Author: admin

ಯಮಕನಮರಡಿ: ಯಮಕನಮರಡಿ ಮತಕ್ಷೇತ್ರದ ಗೊಟುರ , ಹೆಬ್ಬಾಳ ಮತ್ತು ಬೋಡಾಕ್ಯಾನಟ್ಟಿ ಗ್ರಾಮದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅವರು ಅಬ್ಬರದ ಪ್ರಚಾರ ನಡೆಸಿದರು. ಈ ವೇಳೆ ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ರಾಜ್ಯದಲ್ಲಿ ಜನರು ಬದಲಾವಣೆ ಬಯಸಿದ್ದು, ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಬೇಕಾಗಿದೆ. ಹೀಗಾಗಿ ಮತಭಾಂದವರು ವಿಶ್ವಾಸದಿಂದ ತಮ್ಮ ಹಕ್ಕನ್ನು ಚಲಾಯಿಸಿ ಕಾಂಗ್ರೆಸ್‌ ಗೆಲುವಿಗೆ ಸಹಕರಿಸಬೇಕು ಎಂದರು. ಬೆಳಗಾವಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಇದನ್ನು ನಾವು ಇನ್ನಷ್ಟು ಭದ್ರಗೊಳಿಸೋಣ” ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ಈಗಾಗಲೇ ಯಮಕನಮರಡಿ ಕ್ಷೇತ್ರದಲ್ಲಿ ಸುಸುಜ್ಜಿತ ರಸ್ತೆ, ಶುದ್ಧ ಕುಡಿಯುವ ನೀರು, ಬಡವರಿಗೆ ಸೂರು , ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ. ರಾಜ್ಯದಲ್ಲಿ ಯಮಕನಮರಡಿ ಮತಕ್ಷೇತ್ರ ಮಾದರಿ ಕ್ಷೇತ್ರವಾಗಿದೆ. ಕ್ಷೇತ್ರವನ್ನು ಬಹಳಷ್ಟು ಬೆಳೆಸಬೇಕಾಗಿದೆ. ಆದ್ದರಿಂದ ಕ್ಷೇತ್ರದ ಜನರು ಆಶೀರ್ವಾದ ಮಾಡಬೇಕು. ನಿಮ್ಮ ಕಷ್ಟ ಗಳಿಗೆ ಧ್ವನಿಯಾಗುವ ನಾಯಕನನ್ನು…

Read More

ಬೆಳಗಾವಿ: ಯಮಕನಮರಡಿ ಮತಕ್ಷೇತದಲ್ಲಿ ಬರುವ ಹತ್ತರಗಿ ಗ್ರಾಮದ ಸರ್ವೇ ನಂ. 444 ಹಾಗೂ 445ರಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡವನ್ನು ತೆರವುಗೊಳಿಸಬೇಕೆಂದು ಸಮಾಜ ಸೇವಕ ಶಿವಶಂಕರ ಝಟ್ಟಿ ಆಗ್ರಹಿಸಿದರು. ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅವರು, ಹತ್ತರಗಿ ಗ್ರಾಮದ ಸರ್ವೇ ನಂ 444, 445ರಲ್ಲಿ ಸರ್ಕಾರಿ ರಸ್ತೆ ಹಾಗೂ ಸರ್ಕಾರಿ ಖಾಲಿ ಜಾಗಯನ್ನು ಬಿಜೆಪಿ ಮುಖಂಡ ರವೀಂದ್ರ ಹಂಜಿ ಎಂಬುವರು ಅತಿಕ್ರಮಣ ಮಾಡಿ ರಾಜೀವ್‌ ಗಾಂಧಿ ಆಸ್ಪತ್ರೆ ಕಟ್ಟಿದ್ದಾರೆ. ಈ ಅತಿಕ್ರಮಣ ಕುರಿತು ಸಬಂಧಪಟ್ಟ ಇಲಾಖೆಗೆ ಹಾಗೂ ಅಧಿಕಾರಿಗಳಿಗೆ ಲಿಖತವಾಗಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದು ಆರೋಪಿಸಿದರು. ಬಿಜೆಪಿ ಮುಖಂಡ ರವೀಂದ್ರ ಹಂಜಿಯವರ ಅಧ್ಯಕ್ಷತೆಯಲ್ಲಿ ನಡೆಸುತ್ತಿರುವ ಯಮಕನಮರಡಿ ಅರ್ಬನ್‌ ಬ್ಯಾಂಕ್‌, ಅರ್ಬನ್‌ ಸೊಸೈಟಿ, ರಾಜೀವ್‌ ಗಾಂಧಿ ಆಸ್ಪತ್ರೆ ಹೆಸರಿನಲ್ಲಿ 1996ರಲ್ಲಿ 8 ಗುಂಟೆ ಜಾಗವನ್ನು ಖರೀದಿಸಲಾಗಿದೆ. ಆದರೆ ಅದರ ಪಕ್ಕದಲ್ಲೇ ಸರ್ವೇ ನಂಬರ್‌ 445ರಲ್ಲಿ ಸುಮಾರು 26 ಗುಂಟೆ ಜಾಗವನ್ನು ಒತ್ತುವರಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.…

