು ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಸಮಯದಲ್ಲಿ, ಮೋದಿ ಅಮೆರಿಕಕ್ಕೆ ಹೋಗಿ ‘ಫಿರ್ ಏಕ್ ಬಾರ್ ಟ್ರಂಪ್ ಸರ್ಕಾರ್’ ಎಂಬ ಘೋಷಣೆ ಕೂಗಿದ್ದರು.…

Read More

ಶಿವಮೊಗ್ಗ: ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವರು ರಾಜೀನಾಮೆ ನೀಡಬೇಕು ಎಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ವಸತಿ ಸಚಿವರ ವಿರುದ್ಧ ಮನೆ ಹಂಚಿಕೆ ವಿಚಾರದಲ್ಲಿ ಹಣ ಕೇಳಿದ್ದಾರೆಂಬ ಆರೋಪ‌ ಕೇಳಿ ಬಂದಿದೆ. ಇದರಿಂದ ವಸತಿ ಸಚಿವ ಜಮೀರ್​ ಅಹ್ಮದ್​ಖಾನ್​ ಅವರು ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ. ಅವರು ಭ್ರಷ್ಟಾಚಾರ ಮಾಡಿಲ್ಲ ಎಂದು ಸಾಬೀತಾದರೆ ಮತ್ತೆ ತಮ್ಮ ಮಂತ್ರಿ ಸ್ಥಾನಕ್ಕೆ ಬರಲಿ ಎಂದರು. ಈ ಹಿಂದೆ ಅನೇಕ ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಾಗ ಅವರು ರಾಜೀನಾಮೆ ನೀಡಿದ್ದ ಉದಾಹರಣೆಗಳಿವೆ. ಇದರಿಂದ ವಸತಿ ಸಚಿವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎನ್ನುವ ಮೂಲಕ ಸ್ವಪಕ್ಷದವರೇ ವಸತಿ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.‌ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ರಾಯಚೂರು: ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರಾಜು ಕಾಗೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ರಾಯಚೂರಿನಲ್ಲಿ ಮಾತನಾಡಿದ ಅವರು, ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತೇನೆ. ಸಿಎಂ ಅನುದಾನ ಅಂತ ಇದೆಯಾ? ಅವರು ಹೇಳ್ತಾರಪ್ಪ, ನಾನು ಕರೆದು ಮಾತನಾಡ್ತೀನಿ ಎಂದರು. ರಾಯಚೂರು ಕಾರ್ಯಕ್ರಮಕ್ಕೆ ಬಿ.ಆರ್ ಪಾಟೀಲ್ ಅವರನ್ನು ಕರೆದರೂ ಬಂದಿಲ್ಲ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು,  ನಾನು ಕರೆದಿದ್ದೆ, ಆದರೆ ಅವರು ಆಯೋಜಕರು ಕರೆದಿಲ್ಲ, ಹಾಗಾಗಿ ಬರಲ್ಲ ಅಂದರು. ಜೂನ್​ 25ಕ್ಕೆ ಭೇಟಿ ಮಾಡುತ್ತೇನೆ ಅಂದಿದ್ದಾರೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಚಿಕ್ಕೋಡಿ:  ಆಡಳಿತ ವ್ಯವಸ್ಥೆ ಕುಸಿದಿದೆ, 2 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಆಶ್ಚರ್ಯವಿಲ್ಲ ಎಂದು ಹಿರಿಯ ಶಾಸಕ ರಾಜು ಕಾಗೆ ಸ್ವಪಕ್ಷ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಿ.ಆರ್. ಪಾಟೀಲ್ ಆಡಿರುವ ಮಾತುಗಳು ಸುಳ್ಳಲ್ಲ. ಅವರ ಆಡಿಯೋ ವೈರಲ್ ವಿಚಾರಕ್ಕೆ ನನ್ನ ಬೆಂಬಲವಿದೆ ಎಂದರು. ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ನನಗೆ 25 ಕೋಟಿ ರೂಪಾಯಿ ಕಾಮಗಾರಿ ಮಂಜೂರು ಮಾಡಲಾಗಿದೆ. ಇದರಲ್ಲಿ 12 ಕೋಟಿ ರೂಪಾಯಿ ರಸ್ತೆ ಕಾಮಗಾರಿಗೆ ಅನುಮತಿ ನೀಡಲಾಗಿದೆ. ಇನ್ನು 13 ಕೋಟಿ ರೂಪಾಯಿ ಕಾಮಗಾರಿಯ ವರ್ಕ್ ಆರ್ಡರ್ ಸಿಕ್ಕಿಲ್ಲ. 72 ಸಮುದಾಯದ ಭವನಕ್ಕೆ ಅನುಮೋದನೆ ಸಿಕ್ಕಿಲ್ಲ. ಎರಡು ವರ್ಷ ಆಯ್ತು ಇನ್ನೂ ವರ್ಕ್ ಆರ್ಡರ್ ಬಂದಿಲ್ಲ. ಇಲ್ಲಿ ಅಧಿಕಾರಿಗಳನ್ನು ಕೇಳಿದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ಸರ್ಕಾರದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ, ನನ್ನ ಮನಸ್ಸಿಗೆ ನೋವಾಗಿದೆ, ನನಗೆ ರಾಜೀನಾಮೆ ಕೊಡುವ ಮನಸ್ಥಿತಿ…

