Author: admin

ಬೆಂಗಳೂರು: ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದಲ್ಲಿ ದಲಿತ ಮತ್ತು ಹಿಂದುಳಿದ ವರ್ಗಗಳ (SC/ST/OBC) 22 ಮಠಗಳಿಗೆ ಒಟ್ಟು 40 ಎಕರೆ ಭೂಮಿಯನ್ನು ಮಂಜೂರು ಮಾಡಲು ಒಪ್ಪಿಗೆ ನೀಡಿದೆ. ಈ ಕುರಿತು ವಿವರ ನೀಡಿದ ಸರ್ಕಾರ, ರಾವುತ್ತನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 57 ಮತ್ತು 58 ರಲ್ಲಿ ಈ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದೆ. ಈ ಮಠಗಳು ಮತ್ತು ಧಾರ್ಮಿಕ ಸಂಸ್ಥೆಗಳು ಸರ್ಕಾರಕ್ಕೆ ಕೃಷಿ ಭೂಮಿಯ ಸಬ್-ರಿಜಿಸ್ಟ್ರಾರ್ ಮೌಲ್ಯದ ಕೇವಲ ಶೇಕಡಾ 5 ರಿಂದ 10 ರಷ್ಟು ಮೊತ್ತವನ್ನು ನಾಮಮಾತ್ರ ದರವಾಗಿ ಪಾವತಿಸಬೇಕಾಗುತ್ತದೆ ಎಂದು ಸಚಿವ ಸಂಪುಟ ತಿಳಿಸಿದೆ. ಸಂಪುಟ ಸಭೆಯ ಇತರ ಪ್ರಮುಖ ನಿರ್ಧಾರಗಳು: ವಯೋಮಿತಿ ಸಡಿಲಿಕೆ: ಡಿಸೆಂಬರ್ 31, 2027 ರವರೆಗೆ ಹೊರಡಿಸಲಾಗುವ ಎಲ್ಲಾ ಸರ್ಕಾರಿ ನೇಮಕಾತಿ ಅಧಿಸೂಚನೆಗಳಲ್ಲಿ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ…

Read More

ಬೆಂಗಳೂರು: ಮಗಳು ಪ್ರಿಯಕರನ ಜೊತೆ ಪರಾರಿಯಾದ ವಿಚಾರವಾಗಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಪತ್ನಿಯೇ ಆತನನ್ನು ಹತ್ಯೆ ಮಾಡಿರುವ ಘಟನೆ ನಗರದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆಯ ವಿವರ: ಮೃತನನ್ನು ಮುರುಗೇಶ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಪತ್ನಿ ಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಮುರುಗೇಶ್ ಮತ್ತು ಲಕ್ಷ್ಮೀ ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದರು. ಈ ಪೈಕಿ ಮೊದಲ ಮಗಳಿಗೆ ಈಗಾಗಲೇ ಮದುವೆಯಾಗಿತ್ತು. ಆದರೆ, ಇತ್ತೀಚೆಗೆ ಎರಡನೇ ಮಗಳು ತಾನು ಪ್ರೀತಿಸುತ್ತಿದ್ದ ಯುವಕನ ಜೊತೆ ಓಡಿ ಹೋಗಿದ್ದಳು. ಕೊಲೆಗೆ ಕಾರಣ: ಮಗಳು ಓಡಿ ಹೋದ ದಿನದಿಂದಲೂ ಮುರುಗೇಶ್ ತನ್ನ ಪತ್ನಿ ಲಕ್ಷ್ಮೀ ಜೊತೆ ಪದೇ ಪದೇ ಜಗಳವಾಡುತ್ತಿದ್ದ ಎನ್ನಲಾಗಿದೆ. ಮಗಳ ವರ್ತನೆಗೆ ಲಕ್ಷ್ಮೀಯೇ ಕಾರಣ ಎಂದು ದೂರುತ್ತಾ ಆಕೆಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಘಟನೆಯ ದಿನ ಕೂಡ ಇದೇ ವಿಚಾರವಾಗಿ ದಂಪತಿ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಪತಿಯ ಕಿರುಕುಳದಿಂದ ಆಕ್ರೋಶಗೊಂಡ ಲಕ್ಷ್ಮೀ, ಮನೆಯಲ್ಲಿದ್ದ ಚಾಕುವಿನಿಂದ ಮುರುಗೇಶ್…