Read More

ಬೆಳಗಾವಿ ನಗರದ ಮರ್ಯಾದ ಪುರುಷೋತ್ತಮ್ ಶ್ರೀರಾಮ ದೇವಸ್ಥಾನಗಳಲ್ಲಿ ರಾಮನವಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ರಾಮನವಮಿ ಹಿನ್ನೆಲೆಯಲ್ಲಿ ಅನಗೋಳ ಪ್ರದೇಶದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪ್ರಭು ಶ್ರೀರಾಮ ಜಯಂತಿಯನ್ನು ಆಚರಿಸಲಾಯಿತು. ಬುಧವಾರ ಸಂಜೆ ಅನಗೋಳ ನಾಕಾ ದಿಂದ ಹರಿ ಮಂದಿರದ ಮೂಲಕ ಕುರಬರ್ ಗಲ್ಲಿಯಲಿ ಶ್ರೀರಾಮನ ಮೂರ್ತಿಯನ್ನು ರಥದಲ್ಲಿ ಮೆರವಣಿಗೆ ಮಾಡಲಾಯಿತು. ಶ್ರೀರಾಮ.ಸೇನೆ ಹಿಂದೂಸ್ತಾನ್, ಜೈ ಅಮರ ಶಿವಾಜಿ ಮಂಡಲದ, ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀರಾಮಸೇನೆ ಹಿಂದೂಸ್ಥಾನದ ಸಂಸ್ಥಾಪಕ ರಮಾಕಾಂತ್ ಕೊಂಡುಸ್ಕರ್ ಮೆರವಣಿಯಲ್ಲಿಭಾಗವಹಿಸಿ ಶ್ರೀರಾಮನಿಗೆ ಪುಷ್ಪಾರ್ಚನೆ ಸಲ್ಲಿಸಿದರು.ಈ ವೇಳೆ ಅನೇಕ ಭಕ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ತಡರಾತ್ರಿಯವರೆಗೂ ನಡೆದ ಈ ಶೋಭಾ ಯಾತ್ರೆಯಲ್ಲಿ ಹಲವು ಯುವಕರು ಪಾಲ್ಗೊಂಡಿದ್ದರು. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಡಾಲ್ಬಿಯಂತಹ ಕರ್ಕಶ ಶಬ್ದಕ್ಕೆ ಅವಕಾಶ ನೀಡದ ಕಾರಣ ಕಾರ್ಯಕರ್ತರು ಸಾಯಕಾಲದಲ್ಲಿ ಮೆರವಣಿಗೆ ನಿಲ್ಲಿಸಿ ,ಕುರಬರ ಗಲ್ಲಿಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಮಾಡಿ , ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಅಧ್ಯಕ್ಷ ಹರ್ಷದ್…