Read More

ತುಮಕೂರು: ಗ್ರಾಮೀಣ ಪ್ರದೇಶ ಹಾಗೂ ಬಡ ವಿದ್ಯಾರ್ಥಿಗಳನ್ನು ದೂರದೃಷ್ಟಿ ಇಟ್ಟುಕೊಂಡು ತಿಪಟೂರು ಬಸವೇಶ್ವರ ವಿದ್ಯಾ ಸಂಸ್ಥೆಯ ಇಂಜಿನಿಯರ್ ಕಾಲೇಜಿಗೆ ಪ್ರವೇಶ ಸಿಇಟಿಗಿಂತಲೂ ಕಡಿಮೆ ಶುಲ್ಕ ನಿಗದಿಪಡಿಸಿದ್ದೇವೆ ಎಂದು ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಹಾಲಪ್ಪನವರು ತಿಳಿಸಿದರು ಎಂಜಿನಿಯರಿಂಗ್ ಕಾಲೇಜಿಗೆ ಸಿಇಟಿ ಮೂಲಕ ಪ್ರವೇಶ ಪಡೆಯಲು ಸರ್ಕಾರ ನಿಗದಿಪಡಿಸಿರುವ ಶುಲ್ಕ ಪಾವತಿ ಮಾಡಲಾಗದೆ ಅನೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಡವರು ಎಂಜಿನಿಯರಿಂಗ್ ಮಾಡುವ ಆಸೆ ಇದ್ದರೂ ಬಿ.ಎ., ಬಿಕಾಂ, ಬಿಎಸ್ ಸಿ ಇತರೆ ಪದವಿ ಕೋರ್ಸ್ ಗಳಿಗೆ ಸೇರುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ವಂಚಿತರಾಗುವ  ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಸಿಇಟಿ ಪ್ರವೇಶಕ್ಕೆ ಪಾವತಿಸ ಬೇಕಾದ ಶುಲ್ಕಕ್ಕಿಂತಲೂ ಕಡಿಮೆ ಶುಲ್ಕ ಪಡೆದು ಶಿಕ್ಷಣ ನೀಡುತ್ತಿದ್ದೇವೆ ಎಂದರು. ಪ್ರಾಂಶುಪಾಲ, ಡಾ.ರಾಜಕುಮಾರ್ ಮಾತನಾಡಿ, ನಮ್ಮ ಕಾಲೇಜು ಪ್ರತಿಷ್ಠಿತ ವಿಟಿಯು ಯುನಿವರ್ಸಿಟಿಯಿಂದ ನೋಂದಾಯಿತವಾಗಿದ್ದು, ಇಲ್ಲಿ ವಿಟಿಯು ಸಿಲಬಸ್ ಹೇಳಿಕೊಡುತ್ತೇವೆ, ಎಲ್ಲಾ ಶೈಕ್ಷಣಿಕ ವೇಳಾಪಟ್ಟಿ ಹಾಗೂ ಪರೀಕ್ಷೆಗಳು ವಿಟಿಯು ನಿರ್ದೇಶನದಂತೆ ನಡೆಯಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ಡಾ.ಶಿವಾನಂದಯ್ಯ,…