Read More

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಬಂಧಿತ ಯುವತಿಯನ್ನು ಸ್ಪೂರ್ತಿ ಎಂದು ಗುರುತಿಸಲಾಗಿದೆ. ಈಕೆ ಸುಮಾರು ಐದು ತಿಂಗಳ ಹಿಂದೆ ಸ್ವಾಮೀಜಿಯವರಿಗೆ ಫೋನ್ ಕರೆ ಮಾಡಿ ತಾನು ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಂಡಿದ್ದಳು. ಕಾಲಕ್ರಮೇಣ ಚಾಟಿಂಗ್ ಮೂಲಕ ನಿಕಟ ಸಂಪರ್ಕ ಬೆಳೆಸಿಕೊಂಡಿದ್ದ ಈಕೆ, ನಂತರ ತನ್ನ ಅಸಲಿ ರೂಪ ತೋರಿಸಿದ್ದಾಳೆ. ಹಣಕ್ಕಾಗಿ ಬೆದರಿಕೆ: ಸ್ವಾಮೀಜಿಯವರ ಜೊತೆಗಿನ ಸಂಪರ್ಕವನ್ನು ಬಳಸಿಕೊಂಡು ಅವರನ್ನು ಬ್ಲ್ಯಾಕ್‌ಮೇಲ್ ಮಾಡಲು ಶುರುಮಾಡಿದ ಸ್ಪೂರ್ತಿ, ಹಣ ನೀಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಹಿಂದೆ ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಅವರ ಬಳಿ 4.5 ಲಕ್ಷ ರೂಪಾಯಿಗಳನ್ನು ಪಡೆದಿದ್ದಳು. ಆದರೆ ಅಷ್ಟಕ್ಕೇ ತೃಪ್ತಳಾಗದ ಆಕೆ, ಮತ್ತೆ 1 ಕೋಟಿ ರೂಪಾಯಿ ನೀಡುವಂತೆ ಒತ್ತಡ ಹೇರಿದ್ದಾಳೆ ಎನ್ನಲಾಗಿದೆ. ಯುವತಿಯ ನಿರಂತರ ಕಿರುಕುಳ ಹಾಗೂ ಬೆದರಿಕೆಯಿಂದ…