Read More

ಬೆಂಗಳೂರು: ಚುನಾವಣಾ ಜ್ವರದ ಮಧ್ಯೆ ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಶುರುವಾಗುತ್ತಿವೆ. ಮೊದಲ ದಿನವಾದ ಇಂದು ಪ್ರಥಮ ಭಾಷೆಯ ಪರೀಕ್ಷೆ ನಡೆಯಲಿದೆ. ಸುಗಮ ಪರೀಕ್ಷೆಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 3305 ಕೇಂದ್ರಗಳಲ್ಲಿ ಏಪ್ರಿಲ್ 15 ರವರೆಗೂ ಪರೀಕ್ಷೆ ನಡೆಯಲಿದೆ. ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇರಲ್ಲ. ಹಿಜಬ್ ಕಾರಣಕ್ಕೆ ಎಕ್ಸಾಂ ಗೈರಾದ್ರೆ ವಿಶೇಷ ಪರೀಕ್ಷೆಗೆ ಅವಕಾಶ ಇಲ್ಲ. ಮತ್ತೆ ಪೂರಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಸ್ಮಾರ್ಟ್‍ವಾಚ್, ಮೊಬೈಲ್ ಎಲೆಕ್ಟ್ರಿಕ್ ಉಪಕರಣಗಳ ನಿಷೇಧಿಸಲಾಗಿದೆ. ಪರೀಕ್ಷಾ ಸಿಬ್ಬಂದಿಗೂ ಮೊಬೈಲ್, ಸ್ಮಾರ್ಟ್ ವಾಚ್ ನಿಷೇಧ ಮಾಡಲಾಗಿದೆ. ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಲ್ಲಿ ಎಕ್ಸಾಂ ಮುಗಿಯೋವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಅಂಗನವಾಡಿ ಕಾಮಗಾರಿ ಬಿಲ್ ನಕಲಿ ಆರೋಪದ ಮೇಲೆ ಸಚಿವ ಭೈರತಿ ಬಸವರಾಜು ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಚಿವ ಭೈರತಿ ಬಸವರಾಜ್ ವಿರುದ್ದ ಇತ್ತೀಚೆಗೆ 97 ಕೋಟಿ ರೂ. ವಂಚನೆ ಬಗ್ಗೆ ಟಿ.ಜೆ ಅಬ್ರಾಹಂ ದೂರು ನೀಡಿದ್ದರು. ಇದೀಗ ಮತ್ತೊಂದು ದೂರು ನೀಡಿದ್ದಾರೆ. ಅಂಗನವಾಡಿ ಕಾಮಗಾರಿ ಬಿಲ್ ನಕಲಿ ಮಾಡಲಾಗಿದೆ. ವಿಜಿನಾಪುರ 50ನೇ ವಾರ್ಡ್ ನ ಅಂಗನವಾಡಿ ಸಂಬಂಧ ಜಾಬ್ ಕಾರ್ಡ್,ಟೆಂಡರ್ ನೋಟಿಫಿಕೇಷನ್, ಬ್ಯಾಂಕ್ ಗ್ಯಾರಂಟಿ ಎಲ್ಲವೂ ನಕಲಿಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅತಂತ್ರ ಫಲಿತಾಂಶ ಬರಲೆಂಧು ಜೆಡಿಎಸ್ ನವರು ಕಾಯುತ್ತಿದ್ದಾರೆ. ಈ ಬಾರಿ ಅತಂತ್ರ ಫಲಿತಾಂಶ ಬರಲ್ಲ ಎಂದು ಸಿದ್ಧರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿದ್ಧರಾಮಯ್ಯ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಎಲ್ಲಾ ಶುಭ ಸೂಚನೆಗಳಿವೆ. ರಾಜ್ಯಕ್ಕೆ ಹೆಚ್.ಡಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿ ಹೊಸದಾಗಿ ಬಂದಿಲ್ಲ ರಾಜ್ಯ ಉಳಿಸಬೇಕು ಅಂದ್ರೆ ಅದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ವಾತಾವರಣ ನೋಡಿದರೇ ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ. ಅತ್ಯಧಿಕ ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದರು. ವರುಣಾ ಕ್ಷೇತ್ರದಿಂದ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಿದರೂ ಸ್ವಾಗತಿಸುವೆ. ಪ್ರತಿಸ್ಪರ್ಧಿ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಸಿದ್ಧರಾಮಯ್ಯ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ರಾಮನವಮಿಯಂದೇ ರಾಜ್ಯ ಸಾರಿಗೆ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ. 2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿ ಬರುವಂತೆ ಇಂದು ಅದೇಶಿಸಿದೆ. ಸಾರಿಗೆ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿತ್ತು. ಆದ್ರೆ, ಸರ್ಕಾರ ಮಾರ್ಚ್​ 28ರಂದು ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿತ್ತು. ಇದೀಗ ಅದರಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಜೆಡಿಎಸ್ ಸ್ವಂತಬಲದಿಂದ ಅಧಿಕಾರಕ್ಕೆ ಬರಲ್ಲ. ಅತಂತ್ರ ಸ್ಥಿತಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವುದು ಬೇಡ. ತಾಕತ್ತಿದ್ರೆ ಸ್ವಂತ ಪಕ್ಷ ಕಟ್ಟಲಿ ನೋಡೋಣ ಎಂದು ಸಿದ‍್ಧರಾಮಯ್ಯಗೆ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯನವರ ಇವತ್ತಿನ ಹೇಳಿಕೆ ವಿಶ್ವದ ಎಂಟನೇ ಅದ್ಭುತ. ಜೆಡಿಎಸ್ ನಲ್ಲಿ ಯಾರು ಪಾಳೆಗಾರಿಕೆ ಮಾಡಿದರು ಅಂತಾ ಗೊತ್ತಿದೆ. ನಾವು ಸ್ಟೇಜ್ ಹಾಕಿ ಜನ ಸೇರಿಸಿದರೆ ಅವರು ಬಂದು ಕೂರುತ್ತಿದ್ದರು. ಕಾಲ್ಮೇಲೆ ಕಾಲು ಹಾಕಿ ಕೂರುತ್ತಿದ್ದರು. ಅವರನ್ನ ವೇದಿಕೆಯೇರಿಸಿ ನಾವು ರಸ್ತೆಯಲ್ಲಿ ನಿಲ್ಲುತ್ತಿದ್ದವು. ಸಿದ್ದರಾಮಯ್ಯ ಪಾಳೆಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಕೊಂಡು ಇದ್ದರು. ಬ್ಯಾನರ್‌ ನಲ್ಲಿ ಫೋಟೋ ಇಲ್ಲದಿದ್ದರೆ ಸಭೆಗೆ ಬರುವುದಿಲ್ಲ ಎನ್ನುತ್ತಿದ್ದರು. 2006ರಲ್ಲಿ ಪಕ್ಷ ತೊರದು ಮೈಸೂರು ಭಾಗದಲ್ಲಿ ಶಾಸಕರನ್ನ ಹೈಜಾಕ್ ಮಾಡಿದ್ರಿ ಎಂದು ವಾಗ್ದಾಳಿ ನಡೆಸಿದರು. ನೀವು ಪಕ್ಷ ಮುಗಿಸೋಕೆ ಹೋರಟಾಗ ನಾವು ಮಧ್ಯ ಪ್ರವೇಶಿಸಿದ್ವಿ ಎಂದು…