Read More

ದೇವನಹಳ್ಳಿ:  ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ. ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್,​ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್​, ಆಕೆಗೆ ಬೇರೊಬ್ಬನ‌ ಜೊತೆ ಸಂಬಂಧವಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೂಡಿಸುವಂತೆ ಹೇಳಿದ್ದಾರೆ. ಮಾತ್ರೆ ಸೇವಿಸಿದ್ದ ಮಂಜುನಾಥ್​ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಯುವತಿ ಮತ್ತು ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಕೊಪ್ಪಳ: ಖಾಲಿ ಉಳಿದಿರುವ 8,000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಕೊಪ್ಪಳದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ಅವಧಿಯಲ್ಲಿ ಯಾವುದೇ ನೇಮಕಾತಿಗಳೂ ನಡೆದಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿದ್ದು, ಶೀಘ್ರದಲ್ಲೇ 8 ಸಾವಿರ ಕಾನ್ ಸ್ಟೆಬಲ್ ಗಳು, 500 ಸಬ್–ಇನ್ಸ್ ಪೆಕ್ಟರ್ ಗಳನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಯಾವುದೇ ಮಾಹಿತಿ ತನಗೆ ತಿಳಿದಿಲ್ಲ ಎಂದು ಹೇಳಿದರು. ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಒಳಗೊಂಡ ಆಡಿಯೋ ಕ್ಲಿಪ್ ಕುರಿತ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ. ಸಂಬಂಧಿಸಿದ ಸಚಿವರ ಜೊತೆ ಮಾತನಾಡುವಂತೆ ಅವರಿಗೆ ಹೇಳಿದ್ದೇನೆ. ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತಿಪಟೂರು: 1962ರಲ್ಲಿ ಸ್ಥಾಪಿತವಾದ ಕಲ್ಪತರು ವಿದ್ಯಾ ಸಂಸ್ಥೆಯ ಅಂದಿನಿಂದಲೂ ಇದುವರೆಗೂ ಗ್ರಾಮೀಣ ಬಡಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಕಲ್ಪಿಸುವಲ್ಲಿ ಶ್ರಮಿಸುತ್ತಿದೆ ಎಂದು ಶಾಸಕ ಕೆ.ಷಡಕ್ಷರಿ ಹೇಳಿದರು. ಕಲ್ಪತರು ಕಾಲೇಜು ಆವರಣದಲ್ಲಿ ವಜ್ರ ಮಹೋತ್ಸವ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಎತ್ತರವಾಗಿ ಬೆಳೆಯುತ್ತಿರುವ ಸಂಸ್ಥೆ ಇದಾಗಿದ್ದು ವಿಶ್ವವಿದ್ಯಾಲಯವಾಗಿ ರೂಪುಗೊಳ್ಳಬೇಕು, ತಮ್ಮ ಸರ್ಕಾರವು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು, ಅದರಂತೆ ವಿವಿಧ ಯೋಜನೆಗಳನ್ನು ಕಲ್ಪತರು ನಾಡಿಗೆ ತರುವ ಕಲ್ಪತರು ವಿದ್ಯಾ ಸಂಸ್ಥೆಯ ಬೆಳೆದು ನಿಂತಿದೆ ಎಂದು ಆಶಯ ವ್ಯಕ್ತಪಡಿಸಿದರು. ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೆರುದ್ರಪ್ಪನವರು ಮಾತನಾಡಿ, ಕಾಲೇಜಿನ ಸಂಸ್ಥಾಪಕ ಪ್ರಾಚಾರ್ಯ ಜೆ.ಆರ್. ಮಾಲಿಂಗಯ್ಯ ಮಾತನಾಡಿ,  ಕನಸುಗಳಲ್ಲಿ ಒಂದಾದ ಸುಸಜ್ಜಿತ ಸುವ್ಯವಸ್ಥಿತ ಪ್ರಾಥಮಿಕ ಪ್ರೌಢ ಶಿಕ್ಷಣವನ್ನು ಕಲ್ಪತರು ನಾಡಿನ ಮಕ್ಕಳಿಗೆ ನೀಡಬೇಕೆಂಬುದನ್ನು ನನಸಾಗಿಸುತ್ತಿರುವ ಸುದಿನ ಇದಾಗಿದೆ. ಈ ಸತ್ಕಾರ್ಯಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸುತ್ತಿರುವ ಎಲ್ಲರಿಗೂ ವಿದ್ಯಾ ಸಂಸ್ಥೆ ಯು ಚಿರಋಣಿಯಾಗಿರುತ್ತದೆ ಎಂದು ತಿಳಿಸಿದರು.…