Read More

ತುರುವೇಕೆರೆ: ತಾಲೂಕಿನ ಹಲವಾರು ಟಿಎಪಿಎಸ್ ಸೇರಿದಂತೆ ತೊರೆಮಾವಿನಹಳ್ಳಿ ಟಿಎಪಿಎಸ್ ನಲ್ಲಿ ಬಾರಿ ಅಕ್ರಮ ಅವ್ಯವಹಾರಗಳು ನಡೆಯುತ್ತಿದ್ದು, ರೈತರಿಗಾಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ್ದಕ್ಕೆ ಉದ್ದೇಶಪೂರ್ವಕವಾಗಿ ನನ್ನನ್ನು ಅಧ್ಯಕ್ಷ ಸ್ಥಾನ ಮತ್ತು ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಲಾಯಿತು ಎಂದು ತೊರೆ ಮಾವಿನಹಳ್ಳಿ ಟಿಎಪಿಎಸ್ ಹಾಲಿ ನಿರ್ದೇಶಕ “ಪಂಚಾಕ್ಷರಿ”   ಗಂಭೀರವಾಗಿ ಆರೋಪಿಸಿ ಗುಡುಗಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ನ ಜಿಲ್ಲಾ ನಿರ್ದೇಶಕರಾದ ಸಿದ್ದಲಿಂಗಪ್ಪ ಎಂಬ ವ್ಯಕ್ತಿಯು ಕಡು ಭ್ರಷ್ಟನಾಗಿದ್ದು, ತಾಲೂಕಿನ ಸಹಕಾರ ಸಂಘಗಳಲ್ಲಿನ ಕೆಸಿಸಿ ಸಾಲದ ರಿನಿವಲ್ ಎಂಬ ‌ಹೆಸರಿನಲ್ಲಿ ರೈತರಿಗೆ ಮಹಾ ವಂಚನೆ ಮಾಡಲಾಗಿದೆ, ತಾಲೂಕಿನಲ್ಲಿ ಒಟ್ಟಾರೆ 24 ಪಿ ಎ ಸಿ ಎಸ್ ಗಳು ಚಾಲ್ತಿಯಲ್ಲಿದ್ದು ಸುಮಾರು 25,000 ರೈತರ ಕೆಸಿಸಿ ಸಾಲದ ರಿನಿವಲ್ ಗೆ ಆಯಾ ಪಿಎಸಿಎಸ್ ಸಿಇಓ ಗಳು 500ರಿಂದ ಸಾವಿರ ರೂಗಳನ್ನು ವಸೂಲಿ ಮಾಡುತ್ತಿದ್ದು, ಅದರಲ್ಲಿ1 ರಿನಿವಲ್ ಗೆ 250 ರೂ.ಗಳಂತೆ ಡಿಸಿಸಿ ಬ್ಯಾಂಕ್ ತಾಲೂಕು ನಿರ್ದೇಶಕ ಸಿದ್ದಲಿಂಗಪ್ಪ ವರ್ಷಕ್ಕೆ 50…

Read More

ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ. ಅರಮನೆ ರಸ್ತೆಯ ಸಿಐಡಿ ಕಚೇರಿ ಸಮೀಪವಿರುವ ಹೋಟೆಲ್ ರಾಡಿಸನ್ ಬ್ಲೂನಲ್ಲಿ ಅಂದು ಸಂಜೆ 6:30ಕ್ಕೆ ಈ ಸಭೆ ಆಯೋಜನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ. ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ಈ ಸಭೆ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ. ವಿಶೇಷವಾಗಿ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಬದಲು ಕೇವಲ ಎರಡು ನಿಮಿಷಗಳ ಕಾಲ ತಮ್ಮದೇ ಭಾಷಣ ಓದಿ ನಿರ್ಗಮಿಸಿರುವುದು ಆಡಳಿತ ಪಕ್ಷದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಸದನದಲ್ಲಿ ಯಾವ ರೀತಿ ಪ್ರತಿಭಟನೆ ನಡೆಸಬೇಕು ಮತ್ತು ವಿರೋಧ ಪಕ್ಷಗಳ ಟೀಕೆಗಳಿಗೆ ಹೇಗೆ ಪ್ರತ್ಯುತ್ತರ ನೀಡಬೇಕು ಎಂಬ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ನಡೆದ ಬೆಳವಣಿಗೆಗಳನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದು, ಇಂದು ಕರ್ನಾಟಕ ಶಾಸಕಾಂಗ ಇತಿಹಾಸದಲ್ಲೇ ಒಂದು ‘ಕರಾಳ ದಿನ’ ಎಂದು ಬಣ್ಣಿಸಿದ್ದಾರೆ. ಗುರುವಾರ ಆರಂಭವಾದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರ ನೀಡಿದ ಭಾಷಣದ ಬದಲು, ಕೇವಲ ಒಂದು ವಾಕ್ಯವನ್ನು ಓದಿ ನಿರ್ಗಮಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ವರ್ತನೆಯನ್ನು ‘ಗೂಂಡಾಗಿರಿ’ ಎಂದು ಕರೆದಿರುವ ಅವರು, ಇದು ಸಂವಿಧಾನಕ್ಕೆ ಮಾಡಿದ ಅವಮಾನ ಎಂದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಧಿಕೃತ ದೂರು ನೀಡಿರುವ ಅಶೋಕ್, ನಿಯಮ 27ರ ಉಲ್ಲಂಘನೆಯಡಿ ತಪ್ಪಿತಸ್ಥ ಶಾಸಕರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯ ನಿರ್ವಹಿಸುವಾಗ ಅಡ್ಡಿಪಡಿಸುವುದು ಸದನದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅವರು ದೂರಿದ್ದಾರೆ.…