Read More

ನಿನ್ನೆ ಬಂದ ಸರ್ವೇ ಪ್ರಕಾರ ಬಿಜೆಪಿ 60 ಸ್ಥಾನವನ್ನೂ ಗೆಲ್ಲಲ್ಲ. ಬಿಜೆಪಿ ಧೂಳಿಪಟ ಆಗುವುದನ್ನ ತಡೆಯುವ ಯೋಚನೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಕೃಷ್ಣ ಭೈರೇಗೌಡ ಟಾಂಗ್ ನೀಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ, ಬಿಜೆಪಿಯವರಿಗೆ ಮಾರಿಹಬ್ಬ ಮಾಡಬೇಕೆಂದು ಜನ ಕಾಯುತ್ತಿದ್ದಾರೆ. ಹಾಗಾಗಿ ಬಿಎಸ್ ಯಡಿಯೂರಪ್ಪ ತಮ್ಮ ಸ್ಥಾನ ಉಳಿಸಿಕೊಳ್ಳಲಿ. ಬಿಜೆಪಿಯು ಬಿಎಸ್ ಯಡಿಯೂರಪ್ಪರನ್ನ ಮೂಲೆಗುಂಪು ಮಾಡಿದೆ. ಎಲ್. ಕೆ ಆಡ್ವಾಣಿ, ಅಟಲ್ ಬಿಹಾರಿ ವಾಜಪೇಯಿ ಅವರ ಪರಿಸ್ಥಿತಿಯೇ ಬಿಎಸ್ ವೈಗೆ ಬಂದಿದೆ. ಅಡ್ವಾಣಿ, ವಾಜಪೇಯಿ ದೇಶದ ಮೂಲೆ ಮೂಲೆ ಸುತ್ತಿ ಪಕ್ಷವನ್ನು ಕಟ್ಟಿದ್ರು. ಅವರನ್ನೇ ಬಿಜೆಪಿ ಮೂಲೆಗುಂಪು ಮಾಡಿದರು. ಹಾಗೆಯೇ ಎಸ್ ಎಂ ಕೃಷ್ಣ ಅವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಿದ್ದವು ಆದರೆ ಬಿಜೆಪಿ ಅವರನ್ನು ಕರೆದುಕೊಂಡು ಹೋಗಿ ಮೂಲೆಗುಂಪು ಮಾಡಿದೆ ಎಂದು ಕೃಷ್ಣ ಬೈರೇಗೌಡ ಟೀಕಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಆದಾಯ ತೆರಿಗೆ ಪಾವತಿಗೆ ಹೊಸ ಯೋಜನೆ ನಾಳೆಯಿಂದ ಜಾರಿಗೆ ಬರಲಿದೆ. ಹೊಸ ಯೋಜನೆಯು ನೈಸರ್ಗಿಕ ರೀತಿಯಲ್ಲಿ ನಾಳೆಯಿಂದ ಆನ್‌ಲೈನ್‌ನಲ್ಲಿ ಲಭ್ಯವಿರುತ್ತದೆ. ನೀವು ಹಳೆಯ ಯೋಜನೆಯನ್ನು ಮುಂದುವರಿಸಲು ಬಯಸಿದರೆ, ನೀವು ಅದನ್ನು ಪ್ರತ್ಯೇಕವಾಗಿ ಆಯ್ಕೆ ಮಾಡಬೇಕು. ಹೊಸ ಯೋಜನೆಯಡಿ, 7,27,777 ರೂ.ವರೆಗಿನ ಆದಾಯವನ್ನು ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತದೆ. 5 ಲಕ್ಷದ ರಿಯಾಯಿತಿ 7 ಲಕ್ಷ ರೂ.ಹಳೆಯ ತೆರಿಗೆಯಲ್ಲಿ, ಗೃಹ ಸಾಲ, ಎಲ್‌ಐಸಿ, ಪಿಪಿಎಫ್, ಎನ್‌ಪಿಎಸ್ ಇವೆಲ್ಲವೂ ಆದಾಯ ತೆರಿಗೆ ಇಲಾಖೆಯ ವಿವಿಧ ವಿಭಾಗಗಳ ಮೂಲಕ ಆದಾಯ ತೆರಿಗೆ ವಿನಾಯಿತಿಗೆ ಅರ್ಹವಾಗಿವೆ. ಆದರೆ ಈ ವಿನಾಯಿತಿಗಳು ಹೊಸ ತೆರಿಗೆಯ ಅಡಿಯಲ್ಲಿ ಅನ್ವಯಿಸುವುದಿಲ್ಲ. ಈ ಹೊಸ ತೆರಿಗೆ ಕಳೆದ ವರ್ಷವೇ ಜಾರಿಗೆ ಬಂದಿದೆ. ಆದರೆ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಮನ್ನಣೆ ಸಿಕ್ಕಿಲ್ಲ. ಈ ಹೊಸ ನೀತಿ ಸದ್ಯ ಸುದ್ದಿಯಲ್ಲಿದೆ. ಹೊಸ ಯೋಜನೆಯು ನಮ್ಮೆಲ್ಲರಿಗೂ ಪೂರ್ವನಿಯೋಜಿತ ಯೋಜನೆಯಾಗಿದೆ. ಹಳೆಯ ತೆರಿಗೆ ರಚನೆಯು ಸಾಕಷ್ಟು ಉತ್ತಮವಾಗಿದ್ದರೆ, ನೀವು ಅದನ್ನು ಹಸ್ತಚಾಲಿತವಾಗಿ ಆರಿಸಬೇಕಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More