Read More

ಬೆಂಗಳೂರು: ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಹಾಗೂ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‍ಗೆ ಅವರಿಗೆ ದೇವೇಗೌಡ ಅವರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕರ್ನಾಟಕದ ಗ್ರಾಮೀಣ ಭಾಗದ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರಕಾರ ಮಾರುಕಟ್ಟೆ ಮಧ್ಯೆಪ್ರವೇಶ ಮಾಡಿ, ನಫೆಡ್ ಮತ್ತು ಎನ್‍ಸಿಸಿಎಫ್ ಮೂಲಕ ತಕ್ಷಣ ಮಾವು ಖರೀದಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ವಿವಿಧ ಯೋಜನೆಗಳ ಮೂಲಕ ಸಾಕಷ್ಟು ಆರ್ಥಿಕ ಪ್ರಯೋಜನಗಳನ್ನು ಒದಗಿಸುವ ಮೂಲಕ ಮಾವು ಬೆಳೆಗಾರರಿಗೆ ನೆರವಾಗಬೇಕು. ಬೆಂಬಲ ಬೆಲೆಯಡಿ ಮಾವು ಖರೀದಿಸಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ತೋತಾಪುರಿ ಮಾವಿನ ಹಣ್ಣಿನ ನಿಷೇಧವನ್ನು ರದ್ದುಗೊಳಿಸುವಂತೆ ಆಂಧ್ರಪ್ರದೇಶ ಸರಕಾರಕ್ಕೂ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ…

Read More

ಬೆಂಗಳೂರು: ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ, ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ ಆಹ್ವಾನ ಕೊಟ್ಟಿರುವ ಬಗ್ಗೆ ಗೊತ್ತಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ನನ್ನ ಯಡಿಯೂರಪ್ಪ ಸ್ನೇಹ ಬಹಳ ಹಳೆಯದು, ಇವತ್ತಿನದಲ್ಲ. ನಾವಿಬ್ಬರೂ ಪಾರ್ಟ್‌ನರ್‌ ಶಿಪ್‌ನಲ್ಲಿ ಹಿಂದೆ ಫ್ಯಾಕ್ಟರಿ ಮಾಡಿದ್ದೆವು. ನಮ್ಮಿಬ್ಬರ ಮಧ್ಯೆ ಸ್ನೇಹ ಮುಂದುವರೆಯುತ್ತಿದೆ. ರಾಜಕಾರಣಕ್ಕೂ ಸ್ನೇಹಕ್ಕೂ ಸಂಬಂಧ ಇಲ್ಲ. ನನ್ನ ಹುಟ್ಟುಹಬ್ಬಕ್ಕೆ ಪತ್ರಿಕೆಯಲ್ಲೂ ಅವರು ಶುಭಾಶಯ ಕೋರಿಕೆ ಹಾಕಿಸಿದ್ದರು. ನಮ್ಮ ಮನೆಯ ಕಾರ್ಯಕ್ರಮಗಳಿಗೆ ಅವರು ಬಂದಿದ್ದಾರೆ. ಅವರ ಮನೆ ಕಾರ್ಯಕ್ರಮಗಳಿಗೆ ನಾವು ಹೋಗಿದ್ದೇವೆ. ಸ್ನೇಹ ಬೇರೆ ರಾಜಕಾರಣ ಬೇರೆ ಎಂದು ಈಶ್ವರಪ್ಪ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More