Read More

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿರುವ ‘ಗಿಲ್ಲಿ ನಟ’ (ನಟರಾಜ್) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶೇಷ ಗೌರವ ಸಲ್ಲಿಸಿದ್ದಾರೆ. ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಇಂದು ಗಿಲ್ಲಿ ನಟ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಟನಿಗೆ ಗಂಧದ ಹಾರ ಹಾಕಿ, ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಅಲ್ಲದೆ, ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದರು. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಫೋಟೋ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, “12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು ಮತ್ತು ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ,” ಎಂದು ಬರೆದುಕೊಂಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಅವರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವು ಗುರುವಾರ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿವೇಶನವನ್ನು ಉದ್ದೇಶಿಸಿ ಕೇವಲ ಎರಡೇ ಸಾಲುಗಳ ಭಾಷಣ ಮಾಡಿ ಹೊರನಡೆಯುವ ಮೂಲಕ ಅಚ್ಚರಿ ಮೂಡಿಸಿದರು. ಜನವರಿ 22 ರಿಂದ ಆರಂಭವಾದ ವಿಶೇಷ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಸುದೀರ್ಘ ಭಾಷಣ ಮಾಡಬೇಕಿತ್ತು. ಆದರೆ, ವೇದಿಕೆಗೆ ಬಂದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ. ಖಾದರ್ ಮತ್ತು ಇತರ ಗಣ್ಯರಿಗೆ ಶುಭಾಶಯ ಕೋರಿ, “ನನ್ನ ಸರ್ಕಾರವು ರಾಜ್ಯದ ಆರ್ಥಿಕ, ಸಾಮಾಜಿಕ ಮತ್ತು ಭೌತಿಕ ಅಭಿವೃದ್ಧಿಯನ್ನು ದ್ವಿಗುಣಗೊಳಿಸಲು ಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ” ಎಂದು ಹೇಳಿ ಕೇವಲ ಎರಡು ನಿಮಿಷಗಳಲ್ಲಿ ಭಾಷಣ ಮುಗಿಸಿದರು. ರಾಜ್ಯಪಾಲರ ಈ ನಡೆಯಿಂದ ಆಕ್ರೋಶಗೊಂಡ ಕಾಂಗ್ರೆಸ್ ಶಾಸಕರು, ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ರಾಜ್ಯಪಾಲರು ಪೂರ್ಣ ಭಾಷಣ ಓದದೆ ನಿರ್ಗಮಿಸುತ್ತಿರುವುದನ್ನು ಖಂಡಿಸಿ ಧಿಕ್ಕಾರ ಕೂಗಿದ ಶಾಸಕರು, ಅವರನ್ನು ಅಡ್ಡಗಟ್ಟಲು ಯತ್ನಿಸಿದರು.…

Read More

ಗುಬ್ಬಿ: ತಾಲೂಕಿನ ಕಿಟ್ಟದಕುಪ್ಪೆ ಗ್ರಾಮದ ರೈತರ ಜಮೀನುಗಳಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ಅಳವಡಿಸಲು ಅಧಿಕಾರಿಗಳು ಮುಂದಾಗಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಸೂಕ್ತ ಪರಿಹಾರ ನೀಡದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮದ ರೈತರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಕಿಟ್ಟದಕುಪ್ಪೆ ಗ್ರಾಮದ ಕೃಷಿ ಭೂಮಿಯಲ್ಲಿ ಹೈ ಟೆನ್ಷನ್ ವಿದ್ಯುತ್ ಲೈನ್ ಹಾದುಹೋಗಲು ಸಕಲ ಸಿದ್ಧತೆಗಳು ನಡೆದಿವೆ. ಈ ಯೋಜನೆಯಿಂದಾಗಿ ರೈತರು ದಶಕಗಳಿಂದ ಬೆಳೆಸಿದ ಸಾವಿರಾರು ತೆಂಗು ಮತ್ತು ಅಡಿಕೆ ಮರಗಳನ್ನು ಕಡಿಯಬೇಕಾದ ಅನಿವಾರ್ಯತೆ ಎದುರಾಗಿದೆ. ರೈತರು ಹೇಳುತ್ತಿರುವುದೇನು? ಅವೈಜ್ಞಾನಿಕ ಪರಿಹಾರ: ಅಧಿಕಾರಿಗಳು ಒಂದು ಅಡಿಕೆ ಮರಕ್ಕೆ ಕೇವಲ 3,000 ರೂಪಾಯಿ ಪರಿಹಾರ ನಿಗದಿಪಡಿಸಿದ್ದಾರೆ. ಆದರೆ ರೈತರ ಪ್ರಕಾರ, ಒಂದು ಅಡಿಕೆ ಮರವು ಪ್ರತಿ ವರ್ಷಕ್ಕೆ ಸರಾಸರಿ 3,000 ರೂಪಾಯಿ ಆದಾಯ ನೀಡುತ್ತದೆ. ಹೀಗಿರುವಾಗ ಜೀವಮಾನದ ಆದಾಯ ನೀಡುವ ಮರಕ್ಕೆ ಕೇವಲ ಒಂದು ವರ್ಷದ ಆದಾಯವನ್ನು ಪರಿಹಾರವಾಗಿ ನೀಡುವುದು ನ್ಯಾಯವಲ್ಲ ಎಂಬುದು ರೈತರ…

Read More

ಶಿರಾ: ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ವತಿಯಿಂದ ಜ. 24 ರಂದು ಶಿರಾ ನಗರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 1.30ಕ್ಕೆ ಶ್ರೀವಿದ್ಯಾ ಗಣಪತಿ ದೇವಸ್ಥಾನದ ಆವರಣದಿಂದ ಶೋಭಾಯಾತ್ರೆ ಆರಂಭವಾಗಲಿದ್ದು, ಸಂಜೆ 4 ಘಂಟೆಗೆ ಪ್ರೆಸಿಡೆನ್ಸಿ ಶಾಲಾ ಸಮೀಪದ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಯಲಿದೆ. ಆರ್‌ಎಸ್‌ಎಸ್ ಜಿಲ್ಲಾ ವಿಭಾಗದ ಪ್ರಚಾರಕ್ ಶಿವರಾಜು ಮುಖ್ಯ ಭಾಷಣ ಮಾಡಲಿರುವರು. ಶ್ರೀನಂಜಾವಧೂತ ಸ್ವಾಮೀಜಿ, ಶ್ರೀ ಚಿದಾನಂದ ಭಾರತಿ ಸ್ವಾಮೀಜಿ, ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಸೇವಾಲಾಲ್ ಸರ್ದಾರ್ ಸ್ವಾಮೀಜಿ, ಶ್ರೀ ಬಸವ ರಮಾನಂದ ಸ್ವಾಮೀಜಿ, ಶ್ರೀ ಮೇದಾರ ಇಮವಿಧೇಯಕಡಿ ಬಸವಪ್ರಭು ಕೇತೇಶ್ವರ ಸ್ವಾಮೀಜಿ, ಶ್ರೀ ವೇದ ಶಿವಶರಣ ದಶರಥ ಗೋಸಾಯಿ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More